Friday, March 20, 2026
Friday, March 20, 2026
Home Blog Page 461

Madhu Bnagarappa ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಸಮರ್ಥ ವಾದಮಾಡಲು ನ್ಯಾಯವಾದಿಯವರನ್ನ ನೇಮಿಸಿದ್ದೇವೆ- ಮಧುಬಂಗಾರಪ್ಪ

0

Madhu Bnagarappa ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿರುವ ಅರ್ಹ ರೈತರಿಗೆ ಮತ್ತು ನಿವಾಸಿಗಳಿಗೆ ಸರ್ಕಾರದಿಂದಲೇ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಸೊರಬದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದAತೆ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಈ ಹಿಂದೆ ಸದರಿ ವಿಷಯವು ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಾಧಾರ ಮತ್ತು ದಾಖಲೆಗಳ ಸಹಿತ ಸಮರ್ಥಿಸಿಕೊಳ್ಳುವಲ್ಲಿ ನ್ಯೂನತೆಗಳಿದ್ದುದನ್ನು ಗುರುತಿಸಿ, ಓರ್ವ ಸಮರ್ಥ ನ್ಯಾಯವಾದಿಯೊಬ್ಬರನ್ನು ಈಗಾಗಲೇ ನೇಮಿಸಿದೆ.

2025ರ ಜನವರಿ ಮಾಹೆಯಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದ ಶರಾವತಿ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ತೀರ್ಪು ಹೊರಬರುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.

ಹಲವು ದಶಕಗಳ ಸಮಸ್ಯೆಗೆ ಈ ಹಿಂದಿನ ಚುನಾಯಿತ ಜನಪ್ರತಿನಿಧಿಗಳು ಅರ್ಹ ಬಡ ರೈತರಿಗೆ, ವನವಾಸಿಗಳಿಗೆ ಸರಿಯಾದ ನ್ಯಾಯ ಒದಗಿಸುವಲ್ಲಿ ವಿಫುಲರಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಧಿಕಾರಾವಧಿಯಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳನ್ನು ನಂತರ ಆಡಳಿತಕ್ಕೆ ಬಂದ ಸರ್ಕಾರಗಳು ಸದರಿ ಹಕ್ಕುಪತ್ರಗಳನ್ನು ಅನೂರ್ಜಿತಗೊಳಿಸಿ, ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದವು. ಪ್ರಸ್ತುತ ಸರ್ಕಾರ ನೊಂದವರ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದವರು ನುಡಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಯತ್ನ ಮುಂದುವರೆದಿದ್ದು, ಅರ್ಹರಿಗೆ ಹಕ್ಕುಪತ್ರ ನೀಡುವ ಕುರಿತು ಈಗಾಗಲೇ ಅನೇಕ ಬಾರಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಅಡಿಕೆ ಹಾನಿಕಾರಕವಲ್ಲ : ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಾಗೂ ಪರಂಪರಾಗತವಾಗಿ ಅಡಿಕೆ ಬೆಳೆಯನ್ನು ತಮ್ಮ ಜೀವನಾಧಾರ ಬೆಳೆಯನ್ನಾಗಿ ಬೆಳೆಸಿಕೊಂಡು ಬರಲಾಗುತ್ತಿದೆ. ಅಲ್ಲದೇ ಅದರ ಕ್ಷೇತ್ರವ್ಯಾಪ್ತಿ ಪ್ರತಿವರ್ಷ ಹೆಚ್ಚಾಗುತ್ತಲೇ ಇದೆ. ಕೆಲವು ವರ್ಷಗಳ ಹಿಂದೆ ಅಡಿಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವೆಂದು ಸಂಸ್ಥೆಯೊಂದು ವರದಿ ನೀಡಿತ್ತು.

ಈ ವರದಿ ಸ್ಪಷ್ಟತೆಯಿಂದ ಕೂಡಿಲ್ಲ. ಬದಲಾಗಿ ಅಡಿಕೆ ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಹಾನಿಕಾರಕವಲ್ಲ ಎಂದ ಅವರು, ರಾಜ್ಯ ಸರ್ಕಾರವು ಅಡಿಕೆ ಬೆಳೆಗಾರರ ಸಂರಕ್ಷಣೆಗೆ ಬದ್ದವಾಗಿದೆ. ಕೇಂದ್ರ ಸರ್ಕಾರವೂ ಕೂಡ ಈ ಬಗ್ಗೆ ರೈತರ ಪರವಾಗಿ ಸಮರ್ಥಿಸಿಕೊಳ್ಳಬೇಕೆಂದವರು ನುಡಿದರು.

Madhu Bnagarappa ಸದನದಲ್ಲಿ ಅಸಂವಿಧಾನಿಕ ಪದ ಬಳಕೆಗೆ ಖಂಡನೆ : ರಾಜ್ಯ ಸರ್ಕಾರದ ಜವಾಬ್ದಾರಿಯುತ ಹುದ್ದೆಯಲ್ಲಿರುವ ಮಹಿಳಾ ಸಚಿವರ ಬಗ್ಗೆ ಮಾತನಾಡುವ ಭರದಲ್ಲಿ ಅಸಂವಿಧಾನಿಕ ಪದ ಬಳಸಿರುವುದು ಖಂಡನೀಯ ಮತ್ತು ಅತ್ಯಂತ ಬೇಜವಾಬ್ದಾರಿ ಹೇಳಿಕೆಯಾಗಿದೆ. ಅಸಭ್ಯ ಪದ ಬಳಕೆ ಮಾಡಿದ ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯವು ಕಠಿಣ ದಂಡನೆಗೆ ಗುರಿಪಡಿಸಬೇಕೆಂದವರು ನುಡಿದರು.

ನಮ್ಮ ದೇಶದ ಸಂವಿಧಾನ ಎಲ್ಲರಿಗೂ ಎಲ್ಲ ರೀತಿಯ ಹಕ್ಕು ಮತ್ತು ಸ್ವಾತಂತ್ರö್ಯವನ್ನು ನೀಡಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇವರಿಗೆ ಮಿಗಿಲಾದವರು. ಗಾಂಧಿ ಮತ್ತು ಅಂಬೇಡ್ಕರ್ ಈ ದೇಶದ ಎರಡು ಕಣ್ಣುಗಳು ಎಂದು ಬಣ್ಣಿಸಿದ ಅವರು, ದೇಶದ ಪ್ರಜಾಸತ್ತಾತ್ಮಕ ಸಾರ್ವಭೌಮ, ಮತ್ತು ಏಕತೆಯನ್ನು ಎತ್ತಿ ಹಿಡಿಯುವ ಪ್ರಧಾನಾಲಯದಲ್ಲಿ ಗೌರವಾನ್ವಿತ ಅಂಬೇಡ್ಕರ್ಋ ಅವರ ಬಗ್ಗೆ ಜನಪ್ರತಿನಿಧಿಯೊಬ್ಬರು ಅವಹೇಳನಕಾರಿಯಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ನಾಗರಾಜಗೌಡ ಹಾಗೂ ಆರ್.ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Shimoga District Backward Classes Welfare Department ಮೆಟ್ರಿಕ್ ನಂತರದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಅರ್ಜಿ ಆಹ್ವಾನ

0

Shimoga District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ದಿ:05/02/2025 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. Shimoga District Backward Classes Welfare Department ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in, bcwdhelpline@gmail.com, ದೂ.ಸಂ.: 1902, ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

MESCOM ಹರಕೆರೆ ಸುತ್ತಮುತ್ತ ಡಿಸೆಂಬರ್ 23 ರಂದು ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೇ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಾದ ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Madhu Bangarappa ಸೊರಬ ತಾಲ್ಲೂಕಿನ ಮನೆಮನೆಗೆ ಶುದ್ಧ ಕುಡಿಯುವ ನೀರಿನ ಯೋಜನೆ ಶೀಘ್ರ ಕೈಗೆತ್ತಿಕೊಳ್ಳಲಾಗುವುದು- ಮಧು ಬಂಗಾರಪ್ಪ

0

Madhu Bangarappa ಸೊರಬ ತಾಲೂಕಿನ ಪ್ರತಿ ಮನೆ ಮನೆಗೆ ಶರಾವತಿ ಜಲಾಶಯದಿಂದ ಶುದ್ಧ ಕುಡಿಯುವ ನೀರನ್ನು ಒದಗಿಸುವ 660ಕೋಟಿ ವೆಚ್ಚದ ಯೋಜನೆಗೆ ಹಾಗೂ ದಂಡಾವತಿ ಯೋಜನೆಗೆ ಪರ್ಯಾಯವಾಗಿ ರೈತರು ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ 980 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಸೊರಬ ತಾಲೂಕು ಸಮನವಳ್ಳಿಯ ಸರ್ಕಾರಿ ಶಾಲಾ ಆವರಣದಲ್ಲಿ ಸುಮಾರು 1200 ಕೋಟಿ ರೂ ಗಳ ಅಂದಾಜು ವೆಚ್ಚದ 17 ಕಟ್ಟಡ ಕಾಮಗಾರಿಗಳ ಲೋಕಾರ್ಪಣೆ ಮತ್ತು 40 ಕೋಟಿ ರೂ. ಗಳ ಅಂದಾಜು ವೆಚ್ಚದ 16 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.

ಜನವರಿ ಮಾಸಾಂತ್ಯದೊಳಗಾಗಿ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಸುಮಾರು 200ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಹಾಗೂ ಅರಣ್ಯ ಭೂಮಿಯಲ್ಲಿ ವಾಸವಾಗಿರುವ ವನವಾಸಿಗಳಿಗೆ ಒಕ್ಕಲೆಬ್ಬಿಸದಂತೆ ಅವರನ್ನು ರಕ್ಷಿಸುವ ಹಾಗೂ ಕಾನೂನಾತ್ಮಕವಾಗಿ ಹಕ್ಕು ಪತ್ರ ನೀಡಲು ಸರ್ಕಾರ ಬದ್ದವಾಗಿದೆ. ಇದು ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕನಸು ಆಗಿತ್ತು. ದಿ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ದೂರದೃಷ್ಟಿಯಿಂದ ಅನುಷ್ಠಾನಕ್ಕೆ ತಂದಿದ್ದ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ಇನ್ನೂ ಚಾಲನೆಯಲ್ಲಿದ್ದು ಮುಂದುವರೆದಿದೆ ಎಂದವರು ನುಡಿದರು.

ರಾಜ್ಯದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಶಕ್ತಿ ಯೋಜನೆಯಡಿ ಜಿಲ್ಲೆಗೆ ಈಗಾಗಲೇ 64 ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಗಿದೆ. ಇನ್ನು 34 ಬಸ್ ಗಳನ್ನು ಶೀಘ್ರದಲ್ಲಿ ತಾಲೂಕಿನ ಸೇವೆಗೆ ಒದಗಿಸಲಾಗುವುದು ಎಂದರು.

ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನ ಸಕಾಲದಲ್ಲಿ ಸದ್ಭಳಕೆ ಆಗುವಂತೆ ಹಾಗೂ ಸರ್ಕಾರಕ್ಕೆ ವಾಪಸ್ಸು ಹೋಗದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ತರಬೇತಿಗಾಗಿ ಯಾವುದೇ ಆರ್ಥಿಕ ಹೊರೆಬೀಳದಂತೆ ಸರ್ಕಾರದ ವತಿಯಿಂದಲೇ ಉಚಿತವಾಗಿ ತರಬೇತಿಗಳನ್ನು ನೀಡಲಾಗುತ್ತಿದೆ. ರಾಜ್ಯದ ಸುಮಾರು 25000 ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ ಎಂದರು.

Madhu Bangarappa ಅನುತ್ತಿರ್ಣರಾದ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದೆ ಸರಿಯದಂತೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಂಡು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಮುಂದುವರೆಸಲಾಗುತ್ತಿದೆ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಸರ್ಕಾರವು ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದುಕೊಂಡಿದೆ. ಜನಪರವಾದ ಈ ಯೋಜನೆಗಳು ಹೀಗೆಯೇ ಮುಂದುವರೆಯಲಿವೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸರ್ಕಾರದ ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಸಚಿವರು ಹಾಗೂ ಗಣ್ಯರು ಸೌಲಭ್ಯಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸಿಇಓ ಎನ್. ಹೇಮಂತ್, ಉಪವಿಭಾಗಾಧಿಕಾರಿ ಯತೀಶ್, ತಹಸೀಲ್ದಾರ್ ಮಂಜುಳಾ ಹೆಗಡಾಳ್, ಇಓ ಪ್ರಮೋದ್ ಕುಮಾರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Legislative Council ಸಿ.ಟಿ.ರವಿ ಪ್ರಕರಣ. ಹಕ್ಕುಚ್ಯುತಿ ಆಗಿದೆ. ಶಾಸಕರಾದ ಅರುಣ್ & ರವಿಕುಮಾರ್ ಅವರಿಂದ ಸಭಾಪತಿಗೆ ದೂರು ಸಲ್ಲಿಕೆ

0

Legislative Council ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಕಲಾಪದ ನಂತರದ ನಡೆದ ಘಟನೆಗಳು ವಿಧಾನಪರಿಷತ್ತು ಶಾಸಕರುಗಳಾದ ಮಾನ್ಯ ಸಿ.ಟಿ ರವಿರವರ ಮತ್ತು ಭಾಜಪದ ವಿಧಾನ ಪರಿಷತ್ ಶಾಸಕರುಗಳ ಹಕ್ಕುಚ್ಯುತಿ ಆಗಿದೆ ಎಂದು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಹಾಗೂ ಪರಿಷತ್ತಿನ ಶಾಸಕರಾದ ಎನ್. ರವಿಕುಮಾರ್ ರವರು ಹುಬ್ಬಳ್ಳಿಯಲ್ಲಿರುವ ನಿವಾಸದಲ್ಲಿ ವಿಧಾನ ಪರಿಷತ್ತಿನ ಸನ್ಮಾನ್ಯ ಸಭಾಪತಿಗಳನ್ನ ಭೇಟಿ ಮಾಡಿ ದೂರು ನೀಡಿ, ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಶಾಸಕರಿಗೆ ಆಗಿರುವ ಹಕ್ಕುಚ್ಯುತಿಗೆ ನ್ಯಾಯ ದೊರಕಿಸಬೇಕೆಂದು ಕೋರಿದರು.

National Farmers Day ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ವಿಸಿದ ಕೇಂದ್ರ ಸರ್ಕಾರ

0

ರಾಷ್ಟ್ರೀಯ ರೈತರ ದಿನಾಚರಣೆ ಹೊತ್ತಲ್ಲೇ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ಕೊಬ್ಬರಿ ಬೆಳೆಗಾರ ರೈತರಿಗೆ ಬೆಂಬಲವಾಗಿ ನಿಲ್ಲುವ ನಿರ್ಧಾರ ಕೈಗೊಂಡಿದ್ದು, ಕೊಬ್ಬರಿಯ ಬೆಂಬಲ ಬೆಲೆಯನ್ನು 420 ರೂ. ಹೆಚ್ಚಿಸಿದೆ. ಈ ಮೂಲಕ ಕ್ವಿಂಟಾಲ್‌ ಉಂಡೆ ಕೊಬ್ಬರಿ ಬೆಲೆ 12,100 ರೂ. ಗಳು ಹಾಗೂ ಹೋಳಾದ ಕೊಬ್ಬರಿ ಬೆಲೆ 11,582 ರೂ. ಗಳಷ್ಟಾಗಲಿದೆ .

S.N. Chennabasappa ವಾರ್ಡ್ ನಂ14 ರ ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಶಾಸಕ ‘ಚೆನ್ನಿ

0

S.N. Chennabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14ನೇ ವಾರ್ಡಿನ ವಿದ್ಯಾನಗರಕ್ಕೆ ಜಲ ಮಂಡಳಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಬಡಾವಣೆಗಳಲ್ಲಿರುವಂತಹ ನೀರಿನ ಸಮಸ್ಯೆಗಳ ಕುರಿತು ಸ್ಥಳೀಯರಿಂದ ಆವಾಲುಗಳನ್ನು ಸ್ವೀಕರಿಸಿ, ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರವೇ ಬಗೆಹರಿಸುವ ಭರವಸೆ ನೀಡಿದರು.

PDO Exam ಪಿಡಿಓ ಪರೀಕ್ಷೆ. ಅನುಮೋದನೆ ಪಡೆದಿರುವ 1:3 ಅನುಪಾತದ ಅರ್ಹತಾ ಪಟ್ಟಿ ಪ್ರಕಟಣೆ

0

PDO Exam ಖಾಲಿ ಇರುವ ಗ್ರಾಮ‌ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 31 ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1288 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1288 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಪ್ರಕಟಿಸಲಾಗಿದೆ.

PDO Exam ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ದಿನಾಂಕ: 06.01.2025 ರಿಂದ 07.01.2025 ರವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಮಯ 11:00 ಘಂಟೆ ಯಿಂದ ಸಂಜೆ 5:00 ಘಂಟೆ ರೂಳಗಾಗಿ ಖುದ್ದಾಗಿ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವುದು, ಗೈರು ಹಾಜರಾದಲ್ಲಿ ಎರಡನೇ ಅವಕಾಶವನ್ನು ನೀಡಲಾಗುವುದಿಲ್ಲ.

ಜಿಎಂ ಎಕ್ಸ್ ಸರ್ವಿಸ್ GM Ex 02 ಅಭ್ಯರ್ಥಿಗಳು ಮತ್ತು ಎಸ್ ಸಿ ಪಿಹೆಚ್ 01 ಅಭ್ಯರ್ಥಿ ಮತ್ತು 2ಎ_ಪಿಹೆಚ್ 01 ಅಭ್ಯರ್ಥಿ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ 89 ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

MESCOM ಡಿಸೆಂಬರ್ 24. ಶಿಕಾರಿಪುರ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ

0

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ.24ರಂದು ಬೆಳಿಗ್ಗೆ 11:00 ರಿಂದ 01:00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ.

MESCOM ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ; 9448289519.

H.S. Sundaresh ರೈತರನ್ನ ವಿಶ್ವಾಸಕ್ಕೆ ತೆಗೆದುಕೊಂಡೇ ಮುಂದಿನ ಕ್ರಮ. ಯಾವುದೇ ಬಗರ್ ಹುಕುಂ ರೈತರನ್ನ ಒಕ್ಕಲೆಬ್ಬಿಸುವುದಿಲ್ಲ- ಸುಂದರೇಶ್

