Santhosh Lad ಮಾಜಿ ಶಾಸಕರಾದ ಶ್ರೀಯುತ ಎಚ್ ಎಮ್ ಚಂದ್ರಶೇಖರಪ್ಪ ಹಾಗೂ ಮಾಜಿ ಕಾರ್ಪೊರೇಟರ್ ಹೆಚ್ ಸಿ ಯೋಗೇಶ್ ಅವರ ನಿವಾಸನದಲ್ಲಿ ಕಾರ್ಮಿಕ ಸಚಿವರಾದ ಶ್ರೀಯುತ ಸಂತೋಷ್ ಲಾಡ್ ರವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಎನ್ ಗೋಪಿನಾಥ್, ಉಪಾಧ್ಯಕ್ಷರಾದ ಜಿ ವಿಜಯಕುಮಾರ್ , ನಿರ್ದೇಶಕರಾದ ಡಾಕ್ಟರ್ ಬಿ ವಿ ಲಕ್ಷ್ಮೀದೇವಿ ರಾಜ್ಯ ಭೋವಿ ನಿಗಮದ ಅಧ್ಯಕ್ಷರಾದ ರವಿಕುಮಾರ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಡಾಕ್ಟರ್ Santhosh Lad ದಿನೇಶ್, ಚುಡಮಣಿ ಈ ಪವಾರ್ ,ಸುರೇಶ್ ಶೆಟ್ಟಿ, ಕಾಶಿ ವಿಶ್ವನಾಥ್ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರ್ ಇದ್ದು ಸಚಿವರನ್ನು ಅಭಿನಂದಿಸಿದರು.
JCI Shimoga Sahyadri ಜೆಸಿಐ ಶಿವಮೊಗ್ಗ ಸಹ್ಯಾದ್ರಿ ನೂತನ ಪದಾಧಿಕಾರಿಗಳ ಆಯ್ಕೆ
JCI Shimoga Sahyadri ಅಂತರರಾಷ್ಟ್ರೀಯ ಸಂಸ್ಥೆಯಾದ ಜೂನಿಯರ್ ಚೇಂಬರ್
ಇಂಟರ್ ನ್ಯಾಷನಲ್ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕಕ್ಕೆ 2025-26ನೆ ಸಾಲಿನ ನೂತನ ಅಧ್ಯಕ್ಷರಾಗಿ JFM ಗಣೇಶ್ ಜಿ ಹಾಗೂ ಕಾರ್ಯದರ್ಶಿಯಾಗಿ JFM ಮಂಜುನಾಥ್ ರಾವ್ ಕದಂ ರವರು ಆಯ್ಕೆ.
ನಗರದ ಪ್ರತಿಷ್ಠಿತ.ಜೆ ಸಿ ಐ.ಸಂಸ್ಥೆಗಳಲ್ಲಿ ಒಂದಾದ ಇಂಟರ್ನ್ಯಾಷನಲ್ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕಕ್ಕೆ 2025 -26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಜೆ ಎಫ್ ಎಂ ಗಣೇಶ್ ಜಿ ಕಾರ್ಯದರ್ಶಿಯಾಗಿ ಜೆ ಎಫ್ ಎಂ ಮಂಜುನಾಥ್ ರಾವ್ ಕದಂ ಆಯ್ಕೆಯಾಗಿದ್ದು
ಇವರಿಗೆ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕದ ಹಿರಿಯ ಸದಸ್ಯರಾದ ಶೇಷಗಿರಿ ಡಿ ಕೆ, ಸುರೇಂದ್ರ ಕೋಟ್ಯಾನ್, ಈಶ್ವರ್, ಅಧ್ಯಕ್ಷರಾದ
ಡಾ ಲಲಿತಾ ಭರತ್, ಅನುಷ್ ಗೌಡ, ಸತೀಶ್ ಚಂದ್ರ, ಶುಷ್ಮಾ, ಕಿಶೋರ್ ಕುಮಾರ್, ಸಂತೋಷ ಇನ್ನು ಇತರೆ ಸದಸ್ಯರು ಶುಭಾಶಯ ಕೋರಿದ್ದಾರೆ.
