Sunday, March 29, 2026
Sunday, March 29, 2026
Home Blog Page 552

Agumbe Police ಮಹಿಳೆ ನಾಪತ್ತೆ. ಆಗುಂಬೆ ಪೊಲೀಸ್ ಪ್ರಕಟಣೆ

0

Agumbe Police ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಎ.ಸಿ. ಮಂಜುನಾಥ್ ಬಿನ್ ಎ.ಬಿ. ಚಿನ್ನಪ್ಪಗೌಡ ಎಂಬುವವರ ತಾಯಿ ಕಮಲಮ್ಮ ಎಂಬ 76 ವರ್ಷ ಮಹಿಳೆ ಸೆ.03 ರಂದು ಮನೆಬಿಟ್ಟು ಹೋಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈಕೆ 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ದುಂಡುಮುಖ, ಗೋಧಿ ಮೈಬಣ್ಣ ಹೊಂದಿರುತ್ತಾರೆ. ತಲೆಯಲ್ಲಿ 5 ಇಂಚು ಉದ್ದದ ಬಿಳಿ ಕೂದಲಿರುತ್ತದೆ. ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಚೌಕಳಿ ನೈಟಿ ಧರಿಸಿರುತ್ತಾರೆ.
Agumbe Police ಈ ಮಹಿಳೆಯ ಬಗ್ಗೆ ಸುಳಿವು ಕಂಡಲ್ಲಿ ಶಿವಮೊಗ್ಗ ಎಸ್.ಪಿ ಕಚೇರಿ 08182-261400, ಡಿವೈಎಸ್‌ಪಿ ತೀರ್ಥಹಳ್ಳಿ-08181-220388, ಸಿಪಿಐ ಮಾಳೂರು-9480803333, ಪಿಎಸ್‌ಐ ಆಗುವಂಬೆ-9480803314 ಇವರುಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

Zilla Panchayat ಅನುದಾನ ಸದ್ಬಳಕೆ ಮಾಡಿ. ವಿಳಂಬಿಸದೇ ಫಲಾನಿಭವಿಗಳಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿ- ಬಿ.ಬಿ.ಕಾವೇರಿ

0

Zilla Panchayat ಇಲಾಖೆಗಳಲ್ಲಿ ಯಾವುದೇ ಅನುದಾನ ತಪ್ಪಿ ಹೋಗದಂತೆ ನಿಗದಿತ ಅವಧಿಯೊಳಗೆ ಶೇ.100 ಪ್ರಗತಿ ಸಾಧಿಸುವ ಮೂಲಕ ಅಧಿಕಾರಿಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ.ಕಾವೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಫಲಾನುಭವಿ ಪ್ರಧಾನವಾದ ಕಾರ್ಯಕ್ರಮಗಳನ್ನು ಬದ್ದತೆಯಿಂದ ಮಾಡಬೇಕು, ಎಲ್ಲ ಇಲಾಖೆಯ ಅಧಿಕಾರಿಗಳು ಕ್ರಿಯಾತ್ಮಕವಾಗಿ, ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
Zilla Panchayat ಯಾವುದೇ ಕಾರ್ಯಕ್ರಮಗಳ ಅನುದಾನ ತಪ್ಪಿ ಹೋಗದಂತೆ, ವಿಳಂಬರಹಿತವಾಗಿ ನಿಗದಿತ ಅವಧಿಯೊಳಗೆ ಅನುದಾನದ ಸದ್ಬಳಕೆ ಆಗಬೇಕು. ಎಸ್‌ಸಿಪಿ/ಟಿಎಸ್‌ಪಿ ಅನುದಾನ ಶೇ.100 ಬಳಕೆ ಆಗಬೇಕು. ಜಿಲ್ಲಾಡಳಿತ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ವಿವಿಧ ಇಲಾಖೆಗಳು ಸಮರ್ಪಕವಾಗಿ ಅನುದಾನ ಬಳಕೆ, ಫಲಾನುಭವಿಗಳ ಆಯ್ಕೆ ಮಾಡಬೇಕು. ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡಬೇಕು. ಸಿವಿಲ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾAತರ ಕಲ್ಯಾಣ ಇಲಾಖೆಗಳು ವಿವಿಧ ಕಾರ್ಯಕ್ರಮಗಳು ಮತ್ತು ಅಭಿವೃದ್ದಿ ಕೆಲಸಗಳನ್ನು ಇನ್ನೂ ಪರಿಣಾಮಗೊಳಿಸಬೇಕು. ಎಲ್ಲ ಇಲಾಖೆಗಳು ಸಮಸ್ಯೆಗಳನ್ನು ಕಂಡು ಹಿಡಿಸು ಸುಧಾರಣೆ ಕಡೆ ಗಮನ ಹರಿಸಿ, ನಿಯಮಾನುಸಾರ ಕ್ರಮ ವಹಿಸಬೇಕು. ಶೇ.100 ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ ಮಾತನಾಡಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊಳೆ ರೋಗ ಕಂಡು ಬಂದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊಳೆ ರೋಗ ಪತ್ತೆಯಾಗಿದೆ. ಈ ಕುರಿತು ಪರಿಹಾರ ಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು ಅವರು ಸರ್ಕಾರದ ಜೊತೆ ಮಾತನಾಡುವುದಾಗಿ ತಿಳಿಸಿದ್ದಾರೆ ಎಂದರು.
ಡಿಡಿಪಿಐ ಮಂಜುನಾಥ್ ಮಾತನಾಡಿ, ಸೊರಬ, ಶಿಕಾರಿಪುರ ಮತ್ತು ತೀರ್ಥಹಳ್ಳಿಯಲ್ಲಿ ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರ ಬೇಡಿಕೆ ಇದೆ. ನಿಯೋಜನೆ ಶಿಕ್ಷಕರಿಗೆ ಸಂಬAಧಿಸಿದ ಸಮಸ್ಯೆಗಳು ಇವೆ ಎಂದರು.
ಉಸ್ತುವಾರಿ ಕಾರ್ಯದರ್ಶಿಗಳು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಶಾಲೆ ಬಿಟ್ಟ ಮಕ್ಕಳ ಸರ್ವೇ ಆಗಬೇಕು. ತಾಲ್ಲೂಕು ಹಂತದಲ್ಲಿ ಸರ್ವೇ ನಡೆಸಿ ಮಕ್ಕಳನ್ನು ಶಾಲೆಗೆ ಕರೆ ತರಲು ಕ್ರಮ ಕೈಗೊಳ್ಳಬೇಕು ಎಂದರು.
ಡಿಹೆಚ್‌ಓ ಡಾ.ನಟರಾಜ್ ಮಾತನಾಡಿ, ಒಟ್ಟು 600 ಡೆಂಗ್ಯು ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಜುಲೈ ಮಾಹೆಯಲ್ಲಿ 167, ಆಗಸ್ಟ್ 115 ಮತ್ತು ಸೆಪ್ಟೆಂಬರ್‌ಲ್ಲಿ 35 ಪ್ರಕರಣ ದಾಖಲಾಗಿದ್ದು ಇದೀಗ ಪ್ರಕರಣ ಕಡಿಮೆಯಾಗಿದೆ. ಬೆಳಗಿನ ಜಾವ ಸರ್ವೇಕ್ಷಣೆ, ಇತರೆ ನಿಯಂತ್ರಣ ಕ್ರಮಗಳಿಂದ ಡೆಂಗ್ಯು ಕಡಿಮೆ ಆಗಿದೆ. ಜಿಲ್ಲೆಯಲ್ಲಿ ಅಗತ್ಯ ಔಷಧಿಗಳ ಕೊರತೆ ಇಲ್ಲ. ಆದರೆ ಸೊರಬ ಮತ್ತು ಹೊಸನಗರದಲ್ಲಿ ತಜ್ಞ ವೈದ್ಯರ ಕೊರತೆ ಎಂದರು.
ಅಂಗನವಾಡಿಗಳಿಗೆ ಮೊಟ್ಟೆ ಸರಬರಾಜು ಆಗುತ್ತಿದ್ದು ಜುಲೈ ವರೆಗೆ ಮೊಟ್ಟೆ ಹಣಪಾವತಿ ಆಗಿದೆ. ರೂ.2.05 ಕೋಟಿ ಹಾಲಿನ ಪೌಡರ್ ಹಣ ಬಾಕಿ ಇದೆ ಎಂದು ಅಕ್ಷರ ದಾಸೋಹ ಅಧಿಕಾರಿಗಳು ತಿಳಿಸಿದರು.
ಕ್ಷೀರ ಭಾಗ್ಯ ಯೋಜನೆಯಡಿ ಸಕ್ಕರೆ ಸರಬರಾಜು ಆಗಿಲ್ಲ. ರೂ.40 ಕೆ.ಜಿ ಗೆ ನಿಗದಿಯಾಗಿದ್ದು ಈ ನಿಗದಿತ ಹಣಕ್ಕೆ ಸಕ್ಕರೆ ಲಭ್ಯವಾಗದ ಕಾರಣ ಸರಬರಾಜು ಸಾಧ್ಯವಾಗಿಲ್ಲ. ರೂ. 50 ನಿಗದಿ ಮಾಡುವಂತೆ ಸರ್ಕಾರಕ್ಕೆ ಕೋರಲಾಗಿದೆ ಎಂದು ಜಿ.ಪಂ ಸಿಇಓ ಎನ್.ಹೇಮಂತ್ ತಿಳಿಸಿದರು.
ಆಹಾರ ಇಲಾಖೆ ಉಪನಿರ್ದೇಶಕ ಅವಿನ್ ಮಾತನಾಡಿ, 3.80 ಲಕ್ಷ ಬಿಪಿಲ್ ಕಾರ್ಡುದಾರರು ಇದ್ದು, ಈ ಪೈಕಿ 6 ತಿಂಗಳು ಸತತವಾಗಿ ಪಡಿತರ ಪಡೆಯದ 8000 ಕಾರ್ಡುಗಳನ್ನು ರದ್ದುಪಡಿಸಲಾಗಿದೆ. ಇ-ಜನ್ಮ್ ಪೋರ್ಟಲ್ ಮಾಹಿತಿ ಮೇರೆಗೆ ಮರಣ ಹೊಂದಿದ 5000 ಕಾರ್ಡುದಾರರ ಹೆಸರನ್ನು ತೆಗೆದುಹಾಕಲಾಗಿದೆ. ಇನ್ನೂ ರದ್ದುಪಡಿಸುವ 1500 ಜನರ ಪಟ್ಟಿ ಇದೆ. 58 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ದಂಡ ವಿಧಿಸಲಾಗಿದೆ. 2395 ಐಟಿ ಪಾವತಿದಾರರ ಬಿಪಿಎಲ್ ನ್ನು ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿದೆ. ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ಇರುವ 53,342 ಕಾರ್ಡುಗಳು ಇವೆ. ಇವನ್ನು ರದ್ದುಗೊಳಿಸಲು ಕ್ರಮ ವಹಿಸಬೇಕದೆ. ಹೊಸದಾಗಿ ಪಡಿತರ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದ 4963 ರಲ್ಲಿ 2489 ನೀಡಲಾಗಿದೆ. 980 ತಿರಕಸ್ಕರಿಸಲಾಗಿದ್ದು ಉಳಿದವನ್ನು ಮುಂದೆ ಪೋರ್ಟಲ್ ಓಪನ್ ಆದಾಗ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು ಮಾತನಾಡಿ, ಕಳೆದ ವರ್ಷದ ಅನುದಾನ ಶೇ.50 ಮಾತ್ರ ಬಿಡುಗಡೆಯಾಗಿದೆ. ಶಿಕಾರಿಪುರ ಮತ್ತು ಆನವಟ್ಟಿಯಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಜಾಗದ ಸಮಸ್ಯೆ ಇದೆ. ಆನವಟ್ಟಿಯಲ್ಲಿ ಸಮಸ್ಯೆ ಪರಿಹಾರ ಹಂತದಲ್ಲಿದ್ದು, ಶಿಕಾರಿಪುರದಲ್ಲಿ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಅಮೃತ್ ಯೋಜನೆ ಫೇಸ್ 01 ಮುಗಿದಿದ್ದು ಫೇಸ್ 02 ಆರಂಭವಾಗಬೇಕಿದೆ ಎಂದು ತಿಳಿಸಿದರು.
ಕೆಎಸ್‌ಆರ್‌ಟಿಸಿ ಅಧಿಕಾರಿ ದಿನೇಶ್ ಮಾತನಾಡಿ, ಶೇ. 42.8 ಆದಾಯ ಶಕ್ತಿ ಯೋಜನೆಯಿಂದ ಬರುತ್ತಿದ್ದು, ಶೇ.60.5 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಯೋಜನೆ ಜಾರಿಯಾದಾಗಿನಿಂದ ಹೆಚ್ಚುವರಿ ಬಸ್‌ಗಳು ಮತ್ತು ರೂಟ್‌ಗಳ ಬೇಡಿಕೆ ಹೆಚ್ಚಿದೆ. 365 ಬಸ್‌ಗಳು ಓಡಾಡುತ್ತಿದ್ದು, 215 ರೂಟ್ ಬೇಡಿಕೆ ಇದೆ ಎಂದರು.
ಗೃಹಜ್ಯೋತಿ ಯೋಜನೆಯಡಿ 19 ಕೋಟಿ ಸಬ್ಸಿಡಿ ಮೆಸ್ಕಾಂ ಗೆ ಬರುತ್ತಿದೆ. ಸರ್ಕಾರಿ ಇಲಾಖೆಗಳಿಂದ ಸಾಕಷ್ಟು ಪ್ರಮಾಣದ ಬಿಲ್ ಬಾಕಿ ಇದೆ. ಗ್ರಾ.ಪಂ ಮತ್ತು ಬೀದಿ ದೀಪ, ನೀರಿನ ಸರಬರಾಜಿನಿಂದ ರೂ.52 ಕೋಟಿ ಬಿಲ್ ಬಾಕಿ ಇದೆ. ಎಂಪಿಎA ನಿಂದ ರೂ.300 ಕೋಟಿ ಬಾಕಿ ಇದೆ ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಣ್ಣ ನೀರಾವರಿ ಇಲಾಖೆಗೆ ಪದೇ ಪದೇ ಕರೆಂಟ್ ಸರಬರಾಜು ನಿಲ್ಲಿಸಬಾರದು. ರೈತರಿಗೆ ಅನಾನುಕೂಲವಾಗುತ್ತದೆ. ವಿವಿಧ ಇಲಾಖೆಗಳು ಮತ್ತು ಮೆಸ್ಕಾಂ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕೆಂದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ ಮಾಹೆವರೆಗೆ 2836 ಫಲಾನುಭವಿಗಳಿಗೆ ರೂ.84,72,000 ಹಣ ಪಾವತಿಯಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಅಧ್ಯಕ್ಷರು, ಎಲ್ಲ ಇಲಾಖೆಗಳು ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಬೇಕು. ನಿಗದತ ಅವಧಿಯೊಳಗೆ ಅನುದಾನ ಬಳಕೆಯಾಗಬೇಕು. ಗುಣಮಟ್ಟದ ಕಾಮಗಾರಿಗಳು ಆಗಬೇಕು. ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ವಿಭಾಗ ಸೇರಿದಂತೆ ಎಲ್ಲ ಇಲಾಖೆಗಳು ನಿಗದಿತ ವೇಳೆಯೊಳಗೆ ಗುರಿ ಸಾಧಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಎನ್.ಹೇಮಂತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

