Saturday, March 28, 2026
Saturday, March 28, 2026
Home Blog Page 549

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

0

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಗತ್ಯವಿರುವ ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರ ನಿವಾಸದಲ್ಲಿ ಸಮಾಲೋಚನೆ ನಡೆಸಿದ ನಂತರ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಶಿವಮೊಗ್ಗ-ತುಮಕೂರು ಪ್ಯಾಸೆಂಜರ್ ರೈಲು ಸಂಚಾರವನ್ನು ಬೆಂಗಳೂರಿನವರೆಗೂ ವಿಸ್ತರಿಸಬೇಕು ಹಾಗೂ ಪುನಃ ವಾಪಸ್ ಬೆಂಗಳೂರು-ಶಿವಮೊಗ್ಗ ಪ್ಯಾಸೆಂಜರ್ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ-ಬೆಂಗಳೂರು ಜನಶತಾಬ್ಧಿ ರೈಲು ಸಂಚಾರವನ್ನು ಬೆಳಗ್ಗೆ 5.45ಕ್ಕೆ ನಿಗದಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಅನಗತ್ಯ ಸ್ಥಳಗಳಲ್ಲಿ ರೈಲು ಸಂಚಾರ ನಿಲ್ಲಿಸಬಾರದು. ಪ್ರಯಾಣಿಕರ ಅನುಕೂಲಕ್ಕಾಗಿ ಶಿವಮೊಗ್ಗ-ಯಶವಂತಪುರ ರೈಲು ಸಂಚಾರ ಮಧ್ಯಾಹ್ನ 3ಕ್ಕೆ ಆರಂಭಿಸಬೇಕು. ಯಶವಂತಪುರ-ಶಿವಮೊಗ್ಗ ರೈಲು ವಾರಕ್ಕೆ ಮೂರು ದಿನ ಬದಲಾಗಿ ಪ್ರತಿ ದಿನ ಸಂಚರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಚೆನ್ನೆವರೆಗೂ ಸಂಚಾರ ವಿಸ್ತರಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗ-ರೇಣಿಗುಂಟ-ಚೆನ್ನೈ ರೈಲು ಸಂಚಾರ ಮೂರು ತಿಂಗಳ ಹಿಂದೆ ಸ್ಥಗಿತಗೊಂಡಿದ್ದು, ಪುನಃ ವಾರದಲ್ಲಿ ಎರಡು ಅಥವಾ ಮೂರು ಬಾರಿ ಸಂಚಾರ ಆರಂಭಿಸಬೇಕು. ತಿರುಪತಿ ಪ್ರಯಾಣಿಕರಿಗೂ ಅನುಕೂಲವಾಗಲಿದೆ. ಕುವೆಂಪು ಎಕ್ಸ್ಪ್ರೆಸ್ ರೈಲು ವೇಗ ಹೆಚ್ಚಿಸಲು ಕ್ರಮ ವಹಿಸಿ ಸಂಚಾರ ಸಮಯ ಕಡಿಮೆಗೊಳಿಸಬೇಕು. ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿ ವೇಗಗೊಳಿಸಬೇಕು ಎಂದು ಮನವಿ ಮಾಡಿದರು.

Chamber Of Commerce Shivamogga ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಟೋ ಸಂಚಾರ ಸಮರ್ಪಕ ಆಗುವಂತೆ ಕ್ರಮ ವಹಿಸಬೇಕು. ರೈಲು ಆಗಮಿಸುವ ಸಂದರ್ಭದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ರೈಲ್ವೆ ಪೊಲೀಸರಿಗೆ ಸೂಚಿಸಬೇಕು. ಪಾರ್ಕಿಂಗ್ ಜಾಗದಲ್ಲಿ ಸರಿಯಾದ ಶೆಲ್ಟರ್ ಇಲ್ಲ, ಬೆಳಕಿನ ವ್ಯವಸ್ಥೆ ಇಲ್ಲ. ಅಗತ್ಯವಿರುವ ಮೂಲಸೌಕರ್ಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ರೈಲ್ವೆ ಸಮಿತಿ ಅಧ್ಯಕ್ಷ ಎಸ್.ಎಸ್.ಉದಯಕುಮಾರ್, ಖಜಾಂಚಿ, ಆರ್.ಮನೋಹರ, ಮಾಜಿ ಅಧ್ಯಕ್ಷರಾದ ಮಹೇಂದ್ರಪ್ಪ, ಅಶ್ವತ್ಥನಾರಾಯಣ ಶೆಟ್ಟಿ, ನಿರ್ದೇಶಕರಾದ ಪಿ.ರುದ್ರೇಶ್, ಗಣೇಶ್ ಅಂಗಡಿ, ವಿನೋದ್‌ಕುಮಾರ್, ಜಿ.ವಿ.ಕಿರಣ್‌ಕುಮಾರ್, ಸಿ.ಎ.ಶರತ್, ಎನ್.ಪಿ.ಶಂಕರ್, ಡಾ. ಲಕ್ಷ್ಮೀದೇವಿ ಗೋಪಿನಾಥ್, ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಉದ್ಯಮಿಗಳು ಮತ್ತಿತರರು ಇದ್ದರು.

