Tuesday, August 4, 2026
Tuesday, August 4, 2026
Home Blog Page 51

ಹಾರ್ನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

0

ಶಿವಮೊಗ್ಗ ತಾಲೂಕಿನ ಹಾರ್‍ನಹಳ್ಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 12ಕ್ಷೇತ್ರಗಳಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ನಿರ್ಧೇಶಕರಾಗಿ ಸಾಲಗಾರ ಕ್ಷೇತ್ರಕ್ಕೆ ಸಾಮಾನ್ಯಕ್ಷೇತ್ರದಲ್ಲಿ ರವಿಕುಮಾರ್ ಅವರು 308, eನೇಶ್ 288, ಮಲ್ಲೇಶಪ್ಪ 276, ಕೆ. ಸುರೇಶ್ 283, ಧರ್ಮಣ್ಣ 263 ಮತಗಳನ್ನು ಪಡೆದು ಪಡೆದು ವಿಜೇತರಾಗಿದ್ದಾರೆ.

ಹಿಂದುಳಿದ ಪ್ರವರ್ಗ ಎ ಕ್ಷೇತ್ರದಿಂದ ಸಮೀವುಲ್ಲಾ 349 ಮತ ಪಡೆದು ವಿಜೇತರಾದರು. ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಕುಸುಮ ಅವರು 334, ರತ್ನಮ್ಮ 314 ಮತ ಪಡೆದರು. ಪರಿಶಿಷ್ಟ ಪಂಗಡ ಕ್ಷೇತ್ರಕ್ಕೆ ಹನುಮಂತ 332 ಮತ್ತು ಹಿಂದುಳಿದ ಪ್ರವರ್ಗ ಎ ಕ್ಷೇತ್ರಕ್ಕೆ ಗಿರೀಶ್ 331 ಮತ ಪಡೆದರು.

ಬಿಸಿಎಂಎ ಕ್ಷೇತ್ರಕ್ಕೆ ಮತ್ತು ಸಾಲಗಾರರಲ್ಲದ ಕ್ಷೇತ್ರಕ್ಕೆ ರಿಜ್ವಾನ್ ಮತ್ತು ಪರಿಶಿಷ್ಟ ಜಾತಿ ಕ್ಷೇತ್ರಕ್ಕೆ ಎಸ್. ಕುಮಾರ್ ನಾಯ್ಕ್ ಅವರು ಸಾಲಗಾರರ ಕ್ಷೇತ್ರಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂನ್ 28 ರ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನ ಯಶಸ್ವಿಗೊಳಿಸಿ- ಡಾ.ಕೆ.ಎಸ್.ನಟರಾಜ್

0

2026-27ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಸಕಲ ಸಿದ್ದತೆ ಮಾಡಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಡಿಹೆಚ್‌ಓ ಡಾ.ನಟರಾಜ್ ಕೆ ಎಸ್ ಮನವಿ ಮಾಡಿದರು.
ಮಂಗಳವಾರ ಮಹಾನಗರಪಾಲಿಕೆ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಿಟಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿ ಅವರು ಮಾತನಾಡಿದರು.
ಜೂನ್ 28ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದಾದ್ಯಂತ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ನಗರದ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು. ಲಸಿಕಾ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಸಕ್ರಿಯವಾಗಿ ಸಹಕರಿಸಬೇಕು ಎಂದರು.
ಪೋಲಿಯೋ ಬೂತ್‌ಗಳನ್ನು ತೆರೆಯಲು ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಅಗತ್ಯವಿರುವ ಇತರ ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.
ನಗರ ಪ್ರದೇಶಗಳಲ್ಲಿ ಕಾರ್ಯಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜವಾಬ್ದಾರಿ ನಿರ್ವಹಿಸಬೇಕು. ಪಾಲಿಕೆ ವತಿಯಿಂದ ಐಇಸಿ ಚಟುವಟಿಕೆಗಳನ್ನು ಕೈಗೊಂಡು ಸಹಕರಿಸಬೇಕು. ನಗರದ ಮುಖ್ಯ ಭಾಗಗಳಲ್ಲಿ ಪೋಸ್ಟರ್ ಗಳು, ಬ್ಯಾನರ್ ಮತ್ತು ಕಸದ ಗಾಡಿಗಳಲ್ಲಿ ಆಡಿಯೋ ಜಿಂಗಲ್ಸ್ ಹಾಕಬೇಕೆಂದ ಅವರು ಎಲ್ಲರೂ ಕೈಜೋಡಿಸಿ ನಗರದಲ್ಲಿ ಶೇ.100 ರಷ್ಟು ಪೋಲಿಯೋ ಲಸಿಕೆಯನ್ನು ಹಾಕುವ ಮೂಲಕ ಅಭಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಆರ್‌ಸಿಹೆಚ್ ಅಧಿಕಾರಿ ಡಾ.ಮಲ್ಲಪ್ಪ ಓ ಮಾತನಾಡಿ, ಭಾರತ ದೇಶವು 2014 ರಿಂದ ಪೋಲಿಯೋ ಮುಕ್ತವಾಗಿದೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕಡೆಯ ಪ್ರಕರಣ ಕಂಡುಬAದಿತ್ತು. ಪಾಕಿಸ್ತಾನ ಮತ್ತು ಅಘ್ತಾನಿಸ್ತಾನದಲ್ಲಿ ಒಂದೆರಡು ಪ್ರಕರಣಗಳಿದ್ದು ಅಲ್ಲಿಂದ ಬರುವ ಸಂಭವ ಇರುವ ಕಾರಣ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.
ನಗರದಲ್ಲಿ 69283 ಮನೆಗಳಿಂದ 21873 ಮಕ್ಕಳನ್ನು ಪೋಲಿಯೋ ಲಸಿಕೆ ನೀಡಲು ಗುರುತಿಸಲಾಗಿದೆ. 05 ಟ್ರಾನ್ಸಿಟ್, ಮೊಬೈಲ್ ಸೇರಿ ಒಟ್ಟು 115 ಬೂತ್‌ಗಳು ಅಂದು ಕಾರ್ಯ ನಿರ್ವಹಿಸಲಿವೆ. 464 ಲಸಿಕಾ ಕಾರ್ಯಕರ್ತರಿದ್ದು, ಬೂತ್‌ಗೆ ಬಾರದೇ ಉಳಿದ ಮಕ್ಕಳನ್ನು ಗುರುತಿಸಲು ಜೂನ್ 29, 30 ಮತ್ತು ಜುಲೈ 1 ರಂದು ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ನೀಡಲಾಗುವುದು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್ ಹಾಗೂ ಇತೆರೆಡೆ ಟ್ರಾನ್ಸಿಟ್ ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದರು.
ಸಭೆಯಲ್ಲಿ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ಶಸ್ತçಚಿಕಿತ್ಸಕರಾದ ಡಾ.ಗೀತಾ, ಪಾಲಿಕೆ ಪರಿಸರ ಅಭಿಯಂತರರಾದ ಪ್ರಭಾಕರ್, ಡಾ.ನಾರಾಯಣ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಅಧಿಕಾರಿಗಳು, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

0

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ ಶಕ್ತಿ ನಮ್ಮ ಗ್ರಾಹಕರು. ಅವರ ವಿಶ್ವಾಸ, ಸಹಕಾರ ಮತ್ತು ಪ್ರೋತ್ಸಾಹವೇ ಸಂಸ್ಥೆಯನ್ನು ಇಂದಿನ ಮಟ್ಟಕ್ಕೆ ಬೆಳೆಸಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಕೆ ಎನ್ ಹೇಳಿದರು.
ಅವರು ಕೊಡಚಾದ್ರಿ ಚಿಟ್ಸ್ ಪ್ರೈ. ಲಿ. ವತಿಯಿಂದ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಆಯೋಜಿಸಿದ್ದ “ಅಭಿನಂದನ 2026-ಬಾಂಧವ್ಯದ ಬೆಸುಗೆ” ಎಂಬ ವಿಶೇಷ ಗ್ರಾಹಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಗ್ರಾಹಕ ಸ್ನೇಹಿ ಸೇವೆಗಳನ್ನು ನೀಡುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಆರ್ಥಿಕ ಪ್ರಗತಿಗೆ ಕೈಜೋಡಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಗ್ರಾಹಕರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಅಭಿನಂದಿಸಿದರು.
Kodachadri Chits Pvt. Ltd ಕಾರ್ಯಕ್ರಮದಲ್ಲಿ ಶಿವಮೊಗ್ಗ, ಹೊಸನಗರ, ಶಿಕಾರಿಪುರ, ತೀರ್ಥಹಳ್ಳಿ,ಚನ್ನಗಿರಿ, ತರೀಕೆರೆ, ಹೊನ್ನಾಳಿ ಸೇರಿದಂತೆ ವಿವಿಧ ಶಾಖೆಗಳ ಗ್ರಾಹಕರು, ಗಣ್ಯರು, ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಬಗ್ಗೆ ಕೃಷಿಕರಿಗಾಗಿ ಇಲ್ಲಿದೆ ಮಾಹಿತಿ

