Tuesday, March 24, 2026
Tuesday, March 24, 2026
Home Blog Page 499

Sir.M. Vishveshvaraya ರಾಜ್ಯಮಟ್ಟದ ಆಟೋಟ ಸ್ಪರ್ಧೆ ಜಿಲ್ಲೆಯ 8 ವಿದ್ಯಾರ್ಥಿಗಳಿಗೆ ಪದಕ ಪುರಸ್ಕಾರ

0

Sir.M. Vishveshvaraya ಕೋಲಾರದ ಸರ್.ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನ. 08 ರಿಂದ 10 ರವರೆಗೆ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯ ಅಥ್ಲೇಟಿಕ್ ವಿಭಾಗದಲ್ಲಿ ಜಿಲ್ಲೆಯ 8 ವಿದ್ಯಾರ್ಥಿಗಳು ಪದಕ ಗಳಿಸಿದ್ದಾರೆ.

ಅಮೂಲ್ಯ ಉದ್ದ ಜಿಗಿತದಲ್ಲಿ ಪ್ರಥಮ, ಅನ್ವಿತ ಎಂ.ಆರ್. ಎತ್ತರ ಜಿಗಿತದಲ್ಲಿ ಪ್ರಥಮ, ಲಕ್ಷ್ಮಿ ಹೆಚ್.ಪಿ. 400 ಮೀ ಹರ್ಡಲ್ಸ್ನಲ್ಲಿ ದ್ವಿತೀಯ, ಸಿರಿ ಕೆ.ಜೆ. 100 ಮೀ ಹರ್ಡಲ್ಸ್ನಲ್ಲಿ ತೃತೀಯ, ಮಣಿಕಂಠ ಗೌಡ ಎತ್ತರ ಜಿಗಿತದಲ್ಲಿ ಪ್ರಥಮ, ಸಂಜಯ ಹಂಚಿನಮನೆ 200 ಮೀ ಓಟದಲ್ಲಿ ತೃತೀಯ, ಸಚಿನ್ ಜಾಧವ್ 4100 ಮೀ ರಿಲೇಯಲ್ಲಿ ತೃತೀಯ ಹಾಗೂ ಶರತ್ ಕೆ.ಜೆ. 4100 ಮೀ ರಿಲೇಯಲ್ಲಿ ತೃತೀಯ ಸ್ಥಾನಗಳಿಸಿ ಪದಕ ವಿಜೇತರಾಗಿ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್ ತಿಳಿಸಿದ್ದಾರೆ.

Sir.M. Vishveshvaraya ಈ ಕ್ರೀಡಾಪಟುಗಳು ಶಿವಮೊಗ್ಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ಅಥ್ಲೆಟಿಕ್ ತರಬೇತುದಾರ ಬಾಳಪ್ಪ ಮಾನೆಯವರಿಂದ ದೈನಂದಿನ ತರಬೇತಿ ಪಡೆಯುತ್ತಿದ್ದಾರೆ.

ವಿಜೇತ ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Children’s Day ನಮ್ಮ ಮಕ್ಕಳು,ನಮ್ಮ ಭವಿಷ್ಯ” ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ. ಡೀಸಿಎಂ ಶಿವಕುಮಾರ್ ಉಪಸ್ಥಿತಿ

0

Children’s Day ಮಕ್ಕಳ ದಿನಾಚರಣೆ ಹಾಗೂ ಪಂಡಿತ್ ಶ್ರೀ ಜವಹರ ಲಾಲ್ ನೆಹರು ಅವರ ಜಯಂತಿ ಅಂಗವಾಗಿ ಇಂದು ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ “ನಮ್ಮ ಮಕ್ಕಳು ನಮ್ಮ ಭವಿಷ್ಯ” ಕಾರ್ಯಕ್ರಮದಲ್ಲಿ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಗು ಬಂಗಾರಪ್ಪನವರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮೊದಲು ಪಂಡಿತ್ ಶ್ರೀ ಜವಹರ ಲಾಲ್ ನೆಹರು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.

