Tuesday, August 4, 2026
Tuesday, August 4, 2026
Home Blog Page 54

ಪಾರ್ಕುಗಳಲ್ಲಿ ವಿದ್ಯುದ್ದೀಪ ಅಳವಡಿಕೆ ಹಾಗೂ ಪುಂಡುಪೋಕರಿಗಳ ಹಾವಳಿ ತಡೆಯಲು ಅಧಿಕಾರಿಗಳಿಗೆ ಶಾಸಕ ಚೆನ್ನಿ ಸೂಚನೆ

0

ಶಿವಮೊಗ್ಗ “ನಗರದ ಉದ್ಯಾನವನಗಳು ಸಾರ್ವಜನಿಕರ ಮತ್ತು ಮಕ್ಕಳ ಆಹ್ಲಾದಕರ ಹಾಗೂ ಆರೋಗ್ಯಕರ ಜೀವನಶೈಲಿಗೆ ಪೂರಕವಾಗಿರಬೇಕು. ಪಾರ್ಕ್‌ಗಳಲ್ಲಿ ನಾಗರಿಕರ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಸಹಿಸುವುದಿಲ್ಲ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 05ರ ಭುವನೇಶ್ವರಿ ಬಡಾವಣೆಗೆ ಇಂದು ಖುದ್ದಾಗಿ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ಪ್ರಮುಖ ಪಾರ್ಕ್‌ನ ಭೌತಿಕ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳನ್ನು ಭೇಟಿಯಾದ ಶಾಸಕರು, ಪಾರ್ಕ್ ಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಬಡಾವಣೆಯ ನಿವಾಸಿಗಳು ಪಾರ್ಕ್‌ನಲ್ಲಿ ಸಮರ್ಪಕವಾಗಿ ವಿದ್ಯುತ್ ದೀಪಗಳು ಉರಿಯದೆ ಇರುವುದು ಮತ್ತು ರಾತ್ರಿಯಾಗುತ್ತಿದ್ದಂತೆ ಪುಂಡುಪೋಕರ ಹಾವಳಿ ಹೆಚ್ಚಾಗುತ್ತಿರುವುದರಿಂದ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ಓಡಾಡಲು ಭಯಪಡುವಂತಾಗಿದೆ ಎಂದು ಶಾಸಕರ ಗಮನಕ್ಕೆ ತಂದರು.

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲೇ ಇದ್ದ ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿ, “ಕೂಡಲೇ ಪಾರ್ಕ್‌ನಲ್ಲಿ ಬಾಕಿ ಇರುವ ವಿದ್ಯುತ್ ದೀಪಗಳ ನಿರ್ವಹಣಾ ಕೆಲಸಗಳನ್ನು ಮುಗಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ರಾತ್ರಿ ವೇಳೆ ಸೂಕ್ತ ಗಸ್ತು ತಿರುಗುವ ಮೂಲಕ ಪುಂಡುಪೋಕರ ಹಾವಳಿಗೆ ಶಾಶ್ವತ ಕಡಿವಾಣ ಹಾಕಬೇಕು,” ಎಂದು ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್ ಸೇರಿದಂತೆ ಸ್ಥಳೀಯ ಪ್ರಮುಖ ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದ್ರಗುತ್ತಿ ಶ್ರೀರೇಣುಕಾಂಬ ದೇಗುಲದ ಹುಂಡಿ ನಿಧಿ ಎಣಿಕೆ, ₹2.29.60 ಕಾಣಿಕೆ ಸಂಗ್ರಹ

0

ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದ ಕಾಣಿಕೆ ಹುಂಡಿ ನಾಣ್ಯಗಳ ಎಣಿಕೆ ಕಾರ್ಯವು ಶನಿವಾರ ಆಡಳಿತ ಮಂಡಳಿಯ ಕಚೇರಿಯಲ್ಲಿ ನಡೆಯಿತು. ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ಸಮ್ಮುಖದಲ್ಲಿ, ಭಕ್ತಾದಿಗಳು ಹುಣ್ಣಿಮೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ದೇವಿಗೆ ಸಮರ್ಪಿಸಿದ್ದ ಕಾಣಿಕೆ ಹುಂಡಿಯ ನಾಣ್ಯಗಳ ಎಣಿಕೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಸಲಾಗಿದ್ದು, ಸುಮಾರು 2,29,60 ರೂ ನಾಣ್ಯಗಳು ಸಂಗ್ರಹವಾಗಿದೆ.
ಕಳೆದ 10 ದಿನಗಳ ಹಿಂದೆಯಷ್ಟೇ ದೇವಸ್ಥಾನದ ಕಾಣಿಕೆ ಹುಂಡಿಯ ನೋಟುಗಳನ್ನು ಎಣಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ 33,90,580 ರೂ. ನಗದು ಸಂಗ್ರಹವಾಗಿತ್ತು. ನಾಣ್ಯಗಳ ಎಣಿಕೆ ಕಾರ್ಯ ನಡೆಯುತ್ತಿದ್ದ ಕೊಠಡಿಯ ಸುತ್ತಲೂ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ಮುಜರಾಯಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

S.N. Channabasappa ಖಾಸಗಿ ಪಶುವೈದ್ಯಕೀಯ ಕಾಲೇಜುಗಳು ಬೇಡ. ವಿದ್ಯಾರ್ಥಿಗಳ ಬೇಡಿಕೆಗೆ ಶಾಸಕ ಚೆನ್ನಿ ಬೆಂಬಲ

0

“ರಾಜ್ಯದಲ್ಲಿ ಪಶು ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಹಾಗೂ ಈ ಕ್ಷೇತ್ರದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಉದ್ಯೋಗದ ಭವಿಷ್ಯವನ್ನು ಸುರಕ್ಷಿತವಾಗಿಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.

ಬಳಿಕ ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಹೊಸದಾಗಿ ಖಾಸಗಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮೂಡಿದೆ. ಅನಿಯಂತ್ರಿತವಾಗಿ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವುದರಿಂದ ಈ ಉನ್ನತ ಶಿಕ್ಷಣದ ಮೂಲಸೌಕರ್ಯ ಹಾಗೂ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದು ಭವಿಷ್ಯದಲ್ಲಿ ಯುವ ಪಶು ವೈದ್ಯರ ಉದ್ಯೋಗಾವಕಾಶಗಳನ್ನು ಕುಂಠಿತಗೊಳಿಸುವುದಲ್ಲದೆ, ಅಸ್ತಿತ್ವದಲ್ಲಿರುವ ಸರ್ಕಾರಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಪ್ರಾಮುಖ್ಯತೆಯನ್ನೂ ಕಡಿಮೆ ಮಾಡುತ್ತದೆ,” ಎಂದು ವಿದ್ಯಾರ್ಥಿಗಳ ಕಳಕಳಿಯನ್ನು ಸಮರ್ಥಿಸಿದರು.

S.N. Channabasappa “ಪಶು ವೈದ್ಯಕೀಯ ವೃತ್ತಿಯ ದೀರ್ಘಕಾಲೀನ ಉನ್ನತಿಗಾಗಿ ಹಾಗೂ ರಾಜ್ಯದ ಪ್ರಗತಿಗಾಗಿ ಶ್ರಮಿಸುತ್ತಿರುವ ವಿದ್ಯಾರ್ಥಿಗಳ ಹಿತ ಕಾಯುವುದು ಅತ್ಯಗತ್ಯ. ವಿದ್ಯಾರ್ಥಿಗಳು ನೀಡಿರುವ ಈ ಸುದೀರ್ಘ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕಾಗಿ ಪ್ರಾಮಾಣಿಕವಾಗಿ ಒತ್ತಾಯಿಸಲಾಗುವುದು,” ಎಂದು ಶಾಸಕರು ಭರವಸೆ ನೀಡಿದರು.

S.N. Channabasappa ಮುಂದಿನ ವರ್ಷ ಯೋಗ ದಿನಾಚರಣೆಗೆ ಮುನ್ನ ರಾಷ್ಟ್ರಮಟ್ಟದ ಯೋಗ ಸ್ಪರ್ಧೆ ಏರ್ಪಡಿಸೋಣ- ಎಸ್.ಎನ್.ಚನ್ನಬಸಪ್ಪ

0

S.N. Channabasappa ವಸುದೈವ ಕುಟುಂಬಕಂ ಎಂದು ನಂಬಿರುವ ಭಾರತ ದೇಶ ಪ್ರಪಂಚಕ್ಕೆ ನೀಡಿರುವ ಶಕ್ತಿ ‘ಯೋಗ’ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಿಳಿಸಿದರು.
ಭಾರತ ಸರ್ಕಾರ, ಆಯುಷ್ ಮಂತ್ರಾಲಯ, ಕನಾಟಕ ಸರ್ಕಾರ, ಜಿಲ್ಲಾಡಳಿತ, ಶಿವಮೊಗ್ಗ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತ ಬೋಧನಾ ಆಸ್ಪತ್ರೆ ಇವರುಗಳ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ 6.30ಕ್ಕೆ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರಿಗೂ ಶಾಂತಿ, ನೆಮ್ಮದಿ ದೊರಕಬೇಕು ಎಂದು ಬಯಸುವ ನಮ್ಮ ದೇಶ ಪ್ರಪಂಚಕ್ಕೆ ಒಳ್ಳೆಯ ಸಂಗತಿಗಳನ್ನು ನೀಡುವ ಕೆಲಸ ಮಾಡುತ್ತಾ ಬಂದಿದೆ.
ನಮ್ಮ ದೇಶ ಪ್ರಪಂಚಕ್ಕೆ ಯೋಗ ವನ್ನು ನೀಡುವ ಮೂಲಕ ಶಕ್ತಿ ತುಂಬಿದೆ. ಪ್ರಪಂಚಕ್ಕೆ ಯೋಗ ಪರಿಚಯಿಸಿದ ನಮ್ಮ ಪ್ರಧಾನಿಯವರಿಗೆ ಈ ಮೂಲಕ
ಅಭಿನಂದನೆ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ‌ ಎಂದರು.
ಕೊರೊನಾದಂತಹ ವೇಳೆಯಲ್ಲಿ ನಮ್ಮ‌ದೇಶ ಇತರೆ ದೇಶಗಳಿಗೆ ಲಸಿಕೆಯನ್ನು‌ ಹಂಚಿದ್ದು, ಇದೇ ರೀತಿ ಉತ್ತಮ ಅಂಶಗಳನ್ನು ನೀಡುತ್ತಾ ಬಂದಿದ್ದೇವೆ ಎಂದರು.
ಮುಂದಿನ ವರ್ಷ ಯೋಗ ದಿನಾಚರಣೆಗೂ‌ ಮುನ್ನ ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯನ್ನು ಏರ್ಪಡಿಸುವ ಭರವಸೆ ನೀಡಿದರು.
ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಮಾತನಾಡಿ, ಇಂದು‌ ೧೯೦ ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನ ಆಚರಿಸುತ್ತಿರುವುದು ಹೆಮ್ಮೆಯ ವಿಷಯ.
ದೇಹ, ಮನಸ್ಸು ಮತ್ತು ಆತ್ಮ‌ವನ್ನು ಸಮತೋಲನೆಯಲ್ಲಿಡುವ ಯೋಗವನ್ನು ನಾವೆಲ್ಲರೂ ಅಭ್ಯಾಸ ಮಾಡಬೇಕು.
ಸಂಸ್ಕೃತಿ ಉಳಿಯಬೇಕಾದರೆ
ನಮ್ಮ‌ ಪರಂಪರೆ, ನಮ್ಮ ನಂಬಿಕೆಗಳು ಉಳಿಯಬೇಕು. ಇಂತಹ ಸಂಸ್ಕೃತಿಯನ್ನು ನಾವು ವಿಶ್ವಕ್ಕೆ ಹಂಚುತ್ತಿದ್ದೇವೆ. ನಮ್ಮ ಪ್ರಧಾನಿಯವರು ಇಂದು ಕೊಲ್ಕತ್ತಾ ದಲ್ಲಿ ೧ ಲಕ್ಕೂ ಅಧಿಕ‌ ಜನರೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ ಎಂದರು.
೨೦೪೭ ಕ್ಕೆ ನಮ್ಮ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರ ಆಗಲಿದೆ. ಈ ನಿಟ್ಟಿನಲ್ಲಿ‌ ನಮ್ಮ‌ ಮತ್ತು ದೇಶದ ಆರೋಗ್ಯ ಮಹತ್ವದ ಪಾತ್ರ ವಹಿಸುತ್ತದೆ. ಆರೋಗ್ಯಯುತ ನಾಗರೀಕರೊಂದಿಗೆ, ಆರೋಗ್ಯಕರ ಬೆಳವಣಿಗೆಯೊಂದಿಗೆ ದೇಶ ಆರೋಗ್ಯಕರವಾಗಿರುತ್ತದೆ ಎಂದು ವಿಶ್ವಾಸ ವ್ತಕ್ತಪಡಿಸಿದರು.‌
ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ‌ ಮಾತನಾಡಿ, ಯೋಗ ಭಾರತದ ಶಕ್ತಿ. ‌ಹಾಗೂ ನಾವು ಪ್ರಪಂಚಕ್ಕೆ ನೀಡದೆ ಕೊಡುಗೆ. ಇಂತಹ ಪ್ರಾಚೀನ‌‌ ವಿಜ್ಞಾನವನ್ನು ಕೊಡುಗೆ ನೀಡಿರುವುದು ಹೆಮ್ಮೆಯ ವಿಷಯವಾಗಿದ್ದು ಇದು ಎಲ್ಲರ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಯೋಗಾಭ್ಯಾಸ ಮಾಡಲು ಯಾವುದೇ ಖರ್ಚು ಇಲ್ಲ. ಮನೆಯಲ್ಲಿಯೇ ಎಲ್ಲ ವಯೋಮಾನದವರು ಮಾಡಬಹುದು. ಶಾಲೆಗಳಲ್ಲಿ ವಾರದಲ್ಲಿ ಒಂದು ದಿನ ಯೋಗಾಭ್ಯಾಸ ಮಾಡಿಸಿದರೆ ಸದೃಢ ಮಕ್ಕಳನ್ನು ಸಿದ್ದಪಡಿಸಬಹುದು . ನಮ್ಮ ವರನಟ ಡಾ. ರಾಜ್ ಕುಮಾರ್ ನಿಯಮಿತವಾಗಿ ಯೋಗಾಭ್ಯಾಸ ಮಾಡುತ್ತಿದ್ದು ಯುವಕರಿಗೆ ಮಾದರಿಯಾಗಿದ್ದಾರೆ ಎಂದ ಅವರು ಒಲಂಪಿಕ್ಸ್ ಲ್ಲೂ ಯೋಗವನ್ನು ಪರಿಚಯಿಸಬೇಕೆಂದು ಮನವಿ ಮಾಡಿದರು.
ತೀರ್ಥಹಳ್ಳಿ ವೈದ್ಯಾಧಿಕಾರಿ ಡಾ. ರವಿಶಂಕರ್ ಉಡುಪ ಪ್ರಾಸ್ತಾವಿಕವಾಗಿ ಯೋಗ ಒಂದು ಅದ್ಭುತ ವಿಜ್ಞಾನ. ಇದಕ್ಕೆ ೫೦೦೦ ವರ್ಷಗಳ ಇತಿಹಾಸವಿದೆ. ಹಿಂದೆ ಯೋಗಿಗಳು ಮಾನಸಿಕ ಸ್ಥೈರ್ಯ ಮತ್ತು ಆಧ್ಯಾತ್ಮ ಸಾಧನೆ ಮಾಡಲು ಇದನ್ನು ಅಭ್ಯಾಸ ಮಾಡುತ್ತಿದ್ದರು. ನಂತರದಲ್ಲಿ ಪತಂಜಲಿ ಗುರುಗಳು ಸಾಮಾನ್ಯರೂ ಈ ಅಭ್ಯಾಸ ಮಾಡಲು ಅಷ್ಟಾಂಗ ಯೋಗ ಪರಿಚಯಿಸಿದರು. ಆದ್ದರಿಂದ ಇವರನ್ನು ಯೋಗದ ಪಿತಾಮಹ ಎಂದು ಕರೆಯಲಾಗುತ್ತದೆ ಎಂದರು.
S.N. Channabasappa ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನಮ್ಮ ಪ್ರಧಾನಿಯವರು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ೨೦೧೪ ರ ಸೆಪ್ಟೆಂಬರ್ ಮಾಹೆಯಲ್ಲಿ ವಿಷಯ ಮಂಡನೆ ಮಾಡುತ್ತಾರೆ. ೧೭೭ ರಾಷ್ಟ್ರಗಳು ಇದಕ್ಕೆ ಒಪ್ಪಿ ಸಹಿ ಮಾಡುತ್ತಾರೆ.ದೀರ್ಘವಾದ ಹಗಲು ಹೊಂದಿರುವ ಜೂನ್ ೨೧ ನ್ನು ಯೋಗ ದಿನವಾಗಿ ಆಚರಿಸಲು ನಿರ್ಧರಿಸಿ 2015 ರಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆರಂಭಿಸಲಾಗುತ್ತದೆ. ಈ ವರ್ಷ ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಸಣ್ಣ ವಯಸ್ಸಿನಿಂದಲೇ ಯೋಗಾಭ್ಯಾಸ ಆರಂಭಿಸಿದರೆ ವೃದ್ಧಾಪ್ಯ ಆರೋಗ್ಯಕರವಾಗಿರುತ್ತದೆ ಎಂದರು.
ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಯೋಗ ನೃತ್ಯ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಕಿ ವಿಜಢತರಾದವರಿಗೆ ಹಾಗೂ ಯೋಗಾಭ್ಯಾಸದಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಯೋಗ ಕಾರ್ಯಕ್ರಮದ ವಿವರ: ಬೆಳಗ್ಗೆ 6.45 ರಿಂದ 7.00 – ಯೋಗಗೀತೆ, ಬೆಳಗ್ಗೆ 7.00 ರಿಂದ 7.45 -ಯೋಗ ಪ್ರದರ್ಶನ, ಬೆಳಗ್ಗೆ 8.00 ರಿಂದ 8.45 – ವೇದಿಕೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಆಯುಷ್ ಅಧಿಕಾರಿ ಡಾ.ಲಿಂಗರಾಜ್ ಹಿಂಡಸಗಟ್ಟಿ, ಡಿಡಿಪಿಐ ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಕೆಎಸ್ ಆರ್ ಪಿ ಡೆಪ್ಯುಟಿ ಕಮಾಂಡೆಂಟ್ ಮಂಜುನಾಥ್ ಅಣತಿ,
ಸರ್ಕಾರಿ ಆಯುರ್ವೇದ ವೈದಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಪ್ರಾಚಾರ್ಯರಾದ ಡಾ. ವೀಣಾ ಎಂ.ಎಸ್, ಬಾಪೂಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯರಾದ
ಡಾ. ಶೀಲಾ, ಡಾ.ಮಹೇಶ್, ವೈದ್ಯಾಧಿಕಾರಿಗಳು, ಕೆಎಸ್ ಆರ್ ಪಿ, ರ್ಯಾಪಿಡ್ ಆಕ್ಷನ್ ಫೋರ್ಸ್, ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ, ಜಿಲ್ಲಾ ಆಯುಷ್ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

0

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ದೇಶದ ಅನೇಕ ಯುವಕರಿಗೆ ಉದ್ಯೋಗ ಸೃಷ್ಟಿ ಕಾರ್ಯ ಕೈಗೊಂಡು ಸ್ವಾಭಿಮಾನದ ಬದುಕಿಗೆ ಶಕ್ತಿಯನ್ನು ತುಂಬುವ ಕಾರ್ಯವನ್ನು ಪ್ರಧಾನ ಮಂತ್ರಿಗಳು ಕೈಗೊಂಡಿದ್ದಾರೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಹೇಳಿದರು.
ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು, ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಪ್ರಾದೇಶಿಕ ಕಚೇರಿ ಶಿವಮೊಗ್ಗ ಇವರುಗಳ ಸಹಯೋಗಯೊಂದಿಗೆ ಶುಕ್ರವಾರ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನಾ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯಾ ನಂತರದಲ್ಲಿ ಇದೊಂದು ಮಹತ್ವದ ಯೋಜನೆಯಾಗಿದ್ದು, ಕಾರ್ಮಿಕರಿಗೆ ಎರಡು ಕಂತುಗಳಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಕಾರ್ಮಿಕರಿಗೆ ಮೊದಲನೇ ವರ್ಷ ರೂ.15 ಸಾವಿರ ನೀಡಲಾಗುವುದು.
1027 ಕಾರ್ಮಿಕರು ಈ ಉದ್ಯೋಗ ಕ್ಷೇತ್ರಕ್ಕೆ ಹೊಸದಾಗಿ ನೇಮಕಗೊಂಡು ರೂ‌. 57, 36,828 ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಲಾಗಿದ್ದು, ದೇಶದಲ್ಲಿ ರೂ.2 ಸಾವಿರ ಕೋಟಿ ಕಾರ್ಮಿಕರಿಗೆ ಮತ್ತು ಕಂಪನಿ ಉದ್ಯೋಗಿಗಳಿಗೆ ಅನುಕೂಲವಾಗಿದೆ.
ರೂ.96 ಸಾವಿರ ಕೋಟಿ ಅನುದಾನವನ್ನು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದು, ಸುಮಾರು ರೂ.1 ಲಕ್ಷ ಕೋಟಿ ಹಣವನ್ನು ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜಾಗಾರ್ ಯೋಜನೆಗೆ ಮಿಸಲಿಡಲಾಗಿದೆ. ಕಾರ್ಮಿಕರು ಗೌರವಯುತವಾಗಿ ಕೆಲಸ ಮಾಡಲು ಪ್ರಧಾನಿಯವರು ಉತ್ತಮ ಅವಕಾಶ ಕಲ್ಪಿಸಿದ್ದಾರೆ ಅದರ ಸದುಪಯೋಗ ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.
B.Y. Raghavendra ಪ್ರಾದೇಶಿಕ ಆಯುಕ್ತರಾದ ಸಿ. ಪಿ ಜಸೀನಾ ಮಾತನಾಡಿ,ಈ ಯೋಜನೆ 2025 ರ ಆಗಸ್ಟ್ 01 ರಿಂದ 2027 ರ ಜುಲೈ 31 ರವರೆಗೆ ಜಾರಿಯಲ್ಲಿದ್ದು, ರೂ.99,446 ಕೋಟಿ ವೆಚ್ಚದೊಂದಿಗೆ 3.5 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿಯ ನಿರೀಕ್ಷೆಯಿದೆ. ಭಾಗ -ಎ ಅಡಿಯಲ್ಲಿ 4.41 ಲಕ್ಷ ಮೊದಲ ಬಾರಿಗೆ ಉದ್ಯೋಗ ಪಡೆದ ನೌಕರರಿಗೆ ರೂ.247 ಕೋಟಿ ವಿತರಿಸಲಾಗಿದೆ. ಭಾಗ -ಬಿ ಅಡಿಯಲ್ಲಿ 17,551 ಸಂಸ್ಥೆಗಳಿಗೆ ರೂ. 214 ಕೋಟಿ ಪ್ರೋತ್ಸಾಹ ಧನ ನೀಡಲಾಗಿದ್ದು, ಸುಮಾರು 6.46 ಲಕ್ಷ ಹೆಚ್ಚುವರಿ ಉದ್ಯೋಗಗಳು ಸೃಷ್ಟಿಯಾಗಿವೆ. ರೂ. 15 ಸಾವಿರದಿಂದ ರೂ.1 ಲಕ್ಷ ವರೆಗೆ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. ಇಡೀ ದೇಶದಲ್ಲಿ 200 ಸ್ಥಳದಲ್ಲಿ ಈ ಯೋಜನೆಯಡಿ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸೌಲಭ್ಯ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿ ಅಧ್ಯಕ್ಷರಾದ ಬಿ. ಗೋಪಿನಾಥ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ವೇಣುಗೋಪಾಲ,ಪ್ರಾದೇಶಿಕ ಆಯುಕ್ತರಾದ ಸಿ. ಟಿ ಜಸೀನಾ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ 6,7& 8 ನೇ ತರಗತಿ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

0

ಕಲಾವಿದ ಚಾರಿಟೇಬಲ್ ಟ್ರಸ್ಟ್ ಪ್ರಾರಂಭ ಗೊಂಡು 22 ವರ್ಷ ಸತತವಾಗಿ ಸಮಾಜ ಸೇವೆಗಳನ್ನು ನಡೆಸಿಕೊಂಡು ಬರುತ್ತಿದೆ.

22 ವರ್ಷದ ಈ ಸಂಭ್ರಮದಲ್ಲಿ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಯ 6,7 ಮತ್ತು 8 ನೇ ತರಗತಿ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು, ಅಲ್ಲದೆ ಹಲವು ಸಾಧಕರಿಗೆ ಸನ್ಮಾನವನ್ನು ನೆರವೇರಿಸಲಾಯಿತು.

ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಟ್ರಸ್ಟಿನ ಅಧ್ಯಕ್ಷರಾದ ಕಲಾವಿದ ನಡೆಸಿಕೊಟ್ಟರು.

ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಹೊಸಜೀವ ತುಂಬಲು ಇರುವ ಸಾಧ್ಯತೆಗಳ ಬಗ್ಗೆ ಉನ್ನತಮಟ್ಟದ ಸಭೆ

0

ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿನ ಭೌಗೋಳಿಕ ಅನುಕೂಲತೆಗಳನ್ನು ಬಳಕೆ ಮಾಡಿಕೊಂಡು ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಹೊಸಜೀವ ತುಂಬಲು ಇರುವ ಸಾಧ್ಯತೆಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ.ಜೆ.ಜಾರ್ಜ್, ಕರಾವಳಿ ಮೂಲದ ಹೆಸರಾಂತ ನಟ, ನಿರ್ದೇಶಕ ರಿಶಬ್ ಶೆಟ್ಟಿ, ಶಾಸಕರಾದ ಜಿ.ಟಿ. ದೇವೇಗೌಡ, ಸತೀಶ್ ಸೈಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Department of Health and Family Welfare ಶಿಶಿಕ್ಷು ತರಬೇತಿ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

0

Department of Health and Family Welfare ಭಾರತ ಸರ್ಕಾರ, ಆಯುಷ್ ಮಂತ್ರಾಲಯ, ಕನಾಟಕ ಸರ್ಕಾರ, ಜಿಲ್ಲಾಡಳಿತ, ಶಿವಮೊಗ್ಗ ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತ ಬೋಧನಾ ಆಸ್ಪತ್ರೆ ಇವರುಗಳ ಸಹಯೋಗದಲ್ಲಿ ಜೂ. 21 ರಂದು ಬೆಳಗ್ಗೆ 6.30ಕ್ಕೆ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಯು.ಟಿ.ಖಾಧರ್ ಗೌರವ ಉಪಸ್ಥಿತಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪರವರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ, ಜಿಲ್ಲಾ ಆಯುಷ್ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಹಾಗೂ ಮಹಾನಗರ ಪಾಲಿಕೆ ಆಯುಕ್ತರು, ಸಾರ್ವಜನಿಕರು ಹಾಗೂ ಜಿಲ್ಲೆಯ ಎಲ್ಲಾ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Department of Health and Family Welfare ಕಾರ್ಯಕ್ರಮದ ವಿವರ: ಬೆಳಗ್ಗೆ 6.45 ರಿಂದ 7.00 – ಯೋಗಗೀತೆ, ಬೆಳಗ್ಗೆ 7.00 ರಿಂದ 7.45 -ಯೋಗ ಪ್ರದರ್ಶನ, ಬೆಳಗ್ಗೆ 8.00 ರಿಂದ 8.45 – ವೇದಿಕೆ ಕಾರ್ಯಕ್ರಮ, 9.00 ರಿಂದ 10.00 – ಲಘು ಉಪಹಾರ.

ಶಿವಮೊಗ್ಗ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆ ಉಪನಿರ್ದೇಶಕರಾಗಿ ಸಿ.ಎಸ್.ಷಡಾಕ್ಷರಿ ಅಧಿಕಾರ ಸ್ವೀಕಾರ

0

ಸಿ.ಎಸ್.ಷಡಾಕ್ಷರಿ ಅವರು ಜೂನ್‌ 18ರಂದು ಶಿವಮೊಗ್ಗದ ರಾಜ್ಯ ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇದ್ದ ಉಪನಿರ್ದೇಶ ಹುದ್ದೆಯ ಅಧಿಕಾರ ವಹಿಸಿಕೊಂಡರು. ‍‍ಶ್ರೀಯುತರು ಈ ಹಿಂದೆ ಶಿವಮೊಗ್ಗದ ಲೆಖ್ಖಪರಿಶೋಧನಾ ವರ್ತುಲ ಇಲಾಖೆಯಲ್ಲಿ ಲೆಖ್ಖ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಸ್.ಷಡಾಕ್ಷರಿ ಅವರು 2023ರಲ್ಲಿ ಶಿವಮೊಗ್ಗದಿಂದ ವರ್ಗಾವಣೆಗೊಂಡು ಬೆಂಗಳೂರಿನ ಉಚ್ಛನ್ಯಾಯಾಲಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.
ಪ್ರಸ್ತುತ ಸಿ.ಎಸ್.ಷಡಾಕ್ಷರಿ ಅವರು ಸರ್ಕಾರದ ವರ್ಗಾವಣೆ ಆದೇಶದಂತೆ ಶಿವಮೊಗ್ಗಕ್ಕೆ ಮರಳಿ ಕರ್ತವ್ಯದ ಮೇಲೆ ಹಾಜರಾಗಿರುವುದು ರಾಜ್ಯ ಸರ್ಕಾರಿ ನೌಕರರಲ್ಲಿ ಸಂತಸ ಮೂಡಿದೆ. ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೌಕರರು ಸಿ.ಎಸ್.ಷಡಾಕ್ಷರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಭ್ರಮಿಸಿದರು.

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

0

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ ವಿಶೇಷವಾದ ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಾ ಎಲ್ಲಾ ಜನಮಾನಸವನ್ನು ತಲುಪುತ್ತಿರುವ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ. ಎಂದು ರೋಟರಿ ಜಿಲ್ಲೆ 31 82ರ ಎಲ್ಲಾ ಗವರ್ನರ್ ಪಾಲಾಕ್ಷ ಕೆ ಅಭಿಮತ ವ್ಯಕ್ತಪಡಿಸಿದರು. ಅವರು ಶಿವಮೊಗ್ಗ ನಗರದ ವಿಶಾಲ್ ಮಾರ್ಟ್ ಎದುರುಗಡೆ ಇರುವ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ಲಿನ ನವೀಕೃತ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ. 2026 27ನೇ ಸಾಲಿನ ಜಿಲ್ಲಾ ಗೌರ್ನರ್ ಬಿ ಎಂ ಬಟ್ ಮಾತನಾಡುತ್ತಾ ಇಂದು ರೋಟರಿ ಸಂಸ್ಥೆಗಳ ಮುಖಾಂತರ ಹಲವಾರು ಯೋಜನೆಗಳನ್ನ ಹಮ್ಮಿಕೊಳ್ಳುವುದರ ಜೊತೆಗೆ ಪ್ರೀತಿ ಸ್ನೇಹ ಒಡನಾಟ ಹಾಗೂ ಉತ್ತಮ ಬಾಂಧವ್ಯ ವೃದ್ಧಿ ಮಾಡಲು ಸಹಕಾರಿಯಾಗಿದೆ. ಇಂತಹ ಸುಸಜ್ಜಿತವಾದ ಕಟ್ಟಡದಲ್ಲಿ ಬುದ್ಧಿ ಮಂದಿರ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು. ಮತ್ತೋರ್ವ ಚುನಾಯಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರವರು ಮಾತನಾಡುತ್ತಾ ರೋಟೋರಿಯ ಸೇವಾ ಕಾರ್ಯಗಳನ್ನು ಕಾರ್ಯಗಳನ್ನು ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರ ಆಶಯದಂತೆ ಸತ್ಕಾರ್ಯಗಳನ್ನು ಮಾಡಲು ಎಲ್ಲಾ ಸದಸ್ಯರು ಒಟ್ಟುಗೂಡಿ ಸಮಾಜದ ಅಭಿವೃದ್ಧಿಗೆ ಪೂರಕವಾದಂತ ಯೋಜನೆಗಳನ್ನು ಹಮ್ಮಿ ಹಮ್ಮಿಕೊಂಡು ಈ ಸ್ಥಳವನ್ನು ಮುಂದಿನ ದಿನಗಳಲ್ಲಿ ಅಭಿವೃದ್ದಿ ಪಡಿಸುವಂತೆ ಕರೆ ನೀಡಿದರು. Rotary Organization ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ಲಿನ ಅಧ್ಯಕ್ಷರಾದ ಬಿ ಬಸವರಾಜ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಎಲ್ಲಾ ರೋಟರಿ ಬಂಧುಗಳ ಸಹಕಾರದಿಂದ ಈ ಕಟ್ಟಡ ನವೀಕೃತಗೊಂಡಿದೆ ಎಲ್ಲಾ ದಾನಿಗಳಿಗೂ ಅಭಿನಂದನೆಯನ್ನು ತಿಳಿಸಿದರು ಕಾರ್ಯಕ್ರಮದಲ್ಲಿ ಸಹಾಯಕ ಗವರ್ನರ್ ಲಕ್ಷ್ಮಣ್ ಎಂಬಿ. ಕೆಪಿ ಶೆಟ್ಟಿ. ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್.. ವಲಯ ಸೇನಾನಿ ಕಿರಣ್. ಎಚ್ ಎಮ್ ಸುರೇಶ್ ಟ್ರಸ್ಟಿನ ಅಧ್ಯಕ್ಷರಾದ ಚೂಡಾಮಣಿ ಈ ಪವಾರ್. ಕೊಟೊಜಿ ರವಿ. ಕಾರ್ಯದರ್ಶಿ ಜಯಶೀಲ್ ಶೆಟ್ಟಿ. ಮಾಜಿ ಜಿಲ್ಲಾ ಗವರ್ನರ್ ಗಳಾದ ಪ್ರೊಫೆಸರ್ ಎ ಎಸ್ ಚಂದ್ರಶೇಖರ್. ಎಚ್ ಎಲ್ ರವಿ.. ನಿಯೋಜಿತ ಸಹಾಯಕ ಗವರ್ನರ್ ನಾಗರಾಜ್ ಹಾಗೂ ಶಿವಮೊಗ್ಗ ಸೆಂಟ್ರಲ್ ಕ್ಲಬ್ಬಿನ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು