ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಯದಂತೆ ಮಾಡಿ, ಪ್ರಶ್ನೆಪತ್ರಿಕೆಯ ಸೋರಿಕೆಯನ್ನು ತಡೆಯಲಾಗದೇ ಮರುಪರೀಕ್ಷೆ ನಡೆಸಿ, ಸುಮಾರು 17 ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ದರ್ಮೇಂದ್ರ ಪ್ರಧಾನ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಹಿಂದಿನಂತೆ ಸಿಇಟಿ ಪರೀಕ್ಷೆಯನ್ನೇ ಮುಂದುವರೆಸಬೇಕು ಎಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಈ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳನ್ನು ಒತ್ತಾಯಿಸುತ್ತಿದೆ.
ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯದ ಕನಸು ಹೊತ್ತುಕೊಂಡು ನೀಟ್ ಪರೀಕ್ಷೆಯನ್ನು ಬರೆಯುತ್ತಾರೆ. ಆದರೆ, ಈ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಅಲ್ಲದೇ ಮರು ಪರೀಕ್ಷೆಯನ್ನು ನಡೆಸುವ ಮೂಲಕ ಅಮಾಯಕ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಿದೆ. ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿ ದೇಶಾದ್ಯಂತ ಸುಮಾರು 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಈ ಹಿನ್ನೆಲೆ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಂದಿದೆ.
ಪ್ರಧಾನಿ ನರೇಂದ್ರ ಮೋದಿಯವರು ಘೋರ ದುರಂತ ನಡೆದಿದ್ದರೂ ಆ ಬಗ್ಗೆ ಇದುವರೆಗೂ ಚಕಾರವೆತ್ತಲಿಲ್ಲ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಮೂಲಕ ಸೂತಕದ ವಾತಾವರಣದಲ್ಲೂ ಸಂಭ್ರಮಿಸಿದ್ದಾರೆ.
ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲಾಗದೇ ಮರುಪರೀಕ್ಷೆ ನೆಡೆಸಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು.
ದೇಶದಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯಗಳಿಗೆ ತಮ್ಮದೇ ಸಿಇಟಿ ಮೂಲಕ ವೈದ್ಯಕೀಯ ಪ್ರವೇಶಾತಿ ನಡೆಸುವ ಅವಕಾಶ ಮಾಡಿಕೊಡಬೇಕು. ಪರೀಕ್ಷಾ ಅಕ್ರಮಗಳ ಬಗ್ಗೆ ಸಂಪೂರ್ಣ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು.
ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದೇ ಇದ್ದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಈ ಮೂಲಕ ತಿಳಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಯುವ ಮುಖಂಡ ಮಧುಸೂದನ್, ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ ಗಿರೀಶ್, ಮಹಮದ್ ಗೌಸ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್, ಮಲಗೊಪ್ಪ ಶಿವು, ರೇಷ್ಮಾ,ಗೌತಮ್, ಬಾಬು, ತೌಫಿಕ್, ನಿಖಿಲ್, ವಿಷ್ಣು, ಆಕಾಶ್, ಅಶೋಕ್, ಲಿಂಗರಾಜು, ರವಿ, ಯೋಗೇಶ್,ಅರುಣ್, ಪ್ರಶಾಂತ್, ಗೌತಮ್, ದೃಶ್ಯ, ರೋಷನ್, ಅನೂಪ್, ಮನು, ಗಣೇಶ್, ಗಗನ್ ಹಾಗೂ ನೂರಾರು ಯುವಕ ಮುಖಂಡರು ಪಾಲ್ಗೊಂಡಿದ್ದರು
ನೀಟ್ ಪರೀಕ್ಷೆ ಹಗರಣ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ಆಗ್ರಹ
B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ
B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ “ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ” ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ ಅವರು ಅತಿಥಿಗಳಾಗಿ
ಭಾಗವಹಿಸಿದ್ದರು.