H.S.Sundaresh ನಗರದಲ್ಲಿ ಒಟ್ಟು 2300 ನಿವೇಶನಗಳು ಖಾಲಿ ಇವೆ. ಮನೆ ಕಟ್ಟದಿದ್ದರೆ ಅವುಗಳನ್ನ ರದ್ದುಗೊಳಿಸಲು ಸುತ್ತೋಲೆ- ಎಚ್.ಎಸ್.ಸುಂದರೇಶ್

0

H.S.Sundaresh ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಸುಮಾರು 5 ರಿಂದ 6 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ನಗರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಶನಿವಾರ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನಿರಂತರ ಪರಿಸರ ಹಾನಿಯಿಂದ ಪ್ರಸ್ತುತ ಮಲೆನಾಡಿನಲ್ಲೂ 43 ಡಿಗ್ರಿಗಿಂತಲೂ ಹೆಚ್ಚು ತಾಪಮಾನ ಕಂಡುಬರುತ್ತಿದೆ. ಹೀಗೆಯೇ ಸಾಗಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ಆದ್ದರಿಂದ ನಮ್ಮ ಸುತ್ತಮುತ್ತಲಿನಲ್ಲಿ ಗಿಡಗಳನ್ನು ನೆಟ್ಟು ಮಕ್ಕಳಂತೆ ಅವುಗಳನ್ನು ಪೋಷಿಸಿ ಸಲುಹಬೇಕು ಎಂದು ಕಿವಿ ಮಾತು ಹೇಳಿದರು.
H.S.Sundaresh ಪ್ರಾಧಿಕಾರದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 1000, ಊರುಗಡೂರು ಬಡಾವಣೆಯಲ್ಲಿ 1500 ನಿದಿಗೆ ಬಡಾವಣೆ, ಭದ್ರಾವತಿಯ ಕುವೆಂಪು ಬಡಾವಣೆ ಸೇರಿದಂತೆ 5 ರಿಂದ 6 ಸಾವಿರ ಗಿಡಗಳನ್ನು ನೆಡಲಾಗುವುದು. ಸುಮಾರು 7 ಅಡಿಯ ಗಿಡಗಳನ್ನು ನೆಡಲಾಗುವುದು. ಅರಣ್ಯ ಇಲಾಖೆಯವರು 2 ವರ್ಷಗಳ ಕಾಲ ಗಿಡಗಳ ನಿರ್ವಹಣೆ ಮಾಡುವರು.
ಸುಮಾರು 14 ವರ್ಷಗಳಿಂದ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಡಾವಣೆ ನಿರ್ಮಾಣ ಆಗಿಲ್ಲ. ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಅನೇಕ ವರ್ಷಗಳಿಂದ ನಿವೇಶನಕ್ಕೆ ಸಂಬಂಧಿಸಿದಂತೆ ತೊಂದರೆಗಳಿದ್ದು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ನಗರದ ಬಡಾವಣೆಗಳಲ್ಲಿ ಒಟ್ಟು 2300 ನಿವೇಶನಗಳು ಖಾಲಿ ಇವೆ. ಇಲ್ಲಿ ಮನೆಗಳನ್ನು ಕಟ್ಟಬೇಕು. ಇಲ್ಲವಾದಲ್ಲಿ ಅವುಗಳನ್ನು ರದ್ದುಗೊಳಿಸಿ ಮನೆ ಅವಶ್ಯಕತೆ ಇರುವವರಿಗೆ ಹಂಚಿಕೆ ಮಾಡಲು ಸುತ್ತೋಲೆ ಹೊರಡಿಸಿರುವ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹಲವರಿಗೆ ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದರು.
ಊರುಗಡೂರಿನಲ್ಲಿ 60 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದ್ದು 672 ನಿವೇಶನ ನಿರ್ಮಿಸಲಾಗುವುದು. ರೈತರಿಗೆ ನೀಡುವ ನಿವೇಶನ ಹೊರತುಪಡಿಸಿ ಉಳಿದ 431 ನಿವೇಶನಗಳನ್ನು ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿದ್ದು 2 ರಿಂದ 3 ತಿಂಗಳ ಒಳಗೆ ಹಂಚಿಕೆ ಮಾಡಲಾಗುವುದು. ಗೋಪಿಶೆಟ್ಟಿಕೊಪ್ಪದಲ್ಲೂ 104 ಎಕರೆ ಜಮೀನು 50:50 ಅನುಪಾತದಲ್ಲಿ ರೈತರಿಂದ ಖರೀದಿಸಲಾಗುತ್ತಿದೆ. ನಿದಿಗೆಯಲ್ಲಿ 3 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಪ್ರಾಧಿಕಾರ ಜಮೀನು ಕೊಂಡು ಬಡಾವಣೆ ನಿರ್ಮಿಸುತ್ತಿದೆ.
H.S.Sundaresh ರೈತರು ಖಾಸಗಿಯವರಿಗೆ ತಮ್ಮ ಜಮೀನನ್ನು ಮಾರುವ ಬದಲು ಕಾನೂನುಬದ್ದವಾಗಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೀಡಿದರೆ ಎಲ್ಲರಿಗೂ ಅನೂಕವಾಗುತ್ತದೆ. ಸೋಗಾನೆ, ಹೊಳೆಹೊನ್ನೋರು, ಭದ್ರಾವತಿ ಭಾಗದಲ್ಲಿ ಜಮೀನು ಮಾರಾಟ ಮಾಡುವವರು ಇದ್ದರೆ 50:50 ಆಧಾರದಲ್ಲಿ ಪ್ರಾಧಿಕಾರಕ್ಕೆ ಮಾರಾಟ ಮಾಡಬಹುದು. ಪ್ರಾಧಿಕಾರದ ವತಿಯಿಂದ ಇನ್ನೂ ಅಭಿವೃದ್ದಿ ಕೆಲಸಗಳು ಆಗಬೇಕಿದ್ದು ಮಾಸ್ಟರ್ ಪ್ಲಾನ್ ನ್ನು ತಯಾರಿಸಲಾಗುತ್ತಿದೆ.
ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಸೇರಿದಂತೆ ನಿವಾಸಿಗಳ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲಾಗುವುದು.
ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯವರ ಸಹಕಾರ ಮತ್ತು ಪಾತ್ರ ಮಹತ್ತರವಾಗಿದ್ದು ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಸೂಡಾ ಸದಸ್ಯ ಹೆಚ್.ಎಸ್.ಸಿದ್ದಪ್ಪ, ಅರಣ್ಯ ಇಲಾಖೆ ಎಸಿಎಫ್ ವಿಜಯಕುಮಾರ್, ಸೂಡಾ ಎಇಇ ಬಸವರಾಜ್, ಸಹಾಯಕ ಅಭಿಯಂತರ ಗಂಗಾಧರಸ್ವಾಮಿ, ಆರ್‌ಎಫ್‌ಓ ವಿಜಯಕುಮಾರ್ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವಾಸಿಗಳು, ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ ಸುಮಾರು 5 ರಿಂದ 6 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲಾಗುವುದು ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ನಗರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಶನಿವಾರ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನಿರಂತರ ಪರಿಸರ ಹಾನಿಯಿಂದ ಪ್ರಸ್ತುತ ಮಲೆನಾಡಿನಲ್ಲೂ 43 ಡಿಗ್ರಿಗಿಂತಲೂ ಹೆಚ್ಚು ತಾಪಮಾನ ಕಂಡುಬರುತ್ತಿದೆ. ಹೀಗೆಯೇ ಸಾಗಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ಆದ್ದರಿಂದ ನಮ್ಮ ಸುತ್ತಮುತ್ತಲಿನಲ್ಲಿ ಗಿಡಗಳನ್ನು ನೆಟ್ಟು ಮಕ್ಕಳಂತೆ ಅವುಗಳನ್ನು ಪೋಷಿಸಿ ಸಲುಹಬೇಕು ಎಂದು ಕಿವಿ ಮಾತು ಹೇಳಿದರು.
ಪ್ರಾಧಿಕಾರದ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 1000, ಊರುಗಡೂರು ಬಡಾವಣೆಯಲ್ಲಿ 1500 ನಿದಿಗೆ ಬಡಾವಣೆ, ಭದ್ರಾವತಿಯ ಕುವೆಂಪು ಬಡಾವಣೆ ಸೇರಿದಂತೆ 5 ರಿಂದ 6 ಸಾವಿರ ಗಿಡಗಳನ್ನು ನೆಡಲಾಗುವುದು. ಸುಮಾರು 7 ಅಡಿಯ ಗಿಡಗಳನ್ನು ನೆಡಲಾಗುವುದು. ಅರಣ್ಯ ಇಲಾಖೆಯವರು 2 ವರ್ಷಗಳ ಕಾಲ ಗಿಡಗಳ ನಿರ್ವಹಣೆ ಮಾಡುವರು.
ಸುಮಾರು 14 ವರ್ಷಗಳಿಂದ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಡಾವಣೆ ನಿರ್ಮಾಣ ಆಗಿಲ್ಲ. ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಅನೇಕ ವರ್ಷಗಳಿಂದ ನಿವೇಶನಕ್ಕೆ ಸಂಬಂಧಿಸಿದಂತೆ ತೊಂದರೆಗಳಿದ್ದು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ನಗರದ ಬಡಾವಣೆಗಳಲ್ಲಿ ಒಟ್ಟು 2300 ನಿವೇಶನಗಳು ಖಾಲಿ ಇವೆ. ಇಲ್ಲಿ ಮನೆಗಳನ್ನು ಕಟ್ಟಬೇಕು. ಇಲ್ಲವಾದಲ್ಲಿ ಅವುಗಳನ್ನು ರದ್ದುಗೊಳಿಸಿ ಮನೆ ಅವಶ್ಯಕತೆ ಇರುವವರಿಗೆ ಹಂಚಿಕೆ ಮಾಡಲು ಸುತ್ತೋಲೆ ಹೊರಡಿಸಿರುವ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹಲವರಿಗೆ ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದರು.
ಊರುಗಡೂರಿನಲ್ಲಿ 60 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದ್ದು 672 ನಿವೇಶನ ನಿರ್ಮಿಸಲಾಗುವುದು. ರೈತರಿಗೆ ನೀಡುವ ನಿವೇಶನ ಹೊರತುಪಡಿಸಿ ಉಳಿದ 431 ನಿವೇಶನಗಳನ್ನು ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿದ್ದು 2 ರಿಂದ 3 ತಿಂಗಳ ಒಳಗೆ ಹಂಚಿಕೆ ಮಾಡಲಾಗುವುದು. ಗೋಪಿಶೆಟ್ಟಿಕೊಪ್ಪದಲ್ಲೂ 104 ಎಕರೆ ಜಮೀನು 50:50 ಅನುಪಾತದಲ್ಲಿ ರೈತರಿಂದ ಖರೀದಿಸಲಾಗುತ್ತಿದೆ. ನಿದಿಗೆಯಲ್ಲಿ 3 ಎಕರೆಯಲ್ಲಿ ಬಡಾವಣೆ ನಿರ್ಮಿಸಲಾಗುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಪ್ರಾಧಿಕಾರ ಜಮೀನು ಕೊಂಡು ಬಡಾವಣೆ ನಿರ್ಮಿಸುತ್ತಿದೆ.
ರೈತರು ಖಾಸಗಿಯವರಿಗೆ ತಮ್ಮ ಜಮೀನನ್ನು ಮಾರುವ ಬದಲು ಕಾನೂನುಬದ್ದವಾಗಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ನೀಡಿದರೆ ಎಲ್ಲರಿಗೂ ಅನೂಕವಾಗುತ್ತದೆ. ಸೋಗಾನೆ, ಹೊಳೆಹೊನ್ನೋರು, ಭದ್ರಾವತಿ ಭಾಗದಲ್ಲಿ ಜಮೀನು ಮಾರಾಟ ಮಾಡುವವರು ಇದ್ದರೆ 50:50 ಆಧಾರದಲ್ಲಿ ಪ್ರಾಧಿಕಾರಕ್ಕೆ ಮಾರಾಟ ಮಾಡಬಹುದು. ಪ್ರಾಧಿಕಾರದ ವತಿಯಿಂದ ಇನ್ನೂ ಅಭಿವೃದ್ದಿ ಕೆಲಸಗಳು ಆಗಬೇಕಿದ್ದು ಮಾಸ್ಟರ್ ಪ್ಲಾನ್ ನ್ನು ತಯಾರಿಸಲಾಗುತ್ತಿದೆ.
ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಸೇರಿದಂತೆ ನಿವಾಸಿಗಳ ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲಾಗುವುದು.
ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯವರ ಸಹಕಾರ ಮತ್ತು ಪಾತ್ರ ಮಹತ್ತರವಾಗಿದ್ದು ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಸೂಡಾ ಸದಸ್ಯ ಹೆಚ್.ಎಸ್.ಸಿದ್ದಪ್ಪ, ಅರಣ್ಯ ಇಲಾಖೆ ಎಸಿಎಫ್ ವಿಜಯಕುಮಾರ್, ಸೂಡಾ ಎಇಇ ಬಸವರಾಜ್, ಸಹಾಯಕ ಅಭಿಯಂತರ ಗಂಗಾಧರಸ್ವಾಮಿ, ಆರ್‌ಎಫ್‌ಓ ವಿಜಯಕುಮಾರ್ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ನಿವಾಸಿಗಳು, ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Rotary Club Shivamogga ಹೊಸ ಆಲೋಚನೆಗಳ ಮೂಲಕ ವಿದ್ಯಾರ್ಥಿಗಳಿಂದ ಉತ್ತಮ ದೇಶ ನಿರ್ಮಾಣ ಸಾಧ್ಯ- ಡಾ.ಶುಭಾ ಮರವಂತೆ