JCI Shimoga Sahyadri ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ
ಮಾಜಿ ಅಸಿಸ್ಟೆಂಟ್ ಗವರ್ನರ್ ವಿಜಯಕುಮಾರ್ ಜಿ, ವಸಂತ್ ಹೋಬ್ಳಿದಾರ್, ಅಧ್ಯಕ್ಷರಾದ ಅರುಣ್ ದೀಕ್ಷಿತ್ ಕಾರ್ಯದರ್ಶಿ ಶಶಿಕಾಂತ್ ನಾಡಿಗ್ , ಶ್ರೀಕಾಂತ್ ಎನ್ ಹೆಚ್, ಧನಂಜಯ್ , ಇತರೆ ಸದಸ್ಯರು ಶುಭ ಕೋರಿರುತ್ತಾರೆ.
Dr. Na D’souza ಹಿರಿಯ ಸಾಹಿತಿ ಡಾ.ನಾ ಡಿಸೋಜ ನಿಧನ
Dr. Na D’souza ನಾಡಿನ ಹೆಸರಾಂತ ಸಾಹಿತಿ ,ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ನಿಧನರಾಗಿದ್ದಾರೆ.
ಸು. 87 ವರ್ಷ ವಯಸ್ಸಿನ ದಿವಂಗತರು ಸರಳ ಮತ್ತು ಸಾಮಾಜಿಕ ಕಳಕಳಿಯ ಬರಹಗಾರರಾಗಿದ್ದರು. ಕಥಾಸಂಕಲನ,
ಕಾದಂಬರಿಗಳನ್ನ ಪ್ರಕಟಿಸಿದ್ದರು. ನಾಡಿನ ಖ್ಯಾತ ಪತ್ರಿಕೆಗಳಲ್ಲಿ ಅವರ ಬರಹಗಳು ಜನಮನ ರಂಜಿಸಿದ್ದವು. ಪರಿಸರ ಪರ ಕಾಳಜಿಯನ್ನೂ ಹೊಂದಿದ್ದ ‘ನಾಡಿ’ ತಮ್ಮದೇ ಓದುಗ ವಲಯನ್ನೂ ಹೊಂದಿದ್ದರು.
ಸಾಗರದ ನಿವಾಸಿಯಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಮಂಗಳೂರಿನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಾಡಿಸೋಜಾ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಆಘಾತವಾಗಿದೆ.
ಅಕಾಡೆಮಿ ಪ್ರಶಸ್ತಿ ಗೆ ಭಾಜನರಾಗಿದ್ದರು
ಇವರು ಪತ್ರಿಕೆಗಳಿಗೆ ಬರೆದ ಸಣ್ಣ ಕಥೆಗಳ ೯ ಸಂಕಲನಗಳಲ್ಲಿ ಸಂಕಲಿತಗೊಂಡಿದ್ದು, ಸಮಗ್ರ ಕಥೆಗಳು ೨ ಸಂಪುಟಗಳಲ್ಲಿ ಪ್ರಕಟವಾಗಿವೆ.
Dr. Na D’souza ನಾ. ಡಿಸೋಜರವರು
ಲೋಕೋಪಯೋಗಿ ಇಲಾಖೆಯಲ್ಲಿ
ಉದ್ಯೋಗಕ್ಕೆ ಸೇರಿದ್ದರು. ಟೈಪಿಸ್ಟ್ ಮತ್ತು ದ್ವಿತೀಯ ದರ್ಜೆ ಗುಮಾಸ್ತನಾಗಿ. ನಂತರ ಪ್ರಥಮ ದರ್ಜೆ ಗುಮಾಸ್ತರಾಗಿ ಶರಾವತಿ ಯೋಜನೆ ಕಾರ್ಗಲ್, ಮಾಸ್ತಕಟ್ಟೆ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿ ಕಾರ್ಯನಿರ್ವಹಿಸಿ 1995 ರಲ್ಲಿ ನಿವೃತ್ತಿಹೊಂದಿದ್ದರು.
