Tuesday, March 24, 2026
Tuesday, March 24, 2026
Home Blog Page 494

Shimoga News ವ್ಯಾವಹಾರಿಕ ಕೌಶಲ್ಯ,ವ್ಯಸನಮುಕ್ತಬೆಳವಣಿಗೆಯಿಂದ ಸಮುದಾಯದ ಅಭಿವೃದ್ದಿ -ಪ್ರೊ.ಸತ್ಯನಾರಾಯಣ

0

Shimoga News ಸಮುದಾಯ ಅಭಿವೃದ್ದಿಗೆ, ಸಮಗ್ರ ಪ್ರಜೆಗಳ ಆರ್ಥಿಕ, ಸಾಮಾಜಿಕ, ವ್ಯವಹಾರಿಕ, ಕೌಶಲ್ಯ, ವ್ಯಸನ ಮುಕ್ತ ಬೆಳವಣಿಗೆ ಯಿಂದ ಮಾತ್ರ ಸಾದ್ಯ ಎಂದು ರೋಟರಿ ಜ್ಯೂಬಿಲಿಯ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೋ.ಸತ್ಯನಾರಾಯಣ್ ಮಾತನಾಡುತ್ತಿದ್ದರು.
ಜನರ ಗುಂಪು ಸಮುದಾಯ ಎನಿಸಿ ಕೊಳ್ಳುತ್ತದೆ. ತೆಗೆದು ಕೊಳ್ಳು ತೀರ್ಮಾನ, ಮುಂದಾಲೋಚನೆಗಳು ಜೀವನ ಉತ್ತಮ ಪಡಿಸಿ ಕೊಳ್ಳಲು ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ.
ಆರ್ಥಿಕವಾಗಿ ಅಭಿವೃದ್ದಿ ಹೋಂದಿದರೆ ಸಾಲದು. ಮಾನವನ ಜೀನಕ್ಕೆ ಅಗತ್ಯನಾದ ಸಕಲ ಸೌಲತ್ತು ಆ ದೇಶದಲ್ಲಿ ದೊರಕಿದಾಗ ಮಾತ್ರ ಅಭಿವೃದ್ದಿ ಹೊಂದಿದ ದೇಶ ಎನಿಸಿಕೊಳ್ಳುತ್ತದೆ.
ವಿಶ್ವದಲ್ಲೆ ಅತೀ ಹೆಚ್ಚು ಜನ ಸಂಖ್ಯೆ ಹೋಂದಿರುವ ನಮ್ಮ ದೇಶದ ಪ್ರಜೆಗಳ ನೆಮ್ಮದಿಯಲ್ಲಿ ವಿಶ್ವದಲ್ಲೆ 144ನೇ ಸ್ಥಾನದಲ್ಲಿ ಇದ್ದೇವೆ. ಚೈನಾ 98, ಸಣ್ಣ ದೇಶಗಳು ಹೆಚ್ಚಿನ ಸ್ಥಾನ ಪಡೆದಿವೆ.
78213ಕೋಟಿ ಹಣ ನಮ್ಮ ದೇಶದ ಬ್ಯಾಂಕ್ ಗಳಲ್ಲಿ ಹನ್ನೆರಡು ವರ್ಷದಿಂದ ಉಪಯೋಗಿಸದೆ ಹಾಗೆ ನಿಖರ ಠೇವಣಿ ಇದೆಯಂತೆ. ಹೀಗೆ ನಿರಪಯುಕ್ತ ಆಸ್ತಿಗಳು ದೇಶದ ಪ್ರಗತಿಗೆ ತೊಡಕಾಗುತ್ತವೆ. ಇತರರನ್ನು ಕಂಡು ಅವರಂತೆ ಆಗಬೇಕೆಂದು, ಸಾಲ ಮಾಡಿ ಪ್ರತಿಷ್ಟೆ ಹೆಚ್ಚಿಸಿಕೊಳ್ಳುವ ಬದಲು, ಹಾಸಿಗೆ ಇದ್ದಷ್ಟು ಕಾಲು ಚಾಚುವುದು ದೇಶದ ಪ್ರಗತಿಗೆ ಪೂರಕ.
ಸ್ವ-ಹಿತದಿಂದಲೂ ದೇಶದ ಪ್ರಗತಿ ಸಾದ್ಯ ಎಂದು ಆರ್ಥಿಕ ತಜ್ಞ ಆಡಮ್ ಸ್ಮಿತ್ ಹೇಳಿದ್ದಾರೆ. ಜೀವನದಲ್ಲಿ ಆಸೆ ಇರಬೇಕು. ದುರಾಸೆ ಇರಬಾರದು ಎಂದು ಮಹಾತ್ಮಗಾಂಧಿ ಹೆಳಿದ್ದಾರೆ.
Shimoga News ಸ್ವಹಿತ ಮೀರಿದ ಸೇವೆಯಿಂದ ರೋಟರಿ ಸಂಸ್ಥೆ ಇಂದು ವಿಶ್ವದಲ್ಲಿಯೆ ಪ್ರಥಮ ಸ್ಥಾನದಲ್ಲಿ ಇದ್ದು ಸಮುದಾಯ ಸೇವೆಯಲ್ಲಿ ಮುಂಚೋಣಿಯಲ್ಲಿದೆ ಎಂದರು.
ಅಧ್ಯಕ್ಷೆ ರೊ.ರೂಪ ಪುಣ್ಯಕೋಟಿ ಸ್ವಾಗತಿಸಿದರು
ಎಸ್.ಎಸ್.ವಾಗೇಶ್ ಪ್ರಾಸ್ಥಾವಿಕವಾಗಿ ಮಾತನಾಡಿದರು, ರೇಣುಕಾರಾದ್ಯ ನಿರೂಪಿಸಿದರು, ಸತ್ಯನಾರಾಯಣ್ ವಂದಿಸಿದರು

