Karnataka State Department of Archaeology ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ”.
ಶಿರ ಛೇದನ ಸ್ಮಾರಕ ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ, ಇವನಿಗೆ ಹಿಂಭಾಗದಲ್ಲಿ ಸೇವಕ ಛತ್ರಿಯನ್ನು ಹಿಡಿದಿದ್ದಾನೆ, ಆದ್ದರಿಂದ ಇವನನ್ನು ರಾಜ ಪ್ರಮುಖನೆಂದು ತಿಳಿಯಬಹುದಾಗಿದೆ. ಹಿಂಭಾಗದಲ್ಲಿ ಮಹಿಳೆಯು ಕತ್ತಿಯನ್ನು ಹಿಡಿದು ನಿಂತಿದ್ದಾಳೆ.
ಎರಡನೇ ಪಟ್ಟಕೆಯಲ್ಲಿ ಗರುಡ ಹೊಂದತಹ ವೀರನು ವೀರಾಸನದಲ್ಲಿ ನಿಂತಿದ್ದು ರುಂಡವನ್ನು ಕತ್ತರಿಸಲಾಗಿದ್ದು, ಬಲಗೈಯಲ್ಲಿ ಕತ್ತಿಯನ್ನು ಹಿಡಿದು ಮುಂಡದ ಮೇಲೆ ಹಲಗೆಯ ರೀತಿಯನ್ನು ಹೊತ್ತುಕೊಂಡಿದ್ದು ಇದನ್ನು ಕೈಯಲ್ಲಿ ಹಿಡಿದಿರುವಂತಿದೆ. ಈ ಶಿರ ಛೇದನ ಶಿಲ್ಪದ ಪಕ್ಕದಲ್ಲಿ ಮಹಿಳೆಯು ಶಿರ ಛೇದನವಾದ ರುಂಡವನ್ನು ಕೈಯಲ್ಲಿ ಹಿಡಿದು ನಿಂತಿದ್ದಾಳೆ.
ಮೂರನೇ ಪಟ್ಟಿಕೆಯಲ್ಲಿ ಪಟ್ಟಿಕೆಯ ಶಿಲ್ಪಗಳ ಬದಲು ಲಿಂಗದ ರೀತಿಯಲ್ಲಿ ಇರುವ ಕಂಬವಿದ್ದು ಇದರಲ್ಲಿ ಲಿಂಗದ ಉಬ್ಬು ಶಿಲ್ಪವಿದೆ. ಈ ಲಿಂಗದ/ಕAಬದ ಮೇಲೆ ಸಮತಟ್ಟಾಗಿದೆ.
ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪದ ಮಹತ್ವ: ಆತ್ಮಬಲಿದಾನವು ಹಿಂದೂಗಳ ದೃಷ್ಟಿಯಲ್ಲಿ ಮಹತ್ವಪೂರ್ಣವಾಗಿದ್ದು, ಆತ್ಮ ಬಲಿದಾನ ಮಾಡಿಕೊಳ್ಳಲು ಶುಭ ತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ(ದೇಹತ್ಯಾಗ) ಎನ್ನಬಹುದಾಗಿದೆ.
ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುವಂತಹದ್ದು.
Karnataka State Department of Archaeology ಈ ಆತ್ಮ ಬಲಿದಾನದಲ್ಲಿ ಹಲವು ಬಗೆಗಳಿವೆ. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಇವರು ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಕಡಿಮೆಯಿರುವುದಿಲ್ಲ.
ಆತ್ಮ ಬಲಿದಾನದಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ಧ್ವಪತನದ ಬಗೆಗಳಿವೆ. ಚಿತಾ ಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು, ಜಲಪ್ರವೇಶ ಎಂದರೆ ಗಂಗೆ, ವಾರಾಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಹಾಗೂ ಊರ್ಧ್ವ ಬಲಿದಾನವೆಂದರೆ ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು.
