Wednesday, March 18, 2026
Wednesday, March 18, 2026
Home Blog Page 445

Sainik School Kodagu ಕೊಡಗು ಸೈನಿಕಶಾಲೆಗೆ ಪ್ರವೇಶಾತಿ ಅರ್ಜಿ ಆಹ್ವಾನ

0

Sainik School Kodagu ಕೊಡಗು ಸೈನಿಕ ಶಾಲೆಯಲ್ಲಿ 6ನೇ ತರಗತಿ(ಹುಡುಗ ಮತ್ತು ಹುಡುಗಿಯರು) ಹಾಗೂ 9 ನೇ ತರಗತಿ(ಹುಡುಗರು ಮಾತ್ರ)ಯ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದ್ದು ಜ.13 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಮಾತ್ರ ಸಲ್ಲಿಸಬಹುದು. ಹಾಗೂ ಲಿಖಿತ ಪರೀಕ್ಷೆಯ ದಿನಾಂಕವನ್ನು ಎನ್‌ಟಿಎ ಜಾಲತಾಣದಲ್ಲಿ ನಂತರ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಎಂಬ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

District Health and Family Welfare Department ಜಿಲ್ಲೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರಗ & ಅಸ್ಪತ್ರೆಗಳಲ್ಲಿ ತಜ್ಞವೈದ್ಯರ ನೇರ ಸಂದರ್ಶನ

0

District Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಫಿಜಿಷಿಯನ್-02, ಶಸ್ತ್ರ ಚಿಕಿತ್ಸೆ ತಜ್ಞರು-01, ಸ್ತ್ರೀ ರೋಗ ತಜ್ಞ-03, ಅರಿವಳಿಕೆ-09, ಇಎನ್‌ಟಿ-02, ನೇತ್ರ ತಜ್ಞರು-02, ಮಕ್ಕಳ ತಜ್ಞರು-2, ಕೀಲು ಮತ್ತು ಮೂಳೆ ತಜ್ಞರು-01, ರೇಡಿಯಾಲಜಿಸ್ಟ್ -01, ನೆಫ್ರೊಲಜಿಸ್ಟ್-01 ಒಟ್ಟು 24 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು .

District Health and Family Welfare Department ಆಸಕ್ತ ಅಭ್ಯರ್ಥಿಗಳು ದಿ: 15-01-2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08182 222382 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

S.N. Channabasappa ಸರ್ಕಾರಿ ಯೋಜನೆ & ಮುಜುರಾಯಿ ಕಾಮಗಾರಿಗಳಿಗೆ ನಿರಾಕ್ಷೇಪಣಾ ಪತ್ರ ಶಾಸಕರಿಂದ ಪ್ರಗತಿ ಪರಿಶಿಲನಾ ಸಭೆ

