Thursday, March 26, 2026
Thursday, March 26, 2026
Home Blog Page 517

Shivamogga Police ತಡಗಣಿಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿಯ ಮರಣ

0

Shivamogga Police ಮದ್ಯಪಾನ ಮಾಡಿ ಹಾಗೂ ಹೆಲೈಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡಿದ ವ್ಯಕ್ತಿಗೆ ಇಲ್ಲಿನ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯ 114,500 ದಂಡ ವಿಧಿಸಿದೆ.
ಶಿವಮೊಗ್ಗದ ನಗರದ ನೆಹರೂ ರಸ್ತೆಯಲ್ಲಿ ಭಾನುವಾರ ಇಲ್ಲಿನ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ತಿರುಮಲೇಶ್ ಅವರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ದ್ವಿಚಕ್ರ ವಾಹನ ಸವಾರರೊಬ್ಬರು ಮದ್ಯಪಾನ ಮಾಡಿ, ಹೆಲೈಟ್
ಧರಿಸದೆ ವಾಹನ ಚಲಾಯಿಸುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.

Shivamogga Police ಇದರ ಜೊತೆಗೆ ನಂಬರ್ ಪ್ಲೇಟ್, ಎಮಿಷನ್
ಪ್ರಮಾಣ ಪತ್ರ, ಸೈಡ್ ಮಿರರ್ ಇರದ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ವಾಹನ ತಪಾಸಣೆ ವೇಳೆ ಪೊಲೀಸ್‌ ಸಿಬ್ಬಂದಿ ದಿನೇಶ್, ಹರೀಶ್ ಇದ್ದರು

Eshwar Khandre “ಟಾಕ್ಸಿಕ್” ಸಿನಿಮಾ ಶೂಟಿಂಗಿಗಾಗಿ ಮರಕಡಿತಲೆ.ಸಚಿವ ಈಶ್ವರ ಖಂಡ್ರೆ ಆರೋಪ”

0

Eshwar Khandre ಹೆಚ್‌.ಎಂ.ಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಈ ಕುರಿತ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು “ಹೆಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.

“ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಹೇಳಿದ್ದಾರೆ.

Eshwar Khandre ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಹೆಚ್ಎಂಟಿ ತನ್ನ ವಶದಲ್ಲಿದ್ದ ಜಮೀನಿನ ಮರ, ಗಿಡಗಳನ್ನು ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆಗೆ ಕೊಟ್ಟಿದೆ. ಈ ಮೂಲಕ ದುಡ್ಡು ಮಾಡುತ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ರೀತಿ ಮಾಡಲು ಅವರಿಗೆ ಯಾವುದೇ ಅಧಿಕಾರ ಇಲ್ಲ” ಎಂದಿದ್ದಾರೆ.

“ಟಾಕ್ಸಿಕ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ನಾನು ಖುದ್ದಾಗಿ ಹೋಗಿ ನೋಡಿದ್ದೇನೆ. ಅಲ್ಲಿನ ಸಂಪೂರ್ಣ ಚಿತ್ರಣ ಬದಲಾಗಿದೆ, ವಿಲೇಜ್ ರೀತಿಯ ಸೆಟ್ ಹಾಕಿದ್ದಾರೆ. ಇದು ಬಿಬಿಎಂಪಿ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ, ಕಾನೂನು ಕ್ರಮಕ್ಕೆ ಪಾಲಿಕೆಗೂ ಪತ್ರ ಬರೆದಿದ್ದೇನೆ. ಅವರು (ಬಿಬಿಎಂಪಿ) ಕಮಿಟಿ ಮಾಡಿದ್ದಾರೆ, ನೋಟಿಸ್ ಕೊಟ್ಟಿದ್ದಾರೆ. ಚಿತ್ರ ತಂಡದ್ದೇ ತಪ್ಪು ಅಂತ ನಾನು ಹೇಳುತ್ತಿಲ್ಲ. ಯಾರದ್ದು ತಪ್ಪು ಇದೆಯೋ ನೋಡಬೇಕು. ಸಿನಿಮಾ ತಂಡ ಅನುಮತಿ ಪಡೆದಿದೆಯಾ? ಅಂತ ತನಿಖೆ ಮಾಡಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