ಈ ಆತ್ಮಬಲಿದಾನದಲ್ಲಿ ಸಹಗಮನ ಪದ್ಧತಿ, ನಿಸಿಧಿ ಶಾಸನ ಶಿಲ್ಪಗಳು, ಸೂರ್ಯಗ್ರಹಣ ಶಾಸನ ಶಿಲ್ಪಗಳು ಇದರಲ್ಲಿ ಉರಿ ಉಯ್ಯಲೆ ಶಿಲ್ಪಗಳು, ಶೂಲ ಬಲಿ, ಶಿರ ಛೇದನ(ಬಲಿ) ಶಿಲ್ಪ, ಸಿಡಿದಲೆ ಶಾಸನ ಶಿಲ್ಪಗಳು, ಇರಿತ ಬಲಿ, ಬೆಂಕಿಬಲಿ ಶಿಲ್ಪ, ಕಿಳ್ಗುಂಟೆ, ಗರುಡ ಪದ್ಧತಿ ಹಾಗೂ ವಿಶೇಷವಾಗಿ ಚಾಟಿ ವಿಟನಿಂದ ಆತ್ಮಬಲಿದಾನ ಮಾಡಿಕೊಂಡಿದ್ದು, ಇವನ ಜೊತೆಯಲ್ಲಿ ಇವನ ಹೆಂಡತಿಯು ಸಹಗಮನ ಮಾಡಿಕೊಂಡಿರುವ ಆತ್ಮಬಲಿದಾನದ ಸ್ಮಾರಕ ಶಿಲ್ಪಮೊದಲಾದ ಆತ್ಮ ಬಲಿದಾನದ ಸ್ಮಾರಕ ಶಾಸನ ಶಿಲ್ಪಗಳು ಕರ್ನಾಟಕಲ್ಲಿ ಕಂಡುಬರುತ್ತವೆ.
ಈ ಸ್ಮಾರಕ ಶಿಲ್ಪವು ಇದುವರೆಗೂ ದೊರೆತಿರುವ ಶಿರ ಛೇದನ ಶಿಲ್ಪಗಳಲ್ಲಿ ತುಂಬಾ ಅಪರೂಪದ್ದು, ಈ ಸ್ಮಾರಕ ಶಿಲ್ಪವನ್ನು ಗರುಡ ಸ್ತಂಭವೆAದು ಕರೆಯಬಹುದು. ಕರ್ನಾಟಕದಲ್ಲಿ ಇದುವರೆಗೂ ಗರುಡರಾಗಿರುವಂತಹ ಎರಡು ಸ್ತಂಭಗಳು ಹಳೇಬೀಡು ಮತ್ತು ಅಗ್ರಹಾರ ಬಾಚಿಹಳ್ಳಿಯಲ್ಲಿ ಮಾತ್ರ ಕಂಡುಬAದಿವೆ. ಇವು ಹೊಯ್ಸಳರ ಕಾಲದ್ದಾಗಿವೆ.
ಆರಗದಲ್ಲಿ ದೊರೆತಿರುವ ಈ ಶಿರ ಛೇದನ ಸ್ಮಾರಕ ಶಿಲ್ಪವು ಶಾಸನರಹಿತವಾಗಿದ್ದು, ಮೇಲ್ಬಾಗದಲ್ಲಿ ಲಿಂಗದ ಆಕೃತಿಯನ್ನು ಹೊಂದಿದ್ದರೂ ಹಳೇಬೀಡಿನಲ್ಲಿ ಕಂಡುಬರುವ ಸ್ತಂಭದ ರೀತಿಯಲ್ಲಿದೆ. ಕೆಳಭಾಗದಲ್ಲಿ ಚೌಕಾಕರಾವಾಗಿದ್ದು ಶಿಲ್ಪಗಳಿಂದ ಕೂಡಿದೆ.