ಸುರೇಶ್ ಹೆಬ್ಲೀಕರ್‌ರವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ‘ದ್ವೀಪ (ಚಲನಚಿತ್ರ)’, ಸಿರಿಗಂಧ ಶ್ರೀನಿವಾಸಮೂರ್ತಿಯವರ ನಿರ್ದೇಶನದಲ್ಲಿ ‘ಬಳುವಳಿ’, ಕೋಡ್ಲು ರಾಮಕೃಷ್ಣರವರ ನಿರ್ದೇಶನದಲ್ಲಿ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನುರವರ ನಿರ್ದೇಶನದಲ್ಲಿ ‘ಆಂತರ್ಯ’ ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ. ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ , ‘ದ್ವೀಪ’ ಚಿತ್ರ ‘ಸ್ವರ್ಣ ಕಮಲ’ ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ
Shimoga Election ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪ್ರಕಟ
Shimoga Election 113- ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅರ್ಹತಾ ದಿನಾಂಕ: 01-01-2025 ರ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 06-01-2025 ರಂದು ಮಾನ್ಯ ಭಾರತ ಚುನಾವಣಾ ಆಯೋಗದ ನಿರ್ದೇಶಾನುಸಾರ ಪ್ರಕಟಿಸಲಾಗುತ್ತದೆ.
ಮತದಾರರು ತಮ್ಮ ಹೆಸರನ್ನು ಒಂದು ಮತಗಟ್ಟೆಯಿಂದ ಇದೇ ಕ್ಷೇತ್ರದ ಮತ್ತೊಂದು ಮತಗಟ್ಟೆಗೆ ವರ್ಗಾವಣೆಗಾಗಿ ಹಾಗೂ ಮರಣ ಮತ್ತಿತರ ಕಾರಣಗಳಿಂದ ಮತದಾರರು ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕುವ ಬಗ್ಗೆ ಈ ಹಿಂದೆ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ಭಾವಚಿತ್ರ ಸಹಿತ ಹೆಸರುಗಳುಳ್ಳ ಮತದಾರರ ಪಟ್ಟಿಯನ್ನು ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರಕಟಿಸಲಾಗುತ್ತದೆ.
Shimoga Election ಮತದಾರರು ತಮ್ಮ ಹೆಸರುಗಳನ್ನು ತಮ್ಮ ಮತಗಟ್ಟೆ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲಿಸಿಕೊಳ್ಳಲು 113 ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಮತದಾರರು ನೋಂದಣಾಧಿಕಾರಿ ಹಾಗೂ ಮಹಾನಗರಪಾಲಿಕೆ ಆಯುಕ್ತರು ಕೋರಿದ್ದಾರೆ.
CM Siddaramaiah ನ್ಯಾಯಾಲಯದ ತೀರ್ಪು ಬಂದ ನಂತರವೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ – ಸಿದ್ದರಾಮಯ್ಯ
CM Siddaramaiah ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ.
- ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.
- ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಎಂದು ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
CM Siddaramaiah ಕಲಾಕೃತಿ ಕೊಂಡು ಕಲಾವಿದರಿಗೆ ಬೆಂಬಲ ನೀಡಿ- ಸಿದ್ಧರಾಮಯ್ಯ
CM Siddaramaiah ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ. ಎಂದು ಮುಖ್ಯ ಮಂತ್ತಿ ಸಿದ್ಧರಾಮಯ್ಯ
ಹೇಳಿದ್ದಾರೆ.
22 ನೇ ಚಿತ್ರಕಲಾ ಪರಿಷತ್ ಚಿತ್ರಸಂತೆ ಉದ್ಘಾಟಿಸಿ ಮಾತನಾಡುತ್ತಿದ್ದರು.
ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ದೇಶ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರಕಲಾ ಪರಿಷತ್ತು ಮಾಡುತ್ತಿದೆ. ಚಿತ್ರಸಂತೆ ಆಯೋಜಿಸಿರುವ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆಗಳು.
ಚಿತ್ರಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ. ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರಸಂತೆ ನಡೆಯುವುದು ಹೆಮ್ಮೆಯ ಸಂಗತಿ.
ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ, ಆಸಕ್ತರಿಗೆ ಕೊಳ್ಳುವ ಅವಕಾಶವನ್ನೂ ಚಿತ್ರಸಂತೆ ಒದಗಿಸುತ್ತಿದೆ. ಒಂದು ದಿನಕ್ಕೆ ನಾಲ್ಕು ಲಕ್ಷ ಜನರು ಭೇಟಿ ನೀಡುತ್ತಾರೆ. ಬೆಂಗಳೂರಿಗರಿಗೆ ಇದೊಂದು ಸುವರ್ಣಾವಕಾಶ.
CM Siddaramaiah ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮ ಗಾಂಧಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ಮಾಡುತ್ತಿದೆಎಂದು ಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ. ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತಾಗುತ್ತದೆ.
ಸಂವಿಧಾನದ ಪೀಠಿಕೆಯನ್ನು ಕೂಡ ಇಲ್ಲಿ ಪ್ರದರ್ಶಿಸಲಾಗಿದ್ದು, ಸಮಾಜದ ಎಲ್ಲಾ ವರ್ಗದ ಜನರನ್ನೂ ಪ್ರತಿನಿಧಿಸುತ್ತಿದೆ. ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿಯಾಗಿದೆ. ಚಿತ್ರದ ಮೂಲಕ ಜನಜೀವನ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸಬಹುದಾಗಿದೆ. ಚಿತ್ರಕಲಾ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳು ಪರಿಷತ್ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Bhadra Dam ನೀರಾವರಿ ರೈತರಿಗೆ ಗುಡ್ ನ್ಯೂಸ್.ಇನ್ನು 120 ದಿನ ಭದ್ರಾ ಎಡದಂಡೆ ನಾಲೆ ಓಪನ್
ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಂಶುಮಂತ್ ಅವರು ಹೇಳಿದರು.
ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿಯ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ರೈತ ಮುಖಂಡರುಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಭದ್ರಾ ಅಚ್ಚುಕಟ್ಟು ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ರೈತರ ಹಿತ ಕಾಯುವ ಬಹುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದವರು ತಿಳಿಸಿದರು.
Bhadra Dam ಮುಂದಿನ 100 20 ದಿನಗಳ ಕಾಲ ಭದ್ರಾ ಎಡದಂಡೆ ನಾಲಿಗೆ ಇಂದಿನಿಂದಲೇ ಹಾಗೂ ಜನವರಿ 8ರ ನಂತರ ನಿರಂತರವಾಗಿ ನೀರುಹರಿಸಲಾಗುವುದು ಎಂದ ಅವರು, ಈ ಸಂಬಂಧ ಈಗಾಗಲೇ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳ ರೈತರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಆತಂಕಕ್ಕೆ ಒಳಗಾಗದಿರುವಂತೆ ಅವರು ಮನವಿ ಮಾಡಿದರು.
ಇಂದು ನಡೆದ 86ನೇ ನೀರಾವರಿ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ರೈತರು ತಮ್ಮ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದ ಅವರು, ಮಂಡಳಿಯು ರೈತರ ಅನುಕೂಲಕ್ಕಾಗಿ ಹಾಗೂ ರೈತರ ಹಿತ ಕಾಯುವ ನಿಟ್ಟಿನಲ್ಲಿ ಸಕಾಲಿಕ ನಿರ್ಣಯ ಕೈಗೊಂಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಸಕಾಲಿಕವಾಗಿ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದವರು ನುಡಿದರು.
ಪ್ರಸ್ತುತ ಜಲಾಶಯದಲ್ಲಿ 66. 96 ಟಿಎಂಸಿ ನೀರಿನಾ ಲಭ್ಯತೆ ಇದ್ದು ಮುಂದಿನ 120 ದಿನಗಳ ಅವಧಿಯಲ್ಲಿ 32 ಟಿಎಂಸಿ ನೀರು ಹರಿಸಲಾಗುವುದು. ನೀರಿನ ಮಿತ ಹಾಗೂ ಸದ್ಬಳಕೆಯ ಕುರಿತಂತೆ ಕಾಲಕಾಲಕ್ಕೆ ಅಧಿಕಾರಿಗಳ, ತಜ್ಞರ, ರೈತ ಮುಖಂಡರು ಉಪಸ್ಥಿತಿಯಲ್ಲಿ ಸಭೆ ಕರೆದು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದವರು ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀಮತಿ ಬಲ್ಕಿಶ್ ಬಾನು, ಕಾಡ ಆಡಳಿತ ಅಧಿಕಾರಿ ಸತೀಶ್, ತಾಂತ್ರಿಕ ಅಧಿಕಾರಿ ಪ್ರಶಾಂತ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Yuva Nidhi Scheme ಯುವನಿಧಿ ಗೆ ನೋಂದಣಿ ಪ್ರಕ್ರಿಯೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ
Yuva Nidhi Scheme ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು
ದಿ: 06-01-2025 ರಿಂದ 20-01-2025 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ.
ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹೆಯಾನ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ.
Yuva Nidhi Scheme ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮುಂದಿನ ಕಂತು ಪಾವತಿಸಲಾಗುವುದು.
ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಇದರ ಜೊತೆಗೆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಯುವನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಅರ್ಹರು ತಾವು ವಿದ್ಯಾಭ್ಯಾಸ ಮಾಡಿದಂತಹ ಅಥವಾ ಹತ್ತಿರದ ಕಾಲೇಜು/ಪಾಲಿಟೆಕ್ನಿಕ್‌ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರ್ ಹೊಂದಿರತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪ್ರಥಮ ದರ್ಜೆ ಕಾಲೇಜು/ಪಾಲಿಟೆಕ್ನಿಕ್ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂ.ಸಂ: 08182-255293 ನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.
Rekha Ranganath ಜೆಸಿಐ ಭಾವನಾ ಅಧ್ಯಕ್ಷರಾಗಿ ರೇಖಾ ರಂಗನಾಥ್ ಆಯ್ಕೆ
Rekha Ranganath 2025ನೇ ಸಾಲಿನ ಜೆಸಿಐ ಶಿವಮೊಗ್ಗ ಭಾವನದ 26ನೇ ಅಧ್ಯಕ್ಷರಾಗಿ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ , ಹಲವಾರು ಸಂಘ ಸಂಸ್ಥೆಗಳಲ್ಲಿ ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಜೆಸಿ ರೇಖಾ ರಂಗನಾಥ್ ರವರನ್ನು ಜೆ ಸಿ ಐ ಶಿವಮೊಗ್ಗ ಭಾವನದ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿರುತ್ತಾರೆ.
Shivamogga News ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸುತ್ತಿದ್ದಾರೆ-ಇಂದುಮತಿ ಈಶ್ವರ್
Shivamogga News ಶಿವಮೊಗ್ಗ ಉದ್ಯಮ, ಆಹಾರ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡುವ ಅಗತ್ಯವಿದೆ ಎಂದು ಒಕ್ಕಲಿಗರ ಮಹಿಳಾ ವೇದಿಕೆಯ ಸಂಸ್ಥಾಪಕ ಸದಸ್ಯರಾದ ರುಕ್ಮಿಣಿ ಚೆನ್ನಪ್ಪ ಹಾಗೂ ಇಂದುಮತಿ ಈಶ್ವರ್ ಹೇಳಿದರು ಹೇಳಿದರು.
ಪಂಪ ನಗರದ ಗುತ್ತö್ಯಪ್ಪ ಕಾಲೋನಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಅಂತರ ರಾಜ್ಯ ಮಟ್ಟದ ಮಲೆನಾಡು ಮೇಳ2025 ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು.
