Tuesday, August 4, 2026
Tuesday, August 4, 2026
Home Blog Page 42

ಲೆಕ್ಕ ಪರಿಶೋಧಕ ವೃತ್ತಿಯು ಒಂದು ಪವಿತ್ರ ವೃತ್ತಿ-ಕೆ.ಎಂ.ನಾಗರಾಜ್

0

ವೃತ್ತಿಯ ಜೊತೆಗೆ ಸಮಾಜಮುಖಿ ಆಗಿ ಸೇವೆ ಸಲ್ಲಿಸುತ್ತಿರುವ ಚಾರ್ಟೆಡ್ ಅಕೌಂಟೆಂಟ್ ಅಕೌಂಟೆಂಟ್ ನಾಗರಾಜ್ ಕೆಎಂ ರವರಿಗೆ.. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ. ಆತ್ಮೀಯ ವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 2026 27ನೇ ಸಾಲಿನ ಡಿಕೆ ಶೇಷಗಿರಿ ಅವರು ಮಾತನಾಡುತ್ತ ಲೆಕ್ಕ ಪರಿಶೋಧಕ ವೃತ್ತಿಯು ಒಂದು ಪವಿತ್ರ ವೃತ್ತಿ ಯಾಗಿದ್ದು ಆರ್ಥಿಕ ವಂಚನೆಗಳನ್ನು ತಡೆಗಟ್ಟಿ ದೇಶದ ಬೊಕ್ಕಸಕ್ಕೆ ಆದಾಯ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ನುಡಿದರು. ಸನ್ಮಾನ ಸ್ವೀಕರಿಸಿದ ಕೆ ಎಂ ನಾಗರಾಜ್ ರವರು ಮಾತನಾಡುತ್ತಾ ಜಿಎಸ್‌ಟಿ. ಅನುಷ್ಠಾನಗೊಂಡ ನಂತರದಲ್ಲಿ ಲೆಕ್ಕ ಪರಿಶೋಧಕರ ವೃತ್ತಿಯು ಸಾಕಷ್ಟು ಬದಲಾವಣೆಯಾಗುತ್ತಾ ಸುಧಾರಣೆಯನ್ನು ಕಂಡಿದೆ ಈ ಸಂದರ್ಭದಲ್ಲಿ ನಮ್ಮನ್ನ ಗುರುತಿಸಿ ಗೌರವಿಸಿದ ರೋಟರಿ ಸಂಸ್ಥೆಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ನುಡಿದರು. ಇದೇ ಸಂದರ್ಭದಲ್ಲಿ ಮಾಜಿ ಸಹಾಯಕ ಗೌರ್ನರ್ಜಿ ವಿಜಯಕುಮಾರ್ ಮಾತನಾಡುತ್ತಾ ಲೆಕ್ಕ ಪರಿಶೋಧಕರ ವೃತ್ತಿಯು ಸರ್ಕಾರದ ಖಜಾನೆ ಹೆಚ್ಚಾಗಲು ಒಂದು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ. ಕಾರ್ಯದರ್ಶಿ ಆರ್ ಮನೋಹರ್, ಮಾಜಿ ಅಧ್ಯಕ್ಷರಾದ ಸತೀಶ್ ಚಂದ್ರ ನಿರ್ದೇಶಕರಾದ ಸಿ ಕೆ ವಿಜಯಕುಮಾರ್, ಸಂತೋಷ್ ಕುಮಾರ್, ಡಾಕ್ಟರ್ ಅವಿನಾಶ್, ಉಪಸ್ಥಿತರಿದ್ದರು.

ಜೀವನದ ಕೆಲವು ಆನಂದದ ಕ್ಷಣಗಳನ್ನೂ ಬಿಟ್ಟು ರೋಗಿಗಳ ಸೇವೆ ಮಾಡುತ್ತಿರುತ್ತೇವೆ. ಇದನ್ನ ಪರಿಗಣಿಸಿ ನಮ್ಮನ್ನ ಸನ್ಮಾನಿಸಿದ್ದಕ್ಕೆ ಕೃತಜ್ಞತೆಗಳು- ಡಾ.ಸಾತ್ವಿಕ್