Children’s Day ಬಳಿಕ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ, ಅವರ ಪ್ರಶ್ನೋತ್ತರಗಳಿಗೆ ಉತ್ತರಿಸಲಾಯಿತು.

ಈ ವೇಳೆ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Amrita Hasta Charitable Trust ಸರ್ಕಾರಿ ಶಾಲೆಗಳ ಉಳಿವಿಗೆ ‘ಅಮೃತ ಹಸ್ತ’ ಅನೇಕ ಯೋಜನೆ ಕೈಗೊಳ್ಳುತ್ತಿದೆ- ಡಾ.ಶ್ರೀನಿವಾಸ ಮೂರ್ತಿ

0

Amrita Hasta Charitable Trust ಸರ್ಕಾರಿ ಶಾಲೆಗಳ ಉಳಿಸುವಿಕೆಗೆ ಅಮೃತ ಹಸ್ತ ಚಾರಿಟೇಬಲ್ ಟ್ರಸ್ಟ್ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಅಮೃತ್ ನೋನಿ ಮುಖ್ಯಸ್ಥ ಡಾ. ಶ್ರೀನಿವಾಸಮೂರ್ತಿ ಹೇಳಿದರು.

ಶಿವಮೊಗ್ಗ ತಾಲೂಕಿನ ಬಸವಪುರದ ಸರ್ಕಾರಿ ಶಾಲೆಗೆ ಸ್ಮಾರ್ಟ್ ಟಿವಿ, ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಅಗತ್ಯ ಪರಿಕರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಶಿಕ್ಷಣಕ್ಕೆ ಪೂರಕವಾದ ವಸ್ತುಗಳನ್ನು ಒದಗಿಸಿದರೆ ಉತ್ತಮ ಸಾಧನೆ ಮಾಡುತ್ತಾರೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು. ಸರ್ಕಾರಿ ಶಾಲೆಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲು ಸಂಘ ಸಂಸ್ಥೆಗಳು ಮುಂದಾಗಬೇಕು. ವಿದ್ಯಾರ್ಥಿಗಳ ಕಲಿಕಾ ವಿಧಾನ ವೃದ್ಧಿಸಲು ಆಧುನಿಕ ಉಪಕರಣಗಳು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

Amrita Hasta Charitable Trust ಅಮೃತ್ ನೋನಿ ಮುಖ್ಯಸ್ಥ ಡಾ. ಶ್ರೀನಿವಾಸಮೂರ್ತಿ, ಶಿವಮೊಗ್ಗ ನಗರದ ಪಂಚಮಿ ಆಯುರ್ವೇದ ಕೇಂದ್ರದ ಡಾ. ಕಾಂಚನಾ ಕುಲಕರ್ಣಿ, ಅಮೃತಹಸ್ತ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಆನಂದ್ ಯಾದವ್ ಅವರ ಮೂಲಕ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ವಿತರಿಸಲಾಯಿತು.
ರಾಮೇನಕೊಪ್ಪ ಪ್ರಗತಿಪರ ಕೃಷಿಕ ರಾಮಮೂರ್ತಿ, ಪ್ರಮುಖರಾದ ರಾಜು ಶಿವಮೊಗ್ಗ, ಮಂಜುಳಾ, ಮಾಧವಿ, ರಾಮಚಂದ್ರ, ಅನುಷಾ, ವಿಜಯಲಕ್ಷ್ಮೀ, ಶ್ವೇತಾ, ಶೋಭಾ, ಗಂಗಾಧರ್, ವಿಜಯ, ಹಾಲೇಶ್, ರುದ್ರೇಶ್, ಬಸವಾಪುರ ಸರ್ಕಾರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದ, ಗ್ರಾಮಸ್ಥರು ಉಪಸ್ಥಿತರಿದ್ದರು.

APMC Shivamogga ಭತ್ತಕ್ಕೆ ನ.15 ರಿಂದ ಬೆಂಬಲ ಬೆಲೆ. ಗರಿಷ್ಠ 40 ಕ್ವಿಂಟಾಲ್ ಖರೀದಿ. ಜಿಲ್ಲೆಯ ಎಲ್ಲಾ ಎಪಿಎಂಸಿಯಲ್ಲಿ ಖರೀದಿ ಕೇಂದ್ರಗಳು. ನೋಂದಾವಣೆ ಪ್ರಕ್ರಿಯೆ ಆರಂಭ

0

APMC Shivamogga 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿದಲು ಆದೇಶಿಸಿದ್ದು, ಸಾಮಾನ್ಯ ಭತ್ತ ರೂ.2300/- ಎ ಗ್ರೇಡ್ ಭತ್ತ ರೂ.2320/- ದರವನ್ನು ನಿಗಧಿ ಮಾಡಿದೆ. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನ.15 ರಿಂದ ಭತ್ತ ಮಾರಾಟ ಮಾಡಲು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರಾಜ್ಯ ಸಹಕಾರ ಮಾರಾಟ ಮಹಾಮಂಡಳ(ನಿ) ವನ್ನು ಸಂಗ್ರಹಣಾ ಏಜೆಸ್ಸಿಗಳಾಗಿ ನೇಮಿಸಲಾಗಿದೆ.
APMC Shivamogga ಪ್ರತಿ ಎಕರೆಗೆ 25 ಕ್ವಿಂಟಾಲ್‌ನAತೆ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಆವರಣದಲ್ಲಿರುವ ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸಲಾಗುತ್ತಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡ ಸಂದರ್ಭದಲ್ಲಿ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಭತ್ತವನ್ನು ದಿ: 01-01-2025 ರಿಂದ ದಿ:31-03-2025ರ ಅವಧಿಯಲ್ಲಿ ಖರೀದಿಸಲಾಗುತ್ತದೆ. ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Shimoga District Karate Association ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಶಿವಮೊಗ್ಗದ ಮೊಹಮ್ಮದ್ ಬಿಲಾಲ್ ಆಯ್ಕೆ

0

Shimoga District Karate Association ನವಂಬರ್ 13 ರಂದು ದಾವಣಗೆರೆ ಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ 19 ವರ್ಷ ವಯೋಮಿತಿಯೊಳಗಿನ ಬಾಲಕ ಬಾಲಕಿಯರ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ
ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಮುಖೀಬ್ ಅಹಮದ ಮತ್ತು ಶ್ರೀಮತಿ ಜುಗುನು ದಂಪತಿಗಳ ಪುತ್ರ ಹಾಗೂ ಇಂಪೀರಿಯಲ್ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಬಿಲಾಲ್ ದರ್ವೇಶ್ -62 ಕೆ ಜಿ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಥಮ ಸ್ಥಾನವನ್ನು ಪಡೆಯುವ ಮುಖಾಂತರ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದು
ಶಿವಮೊಗ್ಗ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

Shimoga District Karate Association ಶಿವಮೊಗ್ಗ ಜಿಲ್ಲೆಯಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ 17 ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದು ಕಳೆದ ವರ್ಷ
ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .

ಇದು ಎರಡನೇ ಬಾರಿ ಬಿಲಾಲ್ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಗೌರವಾಧ್ಯಕ್ಷ ಶಿವಮೊಗ್ಗ ವಿನೋದ್ ಸೇರಿದಂತೆ ಜಿಲ್ಲಾ ಕರಾಟೆ ಅಸೋಸಿಯೇಷನ್ ಪದಾಧಿಕಾರಿಗಳು ಬಂದು ಮಿತ್ರರು ಶುಭಕೋರಿದ್ದಾರೆ.

