Monday, March 16, 2026
Monday, March 16, 2026
Home Blog Page 422

Rotary Club Shimoga ಹೆತ್ತವರಿಗೆ ಗೌರವಾರ್ಥ ಸಿ, ನೈತಿಕ ಮೌಲ್ಯಗಳನ್ನ ಬೆಳೆಸಿಕೊಳ್ಳಿ- ಹೊಸತೋಟ ಸೂರ್ಯನಾರಾಯಣ್

0

Rotary Club Shimoga ಸಾಮಾಜಿಕ ಹಾಗೂ ಪ್ರಜಾಪುಭುತ್ವ ಮೌಲ್ಯಗಳ ಜೊತೆಗೆ ಮಾನವೀಯ, ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಮಕ್ಕಳು ಮೈಗೂಡಿಸಿಕೊಳ್ಳುವುದು ಇಂದಿನ ತುರ್ತು ಅವಶ್ಯಕತೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ನ ಟ್ರಸ್ಟಿ ಹಾಗೂ ಆಕಾಶ್ ಇನ್ ಇದರ ಮಾಲೀಕರಾದ ರೊ. ಹೊಸತೋಟ ಸೂರ್ಯನಾರಾಯಣ್ ಇವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ರೋಟರಿ ಪೂರ್ವ ಆಂಗ್ಲ ಶಾಲೆಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಮ್ಮ ಮಾತನ್ನು ಮುಂದುವರೆಸಿದ ಶ್ರೀಯುತರು ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗುವುದರಿಂದ ಸಂವಿಧಾನಾತ್ಮಕ ಮೌಲ್ಯಗಳ ಜೊತೆಗೆ ಪರಿಶ್ರಮ ವಹಿಸಿ ತಮ್ಮನ್ನು ಶಾಲೆಗೆ ಕಳುಹಿಸಿದ ತಂದೆ ತಾಯಿಗಳಿಗೆ ಗೌರವವನ್ನು ಕೊಡುತ್ತಾ, ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದ ಆಸ್ತಿಯಾಗಿ ಬೆಳೆದು ತಮ್ಮ ಸಂವಿಧಾನಾತ್ಮಕ ಹೊಣೆಗಾರಿಕೆಗಳನ್ನು ನಿರ್ವಹಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದರು. ಎಲ್ಲಕ್ಕಿಂತ ಮಿಗಿಲಾಗಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಗೀಳಿನಿಂದ ಹೊರಬಂದು ತಮ್ಮ ವ್ಯಾಸಂಗದ ಕಡೆ ಗಮನ ಕೊಟ್ಟು ದೇಶದ ಅತ್ಯಮೂಲ್ಯ ಸಂಪನ್ಮೂಲಗಳಾಗಿ ಬೆಳೆಯಬೇಕೆಂದು ಕರೆಕೊಟ್ಟರು.
ಸಮಾರಂಭದ ಅತಿಥಿಗಳಾದ ಟ್ರಸ್ಟ್ನ ಕಾರ್ಯದರ್ಶಿ ರೊ. ರಾಮಚಂದ್ರ ಎಸ್.ಸಿ., ಇವರು ಮಾತನಾಡುತ್ತಾ, ಸಂವಿಧಾನದ ಆಶಯಗಳನ್ನು ವಿವರವಾಗಿ ತಿಳಿಸಿ ಅದನ್ನು ರಚಿಸುವಲ್ಲಿ ಸಂವಿಧಾನ ಸಮಿತಿ ಅಧ್ಯಕ್ಷರಾದ ಡಾ. ಅಂಬೇಡ್ಕರ್ ಅವರು ಬಹುತ್ವ ಸಂಸ್ಕೃತಿಯುಳ್ಳ ಭಾರತದಂತಹ ವಿಶಾಲ ದೇಶದ ಹಿನ್ನಲೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಧರ್ಮ ಹಾಗೂ ಪ್ರದೇಶಗಳ ಜನರಿಗೆ ಸರಿಹೊಂದುವAತಹ ಸಂವಿಧಾನವನ್ನು ರಚಿಸುವಲ್ಲಿ ಯಶಸ್ವಿಯಾಗಿದ್ದು, ಸಂವಿಧಾನವೇ ನಮ್ಮ ಸರ್ಕಾರಗಳ ಆಸ್ತಿಯಾಗಿರುತ್ತದೆ ಎಂದು ತಿಳಿಸಿದರು.
Rotary Club Shimoga ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿಯಾದ ರೊ. ಚಂದ್ರಶೇಖರಯ್ಯ ಎಂ., ನಿವೃತ್ತ ಡಿ.ಪಿ.ಐ., ಇವರು ಧ್ವಜಾರೋಹಣವನ್ನು ಮಾಡಿ, ಅಧ್ಯಕ್ಷ ಪೀಠದಿಂದ ಮಾತನಾಡುತ್ತಾ ಭಾರತದಾದ್ಯಂತ ೭೬ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸುವ ಈ ಶುಭ ಸಂದರ್ಭದಲ್ಲಿ ನಮ್ಮ ಸ್ವತಂತ್ರ ಸೇನಾನಿಗಳು ಸ್ವಾತಂತ್ರö್ಯ ನಂತರದ ಭಾರತ ಹೇಗಿರಬೇಕು ಎಂಬ ಬಗ್ಗೆ ಕನಸನ್ನು ಕಂಡಿದ್ದು, ಆ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ಭಾರತ ಸಂವಿಧಾನ ರಚಿತವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಸಮಾರಂಭದಲ್ಲಿ ಟ್ರಸ್ಟಿ ರೊ. ಮಂಜುನಾಥ್ ಎನ್.ಬಿ., ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ಶ್ರೀಮತಿ ವಾಗ್ದೇವಿ ಬಸವರಾಜ್, ಕಾರ್ಯದರ್ಶಿ ಶ್ರೀಮತಿ ಲತಾ ಸೋಮಶೇಖರ್, ಶಾಲೆಯ ಪ್ರಾಂಶುಪಾಲರಾದ ಸೂರ್ಯನಾರಾಯಣ್ ಆರ್., ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ರೋಟರಿ ಶಿವಮೊಗ್ಗ ಪೂರ್ವದ ವತಿಯಿಂದ ಸಿಹಿಯನ್ನು ಹಂಚಲಾಯಿತು.

