Saturday, March 28, 2026
Saturday, March 28, 2026
Home Blog Page 545

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

0

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್ ಆಲದೇವರ ಹೊಸೂರು ಗ್ರಾಮದಲ್ಲಿ ರೈತ ಹನುಮಂತಪ್ಪ ದಾಸಣ್ಣನವರು ಜಮೀನಿನಲ್ಲಿ ಕೆಲಸ ಮಾಡುವಾಗ ಆನೆ ದಾಳಿ ಮಾಡಿ ಕೊಂದು ಹಾಕಿದ್ದು ಇವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಪುರದಾಳ್, ಬೇಳೂರು ಹಾಗೂ ತಮ್ಮಡಿಹಳ್ಳಿ, ಸುತ್ತಮುತ್ತ ಗ್ರಾಮಗಳಲ್ಲಿ ಆನೆಗಳಲ್ಲಿ ಗುಂಪಾಗಿ ಬಂದು ಬೆಳೆನಾಶ ಮಾಡಿರುವುದಕ್ಕೆ ಪರಿಹಾರ ಕೊಡುವುದು. ಆನೆಗಳನ್ನು ಗ್ರಾಮಗಳಿಗೆ, ರೈತನ ಹೊಲಗಳಿಗೆ ಬರದಂತೆ ತಡೆಯಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪುರದಾಳು ಗ್ರಾಮದ ಹನುಮಂತಪ್ಪ ದಾಸಣ್ಣನವರು ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಆನೆ ಆತನ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಅರಣ್ಯ ಇಲಾಖೆಯವರು ಈತನ ಕುಟುಂಬಕ್ಕೆ ಸರ್ಕಾರ ನಿಗಧಿ ಮಾಡಿರುವಂತೆ 25 ಲಕ್ಷ ರೂ. ಪರಿಹಾರವನ್ನು ತಕ್ಷಣ ಕೊಡಬೇಕು. ಗುಂಪಾಗಿ ರೈತನ ಜಮೀನಿನ ಮೇಲೆ ದಾಳಿ ಮಾಡುತ್ತಿದ್ದು, ರೈತನು ಬೆಳೆದ ಬೆಳೆಗಳು ಮೆಕ್ಕಜೋಳ, ಬಾಳೆ, ಅಡಿಕೆ ನಾಶ ಪಡಿಸಿ ರೈತನಿಗೆ ಅಪಾರ ನಷ್ಟ ಉಂಟು ಮಾಡುತ್ತಿವೆ ಎಂದರು.

Karnataka State Farmers Association ಕೆಲವು ಗ್ರಾಮಗಳಿಗೆ ನುಗ್ಗಿದ ಉದಾಹರಣೆಗಳು ಸಹ ಇವೆ. ಈ ’ರೀತಿಯಾಗಿ ಪದೇ ಪದೇ ದಾಳಿ ಮಾಡುತ್ತಿರುವುದರಿಂದ ರೈತರು ಜೀವನ ಮರಣದ ಭಯದಿಂದ ಆತಂಕದಿಂದ ಬದುಕುತ್ತಿದ್ದಾರೆ. ಆದ್ದರಿಂದ ತಕ್ಷಣ ಇವರಿಗೆ ರಕ್ಷಣೆ ಒದಗಿಸುವುದರ ಜೊತೆಗೆ ಸೂಕ್ತ ಬೆಳೆ ನಷ್ಟ ಪರಿಹಾರವನ್ನು ಕೊಡಬೇಕು ಮತ್ತು ಜಮೀನಿಗೆ ಗ್ರಾಮದೊಳಗೆ ಆನೆಗಳು ಬಾರದ ಹಾಗೆ ತಡೆಯಬೇಕು. ತತಕ್ಷಣದಿಂದ ಇವುಗಳನ್ನು ಕಾಡಿ ಕಳುಹಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಕಾಡು ಪ್ರಾಣಿಗಳೂ ಮತ್ತು ಮಾನವನ ಮಧ್ಯೆ ಇತ್ತಿಚಿನ ದಿನಗಳಲ್ಲಿ ಸಂಘರ್ಷ ನಡೆಯುತ್ತಲೇ ಇದೆ. ಬಗ್ಗೆ ರೈತ ಸಂಘ ಸರ್ಕಾರದ ಜೊತೆ ಮಾತುಕತೆ ನಡೆಸಿ, ಒತ್ತಾಯ ಮಾಡಲಾಗಿದೆ.

Shivamogga Karnataka Sanga ಕರ್ನಾಟಕ ಸಂಘದ ನಿರ್ಗಮಿತ ಅಧ್ಯಕ್ಷ ಸುಂದರ್ ರಾಜ್ ಅವರಿಂದ ಮಾಧ್ಯಮಗಳಿಗೆ ಧನ್ಯವಾದ ಅರ್ಪಣೆ

0

Shivamogga Karnataka Sanga ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲದಿಂದ ನಾನು ಯಶಸ್ವಿಯಾಗಿ ಮೂರು ವರ್ಷಗಳ ಕಾಲ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಕೆಲಸ ನಿರ್ವಹಿಸುಬಂತಾಯಿತು. ಅದಕ್ಕಾಗಿ ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ಶಿವಮೊಗ್ಗ ಕರ್ನಾಟಕ ಸಂಘದ ನಿರ್ಗಮಿತ ಅಧ್ಯಕ್ಷರಾದ ಎಂ.ಎನ್. ಸುಂದರರಾಜ್ ಅವರು ತಿಳಿಸಿದ್ದಾರೆ. ಮೂರು ವರ್ಷಗಳಲ್ಲಿ ನಡೆದ ಕಾರ್ಯಗಳ ಸಂಕ್ಷಿಪ್ತ ವರದಿ ಇಲ್ಲಿದೆ.

  1. ೩೬ ಸಾಹಿತಿಗಳಿಗೆ ಪುಸ್ತಕ ಬಹುಮಾನ
  2. ರಾಜ್ಯೋತ್ಸವ ಪ್ರಶಸ್ತಿ ಸೇರಿ ಮೂರು ರಾಜ್ಯಮಟ್ಟದ ಪ್ರಶಸ್ತಿ
  3. ೧೯ ಸಿಸಿ ಕ್ಯಾಮರಾಗಳ ಅಳವಡಿಕೆ
  4. ೨೩ ತಿಂಗಳ ಅತಿಥಿ ಕಾರ್ಯಕ್ರಮ
  5. ಮೂರು ಚಿತ್ರಕಲಾ ಪ್ರದರ್ಶನ
  6. ವೇದಿಕೆಯ ಎರಡೂ ಬದಿ ತೈಲ ವರ್ಣ ಚಿತ್ರ
  7. ಇಡೀ ಕಟ್ಟಡದ ಬಣ್ಣ ಲೇಪನ
  8. ಕರ್ನಾಟಕ ಸಂಘದ ಹೆಸರಿನ ವಿದ್ಯುತ್ ಫಲಕ ಅಳವಡಿಕೆ
  9. ಆಕಾಶವಾಣಿಯ ಕನ್ನಡ ಕಜ್ಜಾಯ ಕಾರ್ಯಕ್ರಮದಲ್ಲಿ ಸಂಘದ ಕುರಿತು ವಿಶೇಷ ಕಾರ್ಯಕ್ರಮ
  10. ದೂರದರ್ಶನ ಚಂದನದಲ್ಲಿ ಸಂದರ್ಶನ ಪ್ರಸಾರ
  11. ೩೫ ರಾಜ್ಯಮಟ್ಟದ ಸಾಹಿತಿಗಳು ಮತ್ತು ಕಲಾವಿದರನ್ನು ಆಹ್ವಾನಿಸಲಾಗಿದೆ
  12. ೫ ಸಂಗೀತ ಕಾರ್ಯಕ್ರಮ
  13. ಎರಡು ನಾಟಕ ಪ್ರದರ್ಶನ
  14. ಹತ್ತು ಸಂಘ ಸಂಸ್ಥೆಗಳ ಸಹಯೋಗ
  15. ಮೂರು ವಿಚಾರ ಸಂಕಿರಣ ಗಳು
  16. ‌ಕಾವ್ಯ- ಕಥನ ಗೋಷ್ಠಿ
  17. ಐದು ಹಿರಿಯ ಸಾಹಿತಿಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ
  18. ರಾಜ್ಯೋತ್ಸವದ ಸಮಯದಲ್ಲಿ ನೀಡಿದ ಐದು ಲಕ್ಷ ರೂ.ನ್ನು ಇಡುಗಂಟಾಗಿ ಇಟ್ಟು ಅದರಲ್ಲಿ ಬರುವ ಬಡ್ಡಿಯಿಂದ ಪ್ರತಿವರ್ಷ ಇಬ್ಬರು ವ್ಯಕ್ತಿ ಅಥವಾ ಸಂಸ್ಥೆ ಗೆ ನಗದು ಪುರಸ್ಕಾರ ಮತ್ತು ಸನ್ಮಾನ.
  19. ಸಿಬ್ಬಂದಿಗೆ ಸೇವಾ ಭದ್ರತೆ
  20. ಇಷ್ಟೆಲ್ಲ ಕಾರ್ಯಕ್ರಮ ಮಾಡಲು ನೆರವಾದ ತಮಗೆ ಹೃತ್ಪೂರ್ವಕ ವಂದನೆಗಳು.

