Thursday, March 19, 2026
Thursday, March 19, 2026
Home Blog Page 455

Manmohan Singh ಕುಪ್ಪಳಿಯಲ್ಲಿನ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಕವಿನಮನ ಮಾತ್ರ.ಸಾಂಸ್ಕೃತಿಕ ಚಟುವಟಿಕೆ ಮುಂದೂಡಲಾಗಿದೆ

0

Manmohan Singh ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕಾಚರಣೆ ಇರುವುದರಿಂದ 29- 12 -2024 ರಂದು ಕುಪ್ಪಳಿಯಲ್ಲಿ ನಡೆಯಬೇಕಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆ ದಿನ ಸಮಾರಂಭ ಕುಪ್ಪಳಿಯಲ್ಲಿ ನಡೆಯುವುದಿಲ್ಲ. ಬೆಳಗ್ಗೆ 10 ರಿಂದ 11 ರವರೆಗೆ ಕವಿಶೈಲದಲ್ಲಿ ಕವಿ ನಮನ ಮಾತ್ರ ಇರುತ್ತದೆ. ಅದೇ ದಿನ Manmohan Singh ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ. ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ತಿಳಿಸಿದ್ದಾರೆ.

Karnataka State Teachers Welfare Fund ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಹಪಠ್ಯ ಚಟುವಟಿಕೆಗಳು ಶಿಕ್ಷಕರಿಗೆ ಪೂರಕವಾಗುವೆ- ಶಾಸಕ ಚೆನ್ನಿ

0

Karnataka State Teachers Welfare Fund ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋದಿಸಲು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು.
ಅವರು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಶಿವಮೊಗ್ಗ ಹಾಗೂ ಸೀಮಾ ಆಂಗ್ಲಶಾಲೆ ಮಾಚೇನಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾಚೇನಹಳ್ಳಿಯ ಸೀಮಾ ಆಂಗ್ಲಶಾಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಭವಿಷ್ಯದ ಸಮಾಜ ನಿರ್ಮಾತೃಗಳನ್ನು ರೂಪಿಸುವ ಶಿಕ್ಷಕರ ಕಾರ್ಯ ಸ್ಮರಣೀಯವಾದುದು ಎಂದ ಅವರು, ಶಿಕ್ಷಕರು ಪಠ್ಯಕ್ಕೆ ಸಹಕಾರಿಯಾಗುವ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ಶಿಕ್ಷಕರಲ್ಲಿ ಪರಿಣಾಮಕಾರಿ ಬೋದನಾ ವಿಧಾನಗಳನ್ನು ಅರಿಯಲಿದ್ದಾರೆ. ಇದರಿಂದಾಗಿ ತರಗತಿಗಳಲ್ಲಿ ಹಲವು ಪ್ರಕಾರಗಳಲ್ಲಿ ಮಕ್ಕಳನ್ನು ಕಲಿಕೆಗೆ ತೊಡಗಿಸಲು ಪ್ರೇರೇಪಿಸಬಹುದಾಗಿದೆ. ಹಿಂದುಳಿದ ಮಕ್ಕಳ ಕಲಿಕೆಗೆ ವಿಶೇಷ ಪ್ರಯತ್ನ ಇದಾಗಿರಲಿದೆ ಎಂದರು.
Karnataka State Teachers Welfare Fund ಮಕ್ಕಳ ಕಲಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಕೂಡ ಸದಾ ಕಲಿಕಾರ್ಥಿಯಾಗಿದ್ದು, ನವನವೀನವಾದುದನ್ನು ಅರಿಯುವ, ಅರಿತಿದ್ದನ್ನು ಮಕ್ಕಳಿಗೆ ತಿಳಿಸಿ, ಕಲಿಕೆಯನ್ನು ಮುಂದುವರೆಸುವ ಕ್ರಿಯಾಶೀಲತೆ ಅತ್ಯಗತ್ಯವಾದುದಾಗಿದೆ. ತರಗತಿಗೆ ಬೋದನೆಗೆ ತೆರಳುವ ಶಿಕ್ಷಕರು ಬೋದಿಸುವ ಪಠ್ಯವಿಷಯವನ್ನು ಸರಳವಾಗಿ ಮಕ್ಕಳಿಗೆ ಕಲಿಸುವ ಬಗ್ಗೆ, ಅರ್ಥೈಸುವ ಹಲವು ವಿಧಾನಗಳ ಬಗ್ಗೆ ಅರಿತಿರಬೇಕು. ಈ ಹಂತದಲ್ಲಿ ಸರ್ಕಾರಗಳು, ಇಲಾಖೆಗಳ ಮುಖ್ಯ ಅಧಿಕಾರಿಗಳು ಅಗತ್ಯ ಸಹಕಾರ, ಆರ್ಥಿಕ ನೆರವು ಒದಗಿಸಬೇಕೆಂದವರು ನುಡಿದರು.
ಮಕ್ಕಳಲ್ಲಿನ ಸುಪ್ತಪ್ರತಿಭೆಯನ್ನು ಗುರುತಿಸಿ, ಅವರನ್ನು ಉತ್ತೇಜಿಸಿ, ಪ್ರತಿಭೆಯ ಅನಾವರಣಕ್ಕೆ ಸಕಾಲದಲ್ಲಿ ಸೂಕ್ತ ವೇದಿಕೆಗಳನ್ನು ಕಲ್ಪಿಸುವುದು ಸಹ ಶಿಕ್ಷಕರ ಕರ್ತವ್ಯಗಳಲ್ಲೊಂದು. ಅದಕ್ಕಾಗಿ ಮೊದಲು ಶಿಕ್ಷಕರಲ್ಲಿ ನಂತರ ವಿದ್ಯಾರ್ಥಿಗಳಲ್ಲಿ ಕಲಿಕಾ ಉತ್ಸಾಹ ಬತ್ತದಂತೆ ನೋಡಿಕೊಳ್ಳಬೇಕು ಎಂದರು.
ಈ ಕಲಿಕಾ ಅವಧಿಯಲ್ಲಿ ಮಕ್ಕಳಲ್ಲಿರುವಂತೆ ಶಿಕ್ಷಕರಲ್ಲೂ ಸ್ಪರ್ಧಾ ಮನೋಭಾವ ಇರಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ವಿಜೇತರಾಗುವುದು ಸಾಧ್ಯವಿಲ್ಲ. ಆದರೂ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಬಹು ಪ್ರಮುಖವಾದುದ್ದಾಗಿದೆ. ಇದು ಶಿಕ್ಷಕರ ಮತ್ತು ಮಕ್ಕಳ ಸೃಜನಶೀಲತೆಗೆ ಸಹಕಾರಿಯಾಗಲಿದೆ. ಈ ಕಲಿಕೆ ನಿರಂತರವಾಗಿದ್ದಾಗ ಸಹಜವಾಗಿ ಕಲಿಕಾರ್ಥಿಗಳೆಲ್ಲರಲ್ಲೂ ಪಕ್ವತೆ ಕಾಣಬಹುದಾಗಿದೆ ಎಂದರು.
ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದ ೨೦೦ಕ್ಕೂ ಹೆಚ್ಚಿನ ಕ್ರಿಯಾಶೀಲ ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಶ್ರೀಮತಿ ಬಿಂಬಾ ಕೆ.ಆರ್., ಎಸ್.ಆರ್.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ನಾಗೇಂದ್ರಪ್ಪ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಪ್ರಕಾಶ್, ಧರ್ಮಪ್ಪ, ಸೀಮಾ ಆಂಗ್ಲಶಾಲೆಯ ವ್ಯವಸ್ಥಾಪಕ ನಿರ್ದೇಶಕ ಜಗನ್ನಾಥರಾವ್ ಬೊಂಗಾಳೆ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Canara Bank Rural Self Employment Training Institute ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಕೆನರಾ ಬ್ಯಾಂಕ್ ನಿಂದ ಪ್ರಕಟಣೆ

0

Canara Bank Rural Self Employment Training Institute ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಕೆನರಾ ಬ್ಯಾಂಕ್ ನಿಂದ ಪ್ರಕಟಣೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Canara Bank Rural Self Employment Training Institute ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಕೆನರಾ ಬ್ಯಾಂಕ್ ನಿಂದ ಪ್ರಕಟಣೆ ತರಬೇತಿಗಳು
ಕ್ರ ಸ ತರಬೇತಿಗಳು ಅವದಿ ಪ್ರಾರಂಭ ದಿನಾಂಕ
01 ಕೋಳಿ ಸಾಕಾಣಿಕೆ 10 ದಿನಗಳು
02/01/2025
ತರಬೇತಿಯು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9743429595, 8722384541, 9164411580, 8105378735 9449371579, 9481955721,

Shivamogga City Corporation ಡಿಸೆಂಬರ್ 31. ಶಿವಮೊಗ್ಗ ಮಹಾನಗರ ಪಾಲಿಕೆ ಆಯವ್ಯಯ ತಯಾರಿಕಾ ಪೂರ್ವಭಾವಿ ಸಭೆಗೆ ಆಹ್ವಾನ

0

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಎರಡನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.31 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ನಗರದ ನಾಗರಿಕರು ಹಾಗೂ ಸಂಘ-ಸಂಸ್ಥೆಯವರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Primary Agriculture Cooperative Credit Societies ಅಬ್ಬಲಗೆರೆ ಸಹಕಾರ ಸಂಘಕ್ಕೆ 12 ಸದಸ್ಯರ ಅವಿರೋಧ ಆಯ್ಕೆ

0

 Primary Agriculture Cooperative Credit Societies ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಅಬಲಗೆರೆ ಶಿವಮೊಗ್ಗ (ತಾ) ಇದರ ಮುಂದಿನ ಐದು ವರ್ಷಗಳ ಅವಧಿಗೆ ದಿನಾಂಕ 29.12.2024ರ ಭಾನುವಾರ ರಂದು ನಡೆಯಬೇಕಾಗಿದ್ದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಸಾಲಗಾರರ ಸಾಮಾನ್ಯ ಕ್ಷೇತ್ರ, ಮಹಿಳಾ ಮೀಸಲು, ಹಿಂದುಳಿದ ವರ್ಗ ‘ಎ’ ಮತ್ತು ಹಿಂದುಳಿದ ವರ್ಗ ‘ಬಿ’ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಒಟ್ಟು ೬೦ ಜನ ಸದಸ್ಯರು ನಾಮಪತ್ರ ಸಲ್ಲಿಸಿದ್ದರು.

ಹಾಗೂ ಸಾಲಗಾರರಲ್ಲಿದ್ದ ಸಾಮಾನ್ಯ ಕ್ಷೇತ್ರಕ್ಕೆ ಏಳು ಜನ ಸದಸ್ಯರು ನಾಮಪತ್ರ ಸಲ್ಲಿಸಿದ್ದರು.
ದಿನಾಂಕ 22-12-2024 ರಂದು ನಾಮಪತ್ರ ಪರಿಶೀಲನೆಯಲ್ಲಿ ಮೇಲ್ಕಂಡ 67 ಜನ ಸದಸ್ಯರ ನಾಮಪತ್ರಗಳು ಕ್ರಮಬದ್ಧವಾಗಿದ್ದವು ಅದರಂತೆ ದಿನಾಂಕ 23-12-2024 ರಂದು 55 ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆದುಕೊಂಡರು.

ಉಳಿದ 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಬ್ಬಲಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕರ ಸಂಘವು ಒಂದು ಮಾದರಿ ಸಂಘವಾಗಿ ಹೊರಹಮ್ಮಿದ್ದು ಚುನಾವಣಾಧಿಕಾರಿಗಳಾದ ನಿಖಿಲ್ ರವರು ಪ್ರಶಂಸೆ ವ್ಯಕ್ತಪಡಿಸಿ ಈ ಕೆಳಕಂಡ ಅಭ್ಯರ್ಥಿಗಳನ್ನು ಚುನಾಯಿತ ಸದಸ್ಯರೆಂದು ಘೋಷಣೆ ಮಾಡಿದರು.

 Primary Agriculture Cooperative Credit Societies ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ 1, ಕೆ.ಎಲ್ ಜಗದೀಶ್ವರ್ ಕುಂಚೇನಹಳ್ಳಿ, 2. ಬಿ ಮಂಜಪ್ಪ ಕೊಮ್ಮನಾಳು, 3. ಎಜಿ ಚಂದ್ರಶೇಖರಪ್ಪ ಅಬ್ಬಲಗೆರೆ, 4. ಬಿ ಹೆಚ್ ಉಮಾಪತಿ ಬಸವನಗೂರು, 5. ಮಯೂರ ವರ್ಮ ಬಿಕ್ಕೋನಹಳ್ಳಿ ಬಿಸಿಎಂಎ

  1. ಎಮ್. ಎಚ್ ಹಾಲೇಶ್ ಕೊಮ್ಮನಾಳ್, ಬಿಸಿಎಂಬಿ, 7. ಅಶೋಕ ಕೆ.ಎಸ್. ಕೊಮ್ಮನಾಳು, ಪರಿಶಿಷ್ಟ ಜಾತಿ, 8. ಚಂದ್ರನಾಯ್ಕ ಕುಂಚೇನಹಳ್ಳಿ ಪರಿಶಿಷ್ಟ ಪಂಗಡ, 9. ಜಗದೀಶ್ ಅಬ್ಬಲಗೆರೆ ಮಹಿಳಾ ಮೀಸಲು 10. ಸೀತಾಬಾಯಿ ಅಬ್ಬಲಗೆರೆ, 11. ನೀಲಾಬಾಯಿ ಕಲ್ಲಾಪುರ, ಸಾಲಗಾರರಲ್ಲಿದ ಕ್ಷೇತ್ರ, 12. ದಶರಥ ನಾಯ್ಕ ಕಲ್ಲಾಪುರ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
    7.

DC Shivamogga ಜಿಲ್ಲೆಯಲ್ಲಿನ ರಾಷ್ಟ್ರೀಯ & ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್ ಗಳಲ್ಲಿ ಸುರಕ್ಷತಾ ಕ್ರಮವಹಿಸಿ- ಎನ್.ಹೇಮಂತ್

0

DC Shivamogga ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಕಪ್ಪುಸ್ಥಳ(ಬ್ಲಾಕ್ ಸ್ಪಾಟ್)ಗಳಲ್ಲಿ ಸಂಭವನೀಯ ಅಪಘಾತಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಹೇಮಂತ್ ಎನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಪ್ಪುಸ್ಥಳಗಳನ್ನು ಸರಿಪಡಿಸಲು ತುರ್ತು ಕಾಮಗಾರಿ ಎಂದು ಪರಿಗಣಿಸಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು. ವಿಫಲವಾದಲ್ಲಿ ಸಂಬಂಧಿಸಿದ ಎಲ್ಲ ಇಂಜಿನಿಯರಿಂಗ್ ಇಲಾಖೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಒಳಗೊಂಡಂತೆ 2016 ರಿಂದ ಇಲ್ಲಿಯವರೆಗೆ ಒಟ್ಟು 51 ಬ್ಲಾಕ್ ಸ್ಪಾಟುಗಳನ್ನು ಗುರುತಿಸಲಾಗಿದೆ. 37 ಕಪ್ಪುಸ್ಥಳಗಳು ಎನ್‌ಹೆಚ್ ಗಳ ವ್ಯಾಪ್ತಿಗೆ ಬರಲಿವೆ. ಇನ್ನುಳಿದವರು ಎಸ್‌ಹೆಚ್ ಗಳ ವ್ಯಾಪ್ತಿಗೆ ಬರಲಿದ್ದು, ಮುಂದಿನ 2 ತಿಂಗಳುಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸರಿಪಡಿಸಬೇಕು. ಎಚ್ಚರಕೆ ಫಲಕ, ಸ್ಪೀಡ್ ಬ್ರೇಕರ್, ರಿಫ್ಲೆಕ್ಟರ್ ಸ್ಟಡ್, ಅಪಾಯ ಸೂಚಿಸುವ ಫಲಕ, ಕ್ಯಾಟ್‌ಐ ಇತ್ಯಾದಿ ಕ್ರಮ ಕೈಗೊಳ್ಳಬೇಕು.
ಹಾಗೂ ಅರಣ್ಯ ಇಲಾಖೆ, ಟ್ರಾಫಿಕ್ ಪೊಲೀಸ್ ಮತ್ತು ಆರ್‌ಟಿಓ ಇಲಾಖೆ ಜಂಟಿಯಾಗಿ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ತಂಡ ರಚಿಸಿಕೊಂಡು ರಸ್ತೆ ಬದಿಯ ಸಿಗ್ನಲ್ ಲೈಟ್‌ಗೆ ಅಡ್ಡ ಬೆಳೆದಿರುವ ಮರಗಳನ್ನು ಕತ್ತರಿಸುವ ಅಥವಾ ತೆರವುಗೊಳಿಸಲು ಕ್ರಮ ವಹಿಸಬೇಕು.
DC Shivamogga ಪಂಚಾಯತ್ ಇಂಜಿನಿಯರಿಂಗ್ ವಿಭಾಗದಿಂದ ಪಂಚತಂತ್ರ ವ್ಯಾಪ್ತಿಯ ರಸ್ತೆ ಬದಿಗಳಲ್ಲಿರುವ ಬುಶ್ ಕಟಿಂಗ್ ಮತ್ತು ಇತರೆ ರಸ್ತೆ ಸರಿಸಪಡಿಸುವ ಕಾಮಗಾರಿಗೆ ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಸೂಚನೆ ನೀಡಿದರು.
ಪೊಲೀಸ್ ಇಲಾಖೆ ಸಲ್ಲಿಸಿರುವ ಕಪ್ಪುಸ್ಥಳಗಳನ್ನು ಸರಿಪಡಿಸಲು ಲೋಕೋಪಯೋಗಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಸಾರಿಗೆ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ತಂಡ ರಚಿಸಿಕೊಂಡು ಜಂಟಿ ಭೇಟಿ ನೀಡಿ ತಪಾಸಣೆ ನಡೆಸಿ ಸುಧಾಕರಣಾ ಕ್ರಮಗಳಾದ ಸ್ಪೀಡ್ ಬ್ರೇಕರ್, ಸೂಚನಾ, ಎಚ್ಚರಿಕೆ ಫಲಕಗಳು, ಗುಂಡಿಗಳನ್ನು ಮುಚ್ಚುವ ಕಾರ್ಯ ಹಾಗೂ ರಸ್ತೆ ಬದಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸುವುದು ಸೇರಿದಂತೆ ಇತ್ಯಾದಿ ಶೀಘ್ರ ಹಾಗೂ ಶಾಶ್ವತ ಅಗತ್ಯ ಕ್ರಮ ಕೈಗೊಳ್ಳಬೇಕು.
ಈ ಕೆಲಸಗಳನ್ನು ತುರ್ತು ಕೆಲಸಗಳೆಂದು ಪರಿಗಣಿಸಿ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಸಣ್ಣ ಪುಟ್ಟದ್ದಲ್ಲ ಬದಲಾಗಿ ಮಾರಣಾಂತಿಕ ಅಪಘಾತಗಳೇ ಹೆಚ್ಚಾಗಿವೆ. ಪ್ರವಾಸದ ಸಮಯವಾದ್ದರಿಂದ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ಓಡಾಟವೂ ಹೆಚ್ಚಿದೆ. ಆದ್ದರಿಂದ ತುರ್ತಾಗಿ ಈ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಅವರು ಕೈಗೊಂಡ ಕ್ರಮಗಳ ಕುರಿತು ಖುದ್ದು ತಾವೇ ಪರಿಶೀಲಿಸುವುದಾಗಿ ತಿಳಿಸಿದರು. ಹಾಗೂ ಒಂದು ವೇಳೆ ಈ ಸ್ಥಳಗಳಲ್ಲಿ ಅಪಘಾತ ಸಂಭವಿಸಿದಲ್ಲಿ ಪಿಡಬ್ಲುö್ಯಡಿ ಹಾಗೂ ಸಂಬಂಧಿಸಿದ ಇಂಜಿನಿಯರಿಂಗ್ ವಿಭಾಗದ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟ್ರಾಫಿಕ್ ಇಲಾಖೆ ಅಧಿಕಾರಿಗಳು ಮಾತನಾಡಿ, ನಗರದಲ್ಲಿ ದೊಡ್ಡ ದೊಡ್ಡ ಆಸ್ಪತ್ರೆ, ಕಟ್ಟಡಗಳ ಸೆಲ್ಲರ್ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಂಡಿಲ್ಲ. ಬದಲಾಗಿ ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುತ್ತಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಎನ್‌ಹೆಚ್ 206 ರಲ್ಲಿ ಸಂದೇಶ್ ಮೋಟರ‍್ಸ್ನಿಂದ ಅಡಿಕೆ ಮಂಡಿವರೆಗೆ ಎಚ್ಚರಿಕೆ ಫಲಕಗಳು ಇಲ್ಲ ಈ ಬಗ್ಗೆ ಪಾಲಿಕೆಗೆ ಪತ್ರ ಬರೆಯಲಾಗಿದೆ. ಹಾಗೂ ನಗರದ 5 ಜಾಗಳಲ್ಲಿ ಸಿಗ್ನಲ್ ವ್ಯವಸ್ಥೆ ಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆಂದು ತಿಳಿಸಿದರು.
ಪ್ರಭಾರಿ ಜಿಲ್ಲಾಧಿಕಾರಿಗಳು, ಅನಧಿಕೃತ ಪಾರ್ಕಿಂಗ್ ವಿರುದ್ದ ದಂಡ ಹಾಗೂ ಟೋಯಿಂಗ್ ಕ್ರಮ ಕೈಗೊಳ್ಳಲು ಟ್ರಾಫಿಕ್ ಪೊಲೀಸ್‌ರಿಗೆ ಹಾಗೂ ನಗರದಲ್ಲಿ ಅಗತ್ಯವಿರುವೆಡೆ ಸೂಚನಾ ಫಲಕ ಮತ್ತು ಎಚ್ಚರಿಕೆ ಫಲಕಗಳು, ರಿಫ್ಲೆಕ್ಟರ್ ಅಳವಡಿಸಲು ಪಾಲಿಕೆಗೆ ಪತ್ರ ಬರೆಯುವಂತೆ ತಿಳಿಸಿದರು.
ರೈಲ್ವೇ ನಿಲ್ದಾಣದ ಬಳಿ ಸಿಟಿ ಬಸ್ ನಿಲುಗಡೆ ಸಮಸ್ಯೆ ಕುರಿತು ಹಾಗೂ ಏರ್‌ಪೋರ್ಟ್ಗೆ ಹೆಚ್ಚುವರಿ ಬಸ್ ಬಿಡುವ ಕುರಿತು ಕೆಎಸ್‌ಆರ್‌ಟಿಸಿ ಡಿಸಿ ಯವರು ಪರಿಶೀಲಿಸಿ ಕ್ರಮ ವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ ಪಾಲ್ಗೊಂಡಿದ್ದರು. ಪಿಡಬ್ಲುö್ಯಡಿ ವಿಶೇಷ ವಿಭಾಗದ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ಅನುಪಾಲನಾ ವರದಿ ಮಂಡಿಸಿದರು. ಆರ್‌ಟಿಓ ಮರುಗೇಂದ್ರಪ್ಪ, ಪೊಲೀಸ್ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Indigo Airlines ದೆಹಲಿ- ಅಹ್ಮದಾಬಾದ್- ಪುಣೆ ಮಾರ್ಗದಲ್ಲಿ ವಿಮಾನಯಾನಕ್ಕೆ‌‌ ಇಂಡಿಗೊ ಅನುಮತಿ ಕೇಳಿದೆ- ಸಂಸದ ರಾಘವೇಂದ್ರ

0

Indigo Airlines ಇಂಡಿಗೋ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್‌, ಪುಣೆ ಮಾರ್ಗದಲ್ಲಿ ವಿಮಾನಯಾನ ಆರಂಭಕ್ಕೆ ಅನುಮತಿ ಕೇಳಿದೆ. ಈ ಸಂಬಂಧ ವಿಮಾನಯಾನ ಸಚಿವರಿಗೆ ಪತ್ರ ಬರೆದು ಆದಷ್ಟು ಬೇಗ ಅನುಮತಿ ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

Mathura Paradise ಶತಮಾನಗಳ ಗಾಯಕ್ಕೆ ಕವಿ ನೀಡುವ ಕಾವ್ಯದ ಮುಲಾಮೇ ಔಷಧ- ಶಿ.ಜು.ಪಾಶ

0

Mathura Paradise ಈ ಜಗತ್ತಿಗೆ ಈಗ ಕೋವಿ ಮತ್ತು ಕತ್ತಿಗೆ ಕವಿ ಮತ್ತು ಕಾವ್ಯದ ಜರೂರತ್ತಿದೆ. ಶತಶತಮಾನಗಳಿಂದ ಆಗಿರುವ ಗಾಯಗಳಿಗೆ ಕವಿ ನೀಡುವ ಕಾವ್ಯದ ಮುಲಾಮೇ ಅಂತಿಮ ಔಷಧ. ಕವಿತೆಯಿಂದ ಈ ಜಗತ್ತನ್ನು ಗೆಲ್ಲಲು ಸಾಧ್ಯ. ಕೋವಿ ಮತ್ತು ಕತ್ತಿಗಳಿಗೆ ನಮ್ಮ ನಮ್ಮ ಕಾವ್ಯದಿಂದ ತುಕ್ಕು ಹಿಡಿಸಲು ಪ್ರಯತ್ನಿಸೋಣ ಎಂದು ಪತ್ರಕರ್ತ, ಸಾಹಿತಿ
ಶಿ.ಜು.ಪಾಶ ಹೇಳಿದರು.

ಶಿವಮೊಗ್ಗದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಸಿರಿಗನ್ನಡ ವೇದಿಕೆ, ಸಿರಿಗನ್ನಡ ಮಹಿಳಾ ವೇದಿಕೆ ಹಮ್ಮಿಕೊಂಡಿದ್ದ `ಮಥುರಾ ಪ್ಯಾರಡೈಸ್ ರಜತ ಮಹೋತ್ಸವ’ದ ಸವಿನೆನಪಿನ ಡಾ.ಜೆ.ವಿ.ನಾಗರತ್ನಮ್ಮರವರ ಸಾಹಿತ್ಯ ಸಂಗಮ ಕೃತಿ ಬಿಡುಗಡೆ ಹಾಗೂ ಕವಿಗೋಷ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಜಗತ್ತಿನಲ್ಲಿ ಎಲ್ಲದನ್ನೂ ದಕ್ಕಿಸಿಕೊಳ್ಳಬಹುದು. ಸಾಹಿತ್ಯವನ್ನು ದಕ್ಕಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಲೇಖಕ ತನ್ನೊಳಗೆ ಭಾವತಲ್ಲಣಗಳಿಗೆ ಒಳಗಾಗಿ ಕವಿತೆ, ಕಥೆ, ಕಾದಂಬರಿ ಬರೆದುಬಿಡಬಹುದು. ಅದು ಓದುವವರಿಗೂ ಹಾಗೂ ಬರೆದ ಲೇಖಕರಿಗೂ ಸಂಪೂರ್ಣವಾಗಿ ದಕ್ಕುವುದಿಲ್ಲ ಎಂಬುದೇ ಅಂತಿಮ ಸತ್ಯ. ಹಾಗಾಗಿ, ಓದುವವರು ಓದುತ್ತಲೇ ಇರುತ್ತಾರೆ. ಬರೆಯುವವರು ಮತ್ತೆ ಮತ್ತೆ ಬರೆಯುತ್ತಲೇ ಇರುತ್ತಾರೆ. ಸಾಹಿತ್ಯವನ್ನು ದಕ್ಕಿಸಿಕೊಳ್ಳುವ ನಿರಂತರ ಪ್ರಯತ್ನ ನಡೆಯುತ್ತಲೇ ಇರುತ್ತದೆ ಎಂದರು. ಈ ಕಠೋರ ಜಗತ್ತಲ್ಲಿ `ಕವಿ ಹೃದಯಿ’ ಎನಿಸಿಕೊಳ್ಳುವುದು ಸುಲಭ ಸಾಧ್ಯವಲ್ಲ. ಎಲ್ಲರಿಗೂ ಈ ವಿಶೇಷವಾದ ಕವಿಹೃದಯ ಇರಲು ಸಾದ್ಯವಿಲ್ಲ. ಈ ಜಗತ್ತಿನ ತುಂಬಾ ಇಂಥ ಹೃದಯಗಳೇ ಇದ್ದುಬಿಟ್ಟಿದ್ದರೆ ಎಲ್ಲೂ ಯುದ್ಧಗಳಾಗುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Mathura Paradise ಅಧ್ಯಕ್ಷತೆಯನ್ನು ಸಹ್ಯಾದ್ರಿ ಕಾಲೇಜಿನ ಅಧ್ಯಾಪಕರಾದ ಡಾ.ಲವ ಜಿ.ಆರ್. ವಹಿಸಿದ್ದರು. ವೇದಿಕೆಯಲ್ಲಿ ಫ್ರೊ.ಸತ್ಯನಾರಾಯಣ್, ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷರಾದ ಎ.ಹೆಚ್.ನಿರಂಜನ್ ಕುಮಾರ್, ಸಿರಿಗನ್ನಡ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ಶ್ರೀಮತಿ ನಂದಾ ಪ್ರೇಮಕುಮಾರ್ ಇದ್ದರು.

ಟಿಎಂಎಇಎಸ್ ಮಹಾವಿದ್ಯಾಲಯದ ಆಯುರ್ವೇದ ವೈದ್ಯರಾದ ಡಾ.ಮೈಥಿಲಿ ಪೂರ್ಣಾನಂದ್ ಆಯುರ್ವೇದ ಮತ್ತು ಆರೋಗ್ಯದ ಬಗ್ಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಡಾ.ಜೆ.ವಿನಾಗರತ್ನಮ್ಮರವರ ಸಾಹಿತ್ಯ ಸಂಗಮ ಕೃತಿಯನ್ನು ಬಿಡುಗಡೆ ಮಾಡಲಾಯಿತು. ೨೫ಕ್ಕೂ ಹೆಚ್ಚಿನ ಕವಿಗಳು ತಮ್ಮ ಕವಿತೆಗಳನ್ನು ವಾಚಿಸಿದರು.
ನಿತೀಶ್ ಕಾಂತೇಶ್ ಪ್ರಾರ್ಥಿಸಿ, ಶ್ರೀಮತಿ ಹಾ.ಮ.ಸುಲೋಚನಾ ಸ್ವಾಗತಿಸಿದರು. ಕವಿಗೋಷ್ಟಿಯ ನಿರೂಪಣೆಯನ್ನು ಶ್ರೀಮತಿ ಸರಳಾ ಕಿರಣ್ ಕುಮಾರ್ ಮಾಡಿದರು. ನಳಿನ ಬಾಲಸುಬ್ರಹ್ಮಣ್ಯ ವಂದಿಸಿದರು.

Chamber Of Commerce Shivamogga ಡಿಸೆಂಬರ್ 28.ಜಿಲ್ಲಾ ವಾಣಿಜ್ಯ& ಕೈಗಾರಿಕಾ ಸಂಘದ ಸಂಸ್ಥಾಪಕ ದಿನಾಚರಣೆಗೆ ಸಕಲ ಸಜ್ಜು- ಬಿ.ಗೋಪಿನಾಥ್

0

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಪ್ರತಿ ವರ್ಷದಂತೆ ಈ ವರ್ಷವೂ ಸಂಸ್ಥಾಪಕರ ದಿನಾಚರಣೆಯನ್ನು ಡಿ.28 ರಂದು ಸಂಜೆ 4.30 ಕ್ಕೆ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು.

ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ವಯಸ್ಸಲ್ಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ 2024ನೇ ಸಾಲಿನ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಜಾನನ ಹೆಗಡೆ ಮತ್ತು ಪಾಲುದಾರರಾದ ಮೆ. ಮಾನಸ ವೆಟ್ ಫಾರ್ಮ, ಶ್ರೀ ಹೆಚ್.ಎನ್.ನಂಜುಂಡರಾಜು ಶೆಟ್ಟಿ ಮತ್ತು ಪಾಲುದಾರರಾದ ಮೆ. ಕನ್ನಿಕ ಟ್ರೇಡರ್ಸ್, ಶ್ರೀ ಪ್ರಶಾಂತ್ ಶಾಸ್ತ್ರಿ ಮಾಲೀಕರು ಮೆ. ಶಾಸ್ತ್ರಿ ಆಟೋಮೊಬೈಲ್ಸ್ ಇವರಿಗೆ ಸನ್ಮಾನಿಸಲಾಗುವುದು. ಹಾಗೂ ವಿಶೇಷ ಪುರಸ್ಕಾರವನ್ನು ಆಡಿಟರ್ ಮತ್ತು ಟ್ಯಾಕ್ಸ್ ಪ್ರಾಕ್ಟಿಶನರ್ ಎಸ್‌.ಬಿ.ಹನುಮಂತಪ್ಪ ಇವರಿಗೆ ಸನ್ಮಾನಿಸಲಾಗುವುದು ಎಂದರು.

ಹಾಗೆಯೇ ಸಂಘದ ಸ್ಥಾಪನೆಯಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಮತ್ತು ಸಂಘವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿಕೊಂಡು ಬಂದು, ಇಂದಿಗೂ ಸಲಹೆ ಮತ್ತು ಮಾರ್ಗದರ್ಶನ ನೀಡಿ ಬೆನ್ನೆಲುಬಾಗಿ ನಿಂತು ಮಹತ್ತರ ಕೊಡುಗೆ ನೀಡಿದ ಸಂಘದ ಮಾಜಿ ಅಧ್ಯಕ್ಷರುಗಳಾದ ಎಂ.ಶಂಕರ್ ರಾವ್, ಎಸ್.ರುದ್ರಗೌಡ, ಕೆ.ವಿ.ವಸಂತ್ ಕುಮಾರ್, ಟಿ.ಆರ್.ನಾರಾಯಣ ಶೆಟ್ಟಿ, ಹೆಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ, ಎನ್.ಗೋಪಿನಾಥ್ ಇವರಿಗೆ ಸನ್ಮಾನಿಸಲಾಗುವುದು ಎಂದರು.

Chamber Of Commerce Shivamogga ಸಂಘವು ಇಂದಿಗೆ 61 ವರ್ಷಗಳನ್ನು ಪೂರೈಸಿದ್ದು, ಕಳೆದ 61 ವರ್ಷಗಳಿಂದ ಕ್ಷೇತ್ರದ ಹಲವಾರು ಸಮಸ್ಯೆಗಳಾದ ಮೂಲಭೂತ ಸೌಕರ್ಯಗಳನ್ನು ಸೇರಿದಂತೆ ಹತ್ತಾರು ಅಭಿವೃದ್ಧಿ ಮತ್ತು ಸೇವಾ ಕಾರ್ಯಗಳನ್ನು ಮಾಡುತ್ತಾ ಉತ್ತಮ ಬಾಂಧವ್ಯದೊಂದಿಗೆ ಅಭಿವೃದ್ಧಿಗೆ ಶ್ರಮಿಸುತ್ತಿರುವ ಏಕೈಕ ಪ್ರತಿಷ್ಠಿತ ಸಂಸ್ಥೆಯಾಗಿ, ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಸರ್ಕಾರ ಮತ್ತು ಸಾರ್ವಜನಿಕರ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಟಿ.ಆರ್.ಅಶ್ವಥ್ ನಾರಾಯಣ ಶೆಟ್ಟಿ, ಎಂ.ಸುರೇಶ್, ವಿ.ಮನೋಹರ್, ಡಾ. ಲಕ್ಷ್ಮೀದೇವಿ ಗೋಪಿನಾಥ್, ಶಂಕರ್ ಉಪಸ್ಥಿತರಿದ್ದರು

Kuvempu ಶಿಕಾರಿಪುರದಲ್ಲಿ ಕುವೆಂಪು ಜನ್ಮದಿನ ವಿಶೇಷ. ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ನಾಟಕ ಸ್ಪರ್ಧೆ

0

Kuvempu ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನದ ಪ್ರಯುಕ್ತ ಡಿ.೨೮ರಂದು ಬೆಳಿಗ್ಗೆ 9:30ಕ್ಕೆ ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಪದವಿ ಹಾಗೂ ಬಿ.ಎಡ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ ಆಯೋಜಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ಹಾಗೂ ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ನಿಲುವುಗಳನ್ನು ಪರಿಚಯಿಸುವ ಉದ್ದೇಶದಿಂದ ನಾಟಕ ಸ್ಪರ್ಧೆ ಆಯೋಜಿಸಲಾಗಿದ್ದು, ಸಹ್ಯಾದ್ರಿ ರಂಗತರಂಗ ಶಿವಮೊಗ್ಗ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ನಾಟಕ ಸ್ಪರ್ಧೆ ನಡೆಯಲಿದೆ. ಶಾಸಕ ಬಿ.ವೈ. ವಿಜಯೇಂದ್ರ ಸ್ಪರ್ಧೆ ಉದ್ಘಾಟಿಸಲಿದ್ದಾರೆ.
Kuvempu ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ನಾಟಕ ಪ್ರದರ್ಶಿಸಲಿವೆ. ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ ರೂ. ೮,೦೦೦, ದ್ವಿತೀಯ ಬಹುಮಾನ ರೂ. ೬, ೦೦೦ ಮತ್ತು ತೃತೀಯ ಬಹುಮಾನ ರೂ. ೪,೦೦೦ ನಗದು ನೀಡಲಾಗುವುದು. ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕೆಂದು ಸಹ್ಯಾದ್ರಿ ರಂಗತರಂಗ ದ ಗೌರವಾಧ್ಯಕ್ಷ ಕಾಂತೇಶ್ ಕದರಮಂಡಲಗಿ ಕೋರಿದ್ದಾರೆ.