Chamber of Commerce Shivamogga ಸರಿಯಾದ ಆಹಾರಕ್ರಮ ಅನುಸರಿಸಿದರೆ ಉತ್ತಮ ಆರೋಗ್ಯ- ಡಾ.ಲತಾ ಶೇಖರ್

0

Chamber of Commerce Shivamogga ಭಾರತೀಯ ಪರಂಪರೆಯ ಚಿಕಿತ್ಸಾ ಪದ್ಧತಿಯಲ್ಲಿ ವಿಶೇಷ ಶಕ್ತಿಯಿದೆ ಎಂದು ವೈದ್ಯ ಧನ್ವಂತರಿ ಡಾ. ಲತಾ ಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ 535ನೇ “ಪ್ರಾಣಶಕ್ತಿ ಜಾಗೃತಿ ಚಿಕಿತ್ಸೆ”ಯಲ್ಲಿ ಮಾತನಾಡಿ, ಚಿಕಿತ್ಸಾ ಕಾರ್ಯಗಾರದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರ ಆರೋಗ್ಯದಲ್ಲಿ ಉತ್ತಮ ಪರಿವರ್ತಾತ್ಮಕ ಫಲಿತಾಂಶಗಳು ಕಂಡುಕೊಂಡು ಆರೋಗ್ಯವಂತ ಜೀವನ ಶೈಲಿ, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

ಸಾರ್ವಜನಿಕರು ಸರಿಯಾದ ಆಹಾರ ಕ್ರಮವನ್ನು ಅನುಸರಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಜೀವನಶೈಲಿಯಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದಾಗಿದೆ. ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

Chamber of Commerce Shivamogga ಭಾರತೀಯ ಪರಂಪರೆಯ ಚಿಕಿತ್ಸಾ ಕ್ರಮಗಳನ್ನು ಮಾರ್ಗದರ್ಶಿಸುವ ಪರಿಪೂರ್ಣ ಚಿಕಿತ್ಸಾ ಕಾರ್ಯಗಾರ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅನೇಕರು ಅವರಲ್ಲಿದ್ದ ಮಂಡಿ ನೋವು, ಸಕ್ಕರೆ ಕಾಯಿಲೆ, ಅರ್ಧ ತಲೆನೋವು, ಹೃದಯ ಸಮಸ್ಯೆ, ಸ್ತ್ರೀ ಸಮಸ್ಯೆ ಇನ್ನು 10 ಹಲವು ದೀರ್ಘಕಾಲದ ಸಮಸ್ಯೆಯಿಂದ ಚೇತರಿಕೆ ಕಂಡವರ ಸಂತೋಷ ಇಮ್ಮಡಿಯಾಗಿತ್ತು.

ಡಾ. ಲತಾ ಶೇಖರ್ ಅವರ ತಂದೆ ಕೃಷ್ಣದೇವರಾಯ, ಅಮೃತ್ ನೋನಿ ಸಂಸ್ಥಾಪಕ ಶ್ರೀನಿವಾಸ ಮೂರ್ತಿ, ರಾಮ್ ಮೂರ್ತಿ ಪಾಲ್ಗೊಂಡಿದ್ದರು.

National Sample Survey Office 2022-23 ನೇ ಸಾಲಿನಲ್ಲಿ 6 ರಿಂದ10 ವರ್ಷ ವಯೋಮಿತಿ ಮಕ್ಕಳ ಪ್ರಾಥಮಿಕ ಶಾಲಾ ಪ್ರವೇಶಾತಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ

0

National Sample Survey Office ನ್ಯಾಷನಲ್‌ ಸ್ಯಾಂಪಲ್‌ ಸರ್ವೆ ಆಫೀಸ್‌ (ಸಿಎಎಂಎಸ್‌) ವರದಿ ಪ್ರಕಾರ, 2022ರ ಜೂನ್‌ನಿಂದ – 2023ರ ಜುಲೈ ನಡುವೆ 6 ರಿಂದ 10 ವರ್ಷದವರೆಗಿನ ಮಕ್ಕಳು ಪ್ರಾಥಮಿಕ ಶಾಲೆಗೆ ಪ್ರವೇಶ ಪಡೆಯುವುದರಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ.

1 ರಿಂದ 5ನೇ ತರಗತಿವರೆಗೆ ಶೇ.97.4ರಷ್ಟು ಮಕ್ಕಳು ದಾಖಲಾಗಿದ್ದಾರೆ.

ಕರ್ನಾಟಕದಲ್ಲಿ ಶೇ.64.4 ರಷ್ಟು ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದರೆ, ಶೇ.10.1 ರಷ್ಟು ಮಕ್ಕಳು ಅನುದಾನಿತ, ಶೇ.25.5 ರಷ್ಟು ಮಕ್ಕಳು ಖಾಸಗಿ ಹಾಗೂ ಶೇ. 0.3 ರಷ್ಟು ಇತರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ.

Yaksha Sinchana Trust ಯಕ್ಷ ಸಿಂಚನ ಟ್ರಸ್ಟ್ ನ ಆಶ್ರಯದಲ್ಲಿ ನವೆಂಬರ್ 17 ರಂದು ಪೌರಾಣಿಕ ಯಕ್ಷೋತ್ಸವ

0

Yaksha Sinchana Trust ಹವ್ಯಾಸಿ ಯಕ್ಷಗಾನ ರಂಗಭೂಮಿಯಲ್ಲಿ ತನ್ನದೇಯಾದ ಸಾಧನೆಯನ್ನು ಮಾಡಿರುವ ಯಕ್ಷಸಿಂಚನ ಟ್ರಸ್ಟ್ (ರಿ), ಬೆಂಗಳೂರು ಇವರು 15ನೇ ವರುಷದ ವಾರ್ಷಿಕೋತ್ಸವನ್ನು ಅಂಗವಾಗಿ ದಿನಾಂಕ 17ನೇ ನವೆಂಬರ್ 2024 ನೇ ಭಾನುವಾರ ಪೌರಾಣಿಕ ಯಕ್ಷೋತ್ಸವನ್ನು ಆಯೋಜಿಸಿದ್ದಾರೆ.

ಮಧ್ಯಾಹ್ನ 3 ರಿಂದ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಯಕ್ಷಕಲಾ ಅಕಾಡೆಮಿ ಬೆಂಗಳೂರು ಇದರ ಬಾಲ ಕಲಾವಿದರುಗಳು ಹಟ್ಟಿಯಂಗಡಿ ರಾಮಭಟ್ಟ ರಚಿತ ಸುಭದ್ರಾ ಕಲ್ಯಾಣ ಪ್ರಸಂಗದ ಪ್ರದರ್ಶನಗೈಯುತ್ತಿದ್ದಾರೆ. ನಂತರ ಸಂಜೆ 5 ರಿಂದ ಯಕ್ಷಸಿಂಚನ ತಂಡದ ಕಲಾವಿದರುಗಳು ಬೊಟ್ಟಿಕೆರೆ ಪುರುಷೋತ್ತಮ ಪೂಂಜ ರಚಿತ ಮಾನಿಷಾದ ಪ್ರಸಂಗವನ್ನು ಪ್ರದರ್ಶನ ಮಾಡುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಖ್ಯಾತ ಯಕ್ಷಗುರುಗಳು ಹಾಗೂ ಭಾಗವತರಾದ ಶ್ರೀ ಉಮೇಶ್ ಭಟ್ ಬಾಡ ಅವರ ನಾಲ್ಕು ದಶಕಗಳ ಯಕ್ಷಗಾನ ಕೈಂಕರ್ಯಕ್ಕಾಗಿ ಅವರಿಗೆ 2024ನೇ ಸಾಲಿನ ಸಾರ್ಥಕ ಸಾಧಕ ಗೌರವ ಪ್ರಶಸ್ತಿ ಪ್ರದಾನವಾಗಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಮೋಹನ್ ಹೆಗಡೆ, ಖ್ಯಾತ ಅರ್ಥಧಾರಿಗಳು ಹಾಗೂ ವೀರಕಪುತ್ರ ಶ್ರೀನಿವಾಸ, ಖ್ಯಾತ ಪ್ರಕಾಶಕರು ಆಗಮಿಸುತ್ತಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರವೀಂದ್ರ ಭಟ್ ಐನಕೈ, ಸಂಪಾದಕರು, ಪ್ರಜಾವಾಣಿ ಕನ್ನಡ ದಿನಪತ್ರಿಕೆ ಇವರು ವಹಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮವು ಉದಯಭಾನು ಕಲಾಸಂಘ, ಗವಿಪುರ ಸಾಲು ಛತ್ರಗಳ ಎದುರು, ರಾಮಕೃಷ್ಣಮಠ ಬಡಾವಣೆ, ಕೆಂಪೇಗೌಡನಗರ, ಬೆಂಗಳೂರು ಇಲ್ಲಿ ಸಂಪನ್ನವಾಗುತ್ತಿದೆ.

