Tuesday, March 24, 2026
Tuesday, March 24, 2026
Home Blog Page 492

University of Agricultural and Horticultural Sciences ಹವಾಮಾನ ವೈಪರೀತ್ಯಕ್ಕೆ‌ ತಕ್ಕಂತೆ ಮೀನಿನ ತಳಿ ಅಭಿವೃದ್ಧಿಇಂದಿನ ಅಗತ್ಯ- ಡಾ.ಜೆ.ಕೆ.ಜೇನಾ

0

University of Agricultural and Horticultural Sciences ಹವಾಮಾನ ಬದಲಾವಣೆಯಿಂದಾಗಿ ಮೀನಿನ ಸಂತಾನೋತ್ಪತ್ತಿ ಕಡಿಮೆಯಾಗುತ್ತಿದ್ದು, ಇದರಿಂದಾಗಿ ವರ್ಷ ವರ್ಷ ಮೀನಿನ ಉತ್ಪಾದನೆಯಲ್ಲಿ ಕಡಿಮೆಯಾಗುತ್ತಿದೆ. ಇಂತಹ ಪರಿಸರದ ಬದಲಾವಣೆಯನ್ನು ನಿಯಂತ್ರಿಸುವುದು ನಮ್ಮ ಕೈಯಲ್ಲಿಲ್ಲ. ಹವಾಮಾನ ವೈಪರೀತ್ಯಕ್ಕೆ ಹೊಂದಿಕೊಳ್ಳುವಂತಹ ಮೀನಿನ ತಳಿಗಳನ್ನು ಅಭಿವೃದ್ಧಿಪಡಿಸುವುದು ಇಂದಿನ ಅಗತ್ಯವಾಗಿದೆ. ಇದರ ಜೊತೆಗೆ ಮೀನುಗಾರಿಕೆ ಅಭಿವೃದ್ಧಿಯಲ್ಲಿ ಜಾಗತಿಕವಾಗಿ ಎಲ್ಲಾ ವಿಜ್ಞಾನಿಗಳು ಕೈಜೋಡಿಸಬೇಕೆಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾನಿರ್ದೇಶಕರಾದ (ಮೀನುಗಾರಿಕೆ). ಡಾ. ಜೆ.ಕೆ. ಜೇನಾ ಅವರು ತಿಳಿಸಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ -ನವಿಲೆ, ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಮೀನುಗಾರಿಕೆ ವಿಭಾಗ ಹಾಗೂ ಆಸ್ಟ್ರೇಲಿಯನ್ ಹಿರಿಯ ವಿದ್ಯಾರ್ಥಿಗಳ ಗ್ರಾಂಟ್ ಪ್ರಾಯೋಜಿತ ಸಹಯೋಗದೊಂದಿಗೆ ಏರ್ಪಡಿಸಲಾದ “ಬದಲಾಗುತ್ತಿರುವ ಹವಾಮಾನ ವೈಪರೀತ್ಯದಲ್ಲಿ ಮೀನುಗಾರಿಕೆ ವಿಜ್ಞಾನದ ದೃಷ್ಟಿಕೋನಗಳು, ಅವಕಾಶಗಳು ಮತ್ತು ಸವಾಲುಗಳು: ಉದಯೋನ್ಮುಖ ವಿಜ್ಞಾನಿಗಳಿಗೆ ಅಂತಾರಾಷ್ಟ್ರೀಯ ಕಾರ್ಯಾಗಾರವನ್ನು” ಉದ್ಘಾಟಿಸಿ ಅವರು ಮಾತನಾಡಿದರು.

ಹವಮಾನ ಬದಲಾವಣೆಯಿಂದ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಇದು ಮೀನು ಕೃಷಿಗೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಜೊತೆಗೆ ಮೀನುಗಾರಿಕೆಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಮೀನುಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಯಾಗುತ್ತಿದ್ದು, ಇತ್ತೀಚಿನ ಎಐ ತಂತ್ರಜ್ಞಾನವನ್ನು ಸಹ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಮೀನುಗಾರಿಕೆ ವಿಜ್ಞಾನಿಗಳು ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಸಿ. ವಾಸುದೇವಪ್ಪ ಅವರು ತಿಳಿಸಿದರು.

ಮೀನು ಉತ್ಪನ್ನಗಳನ್ನು ಪ್ರಾದೇಶಿಕ ಮಾರುಕಟ್ಟೆ ಮೂಲಕ ಪ್ರತಿಯೊಬ್ಬರಿಗೂ ತಲುಪಿಸುವುದು ಇಂದಿನ ಅಗತ್ಯವಾಗಿದೆ. ಈಗಾಗಲೇ ರಾಷ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯು ದೇಶದಾದ್ಯಂತ ಹನ್ನೊಂದು ಜಲಕೃಷಿ ಪಾರ್ಕ್ ನಿರ್ಮಾಣ ಮಾಡಿದೆ ಎಂದು ರಾಷ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಹಿರಿಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ. ಎಲ್. ಎಂ. ಮೂರ್ತಿ ಅವರು ತಿಳಿಸಿದರು.
ಭಾರತವು ಮೀನು ಉತ್ಪಾದನೆಯಲ್ಲಿ ಜಾಗತೀಕವಾಗಿ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕವು ಮೀನು ಉತ್ಪಾದನೆಯಲ್ಲಿ ಮೂರನೆ ಸ್ಥಾನದಲ್ಲಿದ್ದು, ಮೀನುಗಾರಿಕೆಗೆ ಕರ್ನಾಟಕದಲ್ಲಿ ವಿಪುಲವಾದ ಅವಕಾಶಗಳಿವೆ. ವಿಶೇಷವಾಗಿ ಶಿವಮೊಗ್ಗದಲ್ಲಿ 9 ಜಲಾನಯನ ಪ್ರದೇಶಗಳು, 5 ಸಾವಿರ ಕೆರೆಗಳಿದ್ದು, ಮೀನುಗಾರಿಕೆಯನ್ನು ವೈಜ್ಞಾನಿಕವಾಗಿ ಕೈಗೊಂಡಲ್ಲಿ ಮೀನು ಉತ್ಪನ್ನಗಳನ್ನು ಹೆಚ್ಚಿಸಬಹುದಾಗಿದೆ.

University of Agricultural and Horticultural Sciences ನಮ್ಮ ವಿಶ್ವವಿದ್ಯಾಲಯವು ಕೃಷಿ ಮತ್ತು ತೋಟಗಾರಿಕೆ ವಿಷಯದ ಜೊತೆಯಲ್ಲಿ ಮೀನುಗಾರಿಕೆ ಮತ್ತು ಪಶುಸಂಗೋಪನೆ ಒಳಗೊಂಡಂತೆ ಸಮಗ್ರ ವಿಶ್ವವಿದ್ಯಾಲಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕಿರಿಯ ವಿಜ್ಞಾನಿ ಪ್ರಶಸ್ತಿ, ಯುವ ವಿಜ್ಞಾನಿ ಪ್ರಶಸ್ತಿ, ಯುವ ವಿಸ್ತರಣಾ ವಿಜ್ಞಾನಿ ಪ್ರಶಸ್ತಿ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಡಾ. ಗ್ರಿಸನ್ ಜಾರ್ಜ್, ಡಾ. ಜವಾಹರ್ ಜಿ.ಪಾಟೀಲ್ ಮಾತನಾಡಿದರು. ಸಂಶೋಧನಾ ನಿರ್ದೇಶಕರಾದ ಡಾ. ಬಿ.ಎಂ. ದುಷ್ಯಂತಕುಮಾರ್ ಸ್ವಾಗತಿಸಿ, ಸಹ ಸಂಶೋಧನಾ ನಿರ್ದೇಶಕರಾದ ಡಾ. ಎಸ್. ಪ್ರದೀಪ್ ವಂದಿಸಿದರು.

ಈ ಕಾರ್ಯಾಗಾರದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಸಂಘಟಕ ಡಾ. ಶಾಂತನಗೌಡ ಎ.ಹೆಚ್. ಇವರುಗಳು ಉಪಸ್ಥಿತರಿದ್ದರು.
ಈ ಕಾರ್ಯಾಗಾರದಲ್ಲಿ ಆಸ್ಟ್ರೇಲಿಯಾ, ಮಲೇಷ್ಯಾ, ಕುವೈತ್, ಕರ್ನಾಟಕ, ನವದೆಹಲಿ, ಹೈದ್ರಾಬಾದ್, ಕೊಚ್ಚಿನ್, ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್, ಗೋವಾ, ಮಹಾರಾಷ್ಟ್ರ, ಒರಿಸ್ಸಾ ಮತ್ತು ಉತ್ತರ ಪ್ರದೇಶದ ವಿಜ್ಞಾನಿಗಳು ಭಾಗವಹಿಸಿದ್ದರು.

MESCOM ನವೆಂಬರ್ 22 . ಎಂ.ಆರ್. ಎಸ್. ಸುತ್ತಮುತ್ತ ಕೆಲವು ಗ್ರಾಮೀಣ ಪ್ರದೇಶಗಳಿಗೆ ಮೆಸ್ಕಾಂ ವಿದ್ಯುತ್ ಸರಬರಾಜು ಇರುವುದಿಲ್ಲ

0

MESCOM ಶಿವಮೊಗ್ಗದ ಎಂ.ಆರ್.ಎಸ್.110/11 ಕೆವಿ ವಿದ್ಯುತ್ ಕೇಂದ್ರದ ಮಾರ್ಗಗಳಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ನ.22 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, MESCOM ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Gaurava prasastu puraskrtara ಹಿರಿಯ ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಸೇರಿದಂತೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ ಘೋಷಣೆ

0

Gaurava prasastu puraskrtara ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2023 ಹಾಗೂ 2024ನೇ ಸಾಲಿನ ವಾರ್ಷಿಕ ‘ಗೌರವ ಪ್ರಶಸ್ತಿ’ಗೆ ಹತ್ತು ಮಂದಿ ಲೇಖಕರು, ಅನುವಾದಕರನ್ನು ಆಯ್ಕೆ ಮಾಡಿ ಪ್ರಾಧಿಕಾರ ಪ್ರಕಟಿಸಿದೆ.

2023 ನೇ ಸಾಲಿಗೆ ಗೌರವ ಪ್ರಶಸ್ತಿಗೆ ಪ್ರೋ.ಎಚ್.ಎಸ್. ರಾಘವೇಂದ್ರ ರಾವ್, ವಿನಯ್ ಚೇತನ್ ,ಡಾ. ಎಚ್‌.ಎಂ‌. ಕುಮಾರಸ್ವಾಮಿ, ಡಾ.ದು. ಸರಸ್ವತಿ ಆಯ್ಕೆಯಾಗಿದ್ದಾರೆ.

Gaurava prasastu puraskrtara 2024ನೇ ಸಾಲಿಗೆ ಡಾ. ರಾಜೇಂದ್ರ ಚೆನ್ನಿ, ಡಾ. ಕರಿಗೌಡ ಬೀಚನಹಳ್ಳಿ , ಡಾ. ಆರ್. ಕೆ. ಕುಲಕರ್ಣಿ , ಡಾ. ಬಸು ಬೇವಿನ ಗಿಡದ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

Department of Kannada and Culture ಶಿವಮೊಗ್ಗ ಜಿಲ್ಲೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ- ಉಮೇಶ್ ಹಾಲಾಡಿ

0

Department of Kannada and Culture ಸಾಂಸ್ಕೃತಿಕ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆ ಮುಂಚೂಣಿಯಲ್ಲಿದ್ದು, ಮೈಸೂರು ನಂತರ ಶಿವಮೊಗ್ಗದಲ್ಲಿ ಹೆಚ್ಚು ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು.
ಭಾವಗಾನ 8ನೇ ವಾರ್ಷಿಕೋತ್ಸವದಲ್ಲಿ ದಂಪತಿಗಳ ಗಾಯನ ಸ್ಪರ್ಧೆ, ನಾರಾಯಣ ಗುರುಗಳ ಗೀತೆಗಳ ಸ್ಪರ್ಧೆ ಹಾಗೂ ವಿವಿಧ ಬಗೆಯ ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ನಿರಂತರ ಪರಿಶ್ರಮ ಸಾಧನೆ ಹಾಗೂ ಗುರುಗಳ ಮಾರ್ಗದರ್ಶನ ಅವಶ್ಯಕ ಎಂದು ತಿಳಿಸಿದರು.
ಮಥುರಾ ಪ್ಯಾರಾಡೈಸ್ ಹೋಟೆಲ್ ಕಲಾಪೋಷಕರಿಗೆ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವುದರ ಮೂಲಕ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಸಹಕಾರ ನೀಡುತ್ತ ಬಂದಿದ್ದಾರೆ ಎಂದರು.
Department of Kannada and Culture ದಂಪತಿಗಳ ಸ್ಪರ್ಧೆಯಲ್ಲಿ ಪ್ರಿಯಾಂಕ ಭರತ್ ಪ್ರಥಮ ಬಹುಮಾನ, ಸುಮಾ ಚಂದ್ರಶೇಖರ ಭಟ್ ದ್ವಿತೀಯ ಹಾಗೂ ಛಾಯಾ ನವೀನ್ ತೃತೀಯ ಬಹುಮಾನ ಪಡೆದರು. ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.
ತೀರ್ಪುಗಾರರಾಗಿ ಶಾಂತಾ ಶೆಟ್ಟಿ, ಉಮಾ ದಿಲೀಪ್, ಮಂಜುಳಾ ಡಿ.ಸಾಗರ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗಾಯಕ ಜಿ.ವಿಜಯಕುಮಾರ್ ಅವರು 57ವರ್ಷದಿಂದ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವ ಭದ್ರಾವತಿ ವಾಸು ಅವರಿಗೆ ಸನ್ಮಾನಿಸಿದರು. ನಂತರ ಮಾತನಾಡಿ, ಸಂಗೀತ ನಮ್ಮಲ್ಲಿನ ಖಿನ್ನತೆ ದೂರಗೊಳಿಸುತ್ತದೆ ಎಂದು ತಿಳಿಸಿದರು.
ನೂರು ಜನರು ಗಾಯಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಡೀ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಗಿರೀಶ್ ಬ್ಯಾಡ, ವಿಜಯಾ ಸತೀಶ್, ಬುಜಂಗಪ್ಪ, ಪ್ರಮೋದ್, ಪ್ರಶಾಂತ್, ಹೇಮಂತ್, ಚಂದ್ರಶೇಖರ್ ಭಟ್, ಬಿಂದು ವಿಜಯಕುಮಾರ್, ಸುಮಾ, ಶಶಿರೇಖಾ, ಆದ್ಯಾ, ರವಿ, ಬಸವರಾಜ್, ರವಿ ಚವ್ಹಾಣ್ ಹಾಗೂ ಕಲಾವಿದರು ಉಪಸ್ಥಿತರಿದ್ದರು.

Scheduled Castes Welfare Department ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ‌ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆಅರ್ಜಿ ಸಲ್ಲಿಸಲು ಪ್ರಕಟಣೆ

0

Scheduled Castes Welfare Department ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು WWW.SSP.Karnataka.gov.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದಾಖಲಾತಿಗಳನ್ನು ದೃಢೀಕರಣ ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಿ, ಮೂಲ ದಾಖಲಾತಿಗಳೊಂದಿಗೆ ಈ ಕಛೇರಿಗೆ ಹಾಜರಾಗಿ ಇ-ದೃಢೀಕರಣವನ್ನು ಪಡೆಯಲು ಸೂಚಿಸಿದೆ.
Scheduled Castes Welfare Department ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. 2004ರವರೆಗೆ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. 2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ/ಪದವಿ/ಇತರೆ ಕೋರ್ಸುಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತಿರುವ ವಿದ್ಯಾರ್ಥಿಗಳು, ಹೊರ ರಾಜ್ಯ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಸ್ಟಾಂಡ್ ಅಲೊನ್ ಇನ್ಸ್ಟಿಟ್ಯೂಟ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾಖಲೆಗಳನ್ನು ನೀಡಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ತಿಳಿಸಿದ್ದಾರೆ.

CM Siddharamaiah ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ & ಜಾಗತಿಕ ಸಹಯೋಗಕ್ಕಾಗಿ ಟೆಕ್ ಸಮ್ಮೀಟ್ ವಿಶಿಷ್ಟ ವೇದಿಕೆ- ಸಿದ್ಧರಾಮಯ್ಯ

0

CM Siddharamaiah ಬೆಂಗಳೂರು ಟೆಕ್ ಸಮ್ಮಿಟ್ – 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ.

ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ.

ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು.
ಬೆಂಗಳೂರಿನಲ್ಲಿ ನಡೆದ ಟೆಕ್ ಸಮೀಟ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

20ನೇ ಶತಮಾನದ ಆರಂಭದಲ್ಲಿ, ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು.

2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು.

CM Siddharamaiah ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ.

ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ ಉತ್ತೇಜಿಸಿದೆ.

ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ ನಮ್ಮ ಬದ್ಧತೆ ಆಚಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

PM Nadrendra Modi ನವೆಂಬರ್ 25 ರಿಂದ ಡಿಸೆಂಬರ್ 5 ವರೆಗೆ “ವಿಕಸಿತ ಭಾರತ.ಯುವ ನಾಯಕರ ಸಂವಾದ”ಭಾಗಿಯಾಗಲು ಅವಕಾಶ

0

PM Nadrendra Modi “ವಿಕಸಿತ ಭಾರತ ಯುವ ನಾಯಕರ ಸಂವಾದ”ದಲ್ಲಿ ಪಾಲ್ಗೊಳ್ಳಲು ನವೆಂಬರ್‌ 25 ರಿಂದ ಡಿಸೆಂಬರ್‌ 5 ರ ವರೆಗೆ ನಡೆಯಲಿರುವ ರಸಪ್ರಶ್ನೆಯಲ್ಲಿ ಭಾಗವಹಿಸಿ ವಿಜೇತರಾಗಿ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿಕಸಿತ ಭಾರತದ ಬಗೆಗಿನ ನಿಮ್ಮ ಚಿಂತನೆಗಳನ್ನು ಹಂಚಿಕೊಳ್ಳುವ ಅವಕಾಶ ಪಡೆಯಿರಿ.

PM Nadrendra Modi ಭಾರತದ ಯಶೋಗಾಥೆಯ ಪಯಣದಲ್ಲಿ ಭಾಗಿಯಾಗುವ ಅವಕಾಶವನ್ನು ಕಳೆದುಕೊಳ್ಳದಿರಿ. ಈಗಲೇ ಮೈ ಭಾರತ್‌ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸುತ್ತದೆ.

Shivamogga City Corporation ಶೌಚಾಲಯಗಳ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳು ‌ತಮ್ಮ ವಿವರ ಸಲ್ಲಿಸಲು ನಗರಪಾಲಿಕೆ ಪ್ರಕಟಣೆ

0

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ಮರು ಸಮೀಕ್ಷೆ ನಡೆಸುತ್ತಿದ್ದು, ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ, ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಯಾವುದೇ ವ್ಯಕ್ತಿಗಳು ನ.22 ರೊಳಗಾಗಿ ತಮ್ಮ ಹೆಸರನ್ನು ಮಹಾನಗರ ಪಾಲಿಕೆಯಲ್ಲಿ ನೊಂದಾಯಿಸಿಕೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga City Corporationಅರ್ಹ ಮ್ಯಾನ್ಯುವಲ ಸ್ಕ್ಯಾವೆಂಜರ್ ಗಳು ನೊಂದಣಿಗಾಗಿ ತಮ್ಮ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಭಾವಚಿತ್ರ, ಬ್ಯಾಂಕ್ ಖಾತೆಯ ಪಾಸ್‌ಬುಕ್, ಆಧಾರ್ ಕಾರ್ಡ್ ಪ್ರತಿ, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾರ್ಯ ನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯದ ಸ್ಥಳದ ವಿವರ, ಅಗತ್ಯ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆಯ ಆರೋಗ್ಯ ಶಾಖೆಯ ಪರಿಸರ ಅಭಿಯಂತರರನ್ನು ಸಂಪರ್ಕಿಸುವುದು.

Karnataka Lokayukta Police ಜಿಲ್ಲೆಯ ವಿವಿಧ ತಾಲ್ಲೂಕಗಳಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆಯ ಮಾಹಿತಿ

0

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನವೆಂಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ನ. 22 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ನ.25 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ. ನ.26 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ. ನ.27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ, ನ.28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
Karnataka Lokayukta Police ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Jnana Ganga School Shivamogga ಓಟದ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ‌ ಶಿವಮೊಗ್ಗದ ಎಸ್.ಖುಷಿ

0

Jnana Ganga School Shivamogga ಶಿವಮೊಗ್ಗ ನಗರದ ಗಾಡಿಕೊಪ್ಪದಲ್ಲಿರುವ ಜ್ಞಾನ ಗಂಗಾ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಖುಷಿ ಎಸ್. ಅವರು ೧೪ ವರ್ಷದ ವಯೋಮಿತಿ ಒಳಗಿನ ರಾಜ್ಯಮಟ್ಟದ ಬಾಲಕಿಯರ ವಿಭಾಗದ ೧೦೦ ಮೀಟರ್ ಹಾಗೂ ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Jnana Ganga School Shivamogga ಈ ಪ್ರತಿಭಾನ್ವಿತೆಯು ಗಾಡಿಕೊಪ್ಪದ ಸುರೇಶ್ ಹಾಗೂ ತುಳಸಿ ದಂಪತಿಗಳ ಪುತ್ರಿ. ಸಂಸ್ಥೆಯ ಸಂಸ್ಥಾಪಕ ಬಿ. ಶೇಖರಪ್ಪ, ಅಧ್ಯಕ್ಷೆ ಲಲಿತಮ್ಮ, ನಾಗೇಂದ್ರಪ್ಪ ಗೌಡ, ಕಾರ್ಯದರ್ಶಿ ಎಂ.ಎನ್. ದಿನೇಶ್, ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗದವರು ಅಭಿನಂದಿಸಿದ್ದಾರೆ.