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

0

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ ಸಿನಿಮಾದಲ್ಲಿ ರಸಿಕ ರಸಿಕಾ ಹಾಡನ್ನು ಬಳಸಿ ಕಾಪಿರೈಟ್ ಉಲ್ಲಂಘಿಸಲಾಗಿದೆ ಎಂದು ಸಾರೆಗಾಮ ಇಂಡಿಯಾ ಲಿಮಿಟೆಡ್ ಸಂಸ್ಥೆ ಆರೋಪಿಸಿ ಅಮೆಜಾನ್ ಪ್ರೈಮ್ ಗೆ ದೂರು ನೀಡಿತ್ತು ಹಾಗೂ ಕೀಳಂಬಿ ಮೀಡಿಯಾ ಲ್ಯಾಬ್ ಗೆ ಹಣದ ಬೇಡಿಕೆ ಇಟ್ಟಿತ್ತು.

ಇದನ್ನು ಪ್ರಶ್ನಿಸಿ ಕೀಳಂಬಿ ಮೀಡಿಯಾ ಲ್ಯಾಬ್ ಶಿವಮೊಗ್ಗ ಕಮರ್ಷಿಯಲ್ ಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲಿಸಿತ್ತು. ಇಂದು ಘನ ನ್ಯಾಯಾಲಯವು ಕೀಳಂಬಿ ಮೀಡಿಯಾ ಲ್ಯಾಬ್ ಪರ ವಕೀಲರ ವಾದವನ್ನು ಆಲಿಸಿ, ಸಾರೆಗಾಮ ಇಂಡಿಯಾ ಸಂಸ್ಥೆ ಶಾಖಾಹಾರಿ ಸಿನೆಮಾದಲ್ಲಿ ಯಾವುದೇ ಕಾಪಿರೈಟ್ ಉಲ್ಲಂಘನೆ ಆಗಿದೆ ಎಂದು ಯಾವುದೇ ಹೇಳಿಕೆ ನೀಡಬಾರದು ಎಂದು ಹಾಗೂ ಅಮೆಜಾನ್ ಪ್ರೈಮ್ ರವರು ತಮ್ಮ ಒಟಿಟಿ ಪ್ಲಾಟ್ ಫಾರಂ ನಿಂದ ಶಾಖಾಹಾರಿ ಸಿನೆಮಾವನ್ನು ತೆಗೆಯಬಾರದೆಂದು ಮಧ್ಯಂತರ ಆದೇಶ ನೀಡಿದೆ.

ಕೀಳಂಬಿ ಮೀಡಿಯಾ ಲ್ಯಾಬ್ ಪರ ವಕೀಲರಾದ ಬೆಂಗಳೂರಿನ ರವಿಶಂಕರ್ ಭಟ್ ವಾದಿಸಿದ್ದರು.


Shakahari Film ಶಾಖಾಹಾರಿ ಸಿನಿಮಾ ಈ ವರ್ಷ ಚಿತ್ರಮಂದಿರಗಳಲ್ಲಿ ಮತ್ತು ಓಟಿಟಿಯಲ್ಲಿ ಕೆಲವೇ ಕೆಲವು ಹೆಸರು ಮಾಡಿರುವ ಕನ್ನಡ ಸಿನಿಮಾಗಳಲ್ಲಿ ಒಂದಾಗಿದೆ. ದುರದೃಷ್ಟವಶಾತ್ ಸಾರೆಗಾಮ ಇಂಡಿಯಾ ಸಂಸ್ಥೆ ಸುಳ್ಳು ಆರೋಪ ಮಾಡಿದ್ದು ಬೇಸರವಾಗಿತ್ತು. ಆದರೆ ಕೋರ್ಟ್ ಸಿನಿಮಾದಲ್ಲಿ ಯಾವುದೇ ಕಾಫಿ ರೈಟ್ ಉಲ್ಲಂಘನೆಯಾಗಿಲ್ಲ, ಕಾನೂನಾತ್ಮಕ ವಾಗಿ ಎಲ್ಲವೂ ಸರಿಯಾಗಿದೆ ಎಂದು ಮಧ್ಯಂತರ ತೀರ್ಪು ನೀಡಿದೆ ಎಂದು ಶಾಖಾಹಾರಿ ಸಿನಿಮಾ ನಿರ್ಮಾಪಕರಾದ ರಾಜೇಶ್ ಕೀಳಂಬಿಯವರು ತಿಳಿಸಿದ್ದಾರೆ.


Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

0

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.

ಪ್ರೌಢಶಾಲೆ ವಿಭಾಗ ಫಲಿತಾಂಶ
ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ ಅರ್ಕಸಾಲಿ ,ಸರ್ಕಾರಿ ಪ್ರೌಢಶಾಲೆ,ಹುನಗುಂದ,ತಾ.ಮುಂಡಗೋಡ,ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ)

ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ
ವಿಜಯಕುಮಾರ್ ಬ.ದೊಡ್ಡಮನಿ,ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ,ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು,ಮೈಸೂರು (ದ್ವಿತೀಯ),ಗೋರಮ್ಮ,ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು,ಕೋಲಾರ(ತೃತೀಯ)

ಪದವಿ/ಸ್ನಾತಕೋತ್ತರ ವಿಭಾಗ ಫಲಿತಾಂಶ
ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ,ವಿಜಯನಗರ ಜಿಲ್ಲೆ (ಪ್ರಥಮ),
ಶರಣಪ್ಪ,ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ)

Mahatma Gandhi ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ,ಗಾಂಧೀಜಿ ವಿಚಾರದಲ್ಲಿ ಸತ್ಯಾಗ್ರಹ,ಅಸ್ಪೃಶ್ಯತೆ ನಿವಾರಣೆಗೆ ಗಾಂಧೀಜಿಯವರ ಪ್ರಯೋಗಗಳು,ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಸ್ವರಾಜ್, ಆರ್ಥಿಕ ಚಿಂತನೆಗಳು,ಸತ್ಯದ ಪರಿಕಲ್ಪನೆ ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ನಡೆದಿತ್ತು.ರಾಜ್ಯದಾದ್ಯಂತ ಪ್ರೌಢಶಾಲೆ ವಿಭಾಗದಲ್ಲಿ 1,24,392 ವಿದ್ಯಾರ್ಥಿಗಳು,ಪಿಯುಸಿ ವಿಭಾಗದಲ್ಲಿ 12,840 ವಿದ್ಯಾರ್ಥಿಗಳು, ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 17,062 ವಿದ್ಯಾರ್ಥಿಗಳು ಸೇರಿ ಒಟ್ಟು 1,54,294 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ರಾಜ್ಯ ಮಟ್ಟದಲ್ಲಿ ಪ್ರಥಮ ,ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ 31000 ರೂ.,21,000 ರೂ ಹಾಗೂ 11,000 ರೂ.ನಗದು ಪುರಸ್ಕಾರ ಹಾಗೂ ಪ್ರಮಾಣ ಪತ್ರಗಳನ್ನು ಅಕ್ಟೋಬರ್ 2 ರಂದು ಸಂಜೆ 4.30 ಕ್ಕೆ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

0

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ ಆಯೋಜಿಸಲಿರುವ ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ ಎಂದು ಮೈಸೂರು ಸಂಸ್ಥಾನದ ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹೇಳಿದರು.
ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ನಿವಾಸದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾತನಾಡಿದ ಅವರು, ಶಿವಮೊಗ್ಗ ಹಬ್ಬ ಒಳ್ಳೆಯ ಅಲೋಚನೆ ಆಗಿದ್ದು, ಉತ್ತಮವಾಗಿ ಆಯೋಜಿಸಿ ಎಂದು ತಿಳಿಸಿದರು.
ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಪ್ರಗತಿಯ ಬಗ್ಗೆ ಹಾಗೂ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಸಂಘಕ್ಕೆ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ನೂತನ ಆಡಳಿತ ಮಂಡಳಿಯು ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಆಲೋಚನೆ ನಡೆಸಲಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಲಾಗುವುದು ಎಂದು ಹೇಳಿದರು.
Yaduveer Wadiyar ವಿಶೇಷವಾಗಿ ಉದ್ಯಮಿಗಳಿಗೆ ಪ್ರೋತ್ಸಾಹಿಸಲು ಹಾಗೂ ಪ್ರವಾಸೋದ್ಯಮಕ್ಕೆ ಪೂರಕ ಚಟುವಟಿಕೆ ನಡೆಸುವ ದೃಷ್ಟಿಯಿಂದ ಮರ‍್ನಾಲ್ಕು ತಿಂಗಳಲ್ಲಿ ಶಿವಮೊಗ್ಗ ಹಬ್ಬ ಆಯೋಜಿಸಲು ಉದ್ದೇಶಿಸಲಾಗಿದೆ. ಇ-ವೇಸ್ಟ್ ಮ್ಯಾನೇಜ್‌ಮೆಂಟ್ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮೈಸೂರು ಸಂಸ್ಥಾನದ ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಜಂಟಿ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್, ಲಕ್ಷ್ಮೀದೇವಿ ಗೋಪಿನಾಥ್ , ಪಿ.ರುದ್ರೇಶ್ ಉಪಸ್ಥಿತರಿದ್ದರು.

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

0

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಅನೇಕ ಕಾಯಿಲೆಗಳನ್ನು ದೂರ ಇಡಲು ಸಾಧ್ಯವಿದ್ದು, ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮ ಶಾಲೆಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
Shivamogga Cycle Club ಹೃದಯ ದಿನದ ಪ್ರಯುಕ್ತ ಯೂತ್ ಹಾಸ್ಟೆಲ್ ಮತ್ತು ಶಿವಮೊಗ್ಗ ಸೈಕಲ್ ಕ್ಲಬ್ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಯೂಸ್ ಹಾರ್ಟ್ ಫಾರ್ ಆಕ್ಷನ್ ಈ ವರ್ಷದ ಧ್ಯೇಯವಾಕ್ಯ. ನಿತ್ಯ ಯೋಗ, ವ್ಯಾಯಾಮ, ಧ್ಯಾನದಿಂದ, ಸದಾ ಚಟುವಟಿಕೆಯಿಂದ ಇರುವುದರಿಂದ ಅಪಾಯ ಕಡಿಮೆ ಮಾಡಲು ಸಾಧ್ಯ. ಹೃದಯ ಸಮಸ್ಯೆ ಬಾರದಂತೆ ತಡೆಯೋಡ್ಡುವುದು ಜಾಣತನ. ಪ್ರತಿ ದಿನ ಸೈಕಲ್ ತುಳಿಯುವುದರಿಂದ ಎಲ್ಲರೂ ಆರೋಗ್ಯವಂತರಾಗಲು ಸಾಧ್ಯ ಎಂದು ತಿಳಿಸಿದರು.
ಮಥುರಾ ಪ್ಯಾರಾಡೈಸ್ ಬೆಳ್ಳಿ ಸಂಭ್ರಮ ಸಮಿತಿ ಅಧ್ಯಕ್ಷ ವಸಂತ ಹೋಬಳಿದಾರ್ ಮಾತನಾಡಿ, ಶಿವಮೊಗ್ಗದಲ್ಲಿ ಅತ್ಯುತ್ತಮ ಉದ್ಯಮ ಸ್ಥಾಪಿಸಿ ನಗರದ ಮನೆ ಮಾತಾಗಿರುವ ಗೋಪಿನಾಥ್ ಅವರ ಕಾರ್ಯ ಮೆಚ್ಚಿ ಅವರ ಅಭಿಮಾನಿಗಳು ವರ್ಷಪೂರ್ತಿ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ದಿನ ಶಿವಮೊಗ್ಗ ಸೈಕಲ್ ಕ್ಲಬ್ ನಮ್ಮ ಕಾರ್ಯಕ್ರಮದ ಜತೆ ಕೈ ಜೋಡಿಸುತ್ತಿರುವುದು ಸಂತೋಷ ತಂದಿದೆ ಎಂದರು.
ತರುಣೋದಯ ಘಟಕದ ಚೇರ್ಮನ್ ಎಸ್.ಎಸ್.ವಾಗೇಶ್ ಮಾತನಾಡಿ, ಶಿವಮೊಗ್ಗ ಸೈಕಲ್ ಕ್ಲಬ್ ಹಲವಾರು ಸಂಘ ಸಂಸ್ಥೆಗಳ ಜೊತೆಗೂಡಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಸಾಕಷ್ಟು ಜನ ಗಿನ್ನೆಸ್ ದಾಖಲೆ ಪಡೆದ ಸೈಕ್ಲಿಸ್ಟ್ ಗಳು ತಂಡದಲ್ಲಿರುವುದು ವಿಶೇಷವಾಗಿದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸೈಕಲ್ ತುಳಿಯುವುದರಿಂದ ನಮ್ಮ ದೇಹ ಮನಸ್ಸು ಸದೃಢವಾಗಿರುವುದರ ಜೊತೆಗೆ ದೇಹದಲ್ಲಿ ರಕ್ತ ಚೆನ್ನಾಗಿ ಸಂಚರಿಸುತ್ತದೆ. ಇದರಿಂದ ಹೃದಯಘಾತದ ಪ್ರಮಾಣ ಕಡಿಮೆಯಾಗುತ್ತದೆ. ಶಿವಮೊಗ್ಗ ಸೈಕಲ್ ಕ್ಲಬ್ ನಿರಂತರವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಶಿವಮೊಗ್ಗ ಸೈಕಲ್ ಕ್ಲಬ್ ರಾಜ್ಯದಲ್ಲಿ ಒಂದು ಮಾದರಿ ಸಂಸ್ಥೆಯಾಗಿದೆ ಎಂದು ತಿಳಿಸಿದರು.
ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್, ಕಾರ್ಯದರ್ಶಿ ಗಿರೀಶ್ ಕಾಮತ್, ಸಂಚಾಲಕ ಹರೀಶ್ ಪಾಟಿಲ್, ಯೂತ್ ಹಾಸ್ಟೆಲ್ಸ್ ಕಾರ್ಯದರ್ಶಿ ಸುರೇಶ್ ಕುಮಾರ್, ನರಸಿಂಹಮೂರ್ತಿ, ಪ್ರಕಾಶ್, ಮಲ್ಲಿಕಾರ್ಜನ್ ಕಾನೂರು, ನೂರಕ್ಕಿಂತ ಹೆಚ್ಚು ಸೈಕಲ್ ಪಟುಗಳು ಭಾಗವಹಿಸಿದ್ದರು.

Mysore Dasara ಹಿರಿಯ ಸಾಹಿತಿ ಹಂಪನಾ ಅವರಿಂದ ದಸರಾ ಉದ್ಘಾಟನೆ- ಸಿದ್ಧರಾಮಯ್ಯ

0

Mysore Dasara ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿಯ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.

Mysore Dasara ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಎಚ್ಚರಿಕೆ ವಹಿಸಿದ್ದರೆ ಅನಾಹುತ ನಡೆಯುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ ತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

Shivamogga Railway ರೈಲ್ವೆ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಇತ್ಯಾದಿ ಸೇವೆ ಆರಂಭಿಸಲು ನಾಗರೀಕ ಸಂಘದ ಮನವಿ

0

Shivamogga Railway ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ತಾಣ, ಐತಿಹಾಸಿಕ ತಾಣಗಳ ಮಾಹಿತಿ ಕೇಂದ್ರ ತೆರೆಯುವ ಜತೆಯಲ್ಲಿ ಸಾರ್ವಜನಿಕ ಹೆಲ್ಪ್ ಡೆಸ್ಕ್ ಆರಂಭಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿಂದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗದಿಂದ ಹೊರಡುವ ಮತ್ತು ಬರುವ ಎಲ್ಲ ರೈಲ್ವೆ ಕೋಚ್‌ಗಳಲ್ಲಿ ಶಿವಮೊಗ್ಗ ಜಿಲ್ಲಾ ಐತಿಹಾಸಿಕ ಸ್ಥಳಗಳು ಮತ್ತು ಪ್ರವಾಸಿ ಸ್ಥಳಗಳ ಸ್ತಬ್ಧಚಿತ್ರವನ್ನು ಬೋಗಿಗಳಲ್ಲಿ ಅಳವಡಿಸುವಂತೆ ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರ, ಕೈಗಾರಿಕಾ ಕ್ಷೇತ್ರ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದೆ. ಇನ್ನು ಪ್ರಗತಿ ಸಾಧಿಸಲು ಅಗತ್ಯ ರೈಲ್ವೆ ಸೌಕರ್ಯಗಳನ್ನು ಶಿವಮೊಗ್ಗ ಜಿಲ್ಲೆ ಮತ್ತು ನಗರಕ್ಕೆ ಒದಗಿಸಲು ಕ್ರಮ ವಹಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗ ನಗರದಿಂದ ಅರಸೀಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಮೂಲಕ ಮಂಗಳೂರಿಗೆ ಹೊಸ ರೈಲ್ವೆ ಇಂಟರ್ ಸಿಟಿ ರೈಲು ಬಿಡಬೇಕು. ಇದರಿಂದ ಕೇರಳ, ಕೊಚ್ಚಿನ್, ಗುರುವಾಯುರು, ಶಬರಿಮಲೆ ದೇವಸ್ಥಾನಕ್ಕೆ ಹೋಗಲು ಅನುಕೂಲವಾಗುತ್ತದೆ. ಶಿವಮೊಗ್ಗದಿಂದ ಮಂಗಳೂರು ನಗರಕ್ಕೆ ಸಂಪರ್ಕ ಸಿಗುತ್ತದೆ.

Shivamogga Railway ಶಿವಮೊಗ್ಗ ರೈಲ್ವೆ ಸ್ಟೇಷನ್‌ನಲ್ಲಿ 50 ಬೆಡ್‌ನ ರೈಲ್ವೆ ಯಾತ್ರಿನಿವಾಸ, ಲಗೇಜ್ ಲಾಕರ್ ಮತ್ತು ಸ್ತ್ರೀಯರಿಗೆ ಪ್ರತ್ಯೇಕ ರೆಸ್ಟ್ ರೂಮ್ ವಿತ್ ಸಿ.ಸಿ. ಟಿ.ವಿ ಕ್ಯಾಮೆರಾ ವ್ಯವಸ್ಥೆ ಕಲ್ಪಿಸಬೇಕು. 1, 2 ಮತ್ತು 3ನೇ ಫ್ಲಾಟ್ ಫಾರಂನಲ್ಲಿ ಮಹಿಳೆ ಫೀಡಿನ್ ಕ್ಯಾಬಿನ್ ಅಳವಡಿಸಬೇಕು. 2 ಮತ್ತು 3 ನೇ ಪ್ಲಾಟ್ ಫಾರಂಗೆ ಅನುಗುಣವಾಗಿ ಶೌಚಗೃಹ ಕಟ್ಟಿಸಬೇಕು. ದಿನಕ್ಕೆ 8,000 ಜನರು ರೈಲ್ವೆ ಪ್ರಯಾಣಿಕರು ಶಿವಮೊಗ್ಗದಿಂದ ಬೇರೆ ಬೇರೆ ಸ್ಥಳಗಳಿಗೆ ಪ್ರಯಾಣಿಸುತ್ತಾರೆ. ಅವರಿಗೆ ಅನುಕೂಲವಾಗುವಂತೆ 2 ಮತ್ತು 3ನೇ ಫ್ಲಾಟ್ ಫಾರಂಗೆ ಎಕ್ಸ್ಲೇಟರ್ ಅಳವಡಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗದಿಂದ ಬೆಂಗಳೂರಿಗೆ ಗರೀಬಿ ರಥ ರೈಲು ಆರಂಭಿಸಬೇಕು. ಶಿವಮೊಗ್ಗದಿಂದ ಮುಂಬೈಗೆ ನೇರ ಸಂಪರ್ಕ ರೈಲನ್ನು ಓಡಿಸಬೇಕು. ಶಿವಮೊಗ್ಗ, ಬೀರೂರು ಜಂಕ್ಷನ್, ಹುಬ್ಬಳ್ಳಿ ಮಾರ್ಗವಾಗಿ ಮುಂಬೈಗೆ ರೈಲು ಆರಂಭಿಸಬೇಕು. ಶಿವಮೊಗ್ಗದಿಂದ ಕಡಿಮೆ ದರದಲ್ಲಿ ಪ್ಯಾಸೆಂಜರ್ ರೈಲನ್ನು ದಿನದ ಅವಧಿಯಲ್ಲಿ ಶಿವಮೊಗ್ಗ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ಬಳ್ಳಾರಿ, ಮಂತ್ರಾಲಯ ಮೂಲಕ ರಾಯಚೂರಿಗೆ ಆರಂಭಿಸಬೇಕು.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ವಾಹನದ ನಿಲ್ದಾಣವನ್ನು ಸಮಪರ್ಕವಾಗಿ ಮಾಡಬೇಕು. ರಾತ್ರಿ ವೇಳೆ ಲೈಟ್ ವ್ಯವಸ್ಥೆ ಮಾಡಬೇಕು. ಸೀನಿಯರ್ ಸಿಟಿಜನ್ ಕೋಟಾ ಮತ್ತು ಸೀನಿಯರ್ ಸಿಟಿಜನ್‌ಗೆ ಶೇ. 50 ರಿಯಾಯಿತಿ ದರದ ಟಿಕೇಟ್‌ಅನ್ನು ಮರು ಸ್ಥಾಪಿಸಬೇಕು ಎಂದು ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿAದ ಮನವಿ ಮಾಡಲಾಯಿತು.

ಮನವಿ ಸಲ್ಲಿಸುವ ವೇಳೆ ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದ ಡಾ. ದಿನೇಶ್, ಎನ್.ಗೋಪಿನಾಥ್(ಮಥುರಾ), ಜಿ.ವಿಜಯ್ ಕುಮಾರ್, ಕೆ.ರಂಗನಾಥ್, ಜಗದೀಶ್, ಮಂಜುನಾಥ್, ಐಡಿಯಲ್ ಗೋಪಿ, ಮಂಜು, ನೂರ್ ಅಹಮದ್, ವಿನೋದ, ಜೋಸೆಫ್, ಡಾ. ಶಿಶಿರಾ, ಸುರೇಶ ಶೆಟ್ಟಿ, ಡಾ. ಶಿವಕುಮಾರ್, ವೆಂಕಟೇಶ್, ವಸಂತ ಹೋಬಳಿದಾರ್, ನಾಗರಾಜ್ ಕಂಕಾರಿ, ಪಾಲಾಕ್ಷಿ ಉಪಸ್ಥಿತರಿದ್ದರು.

University of Mysore ಅವಕಾಶ ವಂಚಿತರಿಗೆ ಸಮಾನ ಅವಕಾಶ ಸಿಕ್ಕಾಗ ಮಾತ್ರ ಸಮ ಸಮಾಜ ನಿರ್ಮಾಣ- ಸಿದ್ಧರಾಮಯ್ಯ

0

University of Mysore ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
University of Mysore 1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ಸ್ಮರಿಸಿದರು.
ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡುತ್ತಿದ್ದರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡುತ್ತಿದ್ದರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದನ್ನು ವಿವರಿಸಿದರು.
ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು ಎಂದರು.

Jan Suraj campaign ಅಕ್ಟೋಬರ್ 2 ರಂದು ಪ್ರಶಾಂತ್ ಕಿಶೋರ್ ಹೊಸ ಪಕ್ಷಕ್ಕೆ ಹೆಸರಿಡುವ ದಿನ

0

Jan Suraj campaign ಜನ್ ಸುರಾಜ್ ಅಭಿಯಾನದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೊಸ ರಾಜಕೀಯ ಪಕ್ಷದ ರಚನೆಯನ್ನು ಘೋಷಿಸಿದರು. ಅದರ ಹೆಸರು ಮತ್ತು ನಾಯಕತ್ವ ಸೇರಿದಂತೆ ವಿವರಗಳನ್ನು ಅಕ್ಟೋಬರ್ 2 ರಂದು ಅನಾವರಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
“ನಾನು ಎಂದಿಗೂ ನಾಯಕನಾಗಿರಲಿಲ್ಲ, ನಾನು ಎಂದಿಗೂ ಒಬ್ಬನಾಗಲು ಬಯಸುವುದಿಲ್ಲ. ಜನರು ನಾಯಕತ್ವದ ಪಾತ್ರಗಳನ್ನು ತೆಗೆದುಕೊಳ್ಳುವ ಸಮಯ ಇದು” ಎಂದು ಅವರು ಹೇಳಿದರು.
ಅಕ್ಟೋಬರ್ 2, 2022 ರಂದು ಪ್ರಾರಂಭವಾದ ಅವರ “ಜನ್ ಸೂರಾಜ್” ಉಪಕ್ರಮದ ಮೊದಲ ಹಂತದ ಕಾರ್ಯಗಳನ್ನು ಗುರುತಿಸಲು ಪ್ರಶಾಂತ್ ಕಿಶೋರ್ ತಯಾರಿ ನಡೆಸುತ್ತಿರುವಾಗ ಈ ಪ್ರಕಟಣೆ ಬಂದಿದೆ. ಗಾಂಧಿ ಜಯಂತಿಯಂದು ಜನ್ ಸುರಾಜ್ ನಾಯಕತ್ವ ಮಂಡಳಿಯ ಸದಸ್ಯರು ಮತ್ತು ಪಕ್ಷದ ಹೆಸರನ್ನು ಅವರು ಬಹಿರಂಗಪಡಿಸಲಿದ್ದಾರೆ.
ಪ್ರಶಾಂತ್ ಕಿಶೋರ್ ಅವರು ತಮ್ಮ ಉಪಕ್ರಮದ ಹಿಂದೆ ಇದ್ದ ಮೂರು ಪ್ರಾಥಮಿಕ ಉದ್ದೇಶಗಳನ್ನು ವಿವರಿಸಿದರು. ಬಿಹಾರದ ಪ್ರತಿ ಹಳ್ಳಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳಿಗೆ ಅವರ ಜೀವನಮಟ್ಟ ಮತ್ತು ಅವರ ಮಕ್ಕಳ ಜೀವನಮಟ್ಟವನ್ನು ಸುಧಾರಿಸಲು ಶಿಕ್ಷಣ ನೀಡುವುದು ಮೊದಲ ಉದ್ದೇಶವಾಗಿತ್ತು ಎಂದರು.
Jan Suraj campaign ಎರಡನೆಯದು, ದಾರಿತಪ್ಪಿದ ನಾಯಕರ ಒತ್ತಡಕ್ಕೆ ಮಣಿಯದಂತೆ ಜನರನ್ನು ಉತ್ತೇಜಿಸುವುದು ಮತ್ತು ಸಾರ್ವಜನಿಕ ಬೆಂಬಲದೊಂದಿಗೆ ಹೊಸ ಪಕ್ಷವನ್ನು ಸ್ಥಾಪಿಸಲು ಪ್ರತಿಪಾದಿಸುವುದು. ಮೂರನೆಯ ಉದ್ದೇಶ, ಬಿಹಾರದ ಪ್ರಗತಿಗೆ ಕೆಲಸ ಮಾಡುವುದು, ಅದನ್ನು ರಚಿಸುವ ಮೂಲಕ ಹತ್ತು ಅತ್ಯಂತ ಯಶಸ್ವಿ ರಾಜ್ಯಗಳಲ್ಲಿ ಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಶಿಕ್ಷಣ, ಕೃಷಿ ಮತ್ತು ಉದ್ಯೋಗದ ಮೇಲೆ ಕೇಂದ್ರೀಕರಿಸುವ 8,500 ಪಂಚಾಯತ್‌ಗಳ ಅಭಿವೃದ್ಧಿಗೆ ಕಾರ್ಯತಂತ್ರಗಳನ್ನು ರೂಪಿಸುವುದು ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
“ಈ ಮೂರು ಉದ್ದೇಶಗಳೊಂದಿಗೆ ನಾವು ಅಕ್ಟೋಬರ್ 2, 2022 ರಂದು ಪಶ್ಚಿಮ ಚಂಪಾರಣ್‌ನ ಗಾಂಧಿ ಆಶ್ರಮದಿಂದ ನಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣಕ್ಕೆ ನಿಗದಿತ ಸಂಖ್ಯೆಯ ದಿನಗಳು ಅಥವಾ ಕಿಲೋಮೀಟರ್‌ಗಳಿಲ್ಲ. ಗುರಿ ಮಾತ್ರ ಅಂತಿಮವಾಗಿದೆ, ಅದು ಹಳ್ಳಿಗಳ ಮೂಲೆ ಮೂಲೆಗೆ ಹೋಗುವುದು” ಎಂದು ಅವರು ಹೇಳಿದರು.