Department of Archeology Museums and Heritage ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ(ಪುರಾತತ್ತ್ವ)(ಪ್ರ) ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ.
ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ.
ಒಂದನೇ ಶಾಸನವು ಕ್ರಿ.ಶ 1084 ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಬಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ.
Department of Archeology Museums and Heritage ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ 1096 ಕ್ಕೆ ಸೇರಿದ ಶಾಸನವಾಗಿದ್ದು ಇದರ ಮೇಲ್ಬಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇದೆ. ಇದು ಬಹಳ ಸವೆದಿದೆ. ಇಲ್ಲಿನ ಬೆಟ್ಟೇಶ್ವರ ದೇವರ ನಂದಾ ದೀಪಕ್ಕೆ 5 ಗದ್ಯಾಣ ದಾನ ಬಿಡಲಾಗಿದೆ. ಈ ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಸಲವಾನಿ ಎಂದು ಉಲ್ಲೇಖವಾಗಿದೆ. ಶಾಸನವನ್ನು ಡಾ.ಜಗದೀಶ ಓದಿ ಅರ್ಥೈಸಿದ್ದು ಗ್ರಾಮಸ್ಥರಾದ ಡೈರಿ ಪರಶುರಾಮ, ಲೋಹಿತಾಚಾರ್, ಮಾಯಾಚಾರ್, ಶಿವಮೂರ್ತಪ್ಪ ಇವರುಗಳಿಗೆ ಧನ್ಯವಾದಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರ-ಹಂಪಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು(ಪುರಾತತ್ವ)(ಪ್ರ) ಡಾ.ಶೇಜೇಶ್ವರ ತಿಳಿಸಿದ್ದಾರೆ.
Department of Archeology Museums and Heritage ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ
Sahyadri Science College ಡಿ.05 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ : ಯುವ ಕೃತಿ ಮತ್ತು ವಿಜ್ಞಾನ ಮೇಳ
Sahyadri Science College ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಹ್ಯಾದ್ರಿ ವಿಜ್ಞಾನ ಕಾಲೇಜು ಇವರುಗಳ ಸಹಯೋಗ ದೊಂದಿಗೆ ಸಹ್ಯಾದ್ರಿ ವಿಜ್ಞಾನ ಕಾಲೇಜು ಜ್ಯೂಬಿಲಿ ಸಭಾಂಗಣದಲ್ಲಿ ಡಿ. 05 ರಂದು ಜಿಲ್ಲಾ ಮಟ್ಟದ ಯುವಜನೋತ್ಸವದ ಕಾರ್ಯಕ್ರಮದಡಿಯಲ್ಲಿ ಯುವ ಕೃತಿ ಮತ್ತು ವಿಜ್ಞಾನ ಮೇಳವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಭಾಗವಹಿಸುವ ಯುವಕ, ಯುವತಿಯರು 15 ರಿಂದ 29 ವರ್ಷ ವಯೋಮಿತಿಗೆ ಒಳಪಟ್ಟಿರಬೇಕು.
ವಿಜ್ಞಾನ ಮೇಳ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಧುನಿಕತೆ ಎಂಬ ಪರಿಕಲ್ಪನೆ ಹೊಂದಿದ್ದು,
ತಂಡದ ಬಹುಮಾನ ಪ್ರಥಮ-7000/-, ದ್ವಿತೀಯ – 5000/- ಮತ್ತು ತೃತೀಯ-3000/- ನಗದು ಬಹುಮಾನ ನೀಡಲಾಗುವುದು.
ವೈಯಕ್ತಿಕ ಬಹುಮಾನ 3000/-, ದ್ವಿತೀಯ- 2000/- ಮತ್ತು ತೃತೀಯ-1500/- ನಗದು ಬಹುಮಾನ ನೀಡಲಾಗುವುದು.
ತಂಡದಲ್ಲಿ ಗರಿಷ್ಟ 5 ಜನ ಮತ್ತು ವೈಯಕ್ತಿಕ ಒಬ್ಬರು ಮಾತ್ರ ಭಾಗವಹಿಸಬಹುದು. ಆಧುನಿಕತೆಗೆ ಪ್ರಾಧಾನ್ಯತೆ ನೀಡಲಾಗುವುದು. ಸಕ್ರಿಯ ಮಾದರಿ ತಯಾರಿಕೆಯ ಪ್ರದರ್ಶನವಿರಬೇಕು.ನಿಷ್ಕ್ರಿಯ ಮಾದರಿ ತಯಾರಿಕೆಗೆ ಅವಕಾಶವಿಲ್ಲ. ಭಾಗವಹಿಸುವ ಸ್ಪರ್ಧಾಳುಗಳು ಅವಶ್ಯವಿರುವ ಅಗತ್ಯ ಸಾಮಗ್ರಿಗಳನ್ನು ತಾವೇ ತರಬೇಕು.
ಯುವ ಕೃತಿ ವಿಭಾಗದಲ್ಲಿ ಗುಡಿಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳನ್ನು ತಯಾರಿಸಬೇಕು. ಪ್ರತಿಯೊಂದರಲ್ಲೂ 7 ಜನ ಭಾಗವಹಿಸಬಹುದು. ಸ್ಪರ್ಧಾಳುಗಳು ಅಗತ್ಯ ಸಾಮಗ್ರಿಗಳನ್ನು ತಾವೇ ತರಬೇಕು. ಭಾಗವಹಿಸುವವರಿಗೆ ಗೌರವ ಧನ ನೀಡಲಾಗುವುದು.
Sahyadri Science College ಆಸಕ್ತರು ಸ್ಪರ್ಧೆಯಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿಯನ್ನು ಡಿ.03 ರೊಳಗಾಗಿ ನೀಡಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅಥವಾ ಯುವ ಕೇಂದ್ರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08182 220883 9961332968, 9900280416 ಸಂಪರ್ಕಿಸುವುದು. ಮತ್ತು MYBHARAT (my bharat.gov.in) ಪೋರ್ಟಲ್‌ನಲ್ಲಿ ್ಲ ರಿಜಿಸ್ಟೆçಷನ್ ಮಾಡಿಕೊಳ್ಳತಕ್ಕದ್ದು ಎಂದು ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ತಿಳಿಸಿದ್ದಾರೆ.
Sahyadri Kannada Siri Balaga ಸ್ಟೈಲ್ ಡಾನ್ಸ್ ಕ್ರೀವ್ ಸಂಸ್ಥಾಪಕ ಶಶಿಕುಮಾರ್ ಪುನೀತ ರತ್ನ ಪ್ರಶಸ್ತಿ
Shivamogga Sahyadri Kannada Siri Balaga ಶಿವಮೊಗ್ಗ ಜಿಲ್ಲಾ ಸಹ್ಯಾದ್ರಿ ಕನ್ನಡಸಿರಿ ಬಳಗ (ರಿ.) ಜ್ವಾಲಾಮುಖಿ ಕನ್ನಡ ಸೇವಾ ಸಂಘ ಶಿವಮೊಗ್ಗ ಇವರ ವತಿಯಿಂದ ಗೋಪಿವೃತ್ತದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಸ್ಥಳೀಯ ಸಾಧಕರಿಗೊಂದು ಗೌರವ ಸಮರ್ಪಣೆ ಎಂಬ ಕಾರ್ಯಕ್ರಮದಲ್ಲಿ ನೃತ್ಯ ಸಾಧನೆ ಮತ್ತು ಸಮಾಜಮುಖಿ ಕೆಲಸವನ್ನು ಮೆಚ್ಚಿ ಸ್ಟೈಲ್ ಡಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಎನ್ ಅವರಿಗೆ ೨೦೨೪ನೇ ಸಾಲಿನ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಮತ್ತು ” ಪುನೀತ ರತ್ನ ” ಎಂಬ ಬಿರುದನ್ನು ನೀಡಲಾಗಿದೆ.
Shivamogga Sahyadri Kannada Siri Balaga ಈ ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ,ಗೀತಾ ಶಿವರಾಜ್ ಕುಮಾರ್, ಕಾಂಗ್ರೇಸ್ ಮುಖಂಡರಾದ ಹೆಚ್ ಸಿ ಯೋಗೀಶ್, ಬಿಜೆಪಿ ಯುವ ಮುಖಂಡ ಕಿರಣ್ ಕುಮಾರ್, ಕನ್ನಡ ಪರ ಸಂಘಟನೆಗಳ ಮುಖಂಡರು ಸೇರಿದಂತೆ ಮತ್ತಿತರರಿದ್ದರು.
Department of Women and Child Development ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿಯ ಕೆಲವು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ
Department of Women and Child Development ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ ಕಾರ್ಯಕರ್ತೆಯರು ಮತ್ತು 448 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ, ಗ್ರಾಮ ಪಂಚಾಯತ್, ಮಹಾನಗರಪಾಲಿಕೆ, ನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯ್ತಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣಾ ಅರ್ಜಿಗಳನ್ನು ದಿ: 04-12-2024 ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾ ಕಚೇರಿಗೆ ಸಲ್ಲಿಸಬಹುದು.
Department of Women and Child Development ಭದ್ರಾವತಿ ತಾಲ್ಲೂಕು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಾರ್ಯಕರ್ತೆಯರು 10, ಸಹಾಯಕಿಯರು 72, ಹೊಸನಗರ ಕಾರ್ಯಕರ್ತೆಯರು 07, ಸಹಾಯಕಿಯರು 35, ಸಾಗರ ಕಾರ್ಯಕರ್ತೆಯರು 21, ಸಹಾಯಕಿಯರು 62, ಶಿಕಾರಿಪುರ ಕಾರ್ಯಕರ್ತೆಯರು 08, ಸಹಾಯಕಿಯರು 55, ಶಿವಮೊಗ್ಗ ಕಾರ್ಯಕರ್ತೆಯರು 33, ಸಹಾಯಕಿಯರು 118, ಸೊರಬ ಕಾರ್ಯಕರ್ತೆಯರು 38, ಸಹಾಯಕಿಯರು 65 ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು 09 ಹಾಗೂ ಸಹಾಯಕಿರಯರು 41 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
Rotary Shimoga ಕೋಟ್ಯಾಂತರ ಹಣವನ್ನ ರೋಟರಿ ದತ್ತಿನಿಧಿ ಮೂಲಕ ಸಮಾಜಮುಖಿ ಚಟುವಟಿಕೆಗೆ ಬಳಸಲಾಗುತ್ತಿದೆ- ಡಾ.ರಾಜನಂದಿನಿ ಕಾಗೋಡು
Rotary Shimoga ರೋಟರಿ ದತ್ತಿನಿಧಿ ಮುಖಾಂತರ ಕೋಟ್ಯಂತರ ರೂ.ಗೂ ಅಧಿಕ ಮೊತ್ತದ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ.
ಪೊಲಿಯೋ ಲಸಿಕೆ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಬಳಸಲಾಗಿದೆ ಎಂದು ರೋಟರಿ ದತ್ತಿನಿಧಿ ವಲಯ ಸಂಯೋಜಕಿ, ಸಾಗರ ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು ಹೇಳಿದರು.
ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್‌ನಲ್ಲಿ ರೋಟರಿ ಫೌಂಡೇಷನ್ ಡೇ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ರೋಟರಿ ದತ್ತಿನಿಧಿಗೆ ಯಾರು ಬೇಕಾದರೂ ದೇಣಿಗೆ ನೀಡಬಹುದು. ನಾವು ನೀಡುವ ದೇಣಿಗೆ ತುಂಬಾ ಪವಿತ್ರ ಕಾರ್ಯಕ್ಕೂ ಸದ್ವಿನಿಯೋಗವಾಗುತ್ತದೆ ಎಂದು ತಿಳಿಸಿದರು.
Rotary Shimoga ಇದೇ ಸಂದರ್ಭದಲ್ಲಿ ರೋಟರಿ ಫೌಂಡೇಷನ್‌ಗೆ ಪ್ರತಿ ವರ್ಷ 1,000 ಡಾಲರ್ ದೇಣಿಗೆ ನೀಡುತ್ತಿರುವ ಜಿಲ್ಲಾ ಮಾಜಿ ಗವರ್ನರ್ ಜಿ.ಎನ್.ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ರೋಟರಿ ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಕುರಿತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, 2013ರಲ್ಲಿ ಸಿಎಸ್‌ಆರ್ ನೀತಿ ಜಾರಿಗೆ ಬಂದಿದ್ದು, ಸಾವಿರಾರು ಕೋಟಿ ರೂ. ವ್ಯವಹಾರ ನಡೆಸುತ್ತಿರುವ ಸಂಸ್ಥೆಗಳು, ಕಂಪನಿಗಳು, ಬ್ಯಾಂಕ್‌ಗಳು ಲಾಭಾಂಶದಲ್ಲಿ ಶೇ. 2ರಷ್ಟನು ಸಮಾಜದ ಉನ್ನತಿಗೆ ವೆಚ್ಚ ಮಾಡಲು ಕಾನೂನು ಅನುಕೂಲ ಮಾಡಿದೆ. ಪರಿಸರ ಕಾರ್ಯ, ಆರೋಗ್ಯ ರಕ್ಷಣೆ, ಮಹಿಳಾ ಸಬಲೀಕರಣ ಸೇರಿ ಸಮಾಜಮುಖಿ ಕೆಲಸಗಳಿಗೆ ಸಿಎಸ್‌ಆರ್ ಫಂಡ್ ಉಪಯೋಗವಾಗಲಿದೆ ಎಂದು ತಿಳಿಸಿದರು.
ರೋಟರಿ ಸೆಂಟ್ರಲ್ ಕ್ಲಬ್ ಅಧ್ಯಕ್ಷ ಜಿ.ಕಿರಣಕುಮಾರ್ ಮಾತನಾಡಿ, ರೋಟರಿ ಫೌಂಡೇಷನ್‌ಗೆ ಹೆಚ್ಚಿನ ದೇಣಿಗೆ ನೀಡುವ ಮೂಲಕ ನಮ್ಮ ಕ್ಲಬ್ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಪ್ರಮುಖರಾದ ಸುರೇಖಾ ಮುರಳೀಧರ್, ಜಿ.ಎನ್.ಪ್ರಕಾಶ್, ಕಾರ್ಯದರ್ಶಿ ಈಶ್ವರ್, ಚುಡಾಮಣಿ ಪವಾರ್, ವಿಜಯಪ್ರಕಾಶ್, ಗೀತಾ ಜಗದೀಶ್, ರಾಜಶ್ರೀ ಬಸವರಾಜ್, ಧರ್ಮೇಂದ್ರಸಿಂಗ್, ರವಿ ಕೋಟೋಜಿ, ಅರುಣ್ ದೀಕ್ಷಿತ್, ಮಂಜುನಾಥರಾವ್ ಕದಂ, ಆನಂದ್, ಅರುಣ್‌ಕುಮಾರ್, ರಾಜೀವ್ ಉಪಸ್ಥಿತರಿದ್ದರು.
Dinesh Gundurao ಮಂಗನ ಕಾಯಿಲೆ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಯಂತೆ ಮೆಗ್ಗಾನ್ ನಲ್ಲೂ ಡಾಕ್ಟರ್ ನೇಮಸಿಕೊಳ್ಳಿ – ಆರೋಗ್ಯ ಮಂತ್ರಿ ದಿನೇಶ್ ಗುಂಡುರಾವ್
Dinesh Gundurao ಮಂಗನ ಕಾಯಿಲೆಗೆ ಸಂಭಂದಿಸಿದಂತೆ ನಾಲ್ಕು ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಆರೋಗ್ಯ ಸಚಿವರು
ಮಂಗನ ಕಾಯಿಲೆ ನಿಯಂತ್ರಣ ಮಾಡುವುದು ಹಾಗೂ ಕಾಯಿಲೆ ಹರಡದಂತೆ ಮುಂಜಾಗ್ತತೆಯ ಕ್ರಮ ನಾಲ್ಕು ಜಿಲ್ಲೆಯ ಅಧಿಕಾರಿಗಳು ಮಾಡಬೇಕು.ಕಾಯಿಲೆ ಹೆಚ್ಚು ಉದ್ಭವಿಸುವ ಗ್ರಾಮದಲ್ಲಿ ಜನರಿಗೆ ಅರಿವು ಮೂಡಿಸುವುದು. ಮಂಗಗಳು ಸತ್ತರೆ ಅದರ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಕೊಡಲೆ ರಿಸಲ್ಟ್ ಪಡೆದು ಕಾರ್ಯಪ್ರವೃತ್ತರಾಗಬೇಕು. ಗ್ರಾಮಪಂಚಾಯತ್ ಮಟ್ಟದಲ್ಲಿ ಸಭೆ ನಡೆಸುವುದು. ಈಗಾಗಲೆ ಡಿ.ಎಮ್.ಪಿ ಆಯಿಲ್ ಸರ್ಕಾರದ ಮಟ್ಟದಲ್ಲಿ ಇದೆಯಾದರೂ ನಾಲ್ಕು ಜಿಲ್ಲೆಯ ಅಧಿಕಾರಿಗಳು ತಮ್ನ ವ್ಯಾಪ್ತಿಗೆ ಬೇಕಾದಷ್ಟು ತರಿಸಿಕೊಂಡು ಶಾಲಾ ಮಕ್ಕಳಿಗೆ ಮನೆಗಳಿಗೆ ವಿತರಿಸುವುದು. ಶಿರಸಿಯಲ್ಲಿ ಲ್ಯಾಬ್ ಟೆಸ್ಟ್ ಕೇಂದ್ರ ಮಾಡುವುದು ಶಿವಮೊಗ್ಗ ಲ್ಯಾಬ್ ಟೆಸ್ಟ್ ಕೇಂದ್ರ ಉನ್ನತೀಕರಿಸಿ ಗ್ರೇಡ್ ಮೂರಕ್ಕೆ ಏರಿಸಲಾಗುವುದು ಪೂನಾ ಮಾದರಿಯಲ್ಲಿ ಕರ್ನಾಟಕದಲ್ಲಿ ಲ್ಯಾಬ್ ಟೆಷ್ಟ್ ಕೇಂದ್ರ ಸ್ಥಾಪನೆ Dinesh Gundurao ಶಿವಮೊಗ್ಗದಲ್ಲಿಅಡಲಾಗುವುದು. ನಾಲ್ಕು ಜಿಲ್ಲೆಗಳಾದ ಶಿವಮೊಗ್ಗ ಕಾರವಾರ ಚಿಕ್ಕಮಗಳೂರು ಉಡುಪಿ ಜಿಲ್ಲಗಳಿಗೆ ಕೆ.ಎಪ್.ಡಿ ವಾಹನಗಳನ್ನು ಪ್ರತ್ಯೇಕವಾಗಿ ನೀಡಲಾಗುವುದು. ಮಣಿಪಾಲ್ ನಲ್ಲಿ ಮಂಗನಕಾಯಿಲೆಗೆ ಉಚಿತ ಚಿಕಿತ್ಸೆಯನ್ನು ಬಿಪಿಎಲ್ ಕಾರ್ಡ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೂ ನೀಡಲು ವಿಶೇಷ ಸೌಲಭ್ಯ ಸರ್ಕಾರದಿಂದ ನೀಡಲಾಗುವುದು. ಮಂಗನಕಾಯಿಲೆ ಲ್ಯಾಬ್ ಟೆಷ್ಟ್ ಸೆಂಟರ್ ಸಾಗರದಲ್ಲಿ ಇರುವುದನ್ನು ಮತ್ತೆ ಪುನರ್ ಆರಂಭಿಸಲಾಗುವುದು. ಮಂಗನ ಕಾಯಿಲೆಯ ಪ್ರಯೋಗಾಲಯ ಬಗ್ಗೆ ಹಾಗೂ ಚಿಕಿತ್ಸೆಯ ಬಗ್ಗೆ ಹೆಚ್ವಿನ ಸಂಶೋಧನೆ ನಡೆಸಲಾಗುವುದು. ಸಾಗರ ಉಪವಿಭಾಗೀಯ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯ ಗ್ರೇಡ್ ಗೆ ಏರಿಸಲು ಕ್ರಮಕ್ಯೆಗೊಳ್ಳಲಾಗುವುದು. ಸಭೆಯಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಉಪಸ್ಥಿತರಿದ್ದರು.
