Sunday, March 22, 2026
Sunday, March 22, 2026
Home Blog Page 470

Bharatanatyam ಬೆಂಗಳೂರಿನಲ್ಲಿ ರಾಜ್ಯಮಟ್ಟದ ಭರತನಾಟ್ಯ / ಜಾನಪದ ನೃತ್ಯ ಸ್ಪರ್ಧೆ

0

Bharatanatyam ಬೆಂಗಳೂರು,ಡಿ.14 ನಗರದ ಶ್ರೀ ನಾಟ್ಯಂ ಕಲಾ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ – 2024 ಆಯೋಜಿಸಿದೆ . ಬೆಂಗಳೂರಿನ ಶ್ರೀನಿಧಿ ಬಡಾವಣೆಯ 8 ನೇ ಮುಖ್ಯರಸ್ತೆಯಲ್ಲಿರುವ ಶ್ರೀನಿಧಿ ಸಭಾಂಗಣದಲ್ಲಿ ಡಿ. 22ರ ಬೆಳಗ್ಗೆ 10ಕ್ಕೆ ಸ್ಪರ್ಧೆ ನಡೆಸಲಾಗುತ್ತದೆ ಎಂದು ಶಿವಮೊಗ್ಗ ಮೂಲದ ಖ್ಯಾತ ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.
ಎರಡು ಪ್ರಾಕಾರದ ಸ್ಪರ್ಧೆ: ಭರತನಾಟ್ಯ ಮತ್ತು ಜಾನಪದ ನೃತ್ಯ – ವಿಭಾಗಗಳಲ್ಲಿ ಪ್ರತ್ಯೇಕವಾದ ಸ್ಪರ್ಧೆ ನಡೆಯಲಿದೆ . 8ವರ್ಷದ ಒಳಗಿನವರು, ಎಂಟರಿಂದ 12 ರಿಂದ ವರ್ಷದವರು, 16 ವರ್ಷ ಮೇಲ್ಪಟ್ಟವರ ಒಟ್ಟು ಮೂರು ವಿಭಾಗಗಳಲ್ಲಿ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುತ್ತದೆ . ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಸಮಾಧಾನಕರ ಬಹುಮಾನ ವಿತರಣೆಯೂ ನಡೆಯಲಿದೆ . ಆಸಕ್ತ ಸ್ಪರ್ಧಿಗಳು ಸ್ಪರ್ಧಾ ಸಂದರ್ಭದಲ್ಲಿ ತಮ್ಮ ಜನ್ಮ ದಿನಾಂಕ ಖಾತರಿ ಪಡಿಸುವ ಆಧಾರ್ ಅಥವಾ ಯಾವುದೇ ದಾಖಲೆಗಳ ಪ್ರತಿಗಳನ್ನು ತರಬೇಕು. ಹೆಸರು ನೋಂದಣಿ ಮತ್ತು ವಿವರಗಳಿಗೆ 990088983 ಮತ್ತು 9513816649 ಸಂಪರ್ಕಿಸಬಹುದು ಎಂದು ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.
ಸಂಸ್ಥೆಯ ಹಿರಿಮೆ: ಬೆಂಗಳೂರಿನ ಕೊಣನ ಕುಂಟೆಯಲ್ಲಿ ೨೦೦೯ರಲ್ಲಿ ಶಿವಮೊಗ್ಗ ಮೂಲದ ವಿದುಷಿ ಪುಷ್ಪಲತಾ ಅವರಿಂದ ಚಾಲನೆಗೊಂಡ ಶ್ರೀ ನಾಟ್ಯಂ ಕಲಾ ಕೇಂದ್ರವು ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಧಾರೆ ಎರೆದಿದೆ. ಮಕ್ಕಳಿಗೆ
Bharatanatyam ಮಹತ್ವದ ಸೇವೆಯನ್ನು ಮಾಡುತ್ತ ಲೇ ರಾಜ್ಯದ ಪ್ರತಿಷ್ಠಿತ ಕರಾವಳಿ ಉತ್ಸವ , ಹಂಪಿ ಉತ್ಸವ, ಪಟ್ಟದಕಲ್ಲು ಉತ್ಸವ ಮತ್ತು ಮೈಸೂರು ದಸರಾ ಸೇರಿದಂತೆ ನೂರಾರು ಕಾರ್ಯಕ್ರಮಗಳಲ್ಲಿ ತನ್ನ ಛಾಪನ್ನು ಒತ್ತಿದೆ . ವಿದುಷಿ ಪುಷ್ಪಲತಾ ನೇತೃತ್ವದ ಈ ತಂಡ ಕಳೆದ ವರ್ಷ ಪಾಂಡಿಚೇರಿ ಮತ್ತು ಚಿದಂಬರಂನಲ್ಲಿ ಹಮ್ಮಿಕೊಂಡಿದ್ದ ಗಿನ್ನಿಸ್ ಮತ್ತು ಲಿಮ್ಕಾ ದಾಖಲೆಯ ಬೃಹತ್ ನೃತ್ಯ ಪ್ರಸ್ತುತಿಗಳಲ್ಲಿ ತನ್ನ ವಿಶೇಷತೆಯನ್ನು ಪ್ರದರ್ಶಿಸಿರುವುದು ವಿಶ್ವ ಮಾನ್ಯತೆಯನ್ನು ತಂದುಕೊಟ್ಟಿದೆ . ರಂಗ ಪ್ರವೇಶವನ್ನೂ ಮಾಡಿಸಿ ನವ, ಯುವ ಕಲಾವಿದರಿಗೆ ಶ್ರೀ ನಾಟ್ಯಂ ಸಂಸ್ಥೆ ಮನ್ನಣೆ ಒದಗಿಸಿದೆ.

