Thursday, March 19, 2026
Thursday, March 19, 2026
Home Blog Page 450

DIPR Karnataka ರಾಜ್ಯ ಸರ್ಕಾರದಿಂದ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಘೋಷಣೆ

0

DIPR Karnataka ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ.

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ವಿಜೇತರ ವಿವರ ಹೀಗಿದೆ…

ವಿಜಯಲಕ್ಷ್ಮಿ ಶಿಬರೂರು (2017) : ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಅರಣ್ಯ ಸಂರಕ್ಷಣೆ, ಅಪಾಯಕಾರಿ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ಅಪಾಯಗಳು ಮತ್ತಿತರ ಜಾಗೃತಿ ಮೂಡಿಸುವ ವರದಿಗಳನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಬಿತ್ತರಿಸಿದ್ದಾರೆ. ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ.

DIPR Karnataka ಬಿ.ಎಂ.ಟಿ ರಾಜೀವ್ (2018): ಮೂಲತ: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೆನವಾರ ಗ್ರಾಮದವರು, ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಾರತೀಯ ಅರಣ್ಯ ಸೇವೆಯಿಂದ 2006ರಲ್ಲಿ ನಿವೃತ್ತಿ ಹೊಂದಿದ್ದಾರೆ. 1985 ರಿಂದ ವನ್ಯಜೀವಿಗಳು, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಲೇಖನ, ಪ್ರಬಂಧಗಳನ್ನು ಬರೆಯುತ್ತಿದ್ದಾರೆ. ಅರಣ್ಯ/ವನ್ಯಜೀವಿ/ಪರಿಸರದಿಂದ ಮನುಕುಲಕ್ಕಿರುವ ಅನುಕೂಲಗಳು, ಅವಶ್ಯಕತೆಗಳ ಬಗ್ಗೆ ಲೇಖನಗಳನ್ನು ಬರೆದಿದ್ದಾರೆ. ಭಾರತೀಯ ವನ್ಯಪ್ರಾಣಿಗಳ ಕೈಪಿಡಿ, ಪರಿಸರ ಮಾಲಿನ್ಯ ಮತ್ತು ವಾಯುಗುಣ ಬದಲಾವಣೆ ಕುರಿತು ಒಟ್ಟು 6 ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ವಿನೋದಕುಮಾರ್ ಬಿ. ನಾಯ್ಕ (2019) : ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಬ್ಬಿಹಳ್ಳಿ ಗ್ರಾಮದವರು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯಲ್ಲಿ ವಿಶೇಷ ಯೋಜನೆಗಳ ವಿಭಾಗದ ಸಂಪಾದಕರಾಗಿರುವ ಇವರು ವಿವಿಧ ಮಾಧ್ಯಮಗಳಲ್ಲಿ ಸುಮಾರು 23 ವರ್ಷಗಳ ಕಾಲ ವನ್ಯಜೀವಿ ಹಾಗೂ ಪರಿಸರ ಕುರಿತು ಅನೇಕ ಪರಿಣಾಮಕಾರಿ ವರದಿಗಳನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಾದೇಶಿಕ ಮಾಧ್ಯಮಗಳಲ್ಲಿ ಮೊದಲ ಬಾರಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನಗಳನ್ನು ಹಮ್ಮಿಕೊಂಡು ಕಾಡಂಚಿನ ಗ್ರಾಮಗಳಲ್ಲಿ ಮಾನವ –ವನ್ಯಜೀವಿ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ‘ಜಂಗಲ್ ಡೈರಿ’ ಕೃತಿ ಪ್ರಕಟಿಸಿದ್ದಾರೆ.

ಮಾಲತೇಶ ಅಂಗೂರ (2020): ಹಾವೇರಿ ಜಿಲ್ಲೆಯ ಮಾಲತೇಶ ಗದಿಗೆಪ್ಪ ಅಂಗೂರ ಅವರು ಸುಮಾರು 34 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಕಳೆದ 18 ವರ್ಷಗಳಿಂದ ಕೌರವ ಕನ್ನಡ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಪರಿಸರಕ್ಕೆ ಸಂಬಂಧಿಸಿದಂತೆ ವನ್ಯಜೀವಿಗಳು, ಕೆರೆಕಟ್ಟೆಗಳು, ಪ್ರಾಣಿಪಕ್ಷಿಗಳು, ಕೀಟಗಳು, ಸಸ್ಯಗಳು, ನಿಸರ್ಗ, ಗುಡ್ಡ ಗಹ್ವರಗಳು, ಅತಿವೃಷ್ಠಿ ಅನಾವೃಷ್ಠಿ ಸೇರಿದಂತೆ ವಿವಿಧ ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ. ‘ಕಾಡು-ಮೇಡು’ ಕೃತಿ ಪ್ರಕಟವಾಗಿದೆ.

Shivamogga Backward Classes Welfare Department ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ ಪಿಎಚ್ ಡಿ ಆರಂಭಿಸಿರುವವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ

0

Shivamogga Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪಿಹೆಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ /
ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2024-25 ನೇ ಸಾಲಿನಲ್ಲಿ ಪ್ರಥಮ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನಲ್ಲಿ ಪ್ರಾರಂಭಿಸಿರುವ (ಜ. 10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಹಾಗೂ ಕರ್ನಾಟಕ ಶಾಸನ ಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ.

Shivamogga Backward Classes Welfare Department ಅರ್ಜಿ ಸಲ್ಲಿಸಲು ಜ.20 ಕಡೆಯ ದಿನವಾಗಿರುತ್ತದೆ.
ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಒಂದು ಸೆಟ್ ಅಧಿಕೃತ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ https://www.bcwd.karnataka.gov.in , ಸಹಾಯವಾಣಿ : 8050770004 ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ದೂ.ಸಂ: 08182-222129 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Department of Health ರಾಷ್ಟ್ರೀಯ ಆರೋಗ್ಯ & ಮಾಹಿತಿ ಸಂವಹನ ಕಾರ್ಯಕ್ರಮದಡಿ ಕಲಾತಂಡಗಳಿಂದ ಅರ್ಜಿ ಆಹ್ವಾನ

0

Department of Health 2024-25 ನೇ ಸಾಲಿನಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಕಲಾ ಪ್ರಕಾರದಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಷ್ಟ್ರೀಯ ಆರೋಗ್ಯ ಮತ್ತು ಮಾಹಿತಿ ಶಿಕ್ಷಣ ಸಂವಹನ(ಐಇಸಿ) ಕಾರ್ಯಕ್ರಮದಡಿ ಉತ್ತಮ ಕಲಾ ಪ್ರದರ್ಶನ ನೀಡುವಂತಹ ಕಲಾ ತಂಡಗಳನ್ನು ಅಯ್ಕೆ ಮಾಡಲು ಅರ್ಹ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕಲಾ ತಂಡಗಳು ದಿನಾಂಕ: 10-01-2025 ರ ಸಂಜೆ 5 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಮತ್ತು ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು.

ಕಲಾ ತಂಡಂಗಳು ಅಥವಾ ಕಲಾವಿದರು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಕಲಾ ತಂಡ/ಕಲಾ ಸಂಘ/ ಯಾವುದೇ ಜಾನಪದ ಕಲಾ ಪ್ರಕಾರ ಹೆಸರಿನಲ್ಲಿ ನೊಂದಣಿಯಾಗಿರಬೇಕು. ಕಲಾ ತಂಡದ ನೋಂದಣಿ ನವೀಕರಣ/ಆಡಿಟ್ ರಿಪೋರ್ಟ್ ವರದಿ ಮತ್ತು ಕಲಾ ತಂಡದ ಮುಖ್ಯಸ್ಥರ ಅಧಿಕೃತ ವಿಳಾಸವನ್ನು ಅರ್ಜಿಯೊಂದಿಗೆ ಲಗತ್ತಿಸುವುದು. ಕಲಾ ತಂಡವು 8 ಜನ ಕಲಾವಿದರನ್ನೊಳಗೊಂಡಿರಬೇಕು ಮತ್ತು ಕಲಾವಿದರು 60 ವರ್ಷದ ಒಳಗಿರಬೇಕು.

Department of Health ಕಲಾ ಪ್ರಕಾರಕ್ಕೆ ತಕ್ಕಂತೆ ತಮ್ಮದೇ ಆದ ಪ್ರಸಾದನ/ಉಡುಪುಗಳೊಂದಿಗೆ ಕಲಾ ಪ್ರದರ್ಶನ ನೀಡಬೇಕು. ಮಹಿಳಾ ಮತ್ತು ಪರಿಶಿಷ್ಟ ಜಾತಿ, ಪಂಗಡಗಳ ಕಲಾವಿದರನ್ನೊಳಗೊಂಡಿರಬೇಕು.

ಈ ಕಚೇರಿಯಿಂದ ತಿಳಿಸಿದ ದಿನಾಂಕದಂದು ಆಯ್ಕೆ ಸಮಿತಿ ಮುಂದೆ ಕಲಾ ಪ್ರದರ್ಶನ ನೀಡಬೇಕು ಎಂದು ನಿಯಮಗಳು ಒಳಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಮತ್ತು ಕಲ್ಯಾಣಾಧಿಕಾರಿಗಳ ಕಚೇರಿಯ ಐಇಸಿ ವಿಭಾಗವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Amarashilpi Jakanachari  ಉತ್ತಮ ರಾಷ್ಟ್ರ ಕಟ್ಟಲು ಸಾವಿರಾರು ಜಕಣಾಚಾರಿಗಳು ನಮಗೆ ಬೇಕು- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

0

Amarashilpi Jakanachari  ಅಮರಶಿಲ್ಪಿ ಜಕಣಾಚಾರಿಯವರ ಕೆಲಸಗಳು, ಶಿಲ್ಪಕಲಾಕೃತಿಗಳು ಕಾಲವನ್ನು ಹಿಮ್ಮೆಟ್ಟಿಸುಂತಿವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಯಂತಿ ಆಚರಣೆ ಸರಳವಾಗಿರಲಿ ಅಥವಾ ವಿಜೃಂಭಣೆಯಿಂದ ನಡೆಯಲಿ ಜಕಣಾಚಾರಿಯಂತಹ ಮಹಾನ್ ಶಿಲ್ಪಿಯ ಕೆಲಸಗಳು, ಅವರ ಮಹತ್ವ ಅರಿಯಲು ತೊಂದರೆಯಾಗುವುದಿಲ್ಲ. ಅತ್ಯಂತ ಶ್ರದ್ದೆ ಮತ್ತು ನೈಪುಣ್ಯತೆಯಿಂದ ಅವರು ರಚಿಸಿರುವ ಶಿಲ್ಪಾಕೃತಿಗಳು, ದೇವಸ್ಥಾನಗಳು ಕಾಲವನ್ನು ಹಿಮ್ಮೆಟ್ಟಿಸುತ್ತವೆ ಎಂದು ಸ್ಮರಿಸಿದ ಅವರು ಉತ್ತಮ ರಾಷ್ಟ್ರ ಕಟ್ಟಲು ಇಂತಹ ಸಾವಿರಾರು ಜಕಣಾಚಾರಿಗಳು ನಮಗೆ ಬೇಕು. ಜಕಣಾಚಾರಿಯವರು ನಮಗೆ ಎಂದಿಗೂ ಸ್ಪೂರ್ತಿಯಾಗಿದ್ದಾರೆ ಎಂದರು.
Amarashilpi Jakanachari  ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಆಗರದಹಳ್ಳಿ ನಿರಂಜನಮೂರ್ತಿ ಮಾತನಾಡಿ, ಮಾಜಿ ಪ್ರಧಾನ ಮಂತ್ರಿ, ನಿಪುಣ ಅರ್ಥಶಾಸ್ತçಜ್ಞರಾದ ಡಾ.ಮನಮೋಹನ್ ಸಿಂಗ್ ರವರ ನಿಧನದ ಶೋಕಾಚರಣೆ ಪ್ರಯುಕ್ತ ಈ ಬಾರಿ ಅಮರಶಿಲ್ಪಿ ಜಕಣಾಚಾರಿಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಜಕಣಾಚಾರಿಯವರನ್ನು ದೇವಶಿಲ್ಪಿ ಎಂದು ಕರೆಯಲಾಗುತ್ತದೆ. ಅವರು ಕಟ್ಟಿರುವ ದೇವಸ್ಥಾಗಳು, ಅವರ ಕೆಲಸಗಳು ಅವಿಸ್ಮರಣೀಯವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಶ್ವಕರ್ಮ ಮಹಾಸಭಾ ಗೌರವ ಅಧ್ಯಕ್ಷ ಟಿ.ಆರ್.ಸತ್ಯನಾರಾಯಣ, ಜಿಲ್ಲಾ ವಿಶ್ವಕರ್ಮ ಬ್ರಾಹ್ಮಣ ಸಂಘದ ಅಧ್ಯಕ್ಷೆ ಅನ್ನಪೂರ್ಣ ಕಾಳಾಚಾರ್, ಹರಕೆರೆ ಕಾಳಿಕಾಂಬ ಸೇವಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಕಾಳಿಕಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಎಸ್.ರಾಮು, ಸೋಮಾಚಾರಿ ಟಿ.ಎಸ್, ಸತ್ಯನಾರಾಯಣ, ಸಮಾಜದ ಮುಖಂಡರು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು.

Puttaraj Gawai ಸಂಗೀತ ಶ್ರೋತೃಗಳನ್ನ ರಂಜಿಸಿದ ಪುಣ್ಯಾಶ್ರಮದಲ್ಲಿನ ಸಂಗೀತ ಸೇವೆ

0

Puttaraj Gawai ಶಿವಮೊಗ್ಗ ನಗರದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ವೇ.ಮೂ. ಮಹಾಂತಯ್ಯ ಶಾಸ್ತ್ರೀ ಉಪಸ್ಥಿತರಿದ್ದರು. ರಾಮ ಕ್ಷತ್ರೀಯ ಭಜನಾ ಮಂಡಳಿಯಿಂದ ಭಜನಾ ಸೇವೆ, ಆಶ್ರಮದ ಮಕ್ಕಳಿಂದ ಪ್ರಾರ್ಥನೆ ಹಾಗೂ ಧಾರವಾಡದ ಹಿಂದೂಸ್ತಾನಿ ಯುವ ಗಾಯಕ ಬಸವರಾಜ ವಂದಲಿ ಅವರಿಂದ ಸಂಗೀತ ಸೇವೆ ನಡೆಯಿತು.

Shivamogga Chiranthana Yoga and Sangeeta Trust ಸುಗಮ ಸಂಗೀತ ಕಲಿಕೆಗೆ ಶ್ರದ್ಧೆ, ಏಕಾಗ್ರತೆ‌ & ಶ್ರಮ ಮುಖ್ಯ-ಡಾ.ಕಿಕ್ಕೇರಿ ಕೃಷ್ಣಮೂರ್ತಿ

0

Shivamogga Chiranthana Yoga and Sangeet Trust ಸುಗಮ ಸಂಗೀತದ ಕಲಿಕೆಯು ಆತ್ಮವಿಶ್ವಾಸ ವೃದ್ಧಿಸುವ ಜತೆಯಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಲು ನೆರವಾಗುತ್ತದೆ. ಕಲಾವಿದರಿಗೆ ವಿಶೇಷ ಸ್ಥಾನಮಾನ ನೀಡುತ್ತದೆ ಎಂದು ಬೆಂಗಳೂರಿನ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಹೇಳಿದರು.

ಮಥುರಾ ಪ್ಯಾರಾಡೈಸ್‌ನಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ, ಶಿವಮೊಗ್ಗ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್, ಶಿವಮೊಗ್ಗ ವಿಜಯಪಥ ಮತ್ತು ವಿಕಾಸ ರಂಗ ವತಿಯಿಂದ ಆಯೋಜಿಸಿದ್ದ “ಒಲುಮೆಯ ಗೂಡು ಕುವೆಂಪು ಹಾಡು” ರಾಷ್ಟ್ರಕವಿ ಕುವೆಂಪು ಹಾಗೂ ಸಿ.ಅಶ್ವತ್ಥ್ ಜನ್ಮದಿನದ ಪ್ರಯುಕ್ತ ಗೀತಗಾಯನ ಸ್ಪರ್ಧೆಯ ಬಹುಮಾನ ವಿತರಣೆ, ಭೂಪಾಳಂ ವಿಜಯಕುಮಾರ್ ಸಮೂಹ ಗಾಯನ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಿವಮೊಗ್ಗ ಸಾಂಸ್ಕೃತಿಕ ಕ್ಷೇತ್ರದ ತವರೂರು. ಸಂಗೀತ ಕ್ಷೇತ್ರಕ್ಕೆ ಸುಗಮ ಸಂಗೀತ ಕ್ಷೇತ್ರದ ಕೊಡುಗೆ ಅಪಾರ. ಸುಗಮ ಸಂಗೀತ ಕಲಿಕೆಗೆ ಶ್ರದ್ಧೆ, ಭಕ್ತಿ, ಏಕಾಗ್ರತೆ ಹಾಗೂ ಶ್ರಮ ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ರಂಗಮಂದಿರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

Shivamogga Chiranthana Yoga and Sangeet Trust ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಸುಗಮ ಸಂಗೀತ ನಮ್ಮ ಬದುಕಿಗೆ ಅತ್ಯಂತ ಅವಶ್ಯ. ತನ್ನದೇ ಆದ ವಿಶೇಷ ಸ್ಥಾನಮಾನ ಹೊಂದಿದೆ. ನಾಡಿನ ದಿಗ್ಗಜ ಹಾಡುಗಾರರು ಮೂಲತಃ ಸುಗಮ ಸಂಗೀತ ಕ್ಷೇತ್ರದಿಂದ ಬಂದಿರುವವರು ಎಂದರು.

ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಸಿದ್ಧ ಗಾಯಕರಿಂದ ಗಾಯನ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ, ಸುವರ್ಣ ವಿಜಯಕುಮಾರ್, ಪರಿಷತ್ ರಾಜ್ಯ ಘಟಕ ದ ಖಜಾಂಚಿ ವಿನಯ್ ಉಡುಪ, ಜಿಲ್ಲಾ ಖಜಾಂಚಿ ಜಿ.ವಿಜಯಕುಮಾರ್, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ರವಿ ಚವ್ಹಾಣ್, ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಸ್ಥಾಪಕಿ ಶಾಂತಾ ಶೆಟ್ಟಿ, ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.

Shivamogga Police ಅಪಘಾತ ಮಾಡಿ ಪರಾರಿಯಾಗಿರುವ ಬೈಕ್ ಸವಾರನ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

0

Shivamogga Police ಶಿವಮೊಗ್ಗ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿರುತ್ತಾನೆ.

Shivamogga Police ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿರುವುದಿಲ್ಲ, ಬೈಕಿನ ಭಾವಚಿತ್ರ ದೊರಕಿರುತ್ತದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga City Corporation ನೀರಿನ ಕಂದಾಯ ಸ್ವೀಕೃತಿ ಕೌಂಟರ್ ಗಳು ಶಿವಮೊಗ್ಗದ ಕೆಲವಡೆ ಓಪನ್

0

Shivamogga City Corporation ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕಂದಾಯ ಪಾವತಿಸಲು ದಿ: 06-01-2025 ರಿಂದ ಎಲ್ಲಾ ರಜಾ ದಿನಗಳಲ್ಲಿ ಹಾಗೂ ಪ್ರತಿದಿನ ಬೆಳಿಗ್ಗೆ 7 ರಿಂದ ಸಂಜೆ 5.30 ರವರೆಗೆ ಮಂಡಳಿಯ ಕ್ಯಾಷ್‌ಕೌಂಟರ್ ಮತ್ತು ನಗರದ ಸಾರ್ವಜನಿಕರ ಉಪಯೋಗಕ್ಕಾಗಿ ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 8 ಗಂಟೆವರೆಗೆ ಕೆಳಕಂಡ ಸ್ಥಳಗಳಲ್ಲಿ ಕ್ಯಾಷ್‌ಕೌಂಟರ್ ತೆರೆಯಲಾಗುತ್ತದೆ.

ಗಾಂಧಿಪಾರ್ಕ್ ಆವರಣ, ಫ್ರೀಡಂ ಪಾರ್ಕ್ ಆವರಣ, ರಿವರ್‌ಸೈಡ್ ವಾಕಿಂಗ್ ಪಾಥ್ ಬೆಕ್ಕಿನಕಲ್ಮಠ ಹತ್ತಿರ, ಎಪಿಎಂಸಿ ಆವರಣ, ನೆಹರೂ ಕ್ರೀಡಾಂಗಣ, ಗುಡ್‌ಲಕ್ ಸರ್ಕಲ್, ಗುರುಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೂಳೇಬೈಲ್ ಮಾರಮ್ಮನ ದೇವಸ್ಥಾನ ಇಲ್ಲಿ ಕ್ಯಾಷ್ ಕೌಂಟರ್ ತೆರೆಯಲಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದು.

Shivamogga City Corporation ಹಾಗೂ ತಮ್ಮ ಬಡಾವಣೆ ವ್ಯಾಪ್ತಿಯ ನೀರಿನ ಸಂಬಂಧ ದೂರುಗಳಿದ್ದಲ್ಲಿ ದಾಖಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-273000 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

Shivamogga Police ಶಿವಮೊಗ್ಗದ ಎಂ.ಆರ್.ಎಸ್ ನಲ್ಲಿ ಕೋಟ್ಪಾ ಕಾಯಿದೆ ಜಾಗೃತಿ ಚಟುವಟಿಕೆ

0

Shivamogga Police ಶಿವಮೊಗ್ಗ ನಗರದ ಎಂ.ಆರ್.ಎಸ್ ವೃತ್ತದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು.

ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂ. 3460 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ಹಾಗೂ ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಹಾಗು ಸೇವನೆ ಮಾಡುವವರಿಗೆ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗು ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.

Shivamogga Police ತಂಡದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ನಾಗರಾಜ್ ನಾಯಕ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಏ ಒ, ಸಮಾಜ ಕಾರ್ಯಕರ್ತ ರವಿರಾಜ್, ಡಿಇಓ ಪ್ರವೀಣ್, ಮಂಜುನಾಥ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

DC Shivamogga ಜನವರಿ 2 ರಿಂದ 30 ವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ- ಎನ್.ಹೇಮಂತ್

0

DC Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್‌ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಜನವರಿ 02 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಾಚಿನಕಟ್ಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್ ಇವರು ಆಧಾರ್ ತಿದ್ದುಪಡಿ ಬೃಹತ್ ಆಂದೋಲನಕ್ಕೆ ಚಾಲನೆ ನೀಡುವರು.

ಶಿವಮೊಗ್ಗ ತಾಲ್ಲೂಕಿನಲ್ಲಿ ಸರಿಸುಮಾರು 90 ಸಾವಿರಕ್ಕೂ ಅಧಿಕ ವಿದ್ಯಾಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಮಾಹಿತಿಯು ಶಾಲೆಗಳಲ್ಲಿ ಹಾಗೂ ಆಧಾರ್ ಕಾರ್ಡ್ನಲ್ಲಿ ಏಕರೂಪದಲ್ಲಿರುವುದು ಕಡ್ಡಾಯವಾಗಿರುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಈ ಕ್ರಮವು ಅನುಕೂಲಕಾರಿಯೂ ಆಗಿರುತ್ತದೆ. ಇಲಾಖೆಯ ಅಪಾರ್ ನೋಂದಣಿ ಸ್ಯಾಟ್ಸ್ ಸೇರಿದಂತೆ ಇತರೆ ಕಾರ್ಯಗಳಲ್ಲಿಯೂ ಆಧಾರ್ ಕಾರ್ಡ್ ಹಾಗೂ ಶಾಲಾ ಮಾಹಿತಿ ಏಕರೂಪದಲ್ಲಿರಬೇಕು.

DC Shivamogga ತಾಲ್ಲೂಕಿನ ಸುಮಾರು 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಮಾಹಿತಿಯನ್ನು ತಿದ್ದುಪಡಿ ಮಾಡುವ ಅಗತ್ಯವಿದೆ.ಆಂದೋಲನವನ್ನು ವೇಳಾಪಟ್ಟಿಯನ್ವಯ ತಾಲ್ಲೂಕಿನ 32 ಕ್ಲಸ್ಟರ್‌ವಾರು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ದೃಷ್ಟಿಯಿಂದ ಸಂಖ್ಯಾನುಸಾರ ಸಮೀಪದ ಶಾಲೆಗಳಲ್ಲಿ ತಿದ್ದುಪಡಿ ಮಾಡುವ ಕಾರ್ಯ ಯೋಜನೆ ರೂಪಿಸಲಾಗಿದೆ.

ಆ ಮೂಲಕ ತಾಲ್ಲೂಕಿನ ಎಲ್ಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಮಾಡುವ ಗುರಿ ಹೊಂದಲಾಗಿದೆ.ಇದರಿಂದಾಗಿ ಶಾಲಾ ವಿದ್ಯಾರ್ಥಿಗಳ ಆಧಾರ್‌ನ ಮಾಹಿತಿ ಶಾಲಾ ಮಾಹಿತಿಗಳು ಏಕರೂಪವಾಗಿಸುವ ಮೂಲಕ ಶಾಶ್ವತ ಪರಿಹಾರ ಕೈಗೊಳ್ಳುವ ಉದ್ದೇಶ ಹೊಂದಲಾಗಿದೆ. ಈ ಪ್ರಕ್ರಿಯೆಯಲ್ಲಿ ಶಾಲಾವಾರು ಅನ್ವಯಿಸಲ್ಪಡುವ ವಿದ್ಯಾರ್ಥಿಗಳ ಪೋಷಕರಿಂದ ಲಿಖಿತ ಅನುಮತಿ ಪಡೆಯುವ ಮೂಲಕ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಮಾಡಲಾಗುವುದು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಕ್ಷೇತ್ರ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದ್ದಾ