Saturday, March 28, 2026
Saturday, March 28, 2026
Home Blog Page 539

SN Channabasappa ವಿದ್ಯಾರ್ಥಿಗಳು ಓದಿನ ಜೊತೆ ದೇಶದ ರಾಜಕೀಯ ವ್ಯವಸ್ಥೆಯ ಅರಿವನ್ನು ಹೊಂದಿರಬೇಕು- ಶಾಸಕ ‘ಚೆನ್ನಿ’

0

SN Channabasappa ಶಿವಮೊಗ್ಗ, ಅಕ್ಟೋಬರ್‌05 ಇಂದಿನ ಯುವ ಜನತೆ ಕೈಯಲ್ಲಿ ದೇಶದ ಮುಂದಿನ ಭವಿಷ್ಯ ಅಡಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಉರ್ದು ಮತ್ತು ಇತರ ಭಾಷಾ ಶಾಲೆಗಳ ನಿರ್ದೇಶನಾಲಯ, ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ, ಸಂಸದೀಯ ವ್ಯವಹಾರಗಳ ಇಲಾಖೆ, ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳಿಗೆ ದೇಶದ ಸಂವಿಧಾನದ ಅಡಿಯಲ್ಲಿ ಬರುವ ಸಂಸತ್ತು, ವಿಧಾನಸಭೆ, ಹಾಗೂ ಕಾರ್ಯಾಂಗ ವ್ಯವಸ್ಥೆಗಳ ಕುರಿತು ಅರಿವು ಮೂಡಿಸುವ ಕಾರ್ಯ ಯುವ ಸಂಸತ್ ಮೂಲಕ ನಡೆಯುತ್ತಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ಮಾತಿನಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ನಮ್ಮ ದೇಶದ ಸಂವಿಧಾನ, ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ, ಬಗ್ಗೆ ತಿಳಿಯಲು ಈ ಕಾರ್ಯಕ್ರಮ ಪೂರಕವಾಗಿದ್ದು ವಿಧಾನಸಭೆಯಲ್ಲಿ, ಸಂಸತ್ತಿನಲ್ಲಿ ಯಾವ ರೀತಿಯಲ್ಲಿ ಕಾರ್ಯಕಲಾಪಗಳು, ಚರ್ಚೆಗಳು ನಡೆಯುತ್ತವೆ ಎಂಬ ಬಗ್ಗೆ ಮಾಹಿತಿ ಸಿಗಲಿದೆ.
ವಿದ್ಯಾರ್ಥಿಗಳು ಓದಿಗೆ ಮಾತ್ರ ಸೀಮಿತ ಆಗಿರದೆ ದೇಶದ ರಾಜಕೀಯ ವ್ಯವಸ್ಥೆ ಹಾಗೂ ಪ್ರಚಲಿತ ದೇಶದಲ್ಲಿ ನಡೆಯುವ ಘಟನೆಗಳ ಕುರಿತು ಅರಿವು ಮೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಯುವ ಸಂಸತ್ ಸ್ಪರ್ಧೆಗಳನ್ನು ನಡೆಸಿ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದರು.
SN Channabasappa ಜಿಲ್ಲೆಯ ಒಟ್ಟು 34 ಸರ್ಕಾರಿ ಪ್ರೌಢಶಾಲೆಗಳ ಮಕ್ಕಳು ಯುವ ಸಂಸತ್ತಿನಲ್ಲಿ ಪಾಲ್ಗೊಂಡಿದ್ದರು. ಸಭಾಪತಿಯಾಗಿ ವಿದ್ಯಾರ್ಥಿನಿ ಪೂರ್ಣಿಮಾ ವಿಧಾನಸಭಾ ಅಧಿವೇಶನವನ್ನು ಆರಂಭಿಸಿದರು. ಮುಖ್ಯಮಂತ್ರಿಯಾಗಿ ಭೂಮಿಕ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಎಂಪಿಎA ಕಾರ್ಖಾನೆ ಮುಚ್ಚಿರುವುದು, ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯ ನೆರವು, ಶರಾವತಿ ಕಣಿವೆ ಯೋಜನೆಗಳು, ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ, ರಾಜ್ಯದ ಪ್ರಚಲಿತ ವಿಷಯಗಳ ಕುರಿತು ಚೆರ್ಚೆಯನ್ನು ನಡೆಸಲಾಯಿತು.
ಯುವ ಸಂಸತ್ ಫಲಿತಾಂಶ: ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ 6 ಜನ ವಿದ್ಯಾರ್ಥಿಗಳು ಬಹುಮಾನ ಪಡೆದುಕೊಂಡರು. ಹೊಸನಗರ ತಾಲ್ಲೂಕಿನ ಮಸಗಲ್ಲಿನ ಸ.ಪ್ರೌ.ಶಾಲೆಯ ಸ್ಪೂರ್ತಿ ಎಸ್.ಎನ್. ಪ್ರಥಮ ಬಹುಮಾನ, ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆಹಕ್ಲು ಸ.ಪ್ರೌ.ಶಾಲೆಯ ಸಾತ್ವಿಕ್ ಎನ್ ಎಸ್ ದ್ವಿತೀಯ ಹಾಗೂ ಸಾಗರ ತಾಲ್ಲೂಕಿನ ಸುಭಾಷ್‌ನಗರ ಸ.ಪ್ರೌ.ಶಾಲೆಯ ಭೂಮಿಕ ಬಿ.ಜಿ ತÀÈತೀಯ ಬಹುಮಾನ ಪಡೆದುಕೊಂಡರು.
ತೀರ್ಥಹಳ್ಳಿಯ ಹೊಸೂರು ಗುಡ್ಡೇಕೇರಿಯ ಅಕ್ಷತಾ ಹೆಚ್ ಯು, ಸಾಗರದ ಎಂ ಎಲ್ ಹಳ್ಳಿ ಸ.ಪ್ರೌ.ಶಾಲೆಯ ಸಂಜನಾ ಪಿ ಮತ್ತು ಆನಂದಪುರ ಸ.ಪ್ರೌ.ಶಾಲೆಯ ಲಕ್ಷಿö್ಮ ಜಿ.ಬಿ ಸಮಾಧಾನಕರ ಬಹುಮಾನವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರಾದ ಕವಿತಾ ಯೋಗಪ್ಪನವರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪ ನಿರ್ದೇಶಕರಾದ ಬಿಂಬ ಕೆ.ಆರ್ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Gandhi Jayanti ಶ್ರೀಮತಿ ಸುರೇಖಾ ಹೆಗ್ಡೆ ಅವರಿಂದ ಗಾಂಧಿ ಸ್ಮೃತಿ ಸಂಗೀತ ಗಾಯನ

0

Gandhi Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅ.02 ರಂದು ಬೆಳಗ್ಗೆ 10.00ಕ್ಕೆ ನಗರದ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ 155 ನೇ ಗಾಂಧಿ ಜಯಂತಿ ಪ್ರಯುಕ್ತ ಗಾಯಕಿ ಶ್ರೀಮತಿ ಸುರೇಖ ಹೆಗಡೆ ಮತ್ತು ತಂಡದವರು ಗಾಂಧಿ ಸ್ಮೃತಿ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Department of Agriculture ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ. ಹತೋಟಿ ಕ್ರಮ. ಕೃಷಿ ಇಲಾಖೆ ಮಾಹಿತಿ

0

Department of Agriculture ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳು ಬಾಧೆ ; ಹತೋಟಿ ಮತ್ತು ಎಚ್ಚರಿಕೆ ಕ್ರಮ
ಶಿವಮೊಗ್ಗ. ಅಕ್ಟೋಬರ್ 04 (ಕರ್ನಾಟಕ ವಾರ್ತೆ) ; ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳು ಬಾಧೆ ಕಂಡುಬAದಿರುತ್ತದೆ. ಸಾಮಾನ್ಯವಾಗಿ ಕಂದು ಜಿಗಿ ಹುಳು ಅತಿ ಶೀಘ್ರದಲ್ಲಿ ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಅಭಿವೃದ್ಧಿಯಾಗಿ ಭತ್ತದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತದೆ ಆದ್ದರಿಂದ ರೈತರು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ಕಂದು ಜಿಗಿ ಬಾಧೆಯಲ್ಲಿ ಹುಳುಗಳು ಸಸ್ಯದ ಬುಡ ಭಾಗದಲ್ಲಿ ರಸ ಹೀರಿ ಬೆಳೆಯನ್ನು ಸುಟ್ಟಂತೆ ಮಾಡಿ ಸಂಪೂರ್ಣವಾಗಿ ನಾಶಪಡಿಸುತ್ತದೆ. ಗರಿಗಳ ಅಂಚು ಹಳದಿ ಬಣ್ಣಕ್ಕೆ ತಿರುಗಿ ತೆಂಡೆಗಳು ಕ್ರಮೇಣ ಒಣಗಿದಂತಾಗಿ ಭತ್ತದ ತಾಕಿನಲ್ಲಿ ಅಲ್ಲಲ್ಲಿ ವೃತ್ತಾಕಾರದಲ್ಲಿ ಬೆಳೆ ಸುಟ್ಟಂತೆ ಕಾಣುತ್ತದೆ. ಸಾಮಾನ್ಯವಾಗಿ ಇದನ್ನು ಜಿಗಿ ಸುಡು ಅಥವಾ ಹಾಪರ್ ಬರ್ನ್ ಎಂದು ಕರೆಯುತ್ತಾರೆ. ದಿನಗಳೆದಂತೆ ಮರಿಹುಳುಗಳಿಗೆ ರೆಕ್ಕೆಗಳು ಬಂದು ಮುಂದಿನ ತಾಕುಗಳಿಗೆ ಜಿಗಿದು ಆ ಬೆಳೆಯನ್ನೂ ಸಹ ನಾಶಪಡಿಸುತ್ತದೆ.
ಹತೋಟಿ ಕ್ರಮಗಳು :
Department of Agriculture ಹುಳುವಿನ ಹತೋಟಿಗೆ ಮಾನೋಕ್ರೋಟೋಫಾಸ್ 36 ಎಸ್ ಎಲ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಅಥವಾ ಕ್ಲೋರೋಪೈರಿಫಾಸ್ 20 ಇಸಿ ಪ್ರತಿ ಲೀಟರ್ ನೀರಿಗೆ 2ಮಿಲಿ ಅಥವಾ ಇಮಿಡಾ ಕ್ಲೋಪ್ರಿಡ್ 17.8 ಎಸ್ ಎಲ್ 0.6 ಮಿಲಿ ಪ್ರತಿ ಲೀಟರ್ ನೀರಿಗೆ ಅಥವಾ ಬುಫ್ರೋಫೆಜಿನ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಬೆರಸಿ ಗಿಡದ ಬುಡಭಾಗ ನೆನೆಯುವಂತೆ ಸಿಂಪಡಿಸಬೇಕು. ಎಕರೆಗೆ 300 ರಿಂದ 350 ಲೀಟರ್ ಸಿಂಪರಣಾ ದ್ರಾವಣ ಬೇಕಾಗುತ್ತದೆ. ತೆನೆ ಬರುವ ಮೊದಲು ಇದರ ಬಾಧೆ ಕಂಡು ಬಂದಲ್ಲಿ ಎಕರೆಗೆ 5 ಕೆಜಿ ಫೋರೇಟ್ ಅಥವಾ 8 ಕೆಜಿ ಕಾರ್ಬೋಫ್ಯೂರಾನ್ ಹರಳನ್ನು ಬಳಸಿ ತಡೆಯಬಹುದಾಗಿದೆ.
ಎಚ್ಚರಿಕೆ ಕ್ರಮಗಳು : ಸಿಂಪರಣೆ ಮಾಡುವಾಗ ಗದ್ದೆಯಲ್ಲಿನ ನೀರನ್ನು ಸಂಪೂರ್ಣವಾಗಿ ಬಸಿದು ಹೊರ ತೆಗೆಯಬೇಕು. ಗದ್ದೆಯಿಂದ ಗದ್ದೆಗೆ ನೀರು ಹಾಯಿಸಬಾರದು ಮತ್ತು ಯೂರಿಯಾ ರಸಗೊಬ್ಬರ ಬಳಸಬಾರದು. ಯಾವುದೇ ಕಾರಣಕ್ಕೂ ಬಾಧೆಗೊಳಗಾದ ಭತ್ತದ ಬೆಳೆಗೆ ಮಿಥೈಲ್ ಪ್ಯಾರಾಥಿಯಾನ್ ಅಥವಾ ಸಿಂಥೆಟಿಕ್ ಪೈರಿಥ್ರಾಯ್ಡ್ ರಾಸಾಯನಿಕಗಳನ್ನು ಬಳಸಬಾರದು. ಪ್ರತಿ 10 ಸಾಲಿಗೆ (8 ರಿಂದ 10 ಅಡಿ) ಪೂರ್ವ – ಪಶ್ಚಿಮವಾಗಿ ಪಾತಿ ಮಾಡಿ (ಇಕ್ಕಲು ತೆಗೆದು) ಗಾಳಿಯಾಡುವಿಕೆ ಉತ್ತಮಗೊಳಿಸಿ ಗಿಡದ ಬುಡಕ್ಕೆ ಸಿಂಪರಣೆ ಮಾಡುವುದು. ದಿನನಿತ್ಯ ಗದ್ದೆಯ ಪರಿವೀಕ್ಷಣೆ ಅತಿ ಮುಖ್ಯ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಕಿರಣ್ ಕುಮಾರ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

0

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ ಆಲ್ಕೋಳ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 07 ರಂದು ಬೆಳಗ್ಗೆ 9.00 ರಿಂದ ಸಂಜೆ 5.30ರವರೆಗೆ ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್, ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

0

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಇವರ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾಮಟ್ಟದ 14 ವರ್ಷ ವಯೋಮಿತಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಶಾಲಾ ಮಕ್ಕಳಿಗೆ ಶುಭ ಶುಭ ಹಾರೈಸಿದರು.

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

0

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ ಮಾಡುತ್ತಿರುವ ಶಿವಮೊಗ್ಗ ದಸರಾದಲ್ಲಿ ರಂಗ ದಸರಾ ಕಾರ್ಯಕ್ರಮವನ್ನು ಅತ್ಯಂತ ವಿಶೇಷವಾಗಿ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ ಎಲ್ಲಾ ಸೇರಿ ಒಟ್ಟು ಕನಿಷ್ಠ 20 ನಾಟಕಗಳು ಪ್ರದರ್ಶನ ಆಗುತ್ತಿವೆ. ಅಕ್ಟೋಬರ್ 5ರಿಂದ 10ರ ವರೆಗೆ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.
ಮಹಾನಗರ ಪಾಲಿಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆಯ ಕಿರಿಯ ಅಭಿಯಂತರರು ಹಾಗೂ ರಂಗ ದಸರಾ ಸಮಿತಿ ಸದಸ್ಯ ಕಾರ್ಯದರ್ಶಿ ಮಧುನಾಯ್ಕ್ ಎನ್., ಕಲಾವಿದರು ಒಕ್ಕೂಟದ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ, ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಅವರು ಕಾರ್ಯಕ್ರಮದ ವಿವರ ನೀಡಿದರು.
ಅಕ್ಟೋಬರ್ 5ರಂದು ಸಂಜೆ 6 ಗಂಟೆಗೆ ನೀನಾಸಂ ಅಧ್ಯಾಪಕ ಮಂಜು ಕೊಡಗು ಅವರು ಉದ್ಘಾಟಿಸಲಿದ್ದು, ನಂತರ ಅಜಯ್ ನೀನಾಸಂ ಹಾಗೂ ಚಂದ್ರಶೇಖರ ಹಿರೇಗೋಣಿಗೆರೆ ಅವರ ನಿರ್ದೇಶನದಲ್ಲಿ ರಂಗಗೀತೆ ಗಾಯನ ನಡೆಯುವುದು. ಅಕ್ಟೋಬರ್ ೬ರಂದು ಮಕ್ಕಳ ರಂಗ ಆಯೋಜಿಸಿದ್ದು, ಬೆಳಿಗ್ಗೆ 11 ಗಂಟೆಗೆ ವಿನೋಬ ನಗರ ಸರ್ಕಾರಿ ಪ್ರೌಢಶಾಲೆ ಮಕ್ಕಅಳಿಂದ ವಿಜಯ್ ನೀನಾಸಂ ನಿರ್ದೇಶನದಲ್ಲಿ ಬಿ.ವಿ. ಕಾರಂತರ ಪಂಜರ ಶಾಲೆ ನಾಟಕ, 12 ಗಂಟೆಗೆ ದುರ್ಗಿಗುಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮಕ್ಕಳಿಂದ ಚೈತ್ರಾ ಕೆ. ಅವರ ನಿರ್ದೇಶನದಲ್ಲಿ ಡಾ.ಗಜಾನನ ಶರ್ಮ ವಿರಚಿತ ನಾಣಿ ಭಟ್ಟನ ಸ್ವರ್ಗದ ಕನಸು ನಾಟಕ, ಮಧ್ಯಾಹ್ನ 1 ಗಂಟೆಗೆ ಗಾಡಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಸತೀಶ್ ಕುಮಾರ್ ಕೆ. ಅವರ ನಿರ್ದೇಶನದಲ್ಲಿ ಹೆಚ್.ಎಸ್. ವೆಂಕಟೇಶ ಮೂರ್ತಿ ವಿರಚಿತ ಬಿಲ್ಲಹಬ್ಬ ನಾಟಕ, ಮಧ್ಯಾಹ್ನ 2 ಗಂಟೆಗೆ ತಾಯಿಮನೆ ಮಕ್ಕಳಿಂದ ಮನು ಟಿ. ಅವರು ರಚಿಸಿ ನಿರ್ದೇಶಿಸಿರುವ ಹುಲಿರಾಯ ನಾಟಕ ಪ್ರದರ್ಶನಗೊಳ್ಳಲಿವೆ. ಅದೇ ದಿನ ಸಂಜೆ 7 ಗಂಟೆಗೆ ಮಹಿಳಾ ನಿರ್ದೇಶಕರ ನಾಟಕ ಕಾರ್ಯಕ್ರಮದಲ್ಲಿ ಪೂರ್ಣಿಮಾ ಎಸ್.ಸಿ. ಅವರ ನಿರ್ದೇಶನದಲ್ಲಿ ಕೆ.ವಿ. ಅಕ್ಷರ ಅವರ ಸಂಸಾರದಲ್ಲಿ ಸನಿದಪ ನಾಟಕ ಪ್ರದರ್ಶನವಾಗುವುದು. ಅಕ್ಟೋಬರ್ 8ರಂದು ಸಂಜೆ 6 ಗಂಟೆಗೆಯಿಂದ ಮೂರು ಏಕವ್ಯಕ್ತಿ ನಾಟಕಗಳು ಪ್ರದರ್ಶನವಾಗುವವರು. ಕೂಡ್ಲಿ ಶ್ರೀಧರಾಚಾರ್ ಅವರ ರಚನೆ, ಅಭಿನಯ, ನಿರ್ದಶನದಲ್ಲಿ ಕನಕ ನಾಟಕ, ಲವ ಜಿ.ಆರ್. ಅವರ ನಿರ್ದೇಶನದಲ್ಲಿ ಹೊಸಹಳ್ಳಿ ದಾಳೇಗೌಡ ಅವರ ಪ್ರಸ್ತುತಿಯಲ್ಲಿ ಪ್ರಸನ್ನ ಅವರ ತದ್ರೂಪಿ ನಾಟಕ, ಹೊನ್ನಾಳಿ ಚಂದ್ರಶೇಖರ್ ಅವರ ನಿರ್ದಶನ, ಅಜಯ್ ನೀನಾಸಂ ಅವರ ಪ್ರಸ್ತುತಿತಯಲ್ಲಿ ಪಿ. ಲಂಕೇಶ್ ಅವರ ಜಯಂತ್‌ನ ಸ್ವಗತ ನಾಟಕ ಪ್ರದರ್ಶನ ಆಗಲಿವೆ ಎಂದು ಹೇಳಿದ್ರು.
Shimoga Dasara 2024 ಅಕ್ಟೋಬರ್ 8ರಂದು ಸಂಜೆ 7 ಗಂಟೆಗೆ ಚಂದನ್ ಅವರ ರಚನೆ ನಿರ್ದೇಶನದಲ್ಲಿ ಮಹಿಷಾಸುರ ಮರ್ಧಿನಿ ನಾಟಕ ಪ್ರದರ್ಶನವಾಗುವುದು. ಅಕ್ಟೋಬರ್ 10ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ವೃತ್ತಿರಂಗಭೂಮಿಯ ಖ್ಯಾತ ಕಲಾವಿದೆ ಅನ್ನಪೂರ್ಣಮ್ಮ ಅವರು ಸಮಾರೋಪ ಭಾಷಣ ಮಾಡುವರು. ನಂತರ ಡಾ. ಗಣೇಶ್ ಕೆಂಚನಾಲ ಅವರ ನಿರ್ದೇಶನದಲ್ಲಿ ದುತ್ತರಗಿ ವಿಚಚಿತ ಮುದುಕನ ಮದುವೆ ನಾಟಕ ಪ್ರದರ್ಶನವಾಗುವುದು ಎಂದರು.
ಕಲಾವಿದರು ಒಕ್ಕೂಟದ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ ಅವರು ಮಾತನಾಡಿ, ಈ ಬಾರಿ ಕುಟುಂಬ ರಂಗ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದೇವೆ. ಪಾಲಿಕೆ ನೀಡಿದ ಆಹ್ವಾನದಂತೆ ತಮ್ಮ ಮನೆಗಳಲ್ಲಿಯೇ ನಾಟಕ ಮಾಡಲು ಹಲವು ಕುಟಂಬಗಳು ಉತ್ಸುಕವಾಗಿವೆ. ಅವರ ಕುಟುಂಬದವರೇ ಸೇರಿ ಮನೆಯಲ್ಲಿ ಮಾಡುವ ನಾಟಕಗಳನ್ನು ನಾವು ಹೋಗಿ ವೀಕ್ಷಿಸುತ್ತೇವೆ. ಆಯ್ದ 4 ನಾಟಕಗಳ ಪ್ರದರ್ಶನ ಅಕ್ಟೋಬರ್ 9ರಂದು ಸಂಜೆ 6.30ಕ್ಕೆ ಆಯೋಜಿಸಲಾಗಿದೆ ಎಂದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕೋತ್ಸವ, ಪ್ರತಿಭಾ ಕಾರಂಜಿ, ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ಇತ್ಯಾದಿ ಸಂದರ್ಭದಲ್ಲಿ ಮೇಕಪ್ ಮಾಡಲು ಶಿಕ್ಷಕರು ಕಷ್ಟಪಡುತ್ತಿದ್ದರು. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಶಾಲೆಗಳ ಆಯ್ದ 35 ಶಿಕ್ಷಕರಿಗೆ ನೇಪಥ್ಯ ರಂಗ ಪ್ರಸಾದನ ಶಿಬಿರ ಆಯೋಜಿಸಲಾಗಿತ್ತು. ಈ ಶಿಕ್ಷಕರಿಗೆ ಸರಳವಾದ ಪ್ರಸಾದನ ಕಿಟ್ ನೀಡುವುದಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಕಲಾವಿದರು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಅವರು ಮಾತನಾಡಿ, ಈ ಬಾರಿ ರಂಗ ದಸರಾದಲ್ಲಿ ಕಲಾವಿದರು, ತಂಡಗಳು ಭಾಗವಹಿಸುವುದರ ಬದಲಾಗಿ ಎಲ್ಲಾ ಕಲಾವಿದರು ಒಟ್ಟಾಗಿ ಕಾರ್ಯಕ್ರಮಗಳನ್ನು ನೀಡುತ್ತಿದ್ದೇವೆ. ಹಾಗಾಗಿ ಯಾವ ತಂಡಗಳ ಹೆಸರೂ ಇಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಲಾವಿದರು ಒಕ್ಕೂಟದ ಕಾರ್ಯದರ್ಶಿ ಸುರೇಶ್ ಹೆಚ್.ಎಸ್., ಕಲಾವಿದರಾದ ಲವ ಜಿ.ಆರ್. ಚಂದನ್ ನೀನಾಸಂ, ಚಂದ್ರಶೇಖರ ಹಿರೇಗೋಣಿಗೆರೆ ಇದ್ದರು.

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

0

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು ಈ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ತಿಳಿಸಿದರು.
ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಬೆಂಗಳೂರು, ಕಂದಾಯ ಇಲಾಖೆ, ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಶಿವಮೊಗ್ಗ ಇವರ ಸಹಯೋಗದೊಂದಿಗೆ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬAಧಿಸಿದ ಕಾಯ್ದೆಗಳ ಬಗೆಗಿನ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಭೂಮಿ ರಕ್ಷಣೆ ಕೇವಲ ಕಂದಾಯ, ಅರಣ್ಯ, ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಮಾತ್ರವಲ್ಲ. ಬದಲಾಗಿ ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಥಿರಾಸ್ತಿಗಳ ಬೆಲೆ ಗಗನಕ್ಕೇರಿದಂತೆ ಭೂ ಕಬಳಿಕೆ ಸಹ ಹೆಚ್ಚಾಗಿದೆ. ಇದನ್ನು ತಡೆಯಲು ಎಷ್ಟೋ ಕಾನೂನು ಇದ್ದರೂ ಸಹ ಪರಿಣಾಮಕಾರಿಯಾಗಿ ಅನುಷ್ಟಾನವಾಗದ ಕಾರಣ ಈ ಅಧಿನಿಯಮವನ್ನು ಜಾರಿಗೆ ತರಲಾಗಿದ್ದು, ಈ ಅಧಿನಿಯಮದ ಕುರಿತು ಅರಿವು ಹೆಚ್ಚಿಸಬೇಕಿದೆ.
ಕೆರೆ, ಕಟ್ಟೆ, ಹಳ್ಳ, ಜಮೀನು, ಇತರೆ ಸರ್ಕಾರದ ಸ್ವತ್ತನ್ನು ಕಾನೂನು ಬಾಹಿರವಾಗಿ ಒತ್ತುವರಿ ಮಾಡುತ್ತಿರುವುದು ಗಮನಕ್ಕೆ ಬಂದ ತಕ್ಷಣ ಕಂದಾಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸಮರ್ಪಕ ವರದಿ ತಯಾರಿಸಿ, ಸರ್ವೇ ಮಾಡಬೇಕು. ಈ ಅಧಿನಿಯಮದ ಪ್ರಕಾರ (ಸ್ಯು ಮೊಟೊ) ಸ್ವಯಂ ಪ್ರಕರಣ ದಾಖಲಿಸಬಹುದು.
ಒತ್ತುವರಿ ಆಗಿರುವುದು ಗಮನಕ್ಕೆ ಬಂದರೂ ಕ್ರಮ ಕೈಗೊಳ್ಳದೇ ಸುಮ್ಮನಿರುವುದು ಅಪರಾಧವಾಗುತ್ತದೆ. ಆದ್ದರಿಂದ ಗ್ರಾಮ ಲೆಕ್ಕಾಧಿಕಾರಿಯಿಂದ ಹಿಡಿದು ಎಲ್ಲರೂ ಈ ಕಾನೂನಿನ ಉದ್ದೇಶ, ವ್ಯಾಪ್ತಿಯನ್ನು ಅರಿತಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಸಾಧ್ಯವಾಗುತ್ತದೆ.
ಕೆರೆ ಸಂರಕ್ಷಣೆ ಅತ್ಯಂತ ಮಹತ್ವದ್ದು. ಕೆರೆ ಕಟ್ಟೆ, ಬಾವಿ, ಜಮೀನು ಇತರೆ ಸರ್ಕಾರಿ ಸ್ವತ್ತನ್ನು ಬಾಂದಗಲ್ಲು ಇತರೆ ಕ್ರಮಗಳಿಂದ ಗುರುತು ಹಾಕಿ ರಕ್ಷಿಸಬೇಕು. ಈ ನಿಟ್ಟಿನಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಗಳು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಶ್ಲಾಘಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಮಾತನಾಡಿ, ವಿಶೇಷ ನ್ಯಾಯಾಲಯದಲ್ಲಿ ಶಿವಮೊಗ್ಗ ಜಿಲ್ಲೆಯ ಒಟ್ಟು ಪ್ರಕರಣಗಳು 2ನೇ ಸ್ಥಾನದಲ್ಲಿದ್ದು ಅಧಿಕಾರಿಗಳ ಜವಾಬ್ದಾರಿ ಹೆಚ್ಚಿಸಿದೆ. ಭೂ ಕಬಳಿಕೆ ನಿಷೇಧ ಅಧಿನಿಯಮ ಜಾರಿಗೆ ಬರುವ ಮೊದಲು ಇದಕ್ಕೆ ಸಂಬAಧಿಸಿದ ಪ್ರಕರಣಗಳು ಸಿವಿಲ್ ನ್ಯಾಯಾಲಯದಲ್ಲಿ ಇತ್ಯರ್ಥವಾಗುತ್ತಿದ್ದವು. ಈ ಅಧಿನಿಯಮ ಭೂ ಕಬಳಿಕೆಯನ್ನು ತಡೆಯಲು ಒಂದು ದೊಡ್ಡ ಅಸ್ತçವಾಗಿದ್ದು ಈ ಕುರಿತು ತಿಳಿದುಕೊಂಡು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಹಾಗೂ ಈ ವಿಶೇಷ ನ್ಯಾಯಾಲಯ ವ್ಯಾಪ್ತಿಗೊಳಪಡುವ ಪ್ರಕರಣಗಳು ಸಿವಿಲ್ ನ್ಯಾಯಾಲಯದಲ್ಲಿದ್ದು ಸರ್ಕಾರಿ ವಕೀಲರ ಮೂಲಕ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿಕೊಳ್ಳಲು ಸಹಕರಿಸಬೇಕೆಂದರು..
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಸರ್ಕಾರಿ ಭೂಮಿ ಅತ್ಯಂತ ಮೌಲ್ಯಯುತವಾದ ಆಸ್ತಿ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಆದರೆ ಜಿಲ್ಲೆಯಲ್ಲಿ ಹೊಸ ಹಾಸ್ಟೆಲ್, ಆಸ್ಪತ್ರೆ, ಇಂದಿರಾ ಕ್ಯಾಂಟೀನ್, ಸರ್ಕಾರಿ ಕಟ್ಟಡಗಳನ್ನು ಕಟ್ಟಲಿಕ್ಕೆ ಜಾಗ ಸಿಗುತ್ತಿಲ್ಲ. ಸರ್ಕಾರದ ಅನುದಾನ ಇದೆ. ಆದರೆ ಜಾಗದ ಕೊರತೆ ಇದೆ. ಸರ್ಕಾರಿ ಜಮೀನನ್ನು ಸಂರಕ್ಷಿಸುವಲ್ಲಿ ಈ ಅಧಿನಿಯಮ ತುಂಬಾ ಮಹತ್ವದ್ದಾಗಿದೆ. ಖುದ್ದು ವಿಶೇಷ ನ್ಯಾಯಾಲಯದ ಅಧ್ಯಕ್ಷರೇ ಕಾರ್ಯಾಗಾರ ಕೈಗೊಳ್ಳುತ್ತಿರುವುದು ಪ್ರಶಂಸನೀಯವಾಗಿದ್ದು ಕಂದಾಯ, ಅರಣ್ಯ, ಪಾಲಿಕೆ ಹಾಗೂ ಸಂಬAಧಿಸಿದ ಎಲ್ಲ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಈ ಅಧಿನಿಯಮದಡಿ ಪ್ರಕರಣ ದಾಖಲು, ಇತರೆ ಪ್ರಕ್ರಿಯೆಗಳ ಬಗ್ಗೆ ತಿಳಿದು ಕೊಂಡು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದ ಅವರು ಈ ಅಧಿನಿಯಮದಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಕ್ಷö್ಯ ನೀಡುವುದು, ಇ-ಆಫೀಸ್ ಮೂಲಕ ದಾಖಲೆ ತೆಗೆದುಕೊಂಡರೆ ಅನುಕೂಲವಾಗುತ್ತದೆ. ಜೊತೆಗೆ ಅಧಿನಿಯಮ ಅನುಷ್ಟಾನದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದರು.
ಪ್ರಥಮ ಅಧಿವೇಶನದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಕರ್ನಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011 ಮತ್ತು ತಿದ್ದುಪಡಿ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಭೂದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕಿ ಯಾಸ್ಮೀನ್ ಬಾನು ಸರ್ಕಾರಿ ಜಮೀನು ಒತ್ತುವರಿಯನ್ನು ಕಂಡುಹಿಡಿಯುವ ಸರ್ವೇ ವಿಧಾನ ಮತ್ತು ನಿಯಮಗಳ ಕುರಿತು ಉಪನ್ಯಾಸ ನೀಡಿದರು. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯರಾದ ಕೆ.ಹೆಚ್.ಅಶ್ವಥ್ ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು.
Shivamogga News ದ್ವಿತೀಯ ಅಧಿವೇಶನದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯ ಎಸ್.ಪಾಲಯ್ಯ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಉಪನ್ಯಾಸ ನೀಡಿದರು. ತೃತೀಯ ಅಧಿವೇಶನದಲ್ಲಿ ನಿವೃತ್ತ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಎಂ.ಅಣ್ಣಯ್ಯ, ಕ.ಭೂ ಕ ನಿ ವಿಶೇಷ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ವಿಲೇಖನಾಧಿಕಾರಿ ಹೆಚ್.ಕೆ.ನವೀನ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಎನ್.ಹೇಮಂತ್, ಡಿಸಿಎಫ್ ಗಳಾದ ಶಿವಶಂಕರ್, ಪ್ರಸನ್ನ ಕೃಷ್ಣ ಪಟಗಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಕಂದಾಯ, ಅರಣ್ಯ, ಪಾಲಿಕೆ ಇತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Raitha Dasara 2024 ರೈತ ದಸರಾದಲ್ಲಿ ತಂಬಾಕು ದುಷ್ಪರಿಣಾಮದ ಬಗ್ಗೆ ಮಾಹಿತಿ ಚಟುವಟಿಕೆ

0

Raitha Dasara 2024 ರಾಷ್ಟಿçÃಯ ತಂಬಾಕು ನಿಯಂತ್ರಣ ಕೋಶವು ದಿನಾಂಕ 5.10.2024 ರಂದು ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರ ಇಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು.

Raitha Dasara 2024 ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿಗಳುಳ್ಳ ಭಿತ್ತಿ ಚಿತ್ರಗಳು, ಭಿತ್ತಿ ಪತ್ರಗಳು ಹಾಗೂ ಕರಪತ್ರಗಳನ್ನು ನಿಗದಿಪಡಿಸಿದ್ದ ಸ್ಟಾಲಿನಲ್ಲಿ ಪ್ರದರ್ಶಿಸಿ ಯುವಕರಿಗೆ, ರೈತರಿಗೆ ಹಾಗು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ವಿಶೇಷವಾಗಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.

Shimoga Dasara 2024 ದಸರಾ ಅಂಬಾರಿ ಸಂಚಾರಕ್ಕೆ ಅನುಕೂಲ ಮಾಡಲು ರಸ್ತೆಯಲ್ಲಿ ಎತ್ತರಹಾಕಿರುವ ಕೇಬಲ್ ಗಳನ್ನ ತೆರವುಗೊಳಿಸಲು ಪಾಲಿಕೆ ಸೂಚನೆ

0

Shimoga Dasara 2024 ಶಿವಮೊಗ್ಗ, ಅಕ್ಟೋಬರ್ 05 (ಕರ್ನಾಟಕ ವಾರ್ತೆ): ದಸರಾ-2024ರ ಪ್ರಯುಕ್ತ ಅ.12 ರಂದು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್- ಶಿವಪ್ಪ ನಾಯಕ ವೃತ್ತ – ಅಮೀರ್ ಅಹ್ಮದ್ ವೃತ್ತ- ಗೋಪಿ ಸರ್ಕಲ್- ಜೈಲ್ ಸರ್ಕಲ್ – ಲಕ್ಷ್ಮೀ ಟಾಕೀಸ್ ಸರ್ಕಲ್- ಪ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದ್ದು, ಅಂಬಾರಿ ಸಂಚರಿಸುವ ಈ ರಸ್ತೆಗಳಲ್ಲಿ ನೆಲದಿಂದ ಮೇಲೆ 20 ಅಡಿಯೊಳಗೆ ಹಾದು ಹೋಗಿರುವ ಎಲ್ಲಾ ಕೇಬಲ್, ವಯರ್, ತಂತಿಗಳನ್ನು ಕೂಡಲೇ ತೆರವುಗೊಳಿಸುವಂತೆ, ಇಲ್ಲವಾದಲ್ಲಿ ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ನೆಟ್‌ವರ್ಕ್ ಏಜೆನ್ಸಿಗಳಿಗೆ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು(ವಿದ್ಯುತ್) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Job Fair ಅಕ್ಟೋಬರ್ 8 ರಂದು ಉದ್ಯೋಗ ಮೇಳ

0

Job Fair ಶಿವಮೊಗ್ಗ, ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
Job Fair ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9380663606/ 9535312531 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.