Rotary Club Shimoga ಶತಾಯುಷಿ ಹಳ್ಳಿ ಹೆಬ್ಬಾಗಿಲ ಗಣಪಮ್ಮಶೆಡ್ತಿ‌ ಅವರಿಗೆ ಸನ್ಮಾನ

0

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆ ವತಿಯಿಂದ ಶತಾಯುಷಿ ಗಣಪಮ್ಮ ಶೆಡ್ತಿ ಅವರಿಗೆ ಸನ್ಮಾನಿಸಲಾಯಿತು. ಕ್ಲಬ್ ಸದಸ್ಯರಾದ ಜಯಶೀಲ್ ಶೆಟ್ಟಿ ಅವರ ಅಜ್ಜಿ 103 ವರ್ಷದ ಶತಾಯುಷಿ ಗಣಪಮ್ಮ ಶೆಡ್ತಿ ಅವರನ್ನು ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಹಳ್ಳಿ ಹೆಬ್ಬಾಗಿಲ ಮನೆಯಲ್ಲಿ ಗೌರವಿಸಲಾಯಿತು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್.ಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಉತ್ತಮವಾದ ಜೀವನಶೈಲಿ ಹಾಗೂ ಆಹಾರ ಪದ್ಧತಿ ಪಾಲಿಸುತ್ತಿದ್ದ ಕಾರಣ ಕುಟುಂಬದ ಹಿರಿಯರು ದೀರ್ಘಾಯುಷ್ಯ ಜೀವನ ಸಾಗಿಸುತ್ತಿದ್ದರು. ನಾವು ಸಹ ಹಿರಿಯರು ಪಾಲಿಸಿದ ಒಳ್ಳೆಯ ಜೀವನಶೈಲಿಯನ್ನು ಅನುಸರಿಸುವ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು. ಹಿರಿಯರ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
Rotary Club Shimoga ಕಾರ್ಯಕ್ರಮದಲ್ಲಿ ಅವರ ಕುಟುಂಬ ಸದಸ್ಯರಾದ ವಿಠ್ಠಲ್ ಶೆಟ್ಟಿ, ಗುಲಾಬಿ ಶೆಟ್ಟಿ, ಶೇಖರ್ ಶೆಟ್ಟಿ, ಜಯವೀರ ಶೆಟ್ಟಿ, ಜಯಂತಿ ಶೆಟ್ಟಿ, ಜಯಶ್ರೀ ಸಿ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್ ಬಿವಿ, ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಬಸವರಾಜ್ ಬಿ, ಜಯಶೀಲ ಶೆಟ್ಟಿ ಉಪಸ್ಥಿತರಿದ್ದರು.