0

S.N. Channabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನ ಸಭೆ ನಡೆಸಿ,

  1. ಇ-ಆಸ್ತಿ ಪ್ರಗತಿಯ ಕುರಿತು ಚರ್ಚಿಸಿದರು.
  2. ಶಿವಮೊಗ್ಗ ನಗರದ ವಿದ್ಯುತ್ ವಿಭಾಗಗಳ ಸೌಕರ್ಯಗಳ ಬಗ್ಗೆ ಚರ್ಚಿಸಿದರು.
  3. ಆರೋಗ್ಯ ವಿಭಾಗಕ್ಕೆ ಸಂಬಂಧಿಸಿದಂತೆ ಆರೋಗ್ಯ ವಿಭಾಗದ ಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
  4. ಸ್ಮಾರ್ಟ್ ಸಿಟಿ ಯೋಜನೆ ಮತ್ತು ಮಹಾನಗರ ಪಾಲಿಕೆಗೆ ಹಸ್ತಾಂತರದ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
  5. ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯ ಬಗ್ಗೆ ಅನೇಕ ವಿಷಯಗಳನ್ನು ಚರ್ಚಿಸಿದರು.
  6. ಮಹಾನಗರ ಪಾಲಿಕೆ ವ್ಯಾಪ್ತಿಯ ಸಿವಿಲ್ ಕಾಮಗಾರಿಗಳ ಪ್ರಗತಿ ಪರಿಶೀಲನ ಬಗ್ಗೆ ಚರ್ಚಿಸಿದರು.
  7. ಸರ್ಕಾರದ ಯೋಜನೆಗಳು ಮತ್ತು ಮುಜುರಾಯಿ ಕಾಮಗಾರಿಗಳಿಗೆ ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಚರ್ಚಿಸಿದರು.
  8. ಗಾಂಧಿ ಪಾರ್ಕ್ ಮತ್ತು ಶಿವಮೊಗ್ಗ ನಗರದ ಇತ್ಯಾದಿ ಉದ್ಯಾನವನಗಳಿಗೆ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
  9. ಶಾಲಾ-ಕಾಲೇಜುಗಳ ಆಸ್ತಿಗಳನ್ನು ಖಾತೆ ದಾಖಲಿಸುವ ಬಗ್ಗೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
  10. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ಧಿ ಯೋಜನೆ ಬಗ್ಗೆ ಚರ್ಚಿಸಲಾಯಿತು.
  11. ಕೊಳಗೇರಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.
  12. ಮಹಾನಗರ ಪಾಲಿಕೆಯ ಮಳಿಗೆಗಳು, ಬಟ್ಟೆ ಮಾರ್ಕೆಟ್, ಮೈದಾನದ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.

S.N. Channabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ಮತ್ತು ಡಾ. ಧನಂಜಯ್ ಸರ್ಜಿ, ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ, ಉಪ ಆಯುಕ್ತರು( ಆಡಳಿತ) ತುಷಾರ್ B ಹೊಸೂರ್ ಸೇರಿದಂತೆ ಇಲಾಖಾವಾರು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Na. D’Souza ಸಾಹಿತಿ ನಾ.ಡಿಸೋಜಾ ನಿಧನಕ್ಕೆ ಶಿವಮೊಗ್ಗ ಅಭಾಸಾಪ ಸಂತಾಪ

0

ನಾಡಿನ ಖ್ಯಾತ ಸಾಹಿತಿ ಮತ್ತು ಲೇಖನಗಳಿಂದ ಜನಮನ ಸ್ಪಂದಿಸಿದ
ಡಾ.ನಾ.ಡಿಸೋಜಾ ಅವರ ನಿಧನದಿಂದ
ಮಲೆನಾಡಿನ ಬಹುಮುಖ್ಯ ಸಾಹಿತ್ಯಕ ಎಳೆಯೊಂದು ಕಡಿದಂತಾಗಿದೆ.
ತಮ್ಮ ಕತೆ ಕಾದಂಬರಿಗಳ ಮೂಲಕ ವರ್ತಮಾನದ ಸಾಮಾಜಿಕ ಬಿಗುವುಗಳಿಗೆ ಕಾರಣ ಮತ್ತು ಪರಿಣಾಮಗಳ ಬಗ್ಗೆ ತಮ್ಮದೇ ಶೈಲಿಯಲ್ಲಿ ಬಿಂಬಿಸಿದ್ದರು.

ಮಲೆನಾಡಿನ ಬನಿ ಅವರ ಬರವಣಿಗೆಗಳಲ್ಲಿ ಸದಾ ಒಳಧಾರೆಯಾಗಿ ವ್ಯಕ್ತವಾಗಿವೆ.

Na. D’Souza ಪತ್ರಿಕೆಗಳೇ ಅಲ್ಲದೆ ರೇಡಿಯೊ, ದೂರದರ್ಶನ ಮತ್ತು ಸಿನಿಮಾ ಮಾಧ್ಯಮಗಳಲ್ಲಿ
ಅವರ ಕೃತಿಗಳು ಪ್ರಕಟ,ಪ್ರಸಾರ ಮತ್ತು ಪ್ರೇಕ್ಷಕರ ಮನಗೆದ್ದಿವೆ.
ಭದ್ರಾವತಿ ಆಕಾಶವಾಣಿ ಕೇಂದ್ರದ ಮೂಲಕ ಅವರ ಹಲವು ಚಿಂತನ ಭಾಷಣಗಳು ಪ್ರಸಾರವಾಗಿವೆ.
ಅವರ ಪ್ರಖ್ಯಾತ ಕಾದಂಬರಿ ‘ಮುಳುಗಡೆ” ಭದ್ರಾವತಿ ಕೇಂದ್ರದ ಮೂಲಕ‌ ರೇಡಿಯೋ ರೂಪವಾಗಿ ಪ್ರಸಾರವಾಗಿದೆ.
ಅಸಂಖ್ಯ ಕೇಳುಗರ ಮೆಚ್ವುಗೆಯನ್ನೂ ಪಡೆದಿದೆ.
“ನಾಡಿ” ಈ ಬಗ್ಗೆ ಆಕಾಶವಾಣಿ ಭದ್ರಾವತಿ ಕೇಂದ್ರದ
ಬಗ್ಗೆ ಮೆಚ್ಚುಗೆ ಸೂಸಿ ಮಾತಾಡಿದ್ದರು.
ನಾಡಿನ ಸಾಹಿತ್ಯಕ ವಲಯದಲ್ಲಿ
ಅವರೊಬ್ಬ ಎಲ್ಲಧರ್ಮಗಳನ್ನೂ ಮೀರಿದ ಬರಹಗಾರರಾಗಿದ್ದರು ಎಂದು ಕೆ ಲೈವ್ ನ್ಯೂಸ್ ಪ್ರಧಾನ ಸಂಪಾದಕ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ
ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸುಧೀಂದ್ರ ಅವರು ನಾ.ಡಿಸೋಜಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Dr. Mallikarjuna Murugarajendra Shri ನಾ.ಡಿಸೋಜಾ ಅವರ ಬರಹ ಮಲೆನಾಡಿನೊಂದಿಗೆ ಅವಿನಾಭಾವ ಬೆರೆತಿದೆ- ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ

0

Dr. Mallikarjuna Murugarajendra ಮಲೆನಾಡಿನ ಜನಜೀವನ, ಪರಿಸರ ,ಬದುಕನ್ನು ತಮ್ಮ ಕತೆ ,ಕಾದಂಬರಿ ಮೂಲಕ ಅನನ್ಯವಾಗಿ ಕಟ್ಟಿಕೊಟ್ಟ ನಾ.ಡಿಸೋಜ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಮಿಗಳವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕುವೆಂಪು ಅವರು ಸಮಗ್ರ ಮಲೆನಾಡನ್ನು ಸೂಕ್ಷ್ಮವಾಗಿ ಅವಲೋಕಿಸಿ ಕಾಡು, ಪ್ರಾಣಿ-ಪಕ್ಷಿ ಸಂಕುಲ, ಬದುಕನ್ನು ಸಾಹಿತ್ಯದಲ್ಲಿ ಕಟ್ಟಿಕೊಡುವ ಪರಂಪರೆಯ ಮುಂದುವರೆದು ಉತ್ತರದಾಯಿಗಳಾದ ನಾ.ಡಿಸೋಜ ಅವರ ಬರಹ -ಬದುಕು ಮಲೆನಾಡಿನೊಂದಿಗೆ ಅವಿನಾಭಾವವಾಗಿ ಬೆರೆತು ಹೋಗಿತ್ತು. ಪರಿಸರ ಹಾಗೂ ಮಾನವೀಯ ಕಾಳಜಿಯನ್ನು ಮೂಲದ್ರವ್ಯವನ್ನಾಗಿಸಿಕೊಂಡು ಕತೆ,ಕಾದಂಬರಿಗಳನ್ನು ಸೃಜನಶೀಲವಾಗಿ ರಚಿಸಿದ ಅಪರೂಪದ ಲೇಖಕ ನಾ.ಡಿಸೋಜ ಅವರು.

Dr. Mallikarjuna Murugarajendra ಜನಪರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಮಲೆನಾಡಿನ ಪರಿಸರ ಉಳಿವು ಹಾಗೂ ಅಭಿವೃದ್ಧಿಯನ್ನು ಸದಾ ಧೇನಿಸುತ್ತಿದ್ದ ನಾಡಿಯವರು ಸರ್ವಧರ್ಮದವರೊಂದಿಗೆ ಬೆರೆತು ಭಾವೈಕ್ಯತೆಯ ಸೇತುವೆಯಾಗಿದ್ದರು .
ಶ್ರೀಮಠದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಶ್ರೀ ಮಠ 1991 ರಲ್ಲಿ ಆಯೋಜಿಸಿದ್ದ ಕೆಳದಿ ಅರಸರ ಸಮಗ್ರ ಅಧ್ಯಯನ ವಿಚಾರ ಸಂಕಿರಣದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಲಹೆ ,ಸಹಕಾರವನ್ನು ನೀಡಿದ್ದರು ತಮ್ಮ ಸಾಮಾಜಿಕ ಬದ್ಧತೆ ಮೂಲಕ ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ನಾಡಿಯವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ದು:ಖ ಭರಿಸುವ ಶಕ್ತಿ ದೊರೆಯಲೆಂದು ಬಸವಾದಿ ಶರಣರಲ್ಲಿ ಪ್ರಾರ್ಥಿಸಿದ್ದಾರೆ.

Srinidhi Education Institute ವಿದ್ಯಾಭ್ಯಾಸದ ಸಂಗಡ ಪ್ರತಿಭೆ ಅನಾವರಣಗೊಳಿಸಲು ಕ್ರೀಡೆ & ಸಾಂಸ್ಕೃತಿಕ ಚಟುವಟಿಕೆ ಅಗತ್ಯ- ವಿಜಯ ಕುಮಾರ್

0

Srinidhi Education Institute ವಿದ್ಯಾಭ್ಯಾಸದ ಜತೆಯಲ್ಲಿ ಮಕ್ಕಳು ಪರಿಪೂರ್ಣತೆ ಹೊಂದಲು ಹಾಗೂ ಪ್ರತಿಭೆ ಅನಾವರಣಗೊಳಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಅವಶ್ಯಕ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.

ಶ್ರೀನಿಧಿ ಎಜುಕೇಷನ್ ಸಂಸ್ಥೆಯ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 2024- 25ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿ ಕ್ರೀಡೆ, ಸಾಂಸ್ಕೃತಿಕ ಆಸಕ್ತಿ ಕಡಿಮೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಇದರಿಂದ ಸಮಯ ವ್ಯರ್ಥ ಮಾಡುತ್ತಾರೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ತೋರಿಸಬೇಕು. ನಮ್ಮಲ್ಲಿ ಮಾನಸಿಕ ಸ್ಥಿರತೆ ವೃದ್ಧಿಸುವ ಜತೆಯಲ್ಲಿ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಟಿ.ಡಿ.ಆರ್.ಶ್ರೀಕಂಠಯ್ಯ ಮಾತನಾಡಿ, ವಿದ್ಯಾರ್ಥಿಗಳು ಜೀವನ ಕೌಶಲ್ಯ, ಸಂಸ್ಕಾರ ಹಾಗೂ ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯಶಿಕ್ಷಕ ಡಿ.ಬಿ.ಸತೀಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಾಸ್ತವ ಘಟನೆಗಳೊಂದಿಗೆ ಸಮಸ್ಯೆಗಳನ್ನು ಹೇಗೆ ನಿಭಾಯಿಸಬೇಕು ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು.