ಲಕ್ಷ್ಮೀ ಪುಟ್ಟಯ್ಯ ಹೆಗ್ಡೆ ಮಾತನಾಡಿ, ಇಂತಹ ಮೇಳಗಳ ಆಯೋಜನೆಯಿಂದ ಸಮಾಜದ ಎಲ್ಲರೊಂದಿಗೆ ಓಡನಾಟ ಸಂಪರ್ಕ ಹೆಚ್ಚಲಿದ್ದು, ಆರ್ಥಿಕವಾಗಿ ಸಬಲರಾಗುತ್ತಾರೆ ಎಂದರು.
ಸಂಘದ ಅಧ್ಯಕ್ಷೆ ಅರ್ಚನಾ ಮಲ್ಲಿಕಾರ್ಜುನ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ಮಲೆನಾಡು ಮೇಳ ಆಯೋಜಿಸಿದ್ದು, ಈ ಮೇಳದಲ್ಲಿ ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗು ಮಾಂಸಾಹಾರಿ ತಿನುಸುಗಳ ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ ಈ ಬಾರಿಯ ತುಂಬಾ ವಿಶೇಷ ಅಂದರೆ ವಾರಣಾಸಿಯಿಂದ ವಿಶೇಷ ಬನಾರಸ್ಸು ಸ್ಯಾರಿ ಅಂಗಡಿಯವರು ಮಳಿಗೆ ಹಾಕಿರುವುದು ತುಂಬಾ ವಿಶೇಷವಾಗಿದೆ ಎಂದು ನುಡಿದರು .
Shivamogga News ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ರಾದ ಜಿ.ವಿಜಯ್‌ಕುಮಾರ್ ಮಾತನಾಡಿ, ಮಹಿಳೆಯರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಸಾಧನೆ ಮಾಡುತ್ತಿದ್ದು, ಕುಟುಂಬ, ಸ್ನೇಹಿತ ವರ್ಗ ಹಾಗೂ ಎಲ್ಲರ ಸಹಕಾರದಿಂದ ಇನ್ನಷ್ಟು ಸಾಧನೆ ಮಾಡಬೇಕು ಎಂದು ಆಶಿಸಿದರು.
ಬೆಂಗಳೂರು, ಬೇಲೂರು, ಕೊಪ್ಪ, ಶೃಂಗೇರಿ, ಜಯಪುರ, ತರೀಕೆರೆ, ಭದ್ರಾವತಿ, ಸಾಗರ, ತೀರ್ಥಹಳ್ಳಿ. ವಾರಣಾಸಿ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ಸ್ಟಾಲ್‌ಗಳನ್ನು ಹಾಕಿದ್ದರು. ಮನೆಯಲ್ಲಿ ತಯಾರಿಸಿದ ಹಿಟ್ಟು ಉಂಡೆ, ಹುಲ್ಲಿಂದ ತಯಾರಿಸಿದ ಬುಟ್ಟಿಗಳು, ಮನೆಯಲ್ಲಿ ತಯಾರಿಸಿದ ತಿಂಡಿಗಳು. ವೈನ್. ಕೇಕ್ ಬಹಳ ದೊಡ್ಡ ಸಾಂಪ್ರದಾಯಿಕ ಉಡುಗೆ ತೊಡುಗೆಗಳು.ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಸ್ಟಾಲ್‌ಗಳು ಇದ್ದವು.
ಕಾರ್ಯದರ್ಶಿ ಶೃತಿ ಗೌತಮ್, ಖಜಾಂಜಿ ಆಶ್ರಿಕಾ ದೀಪಕ್ ಹೆಗಡೆ ಸುಪ್ರಿಯಾ ರಾಮಪ್ಪ, ಅಂಜು ಸುರೇಶ್, ಶೈಲಾ ವಾಸುದೇವ್, ಅರ್ಚನಾ, ಪ್ರಭಾ ಶ್ರೀನಾಥ್. ಲೀಲಾವತಿ ಟೀಕಪ್ಪ. ಗೀತಾ ದೇವದಾಸ್ ಕಲ್ಪನಾ, ಹಾಗೂ. ಇನ್ನರ್ವಿಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಕಾರ್ಯಕಾರಿ ಸಮಿತಿಯವರು ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.