Rotary Club Shimoga ಆತ್ಮಶ್ರದ್ಧೆ ಇಲ್ಲದವರು ಭಗವಂತನಲ್ಲಿ‌ ಶ್ರದ್ಧೆ ಇರಿಸಲು ಅಸಾಧ್ಯ ಎಂದ ಗುರುನಾನಕರು- ಕಿರಣ್ ಕುಮಾರ್

0

Rotary Club Shimoga ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಗುರುದ್ವಾರ ಗುರುನಾನಕ್ ದರಬಾರ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯರು ಹಾಗೂ ಸಿಖ್ ಸಮುದಾಯದ ಜನರು 555ನೇ ಗುರುನಾನಕ್ ಜಯಂತಿ ಆಚರಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಸಿಖ್ ಸಮುದಾಯದ ಸಂಸ್ಥಾಪಕ ಮೊದಲ ಗುರು ಗುರುನಾನಕ್ ಸಾಹೇಬ ಅವರ 555ನೇ ಜಯಂತಿ ಹಾರ್ದಿಕ ಶುಭಾಶಯಗಳು. ಗುರುನಾನಕ್ ಅವರು ಆತ್ಮಶ್ರದ್ಧೆ ಇಲ್ಲದವರು ಭಗವಂತನಲ್ಲಿ ಶ್ರದ್ಧೆ ಹೊಂದಿರುವುದು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರೀತಿ, ಶಾಂತಿ, ಸತ್ಯದ ಸಂದೇಶಗಳನ್ನು ವಿಶ್ವಕ್ಕೆ ಸಾರಿದ ಮಹಾನ್ ದಾರ್ಶನಿಕ. ಅವರ ತತ್ವ ಸಿದ್ಧಾಂತಗಳು ಇಂದಿಗೂ ಆದರ್ಶವಾಗಿವೆ. ಜೀವನದಲ್ಲಿ ನಾವೆಲ್ಲರೂ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮಾಜಿ ಅಧ್ಯಕ್ಷ ಧರ್ಮೇಂದ್ರ ಸಿಂಗ್ ಅವರು ಕಾರ್ಯಕ್ರಮ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಸಿಖ್ ಸಮುದಾಯದ ಪ್ರಮುಖರಾದ ಪ್ರೊಬ್ಜೋತ್ ಸಿಂಗ್, ಜಗದೀಶ್ ಕೌರ್, ಗುರುಮೇಲ್ ಸಿಂಗ್, ಜಿತೆಂದ್ರ ಸಿಂಗ್, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಚಂದ್ರು ಜೆಪಿ, ಇಂದ್ರೇಶ್, ರಾಜೇಶ್, ಈಶ್ವರ್ ಬಿವಿ, ಗೀತಾ ಜಗದೀಶ್, ಶುಭಾ ಚಿದಾನಂದ್, ರಂಜಿತ್ ಕೌರ್ ಹಾಗೂ ಸೆಂಟ್ರಲ್ ಕ್ಲಬ್ಬಿನ ಎಲ್ಲಾ ಸದಸ್ಯರು, ಸಮಾಜದ ಎಲ್ಲ ಗಣ್ಯರು ಉಪಸ್ಥಿತರಿದ್ದರು.

Sridhar International School ಕಲೆ,ಸಾಹಿತ್ಯ, ಸಂಸ್ಕೃತಿ ವಿಚಾರಗಳಲ್ಲಿ ಕನ್ನಡ ವಿಶ್ವ ದರ್ಜೆ‌ಯ ಸ್ಥಾನ ಪಡೆದಿದೆ-ಡಿ.ಎಸ್.ಶಂಕರ್ ಶೇಟ್

0

Sridhar International School ಶಿಕಾರಿಪುರ ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬರು ಅಭಿಮಾನ ಹೊಂದಬೇಕು ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಹೇಳಿದರು.
ತಾಲೂಕಿನ ಶಿರಾಳಕೊಪ್ಪ ಸಮೀಪದ ಭದ್ರಾಪುರದ ಶ್ರೀಧರ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನುಡಿದಿದ್ದನ್ನು ಬರೆಯುವ ಮತ್ತು ಬರೆದಂತೆ ನುಡಿಯುವ ಭಾಷೆ ಕನ್ನಡ ಮಾತ್ರ. ಅಂತಹ ಅಗಾಧವಾದ ಶಕ್ತಿ ಕನ್ನಡಕ್ಕಿದೆ. ಜೊತೆಗೆ ನುಡಿಗಳಲ್ಲಿಯೇ ಭಾವನೆಗಳನ್ನು ವ್ಯಕ್ತಪಡಿಸುವ ಶಕ್ತಿಯೂ ಇದೆ. ಈ ನಿಟ್ಟಿನಲ್ಲಿಯೇ ಕನ್ನಡಕ್ಕೆ ವಿಶ್ವ ಲಿಪಿಗಳ ರಾಣಿ ಎಂದು ಕರೆಯಲಾಗುತ್ತದೆ. ಅತಿ ಹೆಚ್ಚು ಎಂಟು ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ ಲಭಿಸಿದೆ. ಕಲೆ, ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ವಿಚಾರದಲ್ಲಿ ವಿಶ್ವದರ್ಜೆಯ ಸ್ಥಾನ ಪಡೆದ ಕನ್ನಡ ಅತ್ಯಂತ ಶ್ರೇಷ್ಠ, ಸುಂದರ, ಸರಳ, ಸುಲಲಿತ ಭಾಷೆಯಾಗಿದೆ ಎಂದರು.
ನವೆಂಬರ್ ತಿಂಗಳಿನಲ್ಲಿ ಮಾತ್ರವೇ ಭಾಷಾಭಿಮಾನ ತೋರಿದರೆ ಸಾಲದು, ಕನ್ನಡ ನಿತ್ಯೋತ್ಸವವಾಗಬೇಕು. ಅನ್ಯ ಭಾಷಿಕರಿಗೂ ಕನ್ನಡವನ್ನು ಕಲಿಸುವ ಮನೋಭಾವ ಹೊಂದಬೇಕು. ವ್ಯವಹಾರಿಕ ಭಾಷೆಯಾಗಿ ಕನ್ನಡ ಬೆಳೆಯಬೇಕು. ಉದ್ಯೋಗದಲ್ಲಿಯೂ ಸಹ ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಆಡಳಿತದಲ್ಲಿ ಕನ್ನಡ ಪ್ರಥಮ ಹಾಗೂ ಪ್ರಧಾನ ಭಾಷೆಯಾದಾಗ ಮಾತ್ರ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ಕನ್ನಡ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲ ನವಾಬ್ ಗುತ್ತೇದಾರ್ ಮಾತನಾಡಿ, ರಾಜ್ಯೋತ್ಸವ ಎಂಬುದು ಆಚರಣೆಯಾಗಿದೆ ಹಬ್ಬವಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕನ್ನಡಕ್ಕೆ ಶಾಸ್ತಿçÃಯ ಸ್ಥಾನಮಾನ ದೊರೆತಿರುವುದು. ಭಾಷೆ ಮತ್ತು ಕರುನಾಡಿಗಾಗಿ ಶ್ರಮಿಸಿದವರ ಬಗ್ಗೆಯೂ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಕರುನಾಡಿನ ಇತಿಹಾಸ ಕುರಿತು ಮನದಟ್ಟು ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.
Sridhar International School ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಥೆಯ ಉಪಪ್ರಾಂಶುಪಾಲ ಜಾಫರ್ ಇಕ್ಬಾಲ್, ಸಂಯೋಜಕಿ ಹರ್ಷದಾ, ಶಿಕ್ಷಕರಾದ ಎಸ್. ಪ್ರಶಾಂತ್, ಕೊಂಡಮ್ಮ, ಜಿ.ಎನ್. ಪುನೀತ್, ಜೈ ಕುಮಾರ್, ಮೇಘನಾ, ಧನಶ್ರೀ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಫೋಟೊ
೧೬ಎಸ್‌ಕೆಪಿ೦೧:
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಭದ್ರಾಪುರದ ಶ್ರೀಧರ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಸಮಾಜ ಸೇವಕ ಡಿ.ಎಸ್. ಶಂಕರ್ ಶೇಟ್ ಉದ್ಘಾಟಿಸಿದರು.

Shimoga News ಸಂಗೀತ ಸಾಧನೆಗೆ ನಿರಂತರ ಪರಿಶ್ರಮ & ಆತ್ಮವಿಶ್ವಾಸ ಮುಖ್ಯ- ಎನ್.ಗೋಪಿನಾಥ್

0

Shimoga News ಶಿವಮೊಗ್ಗ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ನಿರಂತರ ಪರಿಶ್ರಮದ ಜತೆಯಲ್ಲಿ ಆತ್ಮವಿಶ್ವಾಸ ಮುಖ್ಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಹೋಟೆಲ್ ರಜತ ಮಹೋತ್ಸವ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ನಿರಂತರ ಗಾಯನ, ದಂಪತಿಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಕನ್ನಡ ಭಾಷೆಯನ್ನು ಹೆಚ್ಚು ಬಳಸುವ ಮೂಲಕ ಉಳಿಸಿ ಬೆಳೆಸಬೇಕು. ಭಾವಗಾನ ಸಂಸ್ಥೆ 8ನೇ ವಾರ್ಷಿಕೋತ್ಸವ ಆಚರಿಸುತ್ತಿರುವುದು ತುಂಬಾ ಸಂತೋಷದ ಸಂಗತಿ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಭಾವಗಾನ ಸಂಸ್ಥೆಯಲ್ಲಿ 160ಕ್ಕೂ ಹೆಚ್ಚು ಜನ ಕಲಾವಿದರಿದ್ದು, ಉತ್ತಮ ವೇದಿಕೆ ಒದಗಿಸುವ ಕೆಲಸವನ್ನು ಸಂಸ್ಥೆ ವತಿಯಿಂದ ಮಾಡಲಾಗುತ್ತಿದೆ. ಭದ್ರಾವತಿ ವಾಸು ಅವರ ಸಾಧನೆ ಅನನ್ಯ. ಇವರಿಂದ ಎಷ್ಟೋ ಜನ ಕಲಾವಿದರು ಚೆನ್ನಾಗಿ ಹಾಡು ಕಲಿತಿರುವುದು ತುಂಬಾ ವಿಶೇಷ ಎಂದು ಹೇಳಿದರು.
Shimoga News ಇದೇ ಸಂದರ್ಭದಲ್ಲಿ ಭಾವಗಾನ ಸಂಸ್ಥೆಯ ಭದ್ರಾವತಿ ವಾಸು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಥುರಾ ರಜತ ಮಹೋತ್ಸವ ಅಂಗವಾಗಿ ಅನೇಕ ಸಾಂಸ್ಕೃತಿಕ, ಪರಿಸರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿವೆ. ಸಂಸ್ಥೆಯು ನಿರಂತರ ಗಾಯನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಧನಲಕ್ಷ್ಮೀ ಗಿರೀಶ್, ವಿಜಯಾ ಸತೀಶ್, ಬುಜಂಗಪ್ಪ, ಪ್ರಮೋದ್, ಪ್ರಶಾಂತ್, ಹೇಮಂತ್, ಚಂದ್ರಶೇಖರ ಭಟ್, ಸುಮಾ, ಶಶಿರೇಖಾ, ಆದ್ಯಾ, ರವಿ, ಬಸವರಾಜ್, ರವಿ ಚವ್ಹಾಣ್ ಹಾಗೂ ಕಲಾವಿದರು ಉಪಸ್ಥಿತರಿದ್ದರು.

Kanaka Dasa Jayanti 2024 ಕವಿ ಶ್ರೇಷ್ಠ, ಶ್ರೀಕನಕ ದಾಸರು ಲೇ: ಎನ್.ಎನ್.ಕಬ್ಬೂರ್. ಸವದತ್ತಿ.ಬೆಳಗಾಂ ಜಿಲ್ಲೆ

0

Kanaka Dasa Jayanti 2024 ಶ್ರೀ ಕನಕದಾಸರು ಮೂಲ ಹೆಸರು -ತಿಮ್ಮಪ್ಪನಾಯಕ ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.

● ಜನನ:- ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. 15-16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು.

●ಐತಿಹ್ಯ:- ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು. ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು. ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ. ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ಗುರುಗಳು ಪ್ರಸಿದ್ಧರಾಗಿದ್ದರು. ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋದವರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು.

ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು. ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು. ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ಸ್ಪಷ್ಟವಾಗಿ ತಿಳಿಯದು, ಹದಿನೈದನೆಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು.

ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ವ್ಯಾಕರಣಗಳ ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ.

● ಸಾಧನೆ:- ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ ಎಂಬುದು

● ಕನಕ ದಾಸರ ಸಾಹಿತ್ಯ ರಚನೆ:- ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಇಂದು ಕಾಣಬಹುದಾಗಿದೆ.

● ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:-
1) ಮೋಹನತರಂಗಿಣಿ
2) ನಳಚರಿತ್ರೆ
3) ರಾಮಧಾನ್ಯ ಚರಿತೆ
4) ಹರಿಭಕ್ತಿಸಾರ
5) ನೃಸಿಂಹಸ್ತವ (ಉಪಲಬ್ದವಿಲ್ಲ)

●ಮೋಹನತರಂಗಿಣಿ:- ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2798 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ.
ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಹಂಪಿಯ ಪತನವನ್ನು (1565) ಸಹ ಕನಕ ನೋಡಿದ್ದರು. ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.

●ನಳಚರಿತ್ರೆ:- ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ: ಲಲಿತ ಹೇಮದ ತೂಗಮಂಚದ ಹೊಳೆವ ಮೇಲ್ವಾಸಿನಲಿ ಮಲಗು ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨) ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ.

●ರಾಮಧಾನ್ಯಚರಿತೆ:- ರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ. ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ? ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು.. ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು.

●ಹರಿಭಕ್ತಿಸಾರ:- ಹರಿಭಕ್ತಿಸಾರ 110 ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.

●ಕೀರ್ತನೆಗಳು:- ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. ‘ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ ‘ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- ‘ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ’ ಎಂದು ಸಂತೋಷಪಟ್ಟಿದ್ದಾರೆ. ‘ಎಲ್ಲಿ ನೋಡಿದರಲ್ಲಿ ರಾಮ’ ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ ‘ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು’ ಎಂಬ ಧನ್ಯತಾಭಾವ. ‘ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ’ ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ ‘ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ’ ಎಂದುಕೊಳ್ಳುತ್ತಾರೆ.

Kanaka Dasa Jayanti 2024 ‘ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ’ ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ ‘ಕುಲಕುಲಕುಲವೆಂದು ಹೊಡೆದಾಡದಿರಿ’ ಎಂದು ಜಂಕಿಸಿ ಕೇಳುವ ಹಾಗಾದರು. ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ . ತೀರ್ಥವನು ಪಿಡಿದವರು ತಿರುನಾಮಧಾರಿಗಳೇ ಜನ್ಮ ಸಾರ್ಥಕವಿರದವರು ಭಾಗವತರಹುದೇ ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ
ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೂ
ಬಯಲು ಆಲಯದೊಳಗೊ, ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ

PM Narendra Modi ಪ್ರಧಾನಿ ಮೋದಿ ಅವರಿಗೆ ನೈಜೀರಿಯಾದ ಅತ್ಯುನ್ನತ ನಾಗರೀಕ ಗೌರವ

0

PM Narendra Modi ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ.

PM Narendra Modi ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ತನ್ನ ಎರಡನೇ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ನೀಡಿ ಅಭಿನಂದಿಸಿದೆ. ಈ ಪ್ರತಿಷ್ಠಿತ ಗೌರವವನ್ನು ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಪಾತ್ರರಾಗಿದ್ದಾರೆ. 

Kanaka Dasa Jayanti 2024 ಶ್ರೀಕನಕರು ಸಾಮಾಜಿಕ ತಾರತಮ್ಯ & ಅಸಮಾನತೆ ಬಗ್ಗೆ ತಮ್ಮ ಕೃತಿಗಳ ಮೂಲಕ ಜನಜಾಗೃತಿ ಮಾಡಿದವರು- ಸಿದ್ಧರಾಮಯ್ಯ

0

Kanaka Dasa Jayanti 2024 ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.

ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು.

Kanaka Dasa Jayanti 2024 ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು.
ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯವರು ಕನಕದಾಸರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ್ದಾರೆ.

CM Siddaramaiah ದಲಿತರು,ಮಹಿಳೆಯರು,ಹಿಂದುಳಿದವರು ,ಅಲ್ಪ ಸಂಖ್ಯಾತರು ಹೆಚ್ಚು‌ ಸಹಕಾರ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು- ಸಿದ್ಧರಾಮಯ್ಯ

0

CM Siddaramaiah ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು‌. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ.

ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು.

2013 ರಲ್ಲಿ ₹8,165 ಕೋಟಿ ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು.

ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ / ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು.

CM Siddaramaiah ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ.

ಹಾಲು ಉತ್ಪಾದಕರಿಗೆ ಅನುಕೂಲ ಮಾಡುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಏರ್ಪಡಿಸಿದ್ದ ‌71 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನುಡಿದರು

Kannada short film ಕಿರುಚಿತ್ರ ನಿರ್ದೇಶಕ ವರಪ್ರಸಾದ್ ಶರ್ಮಾರಿಗೆ ‘ ಕನ್ನಡ ಕೌಸ್ತುಭ’ ಪ್ರಶಸ್ತಿ ಪ್ರದಾನ

0

Kannada short film ಕಿರುಚಿತ್ರ ನಿರ್ದೇಶಕ ವರಪ್ರಸಾದ್ ಶರ್ಮಾರವರಿಗೆ “ಕನ್ನಡ ಕೌಸ್ತುಭ” ಪ್ರಶಸ್ತಿ ಪ್ರಧಾನ ಶಿವಮೊಗ್ಗ : ಕಿರುಚಿತ್ರ, ಹೊಸ ಬಿಡುಗಡೆಯ ಸಿನಿಮಾಗಳ ಬಗ್ಗೆ ವೀಕ್ಷಕ ಸಮುದಾಯದ ರಿವ್ಹೀವ್ಸ್, ಉದ್ಯಮಗಳ ಪ್ರಮೋಷನ್ಸ್, ಹೀಗೆ ಸದಭಿರುಚಿಯ ಕಿರುತೆರೆಯ ಹಿಂದಿನ ನಿರ್ದೇಶಕ, ಸಂಭಾಷಣೆ, ಸಂಕಲನ ರೂವಾರಿಯಾಗಿ ಅದರ ನಿರ್ಮಾಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಸಬ್ ಸ್ಕೈಬರ್ ಹೊಂದಿರುವ ಯುವ ಮುಂದಾಳು ವರಪ್ರಸಾದ್ ಶರ್ಮಾರವರಿಗೆ “ಗಾರಾ ಫೌಂಡೇಶನ್” ನಿಂದ ನೀಡಲಾಗುವ “ಕನ್ನಡ ಕೌಸ್ತುಭ” ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮೊದಲಿಗೆ ಕನ್ನಡದ ಧ್ವಜ ಭಾವುಟವನ್ನು ನಟ ರಘುರಾಜ್ ಮಲ್ನಾಡ್ ರವರು ಆಹ್ವಾನಿಸಿದರು, ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಉದ್ಯಮಿಗಳಾದ ಉಮಾಕಾಂತ್ ರವರು ಕನ್ನಡ ಧ್ವಜಕ್ಕೆ ಪುಷ್ಪವನ್ನು ಅರ್ಪಿಸುವುದರ ಮುಖೇನ ನೆರವೇರಿಸಿದರು, ಅವರು ಈ ಸಂದರ್ಭದಲ್ಲಿ ಮಾತಾನಾಡಿ ಸಾಹಿತ್ಯ, ಪತ್ರಿಕಾ ಹಾದಿ, ಸೇವೆಯ ಹಾದಿಯಲ್ಲಿ ನಡೆವುದು ಬಲು ಅಸಾಧ್ಯ ಆದರೂ ಅದನ್ನು ಸಂಘಟಿಸುತಲಿ ಸಾಗುತ್ತಿರುವುದು ಶ್ಲಾಘನೀಯ, ವರಪ್ರಸಾದ್ ಶರ್ಮಾ ಇನ್ನೂ ಬೆಳೆಯುತ್ತಿರುವ ಯುವಕ ಬಿಡುವಿಲ್ಲದೆ ಕಿರುಚಿತ್ರಗಳ ಬಗ್ಗೆ, ಎಡಿಟಿಂಗ್, ಸಿನಿಮಾಗಳ ಕುರಿತಂತೆ ಇರುವ ಆಸಕ್ತಿ Kannada short film ನಿಜಕ್ಕೂ ಮೆಚ್ಚುವಂತಹದ್ದಾಗಿದ್ದು ಈ ಪ್ರಶಸ್ತಿ ಅವರಿಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿಸುವಂತೆ ಮಾಡಿದೆ, ಮುಂದೆ ಕರುನಾಡಿನಲ್ಲಿ ಶ್ರೇಷ್ಟ ನಿರ್ದೇಶಕನಾಗಿ ಹೊರಹೊಮ್ಮಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ನಟ ರಘುರಾಜ್ ಮಲ್ನಾಡ್, ಅನಿಲ್ ವರ್ಣೇಕರ್, ಚಾಂದೂ, ರಾಮಣ್ಣ, ಗಾರಾ ಫೌಂಡೇಶನ್ ನ ಮ್ಯಾನೇಜ್ಮೆಂಟ್ ಟ್ರಸ್ಟಿ ಗಾರಾ.ಶ್ರೀನಿವಾಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವರಪ್ರಸಾದ್ ಕುಟುಂಬದವರು ಹಾಗೂ ನೆರೆಹೊರೆಯವರು ಭಾಗವಹಿಸಿದ್ದರು.

CM Siddaramaiah ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ವಾಪಸ್ – ಸಿದ್ಧರಾಮಯ್ಯ

0

CM Siddaramaiah ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ.

ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆಯೇ? ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ.

ಆದಾಯ ತೆರಿಗೆ ಪಾವತಿಸುವವರ ಬಳಿ, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್ ಇರಬೇಕ? ಅರ್ಹರ ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು.

CM Siddaramaiah ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಆರೋಪ ಸಾಬೀತಾಗಿಲ್ಲ. ಕೆಲವೊಮ್ಮೆ ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ ಆದರೆ ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ. ಇದೂ ಹಾಗೆಯೇ ಎಂದು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.