0

Rotary Club Shivamogga ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ಎಲ್ಲರೂ ಶಿಕ್ಷಣ ಪಡೆಯುವುದು ತುಂಬಾ ಅವಶ್ಯಕ ಎಂದು ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಿಂದ ಮಹರ್ಷಿ ಹಾತಿರಾಮ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನ ಅಕ್ಷರ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮೂಲ ಶಿಕ್ಷಣ ಮತ್ತು ಸಾಕ್ಷರತೆ ಕುರಿತು ಮಾತನಾಡಿ, ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಹೆಣ್ಣು ಮಗುವಿಗೆ ಶಿಕ್ಷಣ ನೀಡುವುದು ಇಡೀ ಕುಟುಂಬಕ್ಕೆ ಶಿಕ್ಷಣ ನೀಡಿದಂತೆ ಎಂದು ತಿಳಿಸಿದರು.

ಶಿಕ್ಷಣ ಪಡೆಯುವುದರಿಂದ ಭವಿಷ್ಯದಲ್ಲಿ ನಿಮ್ಮ ಆಸಕ್ತಿ ಇರುವ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಹಕಾರಿಯಾಗುತ್ತದೆ. ಹೊಸ ಹೊಸ ಆಲೋಚನೆಗಳ ಮೂಲಕ ಉತ್ತಮ ದೇಶ ನಿರ್ಮಾಣ ಮಾಡುವಲ್ಲಿ ನಿಮ್ಮ ಕೊಡುಗೆ ನೀಡಬಹುದಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ರೋಟರಿ ಸಂಸ್ಥೆಯು ಮಾಡುತ್ತಿರುವ ಸೇವಾ ಕಾರ್ಯಗಳು ಶ್ಲಾಘನೀಯ ಎಂದರು.

ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಅವರು ರೋಟರಿ ಸೇವೆಗಳ ಕುರಿತು ಮಾತನಾಡಿ, ರೋಟರಿ ಸಂಸ್ಥೆಯು ಯಾವುದೇ ಫಲಾಪೇಕ್ಷೆಯಿಲ್ಲದೇ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಕಾರ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ ಎಂದು ತಿಳಿಸಿದರು.

Rotary Club Shivamogga ಕಾಲೇಜಿನ ಪ್ರಾಚಾರ್ಯ ಪ್ರೊ. ಎಚ್.ಟಿ. ಗಿರೀಶ್ ಮಾತನಾಡಿ, ರೋಟರಿ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಂಸ್ಥೆಯ ಕಾರ್ಯದರ್ಶಿ, ಮಾಜಿ ಶಾಸಕ ಅಶೋಕ್ ನಾಯಕ್, ರೋಟರಿ ಕ್ಲಬ್ ಸೆಂಟ್ರಲ್ ಕಾರ್ಯದರ್ಶಿ ಬಿ.ವಿ.ಈಶ್ವರ್, ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಜೆ.ಪಿ.ಚಂದ್ರು, ಕಾರ್ಯಕ್ರಮ ಸಂಯೋಜಕರಾದ ಬಸವರಾಜ್, ರಾಜಶ್ರೀ ಬಸವರಾಜ್, ದೀಪಾ ಜಯಶೀಲ ಶೆಟ್ಟಿ, ಅನ್ಸ್ ಕ್ಲಬ್ಬಿನ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Samanvaya Trust ಸಮನ್ವಯ ಟ್ರಸ್ಟ್ ನಿಂದ ವೈ.ಎಸ್.ಭುವನೇಶ್ವರಿ ಅವರಿಗೆ ಪರಿಸರ ಕುಟುಂಬ ಪ್ರಶಸ್ತಿ

0

Samanvaya Trust ಪರಿಸರದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ನಗರದ ಚನ್ನಪ್ಪ ಲೇಔಟ್‌ನ ನಿವಾಸಿ, ಪರಿಸರ ಸ್ನೇಹಿ ಮೆಸ್‌ನ ವೈ.ಎಸ್.ಭುವನೇಶ್ವರಿ ಅವರ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡಿ ಗೌರವಿಸುವ ಕೆಲಸವನ್ನು ಟ್ರಸ್ಟ್ ನಿರಂತರವಾಗಿ ಮಾಡುತ್ತಿದ್ದು, ಈ ಬಾರಿ ಚನ್ನಪ್ಪ ಲೇಔಟ್‌ನ ಭುವನೇಶ್ವರಿ ಅವರ ಕುಟಂಬಕ್ಕೆ ಪ್ರಶಸ್ತಿ ವಿತರಿಸಲಾಯಿತು.
Samanvaya Trust ವೈ.ಎಸ್.ಭುವನೇಶ್ವರಿ ಅವರು ವಿಶೇಷವಾಗಿ ಪರಿಸರದ ಕಾಳಜಿ ಹೊಂದಿದ್ದು, ಪರಿಸರ ಸಂರಕ್ಷಣೆಯ ಕಾಯಕದಲ್ಲಿ ನಿರತರಾಗಿದ್ದಾರೆ. ಪರಿಸರ ದಿನಾಚರಣೆಯಂದು ನೂರಾರು ಸಸಿಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಾರೆ. ಸಮಾಜಮುಖಿ ಸೇವೆಗಳಲ್ಲಿಯೂ ಕೆಲಸ ಮಾಡುತ್ತಿರುವ ಭುವನೇಶ್ವರಿ ಅವರ ಸೇವೆ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ.
ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ಉದ್ಯಮಿ ಎಸ್.ಎಂ.ಬಾಲಕೃಷ್ಣ ಅವರು ಪರಿಸರ ಕುಟುಂಬ ಪ್ರಶಸ್ತಿಯನ್ನು ವೈ.ಎಸ್.ಭುವನೇಶ್ವರಿ ಅವರಿಗೆ ನೀಡಿದರು. ಸಮನ್ವಯ ಕಾಶಿ, ಸಮನ್ವಯ ಸಲಹಾ ಸಮಿತಿ ಸದಸ್ಯ ಯತೀಶ್, ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Rotary Shivamogga ರೋಟರಿಯ ವಿವಿಧ ಕಾಳಜಿಗಳಲ್ಲಿ ಪರಿಸರವೂ ಒಂದು- ಸಿ.ಎ.ದೇವಾನಂದ್

0

Rotary Shivamogga ರೋಟರಿ ಸಂಸ್ಥೆಯ ಮುಖ್ಯ ಉದ್ದೇಶಗಳಲ್ಲಿ ಪರಿಸರ ಕಾಳಜಿಯೂ ಒಂದು. ಇದರೊಂದಿಗೆ ಸಂಪೂರ್ಣ ಸಹಕಾರದೊಂದಿಗೆ ತೊಡಗಿಸಿಕೊಳ್ಳುವುದಾಗಿ ರೋಟರಿ ಜಿಲ್ಲೆ – 3182 ರ ಗವರ್ನರ್ ರೋ. ಸಿ.ಎ.ದೇವಾನಂದ್ ತಿಳಿಸಿದರು.

ನಗರದ ಗಾಡಿಕೊಪ್ಪ ಪುರದಾಳು ರಸ್ತೆಯಲ್ಲಿರುವ ತುಂಗೆ ಮೇಲ್ದಂಡೆ ಕಾಲುವೆ ಪಕ್ಕದಲ್ಲಿರುವ ರೋಟರಿ ಬಯೋ ಡೈವರ್ಸಿಟಿ ಎರಡನೇ ಹಂತದ ಪಾರ್ಕ್ ಯನ್ನು ಶನಿವಾರÀ ಉದ್ಘಾಟಿಸಿ, ಕಾರ್ಯಕ್ರಮದ ಪೂರ್ವಭಾವಿಯಾಗಿ ಸಸಿ ನೆಡುವುದರ ಮೂಲಕ ಚಾಲನೆ ನೀಡಿ, ಮಾತನಾಡಿದ ಅವರು, ರೋ. ಡಾ. ಪಿ.ನಾರಾಯಣ್ ಅವರು ಈ ಪ್ರಾಜೆಕ್ಟ್‍ನ ಮುಂದುವರಿಸುವ ಬಗ್ಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡುವುದಾಗಿ ರೋಟರಿ ಸಂಸ್ಥೆಗಳ ಪರವಾಗಿ ಭರವಸೆ ನೀಡಿದರು.

ರೋಟರಿ ಶಿವಮೊಗ್ಗ ನಾರ್ಥ್‍ನ ರೋ. ಎಸ್.ಉಮೇಶ್ ಹಾಗೂ ರೋ. ಆನಂದ್ ಮೂರ್ತಿಯವರ ಕೊಡುಗೆಯನ್ನು ಶ್ಲಾಘಿಸಿದರು.

Rotary Shivamogga ಪ್ರಾಸ್ತಾವಿಕ ಮಾತನಾಡಿದ ರೋಟರಿ ಬಯೋಡೈವರ್ಸಿಟಿ ಅಧ್ಯಕ್ಷ ರೋ. ಎ.ಎಸ್.ಚಂದ್ರಶೇಖರ್, ರೋಟರಿ ಅಂತರಾಷ್ಟ್ರೀಯ ನಿಧಿಯಿಂದ 60000 ಅಮೇರಿಕನ್ ಡಾಲರ್ ನಿಧಿ ಮಂಜೂರಾತಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮೊಡೆಸ್ಟಾ ಕ್ಯಾಲಿಫೋರ್ನಿಯ ಇವರ ಸಹಯೋಗ ಪ್ರಾಸ್ತಾಪಿಸಿದರು. ಈ ಯೋಜನೆ ರಟರಿ ಕ್ಲಬ್ ಶಿವಮೊಗ್ಗ ಉತ್ತರ ಇವರ ಸಹಯೋಗದಲ್ಲಿ ಶಿವಮೊಗ್ಗದ ಎಲ್ಲಾ ಇತರ 7 ರೋಟರಿ ಕ್ಲಬ್‍ಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಲ್ಲಾ ಪ್ರತಿನಿಧಿಗಳು, ರೋಟರಿ ಕಾರ್ಯವನ್ನು ಶ್ಲಾಘಿಸಿ, ಸರ್ಕಾರದ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.

ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿ ನಟರಾಜ ಪಾಟೀಲ್ ಭಾಗವಹಿಸಿ, ಇಲಾಖೆಯ ಪರವಾಗಿ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಎಂ ಎಲ್ ಸಿ ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಾಜಿ ಎಂ ಎಲ್ ಸಿ, ಉದ್ಯಮಿ ರುದ್ರೇಗೌಡರು, ಮಾಜಿ ಜಿಲ್ಲಾ ಗವರ್ನರ್‍ಗಳಾದ ರೋ. ಜಿ.ಎನ್.ಪ್ರಕಾಶ್ ಹಾಗೂ ರೋ.ಹೆಚ್.ಸಿ.ರವಿ ಉಪಸ್ಥಿತರಿದ್ದರು. ರೋಟರಿ ಅಸಿಸ್ಟೆಂಟ್ ಗವರ್ನರ್ ರೋ. ಎಸ್.ಆರ್.ನಾಗರಾಜ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಎಲ್ಲಾ ಕ್ಲಬ್‍ನ ಸದಸ್ಯರೂ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು. ರೋ.ವಿಜಯಕುಮಾರ್, ರೋ. ರವೀಂದ್ರನಾಥ್ ಐತಾಳ್ ಅವರು ಕಾರ್ಯಕ್ರಮ ಆಯೋಜನೆಯಲ್ಲಿ ಸಹಕರಿಸಿದರು.

V. Somanna ಸೆ.26 ರಂದು ಶಿವಮೊಗ್ಗಕ್ಕೆ ರೈಲ್ವೆ ಸಚಿವ ವಿ.ಸೋಮಣ್ಣ ಭೇಟಿ

0

V. Somanna ಕೇಂದ್ರ ರೈಲ್ವೆ ಮಂತ್ರಿ ವಿ ಸೋಮಣ್ಣ ಇದೇ ಸೆಪ್ಟೆಂಬರ್‌ 26 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್‌ ಒದಗಿಸುವ ಕುತೂಹಲ ಇನ್ನಷ್ಟು ಹೆಚ್ಚಾಗಿದೆ.
ಈಗಾಗಲೇ ಸಂಸದರು ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್‌ ಬರಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ದರು. ಸಚಿವ ಸೋಮಣ್ಣ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದು, ತಮ್ಮ ಭೇಟಿ ವೇಳೆ ಈ ಬಗ್ಗೆ ಅವರು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸೆ. 26 ರಂದು ಜಿಲ್ಲೆಗೆ ಬರಲಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ- ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ.
V. Somanna ನಂತರ ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್ ಡಿಪೊ ಕಾಮಗಾರಿ ವೀಕ್ಷಿಸಲಿದ್ದಾರೆ.
ಮಧ್ಯಾಹ್ನ 12ರಿಂದ 1ರ ವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಶಿವಮೊಗ್ಗದಿಂದ ಬೀರೂರಿಗೆ ತೆರಳಲಿದ್ದಾರೆ.

Kuvempu University ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಈರ್ವರು ಪ್ರಾಧ್ಯಾಪಕರ ಹೆಸರು ಸೇರ್ಪಡೆ

0

Kuvempu University ಅಮೇರಿಕದ ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. ೦೨ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಪ್ರೊ. ಬಿ. ಜೆ. ಗಿರೀಶ್ ಮತ್ತು ಪ್ರೊ. ಬಿ. ಇ. ಕುಮಾರಸ್ವಾಮಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.
ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಐಒನ್ನಿಡಿಸ್ ಸೆಪ್ಟೆಂಬರ್ ೧೬ರಂದು ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. ೦೨ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.
Kuvempu University 2024ನೇ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 46,890ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ತಮ್ಮ ಸಂಶೋಧನಾ ಒಟ್ಟು ಕಾಲಾವಧಿಯಲ್ಲಿ 1,46,024 ಅಂಕಗಳೊಂದಿಗೆ ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.
ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಕುಮಾರಸ್ವಾಮಿ ಈ ವರ್ಷ 1,69,851ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ.

Chamber of Commerce ಶಾಲಾ ಕಾಲೇಜುಗಳಲ್ಲಿ ಸಿಗದಂಥ ವಿಶೇಷ ಕೌಶಲ್ಯಗಳನ್ನ ಕಲಿಸುವುದೇ ಸ್ಕಿಲ್ ಅಕಾಡೆಮಿಯ ಉದ್ದೇಶ- ಎನ್.ಗೋಪಿನಾಥ್

0

Chamber of Commerce ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 2021-2024 ಸಾಲಿನ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಡಳಿತ ಮಂಡಳಿಯು ಅನೇಕ ಕನಸುಗಳನ್ನು ಕಂಡು ಯೋಜನೆಗಳನ್ನು ರೂಪಿಸಿ 90ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 40ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಸಂಘವು ವಜ್ರ ಮಹೋತ್ಸವದ ವರ್ಷದಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮಗಳ ಜೊತೆಯಲ್ಲಿ ವಿಶಿಷ್ಟ ಕಾರ್ಯಕ್ರಮಗಳನ್ನು ಕೊಡಬೇಕು ಎಂಬ ಆಶಯದೊಂದಿಗೆ ಅಡ್ವಾನ್ಸ್ಡ್‌ ಸ್ಕಿಲ್ ಡೆವಲಪ್‌ಮೆಂಟ್ ಅಕಾಡೆಮಿ ಪ್ರಾರಂಭಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರತಿಭಾವಂತರು, ಕೈಗಾರಿಕೆಗಳಿಗೆ ಬೇಕಾದ ನಿರ್ದಿಷ್ಟ ಕೌಶಲ್ಯಗಳನ್ನು ಹೊಂದಿದ ಕೆಲಸಗಾರರನ್ನು ರೂಪಿಸುವುದರ ಜತೆಗೆ ಯುವಜನತೆಗೆ ಶಾಲಾ ಕಾಲೇಜುಗಳಲ್ಲಿ ಸಿಗದಂತಹ ವಿಶೇಷ ಕೌಶಲ್ಯಗಳನ್ನು ಕಲಿಸುವ ಉದ್ದೇಶವನ್ನು ಸ್ಕಿಲ್ ಅಕಾಡೆಮಿ ಹೊಂದಿದೆ ಎಂದರು.
Chamber of Commerce ಎಕ್ಸ್ಪೋರ್ಟ್ ಫೆಸಿಲಿಟೇಶನ್ ಸೆಂಟರ್ ಮತ್ತು ಐಪಿ ಫೆಸಿಲಿಟೇಶನ್ ಸೆಂಟರ್ ಪ್ರಾರಂಭಿಸುವ ಮೂಲಕ ಉದ್ಯಮಗಳಿಗೆ ಅನುಕೂಲದ ಜೊತೆಗೆ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ಮಹತ್ತರ ಯೋಜನೆಯನ್ನು ರೂಪಿಸಿ, ಇದಕ್ಕೆ ಬೇಕಾದ ಪತ್ರ ವ್ಯವಹಾರ ಮಾಡಲಾಗಿದೆ ಎಂದು ತಿಳಿಸಿದರು.
ಎಲ್ಲ ಕಾರ್ಯಕ್ರಮಗಳ ಯಶಸ್ಸಿನ ಹಿಂದೆ ಸಂಘದ ಕಾರ್ಯದರ್ಶಿ ಹಾಗೂ ಎಲ್ಲ ನಿರ್ದೇಶಕರ ಅವಿರತ ಸಹಕಾರ, ಮಾಜಿ ಅಧ್ಯಕ್ಷರ ಸಲಹೆ ಸಹಕಾರ ಪ್ರಮುಖ ಪಾತ್ರ ವಹಿಸಿದೆ. ಸಂಘದ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವಲ್ಲಿ ಮಾಧ್ಯಮದವರ ಸಹಕಾರ ಅಪಾರ ಎಂದರು.
ಸಂಘದ ನೂತನ ಅಧ್ಯಕ್ಷ ಬಿ.ಗೋಪಿನಾಥ್, ನಿಕಟಪೂರ್ವ ಕಾರ್ಯದರ್ಶಿ ವಸಂತ್ ಹೊಬಳಿದಾರ್, ನೂತನ ಉಪಾಧ್ಯಕ್ಷ ಜಿ.ವಿಜಯಕುಮಾರ್, ನಿಕಟಪೂರ್ವ ಖಜಾಂಚಿ ರಾಜು ಮತ್ತು ಇತರ ನಿರ್ದೇಶಕರು, ಮಾಜಿ ಅಧ್ಯಕ್ಷರಾದ ಡಿ.ಎಸ್.ಅರುಣ್, ವಸಂತ್ ಕುಮಾರ್, ಅಶ್ವಥ್ ನಾರಾಯಣ್ ಶೆಟ್ಟಿ, ಶಂಕರಪ್ಪ, ವಾಸುದೇವ್ ಹಾಗೂ ಸದಸ್ಯರು ಭಾಗವಹಿಸಿದ್ದರು.

Chamber Of Commerce ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನ ನೂತನ ಪದಾಧಿಕಾರಿಗಳಿಗೆ ಅಭಿನಂದನೆ

0

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಪದಾಧಿಕಾರಿಗಳನ್ನು ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಅಭಿನಂದಿಸಿ ಸನ್ಮಾನಿಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷ ಬಿ.ಗೋಪಿನಾಥ್‌, Chamber Of Commerce ಉಪಾಧ್ಯಕ್ಷ ಜಿ.ವಿಜಯಕುಮಾರ್‌, ಕಾರ್ಯದರ್ಶಿ ಸುರೇಶ್‌ ಎ.ಎಂ ಹಾಗೂ ಖಜಾಂಚಿ ಮನೋಹರ.ಆರ್‌ ಉಪಸ್ಥಿತರಿದ್ದರು.