Tuesday, March 17, 2026
Tuesday, March 17, 2026
Home Blog Page 427

Kuvempu University ಪಾಕ ಪ್ರವೀಣ ಸುರೇಶ್ ಪುತ್ರಿ ‌ಸಂಜಿತಾಗೆ ನಾಲ್ಕು ಸುವರ್ಣ ಪದಕ

Kuvempu University ಶಿವಮೊಗ್ಗ ರವೀಂದ್ರನಗರದ ಗಣಪತಿ ದೇವಸ್ಥಾನದ ಅಡುಗೆ ಭಟ್ಟ ಸುರೇಶ್-ಸುಧಾ ದಂಪತಿ ಪುತ್ರಿ ಎನ್.ಎಸ್.ಸಂಜೀತಾ ಅವರು ೨೦೨೨-೨೩ನೇ ಸಾಲಿನ ನಾಲ್ಕು ಪದಕಕ್ಕೆ ಮುತ್ತಿಟ್ಟರು. ಕಾಶಿಪುರದ ಸಂಜೀತಾ ಅವರು ಬೆಂಗಳೂರಿನ ಜಿಕೆವಿಕೆಯ ಚಿಂತಾಮಣಿ ಕ್ಯಾಂಪಸ್ ನಲ್ಲಿ ಕೃಷಿ ಕೀಟ ಶಾಸ್ತ್ರದಲ್ಲಿ ಎಂಎಸ್ಸಿ ಮಾಡುತ್ತಿದ್ದಾರೆ. ಮುಂದೆ ಪಿಎಚ್ ಡಿ ಮಾಡುವ ಗುರಿ ಹೊಂದಿದ್ದಾರೆ. ರೈತರಿಗೆ ಒಳ್ಳೆಯದನ್ನು ಮಾಡುವ ಗುರಿ ಹೊಂದಿದ್ದಾರೆ.

Rotary Club of Shimoga Karnataka ಮಣ್ಣಿನ ಉತ್ಪನ್ನಗಳು ಪರಿಸರ & ಮನುಷ್ಯರ ಆರೋಗ್ಯಕ್ಕೆ ಹಾನಿಮಾಡುವುದಿಲ್ಲ-ಎಸ್.ಮಣಿ

0

Rotary Club of Shimoga Karnataka ಕುಂಬಾರ ವೃತ್ತಿಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಕುಂಬಾರ ವೃತ್ತಿ ಉಳಿಸಬೇಕು. ಸಮುದಾಯದವರಲ್ಲಿ ಜಾಗೃತಿ ಮೂಡಿಸಿ ಸರ್ಕಾರದ ಗಮನ ಸೆಳೆಯಬೇಕಿದೆ ಎಂದು ಶಿವಮೊಗ್ಗ ತಾಲೂಕು ಕುಂಬಾರ ಸಂಘದ ಅಧ್ಯಕ್ಷ ಎಸ್.ಮಣಿ ಹೇಳಿದರು.
ಶಿವಮೊಗ್ಗ ಸೆಂಟ್ರಲ್ ರೋಟರಿ ಭವನದ ಸಭಾಂಗಣದಲ್ಲಿ ಶಿವಮೊಗ್ಗ ತಾಲೂಕು ಕುಂಬಾರ ಸಂಘದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು 14ನೇ ವರ್ಷದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಮಣ್ಣಿನಿಂದ ಮಾಡಿದ ವಸ್ತುಗಳು ಪರಿಸರ ಹಾಗೂ ಮಾನವನ ಆರೋಗ್ಯಕ್ಕೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ. ಆದರೂ ಜನತೆ ಕಾಳಜಿ ವಹಿಸುತ್ತಿಲ್ಲ ಎಂದು ತಿಳಿಸಿದರು.
ಇಂದಿನ ಜಾಗತೀಕರಣ ವ್ಯವಸ್ಥೆಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹೆಚ್ಚುತ್ತಿದೆ. ಇವುಗಳು ಪರಿಸರಕ್ಕೆ ಮಾರಕ ಎಂಬುದು ತಿಳಿದಿದ್ದರೂ ಬಹುಪಾಲು ಜನತೆ ಯಥೇಚ್ಛವಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದಾರೆ ಎಂದರು.
ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ಹಿರಿಯ ವ್ಯವಸ್ಥಾಪಕ ಓಬಯ್ಯ ಮಾತನಾಡಿ, ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ, ಎಸ್.ಎಸ್.ಎಲ್.ಸಿ. ಮತ್ತು ಪಿಯು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ತುಂಬಾ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಈ ರೀತಿ ಕಾರ್ಯಕ್ರಮ ಹೆಚ್ಚು ಹೆಚ್ಚು ಮಾಡಬೇಕು. ಕುಂಬಾರ ವೃತ್ತಿಗೆ ನೆರವು ಪ್ರೋತ್ಸಾಹ ಅತ್ಯಗತ್ಯ ಇದೆ ಎಂದು ತಿಳಿಸಿದರು.
Rotary Club of Shimoga Karnataka ತಾಲೂಕು ಕುಂಬಾರ ಸಂಘದ ನಿರ್ದೇಶಕ ಈಶ್ವರ್.ಬಿ.ವಿ ಮಾತನಾಡಿ, ಕುಂಬಾರರು ಮಣ್ಣಿನ ಮಾಂತ್ರಿಕರು. ಮಾನವನ ಅತ್ಯಂತ ಹಳೆಯ ಆವಿಷ್ಕಾರಗಳಲ್ಲಿ ಕುಂಬಾರಿಕೆಯು ಒಂದಾಗಿದೆ. ಕುಂಬಾರಿಕೆ ಯಾವಾಗಲೂ ಆಂತರಿಕ ಕಲಾತ್ಮಕ ಗುಣಗಳನ್ನು ಹೊಂದಿದೆ. ಇಂದಿನ ಯುವ ಪೀಳಿಗೆಗೆ ಕುಂಬಾರಿಕೆ ಇತಿಹಾಸವನ್ನು ತಿಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಮತ್ತೆ ದೇಸಿ ವಸ್ತುಗಳ ಬಳಕೆ ಹೆಚ್ಚಾಗಿದ್ದು, ಬೇಸಿಗೆ ಆರಂಭವಾಗುತ್ತಿರುವ ಸಮಯದಲ್ಲಿ ಜನರು ಆರೋಗ್ಯದ ದೃಷ್ಟಿಯಿಂದ ರೆಫ್ರಿಜಿರೇಟರ್‌ನಲ್ಲಿರುವ ನೀರಿಗಿಂತ ಮಣ್ಣಿನ ಮಡಿಕೆಯ ನೀರೇ ಉತ್ತಮ ಎಂದು ತಿಳಿಸಿದರು.
ಹತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಕೆ.ಚಂದ್ರು, ವೈ.ಎನ್.ಭಾಗ್ಯಲಕ್ಷ್ಮೀ, ಕೆ.ಬಿ.ಪದ್ಮನಾಥ್, ರಾಘವೇಂದ್ರ, ಈಶ್ವರಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕೆ.ಶ್ರೀನಿವಾಸ್, ದೇವರಾಜ್, ರವೀಂದ್ರ, ಸವಿತಾ ಮಂಜುನಾಥ್, ರೂಪಾ ಈಶ್ವರ್, ಚಂದ್ರಿಕಾ ಹರೀಶ್, ಯಶೋಧ ಸುಧೀರ್, ರಮೇಶ್, ಕೃಷ್ಣಮೂರ್ತಿ, ಅನಿತಾ ಓಬಯ್ಯ ಉಪಸ್ಥಿತರಿದ್ದರು.

Shivamogga Police ಜಿಲ್ಲಾ ಪೊಲೀಸ್ ಇಲಾಖೆಯ ದ್ವಿಚಕ್ರ ವಾಹನ & ನಾಲ್ಕು ಚಕ್ರದ ವಾಹನಗಳ ವಿಲೇವಾರಿ ಪ್ರಕಟಣೆ

0

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ 19 ದ್ವಿಚಕ್ರ ವಾಹನ ಮತ್ತು 02 ನಾಲ್ಕು ಚಕ್ರದ ವಾಹನಗಳು ಒಟ್ಟು 21 ವಿವಿಧ ಮಾದರಿಯ ವಾಹನಗಳನ್ನು ಯಥಾ ಸ್ಥಿತಿಯಲ್ಲಿ ಜ.29 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತç ಮೀಸಲು ಪಡೆ ಕಚೇರಿಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
Shivamogga Police ಹೆಚ್ಚಿನ ಮಾಹಿತಿಗೆ ಡಿಎಸ್‌ಪಿ, ಡಿಎಆರ್ ಶಿವಮೊಗ್ಗ ದೂ. ಸಂಖ್ಯೆ 08182-261412 ನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Kuvempu University ಕು.ಚೈತ್ರಾಗೆ ಕುವೆಂಪು ಪಿ ಎಚ್ ಡಿ ಪದವಿ

Kuvempu University ಚೈತ್ರ .ಸಿ ಇವರು ಕುವೆಂಪು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ.ಹೀನಾ ಕೌಸರ್ ಇವರ ಮಾರ್ಗದರ್ಶನದಲ್ಲಿ “ A Study on Potential Fungal & Bacterial Strains for the Remediation of Textile Industry Effluent“ ವಿಷಯದ ಮೇಲೆ ಪ್ರಬಂಧ ಮಂಡಿಸಿ ಪಿ.ಎಚ್ ಡಿ ಪದವಿಯನ್ನು ಪಡೆದಿರುತ್ತಾರೆ.

Department of Social Welfare Karnataka ವಿದೇಶಿ ವ್ಯಾಸಂಗ ವೇತನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ. ಹಿಂದುಳಿದ‌‌ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ

0

Department of Social Welfare Karnataka ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡುವ 2024-25 ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನದ ಅರ್ಜಿ ಅವಧಿಯನ್ನು ಫೆ.05 ರವರೆಗೆ ವಿಸ್ತರಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, Department of Social Welfare Karnataka 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿಯ ಕೊನೆಯ ದಿನಾಂಕ ಮುಗಿದಿದೆ. ಆದರೆ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಪರಿಗಣನೆಗೆ ತೆಗೆದುಕೊಂಡು ಇಲಾಖೆಯು ಅರ್ಜಿ ದಿನಾಂಕವನ್ನು ಫೆ.5 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡಬಹುದು ಹಾಗೂ ಸಹಾಯವಾಣಿ ಸಂಖ್ಯೆ: 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Mallikarjun Kharge ಸಂವಿಧಾನ & ಪ್ರಜಾಪ್ರಭುತ್ವ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

0

Mallikarjun Kharge ಬೆಳಗಾವಿ, ಜ.21 ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ (ಜ.21) ಅನಾವರಣಗೊಳಿಸಿದರು.

ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ ಅವರು, ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಗಾಂಧೀಜಿಯವರ ಪುತ್ಥಳಿಯ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ; ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ ಎಂದು ಅಭಿಪ್ರಾಯಪಟ್ಟರು.

ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ‌ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು. ಗಾಂಧೀಜಿವರು ದೇಶಕ್ಕೆ ನೀಡಿದ ಕೊಡುಗೆಯನ್ನು‌ ಈಗ ಎಲ್ಲರೂ ಸ್ಮರಿಸುತ್ತಿದ್ದಾರೆ.

ಗಾಂಧೀಜಿಯವರು ತಮ್ಮ ಅಧ್ಯಕ್ಷತೆಯಲ್ಲಿ 1924 ರಲ್ಲಿ‌ ಜರುಗಿದ‌ ಅಧಿವೇಶನದಲ್ಲಿ ಅಸ್ಪೃಶ್ಯತೆ‌ ನಿವಾರಣೆಗೆ ಕರೆ‌ ನೀಡಿದರು. ಆದ್ದರಿಂದ ಈ‌ ನೆಲ‌ವು ಐತಿಹಾಸಿಕ‌ ಮಹತ್ವವನ್ನು ಹೊಂದಿದೆ.
1924 ರಲ್ಲಿ ಕಾಂಗ್ರೆಸ್ ಅಧಿವೇಶನ‌ ನಡೆದ ಸ್ಥಳದಲ್ಲಿಯೇ ನೂರು ವರ್ಷದ ಬಳಿಕ ಪಕ್ಷದ ಕಾರ್ಯಕಾರಿಣಿ ಸಭೆ‌‌ ನಡೆಸಿರುವುದು ಅತ್ಯಂತ‌ ಮಹತ್ವದ್ದಾಗಿದೆ ಎಂದರು.
ಗುಲ್ಬರ್ಗದಲ್ಲೂ ಕೂಡ‌ ಮಹಾತ್ಮಾ‌ಗಾಂಧೀಜಿಯವರ ವಿಶೇಷ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಗಾಂಧೀಜಿಯವರು 1924 ರಲ್ಲಿ‌ ಕಾಂಗ್ರೆಸ್‌ ನ ಐತಿಹಾಸಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ನಡೆದಿರುವುದು ನಮಗೆಲ್ಲ ಹೆಮ್ಮೆಯ‌ ಸಂಗತಿ ಎಂದರು.

ಮಹಾತ್ಮಾ ಗಾಂಧೀಜಿಯವರು ಅಂದು ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತು ಪ್ರತಿಪಾದನೆ ಮಾಡಿದ್ದರು.

ಗಾಂಧೀಜಿಯವರು ಸದಾ‌ ಶ್ರೀರಾಮನ ಸ್ಮರಣೆ‌‌ಮಾಡುತ್ತಿದ್ದರು. ಅವರು‌ ಅಪ್ಪಟ‌ ಹಿಂದೂ ಎಂಬುದಕ್ಕೆ‌ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ.

Mallikarjun Kharge ಅವರು ಎಂದೂ ಹಿಂದೂ ವಿರೋಧಿಯಾಗಿರಲಿಲ್ಲ; ಆದರೆ ಹಿಂದೂ‌ ಧರ್ಮದಲ್ಲಿ ಸಮಾನತೆ‌ ಮತ್ತು‌ ಸಹೋದರತೆಯನ್ನು ಬಯಸಿದ್ದರು.
“ಹೇ ರಾಮ್‌” ಎನ್ನುತ್ತಲೇ ಕೊನೆಯುಸಿರೆಳೆದರು. ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೂಡ ಮಹಾತ್ಮಾ‌ ಗಾಂಧೀಜಿಯವರ ತತ್ವಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ.
ಸಂವಿಧಾನ‌ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ‌ ನಡೆದಿದೆ. ಅದಕ್ಕೆ‌ ನಾವು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು.

ಇಂದಿನ ಯುವಜನತೆಗೆ ಹಾಗೂ ಮುಂದಿನ ಪೀಳಿಗೆಗೆ ಗಾಂಧೀಜಿಯವರ ವಿಚಾರಧಾರೆಯನ್ನು ತಲುಪಿಸುವ ಉದ್ಧೇಶದಿಂದ ಪುತ್ಥಳಿಯನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು, “ಇದೊಂದು‌ ಐತಿಹಾಸಿಕ‌ ಕಾರ್ಯಕ್ರಮ; ಇದು ಕೇವಲ ಪುತ್ಥಳಿ ಅನಾವರಣ ಕಾರ್ಯಕ್ರಮ ಮಾತ್ರವಲ್ಲ. ಸ್ವಾತಂತ್ರ್ಯ ಯೋಧರಿಗೆ ಗೌರವಿಸುವ ಮತ್ತು ಸಂವಿಧಾನದ ಘನತೆ ಎತ್ತಿ ಹಿಡಿಯುವ ಪವಿತ್ರ ಕಾರ್ಯಕ್ರಮವಾಗಿದೆ” ಎಂದು ಅಭಿಪ್ರಾಯಪಟ್ಟರು.

