Monday, March 23, 2026
Monday, March 23, 2026
Home Blog Page 487

Shanthala Spherocast Private Limited ವಿದ್ಯಾರ್ಥಿಗಳು ಉತ್ತಮ ಯೋಚನೆಯೊಂದಿಗೆತಮ್ಮ ಜೀವನ ರೂಪಿಸಿಕೊಳ್ಳಬೇಕು- ಟಿ.ಎಸ್.ಹೂವಯ್ಯ

0

Shanthala Spherocast Private Limited ಶಿವಮೊಗ್ಗದ ಹೆಸರಾಂತ ಸಂಸ್ಥೆಯಾದ ಶಾಂತಲಾ ಸ್ಟೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್, ಮಾಚೇನಹಳ್ಳಿ, ಸಂಸ್ಥೆಯ ಯೂನಿಟ್-೨ ರಲ್ಲಿ ದಿನಾಂಕ:೧೯.೧೧.೨೦೨೪ ರ ಮಂಗಳವಾರದಂದು ಸಂಸ್ಥೆಯ ಸಾಮಾಜಿಕ ಕಳಕಳಿಯ ಭಾಗವಾಗಿ ೨೦೨೩-೨೦೨೪ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೭೦% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆಯಾದ ಸಂಸ್ಥೆಯ ಉದ್ಯೋಗಿಗಳ ಮಕ್ಕಳಿಗೆ ಪ್ರತಿಭಾ ಪುರಾಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಪುರಸ್ಕೃತ ವಿದ್ಯಾರ್ಥಿಗಳು, ಮುಖ್ಯ ಅತಿಥಿಗಳಾದ ಶ್ರೀ ಟಿ ಎಸ್ ಹೂವಯ್ಯ ಗೌಡ ವಿ. ಪ್ರಾಂಶುಪಾಲರು ಸಹ್ಯಾದ್ರಿ ವಿಜ್ಞಾನ ಕಾಲೇಜು ಹಾಗೂ ವಿ. ರಿಜಿಸ್ಟ್ರಾರ್ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿವಮೊಗ್ಗ. ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಯುತ. ಎಸ್ ರುದ್ರೇಗೌಡ, ಡಿ. ಎಸ್. ಚಂದ್ರಶೇಖರ್‌ರವರು, ನಿರ್ದೇಶಕರಾದ ಶ್ರೀ ವಿನಯ್ ಡಿ ಸಿ, ಶಾಂತಲಾ ಸಮೂಹ ಸಂಸ್ಥೆಗಳ ನಿರ್ದೇಶಕರು ಮತ್ತು ಸಿಬ್ಬಂದಿಗಳು, ಸಂಸ್ಥೆಯ ಉದ್ಯೋಗಿಗಳು ಹಾಗೂ ಪುರಸ್ಕೃತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಒಟ್ಟು ೦೯ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ಪ್ರತಿಯೊಬ್ಬ ವಿದ್ಯಾರ್ಥಿ/ನಿಗೆ ಅಭಿನಂದನಾ ಪತ್ರ ಹಾಗೂ ತಲಾ ರೂ. ೨೦,೦೦೦/- ಇಪ್ಪತ್ತು ಸಾವಿರ ರೂಗಳ ಚೆಕ್ ವಿತರಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹವನ್ನು ನೀಡಲಾಯಿತು. ವಿದ್ಯಾರ್ಥಿಗಳು ಅವರ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳ ಜೊತೆಗೆ ಪೋಷಕರು ಮಕ್ಕಳ ಶ್ರಮ ಹಾಗೂ ಸಂಸ್ಥೆಯು ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಮಷಿನ್ ಶಾಪ್ ವಿಭಾಗದ ಶ್ರೀ. ಚೇತನ್ ಕೆ ಎಸ್ ಇವರು ಎಲ್ಲರನ್ನು ಸ್ವಾಗತಿಸಿದರು. ಶ್ರೀ ನಾಗರಾಜ ವಿ ಡಿ ಹೆಚ್ ಆರ್ ಆಫೀಸರ್ ಇವರು, ಸಂಸ್ಥೆಯನ್ನು ಕಟ್ಟಿಬೆಳೆಸಿದ ಸಂಸ್ಥಾಪಕರ ಬಗ್ಗೆ ಹಾಗೂ ಇಂದಿನ ಪ್ರತಿಭಾ ಪುರಸ್ಕಾರದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾದ ಶ್ರೀ ಟಿ ಎಸ್ ಹೂವಯ್ಯ ಗೌಡ ರವರು ವಿದ್ಯಾರ್ಥಿಗಳು ಉತ್ತಮ ಯೋಚನೆಗಳೊಂದಿಗೆ ಹೇಗೆ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು, ಪೋಷಕರು ತಮ್ಮ ಆಸೆಯನ್ನು ವಿದ್ಯಾರ್ಥಿಗಳ ಮೇಲೆ ಹೇರಬಾರದು ಅವರು ತಮ್ಮ ಇಚ್ಚೆಯಂತೆ ವಿಷಯ ಮತ್ತು ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಬಿಡಬೇಕು. ವಿದ್ಯಾರ್ಥಿಗಳಿಗೆ ಓದುವ ಛಲವಿರಬೇಕು ಹಾಗೂ ಓದಿನ ಜೊತೆಗೆ ತಮಗಿಷ್ಟವಾದ ಉತ್ತಮ ಹವ್ಯಾಸವೊಂದನ್ನು ಹೊಂದಿರುವುದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಉತ್ತಮವೆಂದು ತಿಳಿಸಿದರು ಜೊತೆಗೆ ಸಮಾಜದ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂಬ ಬಗ್ಗೆ ವಿವರಿಸಿದರು.