0

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (R-WBCIS) 2024-25 ಕ್ಕೆ ಸಂಬಂಧಿಸಿದ ಸೂಚನೆ

ಮುಖ್ಯ ವಿವರಗಳು:

  1. ಯಾವ ಬೆಳೆಗಳಿಗೆ ವಿಮೆ
  • ಅಡಿಕೆ: ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು
  • ಕಾಳುಮೆಣಸು: ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು
  • ಶುಂಠಿ: ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು
  • ಮಾವು: ಶಿವಮೊಗ್ಗ, ಸೊರಬ ಮತ್ತು ಶಿಕಾರಿಪುರ ತಾಲ್ಲೂಕುಗಳು
  1. ಯಾರು ನೊಂದಾಯಿಸಬಹುದು
  • ಅಡಿಕೆ,ಮಾವು,ಶುಂಠಿ, ಕಾಳುಮೆಣಸು ಬೆಳೆದಿರುವ ರೈತರು
  • ಈ ಮೊದಲಿನ ಬೆಳೆಗಳಿಗೆ ಬೆಳೆಸಾಲ ಪಡೆದವರು/ಪಡೆಯದವರು ಎಲ್ಲರೂ ವಿಮೆಗೆ ಅರ್ಹರು
  • ಬೆಳೆ ಸಾಲ ಪಡೆದ ರೈತರಿಗೆ ವಿಮೆ ಕಡ್ಡಾಯ, ಸಾಲ ಪಡೆಯದ ರೈತರು ಸ್ವಯಂಪ್ರೇರಿತರಾಗಿ ಮಾಡಬಹುದು,
  1. ಬೇಕಾದ ದಾಖಲೆಗಳು
    ಆರ್ಜಿ ಜೊತೆ ಪಹಣಿ,ಬ್ಯಾಂಕ್ ಪಾಸ್‌ಬುಕ್,ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರ ಇಟ್ಟುಕೊಂಡು ಬ್ಯಾಂಕ್/ಸಮೀಪದ ಸಾಮಾನ್ಯ ಸೇವಾ ಕೇಂದ್ರ (CSC)/ಗ್ರಾಮ ಒನ್ ಕೇಂದ್ರದಲ್ಲಿ ನೊಂದಾಯಿಸಿಕೊಳ್ಳಬೇಕು.
  2. ಕೊನೆಯ ದಿನಾಂಕ: 31-07-2026
  3. ವಿಮಾ ಕಂತಿನ ವಿವರ
    ಕ್ರ.ಸಂ ಬೆಳೆ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ ಕಂತು ರೈತರು ಪಾವತಿಸಬೇಕಾದ ಕಂತು
    1 ಅಡಿಕೆ 1,28,000/- 6400.00 2560.00
    2 ಕಾಳುಮೆಣಸು 47,000/- 4230.00 1692.00
    3 ಮಾವು 80,000/- 8000.00 4000.00
    4 ಶುಂಠಿ 1,30,000/- 6500.00 2600.00
    ಗುಂಟೆಗೆ ಲೆಕ್ಕ: ಅಡಿಕೆ ₹64, ಕಾಳುಮೆಣಸು ₹42.30, ಮಾವು ₹80, ಶುಂಠಿ ₹65
  4. ಪರಿಹಾರ ಹೇಗೆ: ಮಳೆ, ಭೂಕುಸಿತ, ಬರ ಇತ್ಯಾದಿ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟವಾದರೆ,ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ದತ್ತಾಂಶ ಆಧರಿಸಿ ಪರಿಹಾರ ನೀಡಲಾಗುತ್ತದೆ. Term sheet, Pay out structure ಪ್ರಕಾರ ಪಾವತಿ.

ಸಂಪರ್ಕ: ಹೆಚ್ಚಿನ ಮಾಹಿತಿಗೆ ಹತ್ತಿರದ ಬ್ಯಾಂಕ್, ರೈತ ಸಂಪರ್ಕ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸಿ.

“ರೈತರೇ ಬನ್ನಿ, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳಿ”

ಎಸ್ಎಸ್ಎಲ್ ಸಿ ,ಪಿಯುಸಿ,ಐಟಿಐ, ಡಿಪ್ಲೊಮಾದಾರರು ಮತ್ತು ಪದವಿಧರರಿಗೆ ಉದ್ಯೋಗ ಭರ್ತಿಗೆ ನೇರ ಸಂದರ್ಶನ

0

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 30 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಸ್ವಮಾನ್ ಫೈನಾನ್ಸ್ ಪ್ರೈ.ಲಿ., ಐಬ್ಲೂ ಮ್ಯಾನ್‌ಪವರ್ ಸೆಕ್ಯೂರ್ ಸಲ್ಯೂಷನ್ಸ್ ಎಲ್‌ಎಲ್‌ಪಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 40 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

0

Rotary Club Shivamogga “ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ ತಿಂಗಳನ್ನು ಮಲೇರಿಯಾ ವಿರೋಧಿ ಮಾಸವನ್ನಾಗಿ ಆಚರಿಸಲಾಗುತ್ತದೆ. ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಹಾಗೂ ವೈಜ್ಞಾನಿಕ ಕ್ರಮಗಳ ಮೂಲಕ ಮಲೇರಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಶ್ರೀರಾಮನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಇವರ ಸಹಯೋಗದಲ್ಲಿ ಶಿವಮೊಗ್ಗ ನಗರದ ಬಿಜಿಎಸ್ ವಸತಿಯುತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ‘ಜಿಲ್ಲಾ ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ 2026’ ರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ವರ್ಷ “ಮಲೇರಿಯಾವನ್ನು ಕೊನೆಗೊಳಿಸಲು ಅಗತ್ಯ ಕ್ರಮಗಳ ಚಾಲನೆಯನ್ನು ಈಗ ನಾವು ಮಾಡೋಣ ಹಾಗೂ ನಾವು ಮಾಡುತ್ತೇವೆ” ಎಂಬ ಘೋಷವಾಕ್ಯದೊಂದಿಗೆ ಈ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು, ಮಲೇರಿಯಾ ತಡೆಗಟ್ಟುವಿಕೆಯ ನಾಲ್ಕು ಮೂಲಭೂತ ತತ್ವಗಳನ್ನು ವಿವರಿಸಿದರು:
ಸೊಳ್ಳೆಗಳ ಚಟುವಟಿಕೆ ಮತ್ತು ಅಪಾಯಗಳ ಬಗ್ಗೆ ನಿರಂತರ ಅರಿವು ಮೂಡಿಸುವುದು.
ಕೀಟನಾಶಕ ಸಂಸ್ಕರಿಸಿದ ಬಲೆಗಳು ಹಾಗೂ ಉದ್ದನೆಯ ಬಟ್ಟೆಗಳನ್ನು ಧರಿಸುವ ಮೂಲಕ ರೋಗ ತಡೆಗಟ್ಟುವಿಕೆ.
ದುರ್ಬಲ ಗುಂಪುಗಳಿಗೆ ಅಗತ್ಯ ಮಲೇರಿಯಾ ತಡೆಗಟ್ಟುವ ಔಷಧಿಗಳ ವಿತರಣೆ.
ಜ್ವರ ತರಹದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ರೋಗನಿರ್ಣಯ ಮತ್ತು ತ್ವರಿತ ಚಿಕಿತ್ಸೆ ಪಡೆಯುವುದು ಅತ್ಯಗತ್ಯ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, “ಅನಾಫಿಲೀಸ್ ಹೆಣ್ಣು ಸೊಳ್ಳೆಗಳ ವಂಶಾಭಿವೃದ್ಧಿಯನ್ನು ತಡೆಗಟ್ಟಲು ಮಳೆಗಾಲದಲ್ಲಿ ಕೆರೆ, ಕುಂಟೆ, ಬಾವಿ ಹಾಗೂ ಸಣ್ಣಪುಟ್ಟ ತಗ್ಗು ಪ್ರದೇಶಗಳಲ್ಲಿ ಮಳೆನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ,” ಎಂದರು.
Rotary Club Shivamogga ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಜಿ.ಬಿ ಮಾತನಾಡಿ, “ಭಾರತವು ಮಲೇರಿಯಾ ಮುಕ್ತ ದೇಶ ನಿರ್ಮಾಣದತ್ತ ಬಲವಾದ ಪ್ರಗತಿ ಸಾಧಿಸುತ್ತಿದೆ. 2027 ರ ವೇಳೆಗೆ ಸ್ಥಳೀಯ ಮಲೇರಿಯಾ ಪ್ರಕರಣಗಳನ್ನು ಶೂನ್ಯಗೊಳಿಸುವ ಮತ್ತು 2030 ರ ವೇಳೆಗೆ ರಾಷ್ಟ್ರೀಯ ಮಲೇರಿಯಾ ನಿರ್ಮೂಲನೆಯನ್ನು ಪೂರ್ಣಗೊಳಿಸುವ ಗುರಿಯನ್ನು ದೇಶ ಹೊಂದಿದೆ. ಜಾಗತಿಕವಾಗಿ ಈಗಾಗಲೇ 47 ದೇಶಗಳು ಮಲೇರಿಯಾ ಮುಕ್ತವೆಂದು ಪ್ರಮಾಣೀಕರಿಸಲ್ಪಟ್ಟಿದ್ದು, 2000 ನೇ ಇಸವಿಯಿಂದ ಈವರೆಗೆ ಅಂದಾಜು 14 ಮಿಲಿಯನ್ ಸಾವುಗಳನ್ನು ತಪ್ಪಿಸಲಾಗಿದೆ ಎಂದು ಅಂಕಿ-ಅಂಶಗಳನ್ನು ಹಂಚಿಕೊಂಡರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರು ಹಾಗೂ ರೋಟರಿ ಮಾಜಿ ಸಹಾಯಕ ಗವರ್ನರ್ ವಿಜಯ್ ಕುಮಾರ್ ಮಾತನಾಡಿ, “ಲಕ್ಷಾಂತರ ಮಕ್ಕಳಿಗೆ ಮಲೇರಿಯಾ ಲಸಿಕೆಗಳನ್ನು ವಿತರಿಸುವಂತಹ ಆಧುನಿಕ ಆವಿಷ್ಕಾರಗಳ ಹೊರತಾಗಿಯೂ, ಮಲೇರಿಯಾ ಇಂದಿಗೂ ಒಂದು ಪ್ರಮುಖ ಆರೋಗ್ಯ ಸವಾಲಾಗಿ ಉಳಿದಿದೆ ಎಂದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮಾ ಅವರು ಮಾತನಾಡಿ, ಮಲೇರಿಯಾ ರೋಗದ ಲಕ್ಷಣಗಳು, ಅದು ಹರಡುವ ವಿಧಾನ ಹಾಗೂ ನಿಯಂತ್ರಣ ಮತ್ತು ಚಿಕಿತ್ಸಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ಡಿಹೆಚ್ ಓ ಡಾ. ನಟರಾಜ್ ಕೆ.ಎಸ್, ಲೆಕ್ಕ ಪರಿಶೋಧಕರಾದ ಆರ್. ಮನೋಹರ, ಶಾಲೆಯ ಪ್ರಾಂಶುಪಾಲರಾದ ಗಿರೀಶ್ ಬಿ.ಎ., ದ್ರಾಕ್ಷಾಯಿಣಿ, ಚೈತ್ರ, ಶ್ರೀ ಓಬಯ್ಯ, ಪ್ರಮೋದ್, ಹಿರಿಯ ಆರೋಗ್ಯ ನಿರೀಕ್ಷಕರುಗಳಾದ ರಾಜು, ಬಸವರಾಜ್, ಜಾಕೀರ್ ಹುಸೇನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Rajiv Gandhi University of Health Sciences ಶಿವಮೊಗ್ಗದ ಡಾ.ಪ್ರಕೃತಿ ಮಂಚಾಲೆ ಅವರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಪಿಹೆಚ್ ಡಿ ಪದವಿ ಪ್ರದಾನ

0

Rajiv Gandhi University of Health Sciences ಶಿವಮೊಗ್ಗದ ದುರ್ಗಿಗುಡಿಯಲ್ಲಿರುವ” ಕೃತ್ವಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಪ್ರಾಧ್ಯಾಪಕಿ ಮತ್ತು ವಿಭಾಗಾಧ್ಯಕ್ಷೆ ಡಾ. ಪ್ರಕೃತಿ ಮಂಚಾಲೆ ಅವರಿಗೆ ಬೆಂಗಳೂರು ಶ್ರೀ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.
ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ: “ಆಯುರ್ವೇದದಲ್ಲಿ ಸೌಂದರ್ಯವರ್ಧಕಗಳ ವಿಮರ್ಶಾತ್ಮಕ ಅಧ್ಯಯನ ಮತ್ತು ತಲೆಹೊಟ್ಟಿನ ಸೋರಿಯಾಸಿಸ್‌ ನಿರ್ವಹಣೆಯಲ್ಲಿ ಗುಂಜಾ ಭೃಂಗರಾಜ ತೈಲದ ಪರಿಣಾಮಕಾರಿತ್ವದ ಕ್ಲಿನಿಕಲ್ ಅಧ್ಯಯನ”. ಈ ಸಂಶೋಧನೆ ಆಯುರ್ವೇದದ ಪರಂಪರೆಯ ತತ್ವಗಳನ್ನು ಆಧುನಿಕ ಸೌಂದರ್ಯ ವಿಜ್ಞಾನದೊಂದಿಗೆ ಸಂಯೋಜಿಸುವ ಮಹತ್ವದ ಹೆಜ್ಜೆಯಾಗಿದೆ.
Rajiv Gandhi University of Health Sciences ಡಾ. . ಪ್ರಕೃತಿ ಮಂಚಾಲೆ ಅವರು ತಮ್ಮ ಸಂಶೋಧನಾ ಕಾರ್ಯವನ್ನು ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿಯ ಡಾ. ಜೋಶಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ. ಈ ಪದವಿ ಶ್ರೀ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 28ನೇ ಪದವಿ ಪ್ರದಾನ ಸಮಾರಂಭದಲ್ಲಿ, ಜೂನ್ 16, 2026 ರಂದು ಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ರವರ ಪ್ರಥಮ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗಿದೆ.
ಇವರಿಗೆ ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕ, ರೋಟರಿ ಜ್ಯೂಬಿಲಿ, ಯಕ್ಷಗಾನ ಸೇವಾ ಸಂಸ್ಥೆ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಅಭಿನಂದಿಸಿದ್ದಾರೆ.

ಶಿವಮೊಗ್ಗ ಕೋರ್ಟಿಗೆ ಬಾಂಬ್ ಬೆದರಿಕೆ : ಪೊಲೀಸರಿಂದ ತೀವ್ರ ತಪಾಸಣೆ – ಶೋಧ ಕಾರ್ಯ

0

ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ಪೊಲೀಸರು ಹೈ ಅಲರ್ಟ್ ಘೋಷಿಸಿ ತೀವ್ರ ತಪಾಸಣೆ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ನ್ಯಾಯಾಲಯ ಕಟ್ಟಡಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಸೃಷ್ಟಿಸಿದೆ. ದುಷ್ಕರ್ಮಿಗಳು ನ್ಯಾಯಾಲಯದಲ್ಲಿ ಐದು ಮಿನಿ ಸಿಲಿಂಡರ್‌ಗಳು ಹಾಗೂ ಕಬ್ಬಿಣದ ತುಂಡುಗಳನ್ನು ಬಳಸಿ ಸ್ಫೋಟ ನಡೆಸುವುದಾಗಿ ಉಲ್ಲೇಖಿಸಿ ಮುಖ್ಯ ನ್ಯಾಯಾಧೀಶರಿಗೆ ತಡರಾತ್ರಿ ಸುಮಾರು ಒಂದು ಗಂಟೆಯವರೆಗೆ ಇ-ಮೇಲ್ ಕಳುಹಿಸಿದ್ದಾರೆ.

ಬೆದರಿಕೆ ಮಾಹಿತಿ ದೊರೆಯುತ್ತಿದ್ದಂತೆಯೇ ಶ್ವಾನ ದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDS) ಸಿಬ್ಬಂದಿ ನ್ಯಾಯಾಲಯ ಆವರಣದಲ್ಲಿ ತೀವ್ರ ತಪಾಸಣೆ ನಡೆಸಿದರು. ನ್ಯಾಯಾಲಯದ ಪ್ರತಿಯೊಂದು ವಿಭಾಗ ಹಾಗೂ ಕಟ್ಟಡದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲಿಸಲಾಗುತ್ತಿದೆ.

ಈ ಸಂಬಂಧ ನ್ಯಾಯಾಲಯದ ಅಧಿಕಾರಿಯೊಬ್ಬರು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಕಳುಹಿಸಿದವರ ಪತ್ತೆಗೆ ಮುಂದಾಗಿದ್ದಾರೆ.

ಘಟನಾ ಸ್ಥಳಕ್ಕೆ ಡಿಎಸ್ಪಿಗಳಾದ ಶೀಲವಂತ ಹಾಗೂ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಇದಾಗ್ಯೂ, ಬಿಗಿ ಪೊಲೀಸ್ ಭದ್ರತೆಯ ನಡುವೆ ನ್ಯಾಯಾಲಯದ ಕಲಾಪಗಳು ಎಂದಿನಂತೆ ಮುಂದುವರಿದಿವೆ. ಮಧ್ಯಾಹ್ನ ಎರಡು ಗಂಟೆಯೊಳಗೆ ಸ್ಫೋಟ ನಡೆಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

ಅಡಿಕೆ, ಮಾವು, ಕಾಳುಮೆಣಸು, ಶುಂಠಿ ಹೀಗೆ ಹವಾಮಾನಾಧಾರಿತ ಬೆಳೆಗಳ ವಿಮಾ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

0

2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದ್ದು, ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜು. 31 ರೊಳಗೆ ವಿಮೆ ಕಂತನ್ನು ಪಾವತಿಸುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಾದ ಶಿವಮೊಗ್ಗ -08182-279415/9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/9663634388, ಸಾಗರ-08183-295124/9900046121, ತೀರ್ಥಹಳ್ಳಿ-08181-228151/9108280642, ಹೊಸನಗರ-08185-295364/9591395327 ಗಳ ಅಧಿಕಾರಿಗಳನ್ನು ಸಂಪರ್ಕಿಸುಬಹುದಾಗಿದೆ.