ಏಕೀಕರಣ ಕೂಡ‌ ಗಾಂಧಿಜಿಯವರ ಪ್ರೇರಣೆ ದೊರೆತಿದೆ. ಏಕತೆ, ಸಮಾನತೆ‌ಕಾಪಾಡಿಕೊಂಡು ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್ ಮನನ ಮಾಡಲು ಇದು ಸ್ಫೂರ್ತಿದಾಯಕವಾಗಿದೆ.
ಗಾಂಧೀಜಿಯವರ ತತ್ವಗಳನ್ನು ಬದಿಗಿಟ್ಟು ಸದೃಢ ಭಾರತ ನಿರ್ಮಾಣ ಅಸಾಧ್ಯ. ಆದ್ದರಿಂದ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಎಲ್ಲರೂ ಒಗ್ಗೂಡಿಕೊಂಡು ಮುನ್ನಡೆಯಬೇಕಿದೆ.
ರಾಮರಾಜ್ಯ‌ ಮತ್ತು ಗ್ರಾಮರಾಜ್ಯ ಮಹಾತ್ಮಾ ಗಾಂಧೀಜಿಯವರ ಕನಸಾಗಿತ್ತು. ಪರಸ್ಪರ ಸಹೋದರತೆ, ತ್ಯಾಗ, ಪತ್ನಿಯ ತ್ಯಾಗವು ರಾಮರಾಜ್ಯದ‌ ನೈಜ ಪರಿಕಲ್ಪನೆಯಾಗಿದೆ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು, ಮಹಾತ್ಮಾ ಗಾಂಧೀಜಿಯ ಪ್ರತಿಮೆ‌ ಅನಾವರಣ ಒಂದು ಅವಿಸ್ಮರಣೀಯ ಗಳಿಗೆಯಾಗಿದೆ. ವಿಗ್ರಹವಲ್ಲ ಚೈತನ್ಯದ ಹರವು ಎಂದು ಬಣ್ಣಿಸಿದ ಅವರು, ಪ್ರತಿಮೆಯು ಗಾಂಧೀಜಿ ಅನುಯಾಯಿಗಳಿಗೆ ಪ್ರೇರಣೆಯಾಗಲಿದೆ.
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವು ಗಾಂಧಿ ಭಾರತಕ್ಕೆ ದಾರಿದೀಪವಾಗಲಿದೆ ಎಂದರು.

ಕರ್ನಾಟಕ ವಿಧಾನಪರಿಷತ್ತಿನ ಸಭಾಪತಿಯವರಾದ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೆ.ಸಿ. ವೇಣುಗೋಪಾಲ್, ರಂದೀಪ್ ಸಿಂಗ್ ಸುರ್ಜೇವಾಲಾ, ಜೈರಾಮ್ ರಮೇಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಗ್ರಾಮೀಣ ವಿವಿಗೆ “ಮಹಾತ್ಮಾ‌ ಗಾಂಧೀಜಿ” ನಾಮಕರಣ:

ಗದುಗಿನ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಯಲಯವನ್ನು “ಮಹಾತ್ಮಾ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ” ಎಂದು ಮರುನಾಮಕರಣ‌ ಮಾಡುವುದರ ಜತೆಗೆ ನೂತನ ಲಾಂಛನವನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.
ಕುಲಪತಿ ಡಾ.ಸುರೇಶ್ ನಾಡಗೌಡರ ಉಪಸ್ಥಿತರಿದ್ದರು.

ವಿಶೇಷ ಅಂಚೆ ಚೀಟಿ-ಕೃತಿಗಳ ಬಿಡುಗಡೆ
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಗಾಂಧೀ ಭಾರತ ವಿಶೇಷ ಅಂಚೆ ಲಕೋಟೆಯನ್ನು ಕೂಡ ಬಿಡುಗಡೆಗೊಳಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹೊರತರಲಾದ “ಗಾಂಧಿ‌ ಭಾರತ-ಮರುನಿರ್ಮಾಣ” ಹಾಗೂ ಉದಯ ಕಾಲ ಸಮೂಹದ ಗಾಂಧಿ ಬಿತ್ತಿದ ಬೆಳಕು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

ಕರ್ನಾಟಕ ಏಕೀಕರಣ ಚಳವಳಿಗೆ ಪ್ರೇರಣೆಯಾಗಿದ್ದ ಹುಯಿಲಗೋಳ ನಾರಾಯಣರಾವ್ ಅವರು ರಚಿಸಿದ ” ಉದಯವಾಗಲಿ ನಮ್ಮ ಚೆಲುವು ಕನ್ನಡ‌ ನಾಡು” ಗೀತೆಯನ್ನು ಸಾದ್ವಿನಿ ಕೊಪ್ಪ ಅವರು ಪ್ರಸ್ತುತಪಡಿಸಿದರು.