Srinidhi Education Institute ಇದೇ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕರಿಗೆ ಸನ್ಮಾನಿಸಲಾಯಿತು. ರುದ್ರಗೌಡ ಮರ್ಕಳ್ಳಿ, ಪಾರ್ವತಮ್ಮ, ಮೀನಾಕ್ಷಮ್ಮ, ಜಯಲಕ್ಷ್ಮೀ, ಗಣೇಶ್ ಅವರಿಗೆ ಸನ್ಮಾನಿಸಲಾಯಿತು.

ಶ್ರೀನಿಧಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಕಡಿದಾಳ್ ಗೋಪಾಲ್ ಅಧ್ಯಕ್ಷತೆ ವಹಿಸಿ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.

ಖಜಾಂಚಿ ಕಿಮ್ಮನೆ ದೇವಪ್ಪ, ಇನ್ನರ್‌ವ್ಹೀಲ್ ಜಿಲ್ಲಾ ಉಪಾಧ್ಯಕ್ಷ ಶಬರಿ ಕಡಿದಾಳ್, ಆಡಳಿತಾಧಿಕಾರಿ ಟಿ.ಪಿ.ನಾಗರಾಜ, ಗುರುಮೂರ್ತಿ ಗೌಡ, ಮುಖ್ಯಶಿಕ್ಷಕರು, ಶಿಕ್ಷಕರು, ಉಪಸ್ಥಿತರಿದ್ದರು. ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Na D’Souza ಸಕಲ‌ ಪೊಲೀಸ್ ಗೌರವಗಳೊಂದಿಗೆ ನಾ.ಡಿಸೋಜಾ ಅಂತ್ಯಕ್ರಿಯೆ

0

Na D’Souza ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ನಾರ್ಬಟ್ ಡಿಸೋಜ ಅವರು ದಿನಾಂಕ:05.01.2025 ರಂದು ನಿಧನರಾಗಿದ್ದಾರೆ.

ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.

DC Shivamogga ಜನವರಿ 10 ಜಿಲ್ಲಾ ಸಿರಿಧಾನ್ಯ ಜಾಥಾ ಕಾರ್ಯಕ್ರಮ

0

DC Shivamogga ಜ.10 ರಂದು ನಡೆಯಲಿರುವ ‘ಸಿರಿಧಾನ್ಯ ಹಬ್ಬ’ದ ಪೂರ್ವಭಾವಿಯಾಗಿ ಜ.10 ರ ಬೆಳಿಗ್ಗೆ 6 ಗಟೆಗೆ ‘ಜಿಲ್ಲಾ ಸಿರಿಧಾನ್ಯ ಜಾಥಾ ಕಾರ್ಯಕ್ರಮ’ ವನ್ನು ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಹಮ್ಮಿಕೊಳ್ಳಲಾಗಿದೆ.

DC Shivamogga ಈ ಸಿರಿಧಾನ್ಯ ಜಾಥಾ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಗೋಪಿ ವೃತ್ತ, ಎಎ ಸರ್ಕಲ್ ನಿಂದ ಸಾಗಿ ಬಂದು ಜಂಟಿ ಕೃಷಿ ನಿರ್ದೇಶಕ ಕಚೇರಿಯಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Santhosh Lad ಬಿಸಿಯೂಟ ಆರಂಭದಿಂದ ಶಾಲಾ ದಾಖಲಾತಿ ಹೆಚ್ಚಾಗಿದೆ- ಸಚಿವ ಸಂತೋಷ್ ಲಾಡ್

0

Santhosh Lad ಬಾಲ ಕಾರ್ಮಿಕ ನಿರ್ಮೂಲನೆ ವಿರುದ್ಧ ಇಲಾಖೆ ಕೆಲಸ ಮಾಡುತ್ತಿದೆ.ಅದಕ್ಕಾಗಿ ಜಿಯೋ ಟ್ಯಾಗಿಂಗ್ ಮಾಡುತ್ತಿದ್ದೇವೆ. ಇದರಿಂದ ಬೇರೆ ರಾಜ್ಯದಿಂದ ಬಂದವರು ಪತ್ತೆಯಾಗುತ್ತಿದ್ದಾರೆ. ಸಂಬಂಧಪಟ್ಟ ಬಾಲ ಕಾರ್ಮಿಕರ ಮಾಹಿತಿಯನ್ನು ಆಯಾ ರಾಜ್ಯಗಳಿಗೆ ಮಾಹಿತಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಬಿಸಿಯೂಟ ಕಾರ್ಯಕ್ರಮ ಆರಂಭವಾದ ನಂತರ ಶಾಲಾ ಮಕ್ಕಳ ದಾಖಲಾತಿ ಹೆಚ್ಚಿದೆ. ಇದರಿಂದಾಗಿ ಡ್ರಾಪ್ ಔಟ್ ಸಹ ಹೆಚ್ಚಾಗಿದ್ದು ಅದನ್ನು ನಿಭಾಯಿಸಲಾಗುತ್ತಿದೆ. ನಕಲಿ ಕಟ್ಟಡ ಕಾರ್ಮಿಕರ ಪತ್ತೆ ಕಾರ್ಯ ಫೀಲ್ಡ್ ಮಟ್ಟದಲ್ಲಿ ನಡೆಯುತ್ತಿದೆ.ಇನ್ನು 6 ತಿಂಗಳಲ್ಲಿ ಇದರ ನಿಖರವಾದ ಮಾಹಿತಿ ಸಿಗಲಿದೆ.ಹಾಗೆಯೇ ಕಾರ್ಮಿಕ ಇಲಾಖೆಯ ಸೌಲಭ್ಯ ಸಿಗದವರಿಗೆ ಸ್ಥಳದಲ್ಲೇ ನೋಂದಾಯಿಸಲಾಗುತ್ತದೆ ಎಂದರು.

ಇಎಸ್ಐ ಸೌಲಭ್ಯ ವಿಸ್ತರಣೆಗೆ ಬೇಸಿಕ್ ಸಂಬಳದ ಮಿತಿಯನ್ನು 21 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲಾಖೆಯಲ್ಲಿ ಲೇಬರ್ ಇನ್ಸ್ಪೆಕ್ಟರ್ ಕೊರತೆ ಇದೆ. ಅದಕ್ಕಾಗಿ ಅಂಬೇಡ್ಕರ್ ಸೇವಾ ಕೇಂದ್ರ ಆರಂಭಿಸಲಾಗುತ್ತಿದ್ದು ಆ ಮೂಲಕ ಇಲಾಖೆಯ ಮೇಲಿನ ಒತ್ತಡ ಕಡಿಮೆಯಾಗಲಿದೆ.

Santhosh Lad ಶಿವಮೊಗ್ಗದ ಇಎಸ್ಐ ಆಸ್ಪತ್ರೆ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ.
ನಿರ್ಮಾಣ ಸ್ಥಳದಲ್ಲಿ ಕೆಲ ಸಮಸ್ಯೆ ಇದೆ ಎಂದು ಗೊತ್ತಾಗಿದೆ.ಸಂಪುಟ ಪುನಾರಚನೆ ಬಗ್ಗೆ ಕೇಂದ್ರದ ಹೈ ಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು,ಇಲಾಖೆಯ ವತಿಯಿಂದ ಟ್ರಾನ್ಸ್ ಪೋರ್ಟ ಬೋರ್ಡ್ ಸ್ಥಾಪನೆ ಆಗಲಿದೆ ಎಂದು ಮಾಹಿತಿ ನೀಡಿದರು.

