Diana Book Gallery ನಾಡಿನ ಖ್ಯಾತ ಕಥೆಗಾರ ವಸುಧೇoದ್ರ ರವರು ನಗರದ ಡಯಾನಾ ಬುಕ್ ಗ್ಯಾಲರಿಗೆ ಭೇಟಿ ನೀಡಿ, ಓದುಗರೊಂದಿಗೆ ಸಂವಹನ ನಡೆಸಿದರು.
Diana Book Gallery ಈ ಸಂದರ್ಭದಲ್ಲಿ ಬುಕ್ ಗ್ಯಾಲರಿಯ ಮಾಲೀಕರಾದ ಕೆ. ಎಲ್. ಈಶ್ವರ್ ಅವರು ಜೋಳಿಗೆ ಪವಾಡ ಪುಸ್ತಕ ನೀಡಿ ಗೌರವಿಸಿದರು.
Diana Book Gallery ನಾಡಿನ ಖ್ಯಾತ ಕಥೆಗಾರ ವಸುಧೇoದ್ರ ರವರು ನಗರದ ಡಯಾನಾ ಬುಕ್ ಗ್ಯಾಲರಿಗೆ ಭೇಟಿ ನೀಡಿ, ಓದುಗರೊಂದಿಗೆ ಸಂವಹನ ನಡೆಸಿದರು.
Diana Book Gallery ಈ ಸಂದರ್ಭದಲ್ಲಿ ಬುಕ್ ಗ್ಯಾಲರಿಯ ಮಾಲೀಕರಾದ ಕೆ. ಎಲ್. ಈಶ್ವರ್ ಅವರು ಜೋಳಿಗೆ ಪವಾಡ ಪುಸ್ತಕ ನೀಡಿ ಗೌರವಿಸಿದರು.
Supreme Court ಸುಪ್ರೀಂಕೋರ್ಟ್‌ನ ಆದೇಶದಂತೆ ಕರ್ನಾಟಕ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅ.16 ರಂದು ಭಾರಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಶಾಖೆಯಿಂದ ಹಮ್ಮಿಕೊಳ್ಳಲಾಗಿದೆ.
ಸಮಿತಿಯ ರಾಜ್ಯ ಉಪಾಧ್ಯಕ್ಷ ತಿಮ್ಲಾಪುರ ಲೋಕೇಶ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಅಂದು ಬೆಳಿಗ್ಗೆ ಸೈನ್ಸ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಮೆರವಣಿಗೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. 3 ದಶಕಗಳಿಂದ ನಡೆಸಿದ ಒಳಮೀಸಲಾತಿ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ನಮ್ಮ ಪರ Supreme Court ತೀರ್ಪುನೀಡಿದ್ದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಮೀನಾಮೇಷ ನಡೆಸುತ್ತಿದ್ದು, ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಸುಪ್ರಿಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕು. ಒಂದು ವೇಳೆ ಜಾರಿಗೊಳಿಸದಿದ್ದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಘಿಸಿರುವುದಕ್ಕೆ ಕಾನೂನು ಹೋರಾಟದ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಹಾಗೂ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು
Civil Defense Forum ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ, ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರೀ ಮಳೆಯಿಂದ ನೀರಿನಲ್ಲಿ ಟರ್ಬಿಡಿಟಿ ಹೆಚ್ಚಾಗಿ ಸಮಸ್ಯೆಯಾಗಿದೆ ಎಂದು ಜಲ ಮಂಡಳಿ ತಿಳಿಸಿತ್ತು.
ಆದರೆ ನಾಗರೀಕರ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಇದನ್ನು ತಳ್ಳಿ ಹಾಕಿದೆ. ಕಲುಷಿತ ನೀರು ಸರಬರಾಜಿಗೆ ನೀರು ಶುದ್ಧೀಕರಣ ಘಟಕದಲ್ಲಿನ ಅಸಮರ್ಪಕ ನಿರ್ವಹಣೆ ಕಾರಣವಾಗಿದೆ ಎಂದು ಆರೋಪಿಸಿದೆ.
ಈ ಸಂಬಂಧ ಅ. 14 ರ ಬೆಳಿಗ್ಗೆ ಘಟಕದ ಪ್ರಮುಖರು ಮಂಡ್ಲಿಯಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಸತ್ಯಾಸತ್ಯತೆ ಪರಿಶೀಲಿಸಿದ್ದಾರೆ. ಭೇಟಿಯ ವೇಳೆ ಕಂಡುಬಂದ ವಿವರಗಳ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.
Civil Defense Forum ಅಸಮರ್ಪಕ ನಿರ್ವಹಣೆ : ‘ಜಲ ಮಂಡಳಿ ಹೇಳುವಂತೆ, ಮಳೆ ಕಾರಣದಿಂದ ನೀರಿನಲ್ಲಿ ಅಧಿಕ ಮಣ್ಣಿನ ಅಂಶವಿದೆ’ ಎಂಬುವುದು ಬಹುತೇಕ ಸುಳ್ಳಾಗಿದೆ. ಕೊಳಚೆ ನೀರು ಸರಬರಾಜಿಗೆ ನಿರ್ವಹಣೆಯ ವೈಫಲ್ಯವೇ ಮುಖ್ಯ ಕಾರಣವಾಗಿದೆ’ ಎಂದು ವೇದಿಕೆ ಆರೋಪ ಮಾಡಿದೆ.
‘ಶುದ್ಧೀಕರಣ ಘಟಕದಲ್ಲಿರುವ 3 ಕ್ಲಾರಿ ಪ್ಲಕ್ಚುವೇಟರ್ ಕೆಲಸ ನಿಲ್ಲಿಸಿ 2 ತಿಂಗಳಾಗಿದೆ. ಇದರಿಂದ ಘಟಕದಲ್ಲಿ ಶೇ. 85 ರಷ್ಟು ನೀರು ಶುದ್ಧೀಕರಣವಾಗುತ್ತಿಲ್ಲ. ಲ್ಯಾಬ್ ಟೆಸ್ಟಿಂಗ್ ಉಪಕರಣಗಳು ಕಾರ್ಯನಿರ್ವಹಣೆ ಮಾಡುತ್ತಿಲ್ಲ. ನೀರು ಶುದ್ಧೀಕರಣಕ್ಕೆ ಆಲಂ ಸರಿಯಾಗಿ ಬಳಸುತ್ತಿಲ್ಲ.
ನೀರಿಗೆ ಕ್ಲೋರಿನ್ ಮಿಕ್ಸ್ ಮಾಡಲು ಅಳತೆಯ ಎರಡೂ ಗೇಜ್ ಗಳು ಹಾಳಾಗಿವೆ. ಅವೈಜ್ಞಾನಿಕವಾಗಿ ನೀರಿಗೆ ಕ್ಲೋರಿನ್ ಮಿಶ್ರಣ ಮಾಡಲಾಗುತ್ತಿದೆ. ಜಲ ಮಂಡಳಿಯ ನಿರ್ವಹಣೆಯಲ್ಲಿನ ವೈಫಲ್ಯದಿಂದ ಕೊಳಚೆ ನೀರು ಸರಬರಾಜಾಗಲು ಮುಖ್ಯ ಕಾರಣವಾಗಿದೆ’ ಎಂದು ವೇದಿಕೆ ಗಂಭೀರ ಆರೋಪ ಮಾಡಿದೆ.
ಘಟಕಕ್ಕೆ ಭೇಟಿ ನೀಡಿದ ತಂಡದಲ್ಲಿ ಕೆ.ವಿ.ವಸಂತಕುಮಾರ್, ಡಾ. ಸತೀಶ್ ಕುಮಾರ್ ಶೆಟ್ಟಿ, ಆಶೋಕ ಕುಮಾರ, ಸೀತಾರಾಮ್, ಸುಬ್ರಮಣ್ಯ, ವಿನೊದ್ ಪೈ, ರಘಪತಿ ಮೊದಲಾದವರಿದ್ದರು.
Karnataka State Cricket Academy Shimoga ಪುಣೆಯಲ್ಲಿ ಅ. 24 ರಿಂದ 28 ರವರೆಗೆ ನಡೆಯಲಿರುವ, ಭಾರತ – ನ್ಯೂಜಿಲೆಂಡ್ ತಂಡದ ನಡುವಿನ 2 ಟೆಸ್ಟ್ ಪಂದ್ಯದ ವೀಕ್ಷಕರನ್ನಾಗಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಶಿವಮೊಗ್ಗ ವಲಯದ ಸಂಚಾಲಕರಾದ ಸದಾನಂದ ಹೆಚ್. ಎಸ್. ಅವರನ್ನು ನೇಮಿಸಲಾಗಿದೆ.
ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆದೇಶ ಹೊರಡಿಸಿದೆ. ಸದಾನಂದ ಹೆಚ್ ಎಸ್ ಅವರು ಕ್ರಿಕೆಟ್ ಬೆಳವಣಿಗೆಗೆ ಸಲ್ಲಿಸಿದ ಅವಿಸ್ಮರಣೀಯ ಸೇವೆ ಗುರುತಿಸಿ, ಭಾರತ – ನ್ಯೂಜಿಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ವೀಕ್ಷಕರನ್ನಾಗಿ ನೇಮಿಸಲಾಗಿದೆ.
Karnataka State Cricket Academy Shimoga ಸದಾನಂದ ಹೆಚ್ ಎಸ್ ಅವರು ಕ್ರಿಕೆಟ್ ಆಟಗಾರರಾಗಿದ್ದರು. ಹಾಗೆಯೇ ಕೆ.ಎಸ್.ಸಿ.ಎ ನಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು. ಜೆಎನ್ಎನ್’ಸಿಇ ಕಾಲೇಜ್ ನಲ್ಲಿ ದೈಹಿಕ ಶಿಕ್ಷಣ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಕೆ.ಎಸ್.ಸಿ.ಎ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ವಲಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕ್ರಿಕೆಟ್ ಕ್ಷೇತ್ರದಲ್ಲಿನ ಅವರ ಸೇವೆ ಗುರುತಿಸಿ ಬಿಸಿಸಿಐ ಸಂಸ್ಥೆಯು, ಭಾರತ – ನ್ಯೂಜಿಲೆಂಡ್ ತಂಡದ ನಡುವೆ ನಡೆಯಲಿರುವ 2 ಟೆಸ್ಟ್ ಪಂದ್ಯದ ವೀಕ್ಷಕರನ್ನಾಗಿ ನೇಮಿಸಿದೆ.
Chamber Of Commerce Shivamogga ಶಿವಮೊಗ್ಗದ "ಜವಳಿ ವರ್ತಕರ ಸಂಘ" (ರಿ) ದ ವತಿಯಿಂದ ಛೇಂಬರ್ ಆಫ್ ಕಾಮರ್ಸ್ ನ "ಶಾಂತಲಾ ಸ್ಪೆರೋಕಾಸ್ಟ್" ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಸರಳ ಸಮಾರಂಭದಲ್ಲಿ "ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ"ದ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು. ಪ್ರತಿಷ್ಠಿತ ಸಂಸ್ಥೆಯಾಗಿ ಮತ್ತು ಜನೋಪಯೋಗಿ,ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹೆಗ್ಗುರುತನ್ನು ಮೂಡಿಸಿರುವ ಸಂಘದ ನೂತನ ಅದ್ಯಕ್ಷರಾದ ಬಿ.ಗೋಪಿನಾಥ್ ರವರು ಉದ್ದೇಶಿತ ಬೃಹತ್ "ಶಿವಮೊಗ್ಗ ಹಬ್ಬ" ವನ್ನು ಮುಂಬರುವ ದಿನಗಳಲ್ಲಿ ಆಯೋಜಿಸುವ ಮೂಲಕ ವ್ಯಾಪಾರ, ಕೈಗಾರಿಕೆ, ಪ್ರವಾಸೋದ್ಯಮ ಇನ್ನೂ ಮುಂತಾದ ಹಲವಾರು ಆಯಾಮಗಳಲ್ಲಿ ಶಿವಮೊಗ್ಗವನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಮಾಡುವ ಅನೇಕ ಯೋಜನೆಗಳನ್ನು ಹೊಂದಿರುವುದಾಗಿ ತಮ್ಮ ಅಭಿನಂದನಾ ನುಡಿಗಳಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್. ಕಾರ್ಯದರ್ಶಿ ಎ ಎಂ ಸುರೇಶ್. ಖಜಾಂಚಿ ಮನೋಹರ್. ಸಹಕಾರದ ಶ್ರೀ ಸುಕುಮಾರ್ ರವರಿಗೆ ಅಭಿನಂದಿಸಲಾಯಿತು
Chamber Of Commerce Shivamogga ಸಭಾದ್ಯಕ್ಷತೆಯನ್ನು ಜವಳಿ ವರ್ತಕರ ಸಂಘದ ಸುರೇಶ್ ಕುಮಾರ್ ಬೇದ್ರೆಯವರು ವಹಿಸಿದ್ದರು.ಕಾರ್ಯದರ್ಶಿ ಪ್ರಭಾಕರ್ ರವರ ಸ್ವಾಗತ, ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರ ನಿರೂಪಣೆ,ರಾಕೇಶ್ ಸಾಕ್ರೆಯವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು
Department of Kannada and Cultureಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ – 50 ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಕನ್ನಡಜ್ಯೋತಿ ರಥವು ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತಕ್ಕೆ ಆಗಮಿಸಿದ್ದು, ಅದನ್ನು ಸ್ವಾಗತಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಯ ಉಳಿವಿಗಾಗಿ ಅನೇಕ ಕನ್ನಡಪರ ಸಂಘಟನೆಗಳು ಹೋರಾಟವನ್ನು ನಡೆಸುತ್ತಿದ್ದಾರೆ. ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೋರಾಟಗಳು ನಡೆಯುತ್ತಾ ಬಂದಿವೆ. ಅದೇ ರೀತಿ ಗೋಕಾಕ್ ಚಳವಳಿಯ ನೆನಪು ಇಂದಿಗೂ ಅಮರವಾಗಿದ್ದು ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ನಟನಟಿಯರು ಕನ್ನಡ ಪರವಾದ ಹೋರಾಟದಲ್ಲಿ ಭಾಗವಹಿಸಿದ್ದರು. ನಾವೆಲ್ಲ ಕನ್ನಡ ಪರವಾದ ಹೋರಾಟಗಳನ್ನು ಸ್ಮರಿಸಬೇಕು ಎಂದರು.
Department of Kannada and Culture ಕನ್ನಡ ಒಂದು ಭಾಷೆಯಲ್ಲ, ಅದು ನಮ್ಮ ಬದುಕಾಗಿದೆ. ಕವಿಗಳು, ಸಾಹಿತಿಗಳ ಮೂಲಕ ಅಕ್ಷರ ರೂಪದಲ್ಲಿ ಕನ್ನಡ ಭಾಷೆ ಜೀವಂತವಾಗಿರಲು ಸಹಕಾರಿಯಾಗಿದೆ. ಪ್ರತಿಯೊಬ್ಬರು ಕನ್ನಡ ಸಾಹಿತ್ಯಗಳನ್ನು ಓದುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕಾಗಿದೆ. ಕನ್ನಡ ರಥ ಇಡೀ ರಾಜ್ಯಾದ್ಯಂತ ಸಂಚಾರ ನಡೆಸುತ್ತಿದ್ದು ಶಿವಮೊಗ್ಗ ನಗರಕ್ಕೆ ಆಗಮಿಸಿರುವ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಮಾತನಾಡಿ, ಕನ್ನಡ ಭಾಷೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕನ್ನಡಜ್ಯೋತಿ ರಥಯಾತ್ರೆಯನ್ನು ನಡೆಸುತ್ತಿದೆ. ಕನ್ನಡ ನೆಲ, ಜಲ, ನಾಡುನುಡಿ ವಿಷಯ ಬಂದಾಗ ಎಲ್ಲರೂ ಒಂದಾಗಿ ಹೋರಾಡಬೇಕು ಎಂದರು.
ಕನ್ನಡಜ್ಯೋತಿ ರಥಯಾತ್ರೆ ಶಿವಪ್ಪ ನಾಯಕ ವೃತ್ತದಿಂದ ಗೋಪಿವೃತ್ತ ಮಾರ್ಗವಾಗಿ ಮಹಾವೀರ ವೃತ್ತ ಕುವೆಂಪು ರಂಗಮAದಿರದವರೆಗೆ ಸಾಗಿ ಬಂದಿದ್ದು ಮಹಿಳಾ ಮತ್ತು ಪುರುಷ ಡೊಳ್ಳು ತಂಡ ಹಾಗೂ ಇತರ ಕಲಾಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ತಹಶೀಲ್ದಾರ್ ಗಿರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಿ ಮಂಜುನಾಥ್, ರೋಟರಿ ಸಂಸ್ಥೆಯ ವಿಜಯಕುಮಾರ್, ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Shimoga District Child Protection Unit ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೋ ಕಾಯ್ದೆಯಡಿ ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಮಕ್ಕಳ ಆರೈಕೆ ಕ್ಷೇತ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ. ಪ್ರತಿ ಪ್ರಕರಣಕ್ಕೆ ರೂ. 3,000/- ಗಳ ಸಂಭಾವನೆ ನಿಗದಿಗೊಳಿಸಲಾಗಿದೆ.
Shimoga District Child Protection Unit ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೊಳ, ಶಿವಮೊಗ್ಗ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅ.24ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೊಳ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.
Department of School Education and Literacy ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ಅಧೀನ ಕಚೇರಿಗಳ ಮಾಹಿತಿಯನ್ನು ನೀಡಲಾಗಿದೆ.
ಎಂ. ಕಿಶೋರ್ ಕುಮಾರ್, ಸಚಿವರ ಆಪ್ತ ಕಾರ್ಯದರ್ಶಿಗಳು ಮತ್ತು ಜಯಪ್ರಕಾಶ್, ವಿಶೇಷ ಕರ್ತವ್ಯಾಧಿಕಾರಿಗಳು, ಕೊಠಡಿ ಸಂ.: 262 ಮತ್ತು 262ಎ, 02ನೇ ಮಹಡಿ ವಿಧಾನಸೌಧ, ಬೆಂಗಳೂರು, ದೂ.ಸಂ.: 080-22253631/ 22033897.
ಕೆ. ರಾಜಪ್ಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರ ಕಚೇರಿ ಕಟ್ಟಡ, ಮಲ್ಲೇಶ್ವರಂ 18ನೇ ಕ್ರಾಸ್, ಬೆಂಗಳೂರು (ಗೃಹ ಕಚೇರಿ), ದೂ.ಸಂ.: 080-23083886/ 9449811122, ಇಮೇಲ್-kar.educationminister@gmail.com.
ಶ್ರೀಪತಿ ಕೆ.ಸಿ. (ತಾಲೂಕು ವಿಸ್ತರಣಾಧಿಕಾರಿ),ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಕಾಶ್ ಎ. ಆಪ್ತ ಸಹಾಯಕರು, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕುವೆಂಪು ರಸ್ತೆ, ಶಿವಮೊಗ್ಗ,- ದೂ.ಸಂ.: 9482711634/ 9916663986/ 8073618693.
Department of School Education and Literacy ಕುಮಾರಸ್ವಾಮಿ ಎಸ್.ಆರ್. ಆಪ್ತಸಹಾಯಕರು, ಕೃಷ್ಣಮೂರ್ತಿ ಆಪ್ತಸಹಾಯಕರು – ಶಾಸಕರ ಕಚೇರಿ, ಪಿ.ಡಬ್ಲ್ಯೂ.ಡಿ ಕಚೇರಿ ಆವರಣ (ಪ್ರವಾಸಿ ಮಂದಿರ), ಸೊರಬ, ಶಿವಮೊಗ್ಗ ಜಿಲ್ಲೆ – ದೂ.ಸಂ.: 9632912573/ 9886070949.
ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತಮ್ಮ ಮನವಿ/ ಅಹವಾಲುಗಳನ್ನು ಈ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಹಾಗೂ ದೂರವಾಣಿ ಮುಖಾಂತರ ಸಂಪರ್ಕಿಸಬಹುದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆ.
Karnataka Skill Development Corporation ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ 20 ರಂದು ಬೆಳಿಗ್ಗೆ 09.00ರಿಂದ ಸಂಜೆ 4.00 ರ ವರೆಗೆ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್‌ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10 ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
Karnataka Skill Development Corporation ಈ ಬೃಹತ್ ಉದ್ಯೋಗಮೇಳದಲ್ಲಿ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗ ದೊರಕಿಸಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳು ಮತ್ತು ದೊಡ್ಡವರಲ್ಲಿ ವಿವಿಧ ರೀತಿಯ ಕಣ್ಣಿನ ದೋಷಗಳನ್ನು ಸರಿಪಡಿಸುವ ಅಂಧತ್ವ ಮುಕ್ತ ಶಿವಮೊಗ್ಗ 2024 ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕೆ ಅಗತ್ಯವಾದ ಎಲ್ಲ ಪೂರ್ವಸಿದ್ದತೆ ಹಾಗೂ ಕ್ರಿಯಾಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಂಧತ್ವ ಮುಕ್ತ ಶಿವಮೊಗ್ಗ 2024 ಕಾರ್ಯಕ್ರಮದ ಕುರಿತು ಸಿದ್ದತೆ ನಡೆಸಲು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
DC Shivamogga ಜಿ.ಪಂ ಸಿಇಓ ರವರು ಅಂಧತ್ವ ಮುಕ್ತ ಶಿವಮೊಗ್ಗದಂತಹ ಉತ್ತಮ ಕಾರ್ಯಕ್ರಮದ ಮುಂದಾಳತ್ವ ವಹಿಸಿಕೊಂಡಿದ್ದು, ಈ ಕಾರ್ಯಕ್ರಮದ ಅನುಷ್ಟಾನಕ್ಕೆ ಎಲ್ಲರೂ ಸಹಕರಿಸಬೇಕು. ಅಂಧತ್ವಕ್ಕೆ ಕಾರಣವಾಗುವ ಅಂಶಗಳು, ಅದರ ನಿವಾರಣೆಗೆ ಅಗತ್ಯವಾದ ಚಿಕಿತ್ಸೆ, ಮಾನವ ಸಂಪನ್ಮೂಲ, ಮೂಲಭೂತ ಸೌಕರ್ಯಗಳು, ಹಣಕಾಸು ಹಾಗೂ ಕಾರ್ಯಕ್ರಮದ ರೂಪುರೇಷೆ ಕುರಿತು ಅಚ್ಚುಕಟ್ಟಾಗಿ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಎನ್.ಹೇಮಂತ್ ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಆಶಾಕಿರಣ ಎಂಬ ಕಾರ್ಯಕ್ರಮದಡಿ ಅಂಧತ್ವ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಅಂಧತ್ವ ಮುಕ್ತ ಶಿವಮೊಗ್ಗ ಎಂಬ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಈ ಕಾರ್ಯಕ್ರಮದಡಿ ಮುಖ್ಯವಾಗಿ ಶಾಲಾ ಮಕ್ಕಳಲ್ಲಿ ಕಂಡು ಬರುವ ಕಣ್ಣಿನ ದೋಷಗಳು, ಕಣ್ಣಿನ ಪೊರೆ, ಒಡಚುಗಣ್ಣು, ಗ್ಲುಕೋಮಾ, ಡಯಾಬಿಟಿಕ್ ರೆಟಿನೋಪಥಿ ಮತ್ತು ಇತರೆ ಕಣ್ಣಿನ ದೋಷಗಳನ್ನು ಗುರುತಿಸಿ ಕನ್ನಡಕ ನೀಡುವುದು, ಕಣ್ಣಿನ ಪೊರೆ ಶಸ್ತçಚಿಕಿತ್ಸೆ ಹಾಗೂ ಹೆಚ್ಚಿನ ತೊಂದರೆ ಇದ್ದರೆ ಉನ್ನತ ಆರೋಗ್ಯ ಕೇಂದ್ರಗಳಿಗೆ ರೆಫರ್ ಮಾಡಲಾಗುವುದು.
ಕಾರ್ಯಕ್ರಮದ ರೂಪುರೇಷೆ : ಈ ಕಾರ್ಯಕ್ರಮದಡಿ ಪ್ರಾಥಮಿಕ ತಪಾಸಣೆ, ಮಾಧ್ಯಮಿಕ ತಪಾಸಣೆ ಮತ್ತು ಉನ್ನತ ಆರೋಗ್ಯ ಕೇಂದ್ರಕ್ಕೆ ರೆಫರ್ ಮಾಡುವ ಮೂರು ಹಂತಗಳಿವೆ. ಮೊದಲ ಹಂತದಲ್ಲಿ ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಕಣ್ಣಿನ ತೊಂದರೆ ಬಗ್ಗೆ ಪರಿಶೀಲಿಸಿ ವರದಿ ನೀಡುವರು. ನಂತರ ಆಶಾ ಬ್ಲಾಕ್‌ಗಳಲ್ಲಿ ವೈದ್ಯರು ತಪಾಸಣೆ ನಡೆಸಿ, ಕನ್ನಡಕ ಅಗತ್ಯವಿರುವವರಿಗೆ ಕನ್ನಡಕ ವಿತರಣೆ ಮಾಡುವರು. ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ಉನ್ನತ ಆರೋಗ್ಯ ಕೇಂದ್ರಕ್ಕೆ ರೆಫರ್ ಮಾಡಲಾಗುವುದು.
DC Shivamogga ಪ್ರಸ್ತುತ ನಿಯಮಿತವಾಗಿ ಸರ್ಕಾರಿ ಶಾಲೆಗಳಲ್ಲಿ ಆರ್‌ಬಿಎಸ್‌ಕೆ ಕಾರ್ಯಕ್ರಮದಡಿ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿರುವವರಿಗೆ ಕನ್ನಡಕ, ಇತರೆ ಚಿಕಿತ್ಸೆಗೆ ರೆಫರ್ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಕಿರಣ್ ಮಾತನಾಡಿ, 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 15813 ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ನಡೆದಿದೆ. ಗ್ರಾಮೀಣ ಭಾಗ ಮತ್ತು ಮಹಿಳೆಯರಲ್ಲಿ ಕಣ್ಣಿನ ಸಮಸ್ಯೆಗಳು ಹೆಚ್ಚಿವೆ. ಈ ಕಾರ್ಯಕ್ರಮದಲ್ಲಿ ಕಣ್ಣಿನ ಪೊರೆ, ಗ್ಲುಕೊಮಾ, ಸಕ್ಕರೆ ಖಾಯಿಲೆ ರೆಟಿನೊಪತಿ, ಮಕ್ಕಳಲ್ಲಿ ಕಣ್ಣಿನ ತೊಂದರೆಗಳು, ಒಡಚುಗಣ್ಣು, ಗ್ಲುಕೊಮಾ, ಕಾನ್‌ಜೆನಿಟಲ್ ಟೋಸಿಸ್, ಇತರೆ ಕಣ್ಣಿನ ಸಮಸ್ಯೆಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಕಾರ್ಯಕ್ರಮಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ ಮತ್ತು ಮೂಲಭೂತ ಸೌಕರ್ಯಗಳನ್ನು ಸಿಎಸ್‌ಆರ್, ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ವ್ಯವಸ್ಥೆ ಮಾಡಿಕೊಳ್ಳಲು ಯೋಜನೆ ರೂಪಿಸಬೇಕು.
ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕೆ ಅಂಧತ್ವ ಮುಕ್ತ ಶಿವಮೊಗ್ಗ ಜಿಲ್ಲಾ ಸಮಿತಿ ರಚನೆ ಮಾಡಬೇಕು. ವೈದ್ಯರು, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ ಅಗತ್ಯವಾದ ತರಬೇತಿ ನೀಡಲು ಕ್ರಮ ವಹಿಸಬೇಕು ಎಂದರು.
ಎಲ್ಲ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ತಜ್ಞರು ಕಣ್ಣಿನ ಪೊರೆ ಶಸ್ತçಚಿಕಿತ್ಸೆ ಮಾಡಲು ಕ್ರಮ ವಹಿಸಬೇಕು. ಜಿಲ್ಲಾ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಕಣ್ಣಿನ ಪೊರೆ ಶಸ್ತçಚಿಕಿತ್ಸೆಗಳು ನಡೆಯುವಂತಾಗಬೇಕು ಎಂದರು.
ಈ ಕಾರ್ಯಕ್ರಮ ಬಡವರು ಮತ್ತು ಮಧ್ಯಮವರ್ಗದವರಿಗೆ ಸಹಕಾರಿಯಾಗಲಿದ್ದು, ಎನ್‌ಜಿಓಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಅಂಧತ್ವ ಮುಕ್ತ ಶಿವಮೊಗ್ಗ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಡಿಹೆಚ್‌ಓ ಡಾ.ನಟರಾಜ್, ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಐಎಂಎ ಅಧ್ಯಕ್ಷ ಡಾ.ಶ್ರೀಧರ್, ತಾಲ್ಲೂಕು ವೈದ್ಯಾಧಿಕಾರಿಗಳು, ಶಂಕರ, ಸುಬ್ಬಯ್ಯ, ಮಣಿಪಾಲ ಆಸ್ಪತ್ರೆ ಅಧಿಕಾರಿಗಳು, ವಿವಿಧ ಎನ್‌ಜಿಓ ಪದಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.