Sunday, March 29, 2026
Sunday, March 29, 2026
Home Blog Page 555

B.S.Yediyurappa ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತದ ಎದುರು ಹಾಜರಾದ ಯಡಿಯೂರಪ್ಪ

0

B. S. Yediyurappa ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾಯುಕ್ತ ಎದುರು ಹಾಜರಾಗಿದ್ದು, ಅಧಿಕಾರಿಗಳು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್ ಯಡಿಯೂರಪ್ಪ ಅವರು ಗಂಗಾನಗರದ ಬಳಿಯ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ, ಕುಮಾರಸ್ವಾಮಿಯವರ ಬಾಮೈದನ ಹೆಸರಿಗೆ ನೋಂದಣಿ ಮಾಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಅವಧಿಯಲ್ಲಿ ಮುಕ್ತಾಯಗೊಳಿಸಲಾಗಿತ್ತು ಎಂಬ ಆರೋಪವಿದೆ.
B. S. Yediyurappa ಪ್ರಕರಣದಲ್ಲಿ ಯಡಿಯೂರಪ್ಪ ಅವರು ಎ 1 ಆಗಿದ್ದು, ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಇಂದು (ಸೆ.21) ಬೆಳಿಗ್ಗೆ ಸಮನ್ಸ್ ನೀಡಿದ್ದರು. ಮಧ್ಯಾಹ್ನವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

Krantideepa Kannada Paper ಕ್ರಾಂತಿದೀಪ ಮಂಜುನಾಥ್ ಮೊಹರೆ ಹಣಮಂತರಾಯ ಪ್ರಶಸ್ತಿ

0

Krantideepa Kannada Paper ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆಯನ್ನು ಗುರುತಿಸಿ. ಇವರ ಸ್ಮರಣಾರ್ಥ ‘ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ’ಯನ್ನು ಕರ್ನಾಟಕ ಸರ್ಕಾರವು 2010ರಿಂದ ಪ್ರತಿ ವರ್ಷ ನೀಡುತ್ತಿದೆ. ಈ ಪ್ರಶಸ್ತಿಯು 2 ಲಕ್ಷ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ. ಈ ವರೆಗೆ 09 ಪತ್ರಕರ್ತರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2019 ರಿಂದ 2023 ರವರೆಗಿನ 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಇದೀಗ ಸರ್ಕಾರ ಪ್ರಕಟಿಸಿದೆ.

2021ನೇ ಸಾಲಿಗೆ ಎನ್.ಮಂಜುನಾಥ :

Krantideepa Kannada Paper ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಇವರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ.
ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ ಕೆಲಸ ಮಾಡಿದೆ;ಈ ಪತ್ರಿಕೆಯಲ್ಲಿ ವೃತ್ತಿ ಅನುಭವ ಹೊಂದಿದ ಯುವಕರು ನಾಡಿನ ಪ್ರಮುಖ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Youth Empowerment and Sports ಸೆ. 17 ರಿಂದ 2 ಅ.2ವರೆಗೆ ” ಸ್ವಚ್ಛತ ಹೀ ಸೇವಾ” ಕಾರ್ಯಕ್ರಮ

0

Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಸ್ವಚ್ಛ ಭಾರತ್ ಮಿಷನ್-‌ ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್‌ ಸ್ವಚ್ಛತಾ, ಸಂಸ್ಕಾರ್‌ ಸ್ವಚ್ಛತವನ್ನು ಸೆಪ್ಟೆಂಬರ್‌ 17 ರಿಂದ 2ನೇ ಅಕ್ಟೋಬರ್‌ 2024 ವರೆಗೆ ಹಮ್ಮಿಕೊಳ್ಳಲಾಗಿದ್ದು, ದಿನಾಂಕ 21.09.2024 ರಂದು ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಮುಖಾ ಮುಖಿ ಎಸ್. ಟಿ ರಂಗ ತಂಡ (ರಿ ) ಶಿವಮೊಗ್ಗ, ರಾಜರಾಜೇಶ್ವರಿ ಪ್ರೌಢಶಾಲೆ,ಗೋಪಾಳ ಇವರ ಸಹಯೋಗದೊಂದಿಗೆ ” ಸ್ವಚ್ಛತ ಹೀ ಸೇವಾ ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಂಪನ್ಮೂಲ ವ್ಯಕ್ತಿಯಾದ ಶ್ರೀ. ಕೆ.ಜಿ ವೆಂಕಟೇಶ್ ರವರು ಮಹಾತ್ಮ ಗಾಂಧೀಜಿ ಕಂಡ ಸ್ವಚ್ಛತಾ ಸಂಕಲ್ಪದ ಬಗ್ಗೆ ಸ್ವಚ್ಛತಾ ಅಭಿಯಾನದ ಕುರಿತು ಮಕ್ಕಳಿಗೆ ಮಾಹಿತಿಯನ್ನು ನೀಡಿ ಮುಂದಿನ ದಿನಗಳಲ್ಲಿ ಸ್ವಚ್ಛತೆಯ ಜಾಗೃತಿಗೊಳಿಸುವುದಕ್ಕೆ ನಾವು ನಿರಂತರವಾಗಿ ಕೈಜೋಡಿಸಿ ಕ್ರಮವನ್ನು ಕೈಗೊಳ್ಳುವ ಬಗ್ಗೆ ಉತ್ತಮವಾದ ಮಾಹಿತಿಯನ್ನು ನೀಡಿ Youth Empowerment and Sports ಕಾರ್ಯಕ್ರಮದ ಉದ್ಘಾಟನೆ ನುಡಿಗಳನ್ನು ನುಡಿದರು. ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ,ಶ್ರೀ. ಉಲ್ಲಾಸ್ ಕೆಟಿಕೆ ಅವರು ಸ್ವಚ್ಛತೆಯ ಸಂದೇಶವನ್ನು,ವಿದ್ಯಾರ್ಥಿಗಳಿಗೆ ಪ್ರಸ್ತಾಪಿಸಿದರು. ನಂತರ ಗೋಪಾಳ ವೃತ್ತ ಮತ್ತು ಬಸ್ಟ್ಯಾಂಡ್ ಸುತ್ತಮುತ್ತ‌ ಜಾಗವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ರಾಜರಾಜೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಮುಖ್ಯ ಶಿಕ್ಷಕರಾದಂತಹ ಧನಂಜಯ ಜೆ.ಆರ್ & ಶಿಕ್ಷಕ ವೃಂದದವರು‌, ಮುಖಾಮುಖಿ ಎಸ್ ಟಿ ರಂಗ ತಂಡದ ಮಂಜು ರಂಗಾಯಣ. ಮಹೇಂದ್ರ. ಆಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಿದರು.

Balur Police ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಬಿದ್ದ ಕಾರು

0

Balur Police ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 30 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ.

Balur Police 30 ಅಡಿ ಎತ್ತರದ ರಸ್ತೆಯಿಂದ ಪಕ್ಕದ ಕೆಳಭಾಗದಲ್ಲಿದ್ದ ಸುಂಕಸಾಲೆ ಗ್ರಾಮ ಪಂಚಾಯಿತಿ ಆವರದೊಳಗೆ ಕಾರು ಬಿದ್ದಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಕಾರು ಬಹುತೇಕ ಜಖಂಗೊಂಡಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಜಾವಳಿ, ಸುಂಕಸಾಲೆ, ಹಿರೇಬೈಲು ಮಾರ್ಗವಾಗಿ ಕಳಸ – ಹೊರನಾಡಿಗೆ ಹೋಗುವ ಮಾರ್ಗವು ಎತ್ತರದ ಪ್ರದೇಶ ಹಾಗೂ ಕಾಫಿತೋಟಗಳ ಮಧ್ಯೆ ತಿರುವುಗಳಿಂದ ಕೂಡಿದೆ. ಹಾಗಾಗಿ, ಪ್ರವಾಸಿಗರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

Department of Health and Family Welfare ಮರೆವಿನ ಕಾಯಿಲೆಯ ಬಗ್ಗೆ  ನಿರ್ಲಕ್ಷ್ಯ ಬೇಡ: ಡಾ. ಕಿರಣ್ ಎಸ್.ಕೆ

0

Department of Health and Family Welfare ಅಹಿತಕರ ಘಟನೆಯನ್ನು ಮರೆತು ನೆಮ್ಮದಿಯಿಂದ ಜೀವನ ನೆಡೆಸಲು ಮರೆವು ವರ. ಆದರೆ ಮರೆವು ಹೆಚ್ಚಾದರೆ ಅದು ಅಪಾಯಕಾರಿ ಲಕ್ಷಣ ಎಂದು ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ. ಕಿರಣ್ ಎಸ್.ಕೆ ಹೇಳಿದರು.
ಶಿವಮೊಗ್ಗ ನಗರದ ಗೋಪಾಳದ ‘ಜೀವನ ಸಂಜೆ’ ವೃದ್ಧಾಶ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೆಗ್ಗಾನ್ ಬೋಧನಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ಏರ್ಪಡಿಸಲಾಗಿದ್ದ ‘ಜಾಗತಿಕ ಆಲ್ಝೆöÊಮರ್ಸ್ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
60 ವರ್ಷದ ಬಳಿಕ ಅರಳು ಮರಳು ಸಾಮಾನ್ಯವಾದ ಒಂದು ರೋಗವಾಗಿದೆ. ಈಗಿನ ವೈದ್ಯಕೀಯ ವ್ಯವಸ್ಥೆಯಲ್ಲಿ ಮೆರೆವಿನ ಕಾಯಿಲೆಗೆ ಉತ್ತಮ ಚಿಕಿತ್ಸೆ ಮತ್ತು ಪರಿಹಾರವಿದೆ. ಅದರ ಉಪಯೋಗ ಪಡೆದುಕೊಂಡು ಜೀವನ ಶೈಲಿಯನ್ನು ಉತ್ತಮಗೊಳಿಸಿಕೊಳ್ಳಬೇಕು ಎಂದು ಹೇಳಿದರು.
Department of Health and Family Welfare ಮನೋವೈದ್ಯರಾದ ಡಾ. ಪ್ರಮೋದ್ ಹೆಚ್ ಎಲ್ ಮಾತನಾಡಿ, ಅರಳು ಮರಳು ಎಂಬುದು ಮೆದುಳಿಗೆ ಸಂಬAಧಪಟ್ಟ ಖಾಯಿಲೆಯಾಗಿದೆ. ಈ ಖಾಯಿಲೆ 60 ವರ್ಷ ಮೇಲ್ಪಟ್ಟ ವಯೋವೃದ್ಧರಲ್ಲಿ ಸಾಮಾನ್ಯವಾಗಿ ಕಂಡು ಬರುತ್ತದೆ. ಮೆದುಳಿನ ನರಗಳ ಏರುಪೇರಿನ ಸಮಸ್ಯೆಯಿಂದ ಈ ಖಾಯಿಲೆ ಪ್ರಾರಂಭವಾಗುತ್ತದೆ.
ಈ ಖಾಯಿಲೆಯೊಂದಿಗೆ ಅನೇಕ ಮಾನಸಿಕ ಸಮಸ್ಯೆಗಳು ಪ್ರಾರಂಭವಾಗುತ್ತದೆ. ಆಲ್ಝೆಮರ್ಸ್ ಅಂದರೆ ಮರೆವಿನ ತೊಂದರೆಯಿಂದ ವ್ಯಕ್ತಿಗಳು ಅವರ ದಿನನಿತ್ಯದ ಕಲಸಗಳನ್ನು ಮರೆಯುವ ಹಂತಕ್ಕೂ ಹೋಗಬಹುದಾಗಿದೆ. ಮೆದುಳಿನಲ್ಲಿ ನೀರು ತುಂಬುವುದು, ಮೆದುಳಿನಲ್ಲಿ ಗೆಡ್ಡೆ ಬೆಳೆಯುವುದು, ವಿಟಮಿನ್ ಕೊರತೆ ಮತ್ತು ಮಾದಕ ವಸ್ತುಗಳ ಅತಿಯಾದ ಬಳಕೆ ಮಾಡಿದಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತದೆ. ಆದರೆ ಈ ಮರೆವು ಕಾಯಿಲೆಯ ಬಗ್ಗೆ ಸಮಾಜದಲ್ಲಿ ಅರಿವಿನ ಕೊರತೆ ತುಂಬಾ ಇದೆ. ಮರೆವು ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದ್ದು, ಇದನ್ನು ಸುಧಾರಿಸಬಹುದಾಗಿದೆ. ಮತ್ತು ಅಂತಹ ವ್ಯಕ್ತಿಗಳಿಗೆ ಮನೆಯಲ್ಲಿ ಅವರ ದಿನಚರಿಯನ್ನು ನೆನಪಿಸುವುದು, ಹಳೆಯ ನೆನಪುಗಳನ್ನು ಮೆಲುಕು ಹಾಕಿಸುವುದು, ಅವರಿಗೆ ಧೈರ್ಯ ತುಂಬುವುದರ ಮೂಲಕ ಚಿಕಿತ್ಸೆಯನ್ನು ನೀಡಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಬಾಪೂಜಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮರೆವಿನ ಖಾಯಿಲೆಯು ಯಾವ ರೀತಿಯಾಗಿ ವೃದ್ದರನ್ನು ಕಾಡುತ್ತದೆ, ಅದು ಮೂಢನಂಬಿಕೆಯಾಗಿ ಹೇಗೆ ಬದಲಾಗುತ್ತದೆ ಹಾಗೂ ಮರೆವು ಕಾಯಿಲೆಗೆ ಸೂಕ್ತ ಚಿಕಿತ್ಸೆ ಹೇಗೆ ಪಡೆಯಬೇಕು ಎಂಬ ಮಾಹಿತಿಯನ್ನು ಒಂದು ನಾಟಕ ರೂಪದಲ್ಲಿ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಹೊಸನಗರದ ಬಟ್ಟೆಮಲ್ಲಪ್ಪದ ಮಲ್ಲಿಕಾರ್ಜುನ ಕಲಾ ತಂಡದ ಕಲಾವಿದರು ‘ಮರೆವು’ ಕಾಯಿಲೆ ಬಗ್ಗೆ ಜೋಗಿಪದ ಹೇಳುವ ಮೂಲಕ ಅರಿವು ಮೂಡಿಸಿದರು.
ಈ ಕಾರ್ಯಕ್ರಮವನ್ನು ಜೀವನ ಸಂಜೆ ವೃದ್ಧಾಶ್ರಮದ ಅಧ್ಯಕ್ಷರಾದ ಹಾಲಪ್ಪ ಉದ್ಘಾಟಿಸಿದರು. ಬಾಪೂಜಿ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರಿಮತಿ ರಾಯ್ಚಲ್ ಶರಣನ್, ಶಿಕ್ಷರರಾದ ಸೌಮ್ಯ, ವೃದ್ಧಾಶ್ರಮದ ವೃದ್ದರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಯವರು ಹಾಜರಿದ್ದರು.

MESCOM ಸೆ.24ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

0

MESCOM ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, MESCOM ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Department of Women and Child Development ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅವಧಿ ವಿಸ್ತರಣೆ

0

Department of Women and Child Development ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2024-25ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.21 ರಿಂದ ಅ.19ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

Department of Women and Child Development ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-295514 ಅಥವಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕರಿಗಳ ಕಚೇರಿಗಳನ್ನು ಸಂಪರ್ಕಿಸುವುದು.

Rotary Shivamogga ರೋಟರಿ ಸಂಸ್ಥೆಯ ಮುಖ್ಯ ಉದ್ದೇಶಗಳಲ್ಲಿ ಪರಿಸರ ಕಾಳಜಿಯೂ ಒಂದು :ರೋಟರಿ. ಸಿ.ಎ.ದೇವಾನಂದ್

0

Rotary Shivamogga ರೋಟರಿ ಸಂಸ್ಥೆಯ ಮುಖ್ಯ ಉದ್ದೇಶಗಳಲ್ಲಿ ಪರಿಸರ ಕಾಳಜಿಯೂ ಒಂದು. ಇದರೊಂದಿಗೆ ಸಂಪೂರ್ಣ ಸಹಕಾರದೊಂದಿಗೆ ತೊಡಗಿಸಿಕೊಳ್ಳುವುದಾಗಿ ರೋಟರಿ ಜಿಲ್ಲೆ – 3182 ರ ಗವರ್ನರ್ ರೋ. ಸಿ.ಎ.ದೇವಾನಂದ್ ತಿಳಿಸಿದರು.

ನಗರದ ಗಾಡಿಕೊಪ್ಪ ಪುರದಾಳು ರಸ್ತೆಯಲ್ಲಿರುವ ತುಂಗೆ ಮೇಲ್ದಂಡೆ ಕಾಲುವೆ ಪಕ್ಕದಲ್ಲಿರುವ ರೋಟರಿ ಬಯೋ ಡೈವರ್ಸಿಟಿ ಎರಡನೇ ಹಂತದ ಪಾರ್ಕ್ ಯನ್ನು ಶನಿವಾರ ಉದ್ಘಾಟಿಸಿ, ಕಾರ್ಯಕ್ರಮದ ಪೂರ್ವಭಾವಿಯಾಗಿ ಸಸಿ ನೆಡುವುದರ ಮೂಲಕ ಚಾಲನೆ ನೀಡಿ, ಮಾತನಾಡಿದ ಅವರು, ರೋ. ಡಾ. ಪಿ.ನಾರಾಯಣ್ ಅವರು ಈ ಪ್ರಾಜೆಕ್ಟ್‍ನ ಮುಂದುವರಿಸುವ ಬಗ್ಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡುವುದಾಗಿ ರೋಟರಿ ಸಂಸ್ಥೆಗಳ ಪರವಾಗಿ ಭರವಸೆ ನೀಡಿದರು.

ರೋಟರಿ ಶಿವಮೊಗ್ಗ ನಾರ್ಥ್‍ನ ರೋ. ಎಸ್.ಉಮೇಶ್ ಹಾಗೂ ರೋ. ಆನಂದ್ ಮೂರ್ತಿಯವರ ಕೊಡುಗೆಯನ್ನು ಶ್ಲಾಘಿಸಿದರು. ಪ್ರಾಸ್ತಾವಿಕ ಮಾತನಾಡಿದ ರೋಟರಿ ಬಯೋಡೈವರ್ಸಿಟಿ ಅಧ್ಯಕ್ಷ ರೋ. ಎ.ಎಸ್.ಚಂದ್ರಶೇಖರ್, ರೋಟರಿ ಅಂತರಾಷ್ಟ್ರೀಯ ನಿಧಿಯಿಂದ 60000 ಅಮೇರಿಕನ್ ಡಾಲರ್ ನಿಧಿ ಮಂಜೂರಾತಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮೊಡೆಸ್ಟಾ ಕ್ಯಾಲಿಫೋರ್ನಿಯ ಇವರ ಸಹಯೋಗ ಪ್ರಾಸ್ತಾಪಿಸಿದರು. ಈ ಯೋಜನೆ ರಟರಿ ಕ್ಲಬ್ ಶಿವಮೊಗ್ಗ ಉತ್ತರ ಇವರ ಸಹಯೋಗದಲ್ಲಿ ಶಿವಮೊಗ್ಗದ ಎಲ್ಲಾ ಇತರ 7 ರೋಟರಿ ಕ್ಲಬ್‍ಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಸಹಕಾರ ಕೋರಿದರು.

Rotary Shivamogga
ಈ ಸಂದರ್ಭದಲ್ಲಿ ಮಾತನಾಡಿದ ಎಲ್ಲಾ ಪ್ರತಿನಿಧಿಗಳು, ರೋಟರಿ ಕಾರ್ಯವನ್ನು ಶ್ಲಾಘಿಸಿ, ಸರ್ಕಾರದ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ನಿಟ್ಟಿನಲ್ಲಿ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.

ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿ ನಟರಾಜ ಪಾಟೀಲ್ ಭಾಗವಹಿಸಿ, ಇಲಾಖೆಯ ಪರವಾಗಿ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಎಂ ಎಲ್ ಸಿ ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್, ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಾಜಿ ಎಂ ಎಲ್ ಸಿ, ಉದ್ಯಮಿ ರುದ್ರೇಗೌಡರು, ಮಾಜಿ ಜಿಲ್ಲಾ ಗವರ್ನರ್‍ಗಳಾದ ರೋ. ಜಿ.ಎನ್.ಪ್ರಕಾಶ್ ಹಾಗೂ ರೋ.ಹೆಚ್.ಸಿ.ರವಿ ಉಪಸ್ಥಿತರಿದ್ದರು. ರೋಟರಿ ಅಸಿಸ್ಟೆಂಟ್ ಗವರ್ನರ್ ರೋ. ಎಸ್.ಆರ್.ನಾಗರಾಜ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಎಲ್ಲಾ ಕ್ಲಬ್‍ನ ಸದಸ್ಯರೂ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು. ರೋ.ವಿಜಯಕುಮಾರ್, ರೋ. ರವೀಂದ್ರನಾಥ್ ಐತಾಳ್ ಅವರು ಕಾರ್ಯಕ್ರಮ ಆಯೋಜನೆಯಲ್ಲಿ ಸಹಕರಿಸಿದರು.

Madhu Bangarappa ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಹಳೆ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ

0

Madhu Bangarappa ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಭವನದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಅಡಿಯಲ್ಲಿ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಅಭಿವೃದ್ಧಿಹೊಂದಿದ ಸರ್ಕಾರಿ ಶಾಲೆಗಳ ವಿಡಿಯೋವನ್ನು ರಾಜ್ಯದಲ್ಲಿ ಹಳೇ ವಿದ್ಯಾರ್ಥಿಗಳಿಂದ ರಚಿತವಾಗಿರುವ ಸುಮಾರು 33 ಸಾವಿರ ವಾಟ್ಸಪ್ ಗ್ರೂಪ್ ಗಳಿಗೆ ಶೇರ್ ಮಾಡಿದರು.

♦️ರಾಷ್ಟ್ರಕವಿ ಶ್ರೀ ಡಾ. ಜಿ.ಎಸ್ ಶಿವರುದ್ರಪ್ಪ ಅವರು ವಿದ್ಯಾಭ್ಯಾಸ ಮಾಡಿದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರೌಢಶಾಲೆ, ಪಡುವಣಗೆರೆ.

♦️ಚಿಕ್ಕಮಗಳೂರು ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಯಲಗುಡಿಗೆ.

“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಒಂದು ಉತ್ತಮ ಯೋಜನೆಯಾಗಿದ್ದು ತಾವು ಕಲಿತ ಶಾಲೆಗೆ ತಮ್ಮ ಕೈಲಾದ ಕೊಡುಗೆ ನೀಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸುವುದಾಗಿದೆ. ಈ ಯೋಜನೆಯಿಂದಾಗಿ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ಸಹಕಾರವಾಗುತ್ತಿದೆ.

Madhu Bangarappa ಸರ್ಕಾರದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು, ಸಾಮಾಜಿಕ ಕಳಕಳಿ ಹೊಂದಿರುವವರು ಹಾಗೂ ದಾನಿಗಳ ಸಹಕಾರದಿಂದ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ಈ ಕಾರ್ಯಗಳು ಎಲ್ಲರಲ್ಲೂ ಪ್ರೇರಣೆಯಾದರೆ ನಮ್ಮ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು. ಈ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ರಮೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Department of Labor ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಅರಿವು ಕಾರ್ಯಗಾರ

0

Department of Labor ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗ ನೆಮ್ಮದಿಯಾಗಿರಲೆಂದು ಸರ್ಕಾರ ಅವರಿಗಾಗಿ ಅನೇಕ ಯೋಜನೆಗಳು, ಸೌಲಭ್ಯಗಳನ್ನು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಹೇಳಿದರು.

ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಕಾರ್ಮಿಕ ಇಲಾಖೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಲಭ್ಯವಿರುವ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಮಾಲೀಕರು ಮತ್ತು ಕಾರ್ಮಿಕ ವರ್ಗಕ್ಕೆ ಶುಕ್ರವಾರ ಏರ್ಪಡಿಸಲಾಗಿದ್ದ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಎಂಬ ದೊಡ್ಡ ಯಂತ್ರ ಕಾರ್ಮಿಕರೆಂಬ ಇನ್ನೊಂದು ಯಂತ್ರದಿಂದ ಸುಮಗವಾಗಿ ನಡೆದುಕೊಂಡು ಹೋಗುತ್ತಿದೆ. ಒಂದು ಪಕ್ಷ ಕಾರ್ಮಿಕ ಯಂತ್ರ ಸರಿಯಾಗಿ ಕಾರ್ಯ ನಿರ್ವಹಿಸದೇ ಹೋದರೆ ಅನೇಕ ರೀತಿಯಲ್ಲಿ ತೊಂದರೆ ಎದುರಾಗುತ್ತದೆ. ಆದ್ದರಿಂದ ಕಾರ್ಮಿಕರು ಪ್ರೀತಿ ಮತ್ತು ಶಿಸ್ತಿನಿಂದ ತಮ್ಮ ಕೆಲಸದಲ್ಲಿ ತೊಡಗಿ ಸಮಾಜ ಸುಸ್ಥಿತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಅನುಕೂಲ ಮಾಡಿಕೊಡಬೇಕು.

Department of Labor ಇಂತಹ ಕಾರ್ಮಿಕ ವರ್ಗದವರ ಜೀವನ ಮಟ್ಟ ಉತ್ತಮವಾಗಿರಲೆಂದು ಸರ್ಕಾರ ಹಲವಾರು ಯೋಜನೆಗಳನ್ನು ಅವರಿಗಾಗಿ ನೀಡಿದೆ. ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ಮಾಡಿಕೊಟ್ಟು, ಕಾರ್ಮಿಕ ಇಲಾಖೆ ಅವರಿಗೆ ಸಹಕಾರ ನೀಡಲು ಸಜ್ಜಾಗಿದೆ. ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ವಿವರ, ಕೆಲಸದ ವಿವರಗಳನ್ನು ನೀಡಿ ಯೋಜನೆಗಳ ಫಲ ಪಡೆಯಬಹುದು.

ಕಾರ್ಮಿಕರಿಗೆ ಅನುಕೂಲ ಮಾಡಿಕೊಡಲು ಕಾರ್ಮಿಕ ಇಲಾಖೆ ಇದೆ. ವಿವಿಧ ಸೌಲಭ್ಯಗಳು, ಅವುಗಳನ್ನು ಪಡೆಯುವ ಕುರಿತು ಅರಿವು ಮೂಡಿಸಲು ಕೈಪಿಡಿ, ವೆಬ್‌ಸೈಟ್‌ಗಳು ಲಭ್ಯವಿದೆ. ಹಾಗೂ ಕಾಲ ಕಾಲಕ್ಕೆ ಮಾಹಿತಿ ನೀಡುವ ಕಾರ್ಯಾಗಾರಗಳು ನಡೆಯುತ್ತಿದ್ದು ಕಾರ್ಮಿಕರು ಇಂತಹ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಕುಟುಂಬದ ಜವಾಬ್ದಾರಿ ವ್ಯಕ್ತಿಗಳಾಗಿರುವ ನೀವು ಜಾಗೃತರಾಗಿ ಇತರರಿಗೂ ತಿಳಿಸಬೇಕು. ತಮಗೆ ಅನ್ವಯವಾಗುವ ಯೋಜನೆಗಳಿಗೆ ಮಾತ್ರ ನೋಂದಣಿ ಮಾಡಿಸಿಕೊಳ್ಳಬೇಕು. ಸುಳ್ಳು ನೋಂದಣಿಗಳು ಕಂಡು ಬಂದಲ್ಲಿ ಇಲಾಖೆಯ ಗಮನಕ್ಕೆ ತರಬೇಕೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ ಮಾತನಾಡಿ, ಇಂದಿನ ಕಾರ್ಯಾಗಾರದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ಕಾರ್ಮಿಕ ಇಲಾಖೆ ಸೇರಿದಂತೆ ಸರ್ಕಾರದಿಂದ ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳು, ಕಾನೂನುಗಳ ಕುರಿತು ಸವಿವರವಾಗಿ ಮಾಹಿತಿ ನೀಡಲಿದ್ದಾರೆ. ಎಲ್ಲ ಕಾರ್ಮಿಕರು ಇದರ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ 1ನೇ ವೃತದ ಕಾರ್ಮಿಕ ನಿರೀಕ್ಷಕ ಎಂ.ಕೃಷ್ಣ, ಪಿಪಿಟಿ ಪ್ರದರ್ಶನ ಮೂಲಕ ಮಾಹಿತಿ ನೀಡಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯನ್ನು ಮಾಡಿಕೊಳ್ಳಲು 18 ರಿಂದ 60 ವರ್ಷದೊ¼ಗಿನ ವಯೋಮಿತಿಯನ್ನು ಹೊಂದಿರಬೇಕು. ನೋಂದಣಿ ಪೂರ್ವದ 12 ತಿಂಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳು ಕೆಲಸವನ್ನು ಮಾಡಿರಬೇಕು. ಉದ್ಯೋಗ ದೃಢೀಕರಣ ಪತ್ರ, ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಅರ್ಜಿದಾರರ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆಯೊಂದಿಗೆ ಹಿರಿಯ ಕಾರ್ಮಿಕ ನಿರೀಕ್ಷಕರು ಅಥಾವ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಣಿಯನ್ನು ಮಾಡಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಶಿವಮೊಗ್ಗ ಕಾರ್ಮಿಕ ಇಲಾಖೆ, ಕಾರ್ಮಿಕ ನಿರೀಕ್ಷಕರು ಹಾಗೂ ಸಹಾಯವಾಣಿ 155214 ಸಂಪರ್ಕಿಸಬಹುದು ಎಂದು ತಿಳಿಸಿದರು.

ಹಾಗೂ ಬಾಲ ಕಾರ್ಮಿಕ ಕಾಯ್ದೆ ಸೇರಿದಂತೆ ಕಾರ್ಮಿಕರಿಗೆ ದೊರೆಯುವ ಸೌಲಭ್ಯ ಮತ್ತು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.

ಇಎಸ್‌ಐ ಆಸ್ಪತ್ರೆಯ ಡಾ.ಸಂಜನಾ ಕಾರ್ಮಿಕರಿಗೆ ಇಎಸ್‌ಐ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳು, ಸೌಲಭ್ಯಗಳು, ಕಾನೂನುಗಳ ಮಾಹಿತಿ ಒದಗಿಸುವ ಮಾಹಿತಿ ಕಣಜ ಮಳಿಗೆಯನ್ನು ಉದ್ಘಾಟಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ ನಿರೂಪಿಸಿದರು.

1ನೇ ವೃತ್ತದ ಕಾರ್ಮಿಕ ನಿರೀಕ್ಷಕಿ ಸುಪ್ರಿತ ಜೆ.ವಿ, ಶಿಕಾರಿಪುರ ವೃತ್ತದ ಕಾರ್ಮಿಕ ನಿರೀಕ್ಷಕ ಫಕೀರಪ್ಪ ಗೋಡಿ, ಭದ್ರಾವತಿ 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಕ್ಷಿತ್ ಬಿ.ಎಂ, ಸಾಗರ ವೃತ್ತದ ಕಾರ್ಮಿಕ ನಿರೀಕ್ಷಕಿ ಶಿಲ್ಪ.ಬಿ, ಕಾರ್ಮಿಕ ಸಂಘದ, ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಅಸಂಘಟಿತ ಕಾರ್ಮಿಕರು ಹಾಜರಿದ್ದರು.