Shanthala Spherocast Private Limited ಮುಂದುವರೆದು ನಿಷ್ಠೆ, ಪ್ರಾಮಾಣಿಕತೆ ಮತ್ತು ಸತತ ಪ್ರಯತ್ನದಿಂದ ಏನು ಬೇಕಾದರೂ ಸಾಧಿಸಬಹುದು ಎಂದು ಎಲ್ಲರಿಗೂ ಮನಮುಟ್ಟುವಂತೆ ಉತ್ತಮ ಸಾಮಾಜಿಕ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಯುತ. ಎಸ್ ರುದ್ರೇಗೌಡರವರು ಮಾತನಾಡಿ ಈ ರೀತಿಯ ಪ್ರೋತ್ಸಾಹದಿಂದ ವಿದ್ಯಾರ್ಥಿಗಳಲ್ಲಿ ಚೆನ್ನಾಗಿ ಓದಬೇಕೆನ್ನುವ ಛಲ ಮತ್ತು ಹುಮ್ಮಸ್ಸು ಬರುತ್ತದೆ. ಎಲ್ಲಾ ವಿದ್ಯಾರ್ಥಿಗಳೂ ಅವರ ವಿದ್ಯಾಭ್ಯಾಸದ ನಂತರ ಅವರವರ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕೆಲಸವನ್ನು ನಿರ್ವಹಿಸುವ ಮೂಲಕ ಹೇಗೆ ದೇಶದ ಆರ್ಥಿಕತೆಯ ವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದೆಂಬುದನ್ನು ತಿಳಿಸಿದರು. ಅಲ್ಲದೇ ಉನ್ನತ ವಿದ್ಯಾಭ್ಯಾಸಕ್ಕೆ ಇರುವ ಸೌಲಭ್ಯಗಳ ಬಗ್ಗೆ ತಿಳಿಸಿದರು.

ನಾಗರಾಜ್ ವಿ ಡಿ, ಹೆಚ್.ಆರ್ ಆಫೀಸರ್, ಈ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಮುಖ್ಯ ಅಥಿತಿಗಳನ್ನು ಪರಿಚಯಿಸಿದರು ಹಾಗೂ ವಂದನಾರ್ಪಣೆಯನ್ನು ಚೇತನ್ ವಿ ಇವರು ನಡೆಸಿಕೊಟ್ಟರು, ನಂಜುಂಡೇಶ್ವರ ಹೆಚ್ ಬಿ ಮ್ಯಾನೇಜರ್ ಹೆಚ್ ಆರ್ ಇವರು ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ರಾಷ್ಟçಗೀತೆ ಹಾಡುವುದರೊಂದಿಗೆ ಮುಕ್ತಾಯಗೊಳಿಸಲಾಯಿತು.

ಒಟ್ಟಿನಲ್ಲಿ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶಾಂತಲಾ ಸ್ಪೆರೋಕ್ಯಾಸ್ಟ್ ಸಂಸ್ಥೆಯ ಸಾಮಾಜಿಕ ಕ್ಷೇತ್ರದಲ್ಲಿನ ಕಾಳಜಿಗೆ ಸಾಕ್ಷಿಯಾಯಿತು.

ನಂಜುಡೇಶ್ವರ ಹೆಚ್ ಬಿ ಮ್ಯಾನೇಜರ್ ಹೆಚ್ ಆರ್ ಶಾಂತಲಾ ಸ್ಪೆರೋಕ್ಯಾಸ್ಟ್ ಪ್ರೈವೇಟ್ ಲಿಮಿಟೆಡ್, ಮಾಚೇನಹಳ್ಳಿ. ಕಾರ್ಯಕ್ರಮವನ್ನು ನಿರೂಪಿಸಿದರು.

State Central Library ಕೇಂದ್ರ ಗ್ರಂಥಾಲಯಕ್ಕೆ ಪುಸ್ತಕ ಆಯ್ಕೆ ಪ್ರಕ್ರಿಯೆಗೆ ಅರ್ಜಿ‌ಆಹ್ವಾನ

0

State Central Library 2024ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗಿರುವ ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ ಪ್ರಕಾಶಕರು ಮತ್ತು ಪ್ರಕಾಶಕರುಗಳಿಂದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪುಸ್ತಕಗಳು 2024ನೇ ಸಾಲಿನಲ್ಲಿ ಮುದ್ರಣಗೊಂಡು ಪ್ರಕಟವಾಗಿರಬೇಕು. ಮರು ಮುದ್ರಣವಾದಲ್ಲಿ 10 ವರ್ಷಗಳ ಅಂತರವಿರಬೇಕು. ಆಯ್ಕೆಗೆ ಒಪ್ಪಿಸಿದ ಯಾವುದೇ ಭಾಷೆಯ ಗ್ರಂಥಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸುವುದಿಲ್ಲ. ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ದಿ:01/01/2025 ರೊಳಗಾಗಿ ನೋಂದಣಿ ಮಾಡಿಸತಕ್ಕದ್ದು.

State Central Library ಪುಸ್ತಕಗಳ ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಈ ಪುಸ್ತಕದ ಒಂದು ಪ್ರತಿಯನ್ನು ದಿ:05/01/2025 ರೊಳಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸುವುದು.
ಆಸಕ್ತರು ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ www.dpl.karnataka.gov.in ಅಂತರ್ಜಾಲದಲ್ಲಿ ಪಡೆಯಬಹುದು ಮತ್ತು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪ ನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿಗಳಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂ. ಸಂ. 080-22864990/ 22867358 ಸಂಪರ್ಕಿಸಿ ಎಂದು ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.

Karnataka Congress ರಾಜ್ಯ ವಿಧಾನಸಭಾ ಉಪಚುನಾವಣೆ ಫಲಿತಾಂಶ

0

Karnataka Congress ರಾಜ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಅನ್ನಪೂರ್ಣ ತುಕಾರಾಮ್ ಅವರು ಜಯ ದಾಖಲಿಸಿದ್ದಾರೆ. ಗೆಲುವಿನ ಅಂತರ 9568 ಮತಗಳು. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗುವ ಮುಂಚೆ ಶಾಸಕರಾಗಿ ಪ್ರತಿನಿಧಿಸಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿನ್ ಪಟಾನ್ ಜಯ ಸಾಧಿಸಿದ್ದಾರೆ. ಗೆಲುವಿನ ಅಂತರ 13627 ಮತಗಳು.

Karnataka Congress ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋಲು ಅನುಭವಿಸಿದ್ದಾರೆ. ಅತ್ಯಂತ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಗೆಲುವಿನ ಅಂತರ 26929 ಮತಗಳು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲನ್ನು ಅನುಭವಿಸಿದ್ದಾರೆ.

