Monday, March 23, 2026
Monday, March 23, 2026
Home Blog Page 480

National Adoption Month ಪೋಷಕತ್ವ ಯೋಜನೆಯಡಿ ಮಗು ಪಡೆಯಲು ಪೋಷಕರಿಂದ ಅರ್ಜಿ ಆಹ್ವಾನ

0

National Adoption Month ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021, ಸೆಕ್ಷನ್ 44 ಹಾಗೂ ನಿಯಮದಲ್ಲಿ ಉಲ್ಲೇಖಿಸಿದಂತೆ ಮಾರಣಾಂತಿಕ ಕಾಯಿಲೆ, ತೀವ್ರ ಅನಾರೋಗ್ಯ ಸಾವು ಅಥವಾ ಇನ್ನತರೆ ಕಾರಣಗಳಿಂದ ಪೋಷಕರ ಆರೈಕೆಯಿಂದ ವಂಚಿತರಾದ ಮಕ್ಕಳನ್ನು ವಿಸ್ತೃತ ಕುಟುಂಬ ಸದಸ್ಯರು ಅಥವಾ ಅಸಂಬಂಧಿತ ವ್ಯಕ್ತಿ/ಕುಟುಂಬದಲ್ಲಿ ತಾತ್ಕಾಲಿಕ ಆರೈಕೆ ನೀಡುವ ಹಾಗೂ ಕಾರಣಾಂತರಗಳಿಂದ ದತ್ತು ಸ್ವೀಕಾರಕ್ಕೆ ಒಳಪಡಲು ಸಾಧ್ಯವಿಲ್ಲದ ಮಕ್ಕಳಿಗೆ ತಾತ್ಕಾಲಿಕ ಪೋಷಕರನ್ನು ನೀಡುವ ಪರ್ಯಾಯ ವ್ಯವಸ್ಥೆ ಮಕ್ಕಳನ್ನು ಪುನರ್ವಸತಿ ಮಾಡುವುದು ಹಾಗೂ ಮಕ್ಕಳನ್ನು ಸಾಂಸ್ಥಿಕ ಸೇವೆಗೆ ಒಳಪಡಿಸುವುದನ್ನು ತಪ್ಪಿಸುವುದು ಪೋಷಕತ್ವ ಕಾರ್ಯಕ್ರಮದ ಗುರಿಯಾಗಿದೆ.
National Adoption Month ಸಾಮಾನ್ಯವಾಗಿ ಒಂದು ವರ್ಷದವರೆಗೆ ಅಗತ್ಯ ಪ್ರಕರಣಗಳಲ್ಲಿ ಪ್ರತಿ ವರ್ಷ ನವೀಕರಿಸಿ ಪೋಷಕತ್ವಕ್ಕೆ ಆಯ್ಕೆಯಾದ ಕುಟುಂಬ ಸದಸ್ಯರೊಂದಿಗೆ ಆರೈಕೆ ಮತ್ತು ರಕ್ಷಣೆಯ ಉದ್ದೇಶಕ್ಕಾಗಿ ಕೌಟುಂಬಿಕ ವಾತಾವರಣದಲ್ಲಿ ಪೊಷಕರನ್ನು ಇರಿಸಲಾಗುತ್ತದೆ. ಒಂದೇ ರೀತಿಯ ಸಂಸ್ಕೃತಿ, ಬುಡಕಟ್ಟು ಮತ್ತು ಸಮುದಾಯದ ಸಂಪರ್ಕವನ್ನು ಹಂಚಿಕೊಳ್ಳುವ ಕುಟುಂಬಗಳಿಗೆ ಆದ್ಯತೆ ನೀಡಲಾಗುತ್ತದೆ. ಪೋಷಕತ್ವವು ಗುಂಪು ಪೋಷಕತ್ವವನ್ನು ಒಳಗೊಂಡಿರುತ್ತದೆ. ಆದ್ದರಿಂದ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗಕ್ಕೆ ದೂರವಾಣಿ ಸಂಖ್ಯೆ:08182-295709 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Shivamogga City Corporation ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ: ಡಿ.04ಕ್ಕೆ ಮುಂದೂಡಿಕೆ

0

Shivamogga City Corporation ನ.30 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಮೊದಲನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಕಾರಣಾಂತರದಿಂದ ಡಿ.04ರಂದು ಬೆಳಗ್ಗೆ 11.30ಕ್ಕೆ Shivamogga City Corporation ಮುಂದೂಡಲಾಗಿದ್ದು, ನಗರದ ನಾಗರಿಕರು ಹಾಗೂ ಸಂಘ-ಸಂಸ್ಥೆಯವರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Muthoot FinCorp ಕಣ್ಣು ಮಾನವ ದೇಹದ ಅತಿ ಸೂಕ್ಷ್ಮ ಅಂಗ ಜಾಗೃಕತೆಯಿಂದ ಇರಿಸಿಕೊಳ್ಳುವುದು ಅಗತ್ಯ: ವಿನಾಯಕ ಕುಲಕರ್ಣಿ

