Saturday, March 14, 2026
Saturday, March 14, 2026
Home Blog Page 417

Department of Information and Public Relations ಮಾಧ್ಯಮ ಮಾನ್ಯತಾ ಪತ್ರ ಇರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಪಡೆಯಲು ಪ್ರಕಟಣೆ

0

Department of Information and Public Relations ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನುಡಿದಂತೆ ನಡೆದಿದೆ.

ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.

ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು.ತ ಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

Department of Information and Public Relations ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದು.

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.

JCI Shivamogga ಜೆಸಿಐ ಪರಸ್ಪರರಲ್ಲಿ ಆತ್ಮವಿಶ್ವಾಸ ಬೆಳೆಸುತ್ತದೆ- ಎಸ್.ಎಸ್.ಜ್ಯೋತಿಪ್ರಕಾಶ್

0

JCI Shivamogga ಯುವಜನತೆಗೆ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಶಿವಗಂಗಾ ಯೋಗಕೇಂದ್ರ ರಾಘವ ಶಾಖೆಯಿಂದ ನಗರದ ಶುಭಂ ಸಭಾಂಗಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಾರಾತ್ಮಕ ಭಾವನೆ ಬೆಳೆಸುವಲ್ಲಿ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸೇವಾ ಮನೋಭಾವನೆ ಬೆಳೆಸುತ್ತದೆ. ಪರಸ್ಪರರಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಘವ ಶಾಖೆಯ ಯೋಗಪಟು ಜಿ.ಗಣೇಶ್ ಅವರು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.
JCI Shivamogga ರಾಘವ ಶಾಖೆ ಯೋಗಕೇಂದ್ರದ ಗುರು ವಿಜಯಕೃಷ್ಣ ಮಾತನಾಡಿ, ಯುವಜನತೆಗೆ ಸಂಸ್ಕಾರ, ಶಿಕ್ಷಣ ಹಾಗೂ ಸಾಮಾಜಿಕ ಬದ್ಧತೆ, ಜವಾಬ್ದಾರಿ ಕಲಿಸುವ ಕೆಲಸಗಳನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ತಿಳಿಸಿದರು.
ಯೋಗಗುರು ಜಿ.ಎಸ್.ಓಂಕಾರ್ ಮಾತನಾಡಿ, ಜೆಸಿಐ ಸಂಸ್ಥೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಉತ್ತಮ ಸಾಧನೆ ಮಾಡುವಂತೆ ಸೂಕ್ತ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಜೆಸಿಐ ಸಂಸ್ಥೆಗೆ ಹೆಚ್ಚು ಹೆಚ್ಚು ಯುವಜನರು ಸೇರ್ಪಡೆಗೊಳ್ಳಬೇಕು. ಉತ್ತಮ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಾಟನ್ ಜಗದೀಶ್, ಶ್ರೀನಿವಾಸ್, ಆನಂದ್, ಶಶಿಧರ್, ಸುಧಾ ಜ್ಯೋತಿಪ್ರಕಾಶ್, ಸ್ಪರ್ಶ ಅಮೋಘ್, ಸುಬ್ರಮಣಿ, ಶಂಕರ, ನರಸೋಜಿರಾವ್, ಬಿಂದು ವಿಜಯಕುಮಾರ್, ಯೋಗಪಟುಗಳು ಹಾಜರಿದ್ದರು.

Backward Classes Welfare Department ಪೂರ್ಣಾವಧಿ ಪಿ ಎಚ್ ಡಿ ಅಧ್ಯಯನದ‌‌ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

0

Backward Classes Welfare Department 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್‌ಗಾಗಿ ಆಫ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ.

2024-25ನೇ ಸಾಲಿನಲ್ಲಿ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ ದಿನಾಂಕ:10.1.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ- 1, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ:20-01-2025 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು.

Backward Classes Welfare Department ವಿದ್ಯಾರ್ಥಿಗಳ ಮತ್ತು ಪೋಷಕರ ಮನವಿಯಂತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಪ್ರತಿ ಹಾಗೂ ಒಂದು ಸೆಟ್ ದೃಢೀಕೃತ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://www.bcwd.karnataka.gov.in ನೋಡಬಹುದು.

ಹಾಗೂ ಸಹಾಯವಾಣಿ ಸಂಖ್ಯೆ:8050770004 ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಛೇರಿ ಶಿವಮೊಗ್ಗ ದೂರವಾಣಿ ಸಂಖ್ಯೆ: 08182-222129 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Madhu Bangarappa ಶೀಘ್ರವಾಗಿ ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತಿದೆ- ಸಚಿವ ಮಧು ಬಂಗಾರಪ್ಪ

0

Madhu Bangarappa ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಆರ್‌ಎಲ್‌ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶರಾವತಿ ಸಂತ್ರಸ್ತರು ಸೇರಿದಂತೆ ಚಕ್ರಾ, ವರಾಹಿ ಸಂತ್ರಸ್ತರ ಪರವಾಗಿಯೂ ನಮ್ಮ ಸರ್ಕಾರ ಇದೆ. ಸಂತ್ರಸ್ತರ ಪರವಾಗಿ ವಾದಿಸಲು ಉತ್ತಮ ವಕೀಲರನ್ನು ನೇಮಿಸಲಾಗಿದೆ. ಶೀಘ್ರವಾಗಿ ಪ್ರಕರಣ ಇತ್ಯರ್ಥ ಆಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕೂಡ ಈ ವಿಷಯದಲ್ಲಿ ಉತ್ತಮವಾಗಿ ಸ್ಪಂದಿಸಿದೆ. ಈ ಎಲ್ಲ ಸಂತ್ರಸ್ತರ ಕಾರಣದಿಂದ ನಾವಿಂದು ಬೆಳಕು ಕಾಣುತ್ತಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡುತ್ತೇವೆ.

Madhu Bangarappa ತಾಳಗುಪ್ಪ-ಸಾಗರದಿಂದ ಕುಡಿಯುವ ನೀರಿನ ಕುರಿತು ಡಾ.ಕಾಗೋಡು ತಿಮ್ಮಪ್ಪನವರ ಜೊತೆಗೂಡಿ ಮೊದಲ ಬಾರಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದೆ. ಕಾಗೋಡು ತಿಮ್ಮಪ್ಪನವರೇ ಖುದ್ದು ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿದ್ದರು. ಅದು ರದ್ದಾಯಿತು. ಅವರಿಗೆ ಹಕ್ಕುಪತ್ರ ಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಶೀಘ್ರದಲ್ಲೇ ಅವರಿಗೆ ನ್ಯಾಯ ಒದಗಲಿದೆ. ಸರ್ಕಾರ ಸಂತ್ರಸ್ತರ ಪರವಾಗಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾಧ್ಯಕ್ಷರಾದ ಡಾ.ಕಾಗೋಡು ತಿಮ್ಮಪ್ಪ, ಹಿರೇನಲ್ಲೂರು ಗ್ರಾ.ಪಂ ಅಧ್ಯಕ್ಷರಾದ ರೇವತಿ ಸುರೇಶ್, ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಉಪಸ್ಥಿರತರಿದ್ದರು.

Republic Day ದಾವಣಗೆರೆ ಸ್ಕೌಟ್ ಭವನದಲ್ಲಿ ಸಡಗರದ ಗಣರಾಜ್ಯೋತ್ಸವ

0

Republic Day ದಾವಣಗೆರೇ DRM ಸ್ಕೌಟ್ ಭವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂತೋಷ ಮತ್ತು ಸಡಗರದಿಂದ ಆಚರಿಸಲಾಯಿತು .

Republic Day ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆರ್ ಡಿ ಬದ್ರಿನಾಥ್ ರವರು ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಪದಾಧಿಕಾರಿಗಳಿಗೆ ಶುಭ ಕೋರಿದರು .ಜಿಲ್ಲಾ ಸಂಸ್ಥೆ ಉಪಾಧ್ಯಕ್ಷರುಗಳಾದ ಶ್ರೀಎಚ್. ಬಿ. ಮಂಜುನಾಥ್ ಮತ್ತು ಶ್ರೀ ಎ. ಮಹಾಲಿಂಗಪ್ಪ, ಜಿಲ್ಲಾ ಮುಖ್ಯ ಆಯುಕ್ತರು ಶ್ರೀ ಮುರುಘರಾಜೇಂದ್ರ ಜೆ ಚಿಗಟೇರಿ , ಜಿಲ್ಲಾ ಸ್ಕೌಟ್ ಆಯುಕ್ತರು ಶ್ರೀ ಎ.ಪಿ. ಷಡಕ್ಷರಪ್ಪ , ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಾರದಾ ಮಗಾನಹಳ್ಳಿ, ADC ಶ್ರೀ ಸಿ. ಆರ್.ಮರುಳಪ್ಪ ಎಸ್. ಕೆ.ಹಾಲಪ್ಪ ಶ್ರೀ ಎನ್. ಕೆ.ಕೊಟ್ರೇಶ್ ಶ್ರೀ ಶಂಕರ್ ನಾಯ್ಕ ಎಸ್. ಶ್ರೀ ನೂರುಲ್ಲಾ, ದಕ್ಷಿಣ ವಲಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಜೆ. ಎಸ್. ವಿಜಯ್, ಹಾಗೂ ಸ್ಕೌಟ್ ಮಾಸ್ಟರ್ ಆದ ಶ್ರೀ ರಾಮ್ ಮೂರ್ತಿ, ಶ್ರೀಮತಿ ದಿವ್ಯಶ್ರೀ.ಎಸ್.ಶೆಟ್ಟರ್, ಶ್ರೀಮತಿ ಸೌಮ್ಯ, ಹಾಗೂ ಜಿಲ್ಲಾ ಯುವ ಸಮಿತಿ ಸದಸ್ಯರು ಸಹನಾ, ವಿಜಯ್, ದರ್ಶನ್, ನಿತಿನ್, ಹಾಗೂ ಶ್ರೀಮತಿ ರಾಜೇಶ್ವರಿ ಬದ್ರಿನಾಥ್ ರವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಶ್ರೀಮತಿ ರತ್ನ ಎಂ. ಜಿಲ್ಲಾ ಕಾರ್ಯದರ್ಶಿ ಹಾಗೂ ಶ್ರೀಮತಿ ಸುಖವಾಣಿ ಜಿಲ್ಲಾ ಸಹಕಾರ್ಯದರ್ಶಿ ಅಚ್ಚುಕಟ್ಟಾಗಿ ಸಂಘಟಿಸಿದರು

MESCOM ಜನವರಿ 30 ಮಂಡ್ಲಿ, ಕುಂಬಾರಗುಂಡಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ನಗರದ ಸಿದ್ಧಯ್ಯ ಸರ್ಕಲ್ ಮತ್ತು ಬಟ್ಟೆ ಮಾರ್ಕೆಟ್ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್ ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.30 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

MESCOM ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಪುರ, ಶರಾವತಿನಗರ, ಶಾರದ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ 30.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Rotary Shimoga ವೃತ್ತಿಯಾವುದೇ ಇರಲಿ.ನಿಷ್ಠೆ & ಪ್ರಾಮಾಣಿಕ ಸೇವೆಗೈದಾಗ ಸಾರ್ಥಕತೆ- ಕೆ.ಬಿ.ಅಶೋಕ ನಾಯ್ಕ್

0

Rotary Shimoga ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು.

ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ ನೀಡಿ ಮಾತನಾಡಿ, ರೋಟರಿ ಸಂಸ್ಥೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ. ಇದರಿಂದ ಇತರರಿಗೂ ಪ್ರೇರಣೆ ಸಿಗುತ್ತದೆ ಎಂದು ತಿಳಿಸಿದರು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಮಾತನಾಡಿ, ಜನವರಿ ತಿಂಗಳಲ್ಲಿ ಪ್ರಪಂಚಾದ್ಯಂತ ರೋಟರಿ ಸಂಸ್ಥೆಗಳು ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತೇವೆ. ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಅತಿ ಹೆಚ್ಚು ಸೇವಾ ಕಾರ್ಯಗಳನ್ನು ಮಾಡುವುದರ ಮುಖಾಂತರ ಜನಮಾನಸ ತಲುಪಿದೆ. ಶಿವಮೊಗ್ಗ ಸೆಂಟ್ರಲ್ ಕ್ಲಬ್ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚು ಹೊತ್ತು ನೀಡಿದೆ ಎಂದರು.

ವೃತ್ತಿ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ಅಧ್ಯಕ್ಷ ಕಿರಣ್ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಿದ್ದೇವೆ. ಹೆಚ್ಚು ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಕ್ಲಬ್ ವತಿಯಿಂದ ಆಯೋಜಿಸುತ್ತಿದ್ದೇವೆ ಎಂದು ಹೇಳಿದರು.

Rotary Shimoga ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜಕ್ಕೆ ನಿಸ್ವಾರ್ಥ ಸೇವೆ ಮಾಡುತ್ತ ಮತ್ತು ಸಮಾಜದಲ್ಲಿ ಸೇವೆ ಮಾಡಿದವರನ್ನು ಗುರುತಿಸುತ್ತ ಉತ್ತಮ ಸಮಾಜ ನಿರ್ಮಾಣ ಮಾಡುವುದರಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದು ತಿಳಿಸಿದರು.

ವೃತ್ತಿ ಶ್ರೇಷ್ಠ ಪ್ರಶಸ್ತಿ ವಿತರಣೆ: 1. ಮುತ್ತಮ್ಮ (ಮನೆ ಕೆಲಸ), 2. ದಿನೇಶ್ (ಕಾರ್ಪೊರೇಷನ್ ಮ್ಯಾನ್ ಡ್ರೈವರ್), 3. ಶ್ರೀನಿವಾಸ್ (ಜೆಂಟ್ಸ್ ಬ್ಯೂಟಿ ಪಾರ್ಲರ್), 4. ನಾಗರಾಜ್ (ಟೀ ಸಪ್ಲೈ), 5. ಬಸವರಾಜಪ್ಪ (ಪೋಸ್ಟ್ ಮ್ಯಾನ್), 6. ಕುಮಾರ್ ಜೆ (ಮೇಸ್ತ್ರಿ), 7. ಜಗದೀಶ್ (ಅಮೋಘ ಟಿವಿ), 8. ಮಾಲತೇಶ್ (ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ), 9. ಜೇಮ್ಸ್ ರತ್ನಂ {ಹೋಮ್ ನರ್ಸಿಂಗ್ ಸರ್ವಿಸ್), 10. ಈಶ್ವರ್ ಭಟ್ (ಶಾರದಾದೇವಿ ಅಂದರ ವಿಕಾಸ ಶಾಲೆಯ ಆಡಳಿತ ಅಧಿಕಾರಿ), 11. ಬಸವರಾಜ್ ಜೆಡಿ (ಮುಖ್ಯ ಶಿಕ್ಷಕರು), 12. ಲಕ್ಷ್ಮಣ್ (ಮುಖ್ಯ ಶಿಕ್ಷಕರು) ಹಾಗೂ 13. ರಮೇಶ್ (ಶಿಕ್ಷಕರು) ಅವರಿಗೆ ಸನ್ಮಾನಿಸಲಾಯಿತು.

ಜಿಲ್ಲಾ ಮಾಜಿ ಗವರ್ನರ್ ಜಿ.ಎನ್.ಪ್ರಕಾಶ್ ಮಾತನಾಡಿ, ವೃತ್ತಿ ಸೇವಾ ಪ್ರಶಸ್ತಿಯ ಬಗ್ಗೆ ವಿವರಣೆ ನೀಡಿದರು. ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಜಿ.ವಿಜಯ್ ಕುಮಾರ್, ಚುಡಾಮಣಿ ಪವಾರ್, ಆನಂದ್ ಹಾಗೂ ಕ್ಲಬ್ ಕಾರ್ಯದರ್ಶಿ ಈಶ್ವರ್, ಬಸವರಾಜ್, ಗೀತಾ ಜಗದೀಶ್, ಶುಭಾ ಚಿದಾನಂದ ಇತರರಿದ್ದರು.

Prayagaraj Kumbamela ಮೌನಿ ಅಮಾವಾಸ್ಯೆ‌.ಅಮೃತ ಸ್ನಾನದ ಸಂದರ್ಭ ಕಾಲ್ತುಳಿತಕನಿಷ್ಠ ಮೂವತ್ತು ಮಂದಿಗೆ ಗಾಯ

0

Prayagaraj Kumbamela ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ‌ಮಹಾಕುಂಭ ಮೇಳದಲ್ಲಿ ಅಮೃತಸ್ನಾನಕ್ಕಾಗಿ ಪ್ರಾತಃಕಾಲ ಭಕ್ತಾದಿಗಳ ನೂಕುನುಗ್ಗಲಾಗಿ ಕಾಲ್ತುಳಿತ ಸಂಭವಿಸಿದೆ.

‘ಮೌನಿ ಅಮಾವಾಸ್ಯೆ’ಯಂದು ‘ಅಮೃತ ಸ್ನಾನ’ದ ಮೊದಲು ಬುಧವಾರ ಮುಂಜಾನೆ ಕಾಲ್ತುಳಿತದಂತಹ ಪರಿಸ್ಥಿತಿಯಿಂದ ಸಾವು ಸಂಭವಿಸಿರ ಬಹುದೆಂದು ಶಂಕಿಸಲಾಗಿದೆ.. ಅಧಿಕಾರಿಗಳ ಪ್ರಕಾರ, ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಯಾತ್ರಾರ್ಥಿಗಳು ಪವಿತ್ರ ಸ್ನಾನಕ್ಕೆ ಬಂದರು, ಇದು ಕಾಲ್ತುಳಿತದಂತಹ ಪರಿಸ್ಥಿತಿಗೆ ಕಾರಣವಾಯಿತು ಮತ್ತು ಅನೇಕರು ಗಾಯಗೊಂಡರು.

Prayagaraj Kumbamela 30 ಮಹಿಳೆಯರು ಗಾಯಗೊಂಡಿದ್ದು, ಮೇಳ ಪ್ರದೇಶದಲ್ಲಿ ಸ್ಥಾಪಿಸಲಾದ ಕೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ. ವರದಿಯಾಗಿದೆ.

Shivamogga City Corporation 2025 ನೇ ಇಸವಿ‌ ಶಿವಮೊಗ್ಗದಲ್ಲಿ ಯಾವ ದಿನಾಂಕ ಮಾಂಸ ಮಾರಾಟ ನಿಷಿದ್ಧ? ಮಾಹಿತಿ ಓದಿ

0

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಕೆಳಕಂಡ ದಿನಾಂಕಗಳಂದು ಮಾಂಸ ರಹಿತ ದಿನವೆಂದು ಘೋಷಿಸಿದೆ.

ಜನವರಿ 30 ರಂದು ಸರ್ವೋದಯ ದಿನ, ಫೆ. 26 ಮಹಾಶಿವರಾತ್ರಿ, ಏ.06 ರಂದು ಶ್ರೀರಾಮ ನವಮಿ ದಿನ, ಏ.10 ಮಹಾವೀರ ಜಯಂತಿ ದಿನ, ಮೇ.12 ಬುದ್ಧಪೂರ್ಣಿಮೆ ಜಯಂತಿ ದಿನ, ಆ.16 ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ, ಆ.27 ರಂದು ಗಣೇಶ ಚತುರ್ಥಿ ದಿನ, ಅ.02 ರಂದು ಗಾಂಧಿ ಜಯಂತಿ ದಿನ ಹಾಗೂ ನ.25 ರಂದು ಸೈಂಟ್ ಟಿ.ಎಲ್. ವಾಸ್ವಾನಿ ಜನ್ಮದಿನ.

Shivamogga City Corporation ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈ ಎಲ್ಲಾ ದಿನಾಂಕಗಳಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ಮೇಲ್ಕಂಡ ದಿನಾಂಕಗಳಂದು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

Royal English Medium School ಆರೋಗ್ಯದಲ್ಲಿ ತರಕಾರಿಗಳ ಮಹತ್ವ.‌ರಾಯಲ್ ಡೈಮಂಡ್ ಶಾಲೆಯಲ್ಲಿ‌ ವಿಶಿಷ್ಟ ಕಾರ್ಯಕ್ರಮ

0

Royal English Medium School ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನೆಡದ ತರಕಾರಿಗಳ ಮೇಳ ಕಾರ್ಯಕ್ರಮ ನಡೆಯಿತು. ತರಕಾರಿಗಳ ಮಹತ್ವ ಅರಿತು ಹೆಚ್ಚು ಸೇವಿಸುವ ಮೂಲಕ ನಮ್ಮ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಬೇಕು. ಆರೋಗ್ಯ ದಿನಾಚರಣೆ ಅಂಗವಾಗಿ ತರಕಾರಿಗಳ ಮೇಳ ಕಾರ್ಯಕ್ರಮವನ್ನ ಏರ್ಪಡಿಸಲಾಗಿತ್ತು.

ತರಕಾರಿಗಳ ಸೇವನೆಯಿಂದ ಜೀರ್ಣಕ್ರಿಯೆ ಆರೋಗ್ಯವನ್ನು ಸುಧಾರಿಸುತ್ತದೆ. ರಕ್ತದ ಒತ್ತಡವನ್ನು ಸುಧಾರಿಸಿ , ಕಣ್ಣುಗಳಿಗೆ ಸಹಾಯ, ಕ್ಯಾನ್ಸರ್ ನಂತಹ ಮಾರಕ ರೋಗಗಳನ್ನು ಕಡಿಮೆ ಮಾಡಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತಗೆ ಮೆದುಳನ್ನು ಯೌವನ ವಾಗಿರಿಸಿಕೊಳ್ಳಲು ಸಹಾಯಕವಾಗಿದೆ.

ಚರ್ಮರೋಗವನ್ನು ಬಿಸಿಲಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಎಂದು ಕನ್ನಡ ಭಾಷಾಸಹ ಶಿಕ್ಷಕರಾದ ಅರುಣ್ ಕುಮಾರ್ ಹೆಚ್ ಎಂ ರವರು ತಿಳಿಸಿದರು.

ನಂತರ ವಿದ್ಯಾರ್ಥಿಗಳು ಐಶ್ವರ್ಯ ಹಿರೇಕಾಯಿ, ಬೃಂದಾ ಹೂ ಕೋಸು, ನುಗ್ಗೆ ಸೊಪ್ಪು ದೃತಿ, ಮೂಲಂಗಿ ಪ್ರೀತಮ್, ಕೊತ್ತಂಬರಿ ಸೊಪ್ಪು ಸಿಂಚನ, ಕ್ಯಾರೆಟ್ ಸೂರಜ್, ತೇಜಲ್ ಹಾಗಲಕಾಯಿ, ಗೆಡ್ಡೆಕೋಸು ಯಶಸ್, ಈ ವಿದ್ಯಾರ್ಥಿಗಳು ಉಪಯೋಗಗಳನ್ನು ಪರಿಚಯ ಮಾಡಿಕೊಟ್ಟರು. ಈ ತರಕಾರಿಗಳಲ್ಲಿ ಇರುವ ಎ, ಸಿ, ಜೀವಸತ್ವಗಳಿವೆ ಎಂಬುದನ್ನು ಪರಿಚಯಿಸಿದರು.

Royal English Medium School ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಬೆಳೆಸುವಂತಹ ತರಕಾರಿಗಳನ್ನು ಸಂಗ್ರಹಿಸಿದ್ದರು. ಹೀರೇಕಾಯಿ, ಹೂಕೋಸು ನುಗ್ಗೆ ಸೊಪ್ಪು, ಈರುಳ್ಳಿ , ಗೆಡ್ಡೆಕೋಸು ಬೀನ್ಸು, ಬೆಂಡೆಕಾಯಿ ಎಲೆಕೋಸು, ಕೆಂಪು ಬಿಟ್ರೋಟ್ ಮುಂತಾದ ತರಕಾರಿಗಳನ್ನು ಸಂಗ್ರಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರಾಯಲ್ ಇಂಗ್ಲೀಷ್ ಮೇಡಂ ಶಾಲೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ ಮೇಡಂ ಮಾತನಾಡಿ ವಿದ್ಯಾರ್ಥಿಗಳು ಪ್ರತಿನಿತ್ಯದ ಆಹಾರ ಸೇವನೆಯಲ್ಲಿ ತರಕಾರಿಗಳ ಮಹತ್ವವನ್ನ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಸದೃಢವಾಗಿ ಇರಬೇಕಾದರೆ ಸದೃಢವಾದ ಆಹಾರ ಪದಾರ್ಥಗಳನ್ನು ಸೇವನೆ ಅವಶ್ಯಕ ಎಂದು ಹೇಳಿದರು. ಹಾಗೆ ಪ್ರತಿ ತರಕಾರಿಗಳನ್ನು ಯಾವ ರೀತಿಯಲ್ಲಿ ಬೆಳೆಯುತ್ತಾರೆ. ತರಕಾರಿಗಳನ್ನು ಬಳಸುವುದರಿಂದ ನಮ್ಮ ದೇಹದಲ್ಲಿ ಆಗುವಂತಹ ಬದಲಾವಣೆಗಳನ್ನು ಪರಿಚಯಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ವಿನಯ್, ಶಿಕ್ಷಕಿಯಾದ ವಿಂಧ್ಯಾ ರವರು ಪಾಲ್ಗೊಂಡಿದ್ದರು.