ಬಾನಂಗಳಕ್ಕೆ ಚಿಮ್ಮಿದ ರಂಗು
ಚರಕವನ್ನು ತಿರುಗಿಸುವ ಮೂಲಕ ಮಹಾತ್ಮಾ‌ಗಾಂಧೀಜಿಯವರ ಪ್ರತಿಮೆ‌ ಅನಾವರಣಗೊಳಿಸಿದ ಕೂಡಲೇ‌ ಬಾನಂಗಳಕ್ಕೆ ಚಿಮ್ಮಿದ ಬಣ್ಣದ ಚಿತ್ತಾರ‌ ಮೂಡಿಸಿ, ಚಿತ್ತಾಕರ್ಷಕ ಕಾಮನಬಿಲ್ಲಿನ ವರ್ಣಗಳನ್ನು ಅರಳಿಸಿ, ಪಟಾಕಿ ಹಾರಿಸಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ‌ ಪರವಾಗಿ ಅತಿಥಿಗಳನ್ನು ಸನ್ಮಾನಿಸಿ, ಗೌರವಿಸಿದರು.
ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ವಂದಿಸಿದರು. ಬಿ.ಸಿ.ಭಾನುಮತಿ ಕಾರ್ಯಕ್ರಮವನ್ನು ನಿರೂಪಿಸಿದರು.

MESCOM ಜನವರಿ 24. ಶಿವಮೊಗ್ಗ ನಗರ ಉಪವಿಭಾಗೀಯ ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ

0

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ – 3 ಕಛೇರಿಯಲ್ಲಿ ಜ. 24 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ- 9480841339.

Karnataka Cashew Development Corporation Ltd. ರಾಜ್ಯದ ಕನಿಷ್ಟ 30 ಪಟ್ಟಣಗಳಲ್ಲಿ ಗೋಡಂಬಿ ಮಾರುಕಟ್ಟೆ ಬೆಳೆಸುವ ಪ್ರಸ್ತಾಪವಿದೆ-ಎಸ್ .ಅನಂತಕೃಷ್ಣರಾವ್

0

Karnataka Cashew Development Corporation Ltd. ಗೇರುಬೀಜ ಉದ್ಯಮದಲ್ಲಿ ಕರ್ನಾಟಕ ರಾಜ್ಯವನ್ನು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿ ನಿಲ್ಲಿಸುವ ಮುಖಾಂತರ ದೇಶದ ಆರ್ಥಿಕತೆಗೆ ನಮ್ಮ ಕೊಡುಗೆ ನೀಡಬೇಕು ಎಂದು ಕರ್ನಾಟಕ ಗೋಂಡಬಿ ಉತ್ಪಾದಕರ ಸಂಘದ (ಕೆಸಿಎಂಎ) ಅಧ್ಯಕ್ಷ ಎಸ್.ಅನಂತ ಕೃಷ್ಣರಾವ್ ಹೇಳಿದರು.
ಕರ್ನಾಟಕ ಗೇರುಬೀಜ ಸಂಸ್ಕರಣೆಯ ಶತಮಾನೋತ್ಸವ ಪೂರೈಸಿದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಗೇರುಬೀಜ ಬೆಳೆ ಪ್ರಚಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕದ ಕನಿಷ್ಟ 30 ಸಣ್ಣ ಹಾಗೂ ದೊಡ್ಡ ಪಟ್ಟಣಗಳಲ್ಲಿ ಗೋಡಂಬಿ ಮಾರುಕಟ್ಟೆ ಬೆಳೆಸುವ ಬಗ್ಗೆ ಆಲೋಚನೆ ಇದೆ. ದೇಶದ ಆರ್ಥಿಕತೆಗೆ ಗೇರು ಬೀಜ ಉದ್ಯಮ ಅತಿ ಹೆಚ್ಚಿನ ಕೊಡುಗೆ ನೀಡಲು ಬದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಗೇರುಬೀಜ ಉದ್ಯಮದ ಮಾರುಕಟ್ಟೆ ವಿಸ್ತರಣೆಗೆ ಸಂಘದ ಬೆಂಬಲ ಮತ್ತು ಪ್ರೋತ್ಸಾಹವು ಸದಾ ಇರುತ್ತದೆ. ಆಯುರ್ವೇದದಲ್ಲಿ ಹೇಳಿರುವಂತೆ ಗೋಡಂಬಿಯ ನಿಯಮಿತ ಸೇವನೆಯಿಂದ ಅದರಲ್ಲಿರುವ ಹೆಚ್ಚಿನ ವಿಟಮಿನ್ ಮತ್ತು ಪೋಟಾಸಿಯಂಗಳಿಂದ ಮೂಳೆಗಳು ಸಶಕ್ತವಾಗಿ, ಚರ್ಮ, ಕೂದಲಿನ ಆರೋಗ್ಯವು ಉತ್ತಮವಾಗುತ್ತದೆ ಎಂದು ಹೇಳಿದರು.
Karnataka Cashew Development Corporation Ltd. ಗೋಡಂಬಿ ಸಂಸ್ಕರಣೆಯಿಂದ ಅನೇಕ ಜನರಿಗೆ ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗ ಅವಕಾಶ ಹೆಚ್ಚುತ್ತದೆ. ದೇಶದ ಗ್ರಾಮೀಣ ಆರ್ಥಿಕತೆಗೆ ಗೇರು ಉದ್ಯಮ ಗಣನೀಯ ಕೊಡುಗೆ ನೀಡುತ್ತಿದೆ. ಉದ್ಯಮದ ಎಲ್ಲಾ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಸಂಘವು ಬದ್ಧವಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಹೋಟೆಲ್ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ಯು.ಎಂ.ಶಂಕರನಾರಾಯಣ ಹೊಳ್ಳ ಮಾತನಾಡಿದರು. ನಂತರ ಸಭೆಯಲ್ಲಿ ಹಾಜರಿದ್ದ ಉದ್ಯಮದಾರರ ಪ್ರಶ್ನೆಗಳಿಗೆ ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘದ ಅಧ್ಯಕ್ಷ ಎಸ್.ಅನಂತ ಕೃಷ್ಣರಾವ್ ಉತ್ತರಿಸಿದರು.
ಕೆಸಿಎಂಎ ಉಪಾಧ್ಯಕ್ಷ ತುಕಾರಾಂ ಪ್ರಭು, ಕಾರ್ಯದರ್ಶಿ ಅಮಿತ್ ಪೈ, ಖಜಾಂಚಿ ಗಣೇಶ್ ಕಾಮತ್, ಜಂಟಿ ಕಾರ್ಯದರ್ಶಿ ಸನತ್ ಪೈ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಅಂಗಡಿ, ಪ್ರದೀಪ್ ಯಲಿ, ಶರತ್ ಮತ್ತಿತರರು ಭಾಗವಹಿಸಿದ್ದರು.
ಗೋಡಂಬಿ ಬೆಳೆ ಪ್ರಚಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಗೇರುಬೀಜ ಉದ್ಯಮದಾರರು, ಹೋಟೆಲ್, ಬೇಕರಿ, ಐಸ್‌ಕ್ರೀಂ ಉದ್ಯಮದಾರರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

