Sunday, March 22, 2026
Sunday, March 22, 2026
Home Blog Page 472

BPL Card ಜಿಲ್ಲೆಯಲ್ಲಿ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿದ್ದ ಬಿಪಿಎಲ್ ಕಾರ್ಡ್ಗಳು ಪುನಃ ಬಿಪಿಎಲ್ ಕಾರ್ಡ್ಗಳಾಗಿ ಪರಿವರ್ತನೆ: ಸಿ.ಎಸ್. ಚಂದ್ರಭೂಪಾಲ

0

BPL Card ಶಿವಮೊಗ್ಗ ಜಿಲ್ಲೆಯಲ್ಲಿ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿದ್ದ ಬಿಪಿಎಲ್ ಕಾರ್ಡ್ಗಳು ಪುನಃ ಬಿಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಿವೆ.

ಇದರಿಂದಾಗಿ ಬಿಪಿಎಲ್ ಕಾರ್ಡ್ ಕಳೆದುಕೊಂಡು ಆತಂಕದಲ್ಲಿದ್ದ ಎಲ್ಲಾ ಬಿಪಿಎಲ್ ಫಲಾನುಭವಿಗಳು ನಿರಾಳರಾಗಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.

ಆಹಾರ ಇಲಾಖೆಯಿಂದ ಕಳೆದ ತಿಂಗಳು ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಣೆ ನಡೆಸಿ ವಿವಿಧ ಕಾರಣಗಳಿಂದ ಕಾರ್ಡ್ಗಳನ್ನು ಗುರುತಿಸಿ ಅವುಗಳನ್ನು ಎಪಿಎಲ್ ಕಾರ್ಡ್ಗಳನ್ನಾಗಿ ಬದಲಾವಣೆ ಮಾಡಲಾಗಿತ್ತು. ಇದರಿಂದಾಗಿ ಬಿಪಿಎಲ್ ಕಾರ್ಡ್ಗಳನ್ನು ಕಳೆದುಕೊಂಡಿದ್ದ ಗ್ರಾಹಕರು ಸರ್ಕಾರಕ್ಕೆ ಮನವಿ ಸಲ್ಲಿಸಿ ನಮ್ಮ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸಬಾರದು ಎಂದು ಕೇಳಿಕೊಂಡಿದ್ದರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಹ ಈ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿ ನಿಗದಿತ ಮಾರ್ಗಸೂಚಿಯಂತೆ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ಗಳನ್ನಾಗಿ ಪರಿವರ್ತಿಸಿ ಕಳೆದ ಎರಡು ತಿಂಗಳಿಂದ ಪಡಿತರ ನೀಡುವುದನ್ನು ನಿಲ್ಲಿಸಿದಾಗ, ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿ ಬಿಪಿಎಲ್ ಕಾರ್ಡ್ ಕಳೆದುಕೊಂಡವರ ಸಮೀಕ್ಷೆ ನಡೆಸಲು ಅದಾಲತ್ ನಡೆಸಿ ಅರ್ಹ ಬಿಪಿಎಲ್ ಕಾರ್ಡ್ದಾರರಿಗೆ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯಪಡಿಸಲಾಗಿತ್ತು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಮಾಡಿ ಅನೇಕ ಕಾರಣಗಳಿಂದ ಬಿಪಿಎಲ್ ಕಾರ್ಡ್ಗಳು ರದ್ದುಗೊಳಿಸಿದ್ದರಿಂದ ಬಡವರು ಪಡಿತರ ಪಡೆಯಲು ಸಮಸ್ಯೆಯಾಗಿತ್ತು. ಅಲ್ಲದೇ ಆರೋಗ್ಯ ಸೇವೆ ಪಡೆಯುವಲ್ಲಿಯೂ ತೊಂದರೆಯಾಗುತ್ತದೆ ಎಂದು ಬಿಪಿಎಲ್ ಕಾರ್ಡ್ದಾರರು ಆಕ್ರೋಶ ವ್ಯಕ್ತಪಡಿಸಿದ್ದನ್ನು ಗಮನಿಸಿದ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪರವರು ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಸಕ್ರಿಯಗೊಳಿಸುವ ಭರವಸೆ ನೀಡಿದ್ದರು.

BPL Card ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಬೇರೆ ಯಾರೊಬ್ಬರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸದಂತೆ ಆಹಾರ ಇಲಾಖೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಕಟ್ಟು ನಿಟ್ಟಿನ ಆದೇಶ ನೀಡಿದ್ದರಿಂದ ಎಪಿಎಲ್ ಆಗಿ ಪರಿವರ್ತನೆಯಾಗಿದ್ದ ಬಿಪಿಎಲ್ ಕಾರ್ಡ್ಗಳು ಪುನಃ ಬಿಪಿಎಲ್ ಆಗಿ ಮುನ್ನಡೆಯಲು ಕಾರಣವಾಯಿತು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ ರವರು ಈ ಬಗ್ಗೆ ಆಸಕ್ತಿ ವಹಿಸಿ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ರದ್ದಾಗಿದ್ದ ಬಿಪಿಎಲ್ ಕಾರ್ಡ್ಗಳನ್ನು ಸಕ್ರಿಯಗೊಳಿಸುವ ಕಾರ್ಯವನ್ನು ಭರದಿಂದ ನಡೆಸಬೇಕೆಂದು ಸೂಚಿಸಿದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕೈತಪ್ಪಿ ಹೋಗಿದ್ದ ಬಿಪಿಎಲ್ ಕಾರ್ಡ್ ನ್ನು ಎಲ್ಲಾ ಬಡವರಿಗೆ ಪೂರ್ಣ ಪ್ರಮಾಣದಲ್ಲಿ ಮತ್ತೆ ಮರಳಿಸುವ ಮೂಲಕ ಎಲ್ಲಾ ಸೌಲಭ್ಯ ದೊರೆಯಲು ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಸೂಚಿ ಸಹಕಾರಿಯಾಯಿತು.

Basavaraj Bommai ಒಂದು ದೇಶ ,ಒಂದು ಚುನಾವಣೆ ವ್ಯವಸ್ಥೆಯಿಂದ ಆಡಳಿತದಲ್ಲಿ ಸ್ಥಿರತೆ- ಬಸವರಾಜ ಬೊಮ್ಮಾಯಿ

0

Basavaraj Bommai ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಂಸದ ಹಾಗೂ ಮಾಜಿ‌ ಸೀಎಂ, ಬಸವರಾಜ ಬೊಮ್ಮಾಯಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ. ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ.

Basavaraj Bommai ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ತು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಈ ದೇಶಕ್ಕೆ ಒಳ್ಳೆಯ ದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ.
ಎಂದು ಬೊಮ್ಮಾಯಿ ಹೇಳಿದರು.

MESCOM ಡಿಸೆಂಬರ್ 14. ಸಂತೇಕಡೂರು ಸುತ್ತಮುತ್ತ ಕರೆಂಟ್ ಇಲ್ಲ

0

MESCOM ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಎಫ್-8 ಗಣಿದಾಳು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಡಿ.14 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

MESCOM ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

MESCOM ಡಿಸೆಂಬರ್ 14 &15 ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಹೊಳಲೂರು 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.14 ಮತ್ತು 15 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Narayana Hrudayalaya ಸಕಾಲದಲ್ಲಿ ಕೀಲು ಮೂಳೆಯ ಸಾಂದ್ರತೆ ಪರೀಕ್ಷಿಸಿಕೊಳ್ಳಿ- ಡಾ.ಚೇತನ್ ಮಠದ್

0

Narayana Hrudayalaya 40 ವರ್ಷಗಳ ನಂತರ ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳುವುದರ ಜೊತೆಗೆ ಸಕಾಲದಲ್ಲಿ ಕೀಲು ಮೂಳೆಯ ಸಾಂದ್ರತೆಯನ್ನು ಪರೀಕ್ಷಿಸಿಕೊಳ್ಳುವುದು ಒಳ್ಳೆಯದು ಇದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ನಾರಾಯಣ ಹೃದಯಾಲಯದ ಪ್ರಖ್ಯಾತ ಕೀಲು ಮೂಳೆ. ಮರು ಜೋಡೋಣ ತಜ್ಞ ಡಾಕ್ಟರ್ ಚೇತನ್ ಮಠದ್ ಅಭಿಮತ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರದ ಹೃದಯ ಭಾಗವಾದ ಕುವೆಂಪು ರಸ್ತೆಯಲ್ಲಿರುವ ನಾರಾಯಣ ಕ್ಲಿನಿಕ್ ನಲ್ಲಿ ಇಂದು ಮೊಣಕಾಲು ನೋವಿನಿಂದ ಸಂಪೂರ್ಣ ಸ್ವಾತಂತ್ರವೆಂಬ ಶೀರ್ಷಿಕೆ ಯಡಿ ಸಾರ್ವಜನಿಕರಿಗೆ ಹಮ್ಮಿಕೊಳ್ಳಲಾದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು ಮನುಷ್ಯನ ದೇಹದಲ್ಲಿ ಮೂಳೆ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ ಇಂದು ಶೇಕಡ 30ರಷ್ಟು ಜನ ಮೂಳೆ ತೊಂದರೆಯಿಂದ ಬಳಲುತ್ತಿದ್ದಾರೆ ಪ್ರಾರಂಭಿಕ ಹಂತದಲ್ಲೇ ಕಾಯಿಲೆಯನ್ನು ಪತ್ತೆಹಚ್ಚಿ ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಂಡರೆ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು.

Narayana Hrudayalaya ಪ್ರತಿಯೊಬ್ಬರೂ ಪ್ರತಿನಿತ್ಯ ವ್ಯಾಯಾಮ ಯೋಗ ಪ್ರಾಣಾಯಾಮ ಹಾಗೂ ಪೌಷ್ಟಿಕಾಂಶ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ಕೀಲು ಮೂಳೆಗಳು ಸದೃಢವಾಗಿರುತ್ತವೆ ಆದರಿಂದ ಇಂತಹ ವಿಶೇಷ ಕ್ಯಾಂಪ್ಗಳಲ್ಲಿ ಸಾರ್ವಜನಿಕರು ಭಾಗವಹಿಸಿ ಉಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳುವುದರ ಜೊತೆಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವುದು ಒಳ್ಳೆಯದು ಎಂದು ನೋಡಿದರು ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ
ಜಿ ವಿಜಯಕುಮಾರ್ ಮಾತನಾಡುತ್ತಾ ಇಂತಹ ಮೋಳೆ ಪರೀಕ್ಷೆಗಳನ್ನು ಹೊರಗಡೆ ಮಾಡಿಸಿಕೊಂಡರೆ 2000 ದಿಂದ 3000 ಖರ್ಚಾಗುತ್ತೆ ಆದರೆ ಇಲ್ಲಿ ಸಂಪೂರ್ಣವಾಗಿ ಉಚಿತವಾಗಿ ಮಾಡುತ್ತಿರುವುದರಿಂದ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇತ್ತೀಚಿನ ಆಹಾರ ಪದ್ಧತಿಯಿಂದ ಮತ್ತು ನಮ್ಮ ಜೀವನಶೈಲಿಯಿಂದ ಕಡಿಮೆ ವಯಸ್ಸಿನಲ್ಲಿ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಾ ಇದ್ದೇವೆ ಆದ್ದರಿಂದ ನಾವುಗಳು ಸಕಾಲದಲ್ಲಿ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಡಾಕ್ಟರ್ ಅಭಿಲಾಶ್. ಸಹನಾ. ಶ್ವೇತಾ ಶ್ರೀ. ಪ್ರದೀಪ್. ಪ್ರೀತಿ. ಬಿಂದು ವಿಜಯ ಕುಮಾರ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

MESCOM ಡಿಸೆಂಬರ್ 16.ಬೆಳಿಗ್ಗ 9-30 ರಿಂದ 3 ರವರೆಗೆ ಎಂ.ಆರ್.ಎಸ್. ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110/11ಕೆವಿ ಎಸ್.ಎಎಸ್-1 ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಆಗಸವಳ್ಳಿ, ಹೊಸೂರು, ಮತ್ತೂರು,ಲಕ್ಷ್ಮೀಪುರ, ಹೋನ್ನಾಪುರ, ಈಚಲವಾಡಿ, MESCOM ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಡಿ.16 ರಂದು ಬೆಳಗ್ಗೆ 9:30 ರಿಂದ ಮಾಧ್ಯಾಹ್ನ 3.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Krishnarajendra Water Treatment Plant ನಾಗರಿಕರೆ ಗಮನಿಸಿ.! ಡಿಸೆಂಬರ್ 16 & 17 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸರಬರಾಜು ಇಲ್ಲ

0

Krishnarajendra Water Treatment Plant ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

Department of Post ಡಿಸೆಂಬರ್ 20. ಶಿವಮೊಗ್ಗ ಅಂಚೆ ವಿಭಾಗದಿಂದ ” ಡಾಕ್ ಅದಾಲತ್

0

Department of Post ಶಿವಮೊಗ್ಗ ಅಂಚೆ ವಿಭಾಗದ 2024 ರ ಡಿಸೆಂಬರ್ ಮಾಹೆಯಲ್ಲಿ ಕೊನೆಗಳ್ಳುವ ತ್ರೈಮಾಸಿಕ ಡಾಕ್ ಅದಾಲತ್ ಕಾರ್ಯಕ್ರಮವನ್ನು ಡಿ. 20 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಛೇರಿ, ಶಿವಮೊಗ್ಗ ಅಂಚೆ ವಿಭಾಗ ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.
Department of Post ಸಾರ್ವಜನಿಕರು ಅಂಚೆ ಇಲಾಖೆಯ ಕುಂದು ಕೊರತೆಗಳನ್ನು ಅಥವಾ ಸಲಹೆಗಳನ್ನು ಡಿ. 18 ರ ಒಳಗೆ ಅವುಗಳ ನಿವಾರಣೆಗೆ ಕಳುಹಿಸಬಹುದು ಮತ್ತು ಡಾಕ್ ಅದಾಲತ್‌ನಲ್ಲಿ ಭಾಗವಹಿಸುವಂತೆ ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

CM Siddharamaiah ಪಿಡಿಓ ಪರೀಕ್ಷೆ ಪ್ರಶ್ನೆಪತ್ರಿಕೆ ಹಗರಣ .ತನಿಖೆಗೆ ಉಪಸಮಿತಿ ರಚನೆ- ಸಿಎಂ ಸಿದ್ದರಾಮಯ್ಯ

0

CM Siddharamaiah ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ CM Siddharamaiah ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

0

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.