Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ನವೀನ ಹಾಗೂ ನವೀಕರಣ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ https://ssp.postmartic.karnataka.gov.in/ssppre/ ರಲ್ಲಿ ದಿ: 31/10/2024ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
Bhadravati Social Welfare Department ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.
Department of Youth Empowerment and Sports ಪರಿಶಿಷ್ಟ ಜಾತಿ ಯುವ ಜನತೆಗೆ ಉದ್ಯೋಗ ತರಬೇತಿ ಶಿಬಿರ
Department of Youth Empowerment and Sports 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಯನ್ನು ಉತ್ತೇಜಿಸಲು, ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಯುವಜನರಿಗೆ ಪೂರಕವಾದ ಉದ್ಯೋಗಗಳನ್ನು ಒದಗಿಸುವ ಸಲುವಾಗಿ ತರಬೇತಿಗೆ 18 ರಿಂದ 40 ವರ್ಷ ಒಳಗಿನ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
Department of Youth Empowerment and Sports ತರಬೇತಿಯು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಸೆ. 19 ರಿಂದ ಅ. 03 ರವರೆಗೆ ಜೆಮ್/ಫಿಟೈಸ್ ತರಬೇತಿ ಹಾಗೂ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸೆ. 21 ರಿಂದ ಅ.03 ರವರೆಗೆ ಮಹಿಳೆಯರಿಗೆ ಬ್ಯೂಟಿಷಿಯನ್ ತರಬೇತಿ ಶಿಬಿರ ಮತ್ತು ಅ. 04 ರಿಂದ ಅ. 09 ವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. 18ರೊಳಗಾಗಿ ಸಲ್ಲಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸುವುದು.
Teacher’s Day ಮೆಕಾಲೆ ಶಿಕ್ಷಣ ಪದ್ಧತಿಗಿಂತ ಭಾರತೀಯ ಶಿಕ್ಷಣ ಪದ್ಧತಿಯೇ ಹೆಚ್ವು ಸೂಕ್ತ- ಸುರೇಶ್ ಸೇರಿಗಾರ್
Teacher’s Day ಪೇಸ್ ಪಿ.ಯು ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಯ್ದ ಉತ್ತಮ ಶಿಕ್ಷಕರುಗಳನ್ನು ಸನ್ಮಾನಿಸುವ “ಗುರು ವಂದನಾ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶಿವಮೊಗ್ಗದ ಪೋದಾರ್ ನ ಶ್ರೀ ಸುಕೇಶ್ ಸೇರಿಗಾರ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಸ್ವಾಮಿ ವಿವೇಕಾನಂದರ ಪರಿಕಲ್ಪನೆಯ ಜ್ಞಾನಗಳಿಕೆಯೇ ಶಿಕ್ಷಣದ ಉದ್ದೇಶ ಎಂಬುದನ್ನು ತಿಳಿಸುತ್ತಾ ಶಿಕ್ಷಣವು ಪರಿಪೂರ್ಣತೆಯೆಡೆಗೆ ಕೊಂಡೊಯ್ಯಬೇಕು. ಈಗ ಚೀನಾವು ಬಾಂಬ್ ಹಾಕುವುದರ ಬದಲಿಗೆ ಹೊಸ ಹೊಸ ಗೇಮಿಂಗ್ ಆಪ್ ಗಳ ಮೂಲಕ ಲಕ್ಷಾಂತರ ಯುವಕರನ್ನು ಹಾಳು ಮಾಡುತ್ತಿದ್ದಾರೆ. ಅದರ ಗೀಳಿಗೆ ಬೀಳದೆ ಉತ್ತಮ ಶಿಕ್ಷಣ ಪಡೆಯಬೇಕೆಂದು ಹೇಳಿದರು. ಮೆಕಾಲೆ ಶಿಕ್ಷಣ ಪದ್ಧತಿಗಿಂತಲೂ ಭಾರತೀಯ ಶಿಕ್ಷಣ ಪದ್ಧತಿಯೇ ಹೆಚ್ಚು ಸೂಕ್ತ ಎಂದರು.
ಅನನ್ಯ ವಿದ್ಯಾಪೀಠದ ಆರ್ ಗಿರೀಶ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ತಾಯಿ ಎಂದರೆ ಸತ್ಯ, ತಂದೆ ಎಂದರೆ ನಂಬಿಕೆ, ಗುರು ಎಂದರೆ ವಾಸ್ತವ. ಹಾಗಾಗಿ ಬದುಕಿನಲ್ಲಿ ತಾಯಿ, ತಂದೆ, ಗುರುಗಳನ್ನು ಗೌರವಿಸಬೇಕೆ ಹೊರತು ಅವರನ್ನು ಮೀರಿ ನಾನೇ ಶ್ರೇಷ್ಠ ಎಂಬ ಅಹಂಕಾರ ಬೆಳೆದಲ್ಲಿ ಕಲಿಕೆ ಮತ್ತು ಏಳ್ಗೆ ಕುಂಠಿತವಾಗುತ್ತದೆ. ಆದ್ದರಿಂದ ವಿನಯತೆಯನ್ನು ಬೆಳೆಸಿಕೊಳ್ಳುವುದೇ ಶಿಕ್ಷಣ ಅದನ್ನು ಪಡೆಯಿರಿ ಎಂದರು.
ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶ್ರೀಮತಿ ವಿಜಯಲಕ್ಷ್ಮಿ ಡಿ. ಕೆ ಅವರು ಸನ್ಮಾನ ಸ್ವೀಕರಿಸಿ ಮಕ್ಕಳ ಉತ್ತಮ ಕಲಿಕೆಗೆ ಶಿಕ್ಷಕ ಅಗತ್ಯ ಎಂದು ಹೇಳುತ್ತಾ ಗುರಿ ತೋರುವ ಗುರುವೇ ಶ್ರೇಷ್ಠ. ಅಲ್ಲದೇ ಮುಂದಿನ ವೃತ್ತಿಪರ ಶಿಕ್ಷಣದ ಕೋರ್ಸ್ಗಳನ್ನು ನಿಮ್ಮ ಆಸಕ್ತಿಗೆ ಅನುಗುಣವಾಗಿ ಆಯ್ದುಕೊಳ್ಳಿ. ಏಕೆಂದರೆ ಬದುಕಿನುದ್ದಕ್ಕೂ ಸಾಗಬೇಕಾಗಿರುವುದು ಅದರ ಜೊತೆಗೆ ಆದ್ದರಿಂದ ಆಯ್ಕೆ ಸರಿಯಾಗಿರಲಿ ಎಂದರು.
Teacher’s Day ನಿಸರಾಣಿಯ ವಿ. ಎಸ್. ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಟಿ. ಎಂ. ಅವರು ಸನ್ಮಾನ ಸ್ವೀಕರಿಸಿ ಮಕ್ಕಳು ಸಮಯ ಮಹತ್ವ ಅರಿತು ಅದನ್ನು ವ್ಯರ್ಥ ಮಾಡದೇ ಕಲಿಯಬೇಕೆಂದು ತಿಳಿಸಿದರು.
ಹಾಗೆಯೇ ಕಾರೇಹಳ್ಳಿಯ ಬಿ. ಜಿ. ಎಸ್ ಪ್ರೌಢಶಾಲೆ ಶ್ರೀವೀರರಾಜೇಂದ್ರ ಸ್ವಾಮಿ ಎ. ಎಂ. ಹಾಗೂ ದೊಡ್ಡೇರಿಯ ಜ್ಞಾನವಾಹಿನಿ ಪ್ರೌಢಶಾಲೆಯ ಶ್ರೀ ಅಣ್ಣಪ್ಪ ಕೆ. ಎಂ. ಇವರುಗಳನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜ್ಞಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಾನ್ಯ ಕೆ. ಎಸ್. ಈಶ್ವರಪ್ಪನವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಪ್ರೊ ಹೆಚ್. ಆನಂದ್ ಹಾಗೂ ಕಾರ್ಯದರ್ಶಿಗಳೂ ಹಾಗೂ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಬಿ. ಎನ್. ವಿಶ್ವನಾಥಯ್ಯನವರು ಉಪಸ್ಥಿತರಿದ್ದರು.
ಶ್ರೀಮತಿ ಜ್ಞಾನಶ್ರೀ ಸ್ವಾಗತಿಸಿ, ಶ್ರೀಅರ್ಜುನ್ ವಂದಿಸಿದರು. ಡಾ. ಮೈತ್ರೇಯಿ ಕಾರ್ಯಕ್ರಮ ನಿರೂಪಿಸಿದರು.
Rotary Club Shivamogga ಉಚಿತ ಆರೋಗ್ಯ ತಪಾಸಾಣಾ ಶಿಬಿರಗಳನ್ನ ಮುಂದುವರೆಸಲಾಗುವುದು- ಕಿರಣ್ ಕುಮಾರ್
Rotary Club Shivamogga ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿದೆ. ಆರೋಗ್ಯವೇ ಭಾಗ್ಯ, ಆರೋಗ್ಯವೇ ಸಂಪತ್ತು, ಆರೋಗ್ಯವೇ ನಿಮ್ಮ ಅಮೂಲ್ಯ ಆಸ್ತಿ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಎಫ್ ಪಿ ಏ ಐ ಶಿವಮೊಗ್ಗ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮವನ್ನು ಹಕ್ಕಿಪಿಕ್ಕಿ ಕ್ಯಾಂಪ್ (ಹಸೂಡಿ) ನಲ್ಲಿ ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೈಹಿಕ, ಮಾನಸಿಕ ಮತ್ತು ಸಾಮಾಜಿಕ ನೆಮ್ಮದಿಯ ಸ್ಥಿತಿ ಆರೋಗ್ಯ. ಹಾಗೆ ಇದೇ ರೀತಿ ಇನ್ನು ಹೆಚ್ಚು ಹೆಚ್ಚು ಉಚಿತ ಆರೋಗ್ಯ ತಪಾಸಣೆಯ ಶಿಬಿರಗಳನ್ನು ಎಫ್ ಪಿ ಎ ಐ ಶಿವಮೊಗ್ಗ ಶಾಖೆ ಇವರೊಂದಿಗೆ ಇನ್ನು ಮುಂದೆಯೂ ಮಾಡಿಲಿದ್ದೇವೆ ಎಂದು ತಿಳಿಸಿದರು.
ಈ ವೇಳೆ ಎಫ್ ಪಿ ಎ ಐ ಸಿಬ್ಬಂದಿ ಗಳಾದ ಸತೀಶ್ ಮತ್ತು ತೇಜಸ್ವಿನಿ ಮತ್ತು ಹೆಡ್ನರ್ಸ್ ಸರಸ್ವತಿ ಹಾಗೂ ಆಶಾ ಕಾರ್ಯಕರ್ತೆ ಗೀತಾ ರವರಿಗೆ ಕೃತಜ್ಞತೆ ತಿಳಿಸಿದರು. ಹಾಗೆಯೇ ವಿಶೇಷವಾಗಿ ಈ ದಿನದ ಕಾರ್ಯಕ್ರಮಕ್ಕೆ ಉಚಿತವಾಗಿ ಔಷಧ ನೀಡಿದ ಸಂಜಯ್ (ಫ್ರಾನ್ಕೊ ಇಂಡಿಯನ್ ಫಾರ್ಮ) ರವರಿಗೂ ಮತ್ತು ರೋಟರಿಯನ್ ಬಸವರಾಜ್ ಬಿ ರವರಿಗೂ ಕೃತಜ್ಞತೆಗಳನ್ನು ತಿಳಿಸಿದರು.
Rotary Club Shivamogga ಎಫ್ ಪಿ ಎ ಐ ನ ಸತೀಶ್ ಮಾತನಾಡಿ ಆರೋಗ್ಯ ತಪಾಸಣೆ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಮತ್ತು ರೋಟರಿ ಕ್ಲಬ್ ನೊಂದಿಗೆ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷ ತಂದಿದೆ ಇನ್ನು ಹೆಚ್ಚು ಹೆಚ್ಚು ಕಾರ್ಯಕ್ರಮ ಅವರ ಜೊತೆ ಮಾಡುತ್ತೇವೆ ಎಂದ ಅವರು, ರೋಟರಿ ಸಂಸ್ಥೆ ಪಲ್ಸ್ ಪೋಲಿಯೋ ನಿರ್ಮೂಲನೆಗೆ ಪ್ರಮುಖ ಕಾರಣ ಎಂದು ತಿಳಿಸಿದರು.
ಶಿಬಿರದಲ್ಲಿ 200 ಕ್ಕೂ ಹೆಚ್ಚು ಜನ ಪಾಲ್ಗೊಂಡು ಶಿಬಿರವನ್ನು ಸದುಪಯೋಗ ಪಡೆದುಕೊಂಡರು.
ವಿಶೇಷವಾಗಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಲೋಲ್ ಕಿ ಬಾಯಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಈಶ್ವರ್, ರವಿ ಕೋಟೊಜಿ, ರಮೇಶ್, ಧರ್ಮೇಂದ್ರ ಸಿಂಗ್, ಬಲರಾಮ್, ಸಂತೋಷ್, ರಾಜಶ್ರೀ ಬಸವರಾಜ್, ದೀಪ ಜಯಶೀಲ ಶೆಟ್ಟಿ ಹಾಗೂ ಆನ್ಸ್ ಕ್ಲಬ್ ನ ಅಧ್ಯಕ್ಷರಾದ ಗೀತಾ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
National College of Education ಇಂದು ಸಿನಿಮಾಗಳು ಕುಟುಂಬ ಸಹಿತ ವೀಕ್ಷಿಸಲು ಮುಜುಗರವಾಗುವ ಸಂದರ್ಭ ಸೃಷ್ಟಿ ಮಾಡಿವೆ- ಜಿ.ಎಸ್.ನಾರಾಯಣರಾವ್
National College of Education ಹೊಸ ತಲೆಮಾರಿಗೆ ಅವಶ್ಯಕತೆಯಿರುವ ಸತ್ವಯುತ ಸಿನಿಮಾಗಳು ರೂಪಗೊಳ್ಳಲು ಇತಿಹಾಸದ ಸಿನಿಮಾಗಳು ಆಶಾಕಿರಣವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ, ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಿನಿಮಾ ವಸ್ತು ನೋಡುವ ಬಗೆ ಮತ್ತು ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಮಾಜಕ್ಕೆ ಶಿಕ್ಷಣ ನೀಡುತ್ತಿದ್ದ ಅಂದಿನ ಸಿನಿಮಾಗಳು ಸದಾ ಸ್ಮರಣೀಯ. ತುಂಬು ಕುಟುಂಬದ ಅವಶ್ಯಕತೆ, ವ್ಯಕ್ತಿತ್ವ ವಿಕಸನ, ಸಮಾಜಕ್ಕೆ ಕೊಡುಗೆ ನೀಡುವಂತಹ ಪ್ರೇರಣೆ ನೀಡುತ್ತಿದ್ದ ಸಿನಿಮಾಗಳು ಇತಿಹಾಸದ ಪುಟಗಳಲ್ಲಿ ಸೇರಿ ಹೋಗಿದೆ. ಇಂದು ಕುಟುಂಬ ಸಹಿತ ಸಿನಿಮಾಗಳು ನೋಡಲು ಮುಜುಗರವಾಗುವ ಸಂದರ್ಭ ಸೃಷ್ಟಿಯಾಗುತ್ತಿದೆ.
ಕನ್ನಡ ಚಿತ್ರರಂಗಕ್ಕೆ ಅದ್ಭುತ ಕಲಾತ್ಮಕ ಸಿನಿಮಾಗಳನ್ನು ನೀಡುತ್ತ ಮೇರು ಸದೃಶ್ಯದ ವ್ಯಕ್ತಿತ್ವವಾಗಿ ರೂಪಗೊಂಡವರು ಗಿರೀಶ್ ಕಾಸರವಳ್ಳಿ. ಸತ್ವಯುತ ಸಿನಿಮಾಗಳು ರೂಪಿಸುವ ಅವಶ್ಯಕತೆಗಳಿಗೆ ನಮ್ಮ ಪೂರ್ವಿಕ ಸಿನಿಮಾ ನಿರ್ದೇಶಕರು ಕಲಾವಿದರು ಆಶಾಕಿರಣವಾಗಿ ನಿಲ್ಲಲಿದ್ದಾರೆ.
ಇಂದು ಬಂದು ನಾಳೆ ಮಾಯವಾಗುವ ಸಿನಿಮಾಗಳೆ ಹೆಚ್ಚಾಗುತ್ತಿರುವ ಈ ಹೊತ್ತಿನಲ್ಲಿ, ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕಿದೆ. ಯಾರನ್ನು ನಮ್ಮ ನಾಯಕರನ್ನಾಗಿ, ಅಭಿಮಾನಿಯಾಗಿ ಹಿಂಬಾಲಿಸಬೇಕು ಎಂಬ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಯಕ್ಷಗಾನದ ಮೂಲಕ ಸಾಮಾಜಿಕ ಕ್ರಾಂತಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿತ್ತು. ಅಂತಹ ಕಲೆಗಳನ್ನು ಉಳಿಸಿಕೊಳ್ಳುವ ಸವಾಲು ಎದುರಾಗುತ್ತಿರುವುದು ವಿಷಾದನೀಯ.
ಸಿನಿಮಾ ಟಾಕೀಸ್ ಮಾಯವಾಗಿ ದೊಡ್ಡ ಮಾಲ್‌ಗಳಾಗಿವೆ. ಇತಿಹಾಸವನ್ನು ಅರಿಯದಾತ ಎಂದಿಗೂ ಭವಿಷ್ಯವನ್ನು ರೂಪಿಸಿಕೊಳ್ಳಲಾರ. ಕಲಿಯುವ ವಿದ್ಯೆಯಲ್ಲಿ ಏರಿಳಿತವಾದರು ಪರವಾಗಿಲ್ಲ ಸಂಸ್ಕಾರ ಕಲಿಸುವಲ್ಲಿ ಏರಿಳಿತವಾಗದಿರಲಿ. ವಿದ್ಯೆ ಕಲಿತವರು ಭ್ರಷ್ಟರಾಗಬಹುದು, ಅದರೇ ಸಂಸ್ಕಾರ ಕಲಿತವರು ಎಂದೂ ದಾರಿ ತಪ್ಪುವುದಿಲ್ಲ ಎಂದು ಹೇಳಿದರು. ಅಂತಹ ಸಂಸ್ಕಾರ ನೀಡುವ ಸಿನಿಮಾಗಳನ್ನು ಅಧ್ಯಯನ ನಡೆಸಿ ಎಂದು ಹೇಳಿದರು.
National College of Education ಸಿನಿಮೊಗೆ ಶಿವಮೊಗ್ಗ ಚಿತ್ರಸಮಾಜ ಸಂಚಾಲಕ ಡಾ.ಹೆಚ್.ಎಸ್.ನಾಗಭೂಷಣ್ ಮಾತನಾಡಿ, ಸಿನಿಮಾ ಶೈಕ್ಷಣಿಕ ಚೌಕಟ್ಟಿಗೆ ಬಂದಿದೆ. ಸಿನಿಮಾ ನೋಡುವ ಆನಂದಿಸುವ ಹೊರತಾಗಿ ಅಧ್ಯಯನ ನಡೆಸಬೇಕಾದ ಅವಶ್ಯಕತೆಯಿದೆ. ಅನೇಕ ಜನಪ್ರಿಯ ಸಿನಿಮಾಗಳು ಅಧ್ಯಯನ ಮತ್ತು ವಿಶ್ಲೇಷಣೆ ನಡೆಯುವುದೇ ಇಲ್ಲ. ತಂತ್ರಜ್ಞಾನದ ಒಳಗಿನ ಆತ್ಮದ ಜೊತೆಗೆ ಒಡನಾಟ ಮಾಡುತ್ತ ಸಿನಿಮಾಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜ ಸಂಚಾಲಕ ವೈದ್ಯನಾಥ.ಹೆಚ್.ಯು, ಅಂಬೆಗಾಲು ಸಂಸ್ಥೆ ನಿರ್ದೇಶಕ
ಜಿ. ವಿಜಯಕುಮಾರ್. ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಾಲಿನಿ, ಅಲ್ ಮೊಹಮದ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸೋಮಶೇಖರ್, ಕುವೆಂಪು ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಜಿ.ಮಧು, ಸಂಯೋಜಕಿ ಡಾ.ಈ.ಲಾವಣ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಗಿರೀಶ್ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನ್ನೇರಿ ಮತ್ತು ಕೂರ್ಮಾವತಾರ ಚಲನಚಿತ್ರಗಳು ಪ್ರದರ್ಶನಗೊಂಡಿತು. ಶನಿವಾರ ಈ ಸಿನಿಮಾದ ಕುರಿತು ಗಿರೀಶ್ ಕಾಸರವಳ್ಳಿ ಅವರೊಂದಿಗೆ ಸಂವಾದ ನಡೆಯಲಿದೆ.
Rotary Organization ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಜೀವನಮೌಲ್ಯ ಕಲಿಸಬೇಕು-ಎಂ.ಆರ್.ಬಸವರಾಜು
Rotary Organization ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಲು ಗುರುಗಳ ಮಾರ್ಗದರ್ಶನ ಅತ್ಯಂತ ಅವಶ್ಯ. ಗುರುಗಳ ಮಾರ್ಗದರ್ಶನದಿಂದ ಯಶಸ್ಸು ಗಳಿಸಲು ಸಾಧ್ಯ ಎಂದು ಶಿವಮೊಗ್ಗ ರೋಟರಿ ರಿವರ್‌ಸೈಡ್ ಅಧ್ಯಕ್ಷ ಎಂ.ಆರ್.ಬಸವರಾಜು ಹೇಳಿದರು.
ಕೃಷಿ ನಗರದಲ್ಲಿ ಶಿವಮೊಗ್ಗ ರೋಟರಿ ರಿವರ್‌ಸೈಡ್ ಸಂಸ್ಥೆಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸನ್ಮಾನಿಸಿ ಮಾತನಾಡಿ, ಶಾಲಾ ಕಾಲೇಜಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಕ್ತಿ ಸಾಮಾರ್ಥ್ಯ ಗುರುತಿಸಿ ಅಗತ್ಯ ಪ್ರೋತ್ಸಾಹ ನೀಡುತ್ತಾರೆ. ಸಲಹೆಗಳನ್ನು ಸರಿಯಾದ ಅರ್ಥ ಮಾಡಿಕೊಂಡು ಹಂತ ಹಂತವಾಗಿ ಪ್ರಗತಿ ಸಾಧಿಸುವುದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಆಗಿರುತ್ತದೆ. ಪಾಲಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಜೀವನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ರೋಟರಿ ಸಂಸ್ಥೆ ವತಿಯಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಪ್ರಮುಖ ದಿನಾಚರಣೆಗಳಲ್ಲಿ ಸಾಧಕರಿಗೆ ವಿಶೇಷ ಗೌರವ ನೀಡಿ ಅಭಿನಂದಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
Rotary Organization ಮೇರಿ ಇಮ್ಯಾಕ್ಯೂಲೇಟ್ ಶಾಲೆ ಶಿಕ್ಷಕಿ ನಾಗರತ್ನ ಚಂದ್ರಶೇಖರಯ್ಯ ಹಾಗೂ ಅಬ್ಬಲಗೆರೆ ಶಾಲೆಯ ಶಿಕ್ಷಕಿ ಆಶಾ ಮಂಜುನಾಥ್ ಅವರಿಗೆ ಸನ್ಮಾನಿಸಲಾಯಿತು.
ಶಿವಮೊಗ್ಗ ರೋಟರಿ ರಿವರ್‌ಸೈಡ್ ಕಾರ್ಯದರ್ಶಿ ಸಿ.ಬಿ.ವಿನಯ್, ಪ್ರಮುಖರಾದ ಎಂ.ಜಗನ್ನಾಥ್, ಎಂ.ಪಿ.ಆನಂದ ಮೂರ್ತಿ, ಪಿ.ರಾಜೇಶ್, ಸಿದ್ದಲಿಂಗಯ್ಯ, ರಾಜೇಶ್ ಗಾಯಕ್‌ವಾಡ್, ಎಸ್.ಪಿ.ಶಂಕರ್, ಸಿ.ಎನ್.ಮಲ್ಲೇಶ್, ನವಲೆ ಈಶ್ವರಪ್ಪ, ರಾಜೇಂದ್ರಕುಮಾರ್, ಬಿ.ಜಿ.ಧನರಾಜ್, ಆರ್.ದೇವೆಂದ್ರಪ್ಪ, ಶಿವಮೊಗ್ಗ ರೋಟರಿ ರಿವರ್‌ಸೈಡ್ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
B.Y.Raghavendra ಜಿಲ್ಲೆಯಲ್ಲಿ ಅನಗತ್ಯ ಟೋಲ್, ನೂತನ ಟವರ್ ಅಳವಡಿಕೆ, ಹೆದ್ದಾರಿ ಕಾಮಗಾರಿ ಬಗ್ಗೆ ಸಭೆ ನಡೆಸಿದ ಸಂಸದ ರಾಘವೇಂದ್ರ
B.Y.Raghavendra ಶಿವಮೊಗ್ಗದ ನಿರೀಕ್ಷಣಾ ಮಂದಿರದಲ್ಲಿ ಸಂಸದ ರಾಘವೇಂದ್ರ ಅವರು ಅಧಿಕಾರಿಗಳ ಸಭೆ ಕರೆದು ಈ ಕೆಳಕಂಡ ಅಂಶಗಳ ಬಗ್ಗೆ ಚರ್ಚಿಸಿದರು..
- ಶಿವಮೊಗ್ಗ-ಶಿಕಾರಿಪುರ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಶ್ರೀ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನಗತ್ಯ ಟೋಲ್ ಅಳವಡಿಸಿ ಕರ ವಸೂಲಿ ಮಾಡುವ ಮೂಲಕ ನಿತ್ಯ ಸಂಚರಿಸುವ ಸಾವಿರಾರು ವಾಹನ ಸವಾರರಿಗೆ ಆಗುತ್ತಿರುವ ತೊಂದರೆಗಳ ಕುರಿತು ಚರ್ಚಿಸಲಾಯಿತು.
- ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ನಗರ ಹೋಬಳಿ ವ್ಯಾಪ್ತಿಯಲ್ಲಿ ಬಿ.ಎಸ್.ಎನ್.ಎಲ್ ನೂತನ ಟವರ್ ಅಳವಡಿಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಾರ್ವಜನಿಕರಿಂದ ಮನವಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
- ಲೋಕಸಭಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಅನೇಕ ಕಾಮಗಾರಿಗಳಿಗೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಕಾಮಗಾರಿಯ ವೇಗಕ್ಕೆ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಲಾಯಿತು.
B.Y.Raghavendra ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕೆ.ಆರ್.ಡಿ.ಸಿ.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.
CM Siddaramaiah ನಾಗಮಂಗಲ ಗಣೇಶ ಮೆರವಣಿಗೆ ಗಲಭೆ: ಸಿಎಂ ಹೇಳಿದ್ದೇನು
CM Siddaramaiah ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ.
ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
CM Siddaramaiah ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಮ್ಮ ಮಾನವೀಯ ಕಾಳಜಿ ವ್ಯಕ್ತಪಡಿಸಿದ್ದಾರೆ
B.K. Sangamesh ಭದ್ರಾವತಿ ಎಂಪಿಎಂ ಪುನಾರಂಭದ ಬಗ್ಗೆ ಸೀಎಂ ಭೇಟಿ ಮಾಡಿದ ಶಾಸಕ ಸಂಗಮೇಶ್ವರ್
B.K. Sangamesh ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರು ಮೈಸೂರು ಪೇಪರ್ ಮಿಲ್ಸ್ ( ಎಂಪಿಎಂ ) ಕಾರ್ಖಾನೆಯ ಪುನರುಜ್ಜೀವನ ಮತ್ತು ಸಿದ್ಧಾರೂಢನಗರ ಸೇತುವೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.
International Democracy Day ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ವಿಶೇಷವಾಗಿ ಭದ್ರಾವತಿ ತಾಲ್ಲೂಕಿನಲ್ಲಿ ಮಾನವ ಸರಪಳಿ ಕಾರ್ಯಕ್ರಮ
International Democracy Day ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸೆ. 15 ರಂದು ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಿಂದ ಕೆಂಪೇಗೌಡನಗರ- ಬಾರಂದೂರು – ಮೊಸರಳ್ಳಿ – ಸುಣ್ಣದಹಳ್ಳಿ – ಮಾರುತಿನಗರ – ಭದ್ರಾವತಿ ಬಸ್ ನಿಲ್ದಾಣ – ಕಡದಕಟ್ಟೆ – ಜೇಡಿಕಟ್ಟೆ – ಮಾಚೇನಹಳ್ಳಿ ಕೆ.ಎಂ.ಎಫ್ ಡೈರಿಯ ಮೂಲಕ ಶಿವಮೊಗ್ಗ ತಾಲೂಕನ್ನು ತಲುಪಲಿದೆ.
International Democracy Day ಸಾರ್ವಜನಿಕರು ಸೆ. 15 ರಂದು ಬೆಳಗ್ಗೆ 9.00ಕ್ಕೆ ಈ ನಿಗದಿತ ಮಾರ್ಗದಲ್ಲಿ ಹಾಜರಿದ್ದು, ಮಾನವ ಸರಪಳಿ ರಚನೆಗೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿರುತ್ತಾರೆ.