Raichur University ರಾಜ್ಯದ ರಾಯಚೂರು ವಿವಿಗೆ” ಮಹರ್ಷಿ ವಾಲ್ಮೀಕಿ ವಿವಿ,” ಆಗಿ ಮರುನಾಮಕರಣಕ್ಕೆ ರಾಜ್ಯ ಸಂಪುಟ ನಿರ್ಧಾರ

0

Raichur University ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ.ಕರ್ನಾಟಕ ಪ್ರವಾಸೋದ್ಯಮದ ಹೊಸ ನೀತಿಯು ಪ್ರವಾಸೋದ್ಯಮ ಕ್ಷೇತ್ರವನ್ನು ಅತ್ಯಂತ ಆದ್ಯತೆಯ ಉತ್ಸಾಹದಾಯಕ ಮತ್ತು ಪುಷ್ಟಿಕರಿಸಿದ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಸಮಾಜದ ಎಲ್ಲಾ ಸ್ಥರಗಳ ಬಡ, ಮಧ್ಯಮ ವರ್ಗದ ಮತ್ತು ಮೇಲ್ಮಧ್ಯಮ ವರ್ಗದ ಹಾಗೂ ಗಣ್ಯ ವರ್ಗದ ಪ್ರವಾಸಿ ಅವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಹೊಸ ನೀತಿಯನ್ನು ರಚಿಸಲಾಗಿದೆ.
ಇದರ ಜೊತೆಗೆ ರಾಯಚೂರು ವಿಶ್ವವಿದ್ಯಾಲಯಗೆ “ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ” ಮರುನಾಮಕಾರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ದಿನಾಂಕ, ನಿಗದಿ ಮಾಡುವ ಅಧಿಕಾರವನ್ನು ಸಿಎಂಗೆ ನೀಡಲಾಗಿದೆ. ಡಿಸೆಂಬರ್ ಎರಡನೇ ಅಥವಾ ಮೂರನೇ ವಾರದಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಆಗಿದೆ.

Raichur University ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದರು. ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ ಪರತಂತ್ರ ಜೀವಿ ಪ್ರಯೋಗಾಲಯಗಳು ಈ ನಾಲ್ಕು ಘಟಕಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು “ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ”ಯನ್ನು ಸ್ಥಾಪಿಸಲು ಒಪ್ಪಿಗೆಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅಭಿಯೋಜನಾ ಇಲಾಖೆಯ 12 ನಿವೃತ್ತ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕಕ್ಕೆ ಒಪ್ಪಿಗೆ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024″ಕ್ಕೆ ಅನುಮೋದನೆಕರ್ನಾಟಕ ಗೃಹ ಮಂಡಳಿಯ ಬೆಂಗಳೂರು ನಗರ ಜಿಲ್ಲೆ, ಅನೇಕಲ್ ತಾಲ್ಲೂಕು, ಸೂರ್ಯನಗರ 1ನೇ ಹಂತದ ನಿವೇಶನ ಸಂಖ್ಯೆ 953 ಮತ್ತು 454, 455ರಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಎರಡು ಬಹುಮಹಡಿ ವಸತಿ ಸಮುಚ್ಚಯಗಳನ್ನು (50 ಮತ್ತು 40 ಫ್ಲಾಟ್‌ಗಳು) ನಿರ್ಮಿಸುವ ಒಟ್ಟು ರೂ.101 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನ ಸೋಗಾನೆ ಗ್ರಾಮದಲ್ಲಿರುವ ಶಿವಮೊಗ್ಗ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ ರೂ. 127.44 ಕೋಟಿಗಳ ಹೆಚ್ಚುವರಿ ಮೊತ್ತಕ್ಕೆ ಅನುಮೋದನೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವ ಒಟ್ಟು ರೂ. 14.24 ಕೋಟಿಗಳ ಅಂದಾಜು ಮೊತ್ತದ ‘ಓದು ಕರ್ನಾಟಕ’ ಚಟುವಟಿಕೆಗೆ ಅನುಮೋದನೆ ಶಾಲಾ ಶಿಕ್ಷಣ ಇಲಾಖೆಯ 33 ಮಂದಿ “ಗ್ರೇಡ್-1 ವೃತ್ತಿ ಶಿಕ್ಷಕಗೆ ಗ್ರೂಪ್ ಬಿ ವೃಂದದ ‘ವಿಷಯ ಪರಿವೀಕ್ಷಕರು (ವೃತ್ತಿ ಶಿಕ್ಷಣ)’ ಹುದ್ದೆಗೆ 28.04.2000 ಆದೇಶದಲ್ಲಿ ನಿಗದಿಪಡಿಸಿರುವ ನೇಮಕಾತಿ ವಿಧಾನವನ್ನು ಅನುಸರಿಸಿ ಪದೋನ್ನತಿ ನೀಡಲು ಒಪ್ಪಿಗೆ ಸಮಾಜ ಕಲ್ಯಾಣ ಇಲಾಖೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೊಲೀಸ್ ಠಾಣೆಗಳೆಂದು ಘೋಷಿಸಲು ಹಾಗೂ ಸದರಿ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳಿಗೆ ಮಂಜೂರಾತಿ ನೀಡಲಾಯಿತು

H.K. Patil ಒಳಮೀಸಲಾತಿ ಜಾರಿಗೆ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ- ಸಚಿವ ಎಚ್.ಕೆ.ಪಾಟೀಲ್

0

H.K. Patil ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,” ಒಳಮೀಸಲಾತಿ ಕಲ್ಪಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿದೆ. ಹಾಗಾಗಿ, ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಅನುಮೋದನೆ ನೀಡಿದೆ ಎಂದಿದ್ದಾರೆ.

H.K. Patil ಒಳಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಈ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದೆ. ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸಚಿವ ಡಾ!! ಹೆಚ್‌.ಸಿ ಮಹದೇವಪ್ಪ ಮಾತನಾಡಿ, ಚುನಾವಣಾ ಮುನ್ನ ನಾವು ಒಳಮೀಸಲಾತಿ ಜಾರಿಯ ವಾಗ್ದಾನ ಮಾಡಿದ್ದೆವು. ಸುಪ್ರೀಂ ಕೋರ್ಟ್ ಕೂಡ ಒಳಮೀಸಲಾತಿ ಪರ ತೀರ್ಪು ನೀಡಿದೆ. ನಮ್ಮ ಸರ್ಕಾರ ಒಳಮೀಸಲಾತಿ ಜಾರಿಗೆ ಬದ್ದವಾಗಿದೆ ಎಂದು ಹೇಳಿದ್ದಾರೆ.

Friends Center Shivamogga ರಸಿಕರ ಮನರಂಜಿಸಿದ ವಿಜೇತ ಅಣತಿ ಅವರ ಸರೋದ್ ವಾದನ ಕಚೇರಿ

0

Friends Center Shivamogga ಶಿವಮೊಗ್ಗ ನಗರದ ಬಹುಮುಖಿ ವತಿಯಿಂದ 41ನೇ ಕಾರ್ಯಕ್ರಮವಾಗಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರೆಂಡ್ಸ್ ಸೆಂಟರ್ ಸಭಾಂಗಣದಲ್ಲಿ ವಿಜೇತ ಅಣತಿರವರ ಸರೋದ್ ನಾದ ಕಾರ್ಯಕ್ರಮ ಶ್ರೋತೃಗಳ ಮನಗೆಲ್ಲುವಲ್ಲಿ ಯಶಸ್ವಿಯಾಯಿತು.
ಇವರಿಗೆ ತಬಲಾದಲ್ಲಿ ತುಕಾರಾಂ ರಂಗದೊಳ್, ತಾನ್ಪುರದಲ್ಲಿ ಡಾ. ನೇತ್ರಾವತಿ ಸಾಥ್ ನೀಡಿದ್ದರು.
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ ಇವರ ಶಿಷ್ಯರಾಗಿರುವ ವಿಜೇತ ಅಣತಿಯವರು ಅಕಾಶವಾಣಿಯ ಕಲಾವಿದರಾಗಿದ್ದು, ಆಕಾಶವಾಣಿ ಧಾರವಾಡ, ಡಿಡಿ ಚಂದನ, ಐಸಿಸಿಆರ್ ಬೆಂಗಳೂರು, ಭಾರತೀಯ ವಿದ್ಯಾಭವನ ಬೆಂಗಳೂರು, ಸುಚಿತ್ರ ಬೆಂಗಳೂರು, ನೀನಾಸಂ ಹೆಗ್ಗೋಡು, ಮೈಸೂರು ಸಂಗೀತ ವಿದ್ಯಾಲಯ ಮುಂಬೈ, ಕರ್ನಾಟಕ ಸಂಗೀತ ನೃತ್ಯ Friends Center Shivamogga ಅಕಾಡೆಮಿಗಳಿಗಾಗಿ ಬಳ್ಳಾರಿಯ ಯುವ ಸಂಗೀತೋತ್ಸವ ಅಲ್ಲದೆ ಮುಂಬೈ, ಕೋಲ್ಕತ್ತಾ, ಮೈಸೂರು, ಕಾರ್ಕಳ, ಉಡುಪಿ, ಹಾಸನ… ಮುಂತಾದ ಸ್ಥಳಗಳಲ್ಲಿ ಸರೋದ್ ವಾದನದ ಕಚೇರಿಗಳನ್ನು ನೀಡಿ, ಗಮನ ಸೆಳೆದಿದ್ದಾರೆ. ತಮ್ಮ ಗುರುಗಳ ಜೊತೆಯೂ ಸಹ ವಾದಕರಾಗಿ ಕಾರ್ಯಕ್ರಮ ನೀಡಿ, ಸೈ ಎನಿಸಿಕೊಂಡಿದ್ದಾರೆ. ಇವರಿಗೆ ನಾದನಿಧಿ ಸಂಸ್ಥೆ ಹೊನ್ನಾಳಿ ಇವರು ಧಾರಿಣಿ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇವರ ಕೌಶಲ್ಯವನ್ನು ಮೆಚ್ಚಿಕೊಂಡಿರುವ ಸಂಗೀತ ವಿಮರ್ಶಕರು ಬರೆದಿರುವ ಲೇಖನಗಳು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟಗೊಂಡಿರವುದನ್ನು ಗಮನಿಸಬಹುದು.

Chamber Of Commerce Shivamogga ನಾವೆಲ್ಲರೂ ಸೇರಿ ಸ್ವಚ್ಛ ನಗರ ನಿರ್ಮಾಣ ಮಾಡೋಣ- ಬಿ.ಗೋಪಿನಾಥ್

0

Chamber Of Commerce Shivamogga ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಮಹತ್ತರ ಆಗಿರುತ್ತದೆ. ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಭಿಪ್ರಾಯಪಟ್ಟರು.

ನಗರದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ನಿರ್ದೇಶನದಂತೆ ನೆಹರು ಯುವ ಕೇಂದ್ರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವಜನರು ಪರಿಸರ ಸಂರಕ್ಷಣೆ ಮಾಡುವ ವಿಶೇಷ ಸಂಕಲ್ಪ ಹೊಂದಬೇಕು. ಕಾಳಜಿ ವಹಿಸುವ ಮೂಲಕ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು. ಸ್ವಚ್ಛ ನಗರ ನಿರ್ಮಾಣ ಮಾಡಲು ಸಹಕಾರ ನೀಡಬೇಕು. ನಾವೆಲ್ಲರೂ ಸೇರಿ ಸ್ವಚ್ಛ ಹಾಗೂ ಸುಂದರ ನಗರ ನಿರ್ಮಿಸೋಣ ಎಂದು ತಿಳಿಸಿದರು.

ಸಮಾಜ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಪ್ರತಿಯೊಬ್ಬರ ಪಾತ್ರವೂ ಮುಖ್ಯ ಆಗಿರುತ್ತದೆ. ಎಲ್ಲೆಂದರಲ್ಲಿ ಕಸ ಎಸೆಯದೆ ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಶ್ರಮದಾನ ಮಾಡುವ ಮೂಲಕ ಸಾರ್ವಜನಿಕ ಸ್ಥಳಗಳನ್ನೂ ಸ್ವಚ್ಛವಾಗಿಟ್ಟುಕೊಳ್ಳಲು ನಾವೆಲ್ಲರೂ ಮುಂದಾಗಬೇಕು. ಆರೋಗ್ಯಯುತ ವಾತಾವರಣ ನಿರ್ಮಾಣ ನಮ್ಮ ಗುರಿಯಾಗಬೇಕು. ಹಸಿರು ಪಟಾಕಿಗಳನ್ನು ಬಳಸುವುದರ ಮೂಲಕ ಮಾಲಿನ್ಯ ಕಡಿಮೆ ಮಾಡಬೇಕು ಎಂದರು.

Chamber Of Commerce Shivamogga ಕುವೆಂಪು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಶುಭಾ ಮರವಂತೆ ಮಾತನಾಡಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಭಿಯಾನ ನಡೆಸುತ್ತಿದ್ದು, ಎಲ್ಲರೂ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಶ್ರಮದಾನ ಕಾರ್ಯಕ್ರಮದಲ್ಲಿ 230ಕ್ಕೂ ಹೆಚ್ಚು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಾಲ್ಗೊಂಡು ಬಿ.ಹೆಚ್. ರಸ್ತೆ, ಗಾಂಧಿ ಬಜಾರ್ ಹಾಗೂ ವೀರಶೈವ ಕಲ್ಯಾಣ ಮಂದಿರ ರಸ್ತೆ ಸ್ವಚ್ಛ ಮಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಎಟಿಎನ್‌ಸಿಸಿ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ನಾಗರಾಜ್, ಸಹಪ್ರಾಧ್ಯಾಪಕ ನವೀನ್, ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎಟಿಎನ್‌ಸಿಸಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Shivamogga Rangayana ಸಾಂಸ್ಕೃತಿಕ ಚಟುವಟಿಕೆಗಳಿಂದ ಅನೇಕರು ದುಶ್ಚಟ ತ್ಯಜಿಸಿ ಉತ್ತಮ ವ್ಯಕ್ತಿತ್ವ ಹೊಂದಿದ್ದಾರೆ- ಸಂದೇಶ ಜವಳಿ

0

Shivamogga Rangayana ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾದಾಗ ಉತ್ತಮ ವ್ಯಕ್ತಿಯಾಗಿ ರೂಪಗೊಳ್ಳಬಹುದು ಎಂದು ರಂಗಾಯಣ ಮಾಜಿ ನಿರ್ದೇಶಕ ಸಂದೇಶ ಜವಳಿ ಹೇಳಿದರು.
ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಗೋಪಾಲಗೌಡ ರಂಗಮAದಿರದಲ್ಲಿ ರೋಟರಿ ಕ್ಲಬ್ ತೀರ್ಥಹಳ್ಳಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ತುಂಗಾ ಕಲೋತ್ಸವ ವಲಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ನಂತರ ಅನೇಕರು ದುಶ್ಚಟಗಳನ್ನು ತ್ಯಜಿಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡ ಉದಾಹರಣೆಗಳಿವೆ ಎಂದು ತಿಳಿಸಿದರು.
ರೋಟರಿ ಸಹಾಯಕ ಗವರ್ನರ್ ಎಚ್.ಎಂ.ಸುರೇಶ್, ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಗವಹಿಸುವುದರಿಂದ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗುತ್ತದೆ. ರೋಟರಿ ಸದಸ್ಯರಲ್ಲಿ ಉತ್ತಮ ಬಾಂಧವ್ಯ ವೃದ್ಧಿಸುತ್ತದೆ. ಪರಸ್ಪರಲ್ಲಿ ಒಡನಾಟ ಜೊತೆಗೆ ಕುಟುಂಬದ ಎಲ್ಲ ಸದಸ್ಯರು ಸೇರಿ ಮಾಡುವಂತಹ ಸಾಂಸ್ಕೃತಿಕ ಕಾರ್ಯಕ್ರಮ ರೋಟರಿ ಸಂಸ್ಥೆಗಳ ಅವಿಭಾಜ್ಯ ಅಂಗ. ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಇಲ್ಲಿ ವಿಜೇತ ತಂಡ ಕುಂದಾಪುರದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದರು.
Shivamogga Rangayana ಜಿಲ್ಲಾ ಸಾಂಸ್ಕೃತಿಕ ಉಪಾಧ್ಯಕ್ಷ ಧರ್ಮೇಂದ್ರ ಸಿಂಗ್ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜಮುಖಿ ಹಾಗೂ ಸೇವಾ ಕಾರ್ಯಗಳ ಜತೆಯಲ್ಲಿ ರೋಟರಿ ಸದಸ್ಯರಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಇದರಿಂದ ಪರಸ್ಪರ ಸಂವಹನ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ತೀರ್ಥಹಳ್ಳಿ ರೋಟರಿ ಕ್ಲಬ್ ಆತಿಥ್ಯದಲ್ಲಿ ನಡೆದ ಸಮಾರಂಭದಲ್ಲಿ 8 ರೋಟರಿ ಕ್ಲಬ್‌ಗಳಿಂದ 150ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು.
ಜೋನಲ್ ಲರ್ನಿಂಗ್ ಫೆಸಿಲಿಟೇಟರ್ ಕೆ.ಪಿ.ಎಸ್.ಸ್ವಾಮಿ, ಪಿ.ವಿ.ಭರತ್ ಕುಮಾರ್, ಶ್ರೀಕಾಂತ್ ಯಡಗರೆ, ರಾಧಾಕೃಷ್ಣ, ಸಂತೋಷ್, ಮಂಜುನಾಥ್ ರಾವ್ ಕದಂ, ಮಾಜಿ ಸಹಾಯಕ ಗವರ್ನರ್ ಜಿ ವಿಜಯಕುಮಾರ್.. ವಸಂತ ಹೋಬಳಿದಾರ್. ಡಾಕ್ಟರ್ ಗುಡದಪ್ಪ ಕಸಬಿ ರೋಟರಿ ಕ್ಲಬ್ ತೀರ್ಥಹಳ್ಳಿ ಕಾರ್ಯದರ್ಶಿ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Indian Telecom Regulatory Authority of India ಮೋಸದ ಕರೆ ಸಂದೇಶ ಮಾಡುವ ಫೋನ್ 800 ಕ್ಕೂ ಹೆಚ್ಚು ಘಟಕಗಳು & ವ್ಯಕ್ತಿಗಳನ್ನ ಟಿಲಿಕಾಂ ಪ್ರಾಧಿಕಾರ ಕಪ್ಪುಪಟ್ಟಿಗೆ ಸೇರಿಸಿ ದಿಟ್ಟಕ್ರಮ

0

Indian Telecom Regulatory Authority of India ಭಾರತೀಯ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಸ್ಪ್ಯಾಮ್ ಕರೆಗಳ ಬೆದರಿಕೆಯನ್ನು ತಡೆಯಲು ಮತ್ತು ಮೋಸದ/ವಂಚಿಸುವ ಸಂದೇಶಗಳನ್ನು ಫಾರ್ವರ್ಡ್ ಮಾಡುವ ಘಾತುಕ ಶಕ್ತಿಗಳಿಂದ SMS ಹೆಡರ್ ಮತ್ತು ಕಂಟೆಂಟ್ ಟೆಂಪ್ಲೇಟ್‌ಗಳ ದುರುಪಯೋಗವನ್ನು ತಡೆಯಲು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಕ್ರಮಗಳು ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡಲು ಮತ್ತು ಸ್ವಚ್ಛ ಮತ್ತು ಸುರಕ್ಷಿತ ಸಂದೇಶ ಪರಿಸರ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿವೆ. ಈ ವರ್ಷದ ಆಗಸ್ಟ್ 13 ರಂದು TRAI ನಿರ್ದೇಶನಗಳನ್ನು ನೀಡಿತು, ಯಾವುದೇ ಘಟಕವು ನಿಯಮಾವಳಿಗಳನ್ನು ಉಲ್ಲಂಘಿಸಿ ಪ್ರಚಾರದ ಧ್ವನಿ ಕರೆಗಳನ್ನು ಮಾಡುವುದು ಕಂಡುಬಂದರೆ ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಈ ನಿರ್ದೇಶನಗಳಿಗೆ ಪ್ರತಿಕ್ರಿಯೆಯಾಗಿ, 800 ಕ್ಕೂ ಹೆಚ್ಚು ಘಟಕಗಳು ಮತ್ತು ವ್ಯಕ್ತಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಮತ್ತು 1.8 ಮಿಲಿಯನ್‌ಗಿಂತಲೂ ಹೆಚ್ಚು ಮೊಬೈಲ್ ಸಂಖ್ಯೆಗಳು ಮತ್ತು ಟೆಲಿಕಾಂ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಅಕ್ಟೋಬರ್ 1 ರಿಂದ, 140xx ಸಂಖ್ಯಾ ಸರಣಿಯಿಂದ ಪ್ರಾರಂಭವಾಗುವ ಟೆಲಿಮಾರ್ಕೆಟಿಂಗ್ ಕರೆಗಳನ್ನು ಕಟ್ಟುನಿಟ್ಟಾದ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕಾಗಿ ಡಿಸ್ಟ್ರಿಬ್ಯೂಟೆಡ್ ಲೆಡ್ಜರ್ ಟೆಕ್ನಾಲಜಿ (ಬ್ಲಾಕ್‌ಚೈನ್) ಪ್ಲಾಟ್‌ಫಾರ್ಮ್‌ಗೆ ಸ್ಥಳಾಂತರಿಸಲಾಗಿದೆ.

Indian Telecom Regulatory Authority of India ಪ್ರವೇಶ ಪೂರೈಕೆದಾರರು ಸ್ವೀಕರಿಸುವವರಿಗೆ ಸಂದೇಶಗಳನ್ನು ಕಳುಹಿಸುವಲ್ಲಿ ಒಳಗೊಂಡಿರುವ ಘಟಕಗಳ ಪತ್ತೆಹಚ್ಚುವಿಕೆಯನ್ನು ಖಚಿತಪಡಿಸಿಕೊಳ್ಳಲು ತಾಂತ್ರಿಕ ಪರಿಹಾರಗಳನ್ನು ಅಳವಡಿಸಿದ್ದಾರೆ.

ಈ ಹೊಸ ವ್ಯವಸ್ಥೆಯು ಸಂದೇಶವನ್ನು ನಿರ್ವಹಿಸುವ ಪ್ರತಿಯೊಬ್ಬ ವ್ಯಕ್ತಿಯು ಕಳುಹಿಸುವವರಿಂದ ಹಿಡಿದು ಅಂತಿಮ ವಿತರಣೆಯವರೆಗೆ ಟ್ರ್ಯಾಕ್ ಮಾಡುವುದನ್ನು ಖಚಿತಪಡಿಸುತ್ತದೆ.

SN Channabasappa “ಏಕತೆಗಾಗಿ ಓಟ” ಕಾರ್ಯಕ್ರಮದಲ್ಲಿ ನಗರದ ಶಾಸಕರು ಮತ್ತು ಶಿವಮೊಗ್ಗ ಸಂಸದರು ಭಾಗಿ

0

SN Channabasappa ಭಾರತದ ಏಕತೆಗೆ ಮತ್ತು ಸಮಗ್ರತೆಗೆ ಶ್ರಮಿಸಿದ ದೇಶದ ಮೊದಲನೆಯ ಗೃಹ ಮಂತ್ರಿಗಳಾದ ಶ್ರೀ ವಲ್ಲಭಭಾಯ್ ಪಟೇಲರು ಹಾಗೂ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಬಿರ್ಸಾ ಮುಂಡಾ ಅವರ ಜನ್ಮ ದಿವಸದ ಸ್ಮರಣಾರ್ಥವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಆಯೋಜಿಸಿದ್ದ “ಏಕತೆಗಾಗಿ ಓಟ”ದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ, ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರೀ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Shivamogga Banjara Sangha ಇಲ್ಲಸಲ್ಲದ ಆರೋಪಮಾಡಿ ಬಂಜಾರ ಸಮುದಾಯಕ್ಕೆ ಮಸಿ ಬಳಿಯುವ ಷಡ್ಯಂತ್ರ- ನಾನ್ಯಾ ನಾಯ್ಕ

0

Shivamogga Banjara Sangha ಪಾಳು ಬಿದಿದ್ದ ಜಿಲ್ಲಾ ಬಂಜಾರ ಸಂಘದ ಜಾಗವನ್ನು ಅಭಿವೃದ್ಧಿಪಡಿಸಿ ಸಮುದಾಯ ಭವನ, ನಿರುದ್ಯೋಗಿ ಯುವಕ ಯುವತಿಯರಿಗೆ, ಸ್ಮರ್ಧಾತ್ಮಕ ಪರೀಕ್ಷೆಗೆ ತರಬೇತಿ ಕೇಂದ್ರ, ಬಂಜಾರ ಸಮುದಾಯದ ಪ್ರತಿಕವಾದ ವಿಶಿಷ್ಠ ಕಲೆಯಾದ ಹೆಣ್ಣು ಮಕ್ಕಳಿಗೆ ಕಸೂತಿ ತರಬೇತಿ ಕೇಂದ್ರ ಹಾಗೂ ಸಮಾಜದ ಭಾಷೆ, ಉನ್ನತ ಶಿಕ್ಷಣ, ಮೀಸಲಾತಿ ವಿಷಯ ಹಾಗೂ ಸಮಾಜದ ಅಭಿವೃದ್ಧಿ ಚಟುವಟಿಕೆಗಳಿಗೆ ಪ್ರೇರಣೆ ನೀಡುವ ಒಂದು ಕೇಂದ್ರವಾಗಿ ನಿರ್ಮಾಣ ಮಾಡಲಾಗಿದೆ.

ಅಭಿವೃದ್ಧಿ ಕಾರ್ಯವನ್ನು ಜೀರ್ಣಿಸಿಕೊಳ್ಳಲು ಆಗದೆ ಈ ರೀತಿಯ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಇಡಿ ಬಂಜಾರ ಸಮುದಾಯಕ್ಕೆ ಮಸಿ ಬಳಿಯುವ ಷಡ್ಯಂತ್ರ ರೂಪಿಸಿದ್ದಾರೆ ಎಂದು ಸಂಘದ ನಿರ್ದೇಶಕ ನಾನ್ಯಾ ನಾಯ್ಕ ಹೇಳಿದ್ದಾರೆ.

ಪ್ರೆಸ್ ಟ್ರಸ್ಟಿನಲ್ಲಿ ಸುದ್ದಿಗೋಷ್ಠಿಟಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಆಡಳಿತಾಧಿಕಾರಿ ನೇಮಕ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ವ್ಯಕ್ತಿಗಳು ಕೆಲಸ ಮಾಡಿದ್ದಾರೆ. ಸುಮಾರು 12 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬಂಜಾರ ಭವನ ನಿರ್ಮಾಣವಾಗಿದೆ. ನಿರ್ಮಾಣ ಕಾರ್ಯದಲ್ಲಿ ಭ್ರಷ್ಟಾಚಾರ ನಡೆದಿದಿ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾದ್ಯಮ ಸ್ಪಷ್ಟನೆ ನೀಡಲಾಗಿದ್ದರೂ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ.

Shivamogga Banjara Sangha ಈ ರೀತಿ ಆದೇಶವಾಗಿರುವುದು ನಿರಾಶಾದಾಯಕ ವಿಷಯವಾಗಿದೆ ಎಂದರು.
ಈವಿಷಯಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಹೋರಾಟ ನಡೆಸಿ ಸಮಾಜಕ್ಕೆ ತನ್ನ ಸೇವೆಯನ್ನು ಮುಂದುವರೆಸುವ ವಿಷಯದಲ್ಲಿ ಹಿಂದೆ ಬೀಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಟೀಕೆಗಳು ಸಾಯುತ್ತದೆ, ಅಭಿವೃದ್ಧಿ ಉಳಿಯುತ್ತದೆ .ಈ ನಿಟ್ಟಿನಲ್ಲಿ ಸಮಾಜದ ಬಂಧುಗಳು ಆತ್ಮ ವಿಶ್ವಾಸ ಕಳೆದುಕೊಳ್ಳದೇ ಈ ರೀತಿಯ ಕ್ಷುಲ್ಲಕ, ಕೆಲಸ ಮಾಡುವ ಮೂಲಕ ಸಮಾಜದ ಗೌರವಕ್ಕೆ ಧಕ್ಕೆ ತರುತ್ತಿರುವ ವ್ಯಕ್ತಿಗಳಿಗೆ ಕಿವಿ ಹಿಂಡುವ ಕೆಲಸ ಮಾಡುವ ಮೂಲಕ ಸರಿದಾರಿಗೆ ತರುವ ಕೆಲಸ ಮಾಡಬೇಕಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಕುಮಾರ್ ನಾಯ್ಕ್, ಹೀರಾ ನಾಯ್ಕ್, ಬೋಜ್ಯಾ ನಾಯ್ಕ್, ನಾಗೇಶ್ ನಾಯ್ಕ್, ವಾಸುದೇವ ನಾಯ್ಕ್, ಬಸವರಾಜ ನಾಯ್ಕ್ ಮೊದಲಾದವರಿದ್ದರು.