ಇದರಿಂದ ಸಾರಿಗೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸುಮಾರು 15 ಲಕ್ಷ ಕಾರ್ಮಿಕರಿಗೆ ಅನುಕೂಲ ಆಗಲಿದೆ. ಶೇ.15 ರಷ್ಟು ಸಾರಿಗೆ ದರ ಹೆಚ್ಚಳ ಸರಿಯಾಗಿದೆ.ಕಳೆದ 5 ವರ್ಷದಿಂದ ದರ ಹೆಚ್ಚಳ ಮಾಡಿರಲಿಲ್ಲ.
ರಾಜ್ಯದಲ್ಲಿ 25 ಸಾವಿರ ಸರ್ಕಾರಿ ಬಸ್ ಗಳಿವೆ. ಆದರೆ ನೆರೆಯ ರಾಜ್ಯದಲ್ಲಿ ಕಡಿಮೆ ಬಸ್ ಗಳಿವೆ.ಕರ್ನಾಟಕ ಜಿಡಿಪಿಯಲ್ಲಿ ನಂಬರ್‌ 1 ಸ್ಥಾನದಲ್ಲಿದೆ.ಇದಕ್ಕೆ ನಮ್ಮ ಕಾರ್ಯಕ್ರಮ ಕಾರಣವೆಂದರು.

ಕೇಂದ್ರದ 2014 ರ ಬಜೆಟ್ 2024 ರ ಬಜೆಟ್ ಒಂದೇ ರೀತಿಯಲ್ಲಿ ಇದೆಯಾ.
ಆ ಬಗ್ಗೆ ಚರ್ಚೆ ಮಾಡಲು ಬಿಜೆಪಿಗರು ಸಿದ್ಧರಿದ್ದಾರಾ?2014ರಲ್ಲಿದ್ದ ಡಾಲರ್ ದರ ಈಗಿನ‌‌ ದರ ಹಾಗೆಯೇ ಇದೆಯಾ?ಇಶ್ಯೂ ಬಗ್ಗೆ ಮಾತನಾಡಲು ಬಿಜೆಪಿಗರು ಸಿದ್ಧರಿಲ್ಲ.ಸುಮ್ಮನೆ ರಾಜಕೀಯ ಮಾಡಲು ಬಿಜೆಪಿಗರು ಮಾತನಾಡುತ್ತಾರೆ.ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ ಖರ್ಗೆ ಹೆಸರಿಲ್ಲ.ಡೆತ್ ನೋಟ್ ನಲ್ಲಿ‌ ಆ ರೀತಿಯಲ್ಲಿ ಹೆಸರಿಲ್ಲ.ತನಿಖೆ ನಡೆಯುತ್ತಿದ್ದು ಅದರಲ್ಲಿ ಸರಿಯಾದ ಮಾಹಿತಿ ಹೊರಬರಲಿದೆ ಎಂದು ಹೇಳಿದರು.

Shimoga District Chamber of Commerce & Industry ಶಿವಮೊಗ್ಗದ ಇಎಸ್ ಐ ಆಸ್ಪತ್ರೆ ಕಟ್ಟಡ ನಿರ್ಮಾಣ ಪೂರೈಸಲು ಮನವಿ

0

Shimoga District Chamber of Commerce & Industry ಶಿವಮೊಗ್ಗ ಜಿಲ್ಲೆಗೆ ನಾಲ್ಕು ವರ್ಷಗಳ ಹಿಂದೆ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆಯ ನಿರ್ಮಾಣ ಕಾರ್ಯ ಶೀಘ್ರ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಕರೋನಾ ನಂತರ ಉದ್ಯಮ ಕ್ಷೇತ್ರ ನಷ್ಟಕ್ಕೆ ಸಿಲುಕಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಣ್ಣ, ಮಧ್ಯಮ ಕೈಗಾರಿಕಾ ಉದ್ಯಮಗಳಿಗೆ ಬಂಡವಾಳಕ್ಕೆ ಉತ್ತೇಜನ, ಸಹಾಯಧನ, ವಿಶೇಷ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಕಾರ್ಮಿಕರಿಗೆ 21 ಸಾವಿರ ರೂ. ವೇತನ ದಾಟಿದ ನಂತರ ಇಎಸ್‌ಐ ಸೌಲಭ್ಯ ಸಿಗುತ್ತಿಲ್ಲ. ತುಂಬಾ ಹಳೇಯ ನಿಯಮ ಆಗಿದ್ದು, ವೈದ್ಯಕೀಯ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ 40 ಸಾವಿರ ರೂ.ವರೆಗೂ ವೇತನ ಪಡೆಯುವ ಕಾರ್ಮಿಕರಿಗೆ ಇಎಸ್‌ಐ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೆಲ ಕಾಯಿಲೆಗಳಿಗೆ ಇಎಸ್‌ಐ ಸೌಲಭ್ಯ ಬರುವುದಿಲ್ಲ. ಹಣ ಪಾವತಿಸಲು ಸೂಚಿಸುತ್ತಾರೆ. ಇಎಸ್‌ಐ ದಾಖಲಾತಿ ನೀಡಿದ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಅಗತ್ಯ ವೈದ್ಯಕೀಯ ಸೇವೆ ಸಿಗುವಂತೆ ಆಗಬೇಕು. ಕಾರ್ಮಿಕರು ಹಾಗೂ ಕುಟುಂಬದವರ ಹಿತದೃಷ್ಟಿಯಿಂದ ಅನೇಕ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಇಎಸ್‌ಐ ಆಸ್ಪತ್ರೆಗಳಲ್ಲಿ ಮಾರಣಾಂತಿಕ ಕಾಯಿಲೆಗಳಾದ ಹೃದಯ ರೋಗ, ಮಧುಮೇಹ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ರೋಗಗಳು ಇತ್ಯಾದಿಗಳಿಗೆ ಔಷಧಗಳು ಲಭ್ಯ ಇರುವುದಿಲ್ಲ. ಆದ್ದರಿಂದ ಕೂಡಲೇ ಗಮನಿಸಿ ಔಷಧಗಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಕಾರ್ಮಿಕರ ಹಿತದೃಷ್ಟಿಯಿಂದ ಅವಶ್ಯವಿರುವ ಎಲ್ಲ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸಚಿವ ಸಂತೋಷ್ ಲಾಡ್ ಬೇಡಿಕೆಗಳ ಈಡೇರಿಕೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

Shimoga District Chamber of Commerce & Industry ಇದೇ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಲಾಯಿತು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ನಿರ್ದೇಶಕರಾದ ಪ್ರದೀಪ್ ವಿ.ಯಲಿ, ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅವರು ಕನಿಷ್ಟ ವೇತನದ ಬಗ್ಗೆ ಕಾರ್ಮಿಕ ಸಚಿವರ ಗಮನ ಸೆಳೆದರು. ಕಾರ್ಯದರ್ಶಿ ರಾಜೇಶ್ ಹಾಗೂ ಇತರ ಪದಾಧಿಕಾರಿಗಳು ಹಾಜರಿದ್ದರು.

ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಜೋಯಿಸ್ ರಾಮಾಚಾರ್ ಹಾಗೂ ಕಾರ್ಯದರ್ಶಿ ವಿಶ್ವೇಶ್ವರಯ್ಯ ಅವರು ಕಾರ್ಮಿಕರಿಗೆ ಅನುಕೂಲವಾಗುವಂತೆ ವಸತಿಗೃಹ ವಸತಿ ಸಮುಚ್ಚಯ ನಿರ್ಮಾಣದ ಬಗ್ಗೆ ಮಾತನಾಡಿ ಸಚಿವರ ಗಮನ ಸೆಳೆದರು.

ಜವಳಿ ವರ್ತಕರ ಸಂಘದ ಅಧ್ಯಕ್ಷ ಬಿ.ಸುರೇಶ್ ಕುಮಾರ್, ಕಾರ್ಯದರ್ಶಿ ಪ್ರಭಾಕರ್ ಮತ್ತು ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಗಿರೀಶ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.