Thursday, March 12, 2026
Thursday, March 12, 2026
Home Blog Page 406

Tungataranga Newspaper ತುಂಗಾತರಂಗ ಪತ್ರಿಕೆ ವಾರ್ಷಿಕ ದಿನದರ್ಶಿಕೆ ಬಿಡುಗಡೆ

0

Tungataranga Newspaper ತುಂಗಾತರಂಗ ಪತ್ರಿಕೆ ವಾರ್ಷಿಕ ದಿನದರ್ಶಿಕೆ ಬಿಡುಗಡೆ ಶಿವಮೊಗ್ಗದ ತುಂಗಾತರಂಗ ದಿನಪತ್ರಿಕೆಯ ವಾರ್ಷಿಕ ದಿನದರ್ಶಿಕೆಯನ್ನು ಇಂದು ಆದಿಚುಂಚನಗಿರಿ ಶಾಖಾಮಠದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ವೀಕ್ಷಿಸಿ ಪತ್ರಿಕಾ ಕಾರ್ಯಕ್ಕೆ ಶುಭಾಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಸಂಪಾದಕ ಎಸ್. ಕೆ. ಗಜೇಂದ್ರ ಸ್ವಾಮಿ, ಪತ್ರಿಕೆಯ ಹಿತೈಷಿಗಳಾದ ಎಸ್ ರಮೇಶ್, ಕೆ ನಾಗರಾಜ್, ಎಂಪಿ ಗಣೇಶ್, ಎಸ್ ಭರತ್, ಹಾಡೋನಹಳ್ಳಿ ಜಗದೀಶ್, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್, ಹಿರಿಯ ಪತ್ರಕರ್ತರಾದ ಜಿಸಿ ಸೋಮಶೇಖರ್, ಮೋಹನ್, ವಿದ್ವಾನ್ ದತ್ತ ಮೂರ್ತಿ ಭಟ್, ಪತ್ರಿಕಾ ಬಳಗದ ಎ ರಾಕೇಶ್, ರವಿ ಸೋಮಿನಕೊಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್ ಅವರಿಗೆ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ
ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಎಸ್ಕೆ. ಗಜೇಂದ್ರ ಸ್ವಾಮಿ, ಪ್ರಮುಖರಾದ ಗಣೇಶ್ ನಾಗರಾಜ್ ರಮೇಶ್ ಹಾಗು ಇತರರು ಉಪಸ್ಥಿತರಿದ್ದರು

Guarantee scheme ಗ್ಯಾರಂಟಿ ಯೋಜನೆಗಳ ಲಾಭವನ್ನು ಸವಿತಾ ಸಮಾಜದವರೂ ಪಡೆಯಬೇಕು- ಸಿ‌ಎಸ್.ಚಂದ್ರ ಭೂಪಾಲ್

0

ಹಿಂದುಳಿದ ಸಮಾಜಗಳು ಒಗ್ಗಟ್ಟಾಗಬೇಕಿದೆ. ಆ ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಸಹಯೋಗದೊಂದಿಗೆ ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ಸಮಾಜಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿಯಾಗಿದೆ. ಅದರೆ ಈ ಸಮಾಜಗಳು ಆರ್ಥಿಕವಾಗಿ , ರಾಜಕೀಯವಾಗಿ, ಸಾಮಾಜಿಕವಾಗಿ ಹಿಂದುಳಿದಿರುವುದು ವಿಷಾದನೀಯ. ಆದರಿಂದ ನೀವೆಲ್ಲಾ ಮುಂದೆ ಬರಬೇಕು ಎಂದರು.
ಈ ಸಮಾಜವು ಕೇವಲ ಸೇವೆಗೆ ಮಾತ್ರ ಸಿಮೀತವಾಗದೆ ಆರ್ಥಿಕವಾಗಿ ಸದೃಢವಾಗಬೇಕು. ಅದಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಅದರ ಫಲವನ್ನು ನೀವೆಲ್ಲಾ ಪಡೆಯಬೇಕು. ಸರ್ವತೋಮುಖ ಬೆಳವಣಿಗೆ ಆಗಬೇಕು ಎಂದರು.
೨೫೦೦ ವರ್ಷಗಳ ಇತಿಹಾಸ ಈ ಸಮಾಜಕ್ಕೆ ಇದೆ. ಶರಣ ಬಸವೇಶ್ವರರು ಸೇರಿದಂತೆ ಅನೇಕರಿಗೆ ತಮ್ಮ ಆಸ್ಥಾನದಲ್ಲಿ ಸ್ಥಾನ ನೀಡಿದ ಬಿಜ್ಜಳದೇವನು ಕೂಡ ಈ ಸಮಾಜಕ್ಕೆ ಸೇರಿದವರು. ಅಂತಹ ಶ್ರೇಷ್ಠ ಕುಲದಲ್ಲಿ ಹುಟ್ಟಿದ ನೀವೇ ಧನ್ಯರು. ಸವಿತಾ ಮಹರ್ಷಿ ಅವರ ಸಾಹಿತ್ಯ, ತತ್ವ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದೆ. ಅವರು ಹೇಳಿದಂತೆ ಕಾಯಕಕ್ಕೆ ಮೌಲ್ಯ ಕೊಡಬೇಕು. ಗೌರವ ಕೊಡಬೇಕು ಎಂದು ಹೇಳಿದರು.
Guarantee scheme ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಮಾತನಾಡಿ, ಡಾ. ಬಿ. ಆರ್.ಅಂಬೇಡ್ಕರ್‌ರವರು ಸಂವಿಧಾನ ರಚಿಸಿದ ಉದ್ದೇಶವೇ ಇಂತಹ ಸಮಾಜಗಳು ತಮ್ಮ ಹಕ್ಕನ್ನು ಪಡೆಯಬೇಕೆಂದು. ಆ ನಿಟ್ಟಿನಲ್ಲೆ ಶಿಕ್ಷಣ, ಸಂಘಟನೆ, ಹೋರಾಟದ ಮಹತ್ವ ಮತ್ತು ಅಗತ್ಯತೆಯನ್ನು ತಿಳಿಸಿಕೊಟ್ಟಿದ್ದಾರೆ. ಹಿಂದುಳಿದ ಸಮಾಜಗಳು ಈ ಜಗತ್ತಿನಲ್ಲಿ ಮುಂದೆ ಬರಬೇಕೆಂದರೆ ಶಿಕ್ಷಣ ಪಡೆಯಲೆಬೇಕು. ನಿಮ್ಮೊಳಗಿನ ಕೀಳರಿಮೆ ಬಿಟ್ಟು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಹಾಗೂ ಹೋರಾಟದ ಹಾದಿಯಲ್ಲಿ ಎಲ್ಲವನ್ನು ಪಡೆಯಬೇಕು ಎಂದ ಅವರು ಉಜ್ವಲ ಭವಿಷ್ಯ ಮುಂದಿನ ದಿನಗಳಲ್ಲಿ ನಿಮಗಾಗಿ ಕಾಯುತ್ತಾ ಇದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾದ ಡಾ.ಜಿ. ರಘುನಂದನ್ ಮಾತನಾಡಿ, ಶಿವನ ಬಲಗಣ್ಣಿನಿಂದ ಹುಟ್ಟಿದವರು ನಾವು. ನಮ್ಮ ವೃತ್ತಿಯನ್ನು ಗೌರವದಿಂದ ಮಾಡುತ್ತಿದ್ದೇವೆ. ನಮ್ಮನ್ನು ನಿಂದನೆ ಮಾಡುವವರು ಹೊಗಳುವ ಕಾಲ ಬಂದೇ ಬರುತ್ತದೆ. ಅಲ್ಲಿಯವರೆಗೂ ನಮ್ಮ ಕಾಯಕವನ್ನು ಶ್ರದ್ದೆಯಿಂದ ಮಾಡುತ್ತಾ ಹೋಗಬೇಕು. ನಾವು ಹುಟ್ಟಿರೋದೆ ಪ್ರಕೃತಿಯಿಂದ ಅದರೊಟ್ಟಿಗೆ ನಡೆಯೋಣ. ನಾವು ನಮಗಾಗಿ ಕೆಲಸ ಮಾಡದೆ ಸಮಾಜಕ್ಕಾಗಿ ದುಡಿಯುತ್ತಿದ್ದೇವೆ ಎಂದರು.
ನಾವೆಲ್ಲಾ ಭಾರತೀಯರು, ಹಿಂದುಗಳು ಎಂದೆಲ್ಲಾ ಹೇಳಿಕೊಳ್ಳುತ್ತೇವೆ. ಆದರೆ ಹಿಂದೂಗಳೇ ನಮ್ಮನ್ನು ತಿರಸ್ಕಾರ ಮಾಡುತ್ತಿದ್ದಾರೆ. ಅವರನ್ನೆಲ್ಲಾ ಶುದ್ಧ ಮಾಡುವ ನಮ್ಮನ್ನು ಅಶುದ್ದರಂತೆ ಕಾಣುತ್ತಾರೆ. ವೃತ್ತಿಯಿಂದ ಮಾತ್ರ ಬೇರೆ ಬೇರೆಯಾಗಿದ್ದೇವೆ. ಆದರೆ ನಾವೆಲ್ಲ ಒಂದೇ. ಹಿಂದುಳಿದ ಸಮಾಜಗಳೆಲ್ಲಾ ಒಗ್ಗೂಡಬೇಕು. ವೈಯಕ್ತಿಕ ಯೋಚನೆ ಬಿಟ್ಟು, ಸಮಾಜದ ಬಗ್ಗೆ ಯೋಚಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷರಾದ ಎಂ.ಜಿ.ಬಾಲು, ತಾಲ್ಲೂಕು ಸವಿತಾ ಸಮಾಜ ಅಧ್ಯಕ್ಷರಾದ ಬಿ.ಎನ್.ಧರ್ಮರಾಜ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್.ಉಮೇಶ್ ಹಾಗೂ ಸಮಾಜದ ಮುಖಂಡರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

MESCOM ಫೆಬ್ರವರಿ 6. ಶಿವಮೊಗ್ಗದ ಚಿಕ್ಕಲ್ಲು, ಗುರುಪುರ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಫೆ.06 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಾದ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, MESCOM ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

World Cancer Day ವೃತ್ತಿಯ ಜೊತೆಗೆ ಸಮಾಜ ಸೇವೆ ಅತಿಮುಖ್ಯ- ಬಿ.ಎ.ರಂಗನಾಥ್

0

World Cancer Day ವೃತ್ತಿಯ ಜೊತೆಗೆ ಸಮಾಜ ಸೇವೆಯು ಅತಿ ಮುಖ್ಯ. ನಮ್ಮ ನಮ್ಮ ವೃತ್ತಿಯ ಜೊತೆಗೆ ಸಮಾಜಮುಖಿಯಾಗಿ ಅಗತ್ಯವಾದ ಸೇವೆಗಳನ್ನು ಸಲ್ಲಿಸುವುದರ ಮುಖಾಂತರ ಜನಮಾನಸವನ್ನು ತಲುಪೋಣ ಎಂದು ನೆಹರು ರಸ್ತೆ ವರ್ತಕರ ಸಂಘದ ಅಧ್ಯಕ್ಷರಾದ ಬಿ.ಎ.ರಂಗನಾಥ್ ಅವರು ಅಭಿಮತ ವ್ಯಕ್ತಪಡಿಸಿದರು.

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ನೆಹರು ರಸ್ತೆಯ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ನೆಹರು ರಸ್ತೆ ವರ್ತಕರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶಿವಮೊಗ್ಗ, ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯ ಮಟ್ಟ ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ಅರಿತುಕೊಳ್ಳುವುದರ ಜೊತೆಗೆ ನಾವು ಸದಾ ಉತ್ಸಾಹ ಭರಿತರಾಗಿ ಹಾಗೂ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ.

ರಕ್ತದಾನದಿಂದ ದೇಹ ಮನಸ್ಸು ಸದೃಢವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಿದ ತೃಪ್ತಿ ಲಭಿಸುತ್ತದೆ. ಜಗತ್ತಿನಲ್ಲಿ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾದ ದಾನ ರಕ್ತದಾನ. ಆದ್ದರಿಂದ ಎಲ್ಲಾ ಯುವಕರು ಮೂರು ತಿಂಗಳಿಗೆ ಒಮ್ಮೆಯಾದರೂ ರಕ್ತದಾನ ಮಾಡುವುದರ ಮುಖಾಂತರ ರಕ್ತದ ಕೊರತೆಯನ್ನು ನೀಗಿಸೋಣ ಎಂದು ಕರೆ ನೀಡಿದರು.

World Cancer Day ನೆಹರು ರಸ್ತೆ ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್.ಎಂ.ಆರ್ ಮಾತನಾಡಿ, ಮುಂದಿನ ದಿನಗಳಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯವಾಗಿ ಬೇಕಾಗಿರುವ ಜೀವಾಮೃತ ರಕ್ತವನ್ನು ದಾನಿಗಳ ಮುಖಾಂತರವೇ ಪಡೆಯಬೇಕಾಗಿದ್ದು, ಇದರ ಮಹತ್ವವನ್ನು ಅರಿತು ರಕ್ತದಾನಕ್ಕೆ ಹೆಚ್ಚು ಒತ್ತು ನೀಡಬೇಕೆಂದು ನುಡಿದರು.

ನಿರ್ದೇಶಕರಾದ ಆರ್.ಗಿರೀಶ್ ಮಾತನಾಡಿ, ರಕ್ತದಾನ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ಇತ್ತೀಚಿನ ವರದಿಯ ಪ್ರಕಾರ ರಕ್ತದಾನಿಗಳಿಗೆ ಹೃದಯದ ಸಮಸ್ಯೆ ಕಡಿಮೆ ಎಂದು ನುಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ
ಜಿ.ವಿಜಯಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ಕೊರತೆ ತುಂಬಾ ಇದೆ. ಇತ್ತೀಚಿಗೆ ಕ್ಯಾನ್ಸರ್ ಹಾಗೂ ಅನೇಕ ಬಗೆಯ ಕಾಯಿಲೆಗಳಿಗೆ ಆ ಸಮಯದಲ್ಲಿ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಇಂತಹ ಕಾರ್ಯಕ್ರಮಗಳು ನಿಜಕ್ಕೂ ಮನುಕುಲದ ಸೇವೆಯಾಗಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ವರ್ತಕರು, ಉದ್ಯಮಿಗಳು ರಕ್ತದಾನ ಮಾಡುವುದರ ಮುಖಾಂತರ ಜನತೆಗೆ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ರಕ್ತದಾನಿ ದಿನಕರ್, ಮಧುಸೂದನ್ ಹಾಗೂ ವರ್ತಕರು ಉಪಸ್ಥಿತರಿದ್ದರು.

Jaljeevan Mission Scheme ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಮಾಡಿ- ಗುರುದತ್ತ ಹೆಗಡೆ

0

Jaljeevan Mission Scheme ಗ್ರಾಮೀಣ ಭಾಗದ ಜನರಿಗೆ ಶುದ್ಧವಾದ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಿ, ಸಮಸ್ಯೆಯಿಂದ ಜನರನ್ನು ಹೊರ ತರುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಯ ಸಮರ್ಪಕ ಅನುಷ್ಟಾನಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಕಾರ್ಯ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯ ಕೆಲವು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬಂದಿರುವ ನಿವೇಶನ, ಅರಣ್ಯಭೂಮಿ ಮತ್ತಿತರ ಸಮಸ್ಯೆ-ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪೈಪ್‌ಲೈನ್‌ಅಳವಡಿಸಲು ಸವಾಲುಗಳು ಎದುರಾಗಿವೆ. ಅಲ್ಲದೆ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕಾಗಿ ಆಯ್ಕೆಗೊಳಿಸಿರುವ ಭೂಮಿ ಅರಣ್ಯ ಇಲಾಖೆಗೆ ಒಳಪಟ್ಟಿದ್ದು, ಅರಣ್ಯ ನಿಯಮಗಳು ಅಡಚಣೆಯಾಗಿವೆ. ಆದ್ದರಿಂದ ಅಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ದೊರೆಯುವ ಸೂಕ್ತ ಹಾಗೂ ಪರ್ಯಾಯ ಸ್ಥಳಗಳನ್ನು ಗುರುತಿಸಿ ಕಾಲಮಿತಿಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಮುಂದಾಗುವಂತೆ ಅವರು ತಿಳಿಸಿದರು.

Jaljeevan Mission Scheme ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನೀರಿನ ಸ್ಥಾವರಗಳ ನಿರ್ಮಾಣಕ್ಕೆ ಒಂದು ಅಥವಾ ಒಂದಕ್ಕಿಂತ ಹೆಚ್ಚು ಸೂಕ್ತವಾದ ಸ್ಥಳಗಳನ್ನು ಗುರುತಿಸಬೇಕು. ಅರಣ್ಯಭೂಮಿಗೆ ಹೊಂದಿಕೊಂಡಂತಿರುವ ಸ್ಥಳಗಳಲ್ಲಿ ಕಾಮಗಾರಿ ನಡೆಯುತ್ತಿದ್ದಲ್ಲಿ ಅರಣ್ಯ ರಕ್ಷಕರು ಯೋಜನೆಯ ಅನುಷ್ಠಾನಕ್ಕೆ ಸೂಕ್ತ ಸಹಕಾರ ನೀಡುವಂತೆ ಅವರು ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದು ನೀರಿಗಾಗಿ ನಿರೀಕ್ಷಿಸುತ್ತಿರುವವರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿಯ ಅನುಷ್ಠಾನದಲ್ಲಿ ಯಾವುದೇ ಕ್ಷುಲ್ಲಕ ಕಾರಣಕ್ಕಾಗಿ ಕಾಮಗಾರಿ ಸ್ಥಗಿತಗೊಳ್ಳದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದವರು ನುಡಿದರು.

ಈ ಕಾರ್ಯದ ಸಮರ್ಪಕ ಅನುಷ್ಠಾನದಲ್ಲಿ ಸಂಬಂಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ. ಗ್ರಾಮ ಪಂಚಾಯಿತಿ, ಕಂದಾಯ ಮತ್ತು ಅರಣ್ಯ ಇಲಾಖಾಧಿಕಾರಿಗಳ ನಡುವೆ ಪರಸ್ಪರ ಹೊಂದಾಣಿಕೆ ಇದ್ದು, ಕೈಗೊಂಡ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಲು ಗಮನಹರಿಸುವಂತೆ ಸೂಚಿಸಿ ಅವರು, ಜಲ ಜೀವನ್ ಮಿಷನ್ ಯೋಜನೆಯ ಯಶಸ್ವಿಗೆ ಸಮುದಾಯದ ಸಹಭಾಗಿತ್ವವೂ ತುಂಬಾ ಮುಖ್ಯವಾಗಿದೆ ಎಂದರು.

ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ನಿಗಧಿಪಡಿಸಿದ ಅವಧಿ ಮೀರಿ ಹೋಗುತ್ತಿದ್ದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಅಧಿಕಾರಿಗಳು ಕಾಲವಿಳಂಬಕ್ಕೆ ಅವಕಾಶವಿಲ್ಲದಂತೆ ಯೋಜನೆಯ ಅನುಷ್ಠಾನಕ್ಕೆ ಮುಂದಾಗುವಂತೆ ಹಾಗೂ ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್‌ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
.

World Cancer Day ವಿಶ್ವ ಕ್ಯಾನ್ಸರ್ ದಿನ ಶಿವಮೊಗ್ಗದಲ್ಲಿ ಜನಜಾಗೃತಿ ಜಾಥಾ

0

World Cancer Day ವಿಶ್ವ ಕ್ಯಾನ್ಸರ್‌ದಿನವಾದ ಇಂದು ಭಾರತೀಯ ವೈದ್ಯಕೀಯ ಸಂಘ, ಭಾರತೀಯ ದಂತ ವೈದ್ಯಕೀಯ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಐ.ಎಂ.ಎ. ಹಾಲ್‌ನಿಂದ ಹೊರಟ ಕ್ಯಾನ್ಸರ್‌ಜಾಗೃತಿ ಜಾಥಾವು ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜನರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮನೋರೋಗ ತಜ್ಞ ಡಾ|| ಶ್ರೀಧರ್‌, ಡಾ|| ವಿನಯಾ ಶ್ರೀನಿವಾಸ್‌, ಡಾ|| ರಾಜಾರಾಮ್, ಡಾ|| ಸತೀಶ್‌, ಡಾ|| ಗೌತಮ್‌, ಡಾ|| ಮಂಜುನಾಥ್‌, ಡಾ|| ರವಿಕಿರಣ್‌, ಡಾ|| ವಿಶಾಲಾಕ್ಷಿ, ಡಾ|| ಹೇಮಾ ಸೇರಿದಂತೆ ಸುಬ್ಬಯ್ಯ ಮೈತ್ರಿ ಮಹಾವಿದ್ಯಾಲಯ, ಸುಬ್ಬಯ್ಯ ಮೆಡಿಕಲ್‌ಕಾಲೇಜುಗಳ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

Consumer Disputes Redressal Commission ಎಲೆಕ್ಟ್ರಿಕ್ ಕಾರ್ ಖರೀದಿ.ಬ್ಯಾಟರಿ‌ಲೋಪ. ಗ್ರಾಹಕರಿಗೆ ನ್ಯಾಯ ಒದಗಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ

0

Consumer Disputes Redressal Commission ಸಾತ್ವಿಕ್ ಬಿನ್ ನಾಗೇಶ್ವರ ರಾವ್ ಎಂಬುವವರು ತಮ್ಮ ವಕೀಲರ ಮೂಲಕ ಎಂ.ಜಿ. ಮೋಟರ‍್ಸ್ ಇಂಡಿಯಾ ಪ್ರೈ. ಲಿ., ಹರಿಯಾಣ ಮತ್ತು ಮೇ|| ಕಾವೇರಿ ಮೋಟರ‍್ಸ್, ಶಿವಮೊಗ್ಗ ಇವರುಗಳ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ನೀಡಲು ಆದೇಶಿಸಿದೆ. ಅರ್ಜಿದಾರ ಸಾತ್ವಿಕ್ ರವರು 20230ರಲ್ಲಿ ಶಿವಮೊಗ್ಗದ ಕಾವೇರಿ ಮೋಟರ‍್ಸ್ರವರಿಂದ ಎಲೆಕ್ಟಿçಕ್ ಕಾರನ್ನು ರೂ. 10,35,497/- ಪಾವತಿಸಿ ಖರೀದಿಸಿದ್ದು, ರೂ. 8,700/-ಗಳನ್ನು ಪಡೆದು 3 ವರ್ಷಗಳ ಇ-ಶೀಲ್ಡ್ ಮೈನ್ಟೇನೆನ್ಸ್ ಪ್ಲಾನ್‌ನ್ನು ನೀಡಿರುತ್ತಾರೆ. ಆದರೆ ಕಾರು ಖರೀದಿಸಿದ 15 ದಿನಗಳಲ್ಲೇ ಬ್ಯಾಟರಿ ಇಳಿಕೆಯಾಗುತ್ತಿರುವುದು ಗಮನಿಸಿ ಕಾವೇರಿ ಮೋಟರ‍್ಸ್ರವರಿಗೆ ತಿಳಿಸಿದಾಗ ಅವರು ಹೊಸ ಬ್ಯಾಟರಿಯನ್ನು ಅಳವಡಿಸಿರುತ್ತಾರೆ.

ಆದರೆ ಸುಮಾರು 06 ತಿಂಗಳ ನಂತರ ಮತ್ತೆ ಮತ್ತೆ ಸಮಸ್ಯೆ ಎದುರಾಗಿದ್ದು, ದೂರು ನೀಡಿದರೂ ಎದುರುದಾರರು ಪರಿಹಾರ ಮಾಡದೇ ಸೇವಾ ಲೋಪವೆಸಗಿದ್ದಾರೆಂದು ಸೂಕ್ತ ಪರಿಹಾರ ಕೋರಿ ಪ್ರಕರಣ ಸಲ್ಲಿಸಿರುತ್ತಾರೆ.

Consumer Disputes Redressal Commission ಈ ಕುರಿತು ಆಯೋಗವು ಪ್ರಕರಣದ ಅಂಶಗಳು ಮತ್ತು ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳನ್ನು ಪರಿಗಣಿಸಿ, ಎದುರುದಾರರಿಗೆ ಆಯೋಗವು ನೋಟೀಸ್ ನೀಡಿ ದೂರಿನ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ತಿಳಿಸಿದ್ದು, ದೂರುದಾರರು ಕಾರನ್ನು ಮ್ಯಾನುವಲ್ ಪ್ರಕಾರ ಸರಿಯಾದ ರೀತಿಯಲ್ಲಿ ಚಲಾಯಿಸದೇ ಇರುವುದರಿಂದ ಈ ಸಮಸ್ಯೆಯುಂಟಾಗಿರುತ್ತದೆ ಹಾಗೂ ಇದು ತಯಾರಿಕಾ ದೋಷವಲ್ಲವೆಂದು ಮತ್ತು ಕಾರನ್ನು 10000 ಕ್ಕೂ ಹೆಚ್ಚು ಕಿ.ಮಿ. ಚಲಾಯಿಸಿರುವುದರಿಂದ ಹೊಸ ಕಾರನ್ನು ನೀಡಲು ಬರುವುದಿಲ್ಲ. ತಮ್ಮ ಕಡೆಯಿಂದ ಯಾವುದೇ ಸೇವಾ ನ್ಯೂನ್ಯತೆಯಾಗಿರುವುದಿಲ್ಲ. ಆದ ಕಾರಣ ದೂರನ್ನು ವಜಾ ಮಾಡಲು ಎದುರುದಾರರು ಕೋರಿರುತ್ತಾರೆ. ಅರ್ಜಿದಾರರ ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ, ದಾಖಲೆಗಳನ್ನು ಮತ್ತು ಉಭಯ ಪಕ್ಷಗಾರರ ವಕೀಲರ ವಾದವನ್ನು ಆಲಿಸಿ, ಬ್ಯಾಟರಿಯಲ್ಲಿ ಲೋಪವಿರುವುದು ಮತ್ತು ಹಲವಾರು ಬಾರಿ ಕಾರನ್ನು ಸರಿಯಾದ ರೀತಿಯಲ್ಲಿ ರಿಪೇರಿ ಮಾಡಿಕೊಡದೇ ಇರುವುದು ಎದುರುದಾರರು ಸೇವಾ ನ್ಯೂನತೆ ಎಸಗಿರುತ್ತಾರೆಂದು ಪರಿಗಣಿಸಿ ದೂರನ್ನು ಬಾಗಶಃ ಪುರಸ್ಕರಿಸಿ ಎದುರುದಾರು ತಮ್ಮದೇ ಖರ್ಚಿನಲ್ಲಿ ದೋಷಮುಕ್ತ ಬ್ಯಾಟರಿಯನ್ನು ಆಯೋಗ ಆದೇಶದ ದಿನಾಂಕದಿಂದ 45 ದಿನಗಳೊಳಗಾಗಿ ಬದಲಿಸಿಕೊಡಲು ಹಾಗೂ ರೂ. 25,000/-ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ರೂ. 10,000 ಗಳನ್ನು ವ್ಯಾಜ್ಯದ ಖರ್ಚು ವೆಚ್ಚದ ಬಾಬ್ತಾಗಿ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ. ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟಿ ಮತ್ತು ಬಿ.ಡಿ.ಯೋಗಾನಂದ ಭಾಂಡ್ಯ ಇವರ ಪೀಠವು ಜ.27ರಂದು ಆದೇಶಿಸಿದೆ.