ನಾಡಿನ ಹೆಮ್ಮೆಯ ಕ್ರಾಂತಿಕಾರಿ ಧೀಮಂತ ನಾಯಕನಿಗೆ ಈ ಸಂದರ್ಭದಲ್ಲಿ ಪುಷ್ಪಾರ್ಚನೆ ಮೂಲಕ ಭಕ್ತಿಪೂರ್ವಕ ನಮನಗಳನ್ನು ಎಲ್ಲರೂ ಸಲ್ಲಿಸಿದರು.
ಅಪ್ರತಿಮ ಆಡಳಿತಗಾರ, ದೂರದರ್ಶಿ ಹಾಗೂ ಬೆಂಗಳೂರು ಮಹಾನಗರದ ನಿರ್ಮಾತೃಗಳಾದ ನಾಡಪ್ರಭು ಶ್ರೀ ಕೆಂಪೇಗೌಡರ ಕೊಡುಗೆಗಳು ಇಡೀ ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತದ್ದಾಗಿದೆ. ಅವರ ಜನಪರ ಆಡಳಿತ ಪದ್ಧತಿ, ಕೆರೆ-ಕಟ್ಟೆಗಳ ನಿರ್ಮಾಣ, ಪರಿಸರ ಕಾಳಜಿ ಹಾಗೂ ದೂರದೃಷ್ಟಿಯ ನಗರಾಭಿವೃದ್ಧಿ ಯೋಜನೆಗಳು ಇಂದಿಗೂ ಮತ್ತು ಮುಂದಿನ ಪೀಳಿಗೆಗೂ ಸದಾ ಆದರ್ಶಪ್ರಾಯ ಮತ್ತು ಮಾರ್ಗದರ್ಶಕವಾಗಿವೆ ಎಂದು ಸಂಸದ ರಾಘವೇಂದ್ರ ಅವರು ಕೆಂಪೇಗೌಡರ ಗುಣಗಾನ ಮಾಡಿದರು.
B.Y. Raghavendra ಶ್ರೀ ಕೆಂಪೇಗೌಡರ ಸದಾಶಯಗಳ ಹಾದಿಯಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆ ಹಾಗೂ ಇಡೀ ನಾಡಿನ ಸರ್ವತೋಮುಖ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಕರೆ ನೀಡಿದರು.
ಸಿಇಟಿಯಲ್ಲಿ ಕಡಿಮೆ ಅಂಕ : ನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿಯ ಸಾವು
ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. 20 ದಿನಗಳ ಹಿಂದೆ ಕಳೆನಾಶಕ ಕುಡಿದಿದ್ದ ವಿದ್ಯಾರ್ಥಿ ಇದೀಗ ಚಿಕಿತ್ಸೆ ಪಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
18 ವರ್ಷದ ಜಯಂತ್ ಎಂಬ ವಿದ್ಯಾರ್ಥಿ ಮೃತ ದುರ್ದೈವಿ, ಈತ ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರ ಕಳೆದ ಜೂನ್ 6ರಂದು ಹೊರಬಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶದಲ್ಲಿ ಈತನಗೆ ಕಡಿಮೆ ಮಾರ್ಕ್ ಬಂದಿತ್ತು. ಈ ಕಾರಣಕ್ಕೆ ವಿದ್ಯಾರ್ಥಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದ ಎನ್ನಲಾಗಿದೆ.
ಆನಂತರ ವಿದ್ಯಾರ್ಥಿಯನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಇದ್ದಾಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ಧಾನೆ. ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯುತ್ ವಲಯ ಖಾಸಗೀಕರಣ ವಿರೋಧಿಸಿ ಸಾಗರ ಬಂದ್, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸಲು ಕೈಗೊಂಡಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ನೀಡಿದ್ದ ಸಾಗರ ಬಂದ್ ಕರೆಗೆ ಇಂದು ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಬೆಳಿಗ್ಗೆಯಿಂದಲೇ ರೈತ ಮುಖಂಡರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ವ್ಯಾಪಾರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ವರ್ತಕರು ಸ್ವಯಂಪ್ರೇರಿತರಾಗಿ ತಮ್ಮ ವಹಿವಾಟನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಹಸಿ ಮೀನು ಮಾರಾಟಗಾರರ ಸಂಘ, ಹೋಟೆಲ್ ಮಾಲೀಕರ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ಘೋಷಿಸಿದ್ದು, ನಗರದ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು.
ಪ್ರತಿಭಟನಾಕಾರರು ವಿದ್ಯುತ್ ವಲಯದ ಖಾಸಗೀಕರಣದಿಂದ ರೈತರು ಹಾಗೂ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ಆರೋಪಿಸಿ ಸರ್ಕಾರದ ನಿರ್ಧಾರವನ್ನು ಖಂಡಿಸಿದರು.
ನಗರದ ಗಣಪತಿ ದೇವಸ್ಥಾನದಿಂದ ಟ್ರ್ಯಾಕ್ಟರ್‌ಗಳ ಮೂಲಕ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು, ನೂರಾರು ರೈತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ವಿದ್ಯುತ್ ವಲಯದ ಖಾಸಗೀಕರಣವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಒಟ್ಟಾರೆಯಾಗಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ ನಡೆದ ಸಾಗರ ಬಂದ್‌ಗೆ ವಿವಿಧ ಸಂಘಟನೆಗಳು, ವ್ಯಾಪಾರಿಗಳು ಹಾಗೂ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೋರಾಟ ಯಶಸ್ವಿಯಾಯಿತು.
S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಶಾಸಕ ಚನ್ನಿ ಅವರಿಂದ ಮಹತ್ವದ ಸಭೆ
S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ ಭವನ’ದಲ್ಲಿ ಮಹತ್ವದ ಸಭೆ! ನಡೆಯಿತು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸಭೆಯಲ್ಲಿ ಪ್ರಮುಖ ಸಮಸ್ಯೆಗಲಕ ಬಗ್ಗೆ ಚರ್ಚಿಸಿದರು.
ಶಿವಮೊಗ್ಗದ ಆರ್ಥಿಕ ಶಕ್ತಿಯಾಗಿರುವ ಹಾಗೂ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ಶಾಸಕರ ಅಧಿಕೃತ ಕಚೇರಿಯಾದ ‘ಕರ್ತವ್ಯ ಭವನ’ದಲ್ಲಿ ಮಾಚೇನಹಳ್ಳಿ ಕೈಗಾರಿಕಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಭೆ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಕೈಗಾರಿಕಾ ವಲಯದಲ್ಲಿ ಎದುರಾಗುತ್ತಿರುವ ವಿದ್ಯುತ್ ವ್ಯತ್ಯಯ, ಹಳೆಯದಾದ ಮೂಲಸೌಕರ್ಯಗಳ ತೊಂದರೆ ಹಾಗೂ ಇಂಧನ ಇಲಾಖೆಯಿಂದ ಕೈಗೊಳ್ಳಬೇಕಾದ ತುರ್ತು ಸುಧಾರಣೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಕೈಗಾರಿಕೋದ್ಯಮಿಗಳ ಸಮಸ್ಯೆಗಳಿಗೆ ಮೆಸ್ಕಾಂ ಮತ್ತು ಇಲಾಖೆಯ ಉನ್ನತಾಧಿಕಾರಿಗಳ ಮೂಲಕ ಶೀಘ್ರವಾಗಿ ಶಾಶ್ವತ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.
S.N. Channabasappa ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೇಗೌಡರು, ಮಾಚೇನಹಳ್ಳಿ ಕೈಗಾರಿಕಾ ಘಟಕ ಸಂಘದ ಪ್ರಮುಖ ಪದಾಧಿಕಾರಿಗಳು, ಉದ್ಯಮಿಗಳು ಉಪಸ್ಥಿತರಿದ್ದರು.
