Monday, March 23, 2026
Monday, March 23, 2026
Home Blog Page 482

Yuvanidhi Scheme ಯುವನಿಧಿ ಯೋಜ‌‌ನೆಗೆ ಆನ್ ಲೈನ್ ನೋಂದಾಯಿಸಲು ಆಹ್ವಾನ

0

Yuvanidhi Scheme ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್‌ಲೈನ್ ನೋಂದಣಿ ಆಹ್ವಾನಿಸಿದೆ.

2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
2022-23ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣಾರಾದವರು, ಪದವಿ/ಡಿಪ್ಲೊಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ .

Yuvanidhi Scheme ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ಅಥವಾ ಸಹಾಯವಾಣಿ 18005999918 ನ್ನು ಸಂಪರ್ಕಿಸಬಹುದು.

Constitution Day ಸಂವಿಧಾನದ ಸಂದೇಶವೇ ನಮ್ಮ ಸರ್ಕಾರದ ಸಿದ್ಧಾಂತ- ಸಿದ್ಧರಾಮಯ್ಯ

0

Constitution Day ಸಂವಿಧಾನ ದಿನಾಚರಣೆಯ ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಶುಭಾಶಯ ಕೋರಿದ್ದಾರೆ


ಸಂವಿಧಾನದ
ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು.

ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ.

Constitution Day ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ.

ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ.

ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.

Chamber Of Commerce Shivamogga ಆದಾಯಕರ ಇಲಾಖೆಯಿಂದ ಜನಸ್ನೇಹಿ ಸುಧಾರಣೆಗಳಾಗಿತ್ತಿವೆ- ಬಿ.ಗೋಪಿನಾಥ್

0

Chamber Of Commerce Shivamogga ಹತ್ತು ವರ್ಷಗಳಿಂದ ಆದಾಯ ತೆರಿಗೆ ಇಲಾಖೆಯು ಕೈಗೊಂಡಿರುವ ಜನಸ್ನೇಹಿ ಸುಧಾರಣೆ ಕ್ರಮಗಳಿಂದ ಗಮರ್ನಾಹ ಬದಲಾವಣೆಗಳು ಆಗಿವೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾ ಚಾರ್ಟರ್ಡ್ ಅಕೌಂಟೆಂಟ್, ಜಿಲ್ಲಾ ತೆರಿಗೆ ಸಲಹೆಗಾರರ ಸಂಘ, ಆದಾಯ ತೆರಿಗೆ ಇಲಾಖೆ ಸಹಯೋಗದೊಂದಿಗೆ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಾದ್ ಸೆ ವಿಶ್ವಾಸ್ ಸ್ಕೀಮ್ 2024 ಕಾರ್ಯಕ್ರಮದಲ್ಲಿ ಮಾತನಾಡಿದರು.

ಆದಾಯ ತೆರಿಗೆ ಇಲಾಖೆಯು ಇಂತಹ ಪ್ರಮುಖ ಜನಸ್ನೇಹಿ ಹಾಗೂ .ಕರದಾತಸ್ನೇಹಿ ವ್ಯಾಜ್ಯ ಮುಕ್ತ ತೆರಿಗೆ ಸ್ಕೀಮ್ ಕಾರ್ಯಗಾರವನ್ನು ಎಸ್‌ಡಿಸಿಸಿಐ ಸಾರಥ್ಯದಲ್ಲಿ ನಡೆಸುತ್ತಿರುವುದು ಅಭಿನಂದನೀಯ. ತೆರಿಗೆದಾರರು ವಿವಾದ್ ಸೆ ವಿಶ್ವಾಸ್ ಸ್ಕೀಮ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ದಶಕಗಳಲ್ಲಿ ಆಗಿರುವ ಬದಲಾವಣೆಗಳಿಂದ ತೆರಿಗೆದಾರನಿಗೆ ಪ್ರಯೋಜನವಾಗಿದ್ದು, ಸರ್ಕಾರದ ಖಜಾನೆಗೆ ದಾಖಲೆ ಪ್ರಮಾಣದಲ್ಲಿ ನೇರ ತೆರಿಗೆ ಬಂದಿದೆ. ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮ ಹಾಗೂ ಮೂಲಸೌಕರ್ಯದ ಅಭಿವೃದ್ಧಿಯಾಗಿದೆ. ಇಂತಹ ಕಾರ್ಯಕ್ರಮಗಳಿಗೆ ಮುಂದೆಯೂ ಸಹ ಆದಾಯ ತೆರಿಗೆ ಇಲಾಖೆ ಜತೆಗೆ ಸಂಘ ಕೈಗೂಡಿಸುತ್ತದೆ ಎಂದರು.

ಆದಾಯ ತೆರಿಗೆ ಆಧಿಕಾರಿ ಎಚ್.ಸಿ.ವಾಗೀಶ್ ಮಾತನಾಡಿ, ತೆರಿಗೆದಾರರಿಗೆ ಸಿಗುವ ಪ್ರಯೋಜನ ಹಾಗೂ ರಿಯಾಯಿತಿ ಕುರಿತು ವಿವರಣೆ ನೀಡಿದರು. ವಿವಾದ್ ಸೆ ವಿಶ್ವಾಸ್ ಸ್ಕೀಮ್ ಪ್ರಯೋಜನಗಳ ತೆರಿಗೆದಾರರಿಗೆ ಮಾಹಿತಿ ನೀಡಿದರು.

Chamber Of Commerce Shivamogga ಆದಾಯ ತೆರಿಗೆ ಇನ್ಸ್ಪೆಕ್ಟರ್ ಸುಧಾಮ್ ಶು ಕುಮಾರ್ ಪಿಪಿಟಿ ಮೂಲಕ ಸ್ಕೀಮ್ ನ ಅನುಕೂಲ ಪಡೆಯಲು ಅರ್ಹರಾಗುವ ತೆರಿಗೆದಾರರು, ಕೊಡಬೇಕಾದ ದಾಖಲೆ ಹಾಗೂ ಕಾರ್ಯ ವಿಧಾನದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು. ನಂತರ ಸ್ಕೀಮ್ ನಿಯಮಗಳ ಹಾಗೂ ಪ್ರಯೋಜನದ ಬಗ್ಗೆ ಸಿಎ ಶ್ರೀರಾಮ್ ಸಾಗರ ಉಪನ್ಯಾಸ ನೀಡಿದರು.

ಸಿಎ ಶರತ್ ಮಾತನಾಡಿ, ತೆರಿಗೆದಾರನು ಮುಂಚಿತವಾಗಿಯೇ ತೆರಿಗೆ ವ್ಯಾಜ್ಯಗಳಿಗೆ ಒಳಪಡದೇ ಸರಿಯಾದ ದಾಖಲೆಗಳನ್ನು ಹೇಗೆ ನಿರ್ವಹಣೆ ಮಾಡಬಹುದು ಎನ್ನುವುದರ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಶಿವಮೊಗ್ಗ ಜಿಲ್ಲಾ ಸಿಎ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ವಿ.ರವೀಂದ್ರನಾಥ್, ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಉಪಾಧ್ಯಕ್ಷ ಅತ ಉರ್ ರೆಹಮಾನ್ ಕಾರ್ಯಗಾರದ ಉಪಯುಕ್ತತೆ ಬಗ್ಗೆ ಮಾತನಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್‌.ಮನೋಹರ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರು, ತೆರಿಗೆದಾರರು, ವಾಣಿಜ್ಯೋದ್ಯಮಿಗಳು, ಸನ್ನದು ಲೆಕ್ಕ ಪರಿಶೋಧಕರು, ತೆರಿಗೆ ಸಲಹೆಗಾರರು, ಸದಸ್ಯರು, ಪದಾಧಿಕಾರಿಗಳು, ನಿರ್ದೇಶಕರು, ಆದಾಯ ತೆರಿಗೆ ಇಲಾಖೆ ಸಿಬ್ಬಂದಿ ಹಾಜರಿದ್ದರು.

Shivamogga-Bhadravathi Urban Development Authority ಊರುಗಡೂರು ನಿವೇಶನ ಹಂಚಿಕೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಡಿ.5 ಅಂತಿಮ ದಿನಾಂಕ

0

Shivamogga-Bhadravathi Urban Development Authority ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಆಗಸ್ಟ್-2024ರಲ್ಲಿ ಪ್ರಕಟಣೆ ನೀಡಲಾಗಿದ್ದು, ನಿವೇಶನ ಹಂಚಿಕೆಯ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ನ.25 ರಿಂದ ದಿ:05/12/2024ರವರೆಗೆ ವಿಸ್ತರಿಸಲಾಗಿದೆ ಎಂದು ಶಿ-ಭ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

Shivamogga City Corporation ಒಂದು ತಿಂಗಳಲ್ಲಿ ಏಕರೀತಿಯ ಕರವಸೂಲಾತಿ ಹೊಸ ಕಾಯ್ದೆ ಜಾರಿ- ಸಚಿವ ರಹೀಂ ಖಾನ್

0

Shivamogga City Corporation ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಹೊಸ ಕಾಯ್ದೆಯೊಂದನ್ನು ಮುಂದಿನ ಒಂದು ತಿಂಗಳೊಳಗಾಗಿ ಜಾರಿಗೊಳಿಸಲಾಗುವುದು ಎಂದು ಮಾನ್ಯ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂಖಾನ್ ಅವರು ಹೇಳಿದರು.
ಶಿವಮೊಗ್ಗ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಉಪಸ್ಥಿತಿಯಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದೀಚೆಗೆ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ಕರ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುವುದಾಗಿ ಅವರು ನುಡಿದರು.
ಜಿಲ್ಲೆಯ ಮಹಾನಗರಪಾಲಿಕೆಯಲ್ಲಿ ಕೊರತೆಯಿರುವ ಹುದ್ದೆಗಳಲ್ಲಿ ಕೆಲವು ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೇ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ೩೮ ಪೌರಕಾರ್ಮಿಕರ ನೇರನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಅವರು ಸಂಬಂಧಿಸಿದ ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಕರವಸೂಲಾತಿಗೆ ಸಂಬಂಧಿಸಿದಂತೆ ಸಿಬ್ಬಂಧಿಗಳ ಕೊರತೆ ಇರುವ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸ್ವಯ ಸಹಾಯ ಗುಂಪುಗಳ ಪ್ರತಿನಿಧಿಗಳ ನೆರವನ್ನು ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದ ವಿಶಾಲವಾದ ಸ್ವತ್ತುಗಳಿದ್ದು, ವಾಣಿಜ್ಯ ಸಂಕೀರ್ಣ ನಿರ್ಮಿಸಿ, ನಿರ್ವಹಿಸಲು ಉತ್ಸುಕರಿದ್ದು, ಕ್ರಿಯಾಯೋಜನೆ ತಯಾರಿಸಿ, ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವನ್ನು ಒದಗಿಸಲಾಗುವುದು ಎಂದರು.
ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ೧೮೦ಇಂದಿರಾ ಕ್ಯಾಂಟೀನ್‌ಗಳನ್ನು ಮಂಜೂರು ಮಾಡಿ, ಜನಸಾಮಾನ್ಯರ ಹಸಿವು ಇಂಗಿಸುವ ಕಾರ್ಯ ಮಾಡಿದ್ದರು. ಪ್ರಸ್ತುತ ಸಂದರ್ಭದಲ್ಲಿಯೂ ಪುನಃ ೧೮೦ಇಂದಿರಾ ಕ್ಯಾಂಟೀನುಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದ ಅವರು, ಕೆಲವು ಕ್ಯಾಂಟೀನುಗಳಲ್ಲಿ ನಿರ್ವಹಣೆ ಸರಿಯಾಗಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಮಾನ್ಯ ಮುಖ್ಯಮಂತ್ರಿಗಳ ಕನಸಿನ ಯೋಜನೆಯ ಅನುಷ್ಠಾನದಲ್ಲಿ ವ್ಯತ್ಯಯಗಳು ಕಂಡುಬAದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದರು.
Shivamogga City Corporation ಆಹಾರ ವಿತರಣೆಯಲ್ಲಿಯೂ ತಪ್ಪು ದಾಖಲಾತಿಗಳ ನಿರ್ವಹಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಇಲ್ಲಿಯೂ ದೂರುಗಳ ಕೇಳಿ ಬಂದಲ್ಲಿ ಕ್ಯಾಂಟೀನ್ ನಿರ್ವಹಣಾ ಗುತ್ತಿಗೆ ಸಂಸ್ಥೆಗಳಿಗೆ ನೀಡಿರುವ ಪರವಾನಿಗೆಯನ್ನು ಹಿಂಪಡೆಯಲಾಗುವುದಲ್ಲದೇ ಸಂಬAಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಉದ್ಧೇಶಿತ ಯೋಜನೆಗಳಿಗೆ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅನುದಾನ ಸರ್ಕಾರಕ್ಕೆ ಹಿಂದಿರುಗಿ ಹೋಗುವ ಸಾಧ್ಯತೆ ಇದೆ ಎಂದವರು ನುಡಿದರು.
ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಘಟಕಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಬಳಸುವಂತೆ ಕಳೆದ ಆರು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ಆದಾಗ್ಯೂ ಅನುದಾನ ಬಳಸದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಕೂಡಲೇ ಹಣ ಬಳಕೆ ಮಾಡಿ ವರದಿ ನೀಡುವಂತೆ ಸಚಿವರು ಸೂಚಿಸಿದರು.
ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಎಲ್ಲಾ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ ಬಾನು ಅವರು ಮಾತನಾಡಿ, ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ನದಿಗೆ ಕಲುಷಿತ ನೀರು ಸೇರುತ್ತಿದೆ. ಅದರ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಅಲ್ಲದೇ ನಗರವಾಸಿಗಳಿಗೆ ಸರಬರಾಜು ಮಾಡಲಾಗುತ್ತಿರುವ ನೀರನ್ನು ಶುದ್ಧೀಕರಿಸಿ ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಜ್ಯ ಪೌರಾಡಳಿತ ನಿರ್ದೇಶನಾಲಯದ ವ್ಯವಸ್ಥಾಪಕ ಪ್ರುಭುಲಿಂಗ ಕವಳೀಕಟ್ಟಿ, ಬೋವಿ ನಿಗಮದ ರಾಜ್ಯಾಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಅಧ್ಯಕ್ಷರು ಉಪಸ್ಥಿತರಿದ್ದರು.

MESCOM ನವೆಂಬರ್ 27. ಪಿಳ್ಳಂಗಿರಿ ಎನ್ ಜೆ ವೈ & ಜಾವಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ನ.27 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, MESCOM ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

Department for the Empowerment of Differently Abled ವಿಶೇಷ ಚೇತನ ಮಕ್ಕಳಿಗೆ & ವಯಸ್ಕರಿಗೆ ವಿಪತ್ತು ನಿರ್ವಹಣೆ ತರಬೇತಿ

0

Department for the Empowerment of Differently Abled ದಿನಾಂಕ 22-11-2024 ರಂದು ಹಾನಗಲ್ ಶ್ರೀ ಕುಮಾರ ಮಹಾಸ್ವಾಮಿಗಳ ಸಭಾಭವನ ಶಿವಮೊಗ್ಗ ಇಲ್ಲಿ ಅಂಗವಿಕಲ ಮಕ್ಕಳಿಗೆ ಮತ್ತು ವಯಸ್ಕರಿಗೆ ವಿಪತ್ತು ನಿರ್ವಹಣಾ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಈ ತರಬೇತಿಯನ್ನು ಎನ್ ಡಿ ಆರ್ ಎಫ್ ತಂಡದ ಇನ್ಸೆಕ್ಟರ್ ಆದ ಶಾಂತಿ ಲಾಲ್ ಜಾಟಿಯ ಅವರು ನಡೆಸಿಕೊಟ್ಟರು.

Department for the Empowerment of Differently Abled ಶಿವಮೊಗ್ಗ, ಭದ್ರಾವತಿ ತಾಲೂಕು ತಾಲ್ಲೂಕು ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಗೋಪಿನಾಥ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಸುಮಾರು ನೂರು ಜನ ಶಿಬಿರಾರ್ಥಿಗಳು ಹಾಜರಿದ್ದರು.

Dandavati Yojana ದಂಡಾವತಿ ಯೋಜನೆ ಬದಲಾಗಿದೆ. ಹೆಚ್ಚುವರಿ ಅನುದಾನದಿಂದ ಬ್ಯಾರೇಜ್ ನಿರ್ಮಾಣ- ಮಧು ಬಂಗಾರಪ್ಪ

0

Dandavati Yojana ರೈತರ, ಜಮೀನುಗಳಿಗೆ ತೊಂದರೆಯಾಗದೆ ದಂಡಾವತಿ ಯೋಜನೆಗೆ ಪರ್ಯಾಯವಾಗಿ ನೀರಾವರಿ ಯೋಜನೆ ಕೈಗೊಳ್ಳಲು ಚಿಂತಿಸಲಾದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಸೊರಬ ಪಟ್ಟಣದ ಶಿರಾಳಕೊಪ್ಪ ರಸ್ತೆಯ ಕೆಇಬಿ ಕಚೇರಿ ಮುಂಭಾಗ ಪಿಡಬ್ಲ್ಯುಡಿ ಇಲಾಖೆಯಿಂದ ಕುಮಟ, ಕಡಮಡಗಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 25 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಶಾಶ್ವತ ಕುಡಿಯುವ ನೀರಿಗಾಗಿ 650 ಕೋಟಿ ರೂ., ವೆಚ್ಚದಲ್ಲಿ 355 ಗ್ರಾಮಗಳಿಗೆ ಶರಾವತಿ ನದಿಯಿಂದ ಪೂರೈಸಲು ನೀಲನಕ್ಷೆ ಸಿದ್ಧಪಡಿಸಲಾಗಿದೆ. ಪ್ರತಿ ಗ್ರಾಮಗಳಿಗೆ 92 ಯೋಜನೆಗಳ ಅಡಿಯಲ್ಲಿ 250ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು.

Dandavati Yojana ದಂಡಾವತಿ ಯೋಜನೆ ಬದಲಾಗಿದೆ. 190 ಕೋಟಿ ರೂ., ಮೀಸಲಾಗಿದದು, ಹೆಚ್ಚುವರಿ ಅನುದಾನ ತಂದು ಬ್ಯಾರೇಜ್ ನಿರ್ಮಾಣಕ್ಕೆ ಮುಂದಾಗಲಾಗುವುದು. ತಾಲೂಕಿನ ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯ ೪೪ ಗ್ರಾಮಗಳ 3 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಯೋಜನೆ ಕಲ್ಪಿಸಲು 53 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ ಎನ್ನುವುದಕ್ಕೆ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದಿರುವುದಕ್ಕೆ ಸಾಕ್ಷಿಯಾಗಿದೆ. ಬಿಪಿಎಲ್ ಕಾರ್ಡ್ದಾರರಿಗೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ತಡೆಹಿಡಿಯುವುದಿಲ್ಲ. ಸರ್ಕಾರದ ಯೋಜನೆಯನ್ನು ಎಲ್ಲಾ ವರ್ಗದ ಜನರು ಪಕ್ಷ ಬೇಧ ಮರೆತು ಒಪ್ಪಿಕೊಂಡಿರುವುದರಿಂದ ಮುಂದುವರೆಸಲಾಗುವುದು ಎಂದರು.

ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಮಂಜುಳಾ ಹೆಗಡಾಳ್, ಇಒ ಡಾ. ಎನ್.ಆರ್. ಪ್ರದೀಪ್ ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಯಶೀಲಗೌಡ, ಮುಖಂಡರಾದ ತಬಲಿ ಬಂಗಾರಪ್ಪ, ಡಿ.ಬಿ. ಅಣ್ಣಪ್ಪ, ಎಂ.ಡಿ. ಶೇಖರ್, ಸದಾನಂದಗೌಡ ಬಿಳಗಲಿ, ಕೆ.ಪಿ. ಗೌಡ, ಎಲ್.ಜಿ. ರಾಜಶೇಖರ್, ವಿಶಾಲಕ್ಷಮ್ಮ, ಅತಿಕ್, ಕಲ್ಲಂಬಿ ಹಿರಿಯಣ್ಣ, ನೆಹರೂ ಕೊಡಕಣಿ, ನಾಗರಾಜ್ ಚಿಕ್ಕಸವಿ, ಪುರಸಭೆ ಸದಸ್ಯರಾದ ಶ್ರೀರಂಜನಿ ಪ್ರವೀಣ್ ಕುಮಾರ್, ಪ್ರೇಮಾಟೋಕಪ್ಪ, ಡಿ.ಎಸ್. ಪ್ರಸನ್ನಕುಮಾರ್ ದೊಡ್ಮನೆ, ಪಿಡಬ್ಲ್ಯುಡಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವಿ. ಯಶೋಧರ್, ಇಂಜಿನಿಯರ್‌ಗಳಾದ ಜಿ.ಬಿ. ಕಿರಣ್‌ಕುಮಾರ್, ಎಂ.ಆರ್. ಮನೋಜ್, ಇ. ಶಿವಮೂರ್ತಿ, ಟಿ. ವಿನಾಯಕ ಸೇರಿದಂತೆ ಮತ್ತಿತರರಿದ್ದರು.

ಕೋಟೆಗಂಗೂರು ‘ ‘ಗ್ರಾಪಂ’ ಉಪಚುನಾವಣೆ ಡಿ.ಎಲ್.ರಮೇಶ್ ಜಯಭೇರಿ

0

ಶಿವಮೊಗ್ಗ ತಾಲೂಕಿನ ಕೋಟೆಗಂಗೂರು ಗ್ರಾಮ ಪಂಚಾಯಿತಿಯ ದೇವಕಾತಿಕೊಪ್ಪದಲ್ಲಿ ತೆರವಾಗಿದ್ದ ಗ್ರಾ.ಪಂ ಸದಸ್ಯರ ಖಾಲಿ ಸ್ಥಾನಕ್ಕೆ ಮೊನ್ನೆ ನಡೆದಿದ್ದ ಉಪಚುನಾವಣೆಯಲ್ಲಿನ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಶಿವಮೊಗ್ಗ ತಾಲೂಕು ಕಚೇರಿಯಲ್ಲಿ ನಡೆದಿದ್ದು, ಅಭ್ಯರ್ಥಿ ದೇವಕಾತಿಕೊಪ್ಪದ ಡಿ.ಎಲ್. ರಮೇಶ್ ಭಾರಿ ಬಹುಮತದ ಅಂತರದಿಂದ ಜಯಗಳಿಸಿದ್ದಾರೆ.

ಒಟ್ಟು ಚಲಾವಣೆಯಾದ 738 ಮತಗಳಲ್ಲಿ 15 ಮತಗಳು ತಿರಸ್ಕೃತಗೊಂಡಿದ್ದು, 608 ಮತಗಳನ್ನು ಡಿ.ಎಲ್. ರಮೇಶ್ ಪಡೆದಿದ್ದಾರೆ. ಪ್ರತಿಸ್ಪರ್ಧಿ ಸುರೇಶ್ ಅವರಿಗೆ 115 ಮತಗಳು ಸಿಕ್ಕಿದ್ದು, ಪರಭವಗೊಂಡಿದ್ದಾರೆ.
ನೂತನ ಸದಸ್ಯ ಡಿ.ಎಲ್. ರಮೇಶ್ ಅವರಿಗೆ ದೇವಕಾತಿಕೊಪ್ಪದ ಗ್ರಾಮಸ್ಥರು ಹಾಗೂ ಕೋಟೆಗಂಗೂರು ಗ್ರಾಮ ಪಂಚಾಯಿತಿ ಅಭಿನಂದಿಸಿದೆ.

Rashtrotthana Sahitya  “ಅಜೇಯ” ಶ್ರೀನಿವಾಸನ್ ಅವರ ” ನನ್ನ ಕೃಷ್ಣ” ಪುಸ್ತಕ ಬಿಡುಗಡೆ

0

Rashtrotthana Sahitya  ಬೆಂಗಳೂರಿನ ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ನ. 23ರಂದು ಅಜೇಯ ಪತ್ರಿಕೆ ಸಂಪಾದಕ ಎಂ. ಶ್ರೀನಿವಾಸನ್ ಅವರ ಹೊಸ ಪುಸ್ತಕ ‘ನನ್ನ ಕೃಷ್ಣ’ ಬಿಡುಗಡೆಯಾಯಿತು.

Rashtrotthana Sahitya  ಶತಾವಧಾನಿ ಡಾ.ಆರ್. ಗಣೇಶ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಲೇಖಕರಾದ ದಿವಾಕರ ಹೆಗಡೆ, ಡಾ. ಹೆಚ್.ಆರ್. ವಿಶ್ವಾಸ, ಪ್ರೊ. ಎಂ.ಜಿ. ವೇದವ್ಯಾಸ್, ಹರಿ ರವಿಕುಮಾರ್ ಹಾಗೂ ಉತ್ಥಾನ ಪತ್ರಿಕೆಯ ಪ್ರಧಾನ ಸಂಪಾದಕ ಎಸ್.ಆರ್. ರಾಮಸ್ವಾಮಿ, ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಮುಖರಾದ ವಿಘ್ನೇಶ್ವರ ಭಟ್ಟ ಮೊದಲಾದವರು ಉಪಸ್ಥಿತರಿದ್ದರು.