ನಾರಾಯಣ ಸಂಸ್ಥೆಯು ರಾಜ್ಯದಾದ್ಯಂತ ಜನರ ವಿಶ್ವಾಸಗಳಿಸಿದೆ- ಚಿತ್ರನಟಿ ಅದಿತಿ ಪ್ರಭುದೇವ್

0

ಶಿವಮೊಗ್ಗ ನಗರದ ಗೋಪಾಳ ಪ್ರದೇಶದಲ್ಲಿ ನಾರಾಯಣ ಹೆಲ್ತ್‌ನ ಎರಡನೇ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ಗೆ ಮಂಗಳವಾರ ಚಾಲನೆ ದೊರೆಯಿತು. ನಟಿ ಅದಿತಿ ಪ್ರಭುದೇವ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ನಾರಾಯಣ ಸಂಸ್ಥೆ ರಾಜ್ಯದಾದ್ಯಂತ ಜನರ ವಿಶ್ವಾಸ ಗಳಿಸಿರುವ ಆರೋಗ್ಯ ಸಂಸ್ಥೆಯಾಗಿದ್ದು, ಶಿವಮೊಗ್ಗದಲ್ಲಿ ಮತ್ತೊಂದು ಕ್ಲಿನಿಕ್ ಆರಂಭಿಸಿರುವುದು ಸಂಸ್ಥೆಯ ಮೇಲಿನ ಜನರ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ವೈದ್ಯರ ಸೇವೆಯನ್ನು ಶ್ಲಾಘಿಸಿದ ಅವರು, ಯಾವುದೇ ಸಂಕಷ್ಟದ ಸಂದರ್ಭದಲ್ಲೂ ವೈದ್ಯರು ತಮ್ಮ ಕುಟುಂಬಕ್ಕಿಂತ ಸೇವೆಗೆ ಆದ್ಯತೆ ನೀಡುತ್ತಾರೆ. “ವೈದ್ಯೋ ನಾರಾಯಣೋ ಹರಿ” ಎಂಬ ಮಾತು ನೂರಕ್ಕೆ ನೂರು ಸತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ್ ಶರ್ಮಾ, ಗೋಪಾಳ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಸುಲಭವಾಗಿ ಆರೋಗ್ಯ ಸೇವೆ ದೊರೆಯುವ ಉದ್ದೇಶದಿಂದ ಕ್ಲಿನಿಕ್ ಆರಂಭಿಸಲಾಗಿದೆ ಎಂದರು. ಉದ್ಘಾಟನಾ ಅಂಗವಾಗಿ ಶಿವಮೊಗ್ಗದ ನಾಗರಿಕರಿಗಾಗಿ ರೂ.1,999ಕ್ಕೆ ಸಮಗ್ರ ಆರೋಗ್ಯ ತಪಾಸಣಾ ಪ್ಯಾಕೇಜ್ ಘೋಷಿಸಲಾಗಿದೆ ಎಂದು ತಿಳಿಸಿದರು.

ನಾರಾಯಣ ಹೆಲ್ತ್ ಸಂಸ್ಥೆಯ ಮಾರ್ಕೆಟಿಂಗ್ ಹಾಗೂ ಗ್ರೋಥ್ ನ ಕ್ಲಸ್ಟರ್ ಮುಖ್ಯಸ್ಥರು ಶ್ರೀ ರಾಜಾಸಿಂಗ್ ಮಾತನಾಡಿ, ಗೋಪಾಳ ಶಿವಮೊಗ್ಗದ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಲ್ಲಿ ಒಂದಾಗಿದ್ದು, ಹೆಚ್ಚಿನ ಸಂಖ್ಯೆಯ ನಿವಾಸಿಗಳು, ವೈದ್ಯರು ಹಾಗೂ ಉದ್ಯಮಿಗಳು ಇಲ್ಲಿ ವಾಸವಾಗಿದ್ದಾರೆ. ಅವರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಮನೆ ಸಮೀಪವೇ ಒದಗಿಸುವ ಉದ್ದೇಶದಿಂದ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ಹೇಳಿದರು.

ಕ್ಲಿನಿಕ್‌ನಲ್ಲಿ ಎಕ್ಸ್-ರೇ, ಎಕೋ, ಟಿಎಂಟಿ, ರಕ್ತ ಪರೀಕ್ಷೆ ಮಾದರಿ ಸಂಗ್ರಹ, ಫಾರ್ಮಸಿ, ಫಿಸಿಯೋಥೆರಪಿ ಹಾಗೂ ವಿವಿಧ ತಜ್ಞ ವೈದ್ಯರ ಸಲಹೆ ಸೇರಿದಂತೆ ಹಲವು ಆರೋಗ್ಯ ಸೇವೆಗಳು ಒಂದೇ ಸೂರಿನಡಿ ಲಭ್ಯವಿವೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಎನ್. ಎಲ್ .ನಾಯ್ಕ್ ಅವರಿಗೆ ಸನ್ಮಾನ ಮಾಡಲಾಯಿತು.ಡಾ. ಚೇತನ್ ಎಂ. ಎಲ್, ನಾರಾಯಣ ಹೆಲ್ತ್ ನ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಶ್ರೀ ಸಂತ ಕುಮಾರ, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್ ಎಸ್. ಎನ್ ಸೇರಿದಂತೆ, ಆಸ್ಪತ್ರೆ ವೈದ್ಯರು, ಸಿಬ್ಬಂದಿ, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.