ಲಿಂಗದ ರೀತಿಯ ಸ್ತಂಬದ ಮೇಲ್ಬಾಗದಲ್ಲಿ ಚಪ್ಪಟೆಯಾಗಿದೆ. ಆದ್ದರಿಂದ ಇದನ್ನು ಶಿವಲಿಂಗ ಎಂದು ಹೇಳುವುದು ಕಷ್ಟವಾಗಿದೆ. ಈ ಭಾಗವು ಹಳೆಬೀಡಿನ ಗರುಡಸ್ತಂಭದ ವೃತ್ತಾಕಾರದ ರೀತಿಯಲ್ಲಿದೆ. ಆರಗ ಶಿಲ್ಪದ ವೃತ್ತಾಕಾರದ ಸ್ತಂಭದ ಬುಡದಲ್ಲಿ ಯಾವುದೇ ಚಿಕಣಿ ಶಿಲ್ಪಗಳಿಲ್ಲ ಆದರೆ ಲಿಂಗದ ಉಬ್ಬು ಶಿಲ್ಪವನ್ನು ಕಂಡರಿಸಲಾಗಿದೆ.
ಕೆಳಭಾಗದ ಚೌಕಾಕಾರದ ಭಾಗದಲ್ಲಿ ಕೈಯಲ್ಲಿ ಹಿಡಿದಿರುವ ರುಂಡವನ್ನು ಮಹಿಳೆಯು ದೇವರಿಗೆ ಅರ್ಪಿಸಿ ಸತಿ ಹೊಗಿರಬಹುದು. ಗರುಡ ಹೋಗಿರುವಂತವರು ಶೈವರಾದಕಾರಾಗಿದ್ದು ರುಂಡವನ್ನು ಉಬ್ಬು ಶಿಲ್ಪದ ಲಿಂಗಕ್ಕೆ ಅರ್ಪಿಸಿದ್ದಾರೆ.
ಹೊಯ್ಸಳರ ಕಾಲದವರೆಗೆ ಇದ್ದಂತಹ ಗರುಡ ಪದ್ಧತಿ ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರೆಯಿತು ಎಂದು ಈ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಿಂದ ತಿಳಿಯಬಹುದಾಗಿದೆ. ಹಳೇಬೀಡು ಮತ್ತು ಆರಗದ ಸ್ಥಂಬಗಳನ್ನು ಗಮನಿಸಿದಾಗ ಒಟ್ಟಾರೆಯಾಗಿ ಗರುಡ ಪದ್ಧತಿಯಲ್ಲಿ ಇದೇ ರೀತಿಯ ಸ್ತಂಭಳನ್ನು ಸ್ಥಾಪಿಸಿತಿದ್ದಿರಬೇಕು ಎಂಬುದನ್ನು ಊಹಿಸಬಹುದಾಗಿದೆ.
ಈ ಗರುಡ ಪದ್ಧತಿಯ ಸ್ಮಾರಕ ಶಿಲ್ಪದ ಬಗ್ಗೆ ಮಾಹಿತಿಯನ್ನು ಒದಗಿಸಿದ ಡಾ.ದೇವರಾಜಸ್ವಾಮಿ, ಡಾ. ಜಗದೀಶ, ಟಿ.ಎಂ.ಕೇಶವ, ಡಾ.ಗಂಗಾAಬಿಕೆ ಗೋವರ್ಧನ, ರಮೇಶ ಹಿರೇಜಂಬೂರು, ಶಶಿಧರ ಹಾಗೂ ಮೋಹನ್ ಇವರುಗಳಿಗೆ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಬಳ್ಳಾರಿ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Karnataka State Department of Archaeology ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ
Friends Centre ಮಕ್ಕಳಿಗೆ ಜೀವನ ಮೌಲ್ಯ ಕಲಿಸುವುದು ಮುಖ್ಯ: ಭಾಗಿರಥಿ
Friends Centre ಮೌಲ್ಯವನ್ನು ಕಡೆಗಣಿಸಿದರೆ ಸಮಾಜ ದುರಂತದತ್ತ ಸಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜದ ಎಲ್ಲ ಭಾಗಿದಾರರು ಸಹ ಮಕ್ಕಳಲ್ಲಿ ಉತ್ತಮ ಮೌಲ್ಯಗಳ ಬೆಳವಣಿಗೆಗಾಗಿ ಶ್ರಮಿಸಬೇಕು ಎಂದು ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪುರಸ್ಕೃತೆ ಭಾಗಿರಥಿ ಹೇಳಿದರು.