0

Muthoot FinCorp ಕಣ್ಣು ಮಾನವನ ದೇಹದ ಅತಿ ಸೂಕ್ಷ್ಮವಾದ ಅಂಗವಾಗಿದ್ದು, ಜಾಗರೂಕತೆಯಿಂದ ಇರಿಸಿಕೊಳ್ಳುವುದು ಕರ್ತವ್ಯವಾಗಿದೆ ಎಂದು ಮುತ್ತೂಟ್ ಫಿನ್‌ಕಾರ್ಪ್ನ ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ ಕುಲಕರ್ಣಿ ಹೇಳಿದರು.
ಸೊರಬ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಮುತ್ತೂಟ್ ಫಿನ್‌ಕಾರ್ಪ್ ಕಚೇರಿಯಲ್ಲಿ ಮುತ್ತೂಟ್ ಫಿನ್‌ಕಾರ್ಪ್, ತ್ರೀನೇತ್ರ ಐ ಆಪ್ಟಿಕಲ್ಸ್, ಆಸ್ಟರ್ ಫಾರ್ಮಸಿ ವತಿಯಿಂದ ಹಮ್ಮಿಕೊಂಡ ಉಚಿತ ಕಣ್ಣಿನ ಮತ್ತು ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮುತ್ತೂಟ್ ಫಿನ್‌ಕಾರ್ಪ್ ಸಂಸ್ಥೆ ವ್ಯವಹಾರಿಕವಾಗಿ ಮಾತ್ರವಲ್ಲದೇ ಸಮಾಜ ಸೇವೆಯಲ್ಲಿಯೂ ತೊಡಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಆರೋಗ್ಯದ ಮಾಹಿತಿ ಕೊರತೆಯಿಂದ ಹೆಚ್ಚು ಗಮನ ನೀಡುವುದಿಲ್ಲ. ಆರ್ಥಿಕ ಕೊರತೆಯಿಂದಾಗಿ ಕೆಲವರು ಆರೋಗ್ಯವನ್ನು ತಪಾಸಣೆ ಮಾಡಿಸುವುದಿಲ್ಲ. ಅಂತಹವರಿಗೆ ಅರಿವು ಮೂಡಿಸುವ ಜೊತೆಗೆ ಬಡಜನರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಕಣ್ಣಿನ ಮತ್ತು ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದರು.
Muthoot FinCorp ಜನದನಿ ರತ್ನ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಕೆ.ಪಿ. ಶ್ರೀಧರ್ ನೆಮ್ಮದಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮೊಬೈಲ್‌ನ ಅತಿಯಾದ ಬಳಕೆಯಿಂದ ಮಕ್ಕಳ ಕಣ್ಣಿನ ಮೇಲೆ ನೇರವಾದ ಮತ್ತು ಗಂಭೀರವಾದ ಪರಿಣಾಮ ಬೀರುತ್ತಿದೆ. ಮೊಬೈಲ್ ವೀಕ್ಷಣೆಯ ಸಮಯದಲ್ಲಿ ಮಕ್ಕಳು ಬ್ರೈಟ್ ನೆಸ್ ಜಾಸ್ತಿ ಇಟ್ಟುಕೊಳ್ಳುತ್ತಾರೆ. ಇದರಿಂದ ಕಣ್ಣದೃಷ್ಟಿ ಹಾಳಾಗುತ್ತದೆ. ಮನೆಗಳಲ್ಲಿ ಪೋಷಕರು ಬಿಡುವಿನ ವೇಳೆ ಮೊಬೈಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಕಾರಣ, ಮಕ್ಕಳು ಪೋಷಕರನ್ನು ಅನುಸರಿಸುತ್ತಾರೆ. ಕಣ್ಣಿನ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ತಕ್ಷಣವೇ ತಜ್ಞ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಮುತ್ತೂಟ್ ಫಿನ್‌ಕಾರ್ಪ್ನ ವಲಯಾಧಿಕಾರಿ ಪಿ. ಚಂದ್ರಶೇಖರ್, ಶಾಖಾ ವ್ಯವಸ್ಥಾಪಕ ಎನ್. ನಾಗರಾಜ್, ಸಿಬ್ಬಂದಿ ಭರತ್, ಆಕಾಶ್, ಅರ್ಪಿತಾ, ನಿತಿನ್, ಮಜಯ ಬಾನು, ಮನುಕುಮಾರ್, ನೇತ್ರ ತಜ್ಞ ವೈದ್ಯ ಡಾ. ಸುಹಾಸ್, ತ್ರಿನೇತ್ರ ಆಫ್ಟಿಕಲ್ಸ್ನ ಕಿರಣ್, ಮಹೇಶ್, ಆಸ್ಟರ್ ಫಾರ್ಮಸಿಯ ಸೂರಜ್, ಸಾಲಿಕ್, ಪ್ರಮುಖರಾದ ಪಿ.ಪಿ. ರಮೇಶ ಸೇರಿದಂತೆ ಮತ್ತಿತರರಿದ್ದರು.

Amara Jyothi Degree College ಮಕ್ಕಳಿಗೆ ಶಾಲಾ ಹಂತದಲ್ಲೇ ಸಾಹಿತ್ಯಾಸಕ್ತಿ ಮೂಡಿಸಬೇಕು : ಡಿ. ಮಂಜುನಾಥ್

0

Amara Jyothi Degree College ಮಕ್ಕಳಿಗೆ ಶಾಲಾ ಕಲಿಕೆಯ ಹಂತದಲ್ಲಿಯೇ ಸಾಹಿತ್ಯಾಸಕ್ತಿ ಮೂಡಿಸಬೇಕು ಹಾಗೂ ಸ್ಪಷ್ಟವಾಗಿ ಓದುವ, ಬರೆಯುವ ಮತ್ತು ಮಾತನಾಡುವುದನ್ನು ರೂಢಿಸಬೇಕು ಎನ್ನುವ ನಿಟ್ಟಿನಲ್ಲಿ ಕಳೆದ ಹತ್ತೊಂಬತ್ತು ವರ್ಷಗಳಿಂದ ಸತತ ಪ್ರಯತ್ನದ ಭಾಗವಾಗಿ ಸಾಹಿತ್ಯ ಕಮ್ಮಟ ನಡೆಸಲಾಗುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
ಸೊರಬ ಗುರುವಾರ ಪಟ್ಟಣದ ಹಳೇಸೊರಬದ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸಾಹಿತ್ಯ ರಚನಾ ಕಮ್ಮಟ ಉದ್ಘಾಟಿಸಿ ಅವರು ಮಾತನಾಡಿದರು.
Amara Jyothi Degree College ಮಾತೃಭಾಷೆಯನ್ನು ತಿರಸ್ಕಾರ ಮನೋಭಾವದಿಂದ ಕಂಡ ಪರಿಣಾಮವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸದ ಕೊರತೆ ಎದ್ದುಕಾಣುತ್ತಿದೆ. ಶೈಕ್ಷಣಿಕ ಬದುಕು ಮಾತೃಭಾಷೆಯಿಂದ ಆರಂಭವಾಗಬೇಕು. ಕನ್ನಡವೇ ಪರಿಸರದ ಭಾಷೆಯಾಗಿದ್ದು, ಮಕ್ಕಳಿಗಾಗಿ ಶಾಲೆಗಳಲ್ಲಿ ಕಮ್ಮಟವನ್ನು ಏರ್ಪಡಿಸಲಾಗುತ್ತಿದೆ. ಬರೆಯುವ ಕಲೆ ಉತ್ತಮವಾಗಬೇಕೆಂದರೆ ಹೆಚ್ಚು ಓದುವ ಹವ್ಯಾಸವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದರು.
ಕನ್ನಡಕ್ಕೆ ಸುಮಾರು 2500 ವರ್ಷಗಳ ಇತಿಹಾಸ ಇರುವ ಹಿನ್ನೆಲೆಯಲ್ಲಿಯೇ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತಿದೆ. ಭಾಷಾ ಕಲಿಕೆ ಅತ್ಯಂತ ಜವಾಬ್ದಾರಿಯುತವಾಗಿದ್ದು, ರಾಜ್ಯೋತ್ಸವದ ಸಂದರ್ಭದಲ್ಲಿ ಸಂಭ್ರಮಿಸಿದರೆ ಸಾಲದು. ಮಕ್ಕಳಿಗೆ ಪಠ್ಯದ ಜೊತೆಗೆ ಸಾಹಿತ್ಯ ಅಭಿರುಚಿ ಮೂಡಿಸಲು ಕಥೆ, ಕವನ, ಪ್ರಬಂಧ ವಿಚಾರವಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ. ಅವುಗಳನ್ನು ಅರ್ಥೈಸಿಕೊಂಡು ಸಾಹಿತ್ಯ ಬರೆಯುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ ಕಮ್ಮಟದಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. ಕನ್ನಡ ಸುಂದರ, ಸುಲಲಿತವಾದ ಭಾಷೆಯಾಗಿದ್ದು, ಅನ್ಯ ಭಾಷಿಕರನ್ನು ತನ್ನತ್ತ ಸೆಳೆಯುವ ಶಕ್ತಿಯನ್ನು ಹೊಂದಿದೆ. ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ತಾಲೂಕು ಕೇಂದ್ರದಲ್ಲಿ ನಡೆದಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ. ಸಂಘಟನೆಯಿAದ ಸುಮಾರು 400 ಸಾಧಕರನ್ನು ಗುರುತಿಸಿ, ಗೌರವಿಸುವ ಕೆಲಸವನ್ನು ಮಾಡಲಾಗಿದೆ. ಇಂತಹ ಕಮ್ಮಟಗಳು ನಿರಂತರವಾಗಿ ನಡೆಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಎಸ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಡಾ. ಶಾಂತಾರಾಮ್ ಪ್ರಭು, ಅಂಕಣ ಬರಹಗಾರ ಬಿ. ಚಂದ್ರೇಗೌಡ ಆಗಮಿಸಿದ್ದರು.
ಕಾಲೇಜಿನ ಪ್ರಾಂಶುಪಾಲೆ ಸಿ. ಸಿಲ್ವಿಯಾ ಸಿಕ್ವೇರಾ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಶಿಕ್ಷಣ ಇಲಾಖೆಯ ಸಂಜೀವ ಕುಮಾರ್, ರವಿಕುಮಾರ್ ಸೇರಿದಂತೆ ಮತ್ತಿತರರಿದ್ದರು. ಎಚ್. ಅಶ್ವಿನಿ ಪ್ರಾರ್ಥಿಸಿ, ಪ್ರಜ್ವಲ್ ಚಂದ್ರಗುತ್ತಿ ಸ್ವಾಗತಿಸಿ, ಜಿ.ಡಿ. ಪ್ರಶಾಂತ್ ಕುಮಾರ್ ವಂದಿಸಿ, ಸುಬ್ರಾಯ ಜಿ. ಹಳ್ಳೇರ್ ಕಾರ್ಯಕ್ರಮ ನಿರೂಪಿಸಿದರು.