Shivaganga Yoga Centre ಸಾಧಕರನ್ನು ಗೌರವಿಸಿದಾಗ ಸಂಸ್ಥೆಯ ಹಿರಿಮೆ ವೃದ್ಧಿ

0

Shivaganga Yoga Centre ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸಿದಾಗ ಸಂಸ್ಥೆಯ ಹಿರಿಮೆ ಹೆಚ್ಚಾಗುತ್ತದೆ ಎಂದು ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯ ಯೋಗ ಶಿಕ್ಷಕ ಜಿ.ಎಸ್.ಓಂಕಾರ್ ಅಭಿಪ್ರಾಯಪಟ್ಟರು.
ನಗರದ ಶುಭಂ ಹೊಟೇಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಸಮಾಜದ ಬಗ್ಗೆ ಆಲೋಚನೆ ಮಾಡುವ ಜತೆಯಲ್ಲಿ ಸೇವಾ ಕಾರ್ಯಗಳನ್ನು ಮಾಡುವ ಅನೇಕ ನಮ್ಮ ನಡುವೆ ಇದ್ದಾರೆ. ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ ಕೂಡ ಎಂದು ತಿಳಿಸಿದರು.
Shivaganga Yoga Centre ಉಡುಪಿಯ ಕಿಮ್‌ಸ್ಟಾರ್ ಸಂಸ್ಥೆಯಿಂದ ಡಾ. ಪುನೀತ್ ರಾಜ್‌ಕುಮಾರ್ ರಾಜರತ್ನ ಸೇವಾ ಪ್ರಶಸ್ತಿ ಪುರಸ್ಕೃತ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ವಿಜಯ್‌ಕುಮಾರ್ ಅವರಿಗೆ ಸನ್ಮಾನಿಸಲಾಯಿತು.
ಯೋಗ ಶಿಕ್ಷಕ ಎಚ್.ಕೆ.ಹರೀಶ್ ಮಾತನಾಡಿ, ರಕ್ತದಾನಿ ಆಗಿರುವ ವಿಜಯ್‌ಕುಮಾರ್ ಅವರು ತುರ್ತು ಸಂದರ್ಭಗಳಲ್ಲಿ ಅನೇಕ ಬಾರಿ ರಕ್ತದಾನ ಮಾಡಿದ್ದು, ರೋಟರಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುತ್ತಾರೆ ಎಂದು ಹೇಳಿದರು.
ಯೋಗ ಶಿಕ್ಷಕ ನರಸೋಜಿರಾವ್ ಮಾತನಾಡಿ, ವಿಜಯಕುಮಾರ್ ಅವರು ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ವಿವರ ಹಾಗೂ ಸೈಕಲ್ಲಿಂಗ್‌ನಲ್ಲಿ ಗಿನ್ನೆಸ್ ದಾಖಲೆ ಹಾಗೂ ಲಿಮ್ಕಾ ದಾಖಲೆ ಮಾಡಿರುತ್ತಾರೆ. ವಿಶೇಷ ಕಾರ್ಯಕ್ರಮಗಳಲ್ಲಿ ಸದಾ ತೊಡಗಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ದಂಪತಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಯೋಗ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಬಿಂದು ವಿಜಯಕುಮಾರ್, ಎಸ್.ಟಿ.ಆನಂದ್, ಸುಜಾತಾ ಮಧುಕೇಶ್ವರ, ಸುಮಾ, ಗಾಯತ್ರಿ, ಶೋಭಾ ಶಂಕರ್, ಉಷಾ, ಶೈಲಜಾ, ಚಂದ್ರಹಾಸ ಶೆಟ್ಟಿ, ಸೌಮ್ಯ, ಶಶಿಧರ್, ಚಂದ್ರಶೇಖರ, ರುದ್ರಪ್ಪ ಚೀಲೂರು, ಮಣಿ, ಯೋಗ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Dasara Festival “ನೋಡೋಣ ಬನ್ನಿ ದಸರಾ ಗೊಂಬೆ” ನವರಾತ್ರಿ ಪ್ರಯುಕ್ತ ಗೊಂಬೆ ಕೂರಿಸುವ ಸ್ಪರ್ಧೆಗೆ ಆಹ್ವಾನ

0

Dasara Festival ನಾಡಹಬ್ಬ ದಸರಾ ಪ್ರಯುಕ್ತ ಫ್ರೆಂಡ್ಸ್ ಸೆಂಟರ್(ರಿ.,) ಮತ್ತು ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ಆಶ್ರಯದಲ್ಲಿ ಸಾರ್ವಜನಿಕ ಬಂಧುಗಳಿಗಾಗಿ ವೈವಿಧ್ಯಮಯ ಗೊಂಬೆಗಳನ್ನು ತಮ್ಮ ಮನೆಯಲ್ಲಿ ಕೂರಿಸಿ, ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ಆಶಯದಿಂದ “ನೋಡೋಣ ಬನ್ನಿ ದಸರಾ ಗೊಂಬೆ” ಎಂಬ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Dasara Festival ನಿಬಂಧನೆಗಳು:
01) ನಿಮ್ಮ ಮನೆಯಲ್ಲಿ ಪಟ್ಟದ ಗೊಂಬೆ ಸೇರಿದಂತೆ ಪಾರಂಪರಿಕ/ವೈವಿಧ್ಯಮಯ ಗೊಂಬೆ ಕೂರಿಸಿರಬೇಕು.
02) ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ದಿನಾಂಕ: 4.10.2024ರೊಳಗೆ ತಮ್ಮ ಹೆಸರನ್ನು ಕೆಳಕಂಡ ನಂಬರಿಗೆ ಫೋನ್ ಮಾಡಿ ನೊಂದಾಯಿಸಬೇಕು.
03) ತೀರ್ಪುಗಾರರು ನಿಮ್ಮ ಮನೆಗೆ ಬಂದು ಗೊಂಬೆ ವೀಕ್ಷಿಸಿ, ಸೂಕ್ತವಾದ ದಿನ ವಿಜೇತರಿಗೆ ಬಹುಮಾನ ನೀಡುವರು.
04) ಆಕರ್ಷಕ ಹಾಗೂ ಸಮಾಧಾನಕರ ಬಹುಮಾನ ನೀಡಲಾಗುವುದು.
05) ತೀರ್ಪುಗಾರರ ತೀರ್ಮಾನವೇ ಅಂತಿಮ.
06) ಸಂಪರ್ಕಿಸಬೇಕಾದವರ ವಿವರ:
ಬಿ.ಜಿ. ಧನರಾಜ್, ಅಧ್ಯಕ್ಷರು, ಫ್ರೆಂಡ್ಸ್ ಸೆಂಟರ್: 9845262166
ಸ್ಪಪ್ನ ಬದರಿ: ಅಧ್ಯಕ್ಷರು, ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗ: 9844037343
ಕಾರ್ಯಕ್ರಮ ಸಂಯೋಜಕರು: ಶ್ರೀರಂಜಿನಿ ದತ್ತಾತ್ರಿ: 9449998531
ಹಾಗೂ ಉಮಾವೆಂಕಟೇಶ್: 9845817380

State Unorganized Workers Social Security Board ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯ ಆನ್‌ಲೈನ್ ಅರ್ಜಿ ಆಹ್ವಾನ

0

State Unorganized Workers Social Security Board ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ ಕೆಲಸ ನಿರ್ವಹಿಸುವ State Unorganized Workers Social Security Board ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು https://labour.ambedkarsahayahasta.in/api/Account/Login ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಯೋಜನೆಯ ಸೌಲಭ್ಯ ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ/ಪಿಎಫ್ ಸೌಲಭ್ಯ ಹೊಂದಿರಬಾರದು.
State Unorganized Workers Social Security Board ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.

Shivamogga City Corporation ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

0

Shivamogga City Corporation ಶಿವಮೊಗ್ಗ ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ.
2024ರ ಅಕ್ಟೋಬರ್ 07 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.
Shivamogga City Corporation ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯಬಹುದು. ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಜಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸಬಹುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸುಲಭ ಸಾಧ್ಯ. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗಪಡೆದುಕೊಳ್ಳುವುದು

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

0

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್‌ರವರ ಜೊತೆ ಕೊ.ಮ.ಮುತ್ತಣ್ಣ, ಎಚ್.ಸುಂದರಮ್ಮ, ಮನ್ಸೂರ್ ಮುಲ್ಕಿರವರಿಗೂಜನ್ನ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ.
Hassan Manikya Prakashana ಈ ಪ್ರಶಸ್ತಿ ಪ್ರದಾನ ಸಮಾರಂಭ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಜಯ ಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಸೆ.೨೮ರ ಶನಿವಾರ ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

0

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ಸಹಕಾರ ಸಂಘದ ವತಿಯಿಂದ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ 90% ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷರಾದ ಸೋಮೇಶ್ ವಹಿಸಿದ್ದರು .ಸಂದರ್ಭದಲ್ಲಿ ಉಪಾಧ್ಯಕ್ಷರಾದ ದಾನೇಶ್ ಸಿ. ಮತ್ತು ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು.

ಕುಮಾರಿ ಶರಧಿ ಡಿ.ರವರಿಗೆ ಪ್ರತಿಭಾ ಪುರಸ್ಕಾರ

Vajreshwari Co Operative Society ತೀರ್ಥಹಳ್ಳಿ:2023-24 ರ ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಿಗೆ 586 ಅಂಕಗಳನ್ನು ಗಳಿಸಿದ ಕುಮಾರಿ ಶರಧಿ ಡಿ.ಇವರಿಗೆ ಕುಂದಾದ್ರಿ ಪತ್ತಿನ ಸಹಕಾರ ಸಂಘದ ವತಿಯಿಂದ ತೀರ್ಥಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿ ಗೌರವಿಸಲಾಯಿತು. ಇವರು ಶ್ರೀಮತಿ ಶ್ವೇತಾ, ದಿವಾಕರ ಬಿದರಹಳ್ಳಿ ಇವರ ಪುತ್ರಿ.

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

0

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ ಅಗತ್ಯವಿರುವಲ್ಲಿ ಮಾತ್ರ ಸೇವೆ ಮಾಡಬೇಕು ದುರ್ಬಲರಿಗೆ ಸಹಾಯ ಹಸ್ತ ನೀಡಿದಾಗ ತೃಪ್ತಿ ಸಿಗುತ್ತದೆ ಎಂದು ಇನ್ನರ್ ವೀಲ್ ಸಂಸ್ಥೆಯ ಸದಸ್ಯರು ಹಾಗೂ ಸ್ವೇದ ಸಂಸ್ಥೆ ಯ ಕಾರ್ಯದರ್ಶಿ ಶಿಲ್ಪ ಗೋಪಿನಾಥ್ ಅಭಿಮತ ವ್ಯಕ್ತಪಡಿಸಿದರು.

ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಎರಡು ಕಾಲು ಅಂಗವಿಕಲತೆಯಿಂದ ಬಳಲುತ್ತಿರುವ ಗಾಡಿ ಕೊಪ್ಪದ ಅಜಯ್ ಹಿರೇಮಠ ಅವರಿಗೆ ಸುವ್ಯವಸ್ಥಿತವಾದ ವೀಲ್ ಚೇರನ್ನು ಶಿಲ್ಪ ಗೋಪಿನಾಥ್ ವೇದ ನಾಗರಾಜ್ ಇವರ ಸಹಕಾರದಿಂದ 15000 ಬೆಲೆ ಬಾಳುವ ವೀಲ್ ಚೇರ್ ಹಾಗೂ ಅಗತ್ಯ ವಸ್ತುಗಳನ್ನು ನೀಡಿ ಅವರ ಜೀವನ ಉತ್ತಮವಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ಶಿವಮೊಗ್ಗ ಪೂರ್ವ ಇನ್ನರ್ವಿಲ್ ಸಮಸ್ತೆ ಈಗಾಗಲೇ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರಿಗೆ ಧನಸಹಾಯ ಮತ್ತು ಆರೋಗ್ಯದತ್ತ ಹೆಚ್ಚು ಗಮನ ಹರಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಔಷಧಿ ವಿತರಣೆ ಹಾಗೂ ಬಡ ಮಕ್ಕಳಿಗೆ ನೋಟ್ ಪುಸ್ತಕ ಬ್ಯಾಗ್ ಗಳನ್ನು ವಿತರಿಸುವುದರ ಮುಖಾಂತರ ಸಾಧಕರನ ಗುರುತಿಸಿ ಗೌರವಿಸುತ್ತಾ ಬಂದಿದ್ದಾರೆ ಜಿಲ್ಲೆಯಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಅಭಿನಂದಿಸಿದರು.

Inner Wheel Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರು ವಹಿಸಿ. ಸ್ನೇಹ ಪ್ರೀತಿ ಸೇವೆಗಾಗಿ ಇನ್ನರ್ವಿಲ್ ಸಂಸ್ಥೆ ಇವತ್ತು ಪ್ರಪಂಚಾದ್ಯಂತ ತನ್ನ ಸೇವೆಗಳ ಮುಖಾಂತರ ಮನುಕುಲವನ್ನು ತಲುಪಿದೆ ಈ ನಿಟ್ಟಿನಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ಬೆಂಚು ಡೆಸ್ಕ್ ಗಳನ್ನು ನೀಡಿ ಶಿಕ್ಷಣಕ್ಕೆ ಉತ್ತೇಜನ ಕೊಟ್ಟಿದ್ದೇವೆ. ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಅರಿವಿನ ಕಾರ್ಯಕ್ರಮಗಳನ್ನು ಮೂಡಿಸುತ್ತಾ ಬಂದಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದೇವೆ ಎಂದು ನುಡಿದರು. ವೀಲ್ ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಇನ್ನರ್ವೀಲ್ ನ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಮಾತನಾಡಿದರು ಕಾರ್ಯದರ್ಶಿ ಲತಾ ಸೋಮಣ್ಣ.. ಜಗದೀಶ್. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

0

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ
ರಂಗಪ್ರಯೋಗದ ಮೂಲಕ ವಿಶೇಷ ಅರಿವು ಕಾರ್ಯಕ್ರಮ ನಡೆದು‌ ಗ್ರಾಮೀಣರ ಮೆಚ್ಚುಗೆಗೆ ಪಾತ್ರವಾಯಿತು.

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವನ್ನು ಅವಳಿ ಗ್ರಾಮಗಳಾದ ಬೆಳಗುತ್ತಿ, ಮಲ್ಲಿಗೇನಹಳ್ಳಿಯಲ್ಲಿ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸಾಮಾಜಿಕ ಕಳಕಳಿಯ “ಸರಿ ನಡೆ” ಬೀದಿ ನಾಟಕ ಪ್ರದರ್ಶಿಸುವ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

National Education Committee ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಕೆ. ಚಿದಾನಂದರವರ ರಚನೆ ಹಾಗೂ ನಿರ್ದೇಶನದ ಈ ಬೀದಿ ನಾಟಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಭಾರತ ಮಾತೆಗೆ ದೀಪ ನಮನ ಮತ್ತು ಶಿಕ್ಷಕ ವೃತ್ತಿ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು.

Athletics Association Committee ರಾಜ್ಯಮಟ್ಟದ ಹಿರಿಯ & ಕಿರಿಯರ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿಜೇತರಿಗೆ ಅಭಿನಂದನೆ

0

ಮೈಸೂರಿನಲ್ಲಿ ನಡೆದ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ಅನುಷಾ 100 ಹಗೂ 200 ಮೀ ದ್ವಿತೀಯ, ಅಭಿಜ್ಞಾ 400 ಮೀ ಪ್ರಥಮ, 200ಮೀ ತೃತೀಯ, ಮೇಘನಾ ಹ್ಯಾಮರ್ ಎಸೆತದಲ್ಲಿ ತೃತೀಯ ಸ್ಥಾನ ಪಡೆಡಿರುತ್ತಾರೆ.

Athletics Association Committee ಆ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೆ ರಾಷ್ಟ್ರೀಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇವರುನ್ನು ಶಿವಮೊಗ್ಗ ಜಿಲ್ಲೆಯ ನೆಹರೂ ಕ್ರೀಡಾಂಗಣದ ತರಬೇತುದಾರರಾದ ಶಿವುಕುಮಾರ್ ಎಂ.ಡಿ., ಜಿಲ್ಲಾ ಅಸೋಸಿಯೇಷನ್‌ನ ಯಶವಂತ್ ನಾಯ್ಕ್, ಅಶೋಕ್ ಮತ್ತು ರಾಜ್ಯ ಅಮಚೂರ್ ಅಥ್ಲೆಟಿಕ್ಸ್ ಅಸೋಶಿಷನ್ ಸಮಿತಿಯ ಸಹಕಾರ್ಯದರ್ಶಿ ಉದಯಕುಮಾರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ ಇವರುಗಳು ಶುಭ ಹಾರೈಸಿ ಅಭಿನಂದಿಸಿದ್ದಾರೆ.