Rotary Shivamogga ಪೋಲಿಯೊ ಮುಕ್ತ ಭಾರತ ಅಭಿಯಾನದಲ್ಲಿ ರೋಟರಿ ಸಂಸ್ಥೆಯದ್ದು ಮಹತ್ವದ ಪಾತ್ರ- ವಸಂತ ಹೋಬಳಿದಾರ್
Rotary Shivamogga ಪೋಲಿಯೋ ಹನಿಯನ್ನು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಆಯೋಜಿಸಿದ್ದ ಲಸಿಕಾ ಅಭಿಯಾನದಲ್ಲಿ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪೋಲಿಯೋ ಮುಕ್ತ ಭಾರತದ ಅಭಿಯಾನದಲ್ಲಿ ರೋಟರಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಪೋಲಿಯೋ ಮುಕ್ತ ವಾತಾವರಣ ನಿರ್ಮಿಸುವುದು ಅಗತ್ಯ. ದೇಶದ ಮಕ್ಕಳು ಸದೃಢವಾಗಿ ಆರೋಗ್ಯದಿಂದ ಬೆಳೆಯಲು ಪೋಲಿಯೋ ಹನಿ ಪಡೆಯುವುದು ಅತ್ಯಂತ ಅವಶ್ಯಕ. ಪಾಲಕರು ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದು, ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿದೆ. ಪಲ್ಸ್ ಪೋಲಿಯೋ ಅಭಿಯಾನದಲ್ಲೂ ರೋಟರಿ ಕೈಜೋಡಿಸಿದೆ ಎಂದು ತಿಳಿಸಿದರು.
Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿತ ಕಾರ್ಯದರ್ಶಿ ಮನೋಹರ್, ವಲಯ ಸೇನಾನಿ ಎ.ಒ.ಮಹೇಶ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಪೋಷಕರು ಹಾಜರಿದ್ದರು.
ಭಾವನೆ, ಕೋಪ, ಒತ್ತಡಗಳು ರೋಗವಲ್ಲ ಆದರೆ ಅವು ರೋಗದ ಮೂಲಗಳು- ಡಾ.ನಿರುಪಮಾ ನಾಗರಾಜ್
ದಿನಾಂಕ : 27/06/2026 ರಂದು ನಮ್ಮ ಡಾ. ಜಿ ಎ ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಸ್ಥ ಮನ – ಸಮೃದ್ಧ ಜೀವನ ಎಂಬ ವಿಷಯದ ಕುರಿತು ಸಾಗರದ ಸುಮುಖ ಸ್ಪೆಷಾಲಿಟಿ ಅಸ್ಪತ್ರೆಯ ಸಂದರ್ಶಕ ಮನೋವೈದ್ಯರಾದ ಡಾ. ನಿರುಪಮಾ ನಾಗರಾಜ್ ರವರು ಉಪನ್ಯಾಸ ನೀಡಿದರು. ಭಾವನೆ, ಕೋಪ, ಒತ್ತಡಗಳು ರೋಗಗಳಲ್ಲ, ಅದರೆ ರೋಗದ ಮೂಲಗಳಾಗುತ್ತವೆ. ಶಿಕ್ಷಕರು, ವಿದ್ಯಾರ್ಥಿಗಳು ಅನೇಕ ರೀತಿಯ ಸವಾಲುಗಳನ್ನು ಎದುರಿಸುತ್ತಿರುತ್ತಾರೆ. ಅವುಗಳನ್ನು ನಕಾರಾತ್ಮಕವಾಗಿ ಸ್ವೀಕರಿಸುವುದರ ಬದಲು ಪರಿಹಾರಾತ್ಮಕವಾಗಿ ಅಲೊಚನೆ ಮಾಡುವುದು ನಮ್ಮ ಆರೋಗ್ಯದ ರಕ್ಷಣೆಗೆ ಸಹಾಯ ಮಾಡುತ್ತದೆ. ಮೊಬೈಲ್ /ತಂತ್ರಜ್ಞಾನ ಬಳಕೆಯಿಂದ
ಮಕ್ಕಳ ಏಕಾಗ್ರತೆಯು ತುಂಬಾ ಕಡಿಮೆಯಾಗುತ್ತಿದೆ. ಸಮಸ್ಯೆಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ, ಕೌಟುಂಬಿಕ ಸಂಗತಿಗಳ ಅದ್ಯಯನಗಳು ತುಂಬಾ ಅಗತ್ಯ. ಇವುಗಳನ್ನು ಜೋಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯವರು, ಸಹಶಿಕ್ಷಕರು, ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಮಂದಿ ದಾನಿಗಳು ಭಾಗಿ
ಶಿವಮೊಗ್ಗ ನಗರದ ಗೋಂಧಿಚಟ್ನಹಳ್ಳಿಯಲ್ಲಿ ಶ್ರೀ ಮಾರಿಕಾಂಬಾ ಫೈನಾನ್ಸ್, ಗೋಂಧಿಚಟ್ನಹಳ್ಳಿ ಹಾಗೂ ಆಶಾಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರ ಮತ್ತು ಶ್ರೀ ವೈಷ್ಣವಿ ಚಾರಿಟೇಬಲ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ಸಂಘದ ಉದ್ಘಾಟನೆ ಸಮಾರಂಭದ ಸವಿನೆನಪಿಗಾಗಿ ಆಯೋಜಿಸಿದ್ದ ಈ ರಕ್ತದಾನ ಶಿಬಿರದಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥ ಕೃಷ್ಣಮೂರ್ತಿ, ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇಂತಹ ಶಿಬಿರಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಕಾರ್ತಿಕ್, ಕಣ್ಣನ್, ಅಂಬರೀಶ್, ಶಂಕರ್, ಸೇಲ್ವಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
University of Mysore ದೃಶ್ಯಕಲೆ ವಿಷಯ ,ಪ್ರಥಮ ವರ್ಷ ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ದತಿಯ ದೃಶ್ಯ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ./ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಪದವಿಯಲ್ಲಿ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆ, ಕಲಾ ಇತಿಹಾಸ ಮತ್ತು ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಜಾಲತಾಣ https://uucms.karnataka.gov.in ಮೂಲಕ ದಿ:04/07/2026 ರೊಳಗಾಗಿ ದಂಡಶುಲ್ಕದೊಂದಿಗೆ ಸಲ್ಲಿಸುವುದು. University of Mysore ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನವನ್ನು ದಿನಾಂಕ: 06/07/2026 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Pulse Polio ಪೋಲಿಯೊ ಹನಿ:ಸುರಕ್ಷಿತ ಉಚಿತ ಮತ್ತು ಪರಿಣಾಮಕಾರಿ.ನೆರೆದೇಶದ ವೈರಸ್ ನಿರೋಧಕ: ಡಾ.ರಘುನಂದನ್
Pulse Polio “ ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ ನಿರ್ದೇಶಕರು ಎನ್ ಸಿ ಡಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ. ರಘು ನಂದನ್.
ಪೋಲಿಯೋ ಹನಿಗಳು ಸಂಪೂರ್ಣವಾಗಿ ಸುರಕ್ಷಿತ, ಉಚಿತ ಮತ್ತು ಹೆಚ್ಚು ಪರಿಣಾಮಕಾರಿ,ಹೆಚ್ಚುವರಿ ಪ್ರಮಾಣಗಳು ಸಮುದಾಯದ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ನೆರೆಯ ದೇಶಗಳಿಂದ ವೈರಸ್ ಅನ್ನು ಮರು-ಆಮದು ತಡೆಯಲು ಅಗತ್ಯವಾದ ವರ್ಧಕವಾಗಿ ಕಾರ್ಯನಿರ್ವಹಿಸುತ್ತವೆ. ಎಂದು ಡಾ. ರಘು ನಂದನ್ , ಉಪ ನಿರ್ದೇಶಕರು ಎನ್ ಸಿ ಡಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳು ಹೇಳಿದರು
ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಆವರಣದಲ್ಲಿ ಜಿಲ್ಲಾ ಆಡಳಿತ, ಜಿ. ಪo. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಶಿವಮೊಗ್ಗ ನಗರದ ಎಲ್ಲಾ ರೋಟರಿ ಕ್ಲಬ್ ಗಳು ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕೆಯ ಚಾಲನಾ ಕಾರ್ಯಕ್ರಮ 2026 ರಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ ಮಾತನಾಡಿದ ಅವರು ದೇಶಾದ್ಯಂತ ಈ ಅಭಿಯಾನವು, ಪೋಲಿಯೊ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳಲು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿ ಮಗುವೂ ಜೀವ ಉಳಿಸುವ ಮೌಖಿಕ ಪೋಲಿಯೋ ಲಸಿಕೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ಪೋಷಕರಲ್ಲಿ ಮನವಿ ಮಾಡಿದರು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಕೆ ಎಸ್, ಮಾತನಾಡಿ ಮಕ್ಕಳಿಗೆ ಹಿಂದಿನ ಡ್ರೈವ್ಗಳಲ್ಲಿ ಲಸಿಕೆ ಹಾಕಿದ್ದರೂ ಅಥವಾ ಪ್ರಸ್ತುತ ಸ್ವಲ್ಪ ಅಸ್ವಸ್ಥರಾಗಿದ್ದರೂ ಸಹ ಹನಿಗಳನ್ನು ನೀಡಬೇಕು.ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ, ಹೆಚ್ಚು ಪರಿಣಾಮಕಾರಿಯಾಗಿದೆ ಮತ್ತು ಎಲ್ಲಾ ಸರ್ಕಾರಿ ಬೂತ್ಗಳಲ್ಲಿ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ ಇದು ಪ್ರತಿ ಮಗುವಿಗೆ ಆರೋಗ್ಯಕರ ಮತ್ತು ಪೋಲಿಯೊ ಮುಕ್ತ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದರು
Pulse Polio ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸೆಕರು ಡಾ. ಗೀತಾ, ಅವರು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕೇಂದ್ರಗಳು ಶಾಲೆಗಳು ಮತ್ತು ಇತರ ಪ್ರಮುಖ ಕೇಂದ್ರಗಳಲ್ಲಿ ಪೋಲಿಯೊ ಹನಿಗಳನ್ನು ನೀಡಲಾಗುವುದು. ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಮತ್ತು ರೋಟರಿ ಸ್ವಯಂಸೇವಕರು ಈ ಕಾರ್ಯಕ್ಕಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ರೊಟೇರಿಯನ್ ಜಿ ವಿಜಯ್ ಕುಮಾರ್ ಮಾತನಾಡುತ್ತ ಅಭಿಯಾನವು ೦ ರಿಂದ ೫ ವರ್ಷ ವಯಸ್ಸಿನ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ. ಸ್ಥಳೀಯ ರೋಟರಿ ಸ್ವಯಂಸೇವಕರು ಗೊತ್ತುಪಡಿಸಿದ ಸ್ಥಳಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸಹಾಯ ಮಾಡುತ್ತಿದ್ದಾರೆ… ಎಂದರು
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೋಷಕರ ಮಕ್ಕಳಿಗೆ ಪೋಲಿಯೋ ಲಸಿಕೆಗಳನ್ನು ನೀಡಲಾಯಿತು
ಸಭೆಯಲ್ಲಿ ಡಾ. ಮಲ್ಲಪ್ಪ ಓ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು, ಡಾ. ರಾಮಚಂದ್ರ, ಚರ್ಮರೋಗ ತಜ್ಞರು, ಡಾ ಚಂದ್ರಶೇಖರ್ ತಾಲೂಕ ಆರೋಗ್ಯ ಅಧಿಕಾರಿಗಳು, ಹರ್ಷಭಾಸ್ಕರ್ ಕಾಮತ ,ಅಧ್ಯಕ್ಷರು ರೋಟರಿ ಕ್ಲಬ್ ಮಿಡ್ ಟೌನ್ , ವಿಶ್ವಾಸ್ , ಶಿವಮೊಗ್ಗ ರೋಟರಿ ಕ್ಲಬ್ , ಆರ್ ಮನೋಹರ ಲೆಕ್ಕಪರಿಶೋಧಕರು, ನಿಯೋಜಿತ ಕಾರ್ಯದರ್ಶಿ ರೋಟರಿ ಕ್ಲಬ್ ,ಶಿವಮೊಗ್ಗ ಈಸ್ಟ್ ಡಿಎಚ್ಒ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಇವರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು
