Sunday, March 29, 2026
Sunday, March 29, 2026
Home Blog Page 561

Jawahar Navodaya Vidyalaya ಗಾಜನೂರು ನವೋದಯ ಶಾಲೆಗೆ ಆರನೇ ತರಗತಿ ಪ್ರವೇಶಾತಿ ಪರೀಕ್ಷೆಯ ದಿನಾಂಕ ಮುಂದೂಡಿಕೆ

0

Jawahar Navodaya Vidyalaya ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ.23ರವರೆಗೆ ಮುಂದೂಡಲಾಗಿದ್ದು, 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವೆಬ್‌ಸೈಟ್ https://navodaya.gov.in ಮೂಲಕ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ/ಪವರ್ಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪ್ರಕಟಣೆ

0

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಶೇ. 60 ರಷ್ಟು ಅಂಕ ಪಡೆದಿದ್ದರೆ 7 ಸಾವಿರ ರೂ.,ಗಳು, ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದಿದ್ದರೆ 15 ಸಾವಿರ ರೂ.ಗಳನ್ನು, ಪಿಯುಸಿ ವಿದ್ಯಾರ್ಥಿಗಳಿಗೆ 20 ಸಾವಿರ ರೂ.ಗಳನ್ನು, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ.ಗಳನ್ನು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 30 ಸಾವಿರ ರೂ.ಗಳನ್ನು ಹಾಗೂ ಕೃಷಿ ಇಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ವೈದ್ಯಕೀಯ ಪದವಿ ವಿದ್ಯಾರ್ಥಿಗಳಿಗೆ 35 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು https://sw.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.

Department of Youth Empowerment and Sports ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

0

Department of Youth Empowerment and Sports 2024-25ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Department of Youth Empowerment and Sports ಆಸಕ್ತ ಕ್ರೀಡಾಪಟುಗಳು ಅರ್ಜಿ ಮತ್ತು ಮಾರ್ಗಸೂಚಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇಲ್ಲಿ ಪಡೆದು ಭರ್ತಿ ಮಾಡಿ ಸೆ.25 ರೊಳಗೆ ಕಚೇರಿಗೆ ಸಲ್ಲಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Department of Youth Empowerment and Sports ಸೆ.23 ರಿಂದ 24 ವರೆಗೆ 2024-25 ನೇ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

0

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.23 ಮತ್ತು 24 ರಂದು ಬೆಳಗ್ಗೆ 9:30ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದೆ.
ಈ ಕ್ರೀಡಾಕೂಟದಲ್ಲಿ ಅಥ್ಲೇಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಬ್ಯಾಸ್ಕೆಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಮತ್ತು ಆಯ್ಕೆಯ ಕ್ರೀಡೆಗಳು ಟೆನ್ನಿಸ್, ನೆಟ್‌ಬಾಲ್, ಈಜು ಕ್ರೀಡೆಗಳನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವೀತಿಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.
Department of Youth Empowerment and Sports ಅರ್ಹತೆ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಸೆ.೨೩ ರಂದು ಬೆಳಗ್ಗೆ 9:30 ರೊಳಗಾಗಿ ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರನ್ನು ನೋಂದಾಯಿಸಿಕೊಳ್ಳುವುದು. ತಾಲೂಕುಗಳಿಂದ ಭಾಗವಹಿಸುವ ತಾಲೂಕು ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗಕ್ಕೆ ಬಂದುಹೋಗುವ ಸಾಮಾನ್ಯ ಪ್ರಯಾಣಭತ್ಯೆ ನೀಡಲಿದ್ದು ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-223328ನ್ನು ಸಂಪರ್ಕಿಸುವುದು.

V. Somanna ಭಾರತೀಯ ರೈಲ್ವೆ ಜೊತೆ ಕೊಂಕಣ ರೈಲ್ವೆ ವಿಲೀನಕ್ಕೆ ಚಿಂತನೆ- ರೈಲ್ವೆ ಸಚಿವ ಸೋಮಣ್ಣ

0

V. Somanna ಜನರಿಗೆ ಉತ್ತಮ ಸೇವೆಗಳನ್ನು ನೀಡುವುದಕ್ಕಾಗಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ಹರಡಿಕೊಂಡಿದೆ‌. ಪ್ರಯಾಣಿಕರಿಗೆ ಹೆಚ್ಚಿನ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಇದನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಯೋಚಿಸುತ್ತಿದ್ದೇವೆ. ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿದ ನಂತರ, ವಿಲೀನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು’ ಎಂದು ತಿಳಿಸಿದರು.ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ಸೋಮಣ್ಣ ತಿಳಿಸಿದರು.
V. Somanna ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಹಿಂದೆ ರೈಲ್ವೆ ಇಲಾಖೆಯು ರಾಜ್ಯ ಸರ್ಕಾರದ ಶೇ.50ರಷ್ಟು ಕೊಡುಗೆಯೊಂದಿಗೆ ರಾಜ್ಯದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿತ್ತು ಆದರೆ ಈಗ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರವಿಲ್ಲ ಎಂಬ ಕಾರಣಕ್ಕೆ ‘ಎಲ್ಲಾ ವೆಚ್ಚವನ್ನು ಕೇಂದ್ರವೇ ಭರಿಸಲಿದೆ’ ಎಂದು ನಿರ್ಧರಿಸಲಾಗಿದೆ ಎಂದು ಸೋಮಣ್ಣ ತಿಳಿಸಿದರು.

Thirtahalli Police ಗಣೇಶ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬರ ಸಾವು. ಡಿಜೆ ಶಬ್ದದ ಪರಿಣಾಮ ಎಂದು ಸಾರ್ವಜನಿಕರ ಶಂಕೆ

0

Thirtahalli Police ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿಯಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ಬಿದರಹಳ್ಳಿ ಗ್ರಾಮದ ಇ.ಎಸ್. ಶ್ಯಾಮಣ್ಣ(66) ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.
Thirtahalli Police ವಿಪರೀತ ಪ್ರಮಾಣದಲ್ಲಿ ಬಳಕೆಯಾದ ಡಿಜೆ ಶಬ್ದದಿಂದಲೇ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

Madhu Bangarappa ಸರ್ಕಾರ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್ ಸೌಲಭ್ಯಕ್ಕೆ ಪ್ರಸ್ತಾವನೆ- ಸಚಿವ ಮಧು ಬಂಗಾರಪ್ಪ

0

Madhu Bangarappa ಖಾಸಗಿ ಶಾಲೆಗಳಲ್ಲಿ ಸ್ಕೂಲ್ ಬಸ್ ಗಳಿರುವುದು ಸಾಮಾನ್ಯ. ಇದೀಗ ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆ ಮಕ್ಕಳಿಗೂ ಸ್ಕೂಲ್ ಬಸ್ ವ್ಯವಸ್ಥೆ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರೀ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್ ನಲ್ಲಿ ಓಡಾಡುವ ಯೋಗ ಸಿಗಲಿದೆ. ಇಂಥಹದ್ದೊಂದು ಯೋಜನೆ ಜಾರಿಗೆ ತರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಕೊರತೆ ನಾನಾ ಸಮಸ್ಯೆಗಳಿಂದ ಮಕ್ಕಳ ಸರ್ಕಾರಿ ಶಾಲೆಗೆ ದಾಖಲಾಗುವುದು ಕಡಿಮೆ. ಇದರಿಂದಾಗಿ ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರ ಉಳಿಯುತ್ತಿದ್ದಾರೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ಮಕ್ಕಳು ಶಾಲೆ ತಪ್ಪಿಸಿಕೊಳ್ಳುತ್ತಿದ್ದಾರೆ. ಅಂತಹ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಿಕ್ಷಣ ಇಲಾಖೆ ಈಗ ಬಸ್ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆಗೆ ಬರುವ ಮಕ್ಕಳಿಗೆ ಪಿಕ್ ಅಪ್ ಮತ್ತು ಡ್ರಾಪ್ ವ್ಯವಸ್ಥೆ ಮಾಡಿಸಲು ಬಸ್ ವ್ಯವಸ್ಥೆ ಮಾಡುವ ಬಗ್ಗೆ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಇದೊಂದು ವಿನೂತನ ಪ್ರಯೋಗವಾಗಿದ್ದು, ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನವಾಗಿದೆ ಎಂದಿದ್ದಾರೆ.
Madhu Bangarappa 4 ರಿಂದ 5 ಕಿ.ಮೀ. ವ್ಯಾಪ್ತಿಯೊಳಗಿನ ಮಕ್ಕಳನ್ನು ಶಾಲೆಗೆ ಕರೆತರಲು ಈ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರಿನ ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತದೆ. ಬಳಿಕ ಹಂತ ಹಂತವಾಗಿ ಬೇರೆ ಬೇರೆ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.

 Gruha Lakshmi Scheme ಗೃಹಲಕ್ಷ್ಮಿ ಯೋಜನೆ ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ. ಗೊಂದಲ ಬೇಡ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0

Gruha Lakshmi Scheme ಗೃಹ ಲಕ್ಷ್ಮೀ ಯೋಜನೆಯಡಿ ಬಾಕಿಯಿರುವ 2 ತಿಂಗಳ ಮೊತ್ತವನ್ನು, ಒಂದೇ ಬಾರಿಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸೆ. 16 ರಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದೆ ಗೃಹ ಲಕ್ಷ್ಮೀ ಯೋಜನೆ ಯಡಿ ಸೌಲಭ್ಯ ಕಲ್ಪಿಸಲು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿತ್ತು. ಅವರಿಗೂ ಕೂಡ ಏಕಕಾಲದಲ್ಲಿಯೇ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪಾವತಿಸುವ ಗೃಹ ಲಕ್ಷ್ಮೀ ಯೋಜನೆಯನ್ನು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಈ ಯೋಜನೆ ನಿತ್ಯ, ಸತ್ಯ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Gruha Lakshmi Scheme ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಿತಿ ರಚನೆಯಾಗಬೇಕು. ಮುಖ್ಯಮಂತ್ರಿಗಳು ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಎಲ್ಲ ಯಾವ ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು ಎಂದರು.
ಅಂಗನವಾಡಿ ಕೇಂದ್ರ ಗಳಿಗೆ ಅಕ್ಟೋಬರ್ 1 ರಿಂದಲೇ ಗಟ್ಟಿ ಬೆಲ್ಲ ನೀಡಲಾಗುವುದು ಎಂದು ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

Atishi Marlena ದೆಹಲಿ ಕೇಜ್ರಿವಾಲ್ ಬದಲಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಷಿ ಮರ್ಲೆನಾ ಆಯ್ಕೆ

0

Atishi Marlena ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ.
ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದು ಹೊರಬಂದ ಬಳಿಕ ಅರವಿಂದ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು.
Atishi Marlena ಇದೀಗ ಇಂದು ನಡೆದ ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ. ದೆಹಲಿಯ ಕಲ್ಕಾಜಿಯ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಶಾಸಕಿಯಾಗಿರುವ ಅತಿಶ್ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದೇ ಸಿಎಂ ಆಗಿ ಅತಿಶಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ದೆಹಲಿ ಸಿಎಂ ಹುದ್ದೆಗೇರಿದ 3ನೇ ಮಹಿಳೆ ಅತಿಶಿ ಆಗಿದ್ದಾರೆ. ಸುಷ್ಮಾ ಸ್ವರಾಜ್, ಶೀಲಾ ದಿಕ್ಷಿತ್ ಅವರ ನಂತರ ಇದೀಗ ಅತಿಶಿ ಸಿಎಂ ಹುದ್ದೆಗೇರಿದ್ದಾರೆ. ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಲೋಕೋಪಯೋಗಿ, ಶಿಕ್ಷಣ ಸಚಿವೆಯಾಗಿದ್ದರು.

Pragathi Apple Education ಸೆ.19 ರಂದು ಡಾ.ಸಿ.ಆರ್.ಚಂದ್ರಶೇಖರ್ ಅವರ ” ಓದುವ ಖುಷಿ- ಪರೀಕ್ಷಾ ಸಂಭ್ರಮ” ಪುಸ್ತಕ ಬಿಡುಗಡೆ.

0

Pragathi Apple Education 12 ವರ್ಷಕ್ಕೂ ಹೆಚ್ಚು ಕಾಲದಿಂದ ಪಿಯು ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗದ ಪ್ರಗತಿ ಆಪಲ್ ಎಜ್ಯುಕೇಷನ್ ವತಿಯಿಂದ ಸೆ.19 ಮತ್ತು 20 ರಂದು ಅಂಬೇಡ್ಕರ್ ಭವನದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮ ಮತ್ತು ವಿವಿಧ ನೂತನ ಸ್ಕಾಲರ್‌ಶಿಪ್ ಯೋಜನೆಗಳಿಗೆ ಚಾಲನೆ ಮತ್ತು ಪ್ರಗತಿ ಸ್ಕಾಲರ್ಶಿಪ್ ಸಹಕಾರ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿ ಆಪಲ್ ಎಜ್ಯುಕೇಷನ್ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯಕುಮಾರ್ ಬಳಿಗಾರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.19ರಂದು ಬೆಳಿಗ್ಗೆ 10 ಗಂಟೆಗೆ ಹೈಸ್ಕೂಲ್ & ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಓದುವ ಖುಷಿ, ಪರೀಕ್ಷಾ ಸಂಭ್ರಮ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಸಿಇಒ ಹೇಮಂತ ಎನ್. ಉದ್ಘಾಟಿಸಲಿದ್ದಾರೆ, ಮುಖ್ಯ ಉಪನ್ಯಾಸಕರಾಗಿ ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಆಗಮಿಸಲಿದ್ದು, ಶಿಕ್ಷಣ ಕ್ಷೇತ್ರದ ಅನೇಕರು ಭಾಗವಹಿಸಲಿದ್ದಾರೆ ಎಂದರು.

Pragathi Apple Education ಡಾ.ಸಿ.ಆರ್.ಚಂದ್ರಶೇಖರ್ ಅವರು ಬರೆದಿರುವ ಓದುವ ಖುಷಿ,ಪರೀಕ್ಷಾ ಸಂಭ್ರಮ ಪುಸ್ತಕದ ೧೧ನೇ ಆವೃತ್ತಿಯನ್ನು ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಾಮಣ ಬಿಡುಗಡೆ ಮಾಡುವರು. ಈ ಪುಸ್ತಕವನ್ನು ಮಕ್ಕಳಿಗೆ ಉಚಿತವಾಗಿ ವಿತರಣೆ ಮಾಡಲಾಗುವುದು. ನಂತರ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೊದಲಗೋಷ್ಠಿ, ಮಧ್ಯಾಹ್ನ 2:30 ರಿಂದ ಪಿಯು ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳಿಗೆ 2ನೇ ಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ಪರೀಕ್ಷೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಡಾ.ಸಿ.ಆರ್.ಚಂದ್ರಶೇಖರ್, ಪರೀಕ್ಷೆ ಮತ್ತು ಆಹಾರ ಕುರಿತು ಮಕ್ಕಳ ತಜ್ಞ ಡಾ.ಸಿ.ಜಿ.ರಾಘವೇಂದ್ರ ವೈಲಾಯ ಉಪನ್ಯಾಸ ನೀಡಲಿದ್ದಾರೆ ಎಂದರು.