0

ಪ್ರತಿ ವರ್ಷ ಜುಲೈ ಒಂದರಂದು ವೈದ್ಯರ ದಿನವೆಂದು ಆಚರಿಸಿ ವೈದ್ಯರನ್ನು ಗೌರವಿಸುವ ರೂಡಿ ನಮ್ಮ ಭಾರತದಲ್ಲಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ವೈದ್ಯರಾಗಿದ್ದ ಡಾಕ್ಟರ್ ಬಿದನರಾಯ ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು ಅವರು ಹುಟ್ಟಿದ ದಿನವನ್ನು ವೈದ್ಯರ ದಿನವೆಂದು ಆಚರಿಸಲು ಭಾರತ ಸರ್ಕಾರವು 1991ರಲ್ಲಿ ನಿರ್ಧರಿಸಿತು. ಇವರು ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ಪುರಸ್ಕೃತರು . ಈ ವೈದ್ಯರ ದಿನದಂದು ನಮ್ಮ ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಹಿರಿಯರಾದ ದುರ್ಗಿಗುಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾಕ್ಟರ್ ಕೃಷ್ಣಾಜಿ ರಾವ್, ಡಾಕ್ಟರ್ ಬಿ ಆರ್ ತಹಶೀಲ್ದಾರ್, ಆರ್ಥೋಪೆಡಿಕ್ ಸರ್ಜನ್ ಹಾಗೂ ಭಾರತ್ ನೊರೋ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಸಾತ್ವಿಕ್, ನ್ಯೂರೋ ಸರ್ಜನ್ ರವರನ್ನು ಅತ್ಯಂತ ಆತ್ಮೀಯತೆಯಿಂದ ಅವರ ಸೇವೆಯನ್ನು ಗುರುತಿಸಿ ಗೌರವಿಸಿದೆವು. ಗೌರವ ಸ್ವೀಕರಿಸಿ ಮಾತನಾಡಿದ ಡಾಕ್ಟರ್ ಕೃಷ್ಣಾಜಿ ರಾವ್ ರವರು ತಮ್ಮ ಕಾಲದಲ್ಲಿ ಆಧುನಿಕ ಸಲಕರಣೆ ಎಂದರೆ ಬಿಪಿ ಅಳೆಯುವ ಸಾಧನ ಹಾಗೂ ಸ್ಟೆತೋಸ್ಕೋಪ್ ಮಾತ್ರ ಎಂದು ತಿಳಿಸಿದರು. ಈಗ ವೈದ್ಯಕೀಯ ಕ್ಷೇತ್ರ ಬಹಳಷ್ಟು ಬೆಳದಿದೆ ಎಂದು ತಿಳಿಸಿದರು . ಡಾಕ್ಟರ್ ತಹಶೀಲ್ದಾರ್ ಮಾತನಾಡಿ ವೈದ್ಯರು ಎಷ್ಟೇ ಸಮರ್ಪಕವಾಗಿ ಸೇವೆ ಸಲ್ಲಿಸಿದರೂ ಕೆಲವೂಮ್ಮೆ ರೋಗಿಗಳ ಆರೋಗ್ಯದಲ್ಲಿ ತೊಂದರೆ ಆದಾಗ ರೋಗಿಗಳ ಮತ್ತು ಅವರ ಸಂಬಂಧಿಕರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು. ಹಾಗೆಯೇ ಯುವ ವೈದ್ಯರಾದ ಡಾ. ಸಾತ್ವಿಕ್ ಮಾತನಾಡುತ್ತಾ ತಮ್ಮ ವೈಯುಕ್ತಿಕ ಜೀವನದ ಕೆಲವು ಕ್ಷಣಗಳನ್ನು ಆನಂದಿಸಲು ಸಹ ಬಿಡುವಿಲ್ಲದಂತೆ ನಾವುಗಳು ರೋಗಿಗಳ ಸೇವೆಯನ್ನು ಹಗಲಿರಳು ಮಾಡುತ್ತೇವೆ. ಇದನ್ನೆಲ್ಲ ಪರಿಗಣಿಸಿ ನಮ್ಮನ್ನು ಸನ್ಮಾನಿಸಿ ಈ ದಿನ ನಮ್ಮನ್ನು ಹುರಿದುಂಬಿಸುವ ಕೆಲಸ ಮಾಡಿದ ಎಲ್ಲಾ ರೋಟೇರಿಯನ್ಗಳಿಗೂ, ಎಲ್ಲಾ ಡಾಕ್ಟರ್ ಗಳ ಪರವಾಗಿ ಧನ್ಯವಾದಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಡಾ. ಶಿವಕುಮಾರ್, ಕಾರ್ಯದರ್ಶಿ ಶ್ರೀಧರ್, ಸರ್ಜಾ ಜಗದೀಶ್, ನಾಗರಾಜ. ರವೀಂದ್ರನಾಥ ಐತಾಳ್, ವೆಂಕಟೇಶ್,ರಮೇಶ್, ರೇಖಾ ಸಂಜಯ್ ಮತ್ತು ವಾರಿಜಾ ಜಗದೀಶ್ ಭಾಗವಹಿಸಿದ್ದರು. ಈ ಕಾರ್ಯಕ್ರಮ ಡಾಕ್ಟರ್ ತಹಶೀಲ್ದಾರ್ ಅವರ ಆಸ್ಪತ್ರೆಯಲ್ಲಿ ನಡೆಯಿತು.

University of Agricultural Shivamogga ಕೃಷಿಕರು ಕೃಷಿ ವಿವಿ‌ಯಿಂದ ಏರ್ಪಡಿಸುವ ತರಬೇತಿಯಿಂದ ಹೆಚ್ಚಿನ ಲಾಭ ಪಡೆಯಬೇಕು : ಪ್ರೊ.ರಾಮಕೃಷ್ಣ ಹೆಗಡೆ

0

University of Agricultural Shivamogga ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಶಿವಮೊಗ್ಗದಡಿಯಲ್ಲಿ ದಿನಾಂಕ 30.06.2026 ಮಂಗಳವಾರ ದಂದು ” ಶುಂಠಿ ಬೆಳೆಯ ಸಮಗ್ರ ಕೃಷಿ ” ಕುರಿತ ತರಬೇತಿ ಕಾರ್ಯಕ್ರಮವನ್ನು ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಯಲ್ಲಿ ಆಯೋಜಿಸಲಾಗಿತ್ತು. ಈ ಸದರಿ ತರಬೇತಿಗೆ ರೈತರು ಭಾಗವಹಿಸಿ ತರಬೇತಿಯ ಲಾಭವನ್ನು ಪಡೆದುಕೊಂಡರು.

ಈ ತರಬೇತಿಯಲ್ಲಿ ಡಾ. ರಾಮಕೃಷ್ಣ ಹೆಗಡೆ, ಹಿರಿಯ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಇವರು ರೈತರನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ಘಾಟನೆ ಮಾಡಿ ರೈತರನುದ್ದೇಶಿಸಿ ಮಾತನಾಡಿ ಈ ತರಬೇತಿಯಿಂದ ಇನ್ನು ಹೆಚ್ಚಿನ ಲಾಭವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

University of Agricultural Shivamogga ಈ ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ರವಿ ಸಿ.ಎಸ್. , ಸಹ ಪ್ರಾಧ್ಯಾಪಕರು (ತೋಟಗಾರಿಕೆ) “ಶುಂಠಿ ಬೆಳೆಯ ತಳಿಗಳು ಮತ್ತು ಆಧುನಿಕ ಕೃಷಿ ತಾಂತ್ರಿಕ ಪದ್ಧತಿಗಳು”, ಡಾ. ನಿರಂಜನ ಕೆ. ಎಸ್. , ಸಹಾಯಕ ಪ್ರಾಧ್ಯಾಪಕರು (ಮಣ್ಣುವಿಜ್ಞಾನ) “ಶುಂಠಿ ಬೆಳೆಯಲ್ಲಿ ಗೊಬ್ಬರ ಮತ್ತು ಪೋಷಕಾಂಶಗಳ ಸಮಗ್ರ ನಿರ್ವಹಣೆ” ಡಾ. ನರಸಿಂಹ ಮೂರ್ತಿ ಹೆಚ್. ಬಿ. , ಸಹಾಯಕ ಪ್ರಾಧ್ಯಾಪಕರು (ಸಸ್ಯರೋಗಶಾಸ್ತ್ರ) “ಶುಂಠಿ ಬೆಳೆಯಲ್ಲಿ ರೋಗಗಳು ಮತ್ತು ನಿರ್ವಹಣಾ ಕ್ರಮಗಳು”, ಶ್ರೀ ಶಿವರಾಜ ಸಹಾಯಕ ತೋಟಗಾರಿಕೆ ಅಧಿಕಾರಿ (ಆನಂದಪುರ) ” ತೋಟಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳು” ಕೊನೆಯದಾಗಿ ಡಾ. ಕೃಷ್ಣ ರೆಡ್ಡಿ ಪಿ. , ಸಹಾಯಕ ಪ್ರಾಧ್ಯಾಪಕರು (ಕೀಟಶಾಸ್ತ್ರ), ರೈತ ತರಬೇತಿ ಸಂಸ್ಥೆ “ಶುಂಠಿ ಬೆಳೆಯಲ್ಲಿ ಕೀಟಗಳು ಮತ್ತು ನಿರ್ವಹಣಾ ಕ್ರಮಗಳು” ಇವರು ರೈತರೊಂದಿಗೆ ಈ ಎಲ್ಲಾ ವಿಷಯದ ಕುರಿತು ಸಂವಾದಿಸಿ ವಂದಿಸಿದರು.

ಶರಾವತಿ ಪಂಪ್ಡ್ ಸ್ಟೊರೇಜ್: ಎಲ್ಲಾ ಬಗೆ ಅನುಮತಿ ಸಿಕ್ಕ ನಂತರವೇ ಆರಂಭ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್

0

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧದ ನಡುವೆಯೇ ಇಂಧನ ಸಚಿವ ಕೆ.ಜೆ. ಜಾರ್ಜ್ ಯೋಜನೆಯ ಪರವಾಗಿ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶರಾವತಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿಯೂ ಪರಿಸರ ನಾಶವಾಗಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಆಗ ಸಾವಿರಾರು ಎಕರೆ ಭೂಮಿ ಮುಳುಗಡೆಯಾಗಿದ್ದು, ಅನೇಕ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಆದರೆ ಆ ಯೋಜನೆಯಿಂದ ಸುಮಾರು ಸಾವಿರ ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.

ಇದಕ್ಕೆ ವಿರುದ್ಧವಾಗಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಸಚಿವರು, ಈ ಯೋಜನೆಯಲ್ಲಿ ಸಮುದ್ರದ ಕಡೆಗೆ ಹರಿಯುವ ನೀರನ್ನು ಪಂಪ್ ಮಾಡಿ ಜಲಾಶಯಕ್ಕೆ ತಂದು ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ವಿವರಿಸಿದರು.

ಯೋಜನೆಗೆ ಕೇವಲ 125 ಎಕರೆ ಭೂಮಿ ಮಾತ್ರ ಅಗತ್ಯವಿದ್ದು, ಪೈಪ್‌ಲೈನ್ ಅಳವಡಿಕೆಗೆ ಮಾತ್ರ ಹೆಚ್ಚುವರಿ ಭೂಮಿ ಬೇಕಾಗುತ್ತದೆ. ಆದರೆ ಈ ಯೋಜನೆಯಿಂದ ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ಹೇಳಿದರು.

ಯೋಜನೆಯಿಂದ ಯಾವುದೇ ರೀತಿಯ ಪರಿಸರ ಹಾನಿಯಾಗುವುದಿಲ್ಲ. ಪೈಪ್‌ಲೈನ್ ಅಳವಡಿಕೆಗಾಗಿ ಬಳಸುವ ಪ್ರದೇಶಗಳಲ್ಲಿ ಮತ್ತೆ ಅರಣ್ಯ ಬೆಳೆಸಲಾಗುತ್ತದೆ. ಇದು ಎಲ್ಲರಿಗೂ ಅನುಕೂಲವಾಗುವ ಉತ್ತಮ ಯೋಜನೆಯಾಗಿದೆ ಎಂದು ಜಾರ್ಜ್ ಅಭಿಪ್ರಾಯಪಟ್ಟರು.

ಯೋಜನೆಗೆ ಅಗತ್ಯವಿರುವ ಎಲ್ಲಾ ಪರಿಸರ ಹಾಗೂ ಕಾನೂನುಬದ್ಧ ಅನುಮತಿಗಳು ದೊರೆತ ಬಳಿಕವೇ ಕಾಮಗಾರಿ ಆರಂಭಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು.

Women and Child Development Department ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

0

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು 5 ರಿಂದ 18 ವರ್ಷದೊಳಗಿನ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಸೂಚಿತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು.

ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಮಕ್ಕಳು ಕನಿಷ್ಠ 5 ವರ್ಷ ಕರ್ನಾಟಕ ರಾಜ್ಯದಲ್ಲಿ ವಾಸಿಸಿರಬೇಕು. ಈ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದು. ರಾಷ್ಟç, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಮಾಹಿತಿಯನ್ನು ಸಲ್ಲಿಸುವುದು.

Women and Child Development Department ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರತಿ ಕ್ಷೇತ್ರಕ್ಕೆ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳಿಗೆ ರೂ. 10000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 27 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮುಸುಕಿನ ಜೋಳದ ಬೆಳೆಗೆ ಸೈನಿಕ ಹುಳು ಬಾಧೆ ನಿಯಂತ್ರಣಕ್ಕೆ ಕೃಷಿ ಇಲಾಖೆಯಿಂದ ಮಾಹಿತಿ

0

ಶಿವಮೊಗ್ಗ ತಾಲ್ಲೂಕಿನಲ್ಲಿ ಜೂನ್ ಮಾಹೆಯಲ್ಲಿ ಶೇಕಡ 55 ರಷ್ಟು ಮಳೆಯ ಕೊರತೆಯಾಗಿದ್ದು, ಪ್ರಸ್ತುತ ಶೇಕಡ 10 ರಷ್ಟು ಪ್ರದೇಶದಲ್ಲಿ ಮಾತ್ರ ಮುಸುಕಿನ ಜೋಳ ಬಿತ್ತನೆಯಾಗಿದೆ. ಇಂತಹ ಪ್ರತಿಕೂಲ ಹವಾಮಾನದ ಸಮಯದಲ್ಲಿ ಬಿತ್ತನೆ ಮಾಡಲಾದ ಮುಸುಕಿನ ಜೋಳದ ಬೆಳೆಗೆ ಫಾಲ್ ಸೈನಿಕ ಹುಳುಗಳ ಬಾಧೆ ಹೆಚ್ಚಾಗುವ ಸಾಧ್ಯತೆಯಿದ್ದು, ರೈತರು ತಕ್ಷಣವೇ ಸೂಕ್ತ ಹತೋಟಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೃಷಿ ಇಲಾಖೆ ತಿಳಿಸಿದೆ.

ಶಿವಮೊಗ್ಗ ತಾಲ್ಲೂಕಿನ ಕಸಬಾ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ಶ್ರೀರಾಂಪುರ ಗ್ರಾಮದ ರೈತರ ಜಮೀನುಗಳಿಗೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ.

ಈ ಹುಳುವು 20-25 ದಿನಗಳ ಜೀವನ ಚಕ್ರವನ್ನು ಹೊಂದಿದ್ದು, ಒಂದೇ ಬೆಳೆಯಲ್ಲಿ ಮೊಟ್ಟೆ, ಮರಿಹುಳು ಮತ್ತು ಪ್ರೌಢ ಚಿಟ್ಟೆ ಎಂಬ ಮೂರೂ ಹಂತಗಳಲ್ಲಿ ಕಾಣಿಸಿಕೊಳ್ಳುತ್ತದೆ.
ಇವು ಮುಸುಕಿನ ಜೋಳದ ಎಲೆ ಹಾಗೂ ಸುಳಿಗಳನ್ನು ತಿಂದು ರಂಧ್ರಗಳನ್ನು ಮಾಡುತ್ತವೆ ಮತ್ತು ಎಲೆಗಳ ಮೇಲೆ ತಮ್ಮ ಹಿಕ್ಕೆಗಳನ್ನು ಬಿಡುತ್ತವೆ.
ಬೆಳೆಯ 45 ದಿನಗಳವರೆಗೆ ಈ ಹುಳುವಿನ ಬಾಧೆ ತೀವ್ರವಾಗಿದ್ದು, ನಿರ್ಲಕ್ಷ್ಯ ವಹಿಸಿದರೆ ಶೇ. 50 ರಿಂದ 60 ರಷ್ಟು ಇಳುವರಿ ನಷ್ಟವಾಗುವ ಭೀತಿ ಇರುತ್ತದೆ.
ನಿಯಂತ್ರಣ ಕ್ರಮಗಳು:
ಸಮಗ್ರ ನಿರ್ವಹಣೆ: ಮಾಗಿ ಉಳುಮೆ ಮಾಡುವುದು, ಜುಲೈ ಮೊದಲ ವಾರದೊಳಗೆ ಬಿತ್ತನೆ ಮುಗಿಸುವುದು ಮತ್ತು ಪರ್ಯಾಯ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ಈ ಹುಳುವಿನ ಪ್ರಮಾಣವನ್ನು ಕಡಿಮೆ ಮಾಡಬಹುದು.

ರಾಸಾಯನಿಕ ಸಿಂಪರಣೆ: 100 ಗಿಡಗಳಲ್ಲಿ ಸುಮಾರು 20 ಗಿಡಗಳು ಹಾನಿಗೊಳಗಾಗಿದ್ದರೆ ಸಿಂಪರಣೆ ಕಡ್ಡಾಯವಾಗಿದೆ. ಬಿತ್ತನೆ ಮಾಡಿದ 15 ದಿನಗಳಲ್ಲಿ ಎಮಾಮೆಕ್ಟೀನ್ ಬೆಂಜೋಯೇಟ್ (0.5 ಗ್ರಾಂ) ಅಥವಾ ಕ್ಲೋರಾಂಟ್ರಿನಿಪ್ರೋಲ್ (0.4 ಎಂ.ಎಲ್) ಅನ್ನು ಪ್ರತಿ 1 ಲೀಟರ್ ನೀರಿಗೆ ಮಿಶ್ರಣ ಮಾಡಿ ಸುಳಿಗೆ ಬೀಳುವಂತೆ ಸಿಂಪರಣೆ ಮಾಡಬೇಕು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ-2026: ನೊಂದಣಿಗೆ ಜುಲೈ 31 ಕೊನೆ ದಿನ ಪ್ರತಿಕೂಲ ಹವಾಮಾನದಲ್ಲಿ ರೈತರ ಕೈ ಹಿಡಿಯುತ್ತಿರುವ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ-2026’ ಅನ್ನು ಮುಂಗಾರು ಹಂಗಾಮಿಗೆ ಸರ್ಕಾರ ಮುಂದುವರೆಸಿದೆ.

ರೈತರು ವಿಳಂಬ ಮಾಡದೆ ತಕ್ಷಣವೇ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬೇಕಿದೆ.
ಮುಸುಕಿನ ಜೋಳ ಬೆಳೆಗೆ ಜುಲೈ 31 ಮತ್ತು
ಭತ್ತದ ಬೆಳೆಗೆ ಆಗಸ್ಟ್ 14 ಕೊನೆಯ ದಿನಾಂಕ.
ರೈತರು ತಮಗೆ ಬೆಳೆ ಸಾಲ ನೀಡುವ ಬ್ಯಾಂಕ್, ಸಹಕಾರಿ ಬ್ಯಾಂಕುಗಳು, ಗ್ರಾಮ ಒನ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನಿಗದಿತ ಅವಧಿಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಶಿವಮೊಗ್ಗ ತಾಲ್ಲೂಕು ಸಹಾಯಕ ಕೃಷಿ ನಡುವೆ ರ್ದೇಶಕರು ಕೋರಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆ ಅನಾಹುತ ಪರಿಹಾರಕ್ಕೆ ಪ್ಯಾಕೇಜ್ ಘೊಷಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು- ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್

0

ಪ್ರಸಕ್ತ ಸಾಲಿನ ಏಪ್ರಿಲ್‌ ಮತ್ತು ಮೇ ಮಾಹೆಯಲ್ಲಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ರೈತರು ತೋಟಗಳಲ್ಲಿ ಬೆಳೆದ ಅಡಿಕೆ ಮರಗಳು ನಾಶಗೊಂಡಿದ್ದು, ಈ ಸಂಬಂಧ ಬಾಧಿತ ರೈತರಿಗೆ ವಿಶೇಷ ಪ್ಯಾಕೇಜ್‌ಘೋಷಿಸುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಕೋರಿಕೆ ಸಲ್ಲಿಸಲಾಗುವುದು.

ಅಂತೆಯೇ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ನಿಯೋಗ ತೆರಳಿ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವಂತೆ ರಾಜ್ಯ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್‌ಅವರು ಹೇಳಿದರು. ಅವರು ಜಿಲ್ಲಾ ಪಂಚಾಯಿತಿಯ ಅಬ್ದುಲ್‌ನಜೀರ್‌ಸಾಬ್‌ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಜಿಲ್ಲಾಡಳಿತದ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವುದಾಗಿ ಅವರು ತಿಳಿಸಿದರು.

ಅನಿರೀಕ್ಷಿತ ಮಳೆಯಿಂದಾಗಿ ಜಿಲ್ಲೆಯಲ್ಲಿ 2500ಹೆಕ್ಟೇರ್‌ಪ್ರದೇಶದಲ್ಲಿ ಬೆಳೆದ ತೋಟಗಾರಿಕೆ ಬೆಳೆ ನಾಶವಾಗಿದೆ. ಅಲ್ಲದೇ ಬೆಳೆದು ನಿಂತ ಸುಮಾರು 11ಲಕ್ಷ ಅಡಿಕೆ ಮರಗಳು ಧರೆಗುರುಳಿವೆ. ಇದರಿಂದಾಗಿ ರೈತರ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಸರ್ಕಾರದಿಂದ ವಿಶೇಷ ಪ್ಯಾಕೇಜ್‌ಘೋಷಿಸಿದಲ್ಲಿ ರೈತರಿಗೆ ಅನುಕೂಲವಾಗಲಿದೆ. ಪ್ರಸ್ತುತ ಎನ್.ಡಿ.ಆರ್.ಎಫ್‌ನಿಯಮಾನುಸಾರ ಪರಿಹಾರ ಘೋಷಿಸಿದಲ್ಲಿ ನಾಶಗೊಂಡ ತೋಟದ ನಿರ್ವಹಣೆಗೆ ಸಾಕಾಗುವುದಿಲ್ಲ. ಸಂತ್ರಸ್ಥರಿಗೆ ಮಾನವೀಯ ನೆಲೆಯಲ್ಲಿ ಪರಿಹಾರ ದೊರಕಿಸಿ ಕೊಡಿ. ಮಲೆನಾಡಿನಲ್ಲಿ ಸಂಭಾವ್ಯ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ. ಮಳೆಮಾಪನ ಕೇಂದ್ರಗಳ ಸಮರ್ಪಕ ನಿರ್ವಹಣೆ ಇಲ್ಲದಿರುವುದರಿಂದ ಅತೀವೃಷ್ಟಿಯಿಂದ ಬೆಳೆಹಾನಿಗೊಳಗಾದ ರೈತರಿಗೆ ಸರಿಯಾದ ಬೆಳೆವಿಮಾ ಮೊತ್ತ ದೊರಕದಂತಾಗಿದೆ. ಆದ್ದರಿಂದ ತಕ್ಷಣದ ಕ್ರಮವಾಗಿ ಮಳೆಮಾಪನ ಕೇಂದ್ರಗಳನ್ನು ಸರಿಪಡಿಸಿ, ಹಿಂದಿನ ವರ್ಷದಲ್ಲಿ ಬೆಳೆ ನಾಶಗೊಂಡ ರೈತರಿಗೆ ಪರಿಹಾರಧನ ಕೊಡಿಸಿ ಎಂದು ವಿಧಾನ ಪರಿಷತ್‌ ಸದಸ್ಯರಾದ ಡಾ. ಧನಂಜಯ ಸರ್ಜಿ ಅವರು ತಿಳಿಸಿದ್ದಾರೆ. ಏಪ್ರಿಲ್‌ ಮಾಹೆಯಲ್ಲಿ ಬಿದ್ದ ಮಳೆಯಿಂದಾಗಿ ಹಾನಿಗೊಳಗಾದ ಒಟ್ಟು 592ಮನೆಗಳ ಪೈಕಿ 66ಮನೆಗಳು ಸಂಪೂರ್ಣ ನಾಶಗೊಂಡಿವೆ. 526ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಮೇ ಮಾಹೆಯಲ್ಲಿ 220ಮನೆಗಳು ಹಾನಿಗೊಳಗಾಗಿದ್ದು, 1ಮನೆ ಪೂರ್ಣಪ್ರಮಾಣದಲ್ಲಿ ಹಾಗೂ 219ಮನೆಗಳು ಭಾಗಶಃ ಹಾನಿಗೊಳಗಾಗಿದೆ. ಮನೆ ಸಂತ್ರಸ್ಥರ ನೆರವಿಗೆ ಈವರೆಗೆ ಯಾರೊಬ್ಬರೂ ಧಾವಿಸದಿರುವುದು ಬೇಸರದ ಸಂಗತಿಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್‌ಅವರು ಮಾತನಾಡಿ, ಸಂತ್ರಸ್ಥ ಕುಟುಂಬದವರಿಗೆ ತಕ್ಷಣದ ಪರಿಹಾರ ಕ್ರಮವನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ದೊರಕಿಸಿಕೊಡಬೇಕು. ಅಲ್ಲದೆ ಭಾಗಶಃ ಅಥವಾ ಪೂರ್ಣಪ್ರಮಾಣದ ಮನೆ ನಾಶಗೊಂಡವರ ಮಾಹಿತಿ ಪಡೆದು, ಅವರಿಗೆ ಸಕಾಲದಲ್ಲಿ ಸೌಲಭ್ಯ ಒದಗಿಸಿಕೊಡುವಂತೆ ಸೂಚಿಸಿದರು.
ದೇವಕಾತಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಘಟಕಗಳಿಗೆ ಅಗತ್ಯವಿರುವ ವಿದ್ಯುತ್‌ಸರಬರಾಜು ಮಾಡುವಲ್ಲಿ ತೀವ್ರತರಹದ ವ್ಯತ್ಯಯವಾಗುತ್ತಿದೆ. ಅದಕ್ಕಾಗಿ ಶಾಶ್ವತ ಪರಿಹಾರ ನೀಡಬೇಕು. ಕೈಗಾರಿಕಾ ಘಠಕಗಳಿಗೆ ನಿರಂತರ ವಿದ್ಯುತ್‌ಸರಬರಾಜು ಮಾಡಲು ಅಗತ್ಯವಾಗಿರುವ ಪವರ್‌ಸ್ಟೇಷನ್‌ನಿರ್ಮಿಸಲು 2 ಎಕರೆ ಪ್ರದೇಶವನ್ನು ಕಾಯ್ದಿರಿಸಲಾಗಿದೆ ಎಂದು ಶಾಸಕ ಚನ್ನಬಸಪ್ಪ ಅವರು ಸಚಿವರ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್‌ಅವರು ಮಾತನಾಡಿ, ಸದರಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು. ನಗರದ ಹೊರವಲಯದ ಗೋವಿಂದಾಪುರದಲ್ಲಿ ನಿರ್ಮಾಣಗೊಂಡಿರುವ ವಸತಿ ಸಮುಚ್ಚಯದಲ್ಲಿನ ನಿವಾಸಿಗಳ ಅನುಕೂಲಕ್ಕಾಗಿ ತಾತ್ಕಾಲಿಕ ವಿದ್ಯುತ್‌ಸಂಪರ್ಕ ಕಲ್ಪಿಸಲಾಗಿದೆ. ಇಲ್ಲಿನ ವಿದ್ಯುತ್‌ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ 280 ಮಳೆಮಾಪನ ಕೇಂದ್ರಗಳು ಇದ್ದು, ಅವುಗಳ ಪೈಕಿ ಹಾಳಾಗಿದ್ದ 200ಕ್ಕೂ ಹೆಚ್ಚಿನ ಮಳೆಮಾಪನ ಕೇಂದ್ರಗಳನ್ನು ದುರಸ್ತಿ ಮಾಡಲಾಗಿದೆ. ಕಳೆದ ಸಾಲಿನ ಬೆಳೆ ಸಮೀಕ್ಷೆಯಿಂದ ಸಂತ್ರಸ್ಥ ರೈತರಿಗೆ ಬೆಳೆವಿಮಾ ಪರಿಹಾರ ಮೊತ್ತ ಕೊಡುವಲ್ಲಿ ಆಗಿರುವ ನ್ಯೂನತೆಯನ್ನು ಸರಿಪಡಿಸುವಲ್ಲಿ ವಿಮಾ ಕಂಪನಿಗಳ ಮುಖ್ಯಸ್ಥರಿಗೆ ಹಾಗೂ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.

ಪ್ರಸಕ್ತ ಸಾಲಿನ ಮಳೆ ಕೊರತೆಯಿಂದಾಗಿ ಕೆರೆಕಟ್ಟೆ ಕಾಲುವೆಗಳನ್ನು ತುಂಬಿಸಿಕೊಳ್ಳುವುದು, ಏತನೀರಾವರಿ ಸೌಲಭ್ಯ ಬಳಸಿಕೊಳ್ಳುವುದು ಅನಿವಾರ್ಯವಾಗಲಿದೆ. ಅದಕ್ಕಾಗಿ ಸಣ್ಣ ಮತ್ತು ಭಾರೀ ನೀರಾವರಿ ಇಲಾಖೆ ಸನ್ನದ್ಧವಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಭಾರೀ ನೀರಾವರಿ ಇಲಾಖೆಯ ವ್ಯಾಪ್ತಿಗೊಳಪಡುವ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮೆಸ್ಕಾಂಗೆ ಕೋಟ್ಯಾಂತರ ರೂಪಾಯಿಗಳ ವಿದ್ಯುತ್‌ಶುಲ್ಕ ಪಾವತಿಸುವುದು ಬಾಕಿ ಇದೆ. ರಾಜ್ಯದಲ್ಲಿಯೂ ನೆರೆಯ ರಾಜ್ಯಗಳಿಂದ ವಿದ್ಯುತ್‌ಖರೀದಿಸಿ ವಿತರಿಸಲಾಗುತ್ತಿದೆ. ವಿದ್ಯುತ್‌ಸರಬರಾಜು ಮಾಡಿದವರಿಗೂ ಹಣ ಪಾವತಿ ಮಾಡಬೇಕಾಗಿರುವುದರಿಂದ ಏತ ನೀರಾವರಿ ಸೌಲಭ್ಯಕ್ಕಾಗಿ ವಿದ್ಯುತ್‌ಬಳಸಿಕೊಳ್ಳುವ ಪೂರ್ವದಲ್ಲಿ ಮುಂಗಡ ಹಣ ಪಾವತಿಸುವಂತೆ ಸೂಚಿಸಲಾಗುವುದು ಎಂದ ಅವರು, ಮುಂದಿನ ದಿನಗಳಲ್ಲಿ ಸೋಲಾರ್‌ನಿಂದ ಏತ ನೀರಾವರಿ ಯೋಜನೆಯನ್ನು ಬಳಸಿಕೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಶ್ರೀಮತಿ ಬಲ್ಕೀಸ್‌ಬಾನು, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

D.K. Shivakumar ಗಣಿಗಾರಿಕೆ ನಡೆಸಲು ಸರ್ಕಾರಿ ಜಾಗವನ್ನು ಪಡೆದು ಐದು ವರ್ಷವಾದರೂ ಗಣಿ ನಡೆಸದಿದ್ದರೆ ಕ್ರಮಕೈಗೊಳ್ಳಿ : ಸೀಎಂ ಡಿ.ಕೆ.ಶಿವಕುಮಾರ್

0

D.K. Shivakumar ರಾಜ್ಯದಲ್ಲಿ ಅರಣ್ಯ ಸಂರಕ್ಷಣೆ, ಅರಣ್ಯ ಅನುಮತಿ ಪ್ರಕ್ರಿಯೆ ಹಾಗೂ ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಮತ್ತಷ್ಟು ಒತ್ತು ನೀಡಿದೆ. ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗಣಿಗಾರಿಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಯಾವುದೇ ಚಟುವಟಿಕೆ ಆರಂಭಿಸದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಕಿ ಉಳಿದಿರುವ ಎಲ್ಲಾ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದ ಅವರು, ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ರೂಪಿಸಬೇಕೆಂದು ಹೇಳಿದರು.

ಅರಣ್ಯವಾಸಿಗಳ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನಿಯಮಾನುಸಾರ ಆದ್ಯತೆಯಿಂದ ಒದಗಿಸಬೇಕೆಂದು ಸೂಚಿಸಿದರು.

ಅರಣ್ಯ ಭೂಮಿ ಒತ್ತುವರಿ ತೆರವು, ಮಾನವ–ವನ್ಯಜೀವಿ ಸಂಘರ್ಷ ತಡೆ ಹಾಗೂ ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ, ನಮ್ಮ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಅಮೂಲ್ಯವಾಗಿದ್ದು, ಅದರ ಸಂರಕ್ಷಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕೆಂದು ಸೂಚಿಸಿದರು.

ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಲಾಖೆಯ ಆಡಳಿತ ವ್ಯವಸ್ಥೆ ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಅಧಿಕಾರಿಗಳು, 2025–26ನೇ ಸಾಲಿನಲ್ಲಿ ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣಹಾನಿ, ಅಂಗವಿಕಲತೆ, ಗಾಯ ಹಾಗೂ ಆಸ್ತಿನಾಶ ಸೇರಿದಂತೆ ವಿವಿಧ ಪ್ರಕರಣಗಳಿಗೆ 63 ಕೋಟಿ 6 ಲಕ್ಷ ರೂಪಾಯಿ ಪರಿಹಾರ ವಿತರಿಸಿರುವುದಾಗಿ ಮಾಹಿತಿ ನೀಡಿದರು.

ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್‌, ಆನೆ ತಡೆ ಕಂದಕ, ಸೌರತಂತಿ ಬೇಲಿ, ಆನೆ ಮತ್ತು ಚಿರತೆ ಕಾರ್ಯಪಡೆಗಳ ಜೊತೆಗೆ ಎಸ್‌ಎಂಎಸ್‌ ಹಾಗೂ ಡಿಜಿಟಲ್‌ ಬೋರ್ಡ್‌ಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪ್ರಾಣಿಗಳು ಹೊಸ ಮಾರ್ಗಗಳನ್ನು ಕಂಡುಕೊಂಡು ಅಡೆತಡೆಗಳನ್ನು ದಾಟುವ ಸಾಮರ್ಥ್ಯ ಹೊಂದಿರುವುದರಿಂದ, ಅಧಿಕಾರಿಗಳೂ ಹೊಸ ತಂತ್ರಜ್ಞಾನ ಮತ್ತು ಹೊಸ ಮಾರ್ಗೋಪಾಯಗಳ ಕುರಿತು ನಿರಂತರ ಅಧ್ಯಯನ ನಡೆಸಬೇಕೆಂದು ಸಲಹೆ ನೀಡಿದರು.

D.K. Shivakumar ಸಭೆಯಲ್ಲಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ, ವನ್ಯಜೀವಿಗಳ ಮೇಲ್ವಿಚಾರಣೆಗೆ ಥರ್ಮಲ್ ಡ್ರೋನ್ ಬಳಕೆ, ಹಾಗೂ ಶರಾವತಿ ಪಂಪ್ ಸ್ಟೋರೇಜ್, ಗೋವಾ ತಮ್ನೇರ್, ಕಳಸಾ–ಬಂಡೂರಿ ಮತ್ತು ಬಿಡಿಎ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗಳಿಗೆ ಸಂಬಂಧಿಸಿದ ಬಾಕಿ ಅರಣ್ಯ ಅನುಮತಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

International Day Against Drug Abuse ಗಾಂಜಾ ಮಾದಕ ವಸ್ತುವು ಈಗ ಹಳ್ಳಿಹಳ್ಳಿಗೂ ಕಾಲಿಟ್ಟಿದೆ. ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸಿದೆ- ಎನ್.ಜಿ.ಬೆನಕ ಪ್ರಸಾದ್

0

International Day Against Drug Abuse ಯುವಕರು ಮಾದಕ ವಸ್ತುಗಳ ಸೇವನೆ ಮಾಡಿದರೆ ಆರೋಗ್ಯ ಹಾಗೂ ಕುಟುಂಬದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುತ್ತದೆ ನಮ್ಮ ದೇಶದಲ್ಲಿ ಡ್ರಗ್ಸ್ ನಿಯಂತ್ರಣ ಮಾಡಲು ಕಾಯ್ದೆ ಇದೆ ಗಾಂಜಾ ಹಳ್ಳಿ ಹಳ್ಳಿಗೂ ಕಾಲಿಟ್ಟಿದೆ ಪೊಲೀಸ್ ಇಲಾಖೆ ಇದರ ಬಗ್ಗೆ ತೀವ್ರ ನಿಗಾ ವಹಿಸಿದೆ ವಿದ್ಯಾರ್ಥಿ ದೆಸೆಯಲ್ಲಿ ಓದುವುದೂ ನಮ್ಮ ಧರ್ಮ ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯ ಹಾಳಾಗಲಿದೆ ಡ್ರಗ್ಸ್ ಸೇವನೆ ಮಾಡಿದ ವ್ಯಕ್ತಿ ಯಾವ ರೀತಿಯ ಹೇಯ ಕೃತ್ಯ ಎಸಗಲು ಹೇಸುವುದಿಲ್ಲ ವಿದ್ಯಾರ್ಥಿಗಳು ದೇಶದ ಆಸ್ತಿ ಎಂದು ಡಿ. ವೈ. ಎಸ್ಪಿ ಸಾಗರ ವಿಭಾಗ ಶ್ರೀ. ಎನ್. ಜೆ. ಬೆನಕ ಪ್ರಸಾದ್ ರವರು ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಸಾಗರ ತಾಲೂಕು,ಲಾಲ್ ಬಹುದ್ದೂರು ಕಲಾ ವಿಜ್ಞಾನ ಮತ್ತು ಎಸ್. ಬಿ. ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಸಾಗರ, ಶಿವಮೊಗ್ಗ ಜಿಲ್ಲಾ ಪೊಲೀಸ್, ಸಾಗರ ಉಪವಿಭಾಗ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಎನ್. ಸಿ. ಸಿ ಜನ ಜಾಗೃತಿ ವೇದಿಕೆ ಶಿರಸಿ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಪ್ಪ ಅಮ್ಮ ಕಷ್ಟ ಪಟ್ಟು ಓದಿಸುತ್ತಾರೆ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಡ್ರಗ್ಸ್ ನ ಮಾಯಾ ಜಾಲಕ್ಕೆ ಒಳಗಾಗಬೇಡಿ ಸಹವಾಸ ದೋಷದಿಂದ ದುಶ್ಚಟಗಳಿಗೆ ಬಲಿಯಾಗಬಾರದು, ಡ್ರಗ್ಸ್ ಮಾರಾಟ ಮಾಡುವುದು ಅಪರಾಧವಾಗುತ್ತದೆ ಸನ್ಮಿತ್ರದ ಮೂಲಕ ಡ್ರಗ್ಸ್ ಗೆ ಬಲಿಯಾದವರನ್ನೂ ಕೌನ್ಸಿಲಿಂಗ್ ಮಾಡಿ ಸಮಾಜದ ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದರು
ದ್ವಿಚಕ್ರ ವಾಹನ ಚಲಾವಣೆ ವೇಳೆ ತಪ್ಪದೇ ಹೆಲ್ಮೆಟ್ ಧರಿಸಬೇಕು ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು‌.

International Day Against Drug Abuse ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸುವ ಬಗ್ಗೆ ಸಲಹೆ ನೀಡಿದರು ಅಧ್ಯಕ್ಷತೆಯನ್ನು ಅಧ್ಯಕ್ಷರು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (ರಿ) ಶ್ರೀ. ಬಿ.ಆರ್ . ಜಯಂತ್, ರವರು ವಹಿಸಿದ್ದರು ವೇದಿಕೆಯಲ್ಲಿ
ಡಾ. ಹೆಚ್. ಎಂ.ಶಿವಕುಮಾರ್ ಪ್ರದಾನ ಕಾರ್ಯದರ್ಶಿಗಳು, ಮ. ಅ. ಪ್ರ., ಸಾಗರ, ಡಾ. ನಿರಂಜನ್ ಮೂರ್ತಿ ಟಿ ಪ್ರಭಾರ ಪ್ರಾಂಶುಪಾಲರು ಎಲ್ . ಬಿ. ಮತ್ತು ಎಸ್. ಬಿ.ಎಸ್ ಕಾಲೇಜ್, ಶ್ರೀ ಕೃಷ್ಣಪ್ಪ ಜಿ. ಏ ಎಸ್ . ಐ ಸಾಗರ ವಿಭಾಗ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಗರ ತಾಲೂಕಿನ ಯೋಜನಾಧಿಕಾರಿ ದಯಾನಂದ, ಶ್ರೀಮತಿ ಕಸ್ತೂರಿ ಸಾಗರ್ ಉಪಾಧ್ಯಕ್ಷರು ಜಿಲ್ಲಾ ಜನ ಜಾಗೃತಿ ವೇದಿಕೆ ಶಿರಸಿ ವಿಭಾಗ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ರಾದ ಕಲ್ಲೇಶ್, ಸೇವಾ ಪ್ರತಿನಿಧಿ ಲಲಿತಾ ಸಹಕರಿಸಿದರು.

ಕಸೂತಿ ಮತ್ತು ವಸ್ತ್ರ ವರ್ಣಗಾರಿಕೆ ಬಗ್ಗೆ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

0

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಎಂಬ್ರಾಯಡರಿ ಮತ್ತು ಫ್ಯಾಬ್ರಿಕ್ ಪೈಂಟಿAಗ್ (ಆರಿ ವರ್ಕ್ ಮತ್ತು ಸ್ಯಾರಿ ಕುಚ್ಚು ಹಾಕುವುದು) ಉಚಿತವಾಗಿ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 06/07/2026 ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 22/06/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 6363139123, 9886935603, 9591514154, 9686248369 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.