ಫ್ರೆಂಡ್ಸ್ ಸೆಂಟರ್ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಟಿವಿ ಹಾಗೂ ಮೊಬೈಲ್ ಮಾಧ್ಯಮಗಳಿಂದ ಮಕ್ಕಳನ್ನು ರಕ್ಷಿಸಬೇಕಾದ ಅನಿವಾರ್ಯತೆ ಇದೆ. ಮಕ್ಕಳಿಗೆ ಜೀವನ ಮೌಲ್ಯಗಳನ್ನು ಕಲಿಸಬೇಕು ಎಂದು ತಿಳಿಸಿದರು.
ಮಕ್ಕಳು ಮನೆಯಲ್ಲಿ ಪಾಲಕರನ್ನು ಅನುಕರಿಸುತ್ತಾರೆ. ಮನೆಯಲ್ಲಿ ವಯಸ್ಕರು ಹಿರಿಯರನ್ನು ಗೌರವಧಾರಗಳಿಂದ ಕಾಣುವಂತೆ ನಮ್ಮ ಸಂಸ್ಕೃತಿ ಹಬ್ಬ ಹರಿದಿನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪೋಷಕರು ಕ್ರಮ ವಹಿಸಬೇಕು. ಶಾಲೆಯಲ್ಲೂ ಸಹ ಸಾಮಾಜಿಕ ಮೌಲ್ಯ ಹಾಗೂ ರಾಷ್ಟ್ರೀಯ ಮೌಲ್ಯಗಳ ಬಗ್ಗೆ ಮಕ್ಕಳು ಅರಿಯುವಂತೆ ಮೌಲ್ಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.
ಸಮಾಜದಲ್ಲಿ ಶೈಕ್ಷಣಿಕ ವ್ಯವಸ್ಥೆ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆ, ಇಲಾಖೆಯ ಜತೆಗೆ ಸಮಾಜದ ಇತರ ಸಂಘ ಸಂಸ್ಥೆಗಳ ಸಹಾಯದ ಅವಶ್ಯಕತೆ ಮತ್ತು ಅಗತ್ಯತೆ, ಸಾಮಾಜಿಕ ಮೌಲ್ಯಗಳು, ವೈಯಕ್ತಿಕ ಮೌಲ್ಯಗಳು, ಕೌಟುಂಬಿಕ ಮೌಲ್ಯಗಳಲ್ಲಿ ಆಗಿರುವ ಸ್ಥಿತ್ಯಂತರಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಧನರಾಜ್, ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ಮಕ್ಕಳ ಕುಟುಂಬ ಸಾಕಷ್ಟು ಕಷ್ಟಕರ ಸ್ಥಿತಿ ಎದುರಿಸುವುದನ್ನು ಕಾಣುತ್ತೇವೆ. ಕಲಿಕಾ ಪರಿಕರಗಳಿಲ್ಲದೆ ಮಕ್ಕಳು ಶಾಲೆಗೆ ಬರುತ್ತಾರೆ. ಅಂತಹ ಮಕ್ಕಳಿಗೆ ಅಗತ್ಯ ಮಾರ್ಗದರ್ಶನ ನೀಡಿ ಸಾಧನೆ ಮಾಡುವಂತೆ ಶಿಕ್ಷಕರು ಪ್ರೇರಣೆ ನೀಡುತ್ತಾರೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದದ್ದು, ದೇಶ ಕಟ್ಟುವ ಕಾಯಕದಲ್ಲಿ ಅವರ ನಿರಂತರ ಶ್ರಮ ಶ್ಲಾಘನೀಯ. ಸಮಾಜದ ಎಲ್ಲರೂ ಸಹ ಶಿಕ್ಷಕರನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿದರು.
