Friday, March 27, 2026
Friday, March 27, 2026
Home Blog Page 529

Sadhguru ಸದ್ಗುರು “ಜಗ್ಗಿ” ಮೇಲಿನ ಕೇಸ್.ಸುಪ್ರೀಂ ಕೋರ್ಟ್ ನಲ್ಲಿ ವಜಾ

Sadhguru ಜಗ್ಗಿ ವಾಸುದೇವ್ (ಸದ್ಗುರು) ನಡೆಸುತ್ತಿರುವ ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಬಂಧಿಯಾಗಿಸಿ, ಬ್ರೈನ್‌ವಾಶ್ ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ (ಅ.18) ವಜಾಗೊಳಿಸಿದೆ ಅಥವಾ ಪ್ರಕರಣವನ್ನೇ ಮುಕ್ತಾಯಗೊಳಿಸಿದೆ.

ಇಬ್ಬರು ಮಹಿಳೆಯರು ವಯಸ್ಕರಾಗಿದ್ದಾರೆ. ಹೇಬಿಯಸ್ ಕಾರ್ಪಸ್‌ನ ಉದ್ದೇಶ ಈಡೇರಿದೆ. ಆದ್ದರಿಂದ ಈ ವಿಚಾರದಲ್ಲಿ ಹೆಚ್ಚಿನ ತನಿಖೆಯ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಆದೇಶದಲ್ಲಿ ತಿಳಿಸಿದೆ.
ಹೇಬಿಯಸ್ ಕಾರ್ಪಸ್‌ ಅರ್ಜಿಯಲ್ಲಿ ಮಾಡಿರುವ ಇತರ ಆರೋಪಗಳ ಕುರಿತು ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ನೀಡಿರುವ ನಿರ್ದೇಶನವನ್ನೂ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಇದರಿಂದ ಜಗ್ಗಿವಾಸುದೇವ್‌ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ವರ್ಗಾಯಿಸಿಕೊಂಡಿತ್ತು. ಏಕೆಂದರೆ, ಮದ್ರಾಸ್ ಹೈಕೋರ್ಟ್‌ ಆದೇಶದ ವಿರುದ್ದ ಇಶಾ ಫೌಂಡೇಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಪ್ರಕರಣದ ವಿವರ : ತಮ್ಮ ಇಬ್ಬರು ಪುತ್ರಿಯರಾದ ಗೀತಾ ಕಾಮರಾಜ್ ಅಲಿಯಾಸ್ ಮಾ ಮತಿ (42) ಮತ್ತು ಲತಾ ಕಾಮರಾಜ್ ಅಲಿಯಾಸ್ ಮಾ ಮಾಯು(39) ಅವರು ಇಶಾ ಸಂಸ್ಥೆಯೊಳಗೆ ಬಂಧಿಯಾಗಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಎಸ್ ಕಾಮರಾಜ್ ಎಂಬವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

Sadhguru ಇಶಾ ಯೋಗ ಕೇಂದ್ರದಲ್ಲಿನ ಬೋಧನೆಗಳಿಂದ ಪ್ರಭಾವಿತರಾದ ನನ್ನ ಹೆಣ್ಣುಮಕ್ಕಳು ಬ್ರೈನ್ ವಾಶ್ ಆಗಿದ್ದು, ಸನ್ಯಾಸಿ ಮಾರ್ಗವನ್ನು ಅನುಸರಿಸಿದ್ದಾರೆ. ಅವರ ಹೆಸರನ್ನು ಬದಲಾಯಿಸಲಾಗಿದೆ. ಈಗ ಪೋಷಕರನ್ನೂ ಭೇಟಿ ಮಾಡಲು ಅವರು ನಿರಾಕರಿಸುತ್ತಿದ್ದಾರೆ ಎಂದು ಅರ್ಜಿದಾರ ಕಾಮರಾಜ್ ಆರೋಪಿಸಿದ್ದರು.

2016ರಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕಳೆದ ಸೆಪ್ಟೆಂಬರ್ 30ರಂದು ನಡೆಸಿದ್ದ ಹೈಕೋರ್ಟ್,ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ವಿವರಗಳನ್ನು ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ನ್ಯಾಯಾಲಯ ಆದೇಶಿಸಿತ್ತು.
ಕಾಮರಾಜ್ ಅವರ ಇಬ್ಬರು ಪುತ್ರಿಯರು ಹೈಕೋರ್ಟ್ ಮುಂದೆ ಹಾಜರಾಗಿ, ನಮ್ಮನ್ನು ಬಂಧಿಸಿಟ್ಟಿಲ್ಲ, ಸ್ವಇಚ್ಚೆಯಿಂದ ಯೋಗ ಕೇಂದ್ರದಲ್ಲಿ ಇದ್ದೇವೆ ಎಂದು ಹೇಳಿದ್ದರು. ಆದರೂ, ಸತ್ಯ ತಿಳಿಯಲು ಈ ವಿಷಯದಲ್ಲಿ ಕೆಲ ಪರಿಶೀಲನೆಯ, ಚರ್ಚೆಯ ಅಗತ್ಯವಿದೆ ಎಂದಿದ್ದ ಹೈಕೋರ್ಟ್, ಇಶಾ ಯೋಗ ಕೇಂದ್ರದ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸೂಚಿಸಿತ್ತು.

ಈ ಆದೇಶದ ಮರುದಿನವೇ ಇಶಾ ಯೋಗ ಕೇಂದ್ರಕ್ಕೆ ಪೊಲೀಸರು ಮತ್ತು ಅಧಿಕಾರಿಳು ತೆರಳಿ ಪರಿಶೀಲನೆ ನಡೆಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಇಶಾ ಫೌಂಡೇಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

Machenahalli Milk Union ಶಿವಮೊಗ್ಗದಲ್ಲಿ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿ & ಸಿಬ್ಬಂದಿಗಳಿಗೆ ವಿಶೇಷ ಕಾರ್ಯಾಗಾರ

0

Machenahalli Milk Union ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಾಕರ ಸಂಘಗಳ ಒಕ್ಕೂಟ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಅ.19 ರಂದು ಮಾಚೇನಹಳ್ಳಿಯ ಹಾಲು ಒಕ್ಕೂಟದ ಕುರಿಯನ್ ಸಭಾಂಗಣದಲ್ಲಿ ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಸಹಕಾರ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

Karnataka Hindu Religious Organization ಬಿ & ಸಿ ಮುಜರಾಯಿ ದೇಗುಲಗಳ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

0

Karnataka Hindu Religious Organization ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ಬಿ ಮತ್ತು ಸಿ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ನಿಗಧಿತ ನಮೂನೆ -1(ಬಿ) (22ನೇ ನಿಯಮ) ನ್ನು ಆಯಾ ತಾಲೂಕು ಕಚೇರಿಗಳಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ನ.19ರೊಳಗಾಗಿ ಸಂಬಂಧಿಸಿದ ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ.
Karnataka Hindu Religious Organization ಅರ್ಜಿ ಸಲ್ಲಿಸ ಬಯಸುವ ಆಸಕ್ತರಿಗೆ ಅರ್ಹತೆಯಗಳು : ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವ ಮಾತ್ರ ಪಡೆಯಬಹುದಾಗಿದೆ. ದೇವರಲ್ಲಿ ನಂಬಿಕೆಯುಳ್ಳವರಾಗಿದ್ದು, ಒಳ್ಳೆಯ ವರ್ತನೆ ಹಾಗೂ ಹೆಸರು ಹೊಂದಿದ್ದ ಹಾಗೂ ದೇವಾಲಯ/ಸಂಸ್ಥೆಯು ಇರುವ ಪ್ರದೇಶದಲ್ಲಿ ಗೌರವಕ್ಕೆ ಪಾತ್ರರಾಗಿರಬೇಕು.
ಅನರ್ಹತೆಗಳು : ಒಂದು ಸಕ್ಷಮ ನ್ಯಾಯಾಲಯದಿಂದ ಅವಿಮುಕ್ತ ದಿವಾಳಿಯೆಂದು ಘೋಷಿತನಾಗಿರಬಾರದು. ಅಸ್ವಸ್ಥಚಿತ್ತನಾಗಿದ್ದು ಮತ್ತು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲಾಗಿದ್ದರೆ ಅಥವಾ ಕಿವುಡು ಅಥವಾ ಮೂಕ ಅಥವಾ ಕುಷ್ಟ ಅಥವಾ ಇತರೆ ಯಾವುದೇ ಭಯಂಕರ ಅಥವಾ ಸಾಂಕ್ರಾಮಿಕ ಕಾಯಿಲೆಯಿಂದ ಪೀಡಿತನಾಗಿರಬಾರದು. ದೇವಾಲಯದ ಯಾವುದೇ ಸ್ವತ್ತಿನ ಅಥವಾ ಮಾಡಿಕೊಳ್ಳಲಾದ ಕರಾರಿನ ಸಂಬAಧದಲ್ಲಿ ಈಗಿರುವ ಗುತ್ತಿಗೆ ಸಂಸ್ಥೆಗಾಗಿ ಮಾಡಲಾದ ಕಾಮಗಾರಿಯಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷ ಹಿತಾಸಕ್ತಿ ಹೊಂದಿದ್ದರೆ ಅಥವಾ ಸಂಸ್ಥೆಗಾಗಿ ತಾನು ಕೊಡಬೇಕಾದ ಯಾವುದೇ ಪ್ರಕಾರದ ಬಾಕಿಯನ್ನು ಕೊಡದೆ ಉಳಿಸಿಕೊಂಡಿದ್ದರೆ, ಸಂಸ್ಥೆಯ ಪರವಾಗಿ ಅಥವಾ ವಿರುದ್ಧವಾಗಿ ಕಾನೂನು ವೃತ್ತಿಗಾರನಾಗಿ ಹಾಜರಾಗುತ್ತಿದ್ದರೆ, ನೈತಿಕ ಅಧಃಪತನವನ್ನು ಒಳಗೊಳ್ಳುವ ಒಂದು ಅಪರಾಧಕ್ಕಾಗಿ ಕ್ರಿಮಿನಲ್ ನ್ಯಾಯಾಲಯದಿಂದ ಶಿಕ್ಷಿತನಾಗಿದ್ದು ಮತ್ತು ಅಂತಹ ಶಿಕ್ಷೆಯನ್ನು ಹಿಂತೆಗೆದುಕೊAಡಿದ್ದರೆ ಅಥವಾ ಅಪರಾಧವನ್ನು ಕ್ಷಮಿಸಿರದಿದ್ದರೆ, ಯಾವಾಗಲಾದರೂ ಸಂಸ್ಥೆಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದರೆ ಅಥವಾ ಅಂತಹ ಸಂಸ್ಥೆಯ ಅರ್ಚಕರಾಗಿ ಅಲ್ಲದೆ ಯಾವುದೇ ಪದವಿಯನ್ನು ಧಾರಣೆ ಮಾಡಿದ್ದರೆ ಅಥವಾ ಒಬ್ಬ ನೌಕರನಾಗಿದ್ದರೆ ಅಥವಾ ಅಂತಹ ಸಂಸ್ಥೆಯಿAದ ಯಾವುದೇ ಉಪಲಬ್ಧಿಗಳನ್ನು ಅಥವಾ ಅನುವಂಶಿಕ ಲಾಭವನ್ನು ಸ್ವೀಕರಿಸುವ ವ್ಯಕ್ತಿಯಾಗಿದ್ದರೆ, ಮದ್ಯಪಾನ ಅಥವಾ ಮಾದಕದ್ರವ್ಯ ವ್ಯಸನಿಯಾಗಿದ್ದರೆ, ಹಿಂದೂ ಅಲ್ಲದಿದ್ದರೆ ಅಥವಾ ಆಗಿದ್ದು ತರುವಾಯದಲ್ಲಿ ಯಾವುದೇ ಇತರೆ ಧರ್ಮಕ್ಕೆ ಪರಿವರ್ತಿತನಾಗಿದ್ದರೆ, ಅವನು ಯಾವುದೇ ಅಧಿಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿ ಸದಸ್ಯನಾಗಿ ನೇಮಕಗೊಳ್ಳಲು ಅಥವಾ ಮುಂದುವರೆಯಲು ಅನರ್ಹನಾಗಿರುತ್ತಾನೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ದೇವಾಲಯಗಳ ಮಾಹಿತಿಗಾಗಿ ಆಯಾ ತಾಲೂಕು ತಹಶೀಲ್ದಾರರನ್ನು ಸಂಪರ್ಕಿಸುವುದು.

Omar Abdullah ಕೊನೆಗೂ ಕಾಶ್ಮೀರಿ ಹಿಂದುಗಳ‌ ಬಗ್ಗೆ ಮೆದು ಧೋರಣೆ ತೋರಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲ.

0

Omar Abdullah ನ್ಯಾಷನಲ್ ಕಾನ್ಫರೆನ್ಸ್ “ಕಾಶ್ಮೀರಿ ಹಿಂದೂಗಳು ತಮ್ಮ ಮನೆಗಳಿಗೆ ಮರಳುವ ಸಮಯ ಬಂದಿದೆ” ಎಂದು ಘೋಷಿಸುತ್ತದೆ

ಕಾಶ್ಮೀರಿ ಪಂಡಿತರು ಮತ್ತು ಜಮ್ಮುವಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಅವರು ಕೆಲಸ ಮಾಡುತ್ತಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಘೋಷಿಸುತ್ತದೆ.

Omar Abdullah “ನಾವು ಭಾರತೀಯರು ಮತ್ತು ನಾವು ಎಲ್ಲರನ್ನು ಕರೆದುಕೊಂಡು ಹೋಗಲು ಬಯಸುತ್ತೇವೆ”
ಎಂದು ಜಮ್ಮು ಮತ್ತು‌ ಕಾಶ್ಮೀರ ರಾಜ್ಯದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಅವರು ತಮ್ಮ ಪಕ್ಷ ಆಡಳಿತಕ್ಕೆ ಬರುವ ಭರವಸೆ ಬಂದ ಕ್ಷಣ ಈ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ .
ಇಂಡಿ ಸಮೂಹದ ಕೆಲವು ಪಕ್ಷಗಳಿಗೆ ಒಮರ್ ಅಬ್ದುಲ್ಲ‌ ಹೇಳಿಕೆ ಕೊಂಚ ಇರಿಸುಮುರಿಸಾಗುವುದೇನೊ?.
ಇಲ್ಲಿಯವರೆಗೂ ಪ್ರತ್ಯೇಕ ಕಾಶ್ಮೀರಕ್ಕೆ ಹಾತೊರೆಯುತ್ತಿದ್ದ ಮಿತ್ರ ಪಕ್ಷಗಳು‌ ಈಗ
ಆತ್ಮಾವಲೋಕನ ಮಾಡಿಕೊಳ್ಳುವಂತಾಗಿದೆ.
ಜಮ್ಮು ಭಾಗದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಕಾಶ್ಮೀರ ಭಾಗದಲ್ಲಿ ಒಮರ್ ಅಬ್ದುಲ್ಲ ಅವರ ಎನ್ ಸಿ. ಪಕ್ಷ ಪ್ರಬಲವಾಗಿದೆ. ಇಂಡಿ ಸಮೂಹದ ಕಾಂಗ್ರೆಸ್ ,ಇತರ ಪಕ್ಷಗಳೀಗ ವಾಸ್ತವ ಪರಿಸ್ಥಿತಿಗನುಗುಣವಾಗಿ ತಮ್ಮ ಧೋರಣೆಯನ್ನ ಬದಲಿಸಿಕೊಳ್ಳುವ ಜರೂರು ಉಂಟಾಗಿದೆ. ಕಾಂಗ್ರೆಸ್ ಕೇವಲ ಒನ್ ಪಾಯಿಂಟ್ ಅಜೆಂಡ ಆಗಿ” ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ದಕ್ಕಬೇಕು ಎಂದು ಒಂದೇ ಸ್ವರವೆತ್ತಿದೆ.
370 ನೇ ವಿಧಿ ರದ್ದತಿಯನ್ನ ಒಪ್ಪಿಕೊಂಡ ಮನಸ್ಥಿತಿ ತೋರಿಸಲು ಇನ್ನು ಅವಕ್ಕೆ ಏನೋ ಮುಜುಗರ ಆದಂತಿದೆ.
ಇಡೀ ದೇಶದ ಜನ 370 ನೇ ವಿಧಿ ರದ್ದತಿ‌ ಸ್ವಾಗತಿಸಿದರೆ ಕಾಂಗ್ರೆಸ್ ಮುಂತಾದ ಪಕ್ಷಗಳು ಯಾಕೆ ಸ್ಪಷ್ಡ ಪ್ರತಿಕ್ರಿಯೆ ನೀಡಿಲ್ಲ ಎಂಬುದೇ ಯಕ್ಷ ಪ್ರಶ್ನೆ.

Klive Special Article ಅಂತೂ ಒಟ್ಟಾಗಿ ಬನ್ನಿ ಲೇ: ಎಚ್.ಕೆ.ವಿವೇಕಾನಂದ.

0

Klive Special Article ನೊಂದವರ ನೋವ ನೋಯದವರೆತ್ತ ಬಲ್ಲರೋ………..

ಇಲ್ಲದವರ ನೋವನ್ನು ಅರಿಯಲಾಗದ ಸಾಹಿತ್ಯ,

ಉಳ್ಳವರ ಕ್ರೌರ್ಯವನ್ನು ಖಂಡಿಸಲಾಗದ ಬರಹ,

ಶೋಷಿತರ ಧ್ವನಿಯನ್ನು ಎತ್ತಿಹಿಡಿಯಲಾಗದ ಲೇಖನ,

ಶೋಷಕರ ದೌರ್ಜನ್ಯ ಟೀಕಿಸಲಾಗದ ಪ್ರಬಂಧ,

ಸಮಾನತೆಯನ್ನು ಮೂಡಿಸಲಾಗದ ಚರ್ಚೆ,

ಅಮಾನವೀಯತೆಯನ್ನು ದಿಕ್ಕರಿಸಲಾಗದ ಕವಿತೆ,

ಪರಿಸರ ನಾಶವನ್ನು ತಡೆಯಲಾಗದ ಕಥೆ,

ಭ್ರಷ್ಟತೆಯನ್ನು ಹೋಗಲಾಡಿಸಲಾಗದ ಅಂಕಣಗಳು,

ಸಂಬಂಧಗಳನ್ನು ಬೆಸೆಯಲಾಗದ ಕಾದಂಬರಿ,

ವಿಷವಿಕ್ಕುವ ಜನರನ್ನು ಗುರುತಿಸಲಾಗದ ಅಕ್ಷರಗಳು,

ಪ್ರೀತಿಯನ್ನು ಪ್ರೀತಿಸಲಾಗದ ಮನಸ್ಸುಗಳು,

ಮೌಲ್ಯಗಳು ನಾಶವಾಗುವುದನ್ನು ರಕ್ಷಿಸದ ಪದಗಳು,

ಇತರರ ಮನ ನೋಯಿಸುವ ವಾಕ್ಯಗಳು,

ಕಷ್ಠಗಳನ್ನು ನಿವಾರಿಸಲಾಗದ ಪ್ರವಚನಗಳು,

ದುಷ್ಟತನವನ್ನು ಮೆಟ್ಟಿ ನಿಲ್ಲದ ಭಾಷಣಗಳು,

ಭ್ರಮೆಗಳನ್ನು ಸೃಷ್ಟಿ ಮಾಡುವ ಹರಿಕಥೆಗಳು,

ಸತ್ಯವನ್ನು ಹೇಳಲಾಗದ ಚಿತ್ರಕಲೆ,

ಮಾನವೀಯ ಮೌಲ್ಯಗಳಿಲ್ಲದ ಸಿನಿಮಾ,

ಅವಾಸ್ತವಿಕ ಆದರ್ಶಗಳನ್ನು ತುಂಬುವ ಗ್ರಂಥಗಳು,

ಮನಸ್ಸಿನ ದುಗುಡವನ್ನು ಕಡಿಮೆ ಮಾಡಲಾಗದ ಜ್ಞಾನ,

ಭಾವನೆಗಳನ್ನು ನಿಯಂತ್ರಿಸಲಾಗದ ಭಕ್ತಿ,

ಇವು ನಿಮ್ಮ ಅಭಿವ್ಯಕ್ತಿಯ ಮಾಧ್ಯಮಗಳಾದರೂ,

ಅದನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ ನಿಮಗಿದ್ದರೂ,

ಅದು ಕೇವಲ ನಿಮ್ಮ ಬುದ್ದಿಯ ಪ್ರದರ್ಶನ,

ಸ್ವಾರ್ಥದ ಪ್ರತಿಬಿಂಬ,

ಅಹಂನ ತೋರ್ಪಡೆ,

ಅಂತರಾಳದ ಅಸಹಿಷ್ಣುತೆಯ ಪ್ರಕಟಣೆ,

ಪ್ರಶಸ್ತಿ, ಬಿರುದು ಬಾವಲಿಗಳ ಆಸೆ ಅಷ್ಟೇ,

ಮೇಲೆ ಹೇಳಿದ ಎಲ್ಲವೂ ವ್ಯಕ್ತಿಯ, ಸಮಾಜದ, ದೇಶದ, ವಿಶ್ವದ,

ಜೀವಪರ ಹಿತದೃಷ್ಟಿ ಹೊಂದಿದ್ದರೆ ಮಾತ್ರ ಅದು ನಿಜಕ್ಕೂ,

ನಿಸ್ವಾರ್ಥ ಹೃದಯಗಳ ಆತ್ಮಸಾಕ್ಷಿಯ ಪ್ರತಿಬಿಂಬ,

ಅದು ಸಾಧ್ಯವಾದದ್ದೇ ಆದರೆ,
ನಿಮ್ಮ ವ್ಯಕ್ತಿತ್ವ,

ಉತ್ಕೃಷ್ಟ ಮಟ್ಟದಲ್ಲಿದೆ ಎಂದೇ ಅರ್ಥ,

ಅದಕ್ಕಾಗಿ…….

ಸಿನಿಮಾ ಮಾಡೋಣ ಬನ್ನಿ,

ಹೊಡೆದಾಟಗಳಿಲ್ಲದ – ರಕ್ತ ಚೆಲ್ಲದ – ಕುತಂತ್ರಗಳಿಲ್ಲದ –
ಆಕರ್ಷಕ – ಸೃಜನಾತ್ಮಕ – ಮನೋರಂಜನಾತ್ಮಕ –
ಮೌಲ್ಯಗಳನ್ನು ಎತ್ತಿ ಹಿಡಿಯುವ ಚಿತ್ರ,

ಸಾಹಿತ್ಯ ರಚಿಸೋಣ ಬನ್ನಿ,

ದ್ವೇಷಕಾರದ – ವಿಷಕಕ್ಕದ – ಪ್ರತಿಷ್ಠೆ ಮೆರೆಯದ –
ಚೆಂದದ ಭಾಷೆಯ – ಪ್ರೀತಿಯ ಚುಂಬನದ – ಮಾನವೀಯ ಬರಹ,

ಚಿತ್ರ ಬಿಡಿಸೋಣ ಬನ್ನಿ,

ಆತ್ಮವಂಚನೆಯಿಲ್ಲದ – ಬೆಂಕಿಯುಗುಳದ – ಅಶ್ಲೀಲವಲ್ಲದ –
ಪ್ರಕೃತಿಯ ಮಡಿಲಿನ – ಸೌಂದರ್ಯದ ಬೀಡಿನ – ಮನಮೋಹಕ ದೃಶ್ಯ,

ಸಂಗೀತ ನುಡಿಸುತ್ತಾ ಹಾಡೋಣ ಬನ್ನಿ,

ಅಹಂಕಾರಗಳಿಲ್ಲದ – ಪಂಥಬೇದಗಳಿಲ್ಲದ – ಕೃತಿಮತೆಯಿಲ್ಲದ –
ಮನಕೆ ಮುದನೀಡುವ – ಆಹ್ಲಾದಕರ – ಆರಾಧನಾ ಭಾವದಿಂದ,

ಪರಿಸರ ಉಳಿಸೋಣ ಬನ್ನಿ,

ವಿಷಗಾಳಿಯಿಲ್ಲದ – ಕಲ್ಮಶನೀರಲ್ಲದ – ಆಹಾರ ಕಲಬೆರಕೆಯಾಗದ

  • ಹಚ್ಚಹಸಿರಿನ – ಸ್ವಚ್ಚ ಗಾಳಿಯ – ಶುಧ್ಧ ನೀರಿನ ಪ್ರಕೃತಿ,

ಸಂಘಟಿತರಾಗೋಣ ಬನ್ನಿ,

ಸ್ವಾರ್ಥಿಗಳಾಗದ – ಘರ್ಷಣೆಗಳಿಲ್ಲದ – ಸೇವಾಮನೋಭಾವದ –
ತ್ಯಾಗದ – ಪ್ರಾಮಾಣಿಕತೆಯ – ಅರ್ಪಣಾಮನೋಭಾವದ ಸಂಸ್ಥೆಯೊಂದಿಗೆ,

ಆಡಳಿತ ನಡೆಸೋಣ ಬನ್ನಿ,

ಭ್ರಷ್ಟತೆಯಿಲ್ಲದ – ದೌರ್ಜನ್ಯಗಳಿಲ್ಲದ – ಅನ್ಯಾಯ ಮಾಡದ –
ಸಮಾನತೆ – ಸ್ವಾತಂತ್ರ್ಯ – ಸೋದರತೆಯ ಜೀವಪರ ಸರ್ಕಾರ,

ಬದುಕೋಣ ಬನ್ನಿ,

ಚಿಂತೆಗಳಿಲ್ಲದ – ಜಿಗುಪ್ಸೆಗಳಿಲ್ಲದ – ನೋವುಗಳಿಲ್ಲದ –
ನೆಮ್ಮದಿಯ – ಆನಂದದಾಯಕ – ಸುಖದ ಜೀವನ,

ಮನುಷ್ಯರಾಗೋಣ ಬನ್ನಿ,

ಕಪಟತನವಿಲ್ಲದ – ದುರ್ಬುದ್ಧಿಗಳಿಲ್ಲದ – ಮನೋವಿಕಾರಗಳಿಲ್ಲದ –
ಜ್ಞಾನಸ್ಥ – ಧ್ಯಾನಸ್ಥ – ಯೋಗಸ್ಥ – ಕರ್ಮಸ್ಥ – ಜೀವಿಗಳಾಗಿ.

ಇದು ತಿರುಕನ ಕನಸಲ್ಲ ………

ನನಸಾಗಬಹುದಾದ ನಾಗರೀಕತೆಯ ಹೊಸ ಮನ್ವಂತರ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್. ಕೆ.
9844013068……

Malenadu Development Foundation ಕ್ರೀಡೆ ತರಬೇತಿ ನೀಡುತ್ತಿರುವ ಸಮಯದಲ್ಲಿಯೇ ಅಸು ನೀಗಿದ ಶಿಕ್ಷಕ ಗಜಾನನ ಹಿರೇಮಠ

0

Malenadu Development Foundation ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದ ವೇಳೆ, ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹೀರೆಮಠ
ಮೃತ ಶಿಕ್ಷಕ ಹಿರೇಮಠ ಕ್ರಾಫ್ಟ್ ಜೊತೆಗೆ ಮಕ್ಕಳಿಗೆ ವಿವಿಧ ಕ್ರೀಡೆಗಳ ಬಗ್ಗೆ ತರಬೇತಿ ನೀಡುತ್ತಿದ್ದರು.

Malenadu Development Foundation ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಮಾರ್ಗಮಧ್ಯದಲ್ಲಿ ಅವರು ಅಸುನೀಗಿದ್ದಾರೆ. ಮೃತರು ಪತ್ನಿ
ಹಾಗೂ ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.
ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ.ಈ., ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಾಲಾ ಮುಖ ಶಿಕ್ಷಕರು, ಆಡಳಿತ ಮಂಡಳಿ ಭೇಟಿ ನೀಡಿ, ಕುಟುಂಬಕ್ಕೆ ಸಂತಾಪ ಹೇಳಿದ್ದಾರೆ.

Shivamogga Police ಅನಾಮಧೇಯ ವ್ಯಕ್ತಿ ಶವ ಪತ್ತೆ.ಶಿವಮೊಗ್ಗ ಪೊಲೀಸ್ ಮಾಹಿತಿ

0

Shivamogga Police ಅ.16 ರಂದು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟೆ ಆಂಜನೇಯ ದೇವಸ್ಥಾನದ ಎದುರುಗಡೆಯ ಮನೆಯ ಆವರಣದಲ್ಲಿ ಸುಮಾರು 30 ರಿಂದ 35 ವರ್ಷದ ಅನಾಮದೇಯ ವ್ಯಕ್ತಿಯು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದು, ಈತನ ಚಹರೆ ಸುಮಾರು 05.05 ಅಡಿ ಎತ್ತರ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಕೂದಲು ಹಾಗೂ 1 ಇಂಚು ಉದ್ದದ ಕುರುಚಲು ಗಡ್ಡ ಇರುತ್ತದೆ. ಮೃತನ ಮೈಮೇಲೆ ತಿಳಿ ನೀಲಿ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
Shivamogga Police ಈ ಮೃತನ ಹೆಸರು, ವಾರಸ್ಸುದಾರರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ವಾರಸ್ಸುದಾರರು ಪತ್ತೆಯಾದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

District Backward Classes Welfare Department ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೃತ್ತಿಪರ ಪದವಿ/ಸ್ನಾತಕೋತ್ತರ ಪದವಿ ಅವಧಿ ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಕೊನೇ ದಿನಾಂಕ ವಿಸ್ತರಣೆ

0

District Backward Classes Welfare Department ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ www.ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

District Backward Classes Welfare Department ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

Rotary Club Shivamogga ಅಭಿವೃದ್ಧಿಯು ಸಬಲೀಕರಣ,ಮಾನವ ಹಕ್ಕುಗಳು, ನ್ಯಾಯ.& ಸಾಮೂಹಿಕ ಕ್ರಿಯಾ ತತ್ವ ಆಧರಿಸಿದೆ- ಪ್ರೊ.ಕುಮಾರಸ್ವಾಮಿ

0

Rotary Club Shivamogga ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ವಿಚಾರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಸಮುದಾಯದ ಮೂಲ ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಬಹು ಮುಖ್ಯ ಎಂದು ತಿಳಿಸಿದರು.
ಸಮುದಾಯದ ಅಭಿವೃದ್ಧಿಯು ಸಬಲೀಕರಣ, ಮಾನವ ಹಕ್ಕುಗಳು ಸೇರ್ಪಡೆ, ಸಾಮಾಜಿಕ ನ್ಯಾಯ, ಸ್ವನಿರ್ಣಯ ಮತ್ತು ಸಾಮೂಹಿಕ ಕ್ರಿಯೆಗಳ ತತ್ವಗಳನ್ನು ಆಧರಿಸಿದೆ ಎಂದರು.
Rotary Club Shivamogga ಸಹಾಯಕ ಗವರ್ನರ್ ಸುರೇಶ್ ಮಾತನಾಡಿ, ಸಮುದಾಯದಲ್ಲಿ ಬದಲಾವಣೆ ಮಾಡಲು ಅಗತ್ಯವಿರುವ ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸಲು ಪ್ರಯತ್ನಿಸುವುದು ಮುಖ್ಯ ಉದ್ದೇಶ ಎಂದು ಹೇಳಿದರು.
ರೋಟರಿ ವಲಯ 11ರ ಸಹಾಯಕ ಗವರ್ನರ್, ಏಳು ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ, ವಲಯ ಲೆಫ್ಟಿನೆಂಟ್, ವಲಯ ತರಬೇತುದಾರ, ವಲಯ ಸಂಯೋಜಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಮಾತನಾಡಿ, ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ಸಾಮಾಜಿಕ ಚಟುವಟಿಕೆಗಳ ಜತೆಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಎಲ್ ಸ್ವಾಮಿ, ಮಂಜುನಾಥ್ ರಾವ್ ಕದಂ, ರಾಧಾಕೃಷ್ಣ, ಸಂತೋಷ್ ಹಾಗೂ ಈಶ್ವರ ಬಿವಿ, ರವಿ ಕೋಟೋಜಿ, ಚುಡಾಮಣಿ ಪವಾರ್, ಜಿಎನ್ ಪ್ರಕಾಶ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ರೋಟರಿಯ ಎಲ್ಲ ಪದಾಧಿಕಾರಿಗಳು ಹಾಗೂ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು

Actor Sudeep ಬಿಗ್ ಬಾಸ್ ಗೆ ಗುಡ್ ಬೈ ಹೇಳಲಿರುವ ಜನಪ್ರಿಯ ನಟಕಿಚ್ಚ ಸುದೀಪ್

0

Actor Sudeep ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ ನ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಸುದೀಪ್ ಘೋಷಣೆ ಮಾಡಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಬಿಗ್ಬಾಸ್ 11 ಸೀಸನ್ ನ ಕಾರ್ಯಕ್ರಮವನ್ನು ಈಗಾಗಲೇ ನಟ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಿದ್ದಾರೆ. ಕಳೆದ 10 ಸೀಸನ್ ಗಳಲ್ಲಿ ನಿರೂಪಣೆ ನಡೆಸಿ ಕೊಟ್ಟ ಸುದೀಪ್ ಈಗ ಏಕಾಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Actor Sudeep ಭರ್ಜರಿ ಟಿಆರ್ಪಿ ಮತ್ತು ಟಿವಿಆರ್ ಪಡೆದುಕೊಳ್ಳುವ ಮೂಲಕ ಉಳಿದ ಎಲ್ಲಾ ರಿಯಾಲಿಟಿ ಷೋ ಮತ್ತು ಸೀರಿಯಲ್ ಗಳನ್ನು ಹಿಂದಿಕ್ಕಿದೆ. ಇದೇ ಪೋಸ್ಟರ್ ಅನ್ನು ಹಾಕಿ ಸುದೀಪ್ ವಿದಾಯದ ಘೋಷಣೆ ಮಾಡಿದ್ದಾರೆ.