Red Cross Sanjeevini Blood Bank ರಕ್ತದಾನಕ್ಕಿಂತ ಮಿಗಿಲಾದ ದಾನವಿಲ್ಲ- ವಸಂತ ಹೋಬಳಿದಾರ್

0

Red Cross Sanjeevini Blood Bank ಜನ್ಮದಿನವನ್ನು ಸಮಾಜಮುಖಿಯಾಗಿ ಆಚರಿಸುವ ಮೂಲಕ ಅರ್ಥಪೂರ್ಣ ಸೇವಾ ಚಟುವಟಿಕೆಗಳನ್ನು ಮಾಡಬೇಕು ಎಂದು ರೋಟರಿ ಜಿಲ್ಲೆ ನಿಯೋಜಿತ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ಉಡುಪಿಯ ಶ್ರೀ ಕೃಷ್ಣ ಮಠದ ಆವರಣದ ಮಥುರಾ ಕಂಫರ್ಟ್ಸ್ನಲ್ಲಿ ರೋಟರಿ ಶಿವಮೊಗ್ಗ
ಮಿಡ್ ಟೌನ್ ಕೆ.ಕೃಷ್ಣಮೂರ್ತಿ ಅಭಿಮಾನಿ ಬಳಗ, ಯಶೋಧ ಆಟೋ ಯೂನಿಯನ್, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲದ ಸಂಯುಕ್ತ ಆಶ್ರಯದಲ್ಲಿ ದಾನಿ, ಸಮಾಜ ಸೇವಕ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ ಉಡುಪಿ ಸಹಕಾರದೊಂದಿಗೆ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಒಂದು ಶ್ರೇಷ್ಠವಾದ ದಾನ. ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ. ರಕ್ತದ ಸರಬರಾಜು ಇಲ್ಲದೆ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ರಕ್ತದ ಕೊರತೆ ನೀಗಿಸಲು ರಕ್ತದಾನ ಒಂದೇ ಮಾರ್ಗ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ನಾವು ಸದಾ ಲವಲವಿಕೆಯಿಂದ ಇರುವುದರ ಜತೆಗೆ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿ ಇರುತ್ತೇವೆ. ಹೃದಯಘಾತದ ಸಮಸ್ಯೆಯಿಂದ ದೂರ ಇರುತ್ತೇವೆ ಎಂದರು.
Red Cross Sanjeevini Blood Bank ಡಾ. ಗುಡದಪ್ಪ ಕಸಬಿ ಮಾತನಾಡಿ, ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು. ಈ ನಿಟ್ಟಿನಲ್ಲಿ ಶಿವಮೊಗ್ಗ ಹಾಗೂ ಉಡುಪಿಯ ಅನೇಕ ಸಂಘಟನೆಗಳೊಂದಿಗೆ ಸೇರಿಸಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷ ಸುರೇಶ್ ಮಾತನಾಡಿ, ಪ್ರತಿ ವರ್ಷ 300ಕ್ಕೂ ಹೆಚ್ಚು ಯೂನಿಟ್‌ಗಳ ಸಂಗ್ರಹಣೆ ಆಗುವುದರ ಜತೆಗೆ ಸಾಕಷ್ಟು ರಕ್ತದ ಕೊರತೆ ನೀಗಿಸುತ್ತಿರುವ ಇಂತಹ ಸಂಘಟನೆಗಳು ನಿಜಕ್ಕೂ ಅಭಿನಂದನಾರ್ಹ ಎಂದು ತಿಳಿಸಿದರು.
ರಕ್ತದಾನ ಶಿಬಿರದಲ್ಲಿ 303 ಯೂನಿಟ್ ರಕ್ತ ಸಂಗ್ರಹವಾಯಿತು. ಕೆ.ಕೃಷ್ಣಮೂರ್ತಿ, ರಾಜೇಂದ್ರ ಪ್ರಸಾದ್, ರೋಟರಿ ನಿಯೋಜಿತ ಅಧ್ಯಕ್ಷ ಆನಂದ್, ದುರ್ಗಪ್ಪ, ಮಾಜಿ ಅಧ್ಯಕ್ಷೆ ವೀಣಾ ಸುರೇಶ್, ಡಾ. ಪ್ರಣೀತ್, ಡಾ. ತರುಣ್, ಹಾಗೂ ರಕ್ತದಾನಿಗಳು ಉಪಸ್ಥಿತರಿದ್ದರು.

Shimoga News ಬೊಮ್ಮನಕಟ್ಟೆಗೆ ನಗರ ಸಾರಿಗೆ ಬಸ್ ಸೌಲಭ್ಯಕ್ಕೆ ಸಾರಿಗೆ ಸಚಿವರಿಗೆ ಮನವಿ

0

Shimoga News ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡವಣೆಗೆ ಸರ್ಕಾರಿ ಸಿಟಿ ಬಸ್ ಬಿಡುವ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಚೇತನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಬಿವಿ ಶ್ರೀನಿವಾಸ್ ,ಸಿ. ಜಿ ಮಧುಸೂದನ್, ಹರ್ಷಿತ್, ಸೇರಿದಂತೆ ಹಲವು ಯುವ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು

Samanvaya Trust ಮಿಷನ್ ಕಾಂಪೌಂಡ್‌ ನಿವಾಸಿ ರೋಷನ್ ಕುಟುಂಬಕ್ಕೆ ಪರಿಸರ ಕುಟುಂಬ ಪ್ರಶಸ್ತಿ

0

Samanvaya Trust ಪರಿಸರ ಕಾಳಜಿ ಹೊಂದಿರುವ ನಗರದ ಮಿಷನ್ ಕಾಂಪೌಂಡ್ ನಿವಾಸಿ ರೋಷನ್ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಶಿವಮೊಗ್ಗದ ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡುವ ಮೂಲಕ ಗೌರವಿಸುವ ಕೆಲಸವನ್ನು ಟ್ರಸ್ಟ್ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಮಿಷನ್ ಕಾಂಪೌಂಡ್‌ನ ಹ್ಯಾಪಿ ಹೋಂನಲ್ಲಿರುವ ರೋಷನ್ ಕುಟುಂಬಕ್ಕೆ ಪ್ರಶಸ್ತಿ ವಿತರಿಸಲಾಯಿತು.
ರೋಷನ್ ಕುಟುಂಬದವರು ಪರಿಸರ ಕಾಳಜಿ ಹೊಂದಿದ್ದು, ಮನೆ ಆವರಣದಲ್ಲಿ ಸಸ್ಯಗಳನ್ನು ಬೆಳೆದು ಪೋಷಿಸುವ ಕೆಲಸ ಮಾಡುತ್ತಾರೆ. ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಕೆಲಸ ಸಹ ಮಾಡುತ್ತಾರೆ. ಮನೆಯಲ್ಲಿ ಹಸಿ ಕಸ, ಒಣ ಕಸವನ್ನು ಪ್ರತ್ಯೇಕವಾಗಿಸುತ್ತಾರೆ.
Samanvaya Trust ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಿ ಮನೆ ಆವರಣದ ಸಸ್ಯಗಳಿಗೆ ಬಳಸುತ್ತಾರೆ. ಒಣಕಸವನ್ನು ನಗರಸಭೆ ವಾಹನಕ್ಕೆ ನೀಡುತ್ತಾರೆ. ರೋಷನ್ ಅವರ ಕುಟುಂಬದ ಪರಿಸರ ಕಾಳಜಿ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಅಭಿನಂದಿಸಿದೆ.
ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ಪರಿಸರ ಕುಟುಂಬ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ,
ಸ್ಮಿತಾ, ರೋಷನ್ ಕುಟುಂಬ ಸದಸ್ಯರು ಹಾಜರಿದ್ದರು

MESCOM ಜನವರಿ 28. ಹಳೆ ಬೊಮ್ಮನಕಟ್ಟೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಜ.28 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಳೆಬೊಮ್ಮನಕಟ್ಟೆ, ಮಹಾರಾಣಿ ಶಾಲೆ ಹತ್ತಿರ, ಪಾರ್ವತಮ್ಮ ಲೇಔಟ್, ದೇವಂಗೆ 2 ನೇ ಹಂತ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ 28.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 5.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

DIPR Karnataka ದೆಹಲಿಯ “ಕರ್ತವ್ಯ ಪಥ”ದಲ್ಲಿಚಪ್ಪಾಳೆ ಗಿಟ್ಟಿಸಿದ “ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು”

0

DIPR Karnataka ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು.

ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು.
ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.

DIPR Karnataka ನಿಗದಿತ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದ್ದು ವಿಶೇಷ ಎನಿಸಿದೆ.

ಅಹಿಂಸಾವಾದಿಯ ನೆಲೆಬೀಡು,ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ
ಅಂತರರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಕಲಾ ನಿರ್ದೇಶನ ಮಾಡಿದ್ದಾರೆ.
ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರು ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯಪಥದಲ್ಲಿ ನಿನಾದಿಸಿ ಕೇಳುಗರ ಮನಸೂರಗೊಂಡಿತು. ಮೈಸೂರು,ಬೆಂಗಳೂರು,ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ,ಸಾಂಪ್ರದಾಯಿಕ ಉಡುಪಿನಲ್ಲಿ
ಕರ್ತವ್ಯಪಥದಲ್ಲಿ ಕಂಗೊಳಿಸಿದರು. ಇನ್ನುಳಿದ 10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು,ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು.
2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‍ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿμÉೀಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

Rotary Club Shimoga ರೋಟರಿ 3182 ಜಿಲ್ಲಾ ಗವರ್ನರ್ ಆಗಿ ವಸಂತ ಹೋಬಳಿದಾರ್ ಆಯ್ಕೆ

0

Rotary Club Shimoga ರೋಟರಿ ಜಿಲ್ಲೆ 3182 ರ 2027-28 ನೇ ಸಾಲಿನ ಜಿಲ್ಲಾ ಗವರ್ನರ್ ಆಗಿ ಶಿವಮೊಗ್ಗದ ರೊ.ವಸಂತ್ ಹೋಬಳಿದಾರ್ ಪ್ರಚಂಡ ಬಹುಮತದಿಂದ ಜಯಗಳಿಸಿದ್ದು ಶಿವಮೊಗ್ಗದ ಎಲ್ಲಾ ರೋಟರಿ ಕ್ಲಬ್ ಗಳ ಸದಸ್ಯರು ಅಭಿನಂದಿಸಿದ್ದಾರೆ.

ಇತ್ತೀಚೆಗೆ ಉಡುಪಿಯಲ್ಲಿ ಜರುಗಿದ ನವೋತ್ಸಾಹ ಜಿಲ್ಲಾ ಸಮ್ಮೇಳನದಲ್ಲಿ ನಡೆದ ಜಿಲ್ಲಾ ಗವರ್ನರ್ ಚುನಾವಣೆಯಲ್ಲಿ ಚಲಾವಣೆಯಾದ 129 ಮತಗಳ ಪೈಕಿ 121 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಜಯಗಳಿಸಿದ್ದಾರೆ.

Rotary Club Shimoga ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷರು, ವಲಯ 11 ರ ಮಾಜಿ ಅಸಿಸ್ಟಂಟ್ ಗವರ್ನರ್, ಶಿವಮೊಗ್ಗ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ, ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ, ಯೂತ್ ರೆಡ್ಕ್ರಾಸ್ ನ ರಾಜ್ಯ ಉಪಸಮಿತಿಯ ಸದಸ್ಯ, ಕುವೆಂಪು ವಿಶ್ವವಿದ್ಯಾಲಯ ದ ಆಂಟಿ – ರಾಗಿಂಗ್ ಸಮಿತಿಯ ಸದಸ್ಯರು, ಸಿಮ್ಸ್ ವೈದ್ಯಕೀಯ ಮಹಾ ಸಂಸ್ಥೆಯ ಎಥಿಕ್ಸ್ ಸಮಿತಿಯ ಸದಸ್ಯರು, ರೋಟರಿ ಯ RMB ಫೆಲೋಷಿಪ್ ಗ್ರೂಪ್ ನ ಶಿವಮೊಗ್ಗ ಚಾಪ್ಟರ್ ನ ಸಂಸ್ಥಾಪಕ ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉನ್ನತ ಕೌಶಲ್ಯಾಭಿವೃದ್ಧಿ ಕೇಂದ್ರದ ಚೇರ್ಮನ್, ಶಿವಮೊಗ್ಗ ಜಿಲ್ಲಾ ಭಗೀರಥ ಸಹಕಾರ ಸಂಘದ ಉಪಾಧ್ಯಕ್ಷ, ಭಗೀರಥ ಜಿಲ್ಲಾ ನೌಕರರ ಮತ್ತು ವೃತ್ತಿಪರರ ಸಂಘದ ಪ್ರಧಾನ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲಾ ಹಿಂದೂ ಎಕನಾಮಿಕ್ ಫೋರಂನ ಸಂಸ್ಥಾಪಕ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ ನೇರ ನಡೆ ನುಡಿಯ ವ್ಯಕ್ತಿತ್ವದ ಉತ್ಸಾಹಿ ಸಮಾಜ. ಸೇವಕರಾದ ವಸಂತ್ ಹೋಬಳಿದಾರ್ ರವರು ಐತಿಹಾಸಿಕ ಬಹುಮತದಿಂದ ಜಯಗಳಿಸಿರುವುದು ರೋಟರಿ ಶಿವಮೊಗ್ಗ ಪೂರ್ವಕ್ಕೆ ಹೆಮ್ಮೆ ತಂದಿದೆ, ಅವರ ಅವಧಿಯಲ್ಲಿ ಇತಿಹಾಸ ನಿರ್ಮಿಸುವಂತಹ ಸಾಮಾಜಿಕ ಸೇವಾ ಕಾರ್ಯಗಳು ಜರುಗಲಿ ಎಂದು ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಸಿಸ್ಟಂಟ್ ಗವರ್ನರ್ ಗಳಾದ ಜಿ.ವಿಜಯಕುಮಾರ್, ಡಾ.ಗುಡದಪ್ಪ ಕಸಬಿ, ಚಂದ್ರಹಾಸ ರಾಯ್ಕರ್, ಎ ಟಿ ಸುಬ್ಬೇಗೌಡ ಹಾಗೂ ಅಧ್ಯಕ್ಷ ಅರುಣ್ ದೀಕ್ಷಿತ್, ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ಹಾಗು ಮಾಜಿ ಅಧ್ಯಕ್ಷರುಗಳಾದ ಎನ್ ಹೆಚ್ ಶ್ರೀಕಾಂತ್, ಮಹೇಶ್ ಆಲೆಮನೆ, ಮಂಜುನಾಥ್ ಕದಂ, ಸತೀಶ್ಚಂದ್ರ, ಸುಮತಿ, ಅಭಿಷೇಕ್ ಮೋಹನ್, ರವಿ ಕೋಟೋಜಿ, ಕಡಿದಾಳ್ ಗೋಪಾಲ್, ಆಧಿಮೂರ್ತಿ, ಕೆ ಬಿ ರವಿಶಂಕರ್, ಪ್ರತಾಪ್ ಎಂ ಎಲ್ ಹಾಗು ಕಿಶೋರ್ ಕುಮಾರ್, ಸಿ ಕೆ ವಿಜಯಕುಮಾರ್,ಇನ್ನರ್ ವೀಲ್. ಮಾಜಿ ಅಧ್ಯಕ್ಷರು. ಬಿಂದು ವಿಜಯ್ ಕುಮಾರ್ ಮುಂತಾದವರು ಶುಭ ಹಾರೈಸಿದ್ದಾರೆ.

Madhu Bangarappa ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯಕ್ಕೆ ಸಚಿವ ಮಧು ಬಂಗಾರಪ್ಪ‌ ಪರಿಶೀಲನಾ ಭೇಟಿ

0

Madhu Bangarappa ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಗೋವಿಂದಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ವಸತಿ ಸಮುಚ್ಚಯವನ್ನು ಮಹಾನಗರಪಾಲಿಕೆ ಆಯುಕ್ತರು ಮತ್ತು ಸಂಬಧಿಸಿದ ಇಲಾಖೆಯ ಇಂಜಿನಿಯರ್ ಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿ, ಇಂಜಿನಿಯರ್ ಗಳಿಗೆ ಸೂಕ್ತಸಲಹೆ- ಸೂಚನೆ ನೀಡಿದರು.
ಮಹಾನಗರಪಾಲಿಕೆಯ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಗೋವಿಂದಾಪುರದಲ್ಲಿ ಒಟ್ಟು ರೂ.260 ಕೋಟಿ ಅನುದಾನದಲ್ಲಿ 3000 ಮನೆಗಳನ್ನು ನಿರ್ಮಿಸಲಾಗುತ್ತಿದೆ.
ಈಗಾಗಲೇ 624 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಇದೀಗ 652 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಭೂತ ಸೌಕರ್ಯಗಳ ಕೆಲಸ ನಡೆಯುತ್ತಿದೆ. ಇದು ಪೂರ್ಣಗೊಂಡ ತಕ್ಷಣ ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು.
Madhu Bangarappa ಈಗಾಗಲೇ ಹಂಚಿಕೆ ಮಾಡಿರುವ ಮನೆಗಳಿಗೆ
ತಾತ್ಕಾಲಿಕ ನೀರು, ವಿದ್ಯುತ್ ನೀಡಲಾಗುತ್ತಿದೆ. ಶಾಶ್ವತ ಕುಡಿಯುವ ನೀರಿನ ಸಂಪರ್ಕ ನೀಡಲು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ತಿಳಿಸಲಾಗಿದೆ. ಶಾಶ್ವತ ವಿದ್ಯುತ್ ಸಂಪರ್ಕ ನೀಡಲು ರೂ. ೧೫ ರಿಂದ ೧೬ ಕೋಟಿ ಅವಶ್ಯಕತೆ ಇದ್ದು ಅಧಿಕಾರಿಗಳೊಂದಿಗೆ ಮಾತನಾಡಿ ಸರ್ಕಾರದ ಗಮನಕ್ಕೆ ತರಲಾಗಿದೆ. ವಸತಿ ಸಚಿವರೊಂದಿಗೂ ಮಾತನಾಡುತ್ತೇನೆ.
ಇನ್ನು 20 ದಿನಗಳ ಒಳಗಾಗಿ‌ ಕಾಮಗಾರಿ ಪೂರ್ಣಗೊಂಡ ಮನೆಗಳಿಗೆ ತಾತ್ಕಾಲಿಕ‌ ನೀರು, ವಿದ್ಯುತ್, ಹಾಗೂ ರಸ್ತೆ, ಚರಂಡಿ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ.
ಮೂಲಭೂತ ಸೌಕರ್ಯಗಳು ಆದ ತಕ್ಷಣ ವಸತಿ ಹಂಚಿಕೆಗೆ ದಿನಾಂಕ ನಿಗದಿಗೊಳಿಸಲಾಗುವುದು.
ರಸ್ತೆ, ಚರಂಡಿ, ಬೀದಿ ದೀಪ, ಬಸ್ ವ್ಯವಸ್ಥೆ ಮಾಡಲು ಕ್ರಮ‌ ವಹಿಸಲಾಗುತ್ತಿದೆ ಎಂದರು.
ಇದೇ ವೇಳೆ ಶಾಸಕರು ಇಲ್ಲಿನ ನಿವಾಸಿಗಳಿಂದ ಮೂಲಭೂತ ಸೌಕರ್ಯಗಳ ಕುರಿತಾದ ಕುಂದು ಕೊರತೆಗಳನ್ನು ಆಲಿಸಿ ಸೂಕ್ತ ಕ್ರಮ‌ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು, ಮಹಾನಗರಪಾಲಿಕೆ ಆಯುಕ್ತ ರಾದ ಕವಿತಾ ಯೋಗಪ್ಪನವರ್, ಇಂಜಿನಿಯರ್ ಗಳು, ಅಧಿಕಾರಿಗಳು, ನಿವಾಸಿಗಳು ಹಾಜರಿದ್ದರು.