Friends Centre 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಎಂ. ಭಾಗೀರಥಿ, ವೀಣಾ, ಶೈಲಾಶ್ರೀ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಅಧ್ಯಕ್ಷೆ ಸ್ವಪ್ನಾ ಬದರಿನಾಥ್ ಸನ್ಮಾನಿಸಿ ಶಿಕ್ಷಕರ ಪರಿಚಯ ಮಾಡಿಕೊಟ್ಟರು.
ಮಲ್ಲಿಕಾರ್ಜುನ್ ಕಾನೂರು, ವಿ.ನಾಗರಾಜ್, ರವೀಂದ್ರನಾಥ್ ಐತಾಳ್, ಮೋಹನ್, ಮಹೇಶ್ವರಪ್ಪ, ರಜಿನಿ ಅಶೋಕ್, ಸುನಂದಾ ವೆಂಕಟೇಶ್, ಫ್ರೆಂಡ್ಸ್ ಸೆಂಟರ್ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯರು, ಮಾಜಿ ಅಧ್ಯಕ್ಷರಾದ ಸುಪ್ರಿಯಾ ಜಗನ್ನಾಥ್ ಬಿಂದು ವಿಜಯಕುಮಾರ್, ರಮೇಶ್ ಪಾಲ್ಗೊಂಡಿದ್ದರು. ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಫೌಜಿಯ ಶರಾವತ್ ಮತ್ತಿತರರು ಪಾಲ್ಗೊಂಡಿದ್ದರು.
Department of Education ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಗಾವಿ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ
Department of Education ಬೆಳಗಾವಿಯ ಸುವರ್ಣಸೌಧದಲ್ಲಿ “ಬೆಳಗಾವಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
“ಸಭೆಯಲ್ಲಿ ಚರ್ಚಿಸಲಾದ ವಿಷಯಗಳು”
♦️ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ ಕುರಿತು.
♦️ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು.
♦️ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸುವ ಕುರಿತು.
♦️ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.
♦️ ಶಿಕ್ಷಕರಿಗೆ ತರಬೇತಿ ನೀಡುವ ಕುರಿತು.
♦️ ಮಕ್ಕಳ ಗೈರು ಹಾಜರಿ ಬಗ್ಗೆ ಗಮನಹರಿಸಿ, ಶಾಲೆಗೆ ಕರೆತರುವ ಕುರಿತು.
♦️ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸುವ ಕುರಿತು.
♦️ ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು.
♦️ ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ಶಾಲಾ ಪ್ರಾರಂಭದ ಅವಧಿಯಲ್ಲಿ ಏಕಕಾಲಕ್ಕೆ ಪೂರೈಸುವ ಕುರಿತು.
♦️ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ರಜಾ ದಿನಗಳಲ್ಲಿ ಕೈಗೊಳ್ಳುವ ಕುರಿತು.
♦️ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯ ಕುರಿತು.
Department of Education ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ಪದವಿಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದರು
Bangalore CCB Police ಲಂಚ ಪಡೆದಿದ್ದ ಕೇಂದ್ರ ನಾಲ್ವರು ಜಿಎಸ್‌ಟಿ ಅಧಿಕಾರಿಗಳ ಬಂಧನ
Bangalore CCB Police ಜಿಎಸ್‌ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಮೊಟ್ಟ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ.
ಜಿಎಸ್‌ಟಿ ಸಂಬಂಧಿತ ಪ್ರಕರಣವೊಂದನ್ನು ಮುಚ್ಚಿಹಾಕಲು 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯ್, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು.
ಕೇಂದ್ರದ ಜಿಎಸ್‌ಟಿ ಅಧಿಕಾರಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿರುವ ಮೊಟ್ಟಮೊದಲ ಪ್ರಕರಣ ಇದಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ.
Bangalore CCB Police ಕೇಸ್ ಮುಚ್ಚಿಹಾಕುವುದಾಗಿ ಜಿಎಸ್‌ಟಿ ಅಧಿಕಾರಿಗಳು ಹಣ ಪಡೆದು ಬಳಿಕ ಪರಾರಿಯಾಗಿದ್ದರು. ಈ ಬಗ್ಗೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಓರ್ವ ಉದ್ಯಮಿ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ, ಜಿಎಸ್‌ಟಿ ವಂಚನೆ ಪತ್ತೆ ದಾಳಿ ರೂಪದಲ್ಲಿ ಅವರು ಭಾರೀ ಅಕ್ರಮ ಕೃತ್ಯವೆಸಗಿದ್ದರು.
ಬೆಂಗಳೂರು ನಗರ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಪಶ್ಚಿಮ ವಿಭಾಗ ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬಂಧಿಸಲಾಗಿದೆ. ಪ್ರಕರಣವನ್ನು ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದರು.
Ganesh Chaturthi ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
Ganesh Chaturthi ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಪ್ಯಾಲಯಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಗಿರೀಶ್ (21) ಎಂದು ಗುರುತಿಸಲಾಗಿದೆ. ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡದಂತೆ ಅಮ್ಮ ಮತ್ತು ಅಣ್ಣ ಬುದ್ದಿಮಾತು ಹೇಳಿದ್ದಾರೆ.
Ganesh Chaturthi ಇದರಿಂದ ನೊಂದ ಗಿರೀಶ್ ಗ್ರಾಮದ ಮುತ್ತರಾಯಸ್ವಾಮಿ ದೇಗುಲದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
High Court ಕೊಡಗಿನ ಮಹಿಳೆಯೊಬ್ಬರ ಬಗ್ಗೆ ಎಲ್ಲಾ ಠಾಣೆಗೂ ಮಾಹಿತಿ ನೀಡಿದ ಹೈಕೋರ್ಟ್
High Court ಕೊಡಗಿನ ಮಹಿಳೆಯೊಬ್ಬಳು ಒಂದು ದಶಕದಲ್ಲಿ ಹತ್ತು ಮಂದಿ ವಿರುದ್ದ ಮೋಸದಿಂದ ಮದುವೆಯಾದ ಹಾಗೂ ವರದಕ್ಷಿಣಿ ಕಿರುಕುಳ ಸೇರಿದಂತೆ ಹಲವು ಆರೋಪ ಮಾಡಿ ಪೊಲೀಸರಿಗೆ ದೂರು ಕೊಟ್ಟ ಬಗ್ಗೆ ಸ್ವತಃ ಹೈಕೋರ್ಟ್ ಅಚ್ಚರಿ ಪಟ್ಟಿದೆ. ಅಲ್ಲದೆ ಪುರುಷರ ವಿರುದ್ಧ ಅನಗತ್ಯ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವ ಕೊಡಗು ಜಿಲ್ಲೆ ಕುಶಾಲಗರ ತಾಲ್ಲೂಕಿನ ಮುಳ್ಳುಸೋಗೆ ನಿವಾಸಿಯಾದ 33 ವರ್ಷದ ದೀಪಿಕಾ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಿದೆ.
High Court ಆರೋಪಿ ದೀಪಿಕಾಳ ಹಲವು ಠಾಣೆಗಳಲ್ಲಿ ಪುರುಷರ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಅಪರಾಧಿಕ ಪಿತೂರಿ ಮತ್ತು ಭಾರತೀಯ ದಂಡ ಸಂಹಿತೆ–1860ರ ಕಲಂ 498ಎ ಅಡಿ 10 ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೈಕೋರ್ಟ್ ಗಮನಕ್ಕೆ ಬಂದಿದೆ. ಅಲ್ಲದೆ ಈ ಸಂಬಂಧ ಎಲ್ಲಾ ಪ್ರಕರಣಗಳ ವಿವರನ್ನ ಹೈಕೋರ್ಟ್ ಪಡೆದುಕೊಂಡಿತ್ತು. ಇದನ್ನ ಪರಿಶೀಲಿಸಿದ ಬಳಿಕ ಈ ಆದೇಶ ನೀಡಿದೆ.
Padmadeepa Public School ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪದ್ಮದೀಪ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ
Padmadeepa Public School 2024-25 ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಶಿವಮೊಗ್ಗದ ಮೇರಿ ