Thursday, March 19, 2026
Thursday, March 19, 2026
Home Blog Page 449

Youth Hostel Association of India ಉತ್ತಮ ಸಮಾಜ ಕಾರ್ಯ ಜನರ ಮನಸ್ಸಿನಲ್ಲಿ ಉಳಿಯುತ್ತದೆ- ಎನ್.ಗೋಪಿನಾಥ್

0

Youth Hostel Association of India ಜೀವನದಲ್ಲಿ ನಾವು ಮಾಡಿದ ಉತ್ತಮ ಸೇವಾ ಕಾರ್ಯಗಳು ಸದಾ ಜನರ ಮನಸ್ಸಿನಲ್ಲಿ ನೆನಪಿನಲ್ಲಿ ಉಳಿಯುತ್ತವೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ವಾಗೀಶ್ ಅವರು ವೃತ್ತಿ ಜೀವನದ ಜತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವುದರ ಮುಖಾಂತರ ಜನರಿಗೆ ಹೆಚ್ಚು ಪರಿಚಿತರು. ನಿವೃತ್ತಿ ನಂತರ ಅವರ ಸೇವೆ ಇನ್ನೂ ಸಮಾಜಕ್ಕೆ ಹೆಚ್ಚು ಸಿಗಲಿ ಎಂದು ಹಾರೈಸಿ ಸನ್ಮಾನಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ, ಯೂತ್ ಹಾಸ್ಟೆಲ್ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ವಾಗೀಶ್ ಅವರು ಯೂತ್ ಹಾಸ್ಟೆಲ್, ಸೈಕಲ್ ಕ್ಲಬ್, ಕರ್ನಾಟಕ ಸಂಘ. ವಿಕಾಸ ರಂಗ ಹಾಗೂ ರೋಟರಿ ಸಂಸ್ಥೆಗಳಲ್ಲಿ ನಿರಂತರವಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತ ಬಂದಿದ್ದಾರೆ. ನಿವೃತ್ತಿ ಜೀವನದ ನಂತರ ಇವರ ಸೇವೆ ಸಮಾಜಕ್ಕೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ದೊರಕಲಿ ಎಂದು ಅಭಿನಂದಿಸಿದರು.
Youth Hostel Association of India ಸನ್ಮಾನ ಸ್ವೀಕರಿಸಿ ವಾಗೀಶ್ ಮಾತನಾಡಿ, ಎಲ್ಲರಿಗೂ ಜೀವನ ಕಟ್ಟಿಕೊಳ್ಳಲು ಉದ್ಯೋಗ ಬೇಕು. ರಾಜ್ಯ ಹಣಕಾಸು ಸಂಸ್ಥೆ ನನಗೆ ಪ್ರಾರಂಭದಲ್ಲಿ ದಿನಗೂಲಿ ನಂತರ ಖಾಯಂ ಉದ್ಯೋಗ ನೀಡಿ ಸಹಕರಿಸಿದ್ದರಿಂದ ಉತ್ತಮ ಜೀವನ ನಡೆಸಲು ಅನುಕೂಲವಾಯಿತು. ಸಮಾಜ ಸೇವೆ ಮಾಡಲು ಸಹಕಾರಿಯಾಯಿತು. ಸಂಸ್ಥೆ ಅಧಿಕಾರಿಗಳು, ಸಹದ್ಯೋಗಿಗಳ ಮಾರ್ಗದರ್ಶನದಿಂದ ಪ್ರವರ್ತಕರು ಸಂತೃಪ್ತಿಯಿಂದ ನಮ್ಮ ಕಾರ್ಯ ಶ್ಲಾಘಿಸಿದ್ದಾರೆ. ಇದರಿಂದ ಸಮಾಜದ ಹಲವಾರು ಸಂಘಟನೆಯಲ್ಲಿ ಕೆಲಸ ಮಾಡಲು ಅವಕಾಶ ದೊರೆತಿದೆ. ವ್ಯಕ್ತಿಗತವಾಗಿ ಗುರುತಿಸಿಕೊಳ್ಳಲು ಸಾದ್ಯವಾಗಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ಹಾಗೂ ಎಲ್ಲಾ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಸುರೇಶ್ ಕುಮಾರ್, ನಿರ್ದೇಶಕರಾದ ಮಲ್ಲಿಕಾರ್ಜುನ್ ಕಾನೂರು, ಮಮತಾ, ಡಾ. ಗುರುಪಾದಪ್ಪ, ದಿಲೀಪ್ ನಾಡಿಗ್, ವೇಣುಗೋಪಾಲ್, ಗೋಪಿನಾಥ್, ರವಿಕುಮಾರ್, ನಾಗಲಾಬಿಕಾ, ಬಿಂದು ವಿಜಯಕುಮಾರ್, ರೇವಣ್ಣ, ಭಾರತಿ, ಮಮತ ಉಪಸ್ಥಿತರಿದ್ದರು.

Shimoga District Chamber of Commerce & Industry ಜಿಲ್ಲಾ ವಾಣಿಜ್ಯ & ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

0

Shimoga District Chamber of Commerce & Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಸಂಸ್ಥೆಗೆ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
ಮಾಜಿ ಅಧ್ಯಕ್ಷರಾದ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್, ಎನ್.ಗೋಪಿನಾಥ್ ಅವರಿಗೆ ಸನ್ಮಾನಿಸಲಾಯಿತು.
Shimoga District Chamber of Commerce & Industry ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಎಫ್‌ಕೆಸಿಸಿಐ ಉಪಾಧ್ಯಕ್ಷ ಟಿ.ಸಾಯಿರಾಂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ಮತ್ತಿತರರಿದ್ದರು.

Department of School Education and Literacy ಎಸ್ಎಸ್ಎಲ್ ಸಿ & ಪಿಯು ಪರೀಕ್ಷೆಗಳಲ್ಲಿ ಹೆಚ್ಚಿನ ಫಲಿತಾಂಶ ನಿರೀಕ್ಷೆ ಸಚಿವ ಮಧುಬಂಗಾರಪ್ಪ ವಿಡಿಯೋ ಕಾನ್ಫರೆನ್ಸ್

0

Department of School Education and Literacy ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ “ಪ್ರಗತಿ ಪರಿಶೀಲನಾ ಸಭೆ” ನಡೆಸಿ, ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು (ಆಡಳಿತ, ಅಭಿವೃದ್ಧಿ, ಪದವಿ ಪೂರ್ವ) ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆ” ಸೇರಿದಂತೆ ಇನ್ನೂ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

“ಸಭೆಯಲ್ಲಿ ಚರ್ಚಿಸಲಾದ ವಿಷಯಗಳು”

ಸರ್ಕಾರಿ ಶಾಲೆಗಳ/ಕಾಲೇಜುಗಳ ಕೊಠಡಿಗಳ ನಿರ್ಮಾಣ,ದುರಸ್ತಿ

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಕುರಿತು.

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.

Department of School Education and Literacy ಶಿಕ್ಷಕರ ನೇಮಕಾತಿ ಕುರಿತು.

ಉಚಿತ CET, NEET ಹಾಗೂ JEE ವಿಶೇಷ ಕೋಚಿಂಗ್‌ ತರಬೇತಿ ಪ್ರಗತಿ ವಿವರದ ಕುರಿತು.

2025 ನೇ ಸಾಲಿನ SSLC ಹಾಗೂ PUC ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಸೇರಿದಂತೆ ಶಿಕ್ಷಣ ಇಲಾಖೆಗೆ ಇನ್ನಿತರ ಅನೇಕ ಅಭಿವೃದ್ಧಿ ವಿಚಾರಗಳ ಕುರಿತು ವಿಡಿಯೋ ಸಂವಾದದ ಮೂಲಕ ಚರ್ಚಿಸಿಲಾಯಿತು.

ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ಪದವಿಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ಎಂ. ಕುರ್ಮರಾವ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Department of School Education ಆಧಾರ್ ಕಾರ್ಡ್ & ಶಾಲಾ ದಾಖಲಾತಿ ಮಾಹಿತಿಗಳಲ್ಲಿ ವ್ಯತ್ಯಾಸಗಳಿಲ್ಲದೆ ಏಕರೀತಿ ಇರಲಿ- ಎನ್.ಹೇಮಂತ್

0

Department of School Education ವಿದ್ಯಾರ್ಥಿಯ ಸಂಪೂರ್ಣ ವಿವರವುಳ್ಳ ‘ಅಪಾರ್’ ಯುನಿಕ್ ಗುರುತಿನ ಚೀಟಿ ಪಡೆಯಲು ಹಾಗೂ ಇತರೆ ಸೇವೆ-ಸೌಲಭ್ಯ ಪಡೆಯಲು ವಿದ್ಯಾರ್ಥಿಗಳ ಆಧಾರ್ ಏಕರೂಪತೆ ಅತಿ ಅವಶ್ಯಕವಾಗಿರುವುದರಿಂದ ವಿದ್ಯಾರ್ಥಿಗಳ ಬೃಹತ್ ಆಧಾರ್ ತಿದ್ದುಪಡಿ ಆಂದೋಲನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಓ ಹೇಮಂತ್ ಎನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್‌ಸಿ ಸರ್ವೀಸಸ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಸರ್ಕಾರಿ ಪ್ರೌಢಶಾಲೆ ಕಾಚಿನಕಟ್ಟೆಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳ ಮಾಹಿತಿಯು ಶಾಲೆಗಳಲ್ಲಿ ಹಾಗೂ ಆಧಾರ್ ಕಾರ್ಡ್ನಲ್ಲಿ ಒಂದೇ ರೀತಿಯಾಗಿರಬೇಕು. ಹೆಸರು, ತಂದೆ ಹೆಸರು, ಇತರೆ ಮಾಹಿತಿ ವ್ಯತ್ಯಾಸ ಇರಬಾರದು. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಆಧಾರ್ ತಿದ್ದುಪಡಿ ಅನುಕೂಲಕಾರಿಯೂ ಆಗಿರುತ್ತದೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಎಲ್ಲ ವಿವರಗಳುಳ್ಳ ಯುನಿಕ್ ಗುರುತಿನ ಚೀಟಿಯಾದ ‘ಅಪಾರ್’ ನ್ನು ನೀಡುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳ ಸಕಲ ಮಾಹಿತಿ ಲಭ್ಯವಾಗಲಿದೆ. ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆ, ಬೇರೆ ಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಸಂದರ್ಭ ಒದಗಿ ಬಂದಾಗ ಈ ಅಪಾರ್ ಕಾರ್ಡ್ ಅನುಕೂಲವಾಗುತ್ತದೆ. ಒಂದು ಬಾರಿ ಈ ಕಾರ್ಡ್ನಲ್ಲಿ ಶಾಲಾ ದಾಖಲಾತಿಗಳಾದ ವರ್ಗಾವಣೆ ಪ್ರಮಾಣ ಪತ್ರ, ಅಂಕಪಟ್ಟಿಗಳು ಅಪ್‌ಲೋಡ್ ಮಾಡಿದರೆ ಸಾಕು ಮಕ್ಕಳು ಉನ್ನತ ವಿದ್ಯಾಭ್ಯಾಸಕ್ಕೆ ಯಾವುದೇ ಶಿಕ್ಷಣ ಸಂಸ್ಥೆಗೆ ಸೇರ್ಪಡೆಗೊಂಡರೂ ಈ ಕಾರ್ಡ್ ಮೂಲಕ ಸುಲಭವಾಗಿ ತಮ್ಮ ಮೂಲ ದಾಖಲಾತಿಗಳು ಪಡೆಯಬಹುದು. ಈ ಅಪಾರ್ ನೋಂದಣಿ ಮಾಡಲು ಆಧಾರ್ ಮತ್ತು ಶಾಲಾ ದಾಖಲಾತಿ ಏಕರೂಪದಲ್ಲಿ ಇರಬೇಕು. ಹಾಗೂ ಸ್ಯಾಟ್ಸ್ ಸೇರಿದಂತೆ ಇತರೆ ಕಾರ್ಯಗಳಲ್ಲಿಯೂ ಆಧಾರ್ ಕಾರ್ಡ್ ಹಾಗೂ ಶಾಲಾ ಮಾಹಿತಿ ಏಕರೂಪದಲ್ಲಿರಬೇಕು. ಈ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಥಮವಾಗಿ ಈ ಅಭಿಯಾನ ಆರಂಭಗೊಂಡಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು.

ತಾಲ್ಲೂಕಿನ ಸುಮಾರು 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಮಾಹಿತಿಯನ್ನು ತಿದ್ದುಪಡಿ ಮಾಡುವ ಅಗತ್ಯವಿದೆ. ರಾಜ್ಯ ಸರ್ಕಾರದಿಂದ 5 ಜನರ ತಂಡ ಆಗಮಿಸಿದ್ದು ಈ ಕೆಲಸ ನಿರ್ವಹಿಸಲಿದೆ ಎಂದ ಅವರು ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿಗಳು ಈಗಿನಿಂದಲೇ ಪರಿಶ್ರಮದಿಂದ ಓದಿ, ಉತ್ತಮ ಅಂಕಗಳೊಂದಿಗೆ ಉತ್ತಮ ಫಲಿತಾಂಶ ಪಡೆಯಬೇಕು ಹಾಗೂ ಎಲ್ಲ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಮುಂದೆ ಬರಬೇಕೆಂದು ಹಾರೈಸಿದರು.

Department of School Education ಶಿವಮೊಗ್ಗ ಬಿಇಓ ರಮೇಶ್ ಸ್ವಾಗತಿಸಿ ಮಾತನಾಡಿ, ಶಿವಮೊಗ್ಗ ತಾಲ್ಲೂಕಿನಲ್ಲಿ ಸುಮಾರು 90 ಸಾವಿರ ವಿದ್ಯಾಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಮಾಹಿತಿಯು ಶಾಲೆಗಳಲ್ಲಿ ಹಾಗೂ ಆಧಾರ್ ಕಾರ್ಡ್ನಲ್ಲಿ ಏಕರೂಪದಲ್ಲಿರುವುದು ಕಡ್ಡಾಯವಾಗಿದ್ದು ವಿದ್ಯಾರ್ಥಿಗಳ ಮಾಹಿತಿಯನ್ನು ತಿದ್ದುಪಡಿ ಮಾಡುವ ಅಗತ್ಯವಿದೆ. ಇದರಿಂದ ವಿದ್ಯಾರ್ಥಿಗಳು ಅಪಾರ್ ಐಡಿ, ಇತರೆ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ.

ಆಂದೋಲನವನ್ನು ವೇಳಾಪಟ್ಟಿಯನ್ವಯ ತಾಲ್ಲೂಕಿನ 32 ಕ್ಲಸ್ಟರ್‌ವಾರು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ದೃಷ್ಟಿಯಿಂದ ಸಂಖ್ಯಾನುಸಾರ ಸಮೀಪದ ಶಾಲೆಗಳಲ್ಲಿ ತಿದ್ದುಪಡಿ ಮಾಡುವ ಕಾರ್ಯ ಯೋಜನೆ ರೂಪಿಸಲಾಗಿದೆ. ಆ ಮೂಲಕ ತಾಲ್ಲೂಕಿನ ಎಲ್ಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಮಾಡುವ ಗುರಿ ಹೊಂದಲಾಗಿದೆ. ಇದರಿಂದಾಗಿ ಶಾಲಾ ವಿದ್ಯಾರ್ಥಿಗಳ ಆಧಾರ್‌ನ ಮಾಹಿತಿ ಶಾಲಾ ಮಾಹಿತಿಗಳು ಏಕರೂಪವಾಗಿಸುವ ಮೂಲಕ ಶಾಶ್ವತ ಪರಿಹಾರ ಕೈಗೊಳ್ಳುವ ಉದ್ದೇಶ ಹೊಂದಲಾಗಿದೆ. ಈ ಪ್ರಕ್ರಿಯೆಯಲ್ಲಿ ಶಾಲಾವಾರು ಅನ್ವಯಿಸಲ್ಪಡುವ ವಿದ್ಯಾರ್ಥಿಗಳ ಪೋಷಕರಿಂದ ಲಿಖಿತ ಅನುಮತಿ ಪಡೆಯುವ ಮೂಲಕ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಮಾಡಲಾಗುವುದು. ಆಧಾರ್ ತಿದ್ದುಪಡಿಗೆ ರೂ.100 ಮತ್ತು ಅಪ್ ಡೇಟ್ ಮಾಡಲು ರೂ.50 ಶುಲ್ಕವಿರುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಆಧಾರ್ ಮತ್ತು ಶಾಲಾ ಮಾಹಿತಿ ಏಕರೂಪಗೊಳಿಸಲು ಆಧಾರ್ ತಿದ್ದುಪಡಿ ಆಂದೋಲನ ಏರ್ಪಡಿಸಿದ್ದು ಅವಶ್ಯಕತೆ ಇರುವ ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದರು.

ಕಾರ್ಯಕ್ರಮದಲ್ಲಿ ಸಿಎಸ್‌ಸಿ ಸರ್ವೀಸಸ್ ಇಂಡಿಯಾ ಲಿಮಿಟೆಡ್ ಮುಖ್ಯಸ್ಥ ಮಂಜುನಾಥ್ ರೋಣದ್, ಶಿಕ್ಷಣ ಅಧಿಕಾರಿ ನಿರಂಜನಮೂರ್ತಿ, ಕಾಚಿನಕಟ್ಟೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಂಡರಿನಾಥ್, ಸಹ ಶಿಕ್ಷಕರಾದ ಅಶೋಕ್, ಇತರೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Shivamogga Police ಕುಮಟಾದಿಂದ ಮಹಿಳೆ ನಾಪತ್ತೆ ಪ್ರಕರಣ ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಕಟಣೆ

0

Shivamogga Police ಉತ್ತರ ಕನ್ನಡ ಜಿಲ್ಲೆ ಕುಮಟಾ ನಗರದ ವಾಸಿ ಮಹಾದೇವ ಭೋವಿ ಎಂಬುವವರ ಪತ್ನಿ 30 ವರ್ಷದ ಹೊನ್ನಮ್ಮ ಎಂಬುವವರು 8 ವರ್ಷದ ತಮ್ಮ ಮಗಳು ದೀಪ್ತಿಯನ್ನು ಕರೆದುಕೊಂಡು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ನೆಗವಾಡಿ ತಾಂಡದಲ್ಲಿರುವ ತನ್ನ ತಾಯಿಮನೆಗೆ ಬಂದಿದ್ದು, ಡಿಸೆಂಬರ್ 2024 ರಂದು ವಾಪಾಸ್ಸು ಗಂಡನ ಮನೆಗೆಂದು ಹೊರಟವರು ಅಲ್ಲಿಗೆ ಹೋಗದೆ ಕಾಣೆಯಾಗಿದ್ದು, ಈವರೆಗೆ ವಾಪಾಸ್ಸಾಗಿರುವುದಿಲ್ಲ.

Shivamogga Police ಈಕೆಯ ಚಹರೆ 5.4 ಅಡಿ ಎತ್ತರ, ಬಿಳಿ ಮೈಬಣ್ಣ, ದಪ್ಪ ಮೈಕಟ್ಟು ಹೊಂದಿದ್ದು, ಮೈಮೇಲೆ ಕಪ್ಪು ಬಣ್ಣದ ಚೂಡಿದಾರ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು.
ಈ ತಾಯಿ ಮಗಳ ಸುಳಿವು ದೊರೆತಲ್ಲಿ ಜಿಲ್ಲಾ ಪೊಲೀಸ್ ಠಾಣೆ -08182-261413, ಶಿಕಾರಿಪುರ ಪೊಲಿಸ್ ಠಾಣೆ ದೂ.ಸಂ.: 08187-222443, ಸೊರಬ ವೃತ್ತ ಪೊ.ಠಾ 08184-272122/9480803339, ಆನವಟ್ಟಿ ಪೊ.ಠಾ 08184-267135/9480803369 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

National Examinations Board ಇಂದಿನಿಂದ ಆರಂಭವಾಗಲಿರುವ ಯುಜಿಸಿ ನೆಟ್ & ಜೆಇಇ ಇತ್ಯಾದಿ ಪರೀಕ್ಷೆ ನಿರ್ವಹಣೆಗೆ ಆಡಳಿತ ಸಜ್ಜು- ಗುರುದತ್ತ ಹೆಗಡೆ

0

National Examinations Board ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03 ರಿಂದ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.

ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

National Examinations Board ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.
ಪರೀಕ್ಷಾ ಮುನ್ನ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪೋಲಿಸ್ ಉಪ ಅಧೀಕ್ಷಕರಾದ ಕಾರ್ಯಪ್ಪ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ವೆಂಕಟೇಶ್ , ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Veterinary College Shivamogga ಶಿವಮೊಗ್ಗ ಪಶುವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಶನ

0

Veterinary College Shivamogga ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
Veterinary College Shivamogga ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜ.11 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ)ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸುವAತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Upper Bhadra Project ಲಂಚ ಸ್ವೀಕಾರ ಪ್ರಕರಣ. ನೀರಾವರಿ ನಿಗಮ ಸೆಕ್ಷನ್ ಆಫೀಸರ್ & ಲೈಟ್ ಮಜದೂರ್ ಲೋಕಾಯುಕ್ತ ಬಲೆಗೆ

0

Upper Bhadra Project  ಪಿರ್ಯಾದುದಾರರಾದ ಶ್ರೀ.ವಿ.ರವಿ. ಬಿನ್ ನಾಗರಾಜ.ವಿ. 32ವರ್ಷ, ಪಿಡಬ್ಲ್ಯೂಡಿ ಕ್ಲಾಸ್-02, ಕಾಂಟ್ರ್ಯಾಕ್ಟರ್ ಕೆಲಸ, ವಾಸ: ಶೆಟ್ಟಿ ಅಂಗಡಿ ಹತ್ತಿರ. ಕಾಕರ್ಲ ತೋಟ, ಬಳ್ಳಾರಿ ಟೌನ್ ರವರು ಪಿಡಬ್ಲ್ಯೂಡಿ ಕ್ಲಾಸ್-02 ಕಂಟ್ರ್ಯಾಕ್ಟರ್ ಆಗಿ ಕೆಲಸ ಮಾಡಿಕೊಂಡಿರುತ್ತಾರೆ.

ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತ, ಬಿಆರ್‌ಪಿ ವ್ಯಾಪ್ತಿಯ ಭದ್ರಾವತಿ ತಾಲ್ಲೂಕಿನ ಗೋಂಧಿ ಬಲದಂಡೆ ನಾಲೆಯಲ್ಲಿ ಶಿಕ್ಷೆ ತಗೆಯಲು ಇ-ಟೆಂಡರ್ ಕರೆದಿದ್ದು, ಅದರಂತೆ ಪಿರ್ಯಾದಿಗೆ 2023ನೇ ಸಾಲಿನ ಡಿಸೆಂಬರ್ ತಿಂಗಳಲ್ಲಿ ಇ-ಟೆಂಡರ್ ಆಗಿರುತ್ತದೆ.

ಈ ಎರಡು ಕಾಮಗಾರಿಗಳ ಒಟ್ಟು ಮೊತ್ತ ಜಿಎಸ್‌ಟಿ ಸೇರಿ 9,16,999/-ರೂಗಳಾಗಿದ್ದು, ಪಿರ್ಯಾದಿಯು 2023 ನೇ ಡಿಸೆಂಬರ್ ತಿಂಗಳಲ್ಲಿ ಕೆಲಸ ಪ್ರಾರಂಭಿಸಿ, 2024 ನೇ ಜನವರಿ ತಿಂಗಳಲ್ಲಿ ಶಿಲ್ಪ ತಗೆಯುವ ಕಾಮಗಾರಿಯನ್ನು ಮುಕ್ತಾಯ ಮಾಡಿರುತ್ತಾರೆ. ಪಿರ್ಯಾದಿಯು ಕಾಮಗಾರಿಯ ಬಿಲ್ ಅನ್ನು ಮಂಜೂರು ಮಾಡುವಂತೆ ಹಲವಾರು ಬಾರಿ ಕಛೇರಿಗೆ ಹೋಗಿ ಕೇಳಿದ್ದು, ಟೆಂಡರ್ ಹಣ ಬಿಡುಗಡೆ ಮಾಡಿರುವುದಿಲ್ಲ. ದಿನಾಂಕ:-27-12-2024 ರಂದು ಪಿರ್ಯಾದಿಯು ಡಿ.ಬಿ ಹಳ್ಳಿಯ ಕರ್ನಾಟಕ ನೀರಾವರಿ ನಿಮಗ ನಿಯಮಿತ ಕಛೇರಿಗೆ ಹೋಗಿ, ಕಛೇರಿಯಲ್ಲಿದ್ದ ಸೆಕ್ಷನ್ ಆಫೀಸರ್ ಕೊಟ್ರಪ್ಪ,ಟಿ, ರವರನ್ನು ಭೇಟಿ ಮಾಡಿ, ತನ್ನ ಕಾಮಗಾರಿಯ ಬಿಲ್ ಅನ್ನು ಮಂಜೂರು ಮಾಡುವಂತೆ ಕೇಳಿಕೊಂಡಾಗ ಕೊಟ್ರಪ್ಪರವರು ನಿನ್ನ ಬಿಲ್ ಮಂಜೂರು ಮಾಡಬೇಕಾದರೆ ಇನ್ನು 1.20,000/-ರೂಗಳನ್ನು ಕೊಟ್ಟರೆ ಮಾತ್ರ ಮಾಡುತ್ತೇವೆಂದು ಇಲ್ಲದಿದ್ದರೆ ನಿನ್ನ ಕಾಮಗಾರಿಯ ಬಿಲ್ ಹಣವನ್ನು ಬಿಡುಗಡೆ ಮಾಡುವುದಿಲ್ಲವೆಂದು ಪಿರ್ಯಾದಿಗೆ ಹೇಳಿರುತ್ತಾರೆ.

Upper Bhadra Project  ಪಿರ್ಯಾದಿಯು ಅವರು ಮಾತನಾಡಿದ್ದನ್ನು ಪಿಯಾದಿಯ ಮೊಬೈಲ್ ನಲ್ಲಿ ವಾಯ್ಸ್ ರೆಕಾರ್ಡ್ ಮಾಡಿಕೊಂಡಿರುತ್ತಾರೆ. ಪಿರ್ಯಾದಿಗೆ ಲಂಚದ ಹಣವನ್ನು ನೀಡಲು ಇಷ್ಟವಿಲ್ಲದೇ ಇದುದ್ದರಿಂದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತ, ಬಿಆರ್‌ಪಿ ವ್ಯಾಪ್ತಿಯ ಡಿ.ಬಿ. ಹಳ್ಳಿಯ ಸೆಕ್ಷನ್ ಅಫೀಸರ್ ಕೊಟ್ರಪ್ಪ ರವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಸಾರಾಂಶವಾಗಿರುತ್ತದೆ.

ದಿನಾಂಕ:01/01/2025 ರಂದು ಸಂಜೆ 04:30 ಗಂಟೆ ಸಮಯದಲ್ಲಿ ಅಪಾದಿತ ಅಧಿಕಾರಿ ಶ್ರೀ.ಕೊಟ್ರಪ್ಪ ಸೆಕ್ಷನ್ ಆಫೀಸರ್ (ಪ್ರಬಾರ ಎ.ಇ.ಇ) ಮತ್ತು ಅವರ ಕಛೇರಿಯ ಲೈಟ್ ಮಜದೂರ್ ಶ್ರೀ.ಅರವಿಂದ್ ರವರು ಪಿರಾದುದಾರರಿಂದ ರೂ 1,20,000/-ಲಂಚದ ಹಣವನ್ನು ಅವರ ಕಛೇರಿಯಲ್ಲಿ ಸ್ವೀಕರಿಸಿದ್ದು, ಸದರಿ ಆಪಾದಿತ ಸರ್ಕಾರಿ ನೌಕರರನ್ನು ಟ್ರ್ಯಾಪ್ ಮಾಡಲಾಗಿರುತ್ತದೆ. ಮತ್ತು ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದು ಪ್ರಕರಣದ ತನಿಖೆಯನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ವೀರಬಸಪ್ಪ.ಎಲ್.ಕುಸಲಾಪುರ ರವರು ಕೈಗೊಂಡರು.

ಸದರಿ ಟ್ರ್ಯಾಪ್ ಕಾರ್ಯಾಚರಣೆಯನ್ನು ಶ್ರೀ.ಮಂಜುನಾಥ ಚೌದರಿ ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರ ನೇತೃತ್ವದಲ್ಲಿ ನಡೆಸಲಾಗಿದ್ದು ಟ್ರ್ಯಾಪ್ ಕಾಲಕ್ಕೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಹೆಚ್.ಎಸ್ ಸುರೇಶ್, ಶ್ರೀ.ಪ್ರಕಾಶ್, ಸಿಬ್ಬಂದಿಯವರಾದ ಶ್ರೀ.ಯೋಗೇಶ್ ಸಿ.ಹೆಚ್.ಸಿ. ಶ್ರೀ.ಟೀಕಪ್ಪ ಸಿ.ಹೆಚ್.ಸಿ, ಶ್ರೀ.ಸುರೇಂದ್ರ ಸಿ.ಹೆಚ್.ಸಿ, ಶ್ರೀ.ಮಂಜುನಾಥ್ ಎಂ. ಶ್ರೀ.ಪ್ರಶಾಂತ್ ಕುಮಾರ್, ಸಿ.ಪಿ.ಸಿ, ಶ್ರೀ ಚೆನ್ನೇಶ್, ಸಿ.ಪಿ.ಸಿ ಶ್ರೀ.ಅರುಣ್ ಕುಮಾರ್ ಸಿ.ಪಿ.ಸಿ, ಶ್ರೀ ದೇವರಾಜ್, ಸಿ.ಪಿ.ಸಿ ಶ್ರೀ ಪ್ರಕಾಶ್, ಸಿ.ಪಿ.ಸಿ ಶ್ರೀ ಆದರ್ಶ ಸಿ.ಪಿ.ಸಿ ಶ್ರೀಮತಿ ಪುಟ್ಟಮ್ಮ.ಎನ್. ಮ.ಪಿ.ಸಿ, ಶ್ರೀಮತಿ ಅಂಜಲಿ ಮ.ಪಿ.ಸಿ ಶ್ರೀ ಗಂಗಾಧರ ಎ.ಪಿ.ಸಿ. ಶ್ರೀ ಪ್ರದೀಪ್, ಎ.ಪಿ.ಸಿ ರವರು ಹಾಜರಿದ್ದರು.

Rotary Club Shivamogga ಪ್ರತಿಯೊಬ್ಬರಿಗೆ ಆರೋಗ್ಯ ನಿಜವಾದ ಸಂಪತ್ತು-ಕಿರಣ್ ಕುಮಾರ್

0

Rotary Club Shivamogga ಕಾರ್ಮಿಕರು ಒತ್ತಡದ ಜೀವನಶೈಲಿಯಿಂದ ಆರೋಗ್ಯದ ಕಡೆ ಗಮನ ನೀಡುತ್ತಿಲ್ಲ. ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆ ವತಿಯಿಂದ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದ ಎಸ್‌ಎನ್‌ಎಸ್ ಗ್ರೂಪ್ ಆಫ್ ಕಂಪನಿಯಲ್ಲಿ ಆಯೋಜಿಸಿದ್ದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಪ್ರತಿಯೊಬ್ಬರ ಆರೋಗ್ಯವು ನಿಮ್ಮ ನಿಜವಾದ ಸಂಪತ್ತು. ಆದ್ದರಿಂದ ನಿಯಮಿತ ಪರೀಕ್ಷೆಗಳೊಂದಿಗೆ ನೋಡಿಕೊಳ್ಳುವುದು ನಿಮಗೆ ನೀವು ಮಾಡಿಕೊಳ್ಳಬಹುದಾದ ಅತ್ಯುತ್ತಮ ಕೊಡುಗೆ ಆಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯವಾದ ಸಮಯ ಮತ್ತು ಸಂಪನ್ಮೂಲದ ವ್ಯವಸ್ಥೆ ಮಾಡಿದ ಸಂಸ್ಥೆಯ ಮಾಲೀಕರಾದ ಸಹನ, ನಂದನ್ ಹೊಳ್ಳ ಸ್ಪಂದನ್ ಎನ್ ಹೊಳ್ಳ ಚಂದನ್ ಎನ್ ಹೊಳ್ಳ ರವರಿಗೆ ವಿಶೇಷ ಧನ್ಯವಾದ ಎಂದು ತಿಳಿಸಿದರು.
Rotary Club Shivamogga ಎಸ್‌ಎನ್‌ಎಸ್ ಗ್ರೂಪ್‌ನ ಸಹನ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಈ ದಿನ ಕಾರ್ಮಿಕರಿಗೆ ಆರೋಗ್ಯ ಶಿಬಿರ ಏರ್ಪಡಿಸುವುದು ತುಂಬಾ ಸಂತೋಷ ತಂದಿದೆ. ರೋಟರಿ ಸಂಸ್ಥೆ ಮತ್ತು ನಾರಾಯಣ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಧನ್ಯವಾದಗಳು ಎಂದರು.
ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ಕಾರ್ಮಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಂಡರು. ನಾರಾಯಣ ಹೃದಯಾಲಯದ ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನ ಧರ್ಮೇಂದ್ರ ಸಿಂಗ್, ಬಸವರಾಜ್, ಜಯಶೀಲ ಶೆಟ್ಟಿ, ಸಂತೋಷ್, ನಟರಾಜ್, ದೀಪಾ ಶೆಟ್ಟಿ, ಗೀತಾ ಜಗದೀಶ್ ಉಪಸ್ಥಿತರಿದ್ದರು

Child Friendly Gram Panchayats ಸರ್ಕಾರದಿಂದ “ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ” ಅಭಿಯಾನ

0

Child Friendly Gram Panchayats ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.

Child Friendly Gram Panchayats ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / ದೂರುಗಳನ್ನು ʼಮಕ್ಕಳ ದನಿ ಪೆಟ್ಟಿಗೆʼಯ ಮೂಲಕ ಸ್ವೀಕರಿಸಿ, ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಚರ್ಚಿಸಿ ಪರಿಹರಿಸಲಾಗುತ್ತಿದೆ. ಗ್ರಾಮೀಣ ಮಕ್ಕಳ ಅಭ್ಯುದಯಕ್ಕೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ರಾಜ್ಯ ಸರ್ಕಾರವು ಪ್ರಚಾರ ಮಾಹಿತಿಯಲ್ಲಿ ತಿಳಿಸಿದೆ