Republic Day ಸಂವಿಧಾನ ಪೀಠಿಕೆ‌ ವಾಚಿಸಿ ಉದ್ಘಾಟಿಸಿದ‌ ಸಚಿವ‌ ಮಧು‌ ಬಂಗಾರಪ್ಪ

0

Republic Day ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸ್ವಾತಂತ್ರ್ಯ ಸಮಾನತೆ ಮತ್ತು ಸೌಹಾರ್ಧತೆ ಸೇರಿದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಪ್ರತೀಕವಾಗಿ ಸಂವಿಧಾನದ ಪೀಠಿಕೆಯನ್ನು ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಗಣರಾಜ್ಯ ದಿನವಾದ ಇಂದು ನಗರದ ಅಲ್ಲಮಪ್ರಭು ಉದ್ಯಾನವನದಲ್ಲಿ ವಿಶ್ವಕ್ಕೆ ಮಾದರಿಯಾಗಿರುವ ನಮ್ಮ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಭಾರತದಂತಹ ಬೃಹತ್ ರಾಷ್ಟçದ ಎಲ್ಲರೂ ಒಪ್ಪಿತ ಏಕೈಕ ಸಂವಿಧಾನ ನಮ್ಮದಾಗಿದೆ. ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮದಾಗಿದೆ. ಹಲವು ರಾಜ್ಯಗಳಾಗಿ ವಿಂಗಡಣೆಯಾಗಿದ್ದರೂ, ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಟ ರಾಷ್ಟ್ರವಾಗಿ ದೇಶ ಬೆಳೆದು ನಿಂತಿದೆ ಎಂದರು.
Republic Day ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಭೇಟಿ ನೀಡಿದ ನೂರನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಭಾಗವಾಗಿ ೨೦೨೫ರ ಅಕ್ಟೋಬರ್ ೦೨ರಿಂದ ೨೦೨೬ರ ಅಕ್ಟೋಬರ್ ಮಾಹೆಯವರೆಗೆ ಗಾಂಧೀ ಭಾರತ ಹೆಸರಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದರು.
೨೦೨೩ರ ಸೆಪ್ಟಂಬರ್ 05 ರಿಂದ ಇಂದಿನವರೆಗೆ ರಾಜ್ಯದ ಎಲ್ಲಾ ಶಾಲೆಗಳ ಸುಮಾರು ೧.೦೮ಕೋಟಿ ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಪರಿಪಾಠ ಆರಂಭಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಲಾಗುತ್ತಿದೆ ಎಂದ ಅವರು, ಪೀಠಿಕೆಯನ್ನು ಅರ್ಥೈಸಿಕೊಂಡು ಅನುಸರಿಸುವ ಅಗತ್ಯವಿದೆ ಎಂದವರು ನುಡಿದರು.
ಗ್ಯಾರೆಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಸಾಮಾಜಿಕ ಆರ್ಥಿಕ ಸಮಾನತೆಗೆ ಸಹಕಾರಿಯಾಗಿದೆ ಎಂದ ಅವರು, ಸರ್ಕಾರದ ವತಿಯಿಂದ ಇನ್ನಷ್ಟು ರಚನಾತ್ಮಕ ಕಾರ್ಯಗಳನ್ನು ರೂಪಿಸಿ ಅನುಷ್ಟಾನಕ್ಕೆ ತರುವ ಉದ್ದೇಶ ಹೊಂದಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿದಂಧೆಗೆ ನಿಯಂತ್ರಣಕ್ಕೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಗಿದ್ದು, ಈ ಪಿಡುಗಿನ ಸಮಗ್ರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕುಪ್ಪಳಿಯಲ್ಲಿ ರಾಷ್ಟçಕವಿ ಕುವೆಂಪು ಅವರ ಆಶಯಕ್ಕೆ ವಿರುದ್ಧವಾಗಿ ನಡೆದ ಕಾರ್ಯಕ್ರಮದ ಕುರಿತು ವಿಷಾಧ ವ್ಯಕ್ತಪಡಿಸಿದ ಅವರು, ಸಮಗ್ರ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದಲ್ಲಿ ಈ ಹಿಂದೆ ಕೈಗೊಳ್ಳಲಾದ ಸ್ಮಾರ್ಟ್ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಆಗಿರಬಹುದಾದ ಲೋಪಗಳ ತನಿಖೆ ಹಾಗೂ ಪರಿಸರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಷಾಹಿ ಎಕ್ಸ್ಪೋರ್ಟ್ ಕಂಪನಿಯ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಸೊರಬ ತಾಲೂಕಿನ ಇತಿಹಾಸ ಪ್ರಸಿದ್ದ ಚಂದ್ರಗುತ್ತಿಯನ್ನು ಹಾಗೂ ಶ್ರೀ ರೇಣುಕಾಂಬ ದೇವಸ್ಥಾನದ ಸರ್ವಾಂಗೀಣ ವಿಕಾಸಕ್ಕೆ ವಿಸ್ತೃತ ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಗೆ ಅನುಮೋದನೆಗಾಗಿ ರವಾನಿಸಲಾಗಿದೆ. ಶೀಘ್ರದಲ್ಲಿ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬAದಿಸಿದAತೆ ಈಗಾಗಲೇ ಸಚಿವ ಹೆಚ್.ಕೆ.ಪಾಟೀಲ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದವರು ನುಡಿದರು.
ನಗರದ ಹೃದಯಭಾಗದಲ್ಲಿರುವ ಅಲ್ಲಮಪ್ರಭು ಉದ್ಯಾನವನ, ಅಲ್ಲಮಪ್ರಭುಗಳ ಜನ್ಮಸ್ಥಳ ಅನಿಮಿಷಾರಣ್ಯ ಹಾಗೂ ಗುಡವಿ ಪಕ್ಷಿಧಾಮ ಪ್ರದೇಶದ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಣಕಾಸು ಕಾಯ್ದಿರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಆನೆಗಳ ಹತೋಟಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಅರಣ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.
ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಈಗಾಗಲೇ ಮಧ್ಯಂತರ ವರದಿಯನ್ನು ನೀಡಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ತಜ್ಞರ ಸಭೆಯ ತೀರ್ಮಾನದಂತೆ ರಾಜ್ಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದವರು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ರವಿಕುಮಾರ್, ಚಂದ್ರಭೂಪಾಲ, ಸುಂದರೇಶ್, ಆರ್.ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.