SN Channabasappa ಅಂಬಿಗರ ಚೌಡಯ್ಯ ಆವರು ಶರಣರ ಪಂಕ್ತಿಯಲ್ಲಿ ಶ್ರೇಷ್ಠ ಸ್ಥಾನ- ಶಾಸಕ “ಚೆನ್ನಿ”

0

SN Channabasappa ಶಿವಮೊಗ್ಗ, ಜ.೨೧ ಭಾರತದಲ್ಲಿ ವಚನಕಾರರು, ದಾಸರು, ಮಹನೀಯರು ಒಂದೊಂದು ಶ್ರೇಷ್ಠ ಪರಂಪರೆಯನ್ನು ಉಳಿಸಿದ್ದಾರೆ. ಹಾಗಾಗಿ ಈ ದೇಶ ಸಾಂಸ್ಕೃತಿಕ ರಾಷ್ಟ್ರವಾಗಿದೆ ಎಂದು ವಿಧಾನಸಭಾ ಶಾಸಕರಾದ ಎಸ್‌.ಎನ್‌.ಚನ್ನಬಸಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬಿಗರ ಚೌಡಯ್ಯ ಅವರು ಶರಣರ ಪಂಕ್ತಿಯಲ್ಲಿ ಶ್ರೇಷ್ಠ ಸ್ಥಾನ ಗಳಿಸಿದ್ದಾರೆ. ಆ ಮೂಲಕ ದಿಗಂತಕ್ಕಿಂತ ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಅಂಬಿಗರ ಚೌಡಯ್ಯ ಅವರು ಜೀವನದಲ್ಲಿ ಸದಾ ನಿಜವನ್ನು ನುಡಿದರು. ಆ ರೀತಿಯಲ್ಲೆ ಬದುಕಿ ಬಾಳಿದರು. ಆ ಮೂಲಕವೇ ಅವರು ನಿಜಶರಣರಾದರು. ಅಂಬಿಗರ ಚೌಡಯ್ಯ ಅವರಿಗೆ ಯಾವುದೇ ಜಾತಿಯು ಅಡ್ಡಿ ಬರಲಿಲ್ಲ. ಅವರಲ್ಲಿದ್ದ ಜ್ಞಾನದ ಮಹಾ ಪಾರಂಗತಕ್ಕೆ ಬಸವಣ್ಣನವರ ಅನುಭವ ಮಂಟಪದಲ್ಲಿ ಜಾಗ ದೊರಕಿತ್ತು ಎಂದರು.
ಅಂಬಿಗಡ ಚೌಡಯ್ಯ ಅವರು ಕಾಯಕದಿಂದ ಶ್ರೇಷ್ಠತೆ ಪಡೆದುಕೊಂಡಿದ್ದಾರೆ. ಕಾಯಕದ ಮೂಲಕ ಬದುಕಿನಲ್ಲಿ ಖುಷಿಯನ್ನು ಕಂಡುಕೊಂಡುವರು. ತಮ್ಮ ವಚನಗಳ ಮೂಲಕ ಜನಮಾನಸದಲ್ಲಿ ಅನೇಕ ಸಂಗತಿಗಳ ಬಗ್ಗೆ ಜಾಗೃತಿ ಮೂಡಿಸಿದರು. ಇಂತಹ ಮಹಾನೀಯರ ವಚನಗಳನ್ನು ಕೈಪಿಡಿ ಮಾಡಿ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಹಂಚಬೇಕು. ಆಗ ಇಂತಹ ಜಯಂತಿಯ ಆಚರಣೆಗೆ ಅರ್ಥ ದೊರಕುತ್ತದೆ ಎಂದರು.
SN Channabasappa ಸಾಹಿತಿ ಪ್ರೊ. ಸತ್ಯನಾರಾಯಣ ಮಾತನಾಡಿ, ಈಗಿನ ಯುಗ, ಜ್ಞಾನ ಯುಗ. ಅದನ್ನು ವೃದ್ಧಿಸುವ ಅಗತ್ಯವಿದೆ, ಅದಕ್ಕೆ ಅಂಬಿಗರ ಚೌಡಯ್ಯನವರ ವಚನ ಸರಿಯಾದ ಮಾರ್ಗವಾಗಿದೆ. ನಮ್ಮ ಜೀವನದ ಮೌಲ್ಯ ಹೆಚ್ಚಾಗಬೇಕು. ಸಾರ್ಥಕ ಆಗಬೇಕು ಎಂದರೆ ಅದು ಅಂಬಿಗರ ವಚನದಿಂದ ಮಾತ್ರ. ಅದು ನಮ್ಮನ್ನು ಸದಾ ಎಚ್ಚರಿಸುತ್ತದೆ ಎಂದು ಹೇಳಿದರು.