Akhila Bharatha Sharana Sahitya Parishad ಚಿಂತನಾ ಕಾರ್ತೀಕದಲ್ಲಿ ಶರಣರ ,ಸಾಧಕರ & ಸಾಧುಸಂತರ ವಿಚಾರಗಳ ಅನಾವಣ- ಶ್ರೀಬಸವ ಮರುಳ ಸಿದ್ಧಶ್ರೀ
Akhila Bharatha Sharana Sahitya Parishad ಬದುಕು ನೆಮ್ಮದಿಯಾಗಿ ಸಾಗಿಸಲು ಮೌಲ್ಯಗಳು ಹಾಗೂ ಸಂಸ್ಕಾರ ತುಂಬಾ ಅಗತ್ಯವಾಗಿರುತ್ತದೆ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ಶಿವಮೊಗ್ಗ ನಗರದ ಗೋಪಾಳದಲ್ಲಿರುವ ಎ.ಎಚ್.ಲೇಔಟ್‌ನಲ್ಲಿರುವ ಡಿ.ಎಂ.ಶಂಕರಪ್ಪ ಅವರ ದೊಡ್ಡಣ್ಣ ನಿವಾಸದಲ್ಲಿ ಆಯೋಜಿಸಿದ್ದ ಚಿಂತನಾ ಕಾರ್ತಿಕದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಜನರಿಗೆ ಜ್ಞಾನದ ಬುತ್ತಿ ನೀಡುವುದರ ಜತೆಗೆ ಮನೆಮನಗಳನ್ನು ಬೆಳಗುತ್ತದೆ. ಜ್ಞಾನದಾಸೋಹದ ಚಿಂತನಾ ಕಾರ್ಯಕ್ರಮ ಹೆಚ್ಚು ಹೆಚ್ಚು ನಡೆಯಲು ಇಚ್ಛಾಶಕ್ತಿ ಬೇಕಿದೆ ಎಂದು ತಿಳಿಸಿದರು.
ಹದಿನೆಂಟು ವರ್ಷಗಳಿಂದ ಭಕ್ತರ ನೆರವಿನಿಂದ ಚಿಂತನ ಕಾರ್ತಿಕ ಯಶಸ್ವಿಯಾಗಿ ನಡೆಯುತ್ತಿದ್ದು, ಜನಮಾನಸ ತಲುಪುವ ಜತೆಯಲ್ಲಿ ಶರಣರ ಚಿಂತನೆ, ಸಾಧಕರು, ಸಾಧುಸಂತರ ವಿಚಾರಗಳು ಅನಾವರಣಗೊಳ್ಳುತ್ತಿವೆ ಎಂದರು.
ಇದೇ ಸಂದರ್ಭದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್, ಬಸವಣ್ಣ ಅವರ ವಚನಗಳು ಇಂದಿಗೂ ಪ್ರಸ್ತುತ. ಬಸವಣ್ಣ ಅವರ ವಚನಗಳು ಸಮಾಜದ ವಿವಿಧ ಸಂಗತಿಗಳ ಬಗ್ಗೆ ಪ್ರಸ್ತಾಪಿಸಿದ್ದವು. ಪ್ರತಿ ವಚನಗಳಲ್ಲಿಯೂ ಬದುಕಿಗೆ ಅವಶ್ಯವಿರುವ ಸಂಗತಿಗಳನ್ನು ತಿಳಿಸುತ್ತದೆ ಎಂದು ಹೇಳಿದರು.
Akhila Bharatha Sharana Sahitya Parishad ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಯುವಪೀಳಿಗೆಯಲ್ಲಿ ಧರ್ಮ, ಸಂಸ್ಕೃತಿಯ ಅರಿವು ಮೂಡಿಸುವ ಜತೆಯಲ್ಲಿ ಧಾರ್ಮಿಕ ಮನೋಭಾವನೆ ಬೆಳೆಸಬೇಕು. ಮಕ್ಕಳಲ್ಲಿ ಸಕರಾತ್ಮಕ ಭಾವನೆ ಬೆಳೆಸಬೇಕು ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಚಿಂತನ ಕಾರ್ತಿಕದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಜೀವನಕ್ಕೆ ಅಮೂಲ್ಯವಾಗಿ ಬೇಕಿರುವ ಸಂಸ್ಕಾರವನ್ನು ಚಿಂತನ ಕಾರ್ತಿಕದಂತಹ ಕಾರ್ಯಕ್ರಮಗಳು ಕಲಿಸುತ್ತವೆ. ನಾವು ಮಾಡಿದ ಸಮಾಜಮುಖಿ ಸೇವೆ ದಾನ, ಧರ್ಮ ನಮ್ಮನ್ನು ಕಾಪಾಡುತ್ತದೆ. ಪರಿಸರ ಉಳಿಸಿ ಬೆಳೆಸುವ ಜತೆಯಲ್ಲಿ ಆರೋಗ್ಯ ಜೀವನ ನಡೆಸಬೇಕು ಎಂದು ತಿಳಿಸಿದರು.
ಚನ್ನಗಿರಿ ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್, ಡಿ.ಎಂ.ಶಂಕರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ, ಕಮಲಮ್ಮ, ಉಪಸ್ಥಿತರಿದ್ದರು.
Constitution Day ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ- ಮಧು ಬಂಗಾರಪ್ಪ
Constitution Day ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಅಲ್ಲಮ ಪ್ರಭು ಮೈದಾನದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ 10*6 ಅಡಿ ಅಳತೆಯ ಮುದ್ರಿತ ಸಂವಿಧಾನ ಪೀಠಿಕೆಯನ್ನು ಪ್ರತಿಷ್ಟಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ವೈವಿಧ್ಯಮಯವಾದ ಭಾರತ ದೇಶದಲ್ಲಿ ಯಾವುದೇ ದ್ವೇಶ, ವೈಷಮ್ಯವಿಲ್ಲದೆ, ಎಲ್ಲರೂ ಏಕತೆ, ಭಾವೈಕ್ಯತೆ, ಸಮಗ್ರತೆಯಿಂದ ಬದುಕಲು ಅನುವಾಗುವಂತಹ ಸಂವಿಧಾನವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿದ್ದಾರೆಂದು ಸ್ಮರಿಸಿದರು.
Constitution Day ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ‘ ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನವಿಲ್ಲದೆ ಪ್ರಜಾಪ್ರಭುತ್ವವಿಲ್ಲ,ಸಂವಿಧಾನವು ನಿಮಗೆ ಹಕ್ಕುಗಳನ್ನು ಒದಗಿಸುತ್ತದೆ, ಅವುಗಳನದನಯ ಸರಿಯಾಗಿ ಬಳಸಿಕೊಳ್ಳಿ. ಸಂವಿಧಾನದ ಮೂಲಧ್ಯೇಯ ಎಲ್ಲರಿಗೂ ಒಂದೇ ಕಾನೂನು, ಸರ್ವ ಧರ್ಮ ಸಮನ್ವತೆ’ ಮುಂತಾದ ಧ್ಯೇಯವಾಕ್ಯಗಳನ್ನೊಳಗೊಂಡ ಫಲಕಗಳನ್ನು ಹಿಡಿದು ಅಲ್ಲಮ ಪ್ರಭು ಮೈದಾನಸಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು.
ಈ ವೇಳೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರವಿಕುಮಾರ್ , ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ
K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
K.H. Muniyappa ನವೆಂಬರ್ 28ರ ಒಳಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಎಲ್ಲಾ ಸೌಲಭ್ಯಗಳೊಂದಿಗೆ ಅಕ್ಕಿಯನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಯಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