Micro Finance ಮೈಕ್ರೋ ಫೈನಾನ್ಸ್, ಸರ್ಕಾರದಿಂದ ಬಿಗಿ‌ ಕಡಿವಾಣ. ಸೀಎಂ ನಿಷ್ಠುರ ಕ್ರಮ

0

Micro Finance ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.

ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆಯ ಮುಖ್ಯಾಂಶಗಳು ಹೀಗಿವೆ

ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್‌ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್(SA-DHAN),ಎಕೆಎಂಐ,ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು , ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ. ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ.

ಕರ್ನಾಟಕದ ಅಧಿನಿಯಮಗಳು:

ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961
ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31 ರವರೆಗೆ 20,425 ಸಂಸ್ಥೆಗಳು ನೋಂದಣಿಯಾಗಿವೆ. ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್‌ ಬ್ರೋಕರ್‌ಗಳು, 7063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿದಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

Micro Finance ಸೂಕ್ಷ್ಮ ಹಣಕಾಸು (Micro finance) ಸಂಸ್ಥೆಗಳು ಎಂದರೇನು?:

3 ಲಕ್ಷ ರೂ.ವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್‌ ಎಂದು ಘೋಷಿಸಲಾಗಿದೆ. ಬ್ಯಾಂಕುಗಳಲ್ಲದ ಸಹಕಾರ ಸಂಘಗಳು, ಎನ್‌ಬಿಎಫ್‌ಸಿಗಳು, ಸರ್ಕಾರೇತರ ಸಂಸ್ಥೆಗಳು, ಟ್ರಸ್ಟ್‌ಗಳು, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ. ಬ್ಯಾಂಕ್‌ ಅಲ್ಲದ ಆರ್ಥಿಕ ಸಂಸ್ಥೆಗಳ (ಎನ್‌ಬಿಎಫ್‌ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್ (SA-Dhan) ಮತ್ತು ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್‌ವರ್ಕ್ (MFIN) ಸಂಸ್ಥೆಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation) ನೇಮಿಸಿದೆ.ನಿಗದಿತ ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ. ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈ‌ನಾನ್ಸ್ ಇನಸ್ಟಿಟ್ಯೂಷನ್ (AKMI) ಸದಸ್ಯತ್ವ ಪಡೆದಿವೆ. ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ‌. ಬಾಕಿ ಉಳಿದಿದೆ.
ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕಿಗೆ ವರದಿ ನೀಡಲಾಗುತ್ತದೆ , ಆರ್‌ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ.

ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳು ಎಲ್ಲಾ ಎನ್‌ಬಿಎಫ್‌ಸಿ-ಎಂಎಫ್‌ಐಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ʼಫ್ಯಾಕ್ಟ್ ಶೀಟ್‌ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು
ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ (ಎಂಎಫ್ಐ) , ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ ಅಂಶಗಳನ್ನು ಅನುಸರಿಸಬೇಕು:

  • ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು
  • ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು.
  • ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.
  • ನಗದು ಪುಸ್ತಕ, ಲೆಡ್ಜರ್ ಮತ್ತು ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

*ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.

  • ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.
  • ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.
  • ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು

*ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ಸ್ವಸಹಾಯ ಗುಂಪುಗಳಲ್ಲಿ ಸಾಲ

ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಹಲವು ಕಡೆ ಬಳಕೆ ಸಾಲವನ್ನು (Consumption Loan) ಪಡೆಯುವ ವ್ಯವಸ್ಥೆ ಇದೆ. ಇವುಗಳಲ್ಲಿ ಶೇ. 99 ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ. ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

Amity International Schools ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಮಾದರಿ‌ ನಿರ್ಮಾಣ ಸ್ಪರ್ಧೆ. ಅಂತಿಮ ಹಂತಕ್ಕೆ ತಲುಪಿದ ಶಿವಮೊಗ್ಗ ಪೋದಾರ್ ಶಾಲೆ ವಿದ್ಯಾರ್ಥಿಗಳು

0

Amity International Schools ಜನವರಿ 30 ರಿಂದ ಫೆಬ್ರವರಿ 01ರವರೆಗೆ ಹರಿಯಾಣದ ಗುರುಗ್ರಾವ್ ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿದ್ದ ಸಿಬಿಎಸ್‌ಇ ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ವಿಜ್ಞಾನ ವಸ್ತುಪ್ರದರ್ಶನದ ಅಂತಿಮ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ ಗೋಪಾಳದ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ ರೆಡ್ಡಿ ಇವರುಗಳು ಅದ್ವಿತೀಯ ಬ್ಲಾಕ್ ಸೋಲ್ಡರ್ನ್ ಫೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ.

ಇಂತಹ ಅಮೋಘ ಸಾಧನೆಯ ಬೆನ್ನೆಲುಬಾಗಿ ನಿಂತು ಮಕ್ಕಳಿಗೆ ಮಾರ್ಗದರ್ಶನ ಮಾಡಿದ ಶ್ರೀಮತಿ ಶ್ವೇತಾ ಎಂ.ಎಸ್ ರವರಿಗೆ ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಶುಭಕೋರಿದ್ದಾರೆ. ವಿದ್ಯಾರ್ಥಿಯಾದ ಸಿದ್ಧಾಂತ ಬಿ.ಪೃಥ್ವಿ ಮೆಟ್ರೋ ಯುನೈಟೆಡ್ ಹಾಸ್ಪಿಟಲ್ ಮೆಡಿಕಲ್ ಡೈರೆಕ್ಟರ್ ಆಗಿರುವ ಡಾ ಪೃಥ್ವಿ ಬಿ.ಸಿ ಹಾಗೂ ಸಿಮ್ಸ್ನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ರೂಪಶ್ರೀ.ಎನ್ ದಂಪತಿಗಳ ಪುತ್ರನಾಗಿದ್ದಾನೆ. ವಿದ್ಯಾರ್ಥಿ ಡಿ .ಆರ್. ಪ್ರಣಿತ ರೆಡ್ಡಿ ಶ್ರೀಮತಿ ಅನುತಾ ಕೆ ಬಿ ಹಾಗೂ ಶ್ರೀಯುತ ರಮೇಶ್ ಡಿ.ಎಸ್ ದಂಪತಿಗಳ ಪುತ್ರನಾಗಿದ್ದಾನೆ.
ರಾಷ್ಟ್ರಮಟ್ಟದಲ್ಲಿ ಶಿವಮೊಗ್ಗ ನಗರವನ್ನು ಪ್ರತಿನಿಧಿಸಿ ಶಾಲೆಗೆ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪರಿಶ್ರಮಕ್ಕೆ ಶಾಲೆಯ ಪ್ರಾಂಶುಪಾಲರಾದ ಡಾ.ಸರೋಜಾ ಬಿ ಶಿಳ್ಳಿನ್, ಆಡಳಿತ ಮಂಡಳಿಯವರಾದ ಸುರೇಶ್ ಕುಮಾರ್, ಕೋ ಆರ್ಡಿನೇಟರ್ಸ್, ಬೋಧಕ ಮತ್ತು ಬೋಧಕೇತರ ವೃಂದದವರು ಹಾರೈಸಿ ಶುಭಕೋರಿದ್ದಾರೆ.

MESCOM ಫೆಬ್ರವರಿ 6. ಜೊಳೆ ಬೆನವಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

0

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಫೆ.06 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ , ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.