Tuesday, March 17, 2026
Tuesday, March 17, 2026
Home Blog Page 426

Directorate of Women And Child Development Department ಕಿತ್ತೂರು ರಾಣಿ‌ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

0

Directorate of Women And Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2024-25ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಯನ್ನು ಒಳಗೊಂಡಂತೆ ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ವ್ಯಕ್ತಿಯ ಜೀವ ಉಳಿಸಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ದಿ: 07/02/2025 ರೊಳಗಾಗಿ ಯೂನಿಕೋಡ್ (ನುಡಿ 6.0) ನಲ್ಲಿಯೇ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295515 ನ್ನು ಸಂಪರ್ಕಿಸುವುದು.

Tourism Department ಪಜಾ/ಪಪಂ ವರ್ಗದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ‌ ತರಬೇತಿಗೆ ಅರ್ಜಿ ಆಹ್ವಾನ

0

Tourism Department ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 06 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳಿಗೆ ವಿದ್ಯಾರ್ಹತೆ 10ನೇ ತರಗತಿ, ವಯಸ್ಸು 20 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿರುತ್ತದೆ,
Tourism Department ಈ ತರಬೇತಿಯನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು. ಪ್ರವಾಸೋದ್ಯಮ ಇಲಾಖೆ. ಶಿವಮೊಗ್ಗ ಈ ಕಛೇರಿಯಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಲಗತ್ತಿಸಿ ದಿ:31/01/2025 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08182-251444 ಸಂಪರ್ಕಿಸುವುದು.

Shivamogga Police ಅಪರಿಚಿತ ವ್ಯಕ್ತಿ ಸಾವು. ವಾರಸುದಾರರ ಪತ್ತೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ

0

Shivamogga Police ಜ.21 ರಂದು ನಗರದ ವೀರಭದ್ರ ಕಾಲೋನಿಯಿಂದ ಹೊನ್ನವಿಲೇ ಗ್ರಾಮದಲ್ಲಿ ಹಾದುಹೋಗಿರುವ ಚಾನಲ್‌ನಲ್ಲಿ ಸುಮಾರು 65 ರಿಂದ 70 ವರ್ಷದ ಅನಾಮಧೇಯ ಗಂಡಸ್ಸಿನ ಶವ ಪತ್ತೆಯಾಗಿದ್ದು, ಈತನ ಹೆಸರು, ವಿಳಾಸ ಅಥವಾ ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ದೊರೆತಿರುವುದಿಲ್ಲ.
ಮೃತ ವ್ಯಕ್ತಿಯು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದೃಡವಾದ ಮೈಕಟ್ಟು, ಒಂದು ಬೊಕ್ಕತಲೆ ಹೊಂದಿದ್ದು, Shivamogga Police ಮೈಮೇಲೆ ನೇರಳೆ ಬಣ್ಣದ ಚಡ್ಡಿ ಧರಿಸಿರುತ್ತಾರೆ. ಈ ಮೃತ ವ್ಯಕ್ತಿಯ ವಾರಸುದಾರರು ಯಾರಾದರು ಇದ್ದಲ್ಲಿ ಶಿವಮೊಗ್ಗ ಗ್ರಾಮಾಂತ ಪೋಲಿಸ್ ಠಾಣೆ ದೂ,ಸಂ08182- 261413/261418/ ಮೊ. ನಂ 948080332/9480803350ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

B.Y. Raghavendra ₹10 ಕೋಟಿ ಮೌಲ್ಯದ ಟ್ರಾನ್ಸ್ ಮಿಟರ್ ಕೆನಡಾದಿಂದ ತರಿಸಲಾಗಿದೆ. 60 ಕಿಮೀ ವ್ಯಾಪ್ತಿ ‌ಎಫ್ಎಂ ಪ್ರಸಾರವಿರುತ್ತದೆ- ಬಿ.ವೈ.ರಾಘವೇಂದ್ರ

0

B.Y. Raghavendra ಶಿವಮೊಗ್ಗ ದೂರದರ್ಶನ ಅಧಿಕ ಶಕ್ತಿ ಮರು ಪ್ರಸಾರ ಕೇಂದ್ರದಲ್ಲಿ ಭದ್ರಾವತಿ ಆಕಾಶವಾಣಿಯ ೧೦ ಕೆವಿ ಎಫ್ ಎಂ ಟ್ರಾನ್ಸ್ ಮಿಟರ್ ಅಳವಡಿಕೆ ಕಾರ್ಯಕ್ರಮ ಏರ್ಪಾಡಾಗಿತ್ತು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ರಿಂದ ನೂತನ ಟ್ರಾನ್ಸ್ ಮಿಟರ್ ಗೆ ಪೂಜೆ ನೆರವೇರಿತು.

ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂದರ್ಭದಲ್ಲಿ‌ ಮಾತನಾಡಿದರು
ಸುಮಾರು 10 ಕೋಟಿ ವೆಚ್ಚದ ಟ್ರಾನ್ಸ್ ಮೀಟರ್ ಕೆನಡಾದಿಂದ ಬಂದಿದೆ
ಇದರಿಂದ ವೈವಿಧ್ಯಮಯ ಕಾರ್ಯಕ್ರಮಗಳ ಪ್ರಸಾರಕ್ಕೆ ಅನುಕೂಲವಾಗಲಿದೆ
60 ಕಿ.ಮೀ ಅಂತರದ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಕೇಳಬಹುದು
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ಆಕಾಶವಾಣಿಯಿಂದ ಜನಪ್ರಿಯವಾಗಲಿದೆ ಹಾಗಾಗಿ ಶಿವಮೊಗ್ಗದ ಮರು ಪ್ರಸಾರ ಕೇಂದ್ರಕ್ಕೆ ಪ್ರತ್ಯೇಕ ಸ್ಟುಡಿಯೋ ಅಗತ್ಯವಿದೆ
ಸಚಿವ ಡಾ.ಮುರುಗನ್ ಅವರು ಉದ್ಘಾಟನೆ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದರು
ಸಂಸದರ ನಿರಂತರ ಪ್ರಯತ್ನದ ಫಲವಾಗಿ ಮರು ಪ್ರಸಾರ ಟ್ರಾನ್ಸ್ ಮಿಟರ್ ಸ್ಥಾಪನೆ ಸಾಧ್ಯವಾಗಿದೆ
ಹಾಗಾಗಿ ಇಲ್ಲಿ ಪ್ರತ್ಯೇಕ ಸ್ಟುಡಿಯೋ ಸ್ಥಾಪಿಸಲಾಗುತ್ತದೆ
ಈ ನಿಟ್ಟಿನಲ್ಲಿ ಕೇಂದ್ರ ಅಗತ್ಯ ನೆರವು ನೀಡಲಿದೆ

B.Y. Raghavendra ಡಿಡಿಯನ್ನು ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಉನ್ನತೀಕರಿಸಲಾಗುತ್ತಿದೆ
ಉನ್ನತೀಕರಣಕ್ಕೆ ಅಗತ್ಯವಾದ ಹಣಕಾಸಿನ ನೆರವನ್ನು ಕೇಂದ್ರ ನೀಡುತ್ತಿದೆ

ರಾಣೆಬೆನ್ನೂರು, ಉಡುಪಿ ಸೇರಿದಂತೆ ರಾಜ್ಯದ 4 ಕಡೆ ಕೇಂದ್ರ ಕಾರ್ಯಾರಂಭ ಮಾಡಲಿದೆ
ಶಿವಮೊಗ್ಗದ ಈ ಕೇಂದ್ರ 20 ಕಿ.ಮೀ.ವ್ಯಾಪ್ತಿಯಲ್ಲಿ ತನ್ನ ಪ್ರಸಾರ ಮಾಡಲಿದೆ.
ಮಾಹಿತಿ ಮತ್ತು ಸರ್ಕಾರದ ಯೋಜನೆ ಮತ್ತಿತರ ಮಾಹಿತಿ ಹಂಚಿಕೊಳ್ಳಲು ನೆರವಾಗಲಿದೆ

ಸ್ಥಳೀಯ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳಸುವಲ್ಲಿ ದೂರದರ್ಶನ ಹಾಗು ಆಕಾಶವಾಣಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಚಿವ ಮುರುಗನ್ ಹೇಳಿದರು.

Siddaramaiah ನೇತಾಜಿ ಪ್ರತಿಮೆಗೆ ಸಿದ್ಧರಾಮಯ್ಯ ಅವರಿಂದ ಪುಷ್ಪ ಮಾಲಾರ್ಪಣೆ

0

Siddaramaiah ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Siddaramaiah ಈ ಸಂದರ್ಭದಲ್ಲಿ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

B.Y Vijayendra ಸ್ವಾಮಿ ವಿವೇಕಾನಂದರಂತಹ ಸಂತರು ನಮ್ಮ ದೇಶದ ಹಿರಿಮೆ ಸಾರಿದ್ದಾರೆ- ಬಿ.ವೈ.ವಿಜಯೇಂದ್ರ

0

B.Y Vijayendra ಸಂತರು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಸಮಾಜಕ್ಕೆ ನೀಡುತ್ತ ಬರುತ್ತಿರುವುದರಿಂದ ಇತರೆ ಎಲ್ಲಾ ದೇಶಗಳಿಗಿಂತ ಭಾರತ ದೇಶ ಸಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಹಾರನಹಳ್ಳಿ ಶ್ರೀ ಕ್ಷೇತ್ರ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠ ದಲ್ಲಿ ಹಮ್ಮಿಕೊಂಡಿದ್ದ ಹರಪುರಧೀಶನ ದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದ ರಂತಹ ಸಂತರು ನಮ್ಮ ದೇಶದ ಹಿರಿಮೆಯನ್ನು ವಿಶ್ವ ಮಟ್ಟದಲ್ಲಿ ಸಾರಿದ್ದಾರೆ. ಅದರಂತೆ ದೇಶದ ಸಂತರು ಅಕ್ಷರ ದಾಸೋಹ ಮತ್ತು ಅನ್ನದಾಸೋಹದ ಮೂಲಕ ದೇಶವನ್ನು ಸನ್ಮಾರ್ಗದತ್ತ ಕೊಂಡೊಯ್ಯವ ಕೆಲಸ ಮಾಡುತ್ತಿದ್ದಾರೆ ಎಂದರು.
ಇಂದಿನ ಯುವ ಜನಾಂಗ ನಮ್ಮ ಧರ್ಮ ಆಚಾರ ವಿಚಾರಳಿಂದ ದೂರವಾಗುತ್ತಿರುವ ಆತಂಕ ಎದುರಾಗುತ್ತಿದೆ. ಇದಕ್ಕಾಗಿ ಮಠ ಮಾನ್ಯಗಳೊಂದಿಗೆ ಪ್ರತಿಯೊಂದು ಮನೆಯಲ್ಲೂ ಯುವ ಪೀಳಿಗೆಯನ್ನು ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಕರೆ ನೀಡಿದರು.
ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಎಲ್ಲಾ ಮಠಗಳಿಗೆ ಅನುದಾನ ನೀಡಿ ಸಧೃಡಗೊಳಿಸಲು ಪ್ರಯತ್ನಿಸುವ ಮೂಲಕ ನಮ್ಮ ಧರ್ಮ ಮತ್ತು ಸಂಸ್ಕೃತಿ ಉಳಿಸುವ ಕೆಲಸ ಮಾಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿವೃದ್ಧಿ ಕೆಲಸಗಳಲ್ಲಿ ತಂದೆಯನ್ನು ಮೀರಿಸಿದ ಮಗನಾಗಿ ಹೊರ ಹೊಮ್ಮಿದ್ದಾರೆ. ಅವರಂತೆ ನಾನು ಸಮಾಜದ ಧ್ವನಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
B.Y Vijayendra ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿ ಗಳು ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿ, ಹಾರನಹಳ್ಳಿ ಗ್ರಾಮ ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ರಾಜ್ಯದಲ್ಲಿ ವಿಶೇಷ ಸ್ಥಾನ ಪಡೆದಿದೆ. ಸಂತರು ಹಾಗೂ ಮಠಗಳಿಗೆ ಪ್ರೊತ್ಸಾಹ ನೀಡುವ ಜನರು ಇಲ್ಲಿರುವುದರಿಂದ ನಾಡಿನ ಬಹುತೇಕ ಎಲ್ಲಾ ಸಂತರು ಇಲ್ಲಿಗೆ ಬಂದು ಹೋಗಿದ್ದಾರೆ ಎಂದರು
ಯಡಿಯೂರಪ್ಪನವರ ಕುಟುಂಬ ಮಠ ಮಾನ್ಯಗಳಿಗೆ ನೀಡಿದ ಸಹಕಾರವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಪ್ರಸ್ತುತ ವಿಜಯೇಂದ್ರ ಅವರ ನಾಯಕತ್ವವನ್ನು ಯುವ ಪೀಳಿಗೆ ಒಪ್ಪಿಕೊಂಡಿದೆ. ಅವರು ರಾಜ್ಯದ ಯಾವ ಕ್ಷೇತ್ರದಿಂದ ಸ್ಪರ್ದಿಸಿದರೂ ಗೆಲ್ಲತ್ತಾರೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹಾರನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಮಹಾಸ್ವಾಮೀಜಿ ಮಾತನಾಡಿ, ಯಡಿಯೂರಪ್ಪನವರ ಕುಟುಂಬದವರಲ್ಲಿ ದೈವಿ ಗುಣ ಹಾಗೂ ಸೇವಾ ಮನೋಭಾವ ಇರುವುದರಿಂದಲೇ ರಾಜಕಾರಣದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದರು.
ಇಂದು ಆರಂಭವಾದ ಹರಪುರಾದೀಶನ ದೀಪೋತ್ಸವ ಭಕ್ತರ ಸಹಕಾರದಿಂದ ಪ್ರತಿವರ್ಷ ಯಶಸ್ವಿಯಾಗುತ್ತಿದೆ ಎಂದರು.
ಸಮಾರಂಭದಲ್ಲಿ ಪ್ರೆಸ್‌ಟ್ರಸ್ಟ್ ಅಧ್ಯಕ್ಷರು, ಮೊಹರೆ ಹಣುಮಂತರಾಯ ಪ್ರಶಸ್ತಿ ಪುರಸ್ಕೃತ ಕ್ರಾಂತಿದೀಪ ಎನ್. ಮಂಜುನಾಥ್‌ರಿಗೆ ಗುರುರಕ್ಷೆ ನೀಡಿ ಗೌರವಿಸಲಾಯಿತು.
ಗುತ್ತಲ ಶ್ರೀ ಕಲ್ಮಠದ ಶ್ರೀ ಪ್ರಭು ಕುಮಾರ ಮಹಾಸ್ವಾಮಿಗಳು, ತಾಳಗುಪ್ಪ ಕೂಡ್ಲಿಮಠದ ಶ್ರೀ ಸಿದ್ದವೀರ ಮಹಾಸ್ವಾಮಿಗಳು, ಗೊಗ್ಗೆಹಳ್ಳಿ ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮೂಡಿ ವಿರಕ್ತ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು, ಜೆಎ ಹಿರೇಮಠದ ಶ್ರೀ ಡಾ. ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕ್ಯಾಸನೂರು ಶ್ರೀ ವಿಜಯಕುಮಾರ ದೇಶಿಕರು, ಮಾಜಿ ಶಾಸಕ ಅಶೋಕ್‌ನಾಯ್ಕ, ಟಿ.ಬಿ. ಜಗದೀಶ್ ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

M. B. Patil ಉದ್ಯಮ ದಿಗ್ಗಜರ ಸಂಗಡ ಸಚಿವ ಎಂ.ಬಿ.ಪಾಟೀಲ್ ಸಮಾಲೋಚನೆ

0

• ರಾಜ್ಯದಲ್ಲಿ ಹೂಡಿಕೆ ಹೆಚ್ಚಳ, ವಹಿವಾಟು ವಿಸ್ತರಣೆಗೆ ಐಟಿಸಿ, ರಿನ್ಯೂ ಪವರ್‌, ಹ್ಯಾವೆಲ್ಸ್‌, ದಾಲ್ಮಿಯಾ ಒಲವು
• ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯ ಉದ್ಯಮ ದಿಗ್ಗಜರಿಗೆ ಆಹ್ವಾನ
• ರಾಜ್ಯದ ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡಲಿರುವ ಐಟಿಸಿ ಲಿಮಿಟೆಡ್‌ನ ಹೂಡಿಕೆ

M. B. Patil ನವದೆಹಲಿ: ಮುಂದಿನ ತಿಂಗಳು 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ʼಇನ್ವೆಸ್ಟ್‌ ಕರ್ನಾಟಕ 2025ʼರ ಪೂರ್ವಸಿದ್ಧತೆಗಳ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರವು ಬುಧವಾರ ಇಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿತು.
ಐಟಿಸಿ ಲಿಮಿಟೆಡ್‌, ರಿನ್ಯೂ ಪವರ್‌, ಸಂವರ್ಧನ ಮದರ್‌ಸನ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌, ಹ್ಯಾವೆಲ್ಸ್‌, ಕೆಇಐ ಇಂಡಸ್ಟ್ರೀಸ್‌, ದಾಲ್ಮಿಯಾ, ಫ್ಲೆಕ್ಸಿಬಸ್‌ ಮತ್ತಿತರ ಕಂಪನಿಗಳ ಉನ್ನತಾಧಿಕಾರಿಗಳ ಜೊತೆಗೆ ರಾಜ್ಯದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಲಭ್ಯ ಇರುವ ಹೂಡಿಕೆಯ ವಿಪುಲ ಅವಕಾಶಗಳ ಬಗ್ಗೆ ಸಚಿವರು ಉದ್ಯಮಿಗಳಿಗೆ ಮನವರಿಕೆ ಮಾಡಿಕೊಟ್ಟು ಸಮಾವೇಶದಲ್ಲಿ ಭಾಗಿಯಾಗಲು ಔಪಚಾರಿಕ ಆಹ್ವಾನ ನೀಡಿದರು.

ರಾಜ್ಯದಲ್ಲಿನ ಬಂಡವಾಳ ಹೂಡಿಕೆ ಅವಕಾಶಗಳ ಜೊತೆಗೆ, ಪಾಲುದಾರಿಕೆ ಹಾಗೂ ನಾವೀನ್ಯತೆ ಆಧಾರಿತ ಉದ್ದಿಮೆಗಳಲ್ಲಿನ ರಾಜ್ಯದ ಹಿರಿಮೆಯನ್ನು ದೇಶದ ರಾಜಧಾನಿಯಲ್ಲಿನ ಉದ್ಯಮಿಗಳಿಗೆ ಪರಿಚಯಿಸಲಾಯಿತು.

ರಾಜ್ಯದ ಆಹಾರ ಸಂಸ್ಕರಣಾ ವಲಯಕ್ಕೆ ಗಮನಾರ್ಹ ಕೊಡುಗೆ ನೀಡುತ್ತಿರುವ ಹಾಗೂ ವಿಲಾಸಿ ಆತಿಥ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಟಿಸಿ ಲಿಮಿಟೆಡ್‌, ಈ ಕ್ಷೇತ್ರಗಳಲ್ಲಿ ತನ್ನ ವಹಿವಾಟು ವಿಸ್ತರಿಸುವುದಾಗಿ ವಾಗ್ದಾನ ಮಾಡಿದೆ.

ʼಐಟಿಸಿ ಲಿಮಿಟೆಡ್‌ನ ಈ ಹೂಡಿಕೆ ಪ್ರಸ್ತಾವಗಳು ರಾಜ್ಯದಲ್ಲಿ ಮೂಲಸೌಲಭ್ಯಗಳಿಗೆ ಉತ್ತೇಜನ ನೀಡಲಿವೆ, ಉದ್ಯೋಗ ಅವಕಾಶಗಳು ಹೆಚ್ಚಿಸಲಿವೆ. ಇದರಿಂದ ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ದೊರೆಯಲಿದೆʼ ಎಂದು ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

M. B. Patil ನವೀಕರಿಸಬಹುದಾದ ಇಂಧನ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ರಿನ್ಯೂ ಪವರ್‌, ಕರ್ನಾಟಕದಲ್ಲಿನ ತನ್ನ ಹೂಡಿಕೆಯ ನೀಲನಕ್ಷೆಯನ್ನು ಸಚಿವರ ಜೊತೆಗೆ ಹಂಚಿಕೊಂಡಿತು. 3 ರಿಂದ 4 ಗಿಗಾವಾಟ್‌ ಸಾಮರ್ಥ್ಯದ ನವೀಕರಿಸಬಹುದಾದ ಇಂಧನ ಯೋಜನೆ, ಬ್ಯಾಟರಿ ತಯಾರಿಕೆ ಮತ್ತು ಮರುಬಳಕೆ ಸೌಲಭ್ಯ ಹಾಗೂ ಸ್ಥಳೀಯ ಉದ್ಯೋಗಿಗಳ ಕೌಶಲ ವರ್ಧನೆಗೆ ಕೌಶಲ ಕೇಂದ್ರ ಸ್ಥಾಪಿಸುವುದಾಗಿ ತಿಳಿಸಿದೆ.
ಸಂವರ್ಧನ ಮದರ್‌ಸನ್‌ – ರಾಜ್ಯದಲ್ಲಿನ ತನ್ನ ಉದ್ದೇಶಿತ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವುದಾಗಿ ತಿಳಿಸಿದೆ. ಯೋಜನೆಯು ಸಕಾಲದಲ್ಲಿ ಕಾರ್ಯಾರಂಭ ಮಾಡಲು ರಾಜ್ಯ ಸರ್ಕಾರದ ಅಗತ್ಯ ನೆರವು ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ವಿದ್ಯುತ್‌ ಸಲಕರಣೆ ಮತ್ತು ಗೃಹೋಪಯೋಗಿ ಉಪಕರಣಗಳ ಪ್ರಮುಖ ತಯಾರಿಕಾ ಕಂಪನಿ ಹ್ಯಾವೆಲ್ಸ್‌, ರಾಜ್ಯದಲ್ಲಿನ ತನ್ನ ಸಂಶೋಧನೆ ಹಾಗೂ ಅಭಿವೃದ್ಧಿ (ಆರ್‌ಆ್ಯಂಡ್‌ಡಿ) ಕೇಂದ್ರವನ್ನು ವಿಸ್ತರಿಸಲು ಒಲವು ವ್ಯಕ್ತಪಡಿಸಿದೆ.

ಕೇಬಲ್‌ ತಯಾರಿಕೆಯ ಹೊಸ ಘಟಕವನ್ನು ಆರಂಭಿಸುವುದಾಗಿ ಕೆಇಐ ಇಂಡಸ್ಟ್ರೀಸ್‌ ಆಸಕ್ತಿ ತೋರಿಸಿದೆ.
ರಾಜ್ಯದಲ್ಲಿ ತನ್ನ ಹೂಡಿಕೆ ಹೆಚ್ಚಿಸುವುದಾಗಿ ದಾಲ್ಮಿಯಾ ಸಿಮೆಂಟ್‌ ಬದ್ಧತೆ ತೋರಿದೆ.
ʼಪ್ರಗತಿಯ ಮರುಪರಿಕಲ್ಪನೆʼ ಧ್ಯೇಯದ ಇನ್ವೆಸ್ಟ್‌ ಕರ್ನಾಟಕ-ವು ನಾವೀನ್ಯತೆ, ಸುಸ್ಥಿರತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಎಲ್ಲರಿಗೂ ಸಮಾನ ಪಾಲು ಒದಗಿಸಲಿರುವ ಜಾಗತಿಕ ಹೂಡಿಕೆಯ ಶೃಂಗಸಭೆಯಾಗಿರಲಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಅವರು ಉದ್ಯಮಿಗಳ ಜೊತೆಗಿನ ಸಮಾಲೋಚನೆಯಲ್ಲಿ ಭಾಗವಹಿಸಿದ್ದರು.

Keladi Shivappa Nayaka University ದೇಶ ಮತ್ತು ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

Keladi Shivappa Nayaka University ಇಂದಿನ ಯುಗವು ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಯಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನಗಳು, ಸಾವಯವ ಕೃಷಿ ಮತ್ತು ಸ್ಮಾರ್ಟ್ ಕೃಷಿಯಂತಹ ವಿಷಯಗಳ ಮೇಲೆ ಕೇಂದ್ರೀಕರಿಸುವುದು ಅವಶ್ಯಕ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸವಕಳಿಯಂತಹ ಜಾಗತಿಕ ಸವಾಲುಗಳನ್ನು ನಾವು ಎದುರಿಸುತ್ತಿರುವಾಗ, ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ನಿಮ್ಮ ಪಾತ್ರವು ಹೆಚ್ಚು ಮಹತ್ವದ್ದಾಗಿದೆ. ನಿಮ್ಮ ನಾವೀನ್ಯತೆ, ತಾಂತ್ರಿಕ ಕೌಶಲ್ಯ ಮತ್ತು ಕಠಿಣ ಪರಿಶ್ರಮದ ಮೂಲಕ ನೀವು ಈ ದಿಕ್ಕಿನಲ್ಲಿ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಪರಿಣತಿಯು ಕ್ಷೇತ್ರಗಳು ಮತ್ತು ಸಸ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮ ಆಹಾರ ಭದ್ರತೆ, ಹಸಿರು ಕ್ರಾಂತಿ, ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲಿ ಮತ್ತು ಮಾನವೀಯತೆಯ ಭವಿಷ್ಯವನ್ನು ಸಂರಕ್ಷಿಸುವಲ್ಲಿ ನಿಮ್ಮ ಪಾತ್ರವನ್ನು ಇದು ವ್ಯಾಖ್ಯಾನಿಸುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

Keladi Shivappa Nayaka University ವಿದ್ಯಾರ್ಥಿಗಳು ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರವು ಸೇರಿದಂತೆ ಆಹಾರ ಭದ್ರತೆ, ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಬೇಕು. ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ಕೇವಲ ಒಂದು ವಿಷಯವಲ್ಲ; ಇದು ನಮ್ಮ ದೇಶದ ಬೆನ್ನೆಲುಬು. ಭಾರತದಲ್ಲಿನ ಕೃಷಿ ಕ್ಷೇತ್ರಕ್ಕೆ ನಿಮ್ಮ ಶಿಕ್ಷಣ ಮತ್ತು ಕೊಡುಗೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು.

ನೀವು ಪಡೆದ ಜ್ಞಾನವು ನಿಮ್ಮನ್ನು ವೈಯಕ್ತಿಕ ಯಶಸ್ಸಿನತ್ತ ಕೊಂಡೊಯ್ಯುವುದಲ್ಲದೆ ಲಕ್ಷಾಂತರ ರೈತರು, ಉದ್ಯಮಿಗಳಿಗೆ ಮತ್ತು ಪರಿಸರ ಪ್ರಜ್ಞೆಯ ಸಮಾಜವನ್ನು ನಿರ್ಮಿಸುವಲ್ಲಿ ಸಹಕಾರಿಯಾಗುತ್ತದೆ. ಕೃಷಿ ಮತ್ತು ತೋಟಗಾರಿಕೆ ಕೇವಲ ವ್ಯಾಪಾರವಲ್ಲ, ಆದರೆ ಇದು ನಮ್ಮ ನಾಗರಿಕತೆ ಮತ್ತು ಸಂಸ್ಕೃತಿಯ ಆಧಾರವಾಗಿದೆ. ಈ ವಲಯವು ನಮಗೆ ಆಹಾರ ಧಾನ್ಯಗಳನ್ನು ಒದಗಿಸುವುದು ಮಾತ್ರವಲ್ಲದೆ ಉದ್ಯೋಗ, ಜೀವವೈವಿಧ್ಯ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸಲು ಕ್ರಮಗಳನ್ನು ಒದಗಿಸುತ್ತದೆ. ನಿಮ್ಮ ಜ್ಞಾನ ಮತ್ತು ಸಂಶೋಧನೆಯಿಂದ ಈ ಕ್ಷೇತ್ರವು ಹೊಸ ಎತ್ತರವನ್ನು ತಲುಪಬಹುದು ಎಂದು ಸಲಹೆ ನೀಡಿದರು.

“ಘಟಿಕೋತ್ಸವದಲ್ಲಿ ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಸಮಾಜಕ್ಕಾಗಿ ಅವರ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ” ಎಂದರು

ಘಟಿಕೋತ್ಸವದಲ್ಲಿ ಮುಖ್ಯ ಅತಿಥಿ ಡಾ. ಎಲ್.ಎಸ್.ಶಶಿಧರ್, ಕುಲಪತಿ ಆರ್. ಸಿ. ಜಗದೀಶ್ ಮತ್ತು ಮುಂತಾದ ಗಣ್ಯರು ಉಪಸ್ಥಿತರಿದ್ದರು.

Shivamogga Zilla Panchayat ಜನವರಿ 25. ರಾಷ್ಟ್ರೀಯ ಮತದಾರರ ದಿನಾಚರಣೆ

0

Shivamogga Zilla Panchayat  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜ.25 ರಂದು ಬೆಳಿಗ್ಗೆ 9.30 ಗಂಟೆಗೆ ಕುವೆಂಪು ರಂಗಮAದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಯೋಜಿಸಲಾಗಿದೆ,
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ÷ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ Shivamogga Zilla Panchayat  ಸಂತೋಷ್ ಎಂ.ಎಸ್., ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್., ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತರಾದ ಡಾ. ಕವಿತಾ ಯೋಗಪ್ಪನವರ್, ಉಪವಿಭಾಗಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್. ರಾಜೀವ್, ಶಿವಮೊಗ್ಗ, ತಹಶೀಲ್ದಾರ್ ಪ್ರದೀಪ್ ಆರ್. ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಮತಿ ಪ್ರಿಯಾ ಪಿ. ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದಾರೆ.

Kuvempu University ಮಣ್ಣಿನಮಗನ ಮಗಳು ಪೂರ್ಣಿಮಾಗೆ ಮೂರು ಚಿನ್ನದ ಪದಕ

Kuvempu University ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೌಡರಗೆರೆಯ ಜಿ.ಎಸ್.ಪೂರ್ಣಿಮಾ ೨೦೨೩-೨೪ನೇ ಸಾಲಿನಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ. ಜಿ.ಪಿ.ಹನುಮಂತ-ಎಲ್‌.ಆರ್.ರಾಜೇಶ್ವರಿ ದಂಪತಿ ಪುತ್ರಿಯಾಗಿದ್ದು ಜೆನಿಟಿಕ್ ಆ್ಯಂಡ್ ಪ್ಲ್ಯಾನ್ ಬೀಡಿಂಗ್ ವಿಷಯದಲ್ಲಿ ಎಂಎಸ್ಸಿ ಮಾಡುತ್ತಿದ್ದಾರೆ. ಸಂಶೋಧನೆಯಲ್ಲಿ ಮುಂದುವರಿಯುವ ಇಂಗಿತವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಒಂದು ತಿಂಗಳು ಸಂಶೋಧನೆಗಾಗಿ ಬ್ಯಾಂಕಾಕ್ ಗೂ ಹೋಗಿ ಅಧ್ಯಯನ ಮಾಡಿಕೊಂಡು ಬಂದಿದ್ದಾರೆ.