Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಮೈ ಭಾರತ್ ಯೋಜನೆಯಡಿಯಲ್ಲಿ ಸ್ವಚ್ಛ ಭಾರತ್ ಮಿಷನ್- ನಯಾ ಸಂಕಲ್ಪದ, ಸ್ವಭಾವ್ ಸ್ವಚ್ಛತಾ, ಸಂಸ್ಕಾರ್ ಸ್ವಚ್ಛತೆ ಎಂಬ ಶೀರ್ಷಿಕೆಯಡಿಯಲ್ಲಿ ಅಕ್ಟೊಬರ್ 2 ರಂದು ಗಾಂಧಿ ಜಯಂತಿಯ ಪ್ರಯುಕ್ತ ಸೆಪ್ಟೆಂಬರ್ 17 ರಿಂದ 2ನೇ ಅಕ್ಟೋಬರ್ 2024 ವರೆಗೆ ಹಮ್ಮಿಕೊಳ್ಳಲಾಗಿದ್ದು,ಈ ಸಂದರ್ಭದಲ್ಲಿ ಜಿಲ್ಲಾಡಳಿತ, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಶಿವಮೊಗ್ಗ,ಪಶುವೈದ್ಯಕೀಯ ಮಹಾವಿದ್ಯಾಲಯ, ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜು, ನಂಜಪ್ಪ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಮತ್ತು ಅಲೈಡ್ ಹೆಲ್ತ್ ಸೈನ್ಸ್,ಶಿವಮೊಗ್ಗ, ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್,ಗೋಪಾಳ, ಮಲೆನಾಡು ಕಲಾ ತಂಡ, ವಿವೇಕಾನಂದ ಯೂತ್ ಫೌಂಡೇಶನ್,ಶಿವಮೊಗ್ಗಇವರ ಸಹಯೋಗದೊಂದಿಗೆ ದಿನಾಂಕ 01.10.2024 ರಂದು” ಸ್ವಚ್ಛತ ಹೀ ಸೇವಾ ” ಕಾರ್ಯಕ್ರಮವನ್ನು ಆಲ್ಕೊಳ ಸರ್ಕಲ್ನ ಗಾಡಿಕೊಪ್ಪದಲ್ಲಿ ಹಮ್ಮಿಕೊಂಡಿದ್ದು,ಈ ಸ್ವಚ್ಛತಾ ಅಭಿಯಾನದಲ್ಲಿ ನಮ್ಮ ಶಿವಮೊಗ್ಗ ನಗರದ ಗೌರವಾನ್ವಿತ ಶಾಸಕರಾದ ಶ್ರೀ. ಚನ್ನಬಸಪ್ಪ ಎಸ್.ಎನ್. (ಚೆನ್ನಿ) . ರವರು ಭಾಗವಹಿಸಿ ಚಾಲನೆ ನೀಡಿದರು. Youth Empowerment and Sports ಹಾಗೂ ಸ್ವಚ್ಛತೆಯ ಬಗ್ಗೆ, ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಜವಬ್ದಾರಿ ಎಂದು ತಿಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸುಮಾರು 250 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಲ್ಗೊಳ ಸರ್ಕಲ್ ನಿಂದ ನಂಜಪ್ಪ ಲೈಫ್ ಕೇರ್ ತನಕ ಮತ್ತು ಕೋಸ್ಮಾ ಕ್ಲಬ್ ನಿಂದ ನಂಜಪ್ಪ ಲೈಫ್ ಕೇರ್ ತನಕ ಎರಡು ತಂಡಗಳಾಗಿ ಸುಮಾರು 2.5 ಕೀ.ಮಿ ತನಕ ಅಭಿಯಾನವನ್ನು ನಡೆಸಲಾಯಿತು. ಈ ಅಭಿಯಾನದಲ್ಲಿ ನೆಹರು ಯುವ ಕೇಂದ್ರದ, ಜಿಲ್ಲಾ ಯುವ ಅಧಿಕಾರಿಯಾದ ಶ್ರೀ.ಉಲ್ಲಾಸ್ ಕೆ.ಟಿ.ಕೆ ಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಯುವಜನ ಮತ್ತು ಕ್ರೀಡಾ ಇಲಾಖೆಯ, ಸಹಾಯಕ ನಿರ್ದೇಶಕರಾದ, ಶ್ರೀ. ರೇಕ್ಯಾ ನಾಯಕ್, ಪಶುವೈದ್ಯಕೀಯ ಕಾಲೇಜಿನ ಎನ್. ಎಸ್. ಎಸ್. ಅಧಿಕಾರಿಗಳಾದ ಪ್ರೊ.ರವಿಕುಮಾರ್ ಮತ್ತು ಪ್ರೊ. ಯೋಗೇಶ್,ನಂಜಪ್ಪ ಫಿಸಿಯೋಥೆರಪಿ ಇನ್ಸ್ಟಿಟ್ಯೂಟ್ನ ಪ್ರಾಂಶುಪಾಲರಾದ ಶ್ರೀ. ರಾಜನ್, ಕಟೀಲು ಅಶೋಕ್ ಪೈ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಸಂಧ್ಯಾಕಾವೇರಿಯವರು, NSS ಅಧಿಕಾರಿ ಡಾ. ಸುಗೀರ್ದಿ, ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ನ ಪ್ರಾಂಶುಪಾಲರಾದ ಶ್ರೀ. ಆರ್. ಸುನೀಲ್, NSS ಅಧಿಕಾರಿಯಾದ ಶ್ರೀಮತಿ. ಜ್ಯೋತಿ ಮತ್ತು ಸಿಬ್ಬಂದಿವರ್ಗದವರು, ಮಲೆನಾಡು ಕಲಾತಂಡದ ಅಧ್ಯಕ್ಷರಾದ ಶ್ರೀ. ಗಣೇಶ್ ಕೆಂಚನಾಲ್ ಮತ್ತು ತಂಡದ ಸದಸ್ಯರುಗಳು, ವಿವೇಕಾನಂದ ಯೂತ್ ಫೌಂಡೇಶನ್ನ ಸದಸ್ಯರುಗಳು, ಮತ್ತು ನೆಹರು ಯವ ಕೇಂದ್ರದ ಲೆಕ್ಕಾಧಿಕಾರಿಯಾದ ಶ್ರಿ. ರಮೇಶ್, ಸ್ವಯಂಸೇವಕರುಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ
Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ ಎಂದು ಯೋಗ ಗುರು ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.
ಶಿವಗಂಗಾ ಯೋಗ ಕೇಂದ್ರದ ಕೃಷಿನಗರ ಶಾಖೆಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಆಚರಣೆಯಲ್ಲಿ ಮಾತನಾಡಿ, ರಾಷ್ಟ್ರಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ್ಯದ ಹೋರಾಟದಲ್ಲಿ ಭಾಗಿಯಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಯುವಜನರು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಪ್ರಾಮಾಣಿಕತೆ, ಸರಳ ಜೀವನಶೈಲಿ ಹಾಗೂ ದೂರದೃಷ್ಟಿಯ ಆಲೋಚನೆಗಳು ನಮಗೆಲ್ಲರಿಗೂ ದಾರಿದೀಪ ಎಂದರು.
Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಗಾಂಧೀಜಿ ಅವರು ಕಂಡ ರಾಮ ರಾಜ್ಯ, ಸ್ವಚ್ಛತೆಯ ಬಗ್ಗೆ ನಾವೆಲ್ಲರೂ ಶ್ರಮಿಸಬೇಕು. ಎಲ್ಲ ದೇಶಗಳಿಗಿಂತ ನಮ್ಮ ದೇಶ ಬಹಳ ವ್ಯವಸ್ಥಿತವಾಗಿ ಭದ್ರತೆ ಹಾಗೂ ಸುರಕ್ಷತೆಯಿಂದ ಕೂಡಿದೆ. ಇಂದು ನಮ್ಮ ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಯೋಗ ಶಿಕ್ಷಕಿ ನಾಗರತ್ನಮ್ಮ ಚಂದ್ರಶೇಖರ್ ಲಾಲ್ ಬಹದ್ದೂರ್ ಶಾಸ್ತ್ರಿಜಿ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಗಾಂಧೀಜಿ ಅವರ ಭಜನೆಗಳನ್ನ ಹಾಡುತ್ತ ಎಲ್ಲರಿಗೂ ಹೇಳಿಕೊಟ್ಟರು. ಇದೇ ಸಂದರ್ಭದಲ್ಲಿ ಯೋಗ ಬಂಧುಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಕಾರ್ಯಕ್ರಮದಲ್ಲಿ ಯೋಗ ಶಿಬಿರಾರ್ಥಿಗಳಾದ ಜಯಣ್ಣ ಕೃಷ್ಣಮೂರ್ತಿ, ಚಿದಾನಂದ, ಸುಜಾತಾ, ಬಿಂದು ವಿಜಯ ಕುಮಾರ್ ಮತ್ತು ಯೋಗ ಶಿಬಿರಾರ್ಥಿಗಳು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಿದರು. ವಿನೋದಾ, ಶೋಭಾ, ಗಣೇಶ, ಮಂಜುನಾಥ್, ಚಿದಾನಂದ ಮೂರ್ತಿ ಹಾಜರಿದ್ದರು.
Gandhi Jayanthi ಗಾಂಧೀಜಿಯ ಅಹಿಂಸಾ ತತ್ವ, ಶಾಸ್ತ್ರೀಜಿ ಅವರ ಸರಳ ಜೀವನ ಶೈಲಿ ಅಳವಡಿಸಿಕೊಳ್ಳಬೇಕು- ಕೆ.ಪಿ.ಬಿಂದು ಕುಮಾರ್
Gandhi Jayanthi ರಾಮ ರಾಜ್ಯದ ಕನಸು ನನಸಾಗಿಸಲು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಅಹಿಂಸಾ ಮಾರ್ಗ, ಸರಳ ಜೀವನ ಶೈಲಿಯ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆಪಿ ಬಿಂದು ಕುಮಾರ್ ಹೇಳಿದರು.
ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯಲ್ಲಿರುವ ಸ್ಕೌಟ್ ಭವನದಲ್ಲಿ ಗಾಂಧೀಜಿ ಯವರ 155 ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ 125 ಜಯಂತಿ ಪ್ರಯಕ್ತ ಹಮ್ಮಿಕೊಳ್ಳಲಾದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶ ಕಂಡ ಮಹಾನ್ ಸರಳ ವ್ಯಕ್ತಿ ಗಾಂಧೀಜಿ, ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆ ಅಪಾರ ಎಂದು ತಿಳಿಸಿದರು.
ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಹೋರಾಟಗಾರರ ತ್ಯಾಗ ಬಲಿದಾನದ ಯಶೋಗಾಥೆಗಳನ್ನು ಮಕ್ಕಳಿಗೆ ತಿಳಿಸಬೇಕು. ದೇಶಪ್ರೇಮದಿಂದ ಜೀವನ ನಡೆಸುವ ಮಹತ್ವದ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನ ವೃದ್ಧಿಯಾಗುತ್ತದೆ. ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟು ಸತ್ಯಾಗ್ರಹಗಳ ರೂಪದಲ್ಲಿ ಹೋರಾಟವನ್ನು ನಡೆಸಿ ಅಹಿಂಸೆಯ ಮಾರ್ಗಸೂಚಿಯನ್ನ ಪ್ರಪಂಚಕ್ಕೆ ಹಾಕಿಕೊಟ್ಟಂತಹ ಏಕೈಕ ಮಹಾತ್ಮ ಅಂದರೆ ನಮ್ಮ ಗಾಂಧೀಜಿ ಎಂದರು.
Gandhi Jayanthi ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜೀವನ ಶೈಲಿ ಎಲ್ಲರಿಗೂ ಮಾರ್ಗದರ್ಶನ. ಬದುಕಿನಲ್ಲಿ ಪಾಲಿಸುತ್ತಿದ್ದ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ದೇಶಕ್ಕಾಗಿ ಜೀವನ ನಡೆಸಿದ ರೀತಿ ಎಲ್ಲರಿಗೂ ಸ್ಫೂರ್ತಿದಾಯಕ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಅವರು ಗಾಂಧೀಜಿ ಜೀವನ ಚರಿತ್ರೆ ಕುರಿತು ಮಕ್ಕಳಿಗೆ ಸಮಗ್ರವಾಗಿ ವಿವರಿಸಿದರು.
ಅವರು ಸರ್ವಧರ್ಮ ಪ್ರಾರ್ಥನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಕ್ಕೆ ಆಯುಕ್ತರಾದ. ಜಿ ವಿಜಯಕುಮಾರ್ ಅವರು ಮಾತನಾಡುತ್ತ. ಮಕ್ಕಳಲ್ಲಿ ರಾಷ್ಟ್ರಭಕ್ತಿ ಹೆಚ್ಚಾಗಬೇಕು ಇತಿಹಾಸದ ಬಗ್ಗೆ ಅರಿವು ಇರಬೇಕು. ತ್ಯಾಗ ಬಲಿದಾನದಿಂದ ಸಿಕ್ಕ ಸ್ವಾತಂತ್ರ ವನ್ನು ನಾವು ಗೌರವಿಸಿ. ಅವರ ಗುಣಗಳನ್ನು ಪಾಲನೆ ಮಾಡಬೇಕು ಎಂದು ನುಡಿದರು
ಜಿಲ್ಲಾ ಸ್ಕೌಟ್ ಆಯುಕ್ತ ಎಸ್ ಜಿ ಆನಂದ್ , , ಸಹ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್,.. ಖಜಾಂಚಿ ಚೌಡಮಣಿ ಈ ಪವರ್.
ಸಿ ಎಸ್ ಕಾತ್ಯಾಯಿನಿ. ಶಿವಶಂಕರ್.ಮಲ್ಲಿಕಾರ್ಜುನ ಕಾನೂರು , ಶಿಕ್ಷಕರರು ಮಕ್ಕಳು ಉಪಸ್ಥಿತರಿದ್ದರು
Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ
Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯ ಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಲು ಎನ್‌ಎಸ್‌ಎಸ್ ಸಹಕಾರಿಯಾಗಿದೆ ಎಂದು ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಈಸೂರು ಗ್ರಾಮದ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ರಂಗಮಂದಿರದಲ್ಲಿ ಶ್ರೀ ಸಿಗಂದೂರೇಶ್ವರಿ ಎಜುಕೇಶನ್ ಟ್ರಸ್ಟ್ ನ ಉಳ್ಳೂರಿನ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯ ವತಿಯಿಂದ ಹಮ್ಮಿಕೊಂಡ ಪೌರತ್ವ ತರಬೇತಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎನ್‌ಎಸ್‌ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಈಸೂರಿನ ಜನ ಐಕ್ಯತೆಯಿಂದ ಮುನ್ನಡೆದಾಗ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಈಸೂರು ಗ್ರಾಮವು ರಾಷ್ಟ್ರದಲ್ಲಿಯೇ ಮಾದರಿ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಗಮನ ನೀಡಬೇಕು ಎಂದರು.
Gangotri College ರೈತ ಹೋರಾಟ ಮತ್ತು ರೈತ ಚಳುವಳಿ ಕುರಿತು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಮಾತನಾಡಿ, ಜಿಲ್ಲೆಯು ಹಲವು ಹೋರಾಟಗಳಿಗೆ ಮುನ್ನುಡಿ ಬರೆದಿದೆ. ರೈತ ಸಮುದಾಯ ಒಗ್ಗಟ್ಟಿನಿಂದ ಇದ್ದಾಗ ಮಾತ್ರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಿದೆ. ರೈತರು ಅತಿವೃಷ್ಟಿ ಅನಾವೃಷ್ಟಿಯಿಂದ ಬಳಲುತ್ತಿದ್ದಾರೆ. ಬೆಳೆಗಳಿಗೆ ಸಮರ್ಪಕವಾದ ಬೆಂಬಲ ಬೆಲೆ ದೊರೆಯದೆ ರೈತರು ನಲುಗಿ ಹೋಗಿದ್ದಾರೆ. ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಹಿತಕಾಯಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸೊರಬ ತಾಲೂಕು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಹೋರಾಟಗಾರ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ದೇಶದಲ್ಲಿ ಹಚ್ಚುವ ಕಾರ್ಯವನ್ನು ಈಸೂರು ಸ್ವಾತಂತ್ರ÷್ಯ ಹೋರಾಟಗಾರರು ಮಾಡಿ ಚರಿತ್ರೆಯ ಪುಟಗಳಲ್ಲಿ ದಾಖಲಾಗಿದ್ದಾರೆ. ವಿನಃ ಯಾವುದೇ ಸರ್ಕಾರಗಳು ಈ ಬಗ್ಗೆ ಹೆಚ್ಚಿನ ಗಮನ ನೀಡಿಲ್ಲ. ದೆಹಲಿಯ ಸಂಸತ್ ಭವನದ ಮುಂಭಾಗ ಈಸೂರಿನ ಹೋರಾಟಗಾರರ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಂ.ಪಿ. ವಿಜಯಕುಮಾರ್ ಮಾತನಾಡಿ, ಈಸೂರು ಗ್ರಾಮದಲ್ಲಿ ಎನ್‌ಎಸ್‌ಎಸ್ ಶಿಬಿರ ಆಯೋಜನೆ ಮಾಡಿದ ಸಂದರ್ಭದಿಂದಲೂ ಗ್ರಾಮಸ್ಥರು ಉತ್ತಮವಾದ ಸಹಕಾರ ನೀಡುತ್ತಿದ್ದಾರೆ. ಕಿತ್ತೂರಿನ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್ ಮಾದರಿಯಲ್ಲಿ ಈಸೂರಿನಲ್ಲಿ ಹೋರಾಟಗಾರರ ಪಾರ್ಕ್ ನಿರ್ಮಾಣಮಾಡಬೇಕು. ಈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು. ಶಿಕಾರಿಪುರದ ಸಾಂಸ್ಕೃತಿಕ ಭವನಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ರಂಗಮಂದಿರ ಎಂದು ಹೆಸರಿಡಬೇಕು. ತಾಲೂಕು ಕಚೇರಿ ಮುಂಭಾಗದಲ್ಲಿ ಈಸೂರಿನ ಹುಲಿ ಖ್ಯಾತಿಯ ಸಾಹುಕಾರ್ ಬಸವಣ್ಯಪ್ಪ ಸ್ಮಾರಕ ಭವನ ಅಭಿವೃದ್ಧಿಯ ಜೊತೆಗೆ ಬಸವಣ್ಯಪ್ಪ ಅವರ ಅಶ್ವಾರೂಢ ಪ್ರತಿಮೆ ಸ್ಥಾಪಿಸಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರು, ಸಂಸದರು ಹಾಗೂ ಸರ್ಕಾರಗಳು ಗಮನ ನೀಡಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಎ.ಕೆ. ಕಾಳೇಶಪ್ಪ ಅವರು ರಾಷ್ಟçಕವಿ ಜಿ.ಎಸ್. ಶಿವರುದ್ರಪ್ಪ ಅವರ ಬದುಕು ಮತ್ತು ಬರಹದ ಕುರಿತು ಉಪನ್ಯಾಸ ನೀಡಿದರು.
ಶಿವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ. ಗಂಗಾಧರಪ್ಪ, ಜಾನಪದ ಕಲಾವಿದ ಬಿ. ಶಿವಪ್ಪ, ಗ್ರಾಪಂ ಸದಸ್ಯ ಮಂಜಪ್ಪ, ಮಾಜಿ ಸದಸ್ಯ ಡಿ. ನಾಗರಾಜಪ್ಪ ಬಡಗಿ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಕೆ. ಪುಷ್ಪಾ ಸೇರಿದಂತೆ ಗ್ರಾಮಸ್ಥರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ ಅಶ್ವಿನಿ ಪ್ರಾರ್ಥಿಸಿ, ಎಚ್.ಎಸ್. ಮಂಜುನಾಥ್ ಸ್ವಾಗತಿಸಿ, ಚಲುವರಾಜ್ ವಂದಿಸಿ, ಪ್ರಜ್ವಲ್ ನಿರೂಪಿಸಿದರು.
CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್
CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ. ಅವರಿಗೆ ನಮ್ಮನೈತಿಕ ಬೆಂಬಲ ಸೂಚಿಸಿ ಅ.03 ರಂದು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ ಜನಜಾಥಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು.
ಪ್ರೆಸ್ ಟ್ರಸ್ಟ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರ ಮೇಲೆ ಕಳಂಕ ಹೊರಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆದರಿಂದ ಅವರು ಹೊರ ಬರುತ್ತಾರೆ. ಅಹಿಂದ ನಾಯಕರ ರಾಜಕೀಯ ಭವಿಷ್ಯದ ಅಸ್ತಿತ್ವಕ್ಕಾಗಿ, ಸಿದ್ದರಾಮಯ್ಯ ಅವರ ನಾಯಕತ್ವದ ಉಳಿವಿಗಾಗಿ, ಅವರ ಬೆಂಬಲಕ್ಕಾಗಿ ಅ. 03ರಂದು ಹುಬ್ಬಳ್ಳಿಯಿಂದ ಜಾಥಾ ಹೊರಡಲಿದೆ. ವಾಹನಗಳಲ್ಲಿ ಜಾಥಾ ಸಾಗಲಿದೆ. ಅಲ್ಲಲ್ಲಿ ಕಾಲ್ನಡಿಗೆಯ ಮೂಲಕವೂ ಜಾಥಾ ಮುಂದುವರೆಯುತ್ತದೆ ಎಂದು ಹೇಳಿದರು.
15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇದರಲ್ಲಿ ಭಾಗವಹಿಸುವರು. ಶಿವಮೊಗ್ಗ ಜಿಲ್ಲೆಯಿಂದಲೂ ಕೂಡ ಸುಮಾರು 1 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಅ. 4 ರಂದು ಈ ಜಾಥಾ ಬೆಂಗಳೂರು ತಲುಪಲಿದ್ದು, ಬೆಂಗಳೂ ರಿನ ವಿಧಾನಸೌಧದ ಮುಂಭಾಗದ ಗಾಂಧಿಪ್ರತಿಮೆ ಬಳಿ ಬೃಹತ್ ಸಭೆ ನಡೆಯಲಿದೆ ಎಂದರು.
CM Siddharamaih ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಹನುಮಂತಪ್ಪ ಬಂಡಿವಡ್ಡರ್, ವಿನಯಕುಮಾರ್ ಕೆ.ಎನ್., ರೇಷ್ಮಾ ಬಾನು, ಶೋಭಾ, ಸೈಯದ್ ನಾಸಿರ್, ಭಾಗ್ಯ, ಹನುಮಂತಪ್ಪ.ಸಿ. ಮುಂತಾದವರಿದ್ದರು.
Shiralakoppa Police ಕಾರ್ ಸರ್ವೀಸ್ ಸ್ಟೇಷನ್ ಕಾರ್ಮಿಕನಿಗೆ ವಿದ್ಯುತ್ ತಗುಲಿ ಸಾವು
Shiralakoppa Police ಶಿರಾಳಕೊಪ್ಪ ಹೋಬಳಿಯಲ್ಲಿ ಕಾರ್ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಸೋಮವಾರ ಸಂಜೆ ಕಾರು ಶೋರೂಮ್‌ನಲ್ಲಿ ಹನುಮಂತು (21) ಕಾರು ಸ್ವಚ್ಚತೆ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ವಿದ್ಯುತ್ ಶಾಕ್ ನಿಂದ ಯುವಕ ಸ್ಥಳದಲ್ಲಿಯೇ ಅಸು ನೀಗಿದ್ದಾನೆ. ಘಟನೆಯಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಶಿರಾಳಕೊಪ್ಪ-ಆನವಟ್ಟಿ ರಸ್ತೆಯಲ್ಲಿ ಬರುವ ಕಾರು ಸರ್ವಿಸ್ ನಲ್ಲಿ ಕೆಲಸ ಮಾಡುವಾಗ ಈ ಅವಘಡ ಸಂಭವಿಸಿದೆ.
Shiralakoppa Police ಪುಣೇದನಹಳ್ಳಿಯಿಂದ ಹನುಮಂತು ದಿನ ಕೆಲಸಕ್ಕಾಗಿ ಓಡಾಡುತ್ತಿದ್ದ. ಘಟನೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore University ಪೂರ್ವಾನುಮತಿ ಇಲ್ಲದೇ ಕಾಲೇಜೊಂದಕ್ಕೆ ಸ್ವಾಯತ್ತ ಸ್ಥಾನಮಾನ ನೀಡಿದ ಮಂಗಳೂರು ವಿವಿಗೆ ಸರ್ಕಾರದ ನೊಟೀಸ್
Mangalore University ಕಲ್ಲಡ್ಕ ಪ್ರಭಾಕರ್ ಭಟ್ ಅವರು ಅಧ್ಯಕ್ಷರಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿಗೆ ಸರ್ಕಾರದ ಪೂರ್ವಾನುಮತಿಯಿಲ್ಲದೆಯೇ ಸ್ವಾಯತ್ತ ಸ್ಥಾನಮಾನ ನೀಡಿತ್ತು. ಹಾಗೆಯೇ ಈ ಸ್ವಾಯತ್ತ ಸ್ಥಾನಮಾನ ನೀಡುವ ಮುನ್ನ ರಾಜ್ಯ ಸರ್ಕಾರದ ಪೂರ್ವಾನುಮೋದನೆ ಪಡೆಯಬೇಕು ಎಂದು ಯುಜಿಸಿ ಸ್ಪಷ್ಟವಾಗಿ ಹೇಳಿದ್ದರೂ ಸಹ ಮಂಗಳೂರು ವಿಶ್ವವಿದ್ಯಾಲಯವು ಇದನ್ನು ಬದಿಗೊತ್ತಿತ್ತು.
ಸರ್ಕಾರದ ಪೂರ್ವಾನುಮತಿಯಿಲ್ಲದೆಯೇ ಸ್ವಾಯತ್ತ ಸ್ಥಾನಮಾನ ನೀಡಿದ್ದ ಮಂಗಳೂರು ವಿಶ್ವವಿದ್ಯಾಲಯಕ್ಕೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಕುಲಸಚಿವರಿಗೆ ಕಾರಣ ಕೇಳುವ ನೋಟೀಸ್ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 1915ರಲ್ಲೇ ಪ್ರಾರಂಭವಾಗಿರುವ ವಿವೇಕಾನಂದ ವಿದ್ಯಾರ್ವಧಕ ಸಂಘವು ಸ್ನಾತಕ, ಸ್ನಾತಕೋತ್ತರ ಸೇರಿದಂತೆ ವಿವಿಧ ತರಗತಿಗಳನ್ನು ನಡೆಸುತ್ತಿದೆ.
ಈ ಪೈಕಿ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕೂಡ ಒಂದು. ಈ ಕಾಲೇಜಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಂಗಳೂರು ವಿಶ್ವವಿದ್ಯಾಲಯವು 2022-23ರಿಂದ 2031-32ರವರೆಗೆ ಸ್ವಾಯತ್ತ ಸ್ಥಾನಮಾನ ನೀಡಿತ್ತು. ಈ ಸಂಬಂಧ 2022ರ ಆಗಸ್ಟ್ 10ರಂದು ಮಂಗಳೂರು ವಿಶ್ವವಿದ್ಯಾಲಯವು ಕಾಲೇಜಿನ ಪ್ರಾಂಶುಪಾಲರಿಗೆ ಪತ್ರವನ್ನೂ ಬರೆದಿತ್ತು.
Mangalore University ಈ ಪತ್ರದ ಪ್ರತಿಯೂ ‘ದಿ ಫೈಲ್’ಗೆ ಲಭ್ಯವಾಗಿದೆ.
ಈ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ನೀಡುವ ಸಂಬಂಧ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯದ ಅಧಿನಿಯಮ 2000ರ ಪ್ರಕರಣ 64 ಅನ್ವಯ ಸರ್ಕಾರದ ಪೂರ್ವಾನುಮತಿ ಪಡೆಯುವುದು ಅವಶ್ಯಕ. ಆದರೆ ಮಂಗಳೂರು ವಿಶ್ವವಿದ್ಯಾಯವು ಸರ್ಕಾರದ ಪೂರ್ವಾನುಮತಿ ಪಡೆಯದೇ ಸ್ವಾಯತ್ತ ಸ್ಥಾನಮಾನ ನೀಡಿತ್ತು. ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ಪ್ರಕರಣ 64ರ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ಉನ್ನತ ಶಿಕ್ಷಣ ಇಲಾಖೆಯು ಕಾರಣ ಕೇಳುವ ನೋಟೀಸ್ ನೀಡಿದೆ.
ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಿಗೆ 2024ರ ಸೆ.30ರಂದು ಕಾರಣ ಕೇಳುವ ನೀಡಿದೆ.
High Court of Karnataka ಹರ್ಷ ಕೊಲೆ ಪ್ರಕರಣ. ಆರೋಪಿ ಸಲ್ಲಿಸಿದ್ದ ಅರ್ಜಿಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠ
High Court of Karnataka ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು, ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಪ್ರಕರಣದ ಆರೋಪಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು, ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿ ತೀರ್ಪು ನೀಡಿದೆ.
ಪ್ರಕರಣದ ಆರೋಪಿಯಾದ ಎ.ರೋಷನ್ (27) ಎಂಬುವರು ಈ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠ ಕಾಯ್ದಿರಿಸಿದ್ದ ತೀರ್ಪನ್ನು, ಇದೇ 20 ರಂದು ಪ್ರಕಟಿಸಿತ್ತು.
ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ.
‘ಪ್ರಕರಣವನ್ನು ಎನ್ಐಎಗೆ ತನಿಖೆ ಒಪ್ಪಿಸಲು ಅನುಮತಿ ಪಡೆದಿಲ್ಲ. ಪ್ರಕರಣದಲ್ಲಿ ಯುಎಪಿಎ ಅಂತಹ ಗಂಭೀರ ಪ್ರಕರಣ ದಾಖಲಿಸಲು ಯಾವುದೇ ಆಧಾರವಿಲ್ಲ’ ಎಂದು ಆರೋಪಿ ಪರ ವಕೀಲರು ವಾದ ಮಂಡಿಸಿದ್ದರು.
High Court of Karnataka ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಅಡಿಷನಲ್ ಸಾಲಿಸಿಟರ್ ಜನರಲ್ ಅವರು, ‘ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. ಸಾಕಷ್ಟು ಅಂಶಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಎನ್ಐಎ ತನಿಖೆಗೊಪ್ಪಿಸಿದೆ’ ಎಂದು ಪ್ರತಿವಾದ ಮಂಡಿಸಿದ್ದರು.
ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಆರೋಪಿ ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.
ಕೊಲೆ ಪ್ರಕರಣ :
2022 ರ ಫೆಬ್ರವರಿ 20 ರಂದು
ಶಿವಮೊಗ್ಗದ ಭಾರತೀ ಕಾಲೋನಿ ಬಳಿ, ಹರ್ಷ (28) ಕೊಲೆ ನಡೆದಿತ್ತು. 2022 ರ ಮಾರ್ಚ್ 21 ರಂದು ಕೇಂದ್ರ ಸರ್ಕಾರವು ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೊಪ್ಪಿಸಿ ಆದೇಶ ಹೊರಡಿಸಿತ್ತು.
Navaratri Festival ಶಿವಮೊಗ್ಗ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ನವರಾತ್ರಿ ಉತ್ಸವ
Navaratri Festival ಶಿವಮೊಗ್ಗ ನಗರದ ವಿವೇಕಾನಂದ ಬಡಾವಣೆಯ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ 16ನೇ ನವರಾತ್ರಿ ಉತ್ಸವವನ್ನು ಅ.3ರಿಂದ 11ರವರೆಗೆ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ದೇವಸ್ಥಾನದ ಅರ್ಚಕ ಸಂದೇಶ್ ಉಪಾಧ್ಯ,
ನಗರದ ಏಕೈಕ ನಾಗಕ್ಷೇತ್ರವಾದ ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ 03 ರ, ಗುರುವಾರ ಸಂಜೆ 6ಕ್ಕೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತೆ, ವಿದುಷಿ ಪುಷ್ಪಾ ಕೃಷ್ಣಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸುವರು.
ದೇವಸ್ಥಾನದ ಅಧ್ಯಕ್ಷ ಹೆಚ್. ರಾಮಲಿಂಗಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಬಾರಿಯೂ ದೇವಿಯ 9ನೇ ಅವತಾರವಾದ ಚಾಮುಂಡ ದೇವಿಯ ರೂಪದಲ್ಲಿ ಕಂಗೊಳಿಸಲಿದ್ದಾಳೆ.
ಶಿವಮೊಗ್ಗ ಶಿಲ್ಪಿ ಪ್ರವೀಣ್ ಕವೇಟ್ಕರ್ ದೇವಿಯ ವಿಗ್ರಹವನ್ನು ನಿರ್ಮಿಸಿದ್ದಾರೆ ಎಂದರು.
ಪ್ರತಿದಿನ ಬೆಳಿಗ್ಗೆ 8.30 ರಿಂದ ಚಂಡಿಕಾಯಾಗ ಪ್ರಾರಂಭಗೊಂಡು ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಮತ್ತು 5.00 ಘಂಟೆಯಿಂದ ಸ್ಥಳಿಯ ಭಜನಾ ಮಹಾಪೂರ್ಣಾಹುತಿಯೊಂದಿಗೆ ಮುಕ್ತಾಯಗೊಳ್ಳಲಿದೆ.
Navaratri Festival ಸಾಯಂಕಾಲ ಮಂಡಳಿಯಿಂದ ಲಲಿತಾ ಸಹಸ್ರನಾಮ, ಸೌಂದರ್ಯ ಲಹರಿ ಹಾಗೂ 5.30ರಿಂದ ನಗರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಮತ್ತು 6.30ರಿಂದ ನಗರದ ಸುಪ್ರಸಿದ್ದ ಕಲಾವಿದರುಗಳಿಂದ ಭರತನಾಟ್ಯ, ಯಕ್ಷಗಾನ, ಸಂಗೀತ ಸೇವೆ, ಸುಗಮ ಸಂಗೀತ ಕಾರ್ಯಕ್ರಮ, ಭಾವಗೀತೆ, ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.
ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಂತರ ತೀರ್ಥ-ಪ್ರಸಾದ ವಿನಿಯೋಗ ಇರುತ್ತದೆ ಎಂದು ವಿವರಿಸಿದರು.
Shivamogga District Court ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಭಾವ್ ಸ್ವಚ್ಛತಾ ಸಂಸ್ಕಾರ್ ಕಾರ್ಯಕ್ರಮ
Shivamogga District Court ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ವೇಳೆ ಎಲ್ಲಾ ನ್ಯಾಯಾಧೀಶರು, ವಕೀಲರು ನ್ಯಾಯಾಲಯದ ಆವರಣವನ್ನು ಸಂಪೂರ್ಣ ಸ್ವಚ್ಚಗೊಳಿಸಿದರು.
Shivamogga District Court ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್,ಜಿಲ್ಲಾ ನ್ಯಾಯಾಲದ ಎಲ್ಲಾ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಸದಸ್ಯರು,ವಕೀಲರು, ನ್ಯಾಯಾಲದ ಸಿಬ್ಬಂದಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