ಕರ್ನಾಟಕ ಚರಿತ್ರೆಯಲ್ಲಿ 12 ನೇ ಶತಮಾನ ವಿಶೇಷವಾದದ್ದು. ಯಾಕೆಂದರೆ ಜಾತಿ, ಶೋಷಣ, ಅಸಮಾನತೆ ಎಲ್ಲವನ್ನೂ ತೊಡೆದು ಹಾಕಿದ ಕಾಲವದು. ಆಗಿನ ಕಾಲದಲ್ಲಿ ಅಂಬಿಗರ ಚೌಡಯ್ಯ ಕೂಡ ಇದ್ದರು. ಇಂತಹ ಅನಿಷ್ಟ ಪದ್ದತಿಯನ್ನು ತೊಡೆದು ಹಾಕಲು ಸಹಕಾರಿಯಾದರು. ಮೂಡನಂಭಿಕೆಯನ್ನು ತನ್ನ ವಚನಗಳ ಮೂಲಕ ತೊಡೆದು ಹಾಕಿ ಅರಿವಿನ ಜ್ಞಾನವನ್ನು ಮೂಡಿಸಿದರು. ಅಂಬಿಗರ ಚೌಡಯ್ಯ ಕರ್ತವ್ಯ ನಿಷ್ಠರಾಗಿದ್ದರು, ವೈದ್ಯರು ಆಗಿದ್ದರು. ಕುಟುಂಬಕ್ಕೆ ಬಹಳ ಪ್ರಾಶಸ್ತ್ಯ ನೀಡುತ್ತಿದ್ದರು. ಸಾಂಸಾರಿಕ ಜೀವನಕ್ಕೆ ವಚನಗಳ ಮೂಲಕ ಸಲಹೆ ನೀಡಿದ್ದರು.
ಕಾಯಕ, ಜೀವ, ಜ್ಞಾನ ಈ ಮೂರು ತ್ರಿವೇಣೆ ಸಂಗಮಗಳು. ಇವುಗಳಲ್ಲಿ ಆತ್ಮ ಜ್ಯೋತಿ ಅಡಗಿದೆ. ನಿಜವಾದ ಗುರು ಗುರುವೇ ಆಗಿರಬೇಕು, ನಾಮ ಮಾತ್ರ ಗುರು ಆಗಿರಬಾರದು. ಗುರು ಶಿಷ್ಯರ ಅಂತರಂಗ ಬಹಿರಂಗ ಶುದ್ದ ಆಗಿರಬೇಕು. ನಿಜವಾದ ಭಕ್ತಿ ಬೇಡುವುದಿಲ್ಲ.ಕೊಡುಗೈ ದೊರೆಯೇ ನಿಜ ಭಕ್ತಿ. ಭಕ್ತಿಗೆ ಮನಸ್ಸೆ ಸಾಕ್ಷಿ. ಅದು ಸರಿ ಇದ್ದರೆ ಗುರಿ ತಲುಪುತ್ತೇವೆ. ಲಿಂಗ ಕಲ್ಲಿನ ಚೂರಲ್ಲ. ಶಿವನ ಪ್ರತೀಕ. ಹೃದಯ ಶ್ರೀಮಂತಿಕೆ ಇರಬೇಕು ಎಂದೆಲ್ಲಾ ಅಂಬಿಗರ ಚೌಡಯ್ಯ ವಚನಗಳ ಮೂಲಕ ಬದುಕಿನ ಸತ್ಯವನ್ನು ತಿಳಿಸಿದ್ದಾರೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್‌. ಚಂದ್ರಭೂಪಾಲ ಮಾತನಾಡಿ, ಅಂಬಿಗರ ಚೌಡಯ್ಯ ವಿಶೇಷ ವ್ಯಕ್ತಿತ್ವ, ನೇರನುಡಿ, ದಿಟ್ಟತನದ ವ್ಯಕ್ತಿ ಆಗಿದ್ದರು. ಅವರಿಗೆ ನಿಜಶರಣ ಎಂದು ಹೆಸರು ಕೊಟ್ಟವರೇ ಬಸವಣ್ಣ. ನಾನು ಕೇವಲ ದೋಣಿ ಸಾಗಿಸುವ ಚೌಡಯ್ಯ ಅಲ್ಲ ಸಮಾಜದ ಡೊಂಕನ್ನು ತಿದ್ದುವ ಚೌಡಯ್ಯ ಎಂದು ಸದಾ ಹೇಳುತ್ತಿದ್ದರು. ಯುವಕರು ಇಂತಹ ಜಯಂತಿಯಿಂದ ದೂರ ಉಳಿದಿದ್ದಾರೆ. ಅವರನ್ನು ಕರೆ ತರಬೇಕು. ಇಂತಹ ಮಹಾನ್‌ ವ್ಯಕ್ತಿಗಳ ಆದರ್ಶವನ್ನು ತಿಳಿಯಬೇಕು. ಇಂತಹ ಕೆಲಸ ಸಮಾಜವೂ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗಂಗಾ ಮತಸ್ಥರ ಸಮಾಜ ಅಧ್ಯಕ್ಷ ಡಿ.ಬಿ.ಕೆಂಚಪ್ಪ, ತಾಲ್ಲೂಕು ಅಧ್ಯಕ್ಷ ಸತೀಶ್‌ ಗಾಂಧಿ ಬಸಪ್ಪ, ಜಿಲ್ಲಾ ಮೊಗವೀರರ ಸಂಘದ ಅಧ್ಯಕ್ಷ ಅಣ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್‌. ಉಮೇಶ್‌,ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

Sorab News ಹಸುಗಳ ಕೆಚ್ಚಲು ಕೊಯ್ದು ವಿಕೃತಿ‌ ಮೆರೆದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

0

Sorab News ಹಸುಗಳ ಕೆಚ್ಚಲು ಕೊಯ್ದು, ಹಲ್ಲೆ ನಡೆಸಿ ವಿಕೃತಿ ಮೆರೆದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗೋ ಸಂರಕ್ಷಣಾ ಹೋರಾಟ ಸಮಿತಿ, ರಾಷ್ಟç ಭಕ್ತ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದೆ. ಬಹು ಸಂಖ್ಯಾತ ಹಿಂದೂಗಳು ಗೋವನ್ನು ತಾಯಿ ಎಂದು ಆರಾಧಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೋಯ್ದಿರುವುದು ಹೀನ ಕೃತ್ಯವಾಗಿದೆ. ಅಲ್ಲದೇ, ಹೊನ್ನವರ ತಾಲೂಕಿನ ಸಲ್ಕೋಡು ಗ್ರಾಮದಲ್ಲಿಯೂ ಇಂತಹದೇ ಘಟನೆ ಮರುಕಳಿಸಿದೆ. ಇದು ನಾಗರೀಕ ಸಮಾಜ ತಲ್ಲೆ ತಗ್ಗಿಸುವ ಸಂಗತಿ. ಸರ್ಕಾರ ಯಾವುದೇ ಪಕ್ಷಪಾತವಿಲ್ಲದೇ, ಇಂತಹ ಮತೀಯವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳಗಳ್ಳಬೇಕು ಎಂದು ಆಗ್ರಹಿಸಿದರು.
ರಾಷ್ಟç ಭಕ್ತ ಬಳಗದ ತಾಲೂಕು ಸಂಚಾಲಕ ಕೆ. ಪ್ರಭಾಕರ ರಾಯ್ಕರ್ ಮಾತನಾಡಿ, ಹುಟ್ಟಿದ ಮಗು ಒಂಬತ್ತು ತಿಂಗಳು ತಾಯಿಯ ಹಾಲು ಕುಡಿದರೆ, ಬದುಕಿರುವ ತನಕ ಗೋ ತಾಯಿಯ ಹಾಲನ್ನು ಕುಡಿಯುತ್ತೇವೆ. ಇಂತಹ ಗೋವಿನ ಮೇಲೆ ವಿದ್ವಂಸಕ ಕೃತ್ಯ ಎಸಗಿದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ಅಂತಹ ಕಿಡಿಗೇಡಿಗಳಿಗೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಹಿಂದೂ ಧರ್ಮಕ್ಕೆ ಅಪಮಾನ ಎಸಗಿದವರಿಗೆ ನಿರ್ದಾಕ್ಷಿಣ್ಯ ಕ್ರಮ ತಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
Sorab News ನಂತರ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಗೋ ಸಂರಕ್ಷಣಾ ಹೋರಾಟ ಸಮಿತಿ ಕಾರ್ಯದರ್ಶಿ ಶರತ್ ಸ್ವಾಮಿ, ಚಿಕ್ಕಶಕುನ ಗ್ರಾಮ ಸಮಿತಿ ಅಧ್ಯಕ್ಷ ಬಸವರಾಜ್, ಸೀಗೇಹಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಕೆರಿಯಪ್ಪ, ಬಾನ್ಕುಳಿ ಮಠದ ಉಪಾಧ್ಯಕ್ಷ ರಾಜು ಹೆಗಡೆ ಹೊಸಬಾಳೆ, ಗಣೇಶ್ ಓಂ ಪಿಕಲ್ಸ್, ಯಲ್ಲಪ್ಪ ಹಿರೇಶಕುನ, ಹುಚ್ಚಪ್ಪ, ಅಣ್ಣಾಜಿ ಗೌಡ, ಗಣಪತಿ, ಶಿವಪ್ಪ, ಸೋಮಪ್ಪ ಸೇರಿದಂತೆ ಇತರರಿದ್ದರು.

೨೧ ಸೊರಬ ೦೧: ಸೊರಬ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗೋ ಸಂರಕ್ಷಣಾ ಹೋರಾಟ ಸಮಿತಿ, ರಾಷ್ಟç ಭಕ್ತ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಗೋವಿನ ಮೇಲೆ ವಿಕೃತಿ ಮೆರೆದವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.