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

0

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗದ ವಿಕಾಸ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 23ರಂದು ಸಂಜೆ 5:00 ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಚಿಂತಕರು ಮತ್ತು ಲೇಖಕರಾದ ಶ್ರೀ ಲಕ್ಷ್ಮೀನಾರಾಯಣ ಕಾಶಿ ಅವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕವಿಗಳು ಮತ್ತು ತುಂಗಾ ತರಂಗ ದಿನಪತ್ರಿಕೆ ಸಂಪಾದಕರಾದ ಶ್ರೀ ಎಸ್ ಕೆ ಗಜೇಂದ್ರ ಸ್ವಾಮಿ, ವಿಭಾಗಿಯ ಸಂಚಾಲಕರಾದ ಶ್ರೀ ಹರ್ಷ , ಸಂಪರ್ಕ ಪ್ರಮುಖರಾದ ಶ್ರೀ ಸತ್ಯನಾರಾಯಣ , ಕಾರ್ಯದರ್ಶಿ ಸುರೇಶ್ ಭಟ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

Akhila Bharatiya Sahitya Parishad ಶಿವಮೊಗ್ಗ ಜಿಲ್ಲೆಯ ಕವಿ ಕವಯಿತ್ರಿಯರಾದ ಮಂಜುನಾಥ್ ಎಚ್. ಬುಳ್ಳಾಪುರ, ರಮೇಶ್ ಭದ್ರಾವತಿ, ಚೇತನಾ ಅಜ್ಜಿಹಳ್ಳಿ , ಮೇದಿನಿ ಕೆಸವೆಮನೆ, ಸಂತೋಷ್ ಬಿದರಗದ್ದೆ, ಎಸ್ ರುದ್ರೇಶ್ ಆಚಾರ್ , ಶುಭಾ ಕುಸ್ಕೂರು , ಶಾರದಾ ಉಳುವೆ, ಅಂಜುಮ್.ಬಿ.ಎಸ್., ಕನಕಾ ರಾಜಾರಾಂ, ಪೂರ್ಣಿಮಾ ಪ್ರಸನ್ನ, ಮನು ಶಿವಮೊಗ್ಗ, ಮಮತಾ ಹೆಗ್ಡೆ, ಮತ್ತು ಪದ್ಮಾ ದಿವಾಕರ್ ಇವರು ಕವನ ವಾಚನ ಮಾಡಲಿದ್ದಾರೆ.

ಕನ್ನಡ ಅಭಿಮಾನಿಗಳು , ಕನ್ನಡ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

0

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಭಾಜನರಾದ ಕ್ರಾಂತಿದೀಪ ಪತ್ರಿಕೆಯ ಸಂಪಾದಕರಾದ ಎನ್ ಮಂಜುನಾಥ್ ರವರನ್ನು ದೈಹಿಕ ಶಿಕ್ಷಣ ಶಿಕ್ಷಕರ ಸಮೂಹ ಸನ್ಮಾನಿಸಿತು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರುಗಳಾದ ರಾ.ಹ.ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ ಲೋಕೇಶ್, ಯೋಗೀಶ್ ಉಪಸ್ಥಿತರಿದ್ದರು

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 23 ಮತ್ತು 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ. ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

