National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ.
ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಡಿ ಎಂ.ಬಿ.ಬಿ.ಎಸ್. ವೈದ್ಯರ 8 ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ 2 ವರ್ಷ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರಬೇಕು.
ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಎಂ.ಡಿ.ಇಂಟರ್ನಲ್ ಮೆಡಿಸಿನ್ ತಜ್ಞ ವೈದ್ಯರ 1 ಹುದ್ದೆಗೆ ಎಂಬಿಬಿಎಸ್ –ಎಂಡಿ (ಇಂಟರ್ನಲ್ ಮೆಡಿಸಿನ್) ವಿದ್ಯಾರ್ಹತೆಯುಳ್ಳ 2 ವರ್ಷ ಸ್ಪೆಷಲಿಸ್ಟ್ ಹುದ್ದೆಯಲ್ಲಿ ಅನುಭವ ಹೊಂದಿರಬೇಕು.
ಸಿಪಿಹೆಚ್‌ಸಿ-ಯುಹೆಚ್‌ಸಿ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರ 1 ಹುದ್ದೆಗೆ ಬಿಡಿಎಸ್/ ಬಿಎಎಂಎಸ್/ ಬಿ.ಯು.ಎಂ.ಎಸ್/ ಬಿಹೆಚ್‌ಎಂಎಸ್/ ಬಿವೈಎನ್‌ಎಸ್/ ಎಂಎಸ್‌ಸಿ ನರ್ಸಿಂಗ್/ಎAಎಸ್‌ಸಿ ಲೈಫ್‌ಸೈನ್ಸ್/ಬಿಎಸ್‌ಸಿ ನರ್ಸಿಂಗ್ ಎಲ್ಲಾ ಪದವಿಯೊಂದಿಗೆ ಎಂಪಿಹೆಚ್ ಅಥವಾ ಎಂಬಿಎ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು.
ಎನ್‌ಪಿಪಿಸಿ ಕಾರ್ಯಕ್ರಮದಡಿ ಶುಶ್ರೂಷಕಿ 1 ಹುದ್ದೆಗೆ ಜಿಎನ್‌ಎಂ/ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ 1 ವರ್ಷ ಸಾರ್ವಜನಿಕ ಹಾಗೂ ಸರ್ಕಾರದ ಆರೋಗ್ಯ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರಬೇಕು.
ಐ.ಡಿ.ಎಸ್.ಪಿ. ಕಾರ್ಯಕ್ರಮಡಿ ಜಿಲ್ಲಾ ಎಪಿಡೆಮಿಯಾಲಜಿಸ್ಟ್ 1 ಹುದ್ದೆಗೆ ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಪದವಿ/ ಡಿಪ್ಲೊಮಾ ಇನ್ ಪ್ರೆವೆಂಟಿಸ್ ಆಂಡ್ ಸೋಶಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್ ಅಥವಾ ಎಪಿಡೆಮಿಯಾಲಜಿ ಅಥವಾ ಯಾವುದೇ ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಎಂ.ಪಿ.ಹೆಚ್ ಜೊತೆಗೆ ಕನಿಷ್ಠ ಒಂದು ವರ್ಷ ಪಬ್ಲಿಕ್ ಹೆಲ್ತ್ನಲ್ಲಿ ಅನುಭವ ಜೊತೆಗೆ ಎಂ.ಎಸ್.ಸಿ. ಇನ್ ಲೈಫ್‌ಸೈನ್ಸ್ ಜೊತೆಗೆ 2 ವರ್ಷ ಎಂಪಿಹೆಚ್‌ನಲ್ಲಿ ಅನುಭವ ಹೊಂದಿರಬೇಕು.
ಈ ನೇಮಕಾತಿಯು ಎನ್‌ಹೆಚ್‌ಎಂ ನಿಯಮಾವಳಿ, ಷರತ್ತು ಮತ್ತು ನಿಬಂಧನೆಗಳಿಗೆ ಮತ್ತು ಆಯ್ಕೆ ಸಮಿತಿಯ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.
National Health Campaign ಆಸಕ್ತರು ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಸೆ. 25 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ.ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರತಿ ತಿಂಗಳು 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ.
National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Mathura Paradise ಕುಟುಂಬ ಜಿವನದ ಜೊತೆ ಮಹಿಳೆ ತನ್ನನ್ನು ವೃತ್ತಿ ಪ್ರವೃತ್ತಿಯಲ್ಲಿ ತೊಡಗಿ ಯಶ ಸಾಧಿಸಬೇಕು- ಡಾ.ಶುಭ್ರತಾ
Mathura Paradise ಮಹಿಳೆಯರು ಇಷ್ಟವಿರುವ ಉದ್ಯಮ ಕ್ಷೇತ್ರದಲ್ಲಿ ನಿರಂತರ ಪರಿಶ್ರಮ ವಹಿಸಿ ಯಶಸ್ಸು ಸಾಧಿಸಬೇಕು ಎಂದು ವೈದ್ಯೆ ಡಾ. ಶುಭ್ರತಾ ಹೇಳಿದರು.
ಸ್ವೇದ ಮಹಿಳಾ ಉದ್ಯಮಿಗಳ ಸಂಘದಿಂದ ನಗರದ ಮಥುರಾ ಪ್ಯಾರಡೈಸ್‌ನಲ್ಲಿ ಮಹಿಳಾ ಉದ್ಯಮಿಗಳಿಗಾಗಿ ಆಯೋಜಿಸಿದ್ದ “ವೃತ್ತಿ ಪ್ರವೃತ್ತಿ ಹಾಗೂ ಜೀವನ ಸಮತೋಲನ”ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಹಿಳೆ ದಿನನಿತ್ಯದ ಸಾಂಸಾರಿಕ ಜೀವನದಲ್ಲಿ ತನ್ನ ಗುರುತೇ ಕಳೆದುಹೋಗುವಂತೆ ಮಗ್ನಳಾಗಿದ್ದಾಳೆ. ಜೀವನ ಒಮ್ಮೆ ತಿರುಗಿ ನೋಡಿದಾಗ ಆಕೆಗೆ ಅದರ ಅರಿವಾಗುತ್ತದೆ. ಸಾಂಸಾರಿಕ ಜೀವನದ ಜೊತೆ ಜೊತೆಗೆ ನಿಮ್ಮ ವೃತ್ತಿ ಪ್ರವೃತ್ತಿಯಲ್ಲಿ ನಿಮ್ಮನ್ನು ತೊಡಗಿಸಿಕೊಂಡು ಯಶಸ್ಸು ಸಾಧಿಸಬೇಕು. ನಿಮ್ಮ ವ್ಯಕ್ತಿತ್ವ ಗುರುತು ಕಳೆದು ಹೋಗದಂತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಉದ್ಯಮಿಯಾದ ಮಹಿಳೆ ತನ್ನ ಮನೆ, ವೃತ್ತಿ ಹಾಗೂ ಪ್ರವೃತ್ತಿ ಎಲ್ಲವನ್ನೂ ನಿಭಾಯಿಸಿಕೊಂಡು ಜೀವನದ ಸಮತೋಲನ ಕಾಯ್ದುಕೊಳ್ಳಲು ಇಂತಹ ತರಬೇತಿ ಕಾರ್ಯಕ್ರಮಗಳು ಅತ್ಯಂತ ಅವಶ್ಯಕ ಎಂದರು.
Mathura Paradise ನಮ್ಮ ಶಕ್ತಿಗಳ ದೌರ್ಬಲ್ಯಗಳ ಅರಿವು, ಭಾವನೆಗಳ ನಿರ್ವಹಣೆ, ಇತರರ ಬಗ್ಗೆ ಸಹಾನುಭೂತಿ, ಸೃಜನಾತ್ಮಕ ವಿಮರ್ಶಾತ್ಮಕ ಚಿಂತನೆಗಳ ಬೆಳವಣಿಗೆ, ಮನೆಯವರೊಡನೆ ವೃತ್ತಿಯಲ್ಲಿ ಸಮಾಜದಲ್ಲಿ ಪರಿಣಾಮಕಾರಿ ಸಂವಹನ, ಅಂತರ ವ್ಯಕ್ತಿಯ ಕೌಶಲ್ಯಗಳು ನೀಡುವ ಇಂತಹ ತರಬೇತಿಗಳು ಮಹಿಳಾ ಉದ್ಯಮಿಗಳನ್ನು ಉತ್ತಮ ಶಿಲ್ಪಗಳನ್ನಾಗಿ ರೂಪಿಸುತ್ತವೆ ಎಂದು ತಿಳಿಸಿದರು.
ಉಪನ್ಯಾಸಕಿ, ಸಂಪನ್ಮೂಲ ವ್ಯಕ್ತಿ ಪುಷ್ಪಲತ ಹೆಚ್ .ಎಸ್ ಮಾತನಾಡಿ, ಉದ್ಯಮದಲ್ಲಿ ಯಶಸ್ಸು ಸಾಧಿಸಲು ಆರೋಗ್ಯ ಹಾಗೂ ಸಮಯದ ಸಮರ್ಪಕ ನಿರ್ವಹಣೆ ಅತ್ಯಂತ ಮುಖ್ಯವಾಗಿದೆ. ಹೆಣ್ಣಿನ ಉತ್ತಮ ಆರೋಗ್ಯವು ಉತ್ಸಾಹ ಮತ್ತು ಕರ್ತವ್ಯ ನಿಷ್ಠೆಯ ಮೆಟ್ಟಿಲುಗಳು. ಸಮಯವನ್ನು ಪರಿಣಾಮಕಾರಿಯಾಗಿ ಬಳಸಿದಾಗ ಕೆಲಸಗಳಲ್ಲಿ ಸಮತೋಲನ ಮತ್ತು ಸೃಜನಶೀಲತೆ ಮೇಲೆ ಒತ್ತು ನೀಡಬಹುದು. ಎಂದು ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಕಾರ್ಯದರ್ಶಿ ಶಿಲ್ಪ ಗೋಪಿನಾಥ್, ಖಜಾಂಚಿ ಸಹನಾ ಚೇತನ್, ತರಬೇತುದಾರ ಭಾರತಿ, ಕಿರಣ್ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲೆಯ ವಿವಿಧಡೆ ಗ್ರಾಮಾಂತರ ಪ್ರದೇಶದಿಂದ ಮಹಿಳಾ ಉದ್ಯಮಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು
MESCOM ಸೆ.21 ರಂದು ಪಿಳ್ಳಂಗಿರಿ & ಜಾವಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ
MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ MESCOM ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
CM Siddaramaiah ನಾವು-ನೀವು ಜೊತೆಗೂಡಿ ಡ್ರಗ್ಸ್ ಮುಕ್ತ- ಸ್ವಸ್ಥ ಕರ್ನಾಟಕ ನಿರ್ಮಿಸೋಣ- ಸಿದ್ಧರಾಮಯ್ಯ
CM Siddaramaiah ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ.
ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು.
CM Siddaramaiah ನಾವು – ನೀವು ಜೊತೆಗೂಡಿ ಡ್ರಗ್ಸ್ ಮುಕ್ತ – ಸ್ವಸ್ಥ ಕರ್ನಾಟಕ ನಿರ್ಮಿಸೋಣ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಯಲ್ಲಿ ಕಳಕಳಿಯ ಮನವಿಮಾಡಿದ್ದಾರೆ.
Gurukula English Medium School ಕ್ರೀಡೆ ಮಾನಸಿಕ ಬುದ್ಧಿಮಟ್ಟವನ್ನ ಹೆಚ್ಚಿಸುವಲ್ಲಿ ಸಹಕಾರಿ- ರಮೇಶ್
Gurukula English Medium School ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಹಾಗಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಅಭಿಪ್ರಾಯಪಟ್ಟರು.
ಅವರು ನೆಹರೂ ಕ್ರೀಡಾಂಗಣದಲ್ಲಿ ಎರಡು ದಿನ ನಡೆಯಲಿರುವ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಹಾಗೂ ಗುರುಕುಲ ಆಂಗ್ಲ ಮಾಧ್ಯಮ ಶಾಲೆ, ನವಲೆ,ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಪ್ರಾಥಮಿಕ ಶಾಲೆಗಳ ‘ಎ’ ಮತ್ತು ‘ಬಿ’ವಲಯಗಳ ವಲಯ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಶಿವಮೊಗ್ಗ ತಾಲ್ಲೂಕಿನ ವಲಯ ಮಟ್ಟದ ಕ್ರೀಡಾ ಕೂಟದ ಧ್ವಜಾರೋಣ ನೆರವೇರಿಸಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ, ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುಕುಲ ಶಾಲೆಯ ಕಾರ್ಯದರ್ಶಿ ಶಿವರಾಜ್ ಜಿ. ಟಿ.ಕ್ರೀಡಾಕೂಟಕ್ಕೆ ಚಾಲನೆ ನೀಡಿ,ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ,ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷಎಸ್. ವಿ.ಶಾಸ್ತ್ರಿ ಮಾತನಾಡುತ್ತಾ, ಪ್ರಪಂಚದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ, ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ವಿಷಾದನೀಯ ಎಂದರು.
Gurukula English Medium School ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳು ನೀವು, ಈಗಿನಿಂದಲೇ ಸತತ ಅಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದರು.
ಕಾರ್ಯ ಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ. ಹೆಚ್. ನಿರಂಜನ್ ಮೂರ್ತಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್, ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ ಕಾರ್ಯದರ್ಶಿ ಕೆ.ಜಿ.ಮಠಪತಿ, ಹಿರಿಯ ಶಿಕ್ಷಕ ಪರಮೇಶ್ವರಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Kannada Sahitya Parishath ಸಾಗರ ತಾಲ್ಲೂಕು ಕಸಾಪ ವತಿಯಿಂದ ಕಗ್ಗ ವಾಚನ ಸ್ಪರ್ಧೆಗೆ ಆಸಕ್ತರಿಂದ ಹೆಸರು ನೋಂದಾವಣೆಗೆ ಆಹ್ವಾನ
Kannada Sahitya Parishath ಸಾಗರದ ಶ್ರೀಮತಿ ಸರಸ್ವತಿ ಹಾಗೂ ಮೇಜರ್ ನಾಗರಾಜ್ ಕುಟುಂಬ ಇವರು ನೀಡಿದ ಡಿ.ವಿ.ಜಿ ಕಗ್ಗ ದತ್ತಿ ಕಾರ್ಯಕ್ರಮ ನಿಮಿತ್ತ ತಾಲೂಕಿನ ಪ್ರಾಥಮಿಕ (5ರಿಂದ7 ನೇ ತರಗತಿ) ಹಾಗೂ ಪ್ರೌಢಶಾಲಾ (8 ರಿಂದ10 ನೇ ತರಗತಿ) ವಿದ್ಯಾರ್ಥಿಗಳಿಗೆ ಡಿ.ವಿ.ಜಿ ಯವರ ಕಗ್ಗ ವಾಚನ ಹಾಗೂ ಅರ್ಥ ವಿವರಣೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಶಾಲೆಯವರು ವಿದ್ಯಾರ್ಥಿಗಳ ಹೆಸರು ತರಗತಿ ಮೊ.ನಂ ಸಹಿತ ಸೆಪ್ಟೆಂಬರ್ 28ರೊಳಗೆ ನೋಂದಾಯಿಸಿಕೊಳ್ಳುವುದು.
Kannada Sahitya Parishath ಸೂಚನೆ-ಕಗ್ಗದ ಯಾವುದಾದರೂ 2 ಪದ್ಯ ವಾಚನ ಹಾಗೂ ಅರ್ಥ ವಿವರಣೆ ಮಾತ್ರ
ಗೂಗಲ್ ಶೀಟಲ್ಲಿ ಭರ್ತಿ ಮಾಡಿ
ಹೆಚ್ಚಿನ ಮಾಹಿತಿಗಾಗಿ
ವಿ.ಟಿ.ಸ್ವಾಮಿ
9880871716
ಜಿ.ನಾಗೇಶ್
9880121758
ನಾರಾಯಣ ಮೂರ್ತಿ ಕಾನಗೋಡು
9481255902
ಲೋಕೇಶ್ ಕುಮಾರ್
6361556719
ಮೇಜರ್ ನಾಗರಾಜ್
9448767283
Shivamogga Institute of Medical Sciences ವಾಕ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಕುಸಿದು ಸಾವು
Shivamogga Institute of Medical Sciences ಶರಾವತಿ ನಗರದ ನಿವಾಸಿ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಪೃಥ್ವಿರಾಜ್ (20) ಬುಧವಾರ ನಿಧನ ಹೊಂದಿದರು.
ಪ್ರವಾಸಿ ಮಂದಿರದ ಬಳಿ ಸಂಜೆ ವೇಳೆ ವಾಕ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಗಮನಿಸಿದ ಮೋಹನ್ ಎಂಬುವವರು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಪೃಥ್ವಿರಾಜ್ ನಿಧನರಾಗಿದ್ದಾರೆ.
ಪೃಥ್ವಿರಾಜ್ ಸಿಮ್ಸ್ ಕಾಲೇಜಿನಲ್ಲಿ ಎರಡನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು. ಪ್ರತಿ ದಿನ ಪ್ರವಾಸಿ ಮಂದಿರದ ಬಳಿ ವಾಕ್ ಮಾಡುತ್ತಿದ್ದರು. ಇವರು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ, ಕಾಮಧೇನು ಔಷಧ ಸಗಟು ವ್ಯಾಪಾರಿ ಮುತ್ತಣ್ಣ ಅವರ ಪುತ್ರ. ಪೃಥ್ವಿ ಅವರ ಸಹೋದರ ಪಾರ್ಥ ದೆಹಲಿಯಲ್ಲಿದ್ದಾರೆ.
ಪೃಥ್ವಿರಾಜ್ ಅವರ ನಿಧನಕ್ಕೆ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂತಾಪ ಸೂಚಿಸಿದೆ. ಮೃತರ ತಂದೆ ಮುತ್ತಣ್ಣ ಅವರು ಔಷಧಿ ವ್ಯಾಪಾರಿಗಳ ಸಂಘದ ಸದಸ್ಯ, ರೋಟರಿ ಸೆಂಟ್ರಲ್ ಕ್ಲಬ್ ಸದಸ್ಯರಾಗಿ ಹಲವಾರು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ನ್ಯಾಮತಿಯವರಾಗಿದ್ದು, ಶಿವಮೊಗ್ಗದ ಶರಾವತಿ ನಗರದ ಎಂಟನೇ ಕ್ರಾಸ್‌ನಲ್ಲಿ ವಾಸ ಮಾಡುತ್ತಿದ್ದಾರೆ.
Shivamogga Institute of Medical Sciences ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್, ಕಾರ್ಯದರ್ಶಿ ಈಶ್ವರ್, ರೋಟರಿ ವಲಯ 11ರ ಸಹಾಯಕ ಗವರ್ನರ್ ಸುರೇಶ್, ರೋಟರಿ ವಿಜಯಕುಮಾರ್, ಜಿಲ್ಲಾ ಗವರ್ನರ್ ದೇವಾನಂದ್, ಪ್ರಕಾಶ್, ರವಿ ಕೋಟೋಜಿ, ಚುಡಾಮಣಿ ಪವಾರ್, ಬಸವರಾಜ್, ಜಯಶೀಲ ಶೆಟ್ಟಿ, ಸಂತೋಷ್, ಗಣೇಶ್ ಎಂ.ಅಂಗಡಿ, ರಮೇಶ್, ಗೀತಾ ಜಗದೀಶ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯರು ಸಂತಾಪ ಸೂಚಿಸಿದ್ದಾರೆ.
Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ ಸಿಬ್ಬಂದಿಯಿಂದ ಸಸ್ಯಾರೋಪಣ & ಸ್ವಚ್ಛತಾ ಸೇವಾ ಕಾರ್ಯಕ್ರಮ
Akashvani Bhadravati “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ, ಮತ್ತು ಸ್ವಚ್ಛತಾ ಸೇವಾ ಪಾಕ್ಷೀಕ ಅಭಿಯಾನದಡಿಯಲ್ಲಿ ಸ್ವಚ್ಛತೆಯ ಕಾರ್ಯಕ್ರಮವನ್ನು ಆಕಾಶವಾಣಿ ಭದ್ರಾವತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಿವಮೊಗ್ಗ ಕ್ಷೇತ್ರದ ಮಾನ್ಯ ಲೋಕಸಭಾಸದಸ್ಯರಾದ ಶ್ರೀ. ಬಿ.ವೈ.ರಾಘವೇಂದ್ರ ರವರು ಈ ಕಾರ್ಯುಕ್ರಮವನ್ನು ಉದ್ಘಾಟಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನದ ಅಂಗವಾಗಿ ಆಕಾಶವಾಣಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನೆರವೇರಿಸಿದರು.
Akashvani Bhadravati ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಮಾನ್ಯ ಕರ್ನಾಟಕ ವಿಧಾನಸಭಾ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್.ಆರ್.ಭಟ್, ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಬಿ.ಎಸ್.ನಟೇಶ್ ರಾಮನ್, ಕಾರ್ಯಕ್ರಮ ನಿರ್ವಾಹಕರಾದ ಶ್ರೀ.ಎಸ್.ಎಲ್.ರಮೇಶ್ ಪ್ರಸಾದ್ ಮತ್ತು ಆಕಾಶವಾಣಿ ಭದ್ರಾವತಿ ಕೇಂದ್ರದ ಸಿಬ್ಬಂಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Union Council of Ministers “ಒಂದು ದೇಶ,ಒಂದು ಚುನಾವಣೆ” ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು
Union Council of Ministers ಪ್ರಧಾನಿ ಮೋದಿ ಸಚಿವ ಸಂಪುಟವು
“ಒಂದು ದೇಶ,ಒಂದು ಚುನಾವಣೆ” ಮಸೂದೆಗೆ ಅನುಮೋದನೆ ನೀಡಿದೆ.
ಭಾರತಕ್ಕೆ ಇದು ಐತಿಹಾಸಿಕ ದಿನ!!
Union Council of Ministers ಸಂಸತ್ತಿನಲ್ಲಿ ಮಸೂದೆ ಅಂಗೀಕಾರವಾದರೆ 2029 ರಿಂದ ಲೋಕಸಭೆಯಿಂದ ವಿಧಾನಸಭೆಯಿಂದ ಸ್ಥಳೀಯ ಸಂಸ್ಥೆಗಳಿಗೆ ಎಲ್ಲಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲಾಗುವುದು.
ಭಾರತೀಯ ಆರ್ಥಿಕತೆಗೆ ದೊಡ್ಡ ಉತ್ತೇಜನ. ಭಾರತದ ಸಾವಿರಾರು ಕೋಟಿ ಉಳಿತಾಯವಾಗುತ್ತದೆ ಎಂದು ಹೇಳಲಾಗಿದೆ.