Nehru Youth Center Shimoga ಸರ್ಕಾರಿ ಶಾಲೆಯಲ್ಲಿ ತಾಯಿಯ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ಯಶಸ್ವಿ

0

Nehru Youth Center Shimoga ನೆಹರು ಯುವ ಕೇಂದ್ರ ಶಿವಮೊಗ್ಗ ವಿಶ್ವಪಥ ಯುವಕರ ಸಂಘ ಇವರ ಸಹಯೋಗದಲ್ಲಿ ಈ ದಿನ ಸರ್ಕಾರಿ ಪ್ರಾಥಮಿಕ ಶಾಲೆ ಹಿಟ್ಟೂರು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಶಾಲೆ ಮುಖ್ಯೋಪಾಧ್ಯಾಯರಾದ ಪಂಚಕ್ಷರೀರವರು, ಮತ್ತು ರವಿಶಂಕರ್ ಉಪಸ್ಥಿತರಿದ್ದರು . ಗಿಡ ನೆಡುವ ಕಾರ್ಯಕ್ರಮ ಮೂಲಕ ನೆರವೇರಿಸಿದರು. ಹಾಗು ಯುವಕರ ಸಂಘದ ಸದಸ್ಯರಾದ ಸಂಜು Nehru Youth Center Shimoga ಪಾಟೀಲ್,ನವೀನ್,ಮನೋಜ್,ನಾಗರಾಜ್,ಪ್ರಜ್ವಲ್ ಉಪಸ್ಥಿತರಿದ್ದರು ಹಾಗು ಶಾಲೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ 50ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.

S. Madhu Bangarappa ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ

0

S. Madhu Bangarappa ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, ೧೨ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುದೇವರ ಜನ್ಮಸ್ಥಳ ಬಳ್ಳಿಗಾವೆ ಹಾಗೂ ಶಿವಮೊಗ್ಗ ನಗರದಲ್ಲಿ ನೂತನವಾಗಿ ಹೆಸರಿಸಲಾದ ಅಲ್ಲಮಪ್ರಭು(ಪ್ರೀಡಂ ಪಾರ್ಕ್) ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
S. Madhu Bangarappa ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸಮಾಲೋಚನೆ ನಡೆಸಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ಒಂದೇ ಕಟ್ಟಡ ಸಂಕೀರ್ಣದಲ್ಲಿ ನಿರ್ಮಿಸಲು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹಿಂದಿನ ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಜಿಲ್ಲೆಯ ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ ಅತ್ಯಾಧುನಿಕ ಹಾಗೂ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಅಗತ್ಯ ಅನುದಾನ ಕಾಯ್ದಿರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಈಗಾಗಲೇ ಈ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದು, ಮುಖ್ಯಮಂತ್ರಿಗಳು ಉತ್ಸುಕರಾಗಿರುವುದಾಗಿ ತಿಳಿಸಿದ ಅವರು, ನಿರ್ಮಿಸುವ ಕಟ್ಟಡದ ವಿನ್ಯಾಸವು ಮಾದರಿ ಹಾಗೂ ಅತ್ಯಾಧುನಿಕವಾಗಿರುವಂತೆ ನೋಡಿಕೊಳ್ಳುವಂತೆ ಅವರು ಸಲಹೆ ನೀಡಿದರು.
ನಗರ ಅಲ್ಲಮಪ್ರಭು ಮೈದಾನದ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯು ಸುಮಾರು 5 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ. ಈ ಅನುದಾನಕ್ಕೆ ಸಹಕಾರಿಯಾಗುವಂತೆ ಸರ್ಕಾರದಿಂದ ಇನ್ನಷ್ಟು ಅನುದಾನವನ್ನು ಬಿಡುಗಡೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸುವಂತೆ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.
ನಗರದ ಹೊರವಲಯದಲ್ಲಿ ಆರಂಭಗೊಂಡಿರುವ ಷಾಹಿ ಗಾರ್ಮೆಂಟ್ಸ್ಗೆ ಭೂಮಿ ಮಂಜೂರಾತಿಯಲ್ಲಿ ನಿಯಮ ಪಾಲನೆಯಾಗದಿರುವುದು ಕಂಡುಬಂದಿದೆ. ಅಲ್ಲದೇ ಸದರಿ ಕೈಗಾರಿಕೆಯಿಂದಾಗಿ ಭಾರೀ ಪ್ರಮಾಣದ ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿಬರುತ್ತಿವೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.
ನಗರದಲ್ಲಿ ಫುಡ್‌ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದ ಸಚಿವರು, 660 ಕೋಟಿ ರೂ.ಗಳ ವೆಚ್ಚದಲ್ಲಿ ಶರಾವತಿಯಿಂದ ಸೊರಬ, ಆನವಟ್ಟಿ ಮತ್ತು ಶಿರಾಳಕೊಪ್ಪ ಪಟ್ಟಣ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ. ಅಂತೆಯೇ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯದಿಂದ ಶಿಕಾರಿಪುರ ಪಟ್ಟಣದ ನಿವಾಸಿಗಳಿಗೆ ವರ್ಷಪೂರ್ತಿ ಶುದ್ಧಕುಡಿಯುವ ನೀರು ಒದಗಿಸುವುದಲ್ಲದೇ ಕೃಷಿ ಚಟುವಟಿಕೆಗಳಿಗೂ ನೀರು ಒದಗಿಸಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಅವರು ಸೂಚಿಸಿದರು.
S. Madhu Bangarappa ಚಂದ್ರಗುತ್ತಿ ಧರ್ಮಕ್ಷೇತ್ರದ ದೇವಾಲಯದ ಸರ್ವಾಂಗೀಣ ವಿಕಾಸ ಹಾಗೂ ಪ್ರವಾಸಿತಾಣವನ್ನಾಗಿ ಪರಿವರ್ತಿಸಲು ಉದ್ದೇಶಿಸಿದ್ದು, ಅರಣ್ಯ ಇಲಾಖೆಯ ಅನುಮೋದನೆಗಾಗಿ ಕಡತ ಮಂಡಿಸಲಾಗಿದೆ. ಈ ಸಂಬಂಧ ಅರಣ್ಯ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ ಜನವರಿ ಮೊದಲ ಮಾಸಾಂತ್ಯದೊಳಗಾಗಿ ವಿಮಾನದ ನೈಟ್ ಲ್ಯಾಂಡಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಇದರಿಂದಾಗಿ ವಿಮಾನ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲು ಸೂಚಿಸಲಾಗಿದೆ. ಮುಂದಿನ ತಿಂಗಳಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯ ಹೊಸನಗರದಲ್ಲಿ ನಡೆಸಲು ಈಗಾಗಲೇ ನಿರ್ಣಯಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದಿದ್ದರು.

Dinesh Gundurao ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮ : ಸಚಿವ ದಿನೇಶ್ ಗುಂಡೂರಾವ್

0

Dinesh Gundurao ಸರ್ಕಾರಿ ಆಸ್ಪತ್ರೆಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕುಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‌ಗಳನ್ನು ಮಂಜೂರು ಮಾಡಲಾಗಿದ್ದು, ಜನವರಿ ಮಾಹೆಯಿಂದಲೇ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಅವರು ಇಂದು ಭದ್ರಾವತಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ 340 ಆರೋಗ್ಯ ಕೇಂದ್ರಗಳಿಗೆ ಹೊಸ ಅಂಬುಲೆನ್ಸ್ಗಳನ್ನು ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನಷ್ಟು ಅಂಬುಲೆನ್ಸ್ಗಳ ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದರು.
2 ದಿನಗಳ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ಸಾಗರ, ಸೊರಬ, ಭದ್ರಾವತಿ ಹಾಗೂ ಶಿವಮೊಗ್ಗ ತಾಲೂಕುಗಳ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಲಾಗಿದ್ದು, ಅಗತ್ಯವಿರುವ ಬೇಡಿಕೆಗಳ ಪೂರೈಕೆಗೆ ತುರ್ತು ಹಾಗೂ ಆದ್ಯತೆಯನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಗರ ತಾಲೂಕಿನ ಮಂಗನಕಾಯಿಲೆ ಬಾದಿತ ಅರಳಗೋಡು ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಅಲ್ಲಿನ ಜನರ ಅವಹಾಲುಗಳನ್ನು ಆಲಿಸಲಾಗಿದ್ದು, ಈ ಸಂಬAಧ ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದ ಅವರು, ಯಾವುದೇ ಕಾಯಿಲೆ ಬರುವುದಕ್ಕೆ ಮುನ್ನ ಅವುಗಳ ನಿಯಂತ್ರಣ ಕ್ರಮಕೈಗೊಳ್ಳುವುದು ಜಾಣತನ ಎನಿಸುತ್ತದೆ. ಆದ್ದರಿಂದ ಸ್ಥಳೀಯ ವೈದ್ಯಾಧಿಕಾರಿಗಳು ಈ ಕಾಯಿಲೆ ಉಲ್ಬಣಗೊಳ್ಳುವುದಕ್ಕೆ ಮುನ್ನವೇ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಇಲಾಖೆಯಲ್ಲಿ ಕೊರತೆ ಇರುವ ಕ್ಷೇತ್ರವ್ಯಾಪ್ತಿಯ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂಧಿಗಳ ನೇಮಕಕ್ಕೆ ಶೀಘ್ರ ಕ್ರಮ ವಹಿಸಲಾಗುವುದು. ಈ ಹುದ್ದೆಗಳು ಬಹಳ ದಿನಗಳಿಂದ ಖಾಲಿ ಇದ್ದು, ಅವುಗಳನ್ನು ತ್ವರಿತವಾಗಿ ಭರ್ತಿಗೊಳಿಸಲು ಗಮನಹರಿಸಲಾಗುವುದು ಎಂದರು.
ಸೊರಬ ತಾಲೂಕಿನ ಚಂದ್ರಗುತ್ತಿ ಮತ್ತು ಕೋಣಂದೂರು ಗ್ರಾಮಗಳಲ್ಲಿ ಆರೋಗ್ಯ ಇಲಾಖೆಯ ಸುಸಜ್ಜಿತ ಕಟ್ಟಡವಿದೆ. ಅಗತ್ಯವಾಗಿರುವ ಸಿಬ್ಬಂಧಿ ಹಾಗೂ ಮೂಲಭೂತ ಪರಿಕರಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಸಾಗರ ಮತ್ತು ಭದ್ರಾವತಿ ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಭದ್ರಾವತಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಂಜೂರಾತಿಗೆ ಕ್ರಮ ವಹಿಸಲಾಗುವುದು ಎಂದರು.
ಶಿಶು ಮರಣ ಪ್ರಮಾಣ ನಿಯಂತ್ರಿಸುವಲ್ಲಿ ತಾಯಿ ಮತ್ತು ಮಗುವಿನ ಆರೈಕೆಗೆ ಗಮನಹರಿಸಬೇಕಾಗಿರುವುದು ಅಗತ್ಯವಾಗಿದ್ದು,, ಈಗಾಗಲೇ ಜಿಲ್ಲೆಯ ಸಾಗರ ಮತ್ತು ಶಿಕಾರಿಪುರ ಪಟ್ಟಣಗಳಲ್ಲಿ ಪ್ರತ್ಯೇಕ ತಾಯಿ-ಮಗುವಿನ ಆಸ್ಪತ್ರೆ ಇದ್ದು, ಕಾರ್ಯಪ್ರವೃತ್ತವಾಗಿವೆ ಎಂದರು.
Dinesh Gundurao ಡೇಕೇರ್ ಫಿಸಿಯೋಥೆರಪಿ ಕೇಂದ್ರಗಳನ್ನು ರಆಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆರಂಭಿಸಲಾಗುವುದು. ಜಿಲ್ಲೆಯಲ್ಲಿ ಅಂಧತ್ವ ಮುಕ್ತವನ್ನಾಗಿಸಲು ವಿಶೇಷವಾಗಿ ಜಿಲ್ಲೆಯಲ್ಲಿ ವಿಶೇಷ ಆಂದೋಲನವನ್ನು ಆರಂಭಿಸಲಾಗುತ್ತಿದ್ದು, ಅದರ ವ್ಯವಸ್ಥಿತ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ಸರ್ಕಾರದಿಂದ ಒದಗಿಸಲಾಗುವುದು. ಈ ಆಂದೋಲನದಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರೀಕರಿಗೂ ಉಚಿತ ನೇತ್ರತಪಾಸಣೆ, ಚಿಕಿತ್ಸೆ ಮತ್ತು ಸಲಕರಣೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಆಶಾಕಿರಣ ಎಂಬ ಯೋಜನೆ ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಇದ್ದು, ಅದನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದರು.
ಈಲ್ಲೆಯ ಖಾಸಗಿ ಸ್ತ್ರೀರೋಗ ಮತ್ತು ಪ್ರಸೂತಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರ ಶಸ್ತçಚಿಕಿತ್ಸೆಗಳು ಹೆಚ್ಚಾಗಿವೆ. ಇವುಗಳನ್ನು ನಿಯಂತ್ರಿಸಿ, ಸಹಜ ಹೆರಿಗೆ ಆದ್ಯತೆ ನೀಡುವಂತೆ ಪ್ರಸೂತಿ ವೈದ್ಯರಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಶೇ.,೭೦ರಷ್ಟಿರುವ ಆಪರೇಶನ್‌ಗಳ ಪ್ರಮಾಣ ಶೇ.೨೫ಕ್ಕೆ ಇಳಿಸುವಂತೆಯೂ ಸಲಹೆ ನೀಡಲಾಗಿದೆ ಎಂದರು.
ಈಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ತಾವು ರೋಗಿಗಳಿಗೆ ನೀಡುವ ಚಿಕಿತ್ಸೆಗೆ ವಿಧಿಸುತ್ತಿರುವ ದರವನ್ನು ಜನಸಾಮಾನ್ಯರಿಗೆ ಕಾಣುವಂತೆ ದರಪಟ್ಟಿ ಪ್ರದರ್ಶಿಸಬೇಕು. ತಪ್ಪಿದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಅಂತಹ ಆಸ್ಪತ್ರೆಗಳ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಸಾಗರ ತಾಲೂಕಿನ ಆಯ್ದ ಒಂದು ಪ್ರದೇಶದಲ್ಲಿ ಮಾತ್ರವೇ ಕಂಡುಬರುವ ಹಂದಿಗೋದು ಕಾಯಿಲೆಗೆ ವೈಜ್ಞಾನಿಕ ಅಧ್ಯಯನ ನಡೆಸಿ, ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕೂಡಲೇ ವಿಸ್ತೃತ ವರದಿ ನೀಡುವಂತೆ ಆರೋಗ್ಯ ಇಲಾಖಾ ಆಯುಕ್ತ ಕೆ.ಬಿ.ಶಿವಕುಮಾರ್ ಅವರಿಗೆ ಸೂಚಿಸಿದರು.
ತಜ್ಞವೈದ್ಯರ ನೇಮಕ, ಫಾರ್ಮಾಸಿಸ್ಟ್ಗಳ ನೇಮಕ, ಹೊರಗುತ್ತಿಗೆ ನೌಕರರ ಖಾಯಂಮಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ವೈದ್ಯರ ಹಾಜರಾತಿ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ ಎಂದ ಅವರು, ಮಧುಮೇಹ ಮತ್ತು ರಕ್ತದೊತ್ತಡದಿಂದಬಾದಿತರಾಗಿರುವವರ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅವರ ಮನೆಮನೆಗೆ ಔಷಧಗಳನ್ನು ತಲುಪಿಸಲು ಉದ್ಧೇಶಿಸಲಾಗಿದೆ. ಜನರ ಆರೋಗ್ಯ ಹದಗೆಡುವ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಈ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.
ನಕಲಿ ವೈದ್ಯರು ಹಾಗೂ ಆಯುಷ್ ವೈದ್ಯರಾಗಿದ್ದು, ಆಲೋಪತಿ ಸೇವೆ ಒದಗಿಸುತ್ತಿರುವ ವೈದ್ಯರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Shivamogga Police ಅಪಘಾತ ನಡೆಸಿದ ವ್ಯಕ್ತಿ ಪತ್ತೆಗೆ ಮನವಿ

0

Shivamogga Police ಅ. 10 ರಂದು ರಾತ್ರಿ 7.20 ಕ್ಕೆ ನಗರದ ಸಾಗರ ರಸ್ತೆ ಹೆಲಿಪ್ಯಾಡ್ ಸರ್ಕಲ್ ಬಳಿ ಶಶಿಕುಮಾರ್ ಎಂಬುವವರ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಅನಾಮಧೇಯ ವ್ಯಕ್ತಿಯೋರ್ವರು ಮೋಟಾರ್ ಬೈಕ್‌ನಿಂದ ಡಿಕ್ಕಿ ಹೊಡೆದು ಅಪಘಾತ ಮಾಡಿರುತ್ತಾರೆ.
ಗಾಯಾಳುಗಳಾದ ಶಶಿಕುಮಾರ್ ಹಾಗೂ ಶಫಿ ಅಹ್ಮದ್ ಈ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಬೈಕ್ ನಿಂದ ಡಿಕ್ಕಿ ಹೊಡೆಸಿ ಅನಾಮಧೇಯ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾತನಾಡಿಸಿಕೊಂಡು ಹೋಗಿರುತ್ತಾನೆ. ಆದರೆ Shivamogga Police ಅಪರಿಚಿತ ಬೈಕ್ ಸವಾರ ಮತ್ತು ಬೈಕಿನ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ಈ ಭಾವಚಿತ್ರದಲ್ಲಿರುವ ವ್ಯಕ್ತಿಯನ್ನು ನೋಡಿದವರು ಪಿ.ಎಸ್.ಐ ಪಶ್ಚಿವi ಸಂಚಾರ ಪೊಲೀಸ್ ಠಾಣೆ ಮೊ.ನಂ. 9480803346 ಮತ್ತು ದೂ. ಸಂ. 08182 261417 ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

PM Narendra Modi ವಿಕಸಿತ ಭಾರತ್ ಯುವ ನಾಯಕರ ಸಂಭಾಷಣೆ: ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ

0

PM Narendra Modi ಯುವ ಜನರಿಗೆ ಸನ್ಮಾನ್ಯ ಪ್ರಧಾನಿಯವರೊಂದಿಗೆ ನೇರವಾಗಿ ಸಂವಾದ ನಡೆಸುವ ಅವಕಾಶ ಮತ್ತು ಭಾರತದ ಭವಿಷ್ಯಕ್ಕಾಗಿ ತಮ್ಮನ್ನು ಪ್ರಸ್ತುತ ಪಡಿಸುವ, ರಾಜಕೀಯ ಮತ್ತು ನಾಗರೀಕ ಜೀವನದಲ್ಲಿ ತೊಡಗಿಸಿಕೊಳ್ಳುವಿಕೆಗೆ ಸುವರ್ಣ ಅವಕಾಶವನ್ನು ವಿಕಸಿತ ಭಾರತ್ ಯುವ ನಾಯಕರ ಸಂಭಾಷಣೆ ಕಾರ್ಯಕ್ರಮ ಒದಗಿಸಲಿದೆ.
ದೇಶದ ಎಲ್ಲಾ ಮೂಲೆಗಳಿಂದ ಆದರ್ಶಪ್ರಾಯ ಯುವ ದಾರ್ಶನಿಕರನ್ನು ಗುರುತಿಸುವುದು, ವಿಕಸಿತ ಭಾರತ್ ಬಗ್ಗೆ ಯುವಕರಿಗೆ ಅವರ ದೃಷ್ಟಿಕೋನವನ್ನು ಹಂಚಿಕೊಳ್ಳಲು ಪರಿಣಾಮಕಾರಿ ವೇದಿಕೆ ಒದಗಿಸುವುದು, ಭಾರತೀಯರನ್ನು ಸಶಕ್ತಗೊಳಿಸಲು ಯುವಕರನ್ನು ಚಾಲನೆಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
2025 ರ ಜನವರಿ 11 ಮತ್ತು 12 ರಂದು ರಾಷ್ಟ್ರೀಯ ಯುವ ಉತ್ಸವ ಸಂದರ್ಭದಲ್ಲಿ ‘ವಿಕಸಿತ ಭಾರತ್ ಯುವ ನಾಯಕರ ಸಂವಾದ’ ನಡೆಯಲಿದೆ. ಈ 2 ದಿನದ ಕಾರ್ಯಕ್ರಮದಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿ 3000 ಯುವ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ವಿಕಸಿತ ಭಾರತ್ ಯುವ ನಾಯಕರ ಸಂವಾದ-ರಾಷ್ಟ್ರೀಯ ಯುವ ಉತ್ಸವ 2025 ರಲ್ಲಿ ಮೂರು ಪ್ರಮುಖ ವಿಭಾಗಗಳಲ್ಲಿ ಯುವ ನಾಯಕರ ಕ್ರಿಯಾತ್ಮಕ ಗುಂಪನ್ನು ಮಾಡಲಾಗುವುದು.
PM Narendra Modi ಮೊದಲ ಗುಂಪು ವಿಕಸಿತ್ ಭಾರತ್ ಚಾಲೆಂಜ್‌ನಲ್ಲಿ ಭಾಗವಹಿಸುವವರು, ಎರಡನೇ ಗುಂಪು ಚಿತ್ರಕಲೆ, ವಿಜ್ಞಾನ ಪ್ರದರ್ಶನಗಳು, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಘೋಷಣೆ ಸ್ಪರ್ಧೆಗಳಲ್ಲಿ ಜಿಲ್ಲಾ, ರಜ್ಯ ಮಟ್ಟದ ಯುವಜನೋತ್ಸವಗಳಿಂದ ಆಯ್ಕೆಯಾದ ಯುವ ಪ್ರತಿಭೆ ಹಾಗೂ ಮೂರನೇ ಗುಂಪು ಉದ್ಯಮಶೀಲತೆ, ಕ್ರೀಡೆ, ಕೃಷಿ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಅಸಾಧಾರಣ ಯುವ ಐಕಾನ್‌ಗಳನ್ನು ಒಳಗೊಂಡಿರುತ್ತದೆ. 3000 ಯುವ ನಾಯಕರ ಪೈಕಿ 1500 ಯುವ ನಾಯಕರನ್ನು ನನ್ನ ಭಾರತ್ ಪ್ಲಾಟ್‌ಫಾರ್ಮ್ನಲ್ಲಿ ವಿಕಸಿತ ಭಾರತ್ ಚಾಲೆಂಜ್‌ನಿಂದಆಯ್ಕೆ ಮಾಡಲಾಗುತ್ತದೆ.
ಒಂದನೇ ಹಂತದಲ್ಲಿ ವಿಕಸಿತ ಭಾರತ್ ಚಾಲೆಂಜ್ ರಸಪ್ರಶ್ನೆ ಕಾರ್ಯಕ್ರಮವು ಭಾರತದ ಹೆಗ್ಗುರುತು ಸಾಧನೆಗಳು ವಿಷಯ ಕುರಿತು ನ.25 ರಿಂದ ಆರಂಭವಾಗಿ ಡಿ.05 ರವರೆಗೆ ನಡೆಯಲಿದೆ. ಎರಡನೇ ಹಂತದಲ್ಲಿ ವಿಕಸಿತ ಭಾರತ್ ಬ್ಲಾಗ್/ಪ್ರಬಂಧ ಸ್ಪರ್ಧೆ ನಡೆಯಲಿದೆ. ವಿಕಸಿತ ಭಾರತ್ ಚಾಲೆಂಜ್‌ನಲ್ಲಿ ಭಾಗವಹಿಸಲು ಮೈಭಾರತ್ ನಲ್ಲಿ www.mybharat.gov.in ಲಾಗಿನ್ ಆಗಬಹುದು ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ ಟಿ ಕೆ ತಿಳಿಸಿದ್ದಾರೆ.

DR.BR. Ambedkar Residential School for Girls ವಸತಿ ಶಾಲೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

0

DR.BR. Ambedkar Residential School for Girls ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸ್ಪಾಫ್ ನರ್ಸ್ ಹುದ್ದೆಗೆ ಜಿಎನ್‌ಎಂ ಅಥವಾ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಪಡೆದ ಮಹಿಳಾ ಅಭ್ಯರ್ಥಿಗಳು ಡಿ.5 ರೊಳಗೆ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ ಕೋಟೆ ರಸ್ತೆ ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಹೊರ DR.BR. Ambedkar Residential School for Girls ಸಂಪನ್ಮೂಲ ಏಜೆನ್ಸಿ ಮೂಲಕ ಇಎಸ್‌ಐ, ಪಿಎಫ್ ಕಟಾಯಿಸಿ ಮಾಸಿಕ ರೂ.13499/- ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 9880238509 ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.