S.N. Channabasappa ದೇಶದ ಸಂಸ್ಕೃತಿಯ ಪ್ರತೀಕಪ್ರತಿಭಾಕಾರಂಜಿ – ಶಾಸಕ ಚೆನ್ನಿ

0

S.N. Channabasappa ಶಿವಮೊಗ್ಗ ಡಿಸೆಂಬರ್‌ 14 ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಜೊತೆಗೆ ದೇಶದ ಸಂಸ್ಕ್ರತಿ, ಪರಂಪರೆಯನ್ನು ಬೆಳೆಸಲು, ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚೆನ್ನ ಬಸಪ್ಪ ಅವರು ಹೇಳಿದರು.

ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಉಪನಿರ್ದೇಶಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಪದವಿಪೂರ್ವ ಕಾಲೇಜು ಇವರುಗಳು ಸಂಯುಕ್ತ ಆಶ್ರಯ ದಲ್ಲಿ ನಗರದ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಇಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಕೇವಲ ಪಠ್ಯ ಪ್ರವೃತ್ತಿಯನ್ನು ಬೆಳೆಸುವುದು ಮಾತ್ರ ಅಲ್ಲದೆ ಅವರಲ್ಲಿ ಪ್ರತಿಭೆಯನ್ನು ಹೊರತರಲು ಮತ್ತು ನಮ್ಮ ದೇಶದ ಸಂಸ್ಕ್ರತಿ, ಪರಂಪರೆ, ಪದ್ಧತಿಯ ಯೋಚನೆಯನ್ನು ಇಟ್ಟು ಕೊಂಡು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಆಯೊಜಿಸಲಾಗಿದೆ. ಶಿಕ್ಷಕರು ಮಕ್ಕಳಲ್ಲಿ ಒಳ್ಳೆಯ ಕಲೆಯನ್ನು ಹುಡುಕಿ ತೆಗೆಯುವ ಕೆಲಸ ಮಾಡಬೇಕು.ಮಕ್ಕಳಲ್ಲಿ ಕೇವಲ ಒಳ್ಳೆಯ ವಿಚಾರವನ್ನು ಹೊರತೆಗೆದು ಅವರಿಗೆ ಉತ್ತೆಜನ ನೀಡಿದರೆ ಮಾತ್ತ ಉತ್ತಮ ಕಲಾವಿದರಾಗಲು ಸಾಧ್ಯ ಈ ನಿಟ್ಟಿನಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ ಮಹತ್ವವಾದದು ಎಂದು ಹೇಳಿದರು.