0

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಅಭಿಪ್ರಾಯಪಟ್ಟರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಇಂಡಿಯಾ ಶಿವಮೊಗ್ಗ ಶಾಖೆ ಆಶ್ರಯದಲ್ಲಿ ಬಿ.ಬೀರನಹಳ್ಳಿಯ ಮಾರುತಿ ಪ್ರೌಢಶಾಲೆಯಲ್ಲಿ ಪ್ರೌಢಹಂತದಲ್ಲಿ ಆಗುವ ದೈಹಿಕ ಬದಲಾವಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣಕುಮಾರ್ ಅವರು ಶಾಲೆ ಮೂಲಸೌಕರ್ಯಕ್ಕೆ 5000 ರೂ. ದೇಣಿಗೆ ನೀಡಿದರು.
ಎಫ್‌ಪಿಎಐ ವೈದ್ಯಾಧಿಕಾರಿ ಡಾ. ಮೋಕ್ಷಾ ಅವರು ಮಕ್ಕಳಿಗೆ ಉಪನ್ಯಾಸ ನೀಡಿ, ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುವ ಅವಧಿಯಾಗಿದೆ. ಆಗಾಗ ನಿಮ್ಮ ದೇಹದಲ್ಲಿ ಬದಲಾವಣೆಯನ್ನು ನೀವು ಗಮನಿಸಬಹುದು. ಎತ್ತರದಲ್ಲಿ ಹೆಚ್ಚಳ, ದೇಹದಲ್ಲಿ ಆಕಾರ ಬದಲಾವಣೆ, ಧ್ವನಿ ಬದಲಾವಣೆ ಆಗುತ್ತದೆ. ದೇಹದಲ್ಲಿ ಆಗುವ ಅನೇಕ ತ್ವರಿತ ಬದಲಾವಣೆ ಬಗ್ಗೆ ಹೆಚ್ಚು ಆಲೋಚನೆ ಮಾಡದೆ ಇದೊಂದು ನೈಸರ್ಗಿಕ ಪ್ರಕ್ರಿಯೆ ಎಂದರು.
Rotary Club Shimoga ಶಾಲಾ ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು. 90ಕ್ಕೂ ಹೆಚ್ಚು ಮಕ್ಕಳು ಕಾರ್ಯಗಾರದ ಸದುಪಯೋಗ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಉಚಿತ ಔಷಧ ನೀಡಲಾಯಿತು. 25ಕ್ಕೂ ಹೆಚ್ಚು ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡರು.
ರೋಟರಿ ಕ್ಲಬ್ ಧರ್ಮೇಂದ್ರ ಸಿಂಗ್, ಗೀತಾ ಜಗದೀಶ್, ರಾಜಶ್ರೀ ಬಸವರಾಜ್, ಶುಭ ಚಿದಾನಂದ್, ಜೆ.ಪಿ.ಚಂದ್ರು, ಸಂತೋಷ್, ಮಾರುತಿ ಪ್ರೌಢಶಾಲೆ ಮುಖ್ಯಶಿಕ್ಷಕ ರಾಮಕೃಷ್ಣ, ಕಾರ್ಯಕ್ರಮದಲ್ಲಿ ಎಫ್‌ಪಿಎಐ ಸಿಬ್ಬಂದಿ, ಉಪಸ್ಥಿತರಿದ್ದರು.

M.B.Patil 2025 ಫೆಬ್ರವರಿ 11.ಜಾಗತಿಕ ಹೂಡಿಕೆದಾರರ ಸಮಾವೇಶ.ಪೂರ್ವಸಿದ್ಧತೆ- ಸಚಿವ ಎಂ.ಬಿ.ಪಾಟೀಲ್

0

M.B.Patil 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

M.B.Patil ಜಾಗತಿಕ ಹೂಡಿಕೆದಾರರ ಸಮಾವೇಶವು ಬಂಡವಾಳ ಹೂಡಿಕೆ, ಕೈಗಾರಿಕೆ ಮತ್ತು ಬೆಳವಣಿಗೆ, ಆರ್ಥಿಕ ಅಭಿವೃದ್ಧಿ ಹೀಗೆ ಹಲವು ದೃಷ್ಟಿಗಳಿಂದ ಮಹತ್ವದ್ದಾಗಿದೆ. ಈ ಸಮಾವೇಶದಲ್ಲಿ ದೇಶ – ವಿದೇಶಗಳ 5,000 ಪ್ರತಿನಿಧಿಗಳು ಮತ್ತು ತಾಂತ್ರಿಕ ಪರಿಣತರು ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಮಹಿಳಾ ಉದ್ಯಮಿಗಳಿಗೂ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

K. H. Muniyappa ಬಿಪಿಎಲ್ ಕಾರ್ಡ್ ಅನಾನುಕೂಲತೆಯಾದರೆ ತಹಶೀಲ್ದಾರ್ ಗಮನಕ್ಕೆ ತನ್ನಿ- ಸಚಿವ ಕೆ. ಎಚ್.ಮುನಿಯಪ್ಪ

0

K. H. Muniyappa ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

Department of Social Welfare ಪೋಸ್ಟ್ ಡಾಕ್ಟೋರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖೆ ಪ್ರಕಟಣೆ

0

Department of Social Welfare ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ. 25,000/- ಗಳಂತೆ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.
Department of Social Welfare ಅರ್ಹ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ. 14ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.:08182-200266 /9482762350 ಗಳನ್ನು ಸಂಪರ್ಕಿಸುವುದು.