Sunday, March 29, 2026
Sunday, March 29, 2026
Home Blog Page 559

Kannada Sahitya Parishath ಸಾಗರ ತಾಲ್ಲೂಕು‌ ಕಸಾಪ ವತಿಯಿಂದ ಕಗ್ಗ ವಾಚನ ಸ್ಪರ್ಧೆಗೆ ಆಸಕ್ತರಿಂದ ಹೆಸರು ನೋಂದಾವಣೆಗೆ ಆಹ್ವಾನ

0

Kannada Sahitya Parishath ಸಾಗರದ ಶ್ರೀಮತಿ ಸರಸ್ವತಿ ಹಾಗೂ ಮೇಜರ್ ನಾಗರಾಜ್ ಕುಟುಂಬ ಇವರು ನೀಡಿದ ಡಿ.ವಿ.ಜಿ ಕಗ್ಗ ದತ್ತಿ ಕಾರ್ಯಕ್ರಮ ನಿಮಿತ್ತ ತಾಲೂಕಿನ ಪ್ರಾಥಮಿಕ (5ರಿಂದ7 ನೇ ತರಗತಿ) ಹಾಗೂ ಪ್ರೌಢಶಾಲಾ (8 ರಿಂದ10 ನೇ ತರಗತಿ) ವಿದ್ಯಾರ್ಥಿಗಳಿಗೆ ಡಿ.ವಿ.ಜಿ ಯವರ ಕಗ್ಗ ವಾಚನ ಹಾಗೂ ಅರ್ಥ ವಿವರಣೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಶಾಲೆಯವರು ವಿದ್ಯಾರ್ಥಿಗಳ ಹೆಸರು ತರಗತಿ ಮೊ.ನಂ ಸಹಿತ ಸೆಪ್ಟೆಂಬರ್ 28ರೊಳಗೆ ನೋಂದಾಯಿಸಿಕೊಳ್ಳುವುದು.

Kannada Sahitya Parishath ಸೂಚನೆ-ಕಗ್ಗದ ಯಾವುದಾದರೂ 2 ಪದ್ಯ ವಾಚನ ಹಾಗೂ ಅರ್ಥ ವಿವರಣೆ ಮಾತ್ರ

ಗೂಗಲ್ ಶೀಟಲ್ಲಿ ಭರ್ತಿ ಮಾಡಿ

https://docs.google.com/spreadsheets/d/1I_SjHHJaHVgwO-CrWGfeNQo_38SojUShGxd6Y4G1klo/edit?usp=drivesdk

ಹೆಚ್ಚಿನ ಮಾಹಿತಿಗಾಗಿ
ವಿ.ಟಿ.ಸ್ವಾಮಿ
9880871716

ಜಿ.ನಾಗೇಶ್
9880121758
ನಾರಾಯಣ ಮೂರ್ತಿ ಕಾನಗೋಡು
9481255902
ಲೋಕೇಶ್ ಕುಮಾರ್
6361556719
ಮೇಜರ್ ನಾಗರಾಜ್
9448767283

Department of Social Welfare ಸಾಗರದಲ್ಲಿ ಸರ್ಕಾರ ಆರಂಭಿಸಲಿರುವ ಬಾಲಕಿಯರ ಹಾಸ್ಟೆಲ್ ಗೆ ಬಾಡಿಗೆ ಆಧಾರದಲ್ಲಿ ಕಟ್ಟಡ ನೀಡುವ ಬಗ್ಗೆ ಅರ್ಜಿ ಆಹ್ವಾನ

0

Department of Social Welfare ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಸಾಗರ ಟೌನ್‌ನಲ್ಲಿರುವ 100 ಸಂಖ್ಯಾ ಬಲವುಳ್ಳ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದ್ದು, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಕಟ್ಟಡ ಲಭ್ಯವಿದ್ದಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಜೋಗ್ ರಸ್ತೆ, ಸಾಗರ, ದೂ.ಸಂ.:9480843192 Department of Social Welfare ಇವರನ್ನು ಸಂಪರ್ಕಿಸುವುದು.

Shivamogga Institute of Medical Sciences ವಾಕ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಕುಸಿದು ಸಾವು

0

Shivamogga Institute of Medical Sciences ಶರಾವತಿ ನಗರದ ನಿವಾಸಿ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಪೃಥ್ವಿರಾಜ್ (20) ಬುಧವಾರ ನಿಧನ ಹೊಂದಿದರು.

ಪ್ರವಾಸಿ ಮಂದಿರದ ಬಳಿ ಸಂಜೆ ವೇಳೆ ವಾಕ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಗಮನಿಸಿದ ಮೋಹನ್ ಎಂಬುವವರು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಪೃಥ್ವಿರಾಜ್ ನಿಧನರಾಗಿದ್ದಾರೆ.

ಪೃಥ್ವಿರಾಜ್ ಸಿಮ್ಸ್ ಕಾಲೇಜಿನಲ್ಲಿ ಎರಡನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು. ಪ್ರತಿ ದಿನ ಪ್ರವಾಸಿ ಮಂದಿರದ ಬಳಿ ವಾಕ್ ಮಾಡುತ್ತಿದ್ದರು. ಇವರು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ, ಕಾಮಧೇನು ಔಷಧ ಸಗಟು ವ್ಯಾಪಾರಿ ಮುತ್ತಣ್ಣ ಅವರ ಪುತ್ರ. ಪೃಥ್ವಿ ಅವರ ಸಹೋದರ ಪಾರ್ಥ ದೆಹಲಿಯಲ್ಲಿದ್ದಾರೆ.

ಪೃಥ್ವಿರಾಜ್ ಅವರ ನಿಧನಕ್ಕೆ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂತಾಪ ಸೂಚಿಸಿದೆ. ಮೃತರ ತಂದೆ ಮುತ್ತಣ್ಣ ಅವರು ಔಷಧಿ ವ್ಯಾಪಾರಿಗಳ ಸಂಘದ ಸದಸ್ಯ, ರೋಟರಿ ಸೆಂಟ್ರಲ್ ಕ್ಲಬ್ ಸದಸ್ಯರಾಗಿ ಹಲವಾರು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ನ್ಯಾಮತಿಯವರಾಗಿದ್ದು, ಶಿವಮೊಗ್ಗದ ಶರಾವತಿ ನಗರದ ಎಂಟನೇ ಕ್ರಾಸ್‌ನಲ್ಲಿ ವಾಸ ಮಾಡುತ್ತಿದ್ದಾರೆ.

Shivamogga Institute of Medical Sciences ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್, ಕಾರ್ಯದರ್ಶಿ ಈಶ್ವರ್, ರೋಟರಿ ವಲಯ 11ರ ಸಹಾಯಕ ಗವರ್ನರ್ ಸುರೇಶ್, ರೋಟರಿ ವಿಜಯಕುಮಾರ್, ಜಿಲ್ಲಾ ಗವರ್ನರ್ ದೇವಾನಂದ್, ಪ್ರಕಾಶ್, ರವಿ ಕೋಟೋಜಿ, ಚುಡಾಮಣಿ ಪವಾರ್, ಬಸವರಾಜ್, ಜಯಶೀಲ ಶೆಟ್ಟಿ, ಸಂತೋಷ್, ಗಣೇಶ್ ಎಂ.ಅಂಗಡಿ, ರಮೇಶ್, ಗೀತಾ ಜಗದೀಶ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ ಸಿಬ್ಬಂದಿಯಿಂದ ಸಸ್ಯಾರೋಪಣ & ಸ್ವಚ್ಛತಾ ಸೇವಾ ಕಾರ್ಯಕ್ರಮ

0

Akashvani Bhadravati “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ, ಮತ್ತು ಸ್ವಚ್ಛತಾ ಸೇವಾ ಪಾಕ್ಷೀಕ ಅಭಿಯಾನದಡಿಯಲ್ಲಿ ಸ್ವಚ್ಛತೆಯ ಕಾರ್ಯಕ್ರಮವನ್ನು ಆಕಾಶವಾಣಿ ಭದ್ರಾವತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ ಕ್ಷೇತ್ರದ ಮಾನ್ಯ ಲೋಕಸಭಾಸದಸ್ಯರಾದ ಶ್ರೀ. ಬಿ.ವೈ.ರಾಘವೇಂದ್ರ ರವರು ಈ ಕಾರ್ಯುಕ್ರಮವನ್ನು ಉದ್ಘಾಟಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನದ ಅಂಗವಾಗಿ ಆಕಾಶವಾಣಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನೆರವೇರಿಸಿದರು.

Akashvani Bhadravati ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಮಾನ್ಯ ಕರ್ನಾಟಕ ವಿಧಾನಸಭಾ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್.ಆರ್.ಭಟ್, ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಬಿ.ಎಸ್.ನಟೇಶ್ ರಾಮನ್, ಕಾರ್ಯಕ್ರಮ ನಿರ್ವಾಹಕರಾದ ಶ್ರೀ.ಎಸ್.ಎಲ್.ರಮೇಶ್ ಪ್ರಸಾದ್ ಮತ್ತು ಆಕಾಶವಾಣಿ ಭದ್ರಾವತಿ ಕೇಂದ್ರದ ಸಿಬ್ಬಂಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Union Council of Ministers “ಒಂದು ದೇಶ,ಒಂದು ಚುನಾವಣೆ” ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು

0

Union Council of Ministers ಪ್ರಧಾನಿ ಮೋದಿ ಸಚಿವ ಸಂಪುಟವು
“ಒಂದು ದೇಶ,ಒಂದು ಚುನಾವಣೆ” ಮಸೂದೆಗೆ ಅನುಮೋದನೆ ನೀಡಿದೆ.

ಭಾರತಕ್ಕೆ ಇದು ಐತಿಹಾಸಿಕ ದಿನ!!

Union Council of Ministers ಸಂಸತ್ತಿನಲ್ಲಿ ಮಸೂದೆ ಅಂಗೀಕಾರವಾದರೆ 2029 ರಿಂದ ಲೋಕಸಭೆಯಿಂದ ವಿಧಾನಸಭೆಯಿಂದ ಸ್ಥಳೀಯ ಸಂಸ್ಥೆಗಳಿಗೆ ಎಲ್ಲಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲಾಗುವುದು.

ಭಾರತೀಯ ಆರ್ಥಿಕತೆಗೆ ದೊಡ್ಡ ಉತ್ತೇಜನ. ಭಾರತದ ಸಾವಿರಾರು ಕೋಟಿ ಉಳಿತಾಯವಾಗುತ್ತದೆ ಎಂದು ಹೇಳಲಾಗಿದೆ.

Holalur Panchayath ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು- ಎನ್.ಹೇಮಂತ್

0

Holalur Panchayath ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ನಿಲ್ಲಿಸೋಣ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡಲು ಎಲ್ಲರಲ್ಲಿ ಅರಿವು ಮೂಡಿಸೋಣ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಕರೆ ನೀಡಿದರು.
‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Holalur Panchayath ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವುದರಿಂದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ನಾವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕರು, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Karnataka Lokayukta ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜನರ ಅಹವಾಲು ಸ್ವೀಕಾರ ಸಭೆ

0

Karnataka Lokayukta ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟಂಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಸೆ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಸೆ.24 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಸೆ.25 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ Karnataka Lokayukta ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ, ಸೆ.26 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ, ಸೆ-27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Rotary Club Charitable Trust ರೋಟರಿ ಪೂರ್ವ ಶಾಲೆಯ ಮಕ್ಕಳು ತಾಲ್ಲೂಕು ಮಟ್ಟದ ಕೋ ಕೋ ಪಂದ್ಯಕ್ಕೆ ಆಯ್ಕೆ

0

Rotary Club Charitable Trust ನೆಹರು ಕ್ರೀಡಾಂಗಣದಲ್ಲಿ ನಡೆದ ಮಕ್ಕಳ ಜೂನಿಯರ್ ವಿಭಾಗದಲ್ಲಿ ವಲಯ ಮಟ್ಟದ ಕೋ ಕೋ ಪಂದ್ಯಾವಳಿಯಲ್ಲಿ ರೋಟರಿ ಪೂರ್ವ ಶಾಲೆಯ ಮಕ್ಕಳು ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆ ಥ್ರೋ ಬಾಲ್ ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ರೋಟರಿ ಶಾಲೆಗೆ ಕೀರ್ತಿ ತಂದಿರುತ್ತಾರೆ.

Rotary Club Charitable Trust ತಂಡದ ಎಲ್ಲಾ ಆಟಗಾರರಿಗೆ ರೋಟರಿ ಪೂರ್ವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ. ಉಪಾಧ್ಯಕ್ಷರಾದ ಡಾಕ್ಟರ್ ಪರಮೇಶ್ವರ ಡಿ ಶಿಗ್ಗಾವ್.ಕಾರ್ಯದರ್ಶಿ ಎಸ್ಎಸ್ಸಿ ರಾಮಚಂದ್ರ. ಖಜಾಂಚಿ ಜಿ. ವಿಜಯಕುಮಾರ್. ಸಹಕಾರ್ಯದರ್ಶಿ ಶ್ರೀ ನಾಗವೇಣಿ ಎಸ್ಆರ್ ಪ್ರಾಂಶುಪಾಲರಾದ. ಸೂರ್ಯನಾರಾಯಣ್. ದೈಹಿಕ ಶಿಕ್ಷಕರಾದ ಪ್ರಶಾಂತ್. ಹಾಗೂ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಅರುಣ್ ದೀಕ್ಷಿತ್ ಕಾರ್ಯದರ್ಶಿ ಶಶಿಕಾಂತ್ ನಾಡಿಗ್. ಮತ್ತು ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ

Vishwakarma Jayanti ಕುಶಲ ಕರ್ಮಿಗಳ ರಕ್ಷಣೆಗಾಗಿ ಪಿಎಂ ವಿಶ್ವಕರ್ಮ ಯೋಜನೆ- ಸಂಸದ ರಾಘವೇಂದ್ರ

0

Vishwakarma Jayanti ವಿಶ್ವಕರ್ಮರನ್ನು ಪ್ರಪಂಚದ ‘ದೈವಿಕ ಇಂಜಿನಿಯರ್’ ಎಂದು ಕರೆಯಲಾಗುತ್ತದೆ. ಅವರು ವಾಸ್ತುಶಿಲ್ಪಿಗಳ ಪ್ರಧಾನ ದೇವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಶ್ರೀ ವಿಶ್ವಕರ್ಮರನ್ನು ಕುರಿತು ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಜಯಂತಿ ಒಂದು ಪವಿತ್ರವಾದ ದಿನ. ಬ್ರಹ್ಮನ ಮಗನಾದ ವಿಶ್ವಕರ್ಮನು ಶಿಲ್ಪಕಲೆ, ವಾಸ್ತುಶಿಲ್ಪ ಕರಕುಶಲತೆಯನ್ನು ಜಗತ್ತಿಗೆ ನೀಡಿದವರು. ಎಷ್ಟೇ ತಾಂತ್ರಿಕತೆ ಬೆಳೆದರೂ ಕಲೆ, ಸಾಹಿತ್ಯ, ಕೌಶಲ್ಯಗಳನ್ನು ಮಷೀನ್‌ಗಳು ಸೃಷ್ಟಿಸಲು ಸಾಧ್ಯವಿಲ್ಲ.
ಪ್ರಧಾನಮಂತ್ರಿಯವರು ಕುಶಲಕರ್ಮಿಗಳ ರಕ್ಷಣೆಗಾಗಿ ಹಾಗೂ ಯುವಜನತೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲೆಂಬ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದು 8 ರಿಂದ 10 ಕೋಟಿ ಯುವ ಕುಶಲಕರ್ಮಿಗಳ ವೃತ್ತಿ ಜೀವನಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
Vishwakarma Jayanti ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ರೈಲ್ವೇ, ವಿಮಾನ, ರಾಷ್ಟಿçÃಯ ಹೆದ್ದಾರಿಗಳು, ರಸ್ತೆಗಳು, ವಿಶ್ವವಿದ್ಯಾಲಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಯನ್ನು ಕಾಣುತ್ತಿದ್ದೇವೆ. ಮುಂದೆ ಸಹ ಜಿಲ್ಲೆಯ ಅಭಿವೃದ್ದಿಗೆ ತಾವು ಶ್ರಮಿಸುವುದಾಗಿ ಹೇಳಿದರು.
ಲಾಲ್ ಬಹದ್ದೂರ್ ಶಾಸ್ತಿç ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಕಾಲೇಜಿನ ಇತಿಹಾಸ ಉಪನ್ಯಾಸಕ ನವೀನ್ ಜಿ. ಆಚಾರ್ಯ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮರನ್ನು ನಾವು ಅನಂತ, ಅನಾದಿ ಎಂದು ಬಣ್ಣಿಸುತ್ತೇವೆ. 33 ಕೋಟಿ ದೇವರನ್ನು ಸೃಷ್ಟಿ ಮಾಡಿದವರು ವಿಶ್ವಕರ್ಮ. ದೊಡ್ಡ ದೊಡ್ಡ ಅರಮನೆಗಳು ಹಾಗೂ ಸೇತುವೆ ನಿರ್ಮಾಣಕಾರ ವಿಶ್ವಕರ್ಮ. ಖಗೋಳಶಾಸ್ತ್ರದ ಜ್ಞಾನವನ್ನೂ ಹೊಂದಿದ್ದ ವಿಶ್ವಕರ್ಮರ ಪಾಂಡಿತ್ಯ ಅಪಾರ. ಕುಶಲಕರ್ಮಿಗಳಾಗಿ ಬಹುಮುಖಿ ಸಾಧನೆಯನ್ನು ವಿಶ್ವಕರ್ಮರು ಮಾಡಿದ್ದಾರೆ ಎಂದು ತಿಳಿಸಿದ ಅವರು ಶ್ರೀ ವಿಶ್ವಕರ್ಮರ ಸೃಷ್ಟಿ ಮತ್ತು ಚರಿತ್ರೆ ಕುರಿತು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಮಾತನಾಡಿ, ವಿಶ್ವಕರ್ಮ ಧರ್ಮ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಶಿಲ್ಪ ಸಂಸ್ಕೃತಿ ಬೆಳೆಸಿದ ಸಮಾಜ. ವಿಶ್ವಕರ್ಮ ಸಮಾಜದವರು ಸುಸಂಸ್ಕೃತರಾಗಿದ್ದು, ಉನ್ನತ ಮಟ್ಟದ ಅಭಿವೃದ್ಧಿ ಹೊಂದಬೇಕು ಆಶಿಸಿದ ಅವರು ರಾಜ್ಯ ಸರ್ಕಾರ ಜನ ಸಾಮಾನ್ಯರು, ಬಡವರ ಆರ್ಥಿಕ ಸಬಲೀಕರಣಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹರೆಲ್ಲ ಇದರ ಲಾಭ ಪಡೆಯಬೇಕು. ಇನ್ನೂ ಸೌಲಭ್ಯ ಪಡೆಯದವರು ಇದರು ಸದುಪಯೋಗ ಪಡೆಯಬೇಕೆಂದರು.
ವಿಶ್ವಕರ್ಮ ಸಮಾಜದ ಮುಖಂಡರಾದ ಎಸ್.ರಾಮು ಮಾತನಾಡಿ, ಮೊದಲು ವಿಶ್ವಕರ್ಮ ಸಮುದಾಯದವರನ್ನು ಒಗ್ಗೂಡಿಸಲು ಪೂಜಾ ಕಾರ್ಯ ಮಾಡುತಿದ್ದೆವು. ಇದೀಗ ಸರ್ಕಾರ ವಿಶ್ವಕರ್ಮ ಜಯಂತಿಯ ಆಚರಣೆ ಜಾರಿಗೆ ತಂದಿದೆ. ಹಾಗೂ ನಮ್ಮ ಪ್ರಧಾನಿಯವರು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತಂದು ಕುಶಲಕರ್ಮಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ವಿಶ್ವಕರ್ಮ ಸಮಾಜದಲ್ಲಿ 42 ಉಪ ಪಂಗಡಗಳಿದ್ದು ಎಲ್ಲರೂ ಒಗ್ಗೂಡಬೇಕೆಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಜಿಲ್ಲಾ ವಿಶ್ವ ಬ್ರಾಹ್ಮಣರ ಸಂಘದ ಅಧ್ಯಕ್ಷ ಸೋಮಾಚಾರಿ, ಸಮಾಜದ ಮುಖಂಡರಾದ ಅಗರದಹಳ್ಳಿ ನಿರಂಜನಮೂರ್ತಿ, ಶ್ರೀನಿವಾಸ್, ಹೆಚ್.ಎಂ.ಲೀಲಾ ಮೂರ್ತಿ, ರೂಪಾ ಚಂದ್ರಶೇಖರ್, ಸಮಾಜದ ಬಾಂಧವರು ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು.

Narendra Modi 74 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ‌ ಮೋದಿ. ಗಣ್ಯರಿಂದ ಶುಭಾಶಯಗಳ ಮಹಾಪೂರ

0

Narendra Modi ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.

ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಗಮೆಚ್ಚಿದ ಜನನಾಯಕ, ಭಾರತ ಕಂಡ ಹೆಮ್ಮೆಯ ಪ್ರಧಾನಿ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಹೇಳಿ, ಕೊಂಡಾಡಿದೆ.

Narendra Modi ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಪೋಸ್ಟ್ ಮಾಡಿ, ಆದರಣೀಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.

ಇನ್ನೂ ಸುದೀರ್ಘ ಕಾಲ ತಮ್ಮ ಸಾರ್ಥಕ ದೇಶಸೇವೆ ನಡೆಯುತ್ತಿರುವಂತೆ ದೇವರ ಆಶೀರ್ವಾದವಿರಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.