S.N. Channabasappa ಡಿ.ಎಸ್ ಅರುಣ್ ಮಾತನಾಡಿ ಸರ್ಕಾರ ವು ಮಕ್ಕಳ ನಾನಾ ರೀತಿಯ ಚಟುವಟಿಕೆಗಳು ಮತ್ತು ಕಲೆ ಪ್ರದರ್ಶಿಸಲು ಒಂದು ವೇದಿಕೆಯನ್ನು ಸೃಷ್ಟಿಸಿದೆ.‌ಹಿಂದಿನ ದಿನಗಳಲ್ಲಿ ಪರೀಕ್ಷೆ ಮತ್ತು ಶಿಕ್ಷಣಕ್ಕೆ ಮಾತ್ರ ಹೆಚ್ಚು ಮನ್ನಣೆ ಇತ್ತು ಆದರೆ ಇಂದು ಪಠೇತರ ಚಟುವಟಿಕೆಗಳಿಗೆ ಮಹತ್ವ ನೀಡಿದೆ.ವೈವಿಧ್ಯಮಯ ದೇಶ ನಮ್ಮದು, ಊರಿಂದ ಊರಿಗೆ ಸಂಸ್ಕೃತಿಯು ವಿಭಿನ್ನ ರೀತಿಯಲ್ಲಿ ಇದೆ. ಅದನ್ನು ಉಳಿಸಲು ಮಕ್ಕಳಿಗೆ ಸಂಸ್ಕಾರ ಮತ್ತು ಶಿಷ್ಠಾಚಾರ ನೀಡುವ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಉಳಿಸಲು ಸಾದ್ಯ ಎಂದು ಹೇಳಿದರು.

ಉಪನಿರ್ದೇಶಕರಾದ ಎಸ್ .ಆರ್ ಮಂಜುನಾಥ್ ಮಾತನಾಡಿ ಶಾಲೆಗಳಲ್ಲಿ ಓದುವಿನ ಜೊತೆಗೆ ಅವರಲ್ಲಿ ಕಲೆ ಹೊರಹಾಕಲು ಈ ರೀತಿಯ ಕಾರ್ಯಕ್ರಮ ಪ್ರಾರಂಭಿಸಿದರು. ಓದುವಿನ ಜೊತೆ ಕ್ರಿಡೆ, ಕಲೆ, ಸಂಸ್ಕೃತಿ ಗುರುತಿಸುವಿಕೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ. ಶಿಕ್ಷಕರು ಮಕ್ಕಳ ಕಲೆ ಗುರುತಿಸಿ ಪ್ರೊತ್ಸಾಹ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮ ದಲ್ಲಿ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಯಾದ ರಮೇಶ್, ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಎ.ಕೆ ನಾಗೇಂದ್ರ,ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಘವೇಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ,ರಾಷ್ಟ್ರೀಯ ಪದವಿಪೂರ್ವ ಕಾಲೇಜು ಉಪ ಪ್ರಾಂಶುಪಾಲರು, ಶಿಕ್ಷರು, ಸರ್ಕಾರಿ ಮತ್ತು ಸರ್ಕಾರೇತರ ಶಿಕ್ಷಕರು, ಸಿಬ್ಬಂದಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

NSS Camp Shivamogga ಎನ್ ಎಸ್ ಎಸ್ ಸೇರಿದ ಮೇಲೆ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನ- ಡಾ.ಪರಿಸರ ನಾಗರಾಜ್

0

NSS Camp Shivamogga ಶಿವಮೊಗ್ಗ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕರ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವಲ್ಲಿ ಎನ್‌ಎಸ್‌ಎಸ್ ಪಾತ್ರ ಬಹಳ ಮುಖ್ಯವಾದದ್ದು ಎಂದು ಕುವೆಂಪು ವಿವಿ ನಿಕಟ ಪೂರ್ವ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಪರಿಸರ ನಾಗರಾಜ್ ಹೇಳಿದರು.
ಅವರು ಇಂದು ಆಚಾರ್ಯ ತುಳಸಿ ರಾಷ್ಟಿçÃಯ ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎನ್‌ಎಸ್‌ಎಸ್ ಬದುಕು ಕಟ್ಟಿಕೊಡುವಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಸಹಾಯಕವಾಗುತ್ತದೆ. ಎನ್‌ಎಸ್‌ಎಸ್ ಸೇರಿದ ಮೇಲೆ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶಗಳು ಕೂಡ ಲಭಿಸುತ್ತವೆ. ಆಗಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಬೇಕು ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ಎನ್‌ಎಸ್‌ಎಸ್ ಧೈರ್ಯವನ್ನು, ಆತ್ಮಬಲವನ್ನು ಹೆಚ್ಚಿಸುತ್ತದೆ. ಅದರಲ್ಲೂ ಗ್ರಾಮೀಣ ಪ್ರದೇಶದವರಿಗೆ ಹೊಸ ಲೋಕವನ್ನೇ ಸೃಷ್ಟಿ ಮಾಡುತ್ತದೆ. ಸಾಮರಸ್ಯ, ಸೇವಾ ಭಾವನೆಯನ್ನು ಕಲಿಸುತ್ತದೆ ಎಂದರು.
NSS Camp Shivamogga ಪತ್ರಕರ್ತ ಆರುಂಡಿ ಶ್ರೀನಿವಾಸ ಮೂರ್ತಿ ಮಾತನಾಡಿ, ಈಗಾಗಲೇ ವಿದ್ಯಾರ್ಥಿಗಳಲ್ಲಿ ಎನ್‌ಎಸ್‌ಎಸ್ ಗುಣಗಳು ಇದ್ದೇ ಇರುತ್ತವೆ. ಅವುಗಳನ್ನು ಮತ್ತಷ್ಟು ವಿಸ್ತರಿಸಕೊಳ್ಳಬೇಕು ಅಷ್ಟೇ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಜೋತುಬೀಳದೆ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಜಗತ್ತು ತಲ್ಲಣಗೊಳ್ಳುತ್ತಿರುವ ವಿಷಾಧದ ಈ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ಎಂಬುವುದು ಜೀವ ಜಲ ನೀಡುತ್ತದೆ. ಲವಲವಿಕೆ ಮತ್ತು ಜೀವನ ಪ್ರೀತಿಯನ್ನು ಬೆಳೆಸಿಕೊಳ್ಳಿ ಎಂದರು.
ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಕೆ.ಎಂ. ನಾಗರಾಜ್ ಮಾತನಾಡಿ, ಎನ್‌ಎಸ್‌ಎಸ್‌ನಿಂದ ಸಾವಿರಾರು ವಿದ್ಯಾರ್ಥಿಗಳ ಬದುಕು ಹಸನಾಗಿದೆ. ಇದು ಉದ್ಯೋಗ ಪಡೆದುಕೊಳ್ಳುವಲ್ಲಿಯೂ ಸಹಾಯಕವಾಗುತ್ತದೆ. ಕೌಶಲ್ಯವನ್ನು ಕಲಿಸುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ನೀವು ಎನ್‌ಎಸ್‌ಎಸ್ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಿ. ಜೊತೆಗೆ ಓದನ್ನು ಕೂಡ ಮರೆಯಬೇಡಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಪ್ರೊ. ಮಮತಾ ಪಿ.ಆರ್. ಮಾತನಾಡಿ, ಎನ್‌ಎಸ್‌ಎಸ್ ಸಂಸ್ಕಾರ ಕಲಿಸುತ್ತದೆ. ಪೋಷಕರ ಶ್ರಮ ವ್ಯರ್ಥವಾಗದಂತೆ ಚೆನ್ನಾಗಿ ಅಭ್ಯಾಸ ಮಾಡಿ, ಶ್ರದ್ಧೆಯಿರಲಿ. ನಮ್ಮ ಕಾಲೇಜು ಆಡಳಿತ ಮಂಡಳಿ ಪಠ್ಯೇತರ ಚಟುವಟಿಕೆಗಳಿಗೆ ಸಾಕಷ್ಟು ಪ್ರೋತ್ಸಾಹ ಕೊಡುತ್ತದೆ. ಈ ಕಾಲೇಜಿನಲ್ಲಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದಕ್ಕೆ ಎನ್‌ಎಸ್‌ಎಸ್ ಕೂಡ ಕಾರಣ ಎಂದರು.
ಅನುಜ್ಞಾ ಸ್ವಾಗತಿಸಿದರು. ಜ್ಞಾನಿ ವಂದಿನಿಸಿದರು.

CM Siddharamaiah ನಕಲಿ‌ ಇನ್ವಾಯ್ಸ್ ಸೃಷ್ಟಿಸಿ ಜಿಎಸ್ ಟಿ ವಂಚನೆ ವಿರುದ್ಧ ಕ್ರಮ- ಸಿದ್ಧರಾಮಯ್ಯ

0

CM Siddharamaiah ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್‌ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಜಿಎಸ್‌ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿದ 2,437 ಕಂಪನಿಗಳು ಸಿಕ್ಕಿಬಿದ್ದಿವೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

Byrathi Suresh ಇಪ್ಪತ್ತು ಸಾವಿರಕ್ಕೂ‌ ಹೆಚ್ಚು ಜನಸಂಖ್ಯೆ ಇದ್ದರೆ ಮಾತ್ರ ‘ಗ್ರಾಪಂ’ ಗಳನ್ನ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಬಹುದು- ಸಚಿವ ಭೈರತಿ ಸುರೇಶ್

0


Byrathi Suresh ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ಅವರು ಸದನಕ್ಕೆ ಮಾಹಿತಿ ನೀಡಿದರು.
20,000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರೊಂದಿಗೆ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ರಚನೆಗೆ ಮನವಿ
ಕುಮುಟ ಕ್ಷೇತ್ರದ ಶಾಸಕ ದಿನಕರ್ ಕೇಶವ್ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕ್ಷೇತ್ರವಾದ ಗೋಕರ್ಣ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಅಥವಾ ಪುರಸಭೆಯನ್ನಾಗಿ ಮೇಲ್ದರ್ಜೆ ಏರಿಸುವಂತೆ ಕೋರಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರಲ್ಲಿ ಕೋರಿದರು.
ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರುಗಳಾದ ವಿಜಯೇಂದ್ರ, ಡಾ.ಅಶ್ವತ್ ನಾರಾಯಣ, ಸುನೀಲ್ ಕುಮಾರ್, ಭೈರತಿ ಬಸವರಾಜ್ ಅವರು ಗೋಕರ್ಣ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಸರ್ಕಾರ ಕೂಡಲೇ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕು. ಲಕ್ಷಾಂತರ ಪ್ರವಾಸಿಗರು ಗೋಕರ್ಣಕ್ಕೆ ಆಗಮಿಸುತ್ತಾರೆ. ಆದ್ದರಿಂದ ಸರ್ಕಾರ ಸ್ವಚ್ಛತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.


Byrathi Suresh ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. 2011 ರ ಜನಗಣತಿಯಂತೆ ಗೋಕರ್ಣದಲ್ಲಿ 13,539 ಜನಸಂಖ್ಯೆ ಇದೆ. ವಿಸ್ತೀರ್ಣ 33.1 ಚದರ ಕಿ.ಮೀ. ಇದ್ದು, ಜನಸಾಂದ್ರತೆ ಪ್ರತೀ ಚದರ ಕಿ.ಮೀ.ಗೆ 409 ಇದೆ. 2015ರಲ್ಲಿ ಸಚಿವ ಸಂಪುಟ ಸಭೆಯಲ್ಲಿ 2011ರ ಜನಗಣತಿಯಲ್ಲಿ 15,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪಂಚಾಯಿತಿಗಳನ್ನು ಮಾತ್ರ ಮೇಲ್ದರ್ಜೆಗೆ ಏರಿಸಲು ಪರಿಗಣಿಸಲು ನಿರ್ಧರಿಸಲಾಗಿದೆ. ಆದಾಗ್ಯೂ ಗೋಕರ್ಣದ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಶಾಸಕರು, ಅಧಿಕಾರಿಗಳೊಂದಗೆ ಸಭೆ ನಡೆಸಿ ಸಕಾರಾತ್ಮವಾಗಿ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.

ಇದೇ ವೇಳೆ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಹಾಗೂ ಕಮಲ್‌ನಗರವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವ ರಹೀಂ ಖಾನ್ ಅವರಲ್ಲಿ ಮನವಿ ಮಾಡಿದರು.

Roller Skating ರೋಲರ್ ಸ್ಕೇಟಿಂಗ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಸೈಯದ್ ಫೈಜಲ್ ಗೆ ಬೆಳ್ಳಿಪದಕ

0

Roller Skating ಮೈಸೂರಿನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಕ್ರೀಡಾಪಟು ಸೈಯದ್ ಪೈಜಲ್ ಇಂದು ಸ್ಪೀಡ್ ರಿಲೇಯಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಹಾಗೂ ಸ್ಕೇಟಿಂಗ್ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಸೈಯದ್ ಪೈಜಲ್ ಶಿವಮೊಗ್ಗದ ಸೈಯದ್ ಜುಲ್ಪಿಕರ್ ಹಾಗೂ ನಾಜೀಮಾ ದಂಪತಿಗಳ ಪುತ್ರ. ಈತ ಲಕ್ಷ್ಯ ಶಾಲೆ ವಿದ್ಯಾರ್ಥಿ.
ರಾಷ್ಟ್ರಮಟ್ಟದ ಸ್ಪೀಡ್ ಸ್ಕೇಟಿಂಗ್ ಪಂದ್ಯದಲ್ಲಿ ಅನ್ಯ ರಾಜ್ಯದ 20ಕ್ಕೂ ಹೆಚ್ಚು ಕ್ರೀಡಾಪಟುಗಳನ್ನು ಮೆಟ್ಟಿ ಗುರಿ ತಲುಪುವ ಮೂಲಕ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾನೆ.
Roller Skating ವಿಜೇತ ಕ್ರೀಡಾಪಟುವಿಗೆ ಸಂಸದರಾದ ಬಿ.ವೈ. ರಾಘವೇಂದ್ರ, ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಹಾಗೂ ಕಾರ್ಯದರ್ಶಿ ಎಂ ರವಿ ಕೋಚರ್ ಗಳಾದ ವಿಶ್ವಾಸ್ ಹಾಗೂ ಅತೀಶ್ ಮತ್ತು ಸಂಸ್ಥೆಯ ಪದಾಧಿಕಾರಿಗಳು ಅವರು ಅಭಿನಂದಿಸಿದ್ದಾರೆ.

Sagara news ಸಾಗರದಲ್ಲಿ ಕಲಾನುಸಂಧಾನ ಶಿಬಿರ ಯಶಸ್ವಿ

0

Sagara news ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ (ರಿ,) ಸಾಗರ, ಎಲ್ ಬಿ ಮತ್ತು ಎಸ್ ಬಿ ಎಸ್ ಕಾಲೇಜು ಸಾಗರ,ನೀನಾಸಂ ಪ್ರತಿಷ್ಠಾನ ಹೆಗ್ಗೋಡು. ಇವರ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಕಲಾನುಸಂಧಾನ ಶಿಬಿರ ಯಶಸ್ವಿಯಾಗಿ ನಡೆಯಿತು. ನಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನ ಒಳಗೊಂಡಂತೆ ಬೇರೆ ಬೇರೆ ಕಾಲೇಜುಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

Sabarimala ಶಬರಿಮಲೆ ಯಾತ್ರಾರ್ಥಿಗಳಿಗೆ ಬೆಂಗಳೂರಿನಿಂದ ವೋಲ್ವೋ ಬಸ್ ಸೌಲಭ್ಯ- ಸಚಿವ ರಾಮಲಿಂಗಾರೆಡ್ಡಿ

0

Sabarimala ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ,
ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ.

ವೋಲ್ವೋ ಪ್ರಯಾಣ ವಿವರ:
ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ ಮರುದಿನ ಬೆಳಿಗ್ಗೆ 6:45ಕ್ಕೆ ನಿಲಕ್ಕಲ್ ತಲುಪಲಿದೆ.

Sabarimala ಅದೇ ದಿನ ಸಂಜೆ 6:00 ಗಂಟೆಗೆ ಬಸ್ ನಿಲಕ್ಕಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:00 ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ.

ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶವನ್ನು ಸಹ ನೀಡಲಾಗಿದೆ.

ಭಕ್ತಾದಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ‌
ಶಬರಿಮಲೆ ಯಾತ್ರಾರ್ಥಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

S.N Channabasappa ಚಳಿಗಾಲದ ಅಧಿವೇಶನದಲ್ಲಿತುಂಗಾನದಿ ಮಾಲಿನ್ಯದ ಬಗ್ಗೆ ಬಿಸಿ ಮುಟ್ಟಿಸಿದ ಶಾಸಕ “ಚೆನ್ನಿ

0

S.N Channabasappa ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ(ಚೆನ್ನಿ) ಅವರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರಕ್ಕೆ ತುರ್ತಾಗಿ ಬೇಕಾಗಿರುವ ಹೆಚ್ಚುವರಿ ನೀರು ಶುದ್ಧೀಕರಣ ಘಟಕ, ಹಾಗೂ ಯುಜಿಡಿ ಲೈನ್ ಅಳವಡಿಸುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಾಗೂ ತುಂಗಾ ನದಿ ಮಾಲಿನ್ಯ ತಡೆಗಟ್ಟುವ ಕುರಿತು ಸದನದಲ್ಲಿ ಚರ್ಚಿಸಿದರು.

Sidbi Bank ಹೋಟೆಲ್ ಉದ್ಯಮಿಗಳು ಸಿಡ್ಬಿ ಬ್ಯಾಂಕ್ ಯೋಜನೆಗಳ ಸೌಲಭ್ಯ ಪಡೆಯಬೇಕು- ಶ್ರೀಪತಿ.

0

Sidbi Bank ಶಿವಮೊಗ್ಗ ಸಿಡ್ಬಿ ಬ್ಯಾಂಕ್ ಹೆಚ್ಚಾಗಿ ಎಂಎಸ್‌ಎಂಇ ಕ್ಷೇತ್ರಕ್ಕೆ ಆರ್ಥಿಕ ಸೌಲಭ್ಯ ಒದಗಿಸುತ್ತಿದ್ದು, ಹೆಚ್ಚಿನ ಯೋಜನೆಗಳನ್ನು ರೂಪಿಸಿವೆ ಎಂದು ಸಿಡ್ಬಿ ಬ್ಯಾಂಕ್ ಜನರಲ್ ಮ್ಯಾನೇಜರ್ ಶ್ರೀಪತಿ ಅಭಿಪ್ರಾಯ ಪಟ್ಟರು. ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಆಯೋಜಿಸಿದ್ದ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಹೋಟೆಲ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯಮಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ಎನ್.ಗೋಪಿನಾಥ್ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಆಗಲು ಹಾಸ್ಪಿಟಾಲಿಟಿ ಉದ್ಯಮ ಪ್ರಮುಖ ಪಾತ್ರ ವಹಿಸಲಿದ್ದು, ಹೋಟೆಲ್‌ಗಳನ್ನು ಉನ್ನತೀಕರಿಸಿಕೊಂಡು ಪ್ರವಾಸೋದ್ಯಮ ಬೆಳೆಸಬೇಕು ಎಂದು ಹೇಳಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು, ಉದ್ಯಮ ಮಾಡಲು ಆಸಕ್ತಿ ಇರುವರಿಗೆ ಅಗತ್ಯ ಆರ್ಥಿಕ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಇದರಿಂದ ಸಮಗ್ರ ಅಭಿವೃದ್ಧಿಯು ಸಾಧ್ಯವಾಗಲಿದೆ ಎಂದು ತಿಳಿಸಿದರು.

Sidbi Bank ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ ಮಾತನಾಡಿ, ಉದ್ಯಮದಾರರು ಬ್ಯಾಂಕ್‌ನ ಆರ್ಥಿಕ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಡಿಜಿಎಂ ಕುಲಶೇಖರ ಹಾಗೂ ಡಿಜಿಎಂ ಓಂಗಳನ್ ಅವರು ಸಿಡ್ಬಿ ಬ್ಯಾಂಕ್ ಮೂಲಕ ಕೈಗಾರಿಕೆ, ಉದ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯಮಿಗಳಿಗೆ ನೀಡುತ್ತಿರುವ ವೈವಿಧ್ಯ ಆರ್ಥಿಕ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಿಡ್ಬಿ ಬ್ಯಾಂಕ್ ಶಿವಮೊಗ್ಗ ಮ್ಯಾನೇಜರ್ ಶಿವಕುಮಾರ್ ಮಾತನಾಡಿ, ಬ್ಯಾಂಕ್‌ನಿಂದ ಇತ್ತೀಚೆಗೆ ಜಾರಿಗೆ ತಂದ ಹೋಟೆಲ್ ಕ್ಷೇತ್ರಕ್ಕೆ ಅನ್ವಯಿಸುವ ಯೋಜನೆ ಬಗ್ಗೆ ವಿವರಿಸಿದರು. ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.