0

H.S. Sundaresh ಸೋಗಾನೆಯಲ್ಲಿ ಸೂಡಾ ವತಿಯಿಂದ ಅಭಿವೃದ್ದಿಪಡಿಸಲು ಉದ್ದೇಶಿಸಿರುವ ಲೇಔಟ್ ಕುರಿತು ರೈತರಲ್ಲಿ ತಪ್ಪು ತಿಳುವಳಿಕೆ ನಿವಾರಣೆ ಆಗಬೇಕು. ಅಲ್ಲಿ ಯಾವುದೇ ಬಗರ್ ಹುಕುಂ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸ.ನಂ 156 ರ ಪ್ರದೇಶದಲ್ಲಿ ಸೂಡಾ ಲೇಔಟ್ ನಿರ್ಮಿಸುವ ಕುರಿತು ರೈತರೊಂದಿಗೆ ಚರ್ಚಿಸಲು ಶನಿವಾರ ಸೂಡಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೋಗಾನೆಯಲ್ಲಿ ಸಾರ್ವಜನಿಕರ ಹಿತಾಸಕ್ತಿಗಾಗಿ ಸೂಡಾ ವತಿಯಿಂದ ನಿವೇಶನ ನಿರ್ಮಿಸಲು ಜಿಲ್ಲಾಧಿಕಾರಿಗಳು ಮತ್ತು ಎಸಿ ಯವರಿಗೆ ಪತ್ರೆ ಬರೆದು 200 ಎಕರೆ ಜಾಗ ಮಂಜೂರು ಮಾಡುವಂತೆ ಮನವಿ ಮಾಡಲಾಗಿತ್ತು. ಅದರೆಂತೆ ನಿವೇಶನ ನಿರ್ಮಿಸಲು ಸರ್ವೇ ನಂ.156 ರ 96 ಎಕರೆ ಜಾಗ ಮಂಜೂರಾಗಿದೆ. ಈಗಾಗಲೇ ಅಲ್ಲಿ 600 ಎಕರೆ ಕೆಐಎಡಿಬಿ ವಶದಲ್ಲಿದೆ.
ಉದ್ದೇಶಿತ ಪ್ರದೇಶದಲ್ಲಿ ಪ್ರಸ್ತುತ 49 ಎಕರೆ ಜಾಗದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. 2 ಎಕರೆ ಸ್ಮಶಾನ ಜಾಗವಿದೆ. ಮತ್ತೆ ಕೆಲ ರೈತರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಎಷ್ಟು ಜನ ರೈತರು ಬಗರ್‌ಹುಕುಂ ಅರ್ಜಿಗಳನ್ನು ಸಲ್ಲಿಸಿದ್ದಾರೆ, ತೋಟ, ಗದ್ದೆ ಎಷ್ಟಿದೆ ಎಂದು ಸರ್ವೇ ಕಾರ್ಯ ಮಾಡಿದ ನಂತರವೇ ಹಾಗೂ ಸಾಧಕ ಬಾಧಕಗಳನ್ನು ನೋಡಿ, ಅಗತ್ಯ ಕ್ರಮ ಕೈಗೊಂಡು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮ ವಹಿಸಲಾಗುವುದು.
H.S. Sundaresh ಹಾಗೂ ರೈತರ ಬೇಡಿಕೆಯಂತೆ ರೈತರಿಗೆ ಬಗರ್ ಹುಕುಂ ಸಮಿತಿಯಿಂದ ಹಕ್ಕು ಪತ್ರ ಕೊಡಿಸಲು ಸಹ ಸಹಕರಿಸುವುದಾಗಿ ರೈತರಿಗೆ ಭರವಸೆ ನೀಡಿದ ಅವರು, ಹಕ್ಕುಪತ್ರ ಪಡೆದ ನಂತರ ಸದರಿ ಭೂಮಿಯನ್ನು ಖಾಸಗಿಯಾಗಿ ಯಾರಿಗೇ ಆಗಲಿ 20 ವರ್ಷ ಪರಭಾರೆ ಮಾಡಲು ಬರುವುದಿಲ್ಲ. ಆದರೆ ಸರ್ಕಾರಿ ಉದ್ದೇಶಕ್ಕೆ ನೀಡಬಹುದಾಗಿದ್ದು, ಹಾಗೆ ರೈತರು ನೀಡಿದ ಭೂಮಿಯನ್ನು 50:50 ಅನುಪಾತದಲ್ಲಿ ಪಡೆಯಲಾಗುವುದು. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.
ರೈತರು ಮಾತನಾಡಿ, ಈ ಹಿಂದೆ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಸರಿಯಾದ ನ್ಯಾಯ ಒದಗಿಲ್ಲ. ಇದೀಗ ಸೂಡಾ ಲೇಔಟ್ ಮಾಡಲು ಇಲ್ಲಿ ಭೂಮಿ ಪಡೆಯಲು ಮುಂದಾಗಿದ್ದಾರೆ. ಮೊದಲು ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ, ನಂತರ ಭೂಮಿ ಪಡೆಯುವ ಪ್ರಕ್ರಿಯೆ ಮಾಡುವಂತೆ ಮನವಿ ಮಾಡಿದರು.
ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪರ‍್ಯಾನಾಯ್ಕ ಮಾತನಾಡಿ, ಎಷ್ಟು ಜನ ರೈತರು ಅಲ್ಲಿ ಸಾಗುವಳಿ ಮಾಡುತ್ತಿದ್ದಾರೆ, ಬಗರ್ ಹುಕುಂ ಅಡಿಯಲ್ಲಿ ಎಷ್ಟು ಜನ ರೈತರು ಅರ್ಜಿ ಸಲ್ಲಿಸಿದ್ದಾರೆ ಎಂಬ ನಿಖರ ಮಾಹಿತಿಯೊಂದಿಗೆ ಸಮಿತಿಗೆ ಮಂಡಿಸಿರಿ. ಬಡವರು, ಎಸ್‌ಸಿ/ಎಸ್‌ಟಿ ಸೇರಿದಂತೆ ಅರ್ಹರಿಗೆ ಮಾತ್ರ ಹಕ್ಕುಪತ್ರ ನೀಡಲಾಗುವುದು. ಹೀಗೆ ಹಕ್ಕುಪತ್ರ ಪಡೆದವರು ಬೇರೆಯವರಿಗೆ ಪರಭಾರೆ ಮಾಡುವಂತಿಲ್ಲ. ಒಂದು ವೇಳೆ ಮಾಡಿದಲ್ಲಿ ಹಕ್ಕುಪತ್ರವನ್ನು ರದ್ದುಪಡಿಸಲಾಗುವುದು. ಸರ್ಕಾರಿ ಉದ್ದೇಶಕ್ಕೆ ನೀಡಬಹುದು. ಮುಂದಿನ ಸಮಿತಿ ಸಭೆಯಲ್ಲಿ ಸೋಗಾನೆ ಭಾಗದ ರೈತರ ಅರ್ಜಿಯನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು ಎಂದರು.
ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಮಾತನಾಡಿ, ಸೋಗಾನೆಯ ಉದ್ದೇಶಿತ ಪ್ರದೇಶದಲ್ಲಿ 50 ರಿಂದ 54 ರೈತರು ಸಾಗುವಳಿ ಮಾಡುತ್ತಿದ್ದು 30 ಎಕರೆ ತೋಟವಿದೆ. ರೈತರ ರಿಟ್ ಪೆಟಿಷನ್ ಪೆಂಡಿಗ್ ಇವೆ. ಬಗರ್ ಹುಕುಂ ಸಾಗುವಳಿದಾರರು ಎಷ್ಟು ಜನ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪರಿಶೀಲನೆ ನಡೆಸಬೇಕು. ಎಷ್ಟು ಗದ್ದೆ, ತೋಟ, ಕರಾಬು ಇದೆ ಎಂದು ಸರ್ವೇ ಕಾರ್ಯ ನಡೆಸಬೇಕು. ನಂತರ ಮುಂದಿನ ಕ್ರಮ ಎಂದು ತಿಳಿಸಿದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಸೂಡಾ ಸದಸ್ಯರು, ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್ , ಮುಖಂಡರು ರೈತರು ಹಾಜರಿದ್ದರು.