Thursday, March 19, 2026
Thursday, March 19, 2026
Home Blog Page 456

Kuvempu ಶಿಕಾರಿಪುರದಲ್ಲಿ ಕುವೆಂಪು ಜನ್ಮದಿನ ವಿಶೇಷ. ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ನಾಟಕ ಸ್ಪರ್ಧೆ

0

Kuvempu ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮದಿನದ ಪ್ರಯುಕ್ತ ಡಿ.೨೮ರಂದು ಬೆಳಿಗ್ಗೆ 9:30ಕ್ಕೆ ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಪದವಿ ಹಾಗೂ ಬಿ.ಎಡ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆ ಆಯೋಜಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸಲು ಹಾಗೂ ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ನಿಲುವುಗಳನ್ನು ಪರಿಚಯಿಸುವ ಉದ್ದೇಶದಿಂದ ನಾಟಕ ಸ್ಪರ್ಧೆ ಆಯೋಜಿಸಲಾಗಿದ್ದು, ಸಹ್ಯಾದ್ರಿ ರಂಗತರಂಗ ಶಿವಮೊಗ್ಗ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ನಾಟಕ ಸ್ಪರ್ಧೆ ನಡೆಯಲಿದೆ. ಶಾಸಕ ಬಿ.ವೈ. ವಿಜಯೇಂದ್ರ ಸ್ಪರ್ಧೆ ಉದ್ಘಾಟಿಸಲಿದ್ದಾರೆ.
Kuvempu ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡು ನಾಟಕ ಪ್ರದರ್ಶಿಸಲಿವೆ. ಸ್ಪರ್ಧೆಯಲ್ಲಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ ರೂ. ೮,೦೦೦, ದ್ವಿತೀಯ ಬಹುಮಾನ ರೂ. ೬, ೦೦೦ ಮತ್ತು ತೃತೀಯ ಬಹುಮಾನ ರೂ. ೪,೦೦೦ ನಗದು ನೀಡಲಾಗುವುದು. ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕಗಳನ್ನು ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕೆಂದು ಸಹ್ಯಾದ್ರಿ ರಂಗತರಂಗ ದ ಗೌರವಾಧ್ಯಕ್ಷ ಕಾಂತೇಶ್ ಕದರಮಂಡಲಗಿ ಕೋರಿದ್ದಾರೆ.

Central Armed Police Forces ಅರ್ಜಿಸಲ್ಲಿಕೆಗೆ ಅವಧಿ ವಿಸ್ತರಣೆ. ಜಿಲ್ಲಾ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ ಪ್ರಕಟಣೆ

0

Central Armed Police Forces ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಜಾಲತಾಣ HTTPS://ONLINE.KSB.GOV.IN ರಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:03/01/2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ತಿಳಿಸಿದ್ದಾರೆ.

Central Armed Police Forces ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು.

Kannada Rajyotsava ಹೊಸಪಾಳ್ಯ ಮಾರಿಕಾಂಬ ದೇಗುಲಕ್ಕೆ ₹20,000 ದೇಣಿಗೆ ನೀಡಿದ ಕರವೇ ಸ್ವಾಭಿಮಾನಿ ಬಣ

0

Kannada Rajyotsava ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕ ನಗರದಲ್ಲಿ ನಡೆದ 69ನೇ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಭುವನಗಿರಿಯಿಂದ ಕನ್ನಡ ಜ್ಯೋತಿಯನ್ನು ತಂದು ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರವೇ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಕೃಷ್ಣೇಗೌಡರು ಹಾಗೂ ಕರವೇ ಸ್ವಾಭಿಮಾನಿ ಬಣದ ಕಾನೂನು ಸಲಹೆಗಾರರಾದ ಟಿ.ಕೆ ಅನಿಲ್ ಕುಮಾರ್ ಹಾಗೂ ಮುಖ್ಯ ಅತಿಥಿಗಳಿಂದ ಕಾರ್ಯಕ್ರಮ ಉದ್ಘಾಟನೆ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರು ಹಾಗೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರಾದ ಶ್ರೀ ಕೆಬಿ ಪ್ರಸನ್ನ ಕುಮಾರ್. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ರಮೇಶ್ ರವರು ಹಾಗೂ ರೋಟರಿ ಅಧ್ಯಕ್ಷರು ಶಿವಮೊಗ್ಗ ಸೆಂಟ್ರಲ್ ನ ಶ್ರೀಯುತ ಕಿರಣ್ ಕುಮಾರ್ ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಎಚ್ಎಸ್ ಕಿರಣ್ ಕುಮಾರ್ ವಹಿಸಿದ್ದರು.

ಕೇವಲ ಹೋರಾಟಕ್ಕೆ ಅಷ್ಟೇ ಸೀಮಿಕ ಸೀಮಿತವಾಗದೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಹಾಯದಲ್ಲೂ ಮುಂದಿದೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಪಾಳ್ಯ ಗ್ರಾಮದ ಮಾರಿಕಾಂಬ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 20 ಸಾವಿರ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಯಿತು.

ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸೇವ ರತ್ನ ಪ್ರಶಸ್ತಿಯನ್ನು ನೀಡಲಾಯಿತು.

ಸೇವ ರತ್ನ ಪ್ರಶಸ್ತಿ ವಿಜೇತರು ಶ್ರೀಯುತ ರೇವಣಸಿದ್ದಯ್ಯ ಅರಣ್ಯ ಇಲಾಖೆ ಶಿವಮೊಗ್ಗ ನಾಗರಾಜ್ ವನ್ಯಜೀವಿ ಮತ್ತು ಪತ್ರಿಕಾ ವಿಭಾಗ ಹಾಗೂ ದಾನಂ ಸಿನಿಮಾ ನಟ ಹಾಗೂ ಕಿರುಚಿತ್ರ ನಿರ್ಮಾಪಕರು ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ವಿಭಾಗದಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿನಿ ಸಂಜನಾ ತಿವಾರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Kannada Rajyotsava ಕಾರ್ಯಕ್ರಮದಲ್ಲಿ ಕೇಂದ್ರಬಿಂದುವಾಗಿ ಪಂಚಭಾಷ ಚಲನಚಿತ್ರ ನಟ ರಘುರಾಜ್ ಮಲ್ನಾಡ್ ಅವರು ಭಾಗವಹಿಸಿದ್ದರು ಕೊನೆಯಲ್ಲಿ ಸಂಘದ ಪದಾಧಿಕಾರಿಗಳಿಗೆ ರಾಜ್ಯ ಅಧ್ಯಕ್ಷರ ಮುಖಾಂತರ ಆದರ್ಶ ಪತ್ರವನ್ನು ನೀಡಲಾಯಿತು ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀಯುತ ಕವಿತಾ .ಸಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಕಾರ್ಯಕ್ರಮದ ನಿರೂಪಕರಾಗಿ ಶಂಕರ್ ಚೀಲೂರವರು ನೆರವೇರಿಸಿದರು ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು ಮತ್ತು ಪ್ರೀತಂ ಮಲೋಡಿ ಆರ್ಕೆಸ್ಟ್ರಾ ಇವರಿಂದ ರಸಮಂಜರಿ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿತ್ತು
ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಪದಾಧಿಕಾರಿಗಳು ಸಾರ್ವಜನಿಕರು ಗಣ್ಯರು ಕನ್ನಡ ಅಭಿಮಾನಿಗಳು ಭಾಗವಹಿಸಿದ್ದರು.

Rotary Club Shvaimogga ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ .ಕಾರು ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ- ತಿರುಮಲೇಶ್

0

Rotary Club Shvaimogga ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್.ಜಿ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತಾ ಕಾರ್ಯಕ್ರಮದಲ್ಲಿ ಮಾತನಾಡಿ, ಸುರಕ್ಷಿತವಾಗಿ ವಾಹನ ಚಲಾಯಿಸಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಮತ್ತು ಕಾರ್ ಚಾಲನೆ ಮಾಡುವವರು ಸೀಟ್ ಬೆಲ್ಟ್ ಧರಿಸಬೇಕು ಎಂದು ಮನವಿ ಮಾಡಿದರು.

ರಸ್ತೆ ಸಂಚಾರ ದಿನದಿಂದ ದಿನಕ್ಕೆ ಆತಂಕಕಾರಿಯಾಗುತ್ತಿದೆ. ವೇಗವಾಗಿ ವಾಹನ ಚಾಲನೆ ಮಾಡದೆ ಸುರಕ್ಷಿತವಾಗಿ ವಾಹನ ಚಲಾಯಿಸಬೇಕು. ಒಂದು ತಪ್ಪು ನಡೆ ಸಾವಿಗೆ ಕಾರಣವಾಗಬಹುದು. ಸುರಕ್ಷಿತ ಚಾಲನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಮಾತ್ರವಲ್ಲದೇ ರಸ್ತೆಯಲ್ಲಿರುವ ಇತರರನ್ನು ರಕ್ಷಿಸಲು ಸಾಧ್ಯ. ವಾಹನ ಚಾಲನೆ ಮಾಡುವಾಗ ಮೊಬೈಲ್‌ಅನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ. ಮಾತನಾಡಿ, ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಅಪಘಾತ ಪ್ರಮಾಣ ತಡೆಗಟ್ಟಬಹುದಾಗಿದೆ. ಸುರಕ್ಷಿತ ವಾಹನ ಚಾಲನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.

Rotary Club Shvaimogga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಕುಟುಂಬ ಮಿಲನ ಕಾರ್ಯಕ್ರಮ ಮತ್ತು ಸ್ಪೋರ್ಟ್ಸ್ ನಲ್ಲಿ ವಲಯ ಚಾಂಪಿಯನ್ ವಿಜಯೋತ್ಸವ ಮತ್ತು 33 ವರ್ಷದ ಕ್ಲಬ್ ಡೇ ಆಚರಿಸಲಾಯಿತು. ಕ್ಲಬ್ ಸಂಸ್ಥಾಪಕ ಸದಸ್ಯರಾದ ಪಿಡಿಜಿ ಪ್ರಕಾಶ್ ಚೂಡಾಮಣಿ ಪವಾರ್, ಅರುಣ್ ಕುಮಾರ್, ರಮನಾಥ್ ಗಿರಿಮಾಜಿ ಅವರು ಕ್ಲಬ್ ನಡೆದು ಬಂದ ಹಾದಿ ಬಗ್ಗೆ ಸಭೆಗೆ ವಿವರಿಸಿದರು.

ವಲಯ ಮತ್ತು ಜಿಲ್ಲಾ ಸ್ಪೋರ್ಟ್ಸ್ ನಲ್ಲಿ ಗೆದ್ದವರಿಗೆ ಸನ್ಮಾನ ಮಾಡಲಾಯಿತು. ವಿಶೇಷವಾಗಿ ವಾಲಿಬಾಲ್ ರಾಷ್ಟ್ರೀಯ ಆಟಗಾರ ಭದ್ರಾವತಿಯ ಸೈಯದ್ ಸಾದೀಕ್ ಅವರನ್ನು ಸನ್ಮಾನಿಸಲಾಯಿತು. ಮುಂದಿನ ವರ್ಷದ ರೋಟರಿ ಕ್ಲಬ್ ಸೆಂಟ್ರಲ್ ನಿಯೋಜಿತ ಅಧ್ಯಕ್ಷರಾಗಿ ಬಸವರಾಜ್.ಬಿ ಮತ್ತು ನಿಯೋಜಿತ ಕಾರ್ಯದರ್ಶಿಯಾಗಿ ಜಯಶೀಲ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಹಾಗೂ ಇಬ್ಬರನ್ನು ಗೌರವಿಸಲಾಯಿತು.

ಕಾರ್ಯದರ್ಶಿ ಈಶ್ವರ್, ಕಿರಣ್, ಕುಮಾರ್, ಮೋಹನ್, ಭರತ್, ಸತೀಶ್, ಮಿಥುನ್ ಜಗದಾಳೆ, ಆನಂದ್, ರವಿ ಕೊಟೋಜಿ, ಧರ್ಮೇಂದ್ರ ಸಿಂಗ್, ರಾಜೇಶ್ ಹಾಗೂ ಆನ್ಸ್ ಕ್ಲಬ್ಬಿನ ಅಧ್ಯಕ್ಷೆ ಗೀತಾ ಜಗದೀಶ್, ಶುಭಾ ಚಿದಾನಂದ್, ಕ್ಲಬ್ಬಿನ ಎಲ್ಲ ಸದಸ್ಯರು ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದರು.

Sri Adichunchanagiri Education Trust Shimoga ಶ್ರೀವೀರ ಸೋಮೇಶ್ವರ ದೇವರಿಗೆ ಧನುರ್ಮಾಸ ವಿಶೇಷ ಹೂವಿನ ಅಲಂಕಾರ

0

Sri Adichunchanagiri Education Trust Shimoga ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ
ಗುರುಪುರದ ಬಿಜಿಎಸ್ ಶಾಲಾ ಆವರಣದಲ್ಲಿರುವ ಪುರಾತನಕಾಲದ ಶ್ರೀ ವೀರಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಧನುರ್ಮಾಸದ 11 ನೇ ದಿವಸದ ಪ್ರಯುಕ್ತ ಆಯೋಜಿಸಲಾಗಿದ್ದ ಶ್ರೀ ವೀರ ಸೋಮೇಶ್ವರಸ್ವಾಮಿಗೆ, ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಯಿತು.

ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಮಹಾ ಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು.

Sri Adichunchanagiri Education Trust Shimoga ಈ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ, ಶಾಲಾ, ಕಾಲೇಜಿನ ಪ್ರಾಂಶುಪಾಲರುಗಳು, ಶಿಕ್ಸಕರು,ಉಪನ್ಯಾಸಕರು,ವಿದ್ಯಾರ್ಥಿಗಳು, ಶ್ರೀ ಮಠದ ಸದ್ಭಕ್ತರು ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Actor Shivaraj Kumar ನಟ ಶಿವರಾಜ್ ಕುಮಾರ್ ಶಸ್ತ್ರ ಚಿಕಿತ್ಸೆ ಯಶಸ್ವಿ

0

Actor Shivaraj Kumar ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯ ಡಾ. ಮುರುಗೇಶ್ ಮನೋಹರನ್ ಆಪರೇಷನ್ ಯಶಸ್ವಿ ಆಗಿದೆ ಎಂದಿದ್ದಾರೆ.
ಶಿವರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾತನಾಡಿ
ಶಿವಣ್ಣ ದೇಹಸ್ಥಿತಿ ಚನ್ನಾಗಿದೆ ಎಂದು ಹೇಳಿದ್ದಾರೆ.

Actor Shivaraj Kumar ವೈದ್ಯರ ನಿರೀಕ್ಷೆಯಂತೆ ಡಿಸೆಂಬರ್ 25 ರಂದು ಸಂಪೂರ್ಣ ಎಚ್ಚರಸ್ಥಿತಿಗೆ ಬರುತ್ತಾರೆ.
ಜನವರಿ25 ಕ್ಕೆ ನಡ ಶಿವಣ್ಣನವರು ಭಾರತಕ್ಕೆ ವಾಪಸಾಗುವ ನಿರೀಕ್ಷೆ ಇದೆ.
ಗೀತಾ ಶಿವರಾಜ್ ಕುಮಾರ್ ಹಾಗೂ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ವೈದ್ಯರ ಸಂಗಡ ಇದ್ದರು.

CM Siddharamaiah ಪೂಂಛ್ ನಲ್ಲಿ ಸೇನಾವಾಹನ ಅಪಘಾತದಲ್ಲಿ ರಾಜ್ಯದ ಯೋಧರ ಮರಣ. ಮುಖ್ಯಮಂತ್ರಿ ಶೋಕ

0

CM Siddharamaiah ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

CM Siddharamaiah ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Karnataka Electricity Corporation ಶಿವಮೊಗ್ಗದ ಹಿರಿಯ ಸಮಾಜ ಸೇವಕ ಟಿ.ತಮ್ಮಯ್ಯ ನಿಧನ

0

Karnataka Electricity Corporation ಕರ್ನಾಟಕ ವಿದ್ಯುತ್ ನಿಗಮದಲ್ಲಿ ಕಾರ್ಯನಿರ್ವಾಹಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ. ಹಾಗೂ ರೋಟರಿ ಶಿವಮೊಗ್ಗ ಪೂರ್ವದ ಸದಸ್ಯರಾಗಿ ಮತ್ತು ವಿವೇಕ ಜಾಗೃತ ಬಳಗದ ಮಾಜಿ ಅಧ್ಯಕ್ಷರು ಸಕ್ರಿಯ ಸದಸ್ಯರು ಸಮಾಜ ಸೇವಕರಾದ ಟಿ.
ತಮ್ಮಯ್ಯ (80) ಅವರು ಇಂದು ಬೆಳಿಗ್ಗೆ ಶಿವಮೊಗ್ಗ ವಿನೋಬನಗರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಇವರಿಗೆ ಹೆಂಡತಿ ಮತ್ತು ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಮಗನಿದ್ದು ಇವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ಆದ Karnataka Electricity Corporation ಅಮೃತಪುರದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಮಾಜಿ ಸಹಾಯಕ ಗವರ್ನರ್ಗಳಾದ ಜಿ ವಿಜಯಕುಮಾರ್, ವಸಂತ್ ಹೋಬಳಿದಾರ್, ಡಾಕ್ಟರ್ ಗುಡದಪ್ಪ ಕಸಬಿ. ಚಂದ್ರಹಾಸ್ ರಾಯ್ಕರ್, ಅರುಣ್ ದೀಕ್ಷಿತ್, ಶಶಿಕಾಂತ್ ನಾಡಿಗ್,ಮಂಜುನಾಥ್ ರಾವ್ ಕದಂ, ಕಿಶೋರ್ ಕುಮಾರ್ ರವರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Eshwara Khandre ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಾಗಿದೆ-ಸಚಿವ ಈಶ್ವರ ಖಂಡ್ರೆ

0

Eshwara Khandre “ಶತಮಾನಗಳಿಂದ ಜನರು ಅರಣ್ಯ ದಂಚಿನಲ್ಲಿ ವಾಸಿಸುತ್ತಿದ್ದು, ಇವರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿ ದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿ -ದ್ದೇವೆ,” ಎಂದು ರಾಜ್ಯ ಸರ್ಕಾರದ
ತೀರ್ಮಾನವನ್ನ ಕೇಂದ್ರಕ್ಕೆ ತಿಳಿಸಲಾಗಿದೆ.

‘ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ F ನಡೆಸಲು ಸಮಿತಿಗಳನ್ನು ಚಿಸಲಾಗಿದೆ. ಅದರಂತೆ ಮುಂದಿನ – ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ದವದ ಬಗ್ಗೆ ಸರಕಾರಕ್ಕೆ ವರದಿ ಯಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ನಿಲುವು ಈ ಮೂಲಕ
ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದ್ದು, ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ ಎಂದರು.

Eshwara Khandre ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾಚ್ ವರದಿ. ಆ ಸಮಯದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಸ್ತಿಯಾ ಗುವ ವಿಶ್ವಾಸ ಇದೆ,” ಎಂದರು.

ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಆ್ಯಂಟನಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ಆರ್‌ಎಫ್‌ಒಗ ಳಾದ ವಿಮಲ್ ಬಾಬು, ಮಂಜು ನಾಥ್, ಸಂದ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು.

H.D.Kumarswami ಭದ್ರಾವತಿ ವಿಐಎಸ್ ಎಲ್ ಬಗ್ಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ

0

H.D.Kumarswami ಭದ್ರಾವತಿ ವಿಐಎಸ್ ಎಲ್ ಬಗ್ಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರವನ್ನು 15,000 ಕೋಟಿ ವೆಚ್ಚದಲ್ಲಿ ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಈ ಸಂಗತಿಯನ್ನ ಮಂಡ್ಯದಲ್ಲಿ ನಡೆದ87 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ತಿಳಿಸಿದರು.