Yaksha Sinchana Trust ಈ ಕಾರ್ಯಕ್ರಮದಲ್ಲಿ ಕಲಾವಿದರಾಗಿ ಶ್ರೀ ಎ.ಪಿ. ಪಾಠಕ್, ಶ್ರೀ ಕೃಷ್ಣಮೂರ್ತಿ ತುಂಗ, ಕುಮಾರಿ ಚಿತ್ಕಲಾ ತುಂಗ, ಶ್ರೀ ಪನ್ನಗ ಮಯ್ಯ, ಕುಮಾರ ರಜತ್, ಕುಮಾರಿ ಪ್ರಣವಿ, ಕುಮಾರಿ ಪಂಚಮಿ, ಕುಮಾರ ಸ್ಕಂದ, ಕುಮಾರಿ ಪ್ರಣತಿ, ಕುಮಾರ ಸುಜನ್, ಕುಮಾರಿ ವಿದುಲ, ಕುಮಾರ ಅಕ್ಷಜ್ಞ, ಕುಮಾರಿ ಭಾರ್ಗವಿ, ಕುಮಾರ ಅಶ್ವಿನ್, ಶ್ರೀ ರವಿ ಮಡೋಡಿ, ಶ್ರೀ ಶಶಿರಾಜ ಸೋಮಯಾಜಿ, ಶ್ರೀ ಮನೋಜ್ ಭಟ್, ಶ್ರೀ ಗುರುರಾಜ್ ಭಟ್, ಶ್ರೀ ಅಭಿನವ ತುಂಗ, ಶ್ರೀ ಆದಿತ್ಯ ಉಡುಪ, ಶ್ರೀ ಕೃಷ್ಣ ಶಾಸ್ತ್ರಿ, ಶ್ರೀ ಆದಿತ್ಯ ಹೊಳ್ಳ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪ್ರಸಂಗಗಳನ್ನು ಕೃಷ್ಣಮೂರ್ತಿ ತುಂಗ ಅವರು ನಿರ್ದೇಶನ ಮಾಡಿರುತ್ತಾರೆ

ಸಂಪರ್ಕ: ರವಿ ಮಡೋಡಿ-9986384205, ಶಶಿರಾಜ ಸೋಮಯಾಜಿ- 9986363495

Keladi Shivappa Nayaka Agriculture and Horticulture University ನವೆಂಬರ್ 22 ರಿಂದ ಡಿಸೆಂಬರ್ 21 ವರೆಗೆ ಬೇಕರಿ ಉತ್ಪನ್ನಗಳ ತಯಾರಿಕೆ ಕೌಶಲ್ಯ ತರಬೇತಿ

0

Keladi Shivappa Nayaka Agriculture and Horticulture University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ನ.22 ರಿಂದ ಡಿ.21 ರವರೆಗೆ ಒಂದು ತಿಂಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.
Keladi Shivappa Nayaka Agriculture and Horticulture University ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ನ.20 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳುವುದು. ತರಬೇತಿ ಶುಲ್ಕ ರೂ. 3500/- ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

District Backward Classes Welfare Department ವಿದೇಶ ವ್ಯಾಸಂಗ ವೇತನಕ್ಕಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

0

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ. ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, https://bcwd.karnataka.gov.in ವೆಬ್‌ಸೈಟ್ ಮೂಲಕ ಡಿ. 05 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಹಾಗೂ ಸಹಾಯವಾಣಿ ಸಂ.: 8050770004 ನ್ನು ಸಂಪರ್ಕಿಸುವುದು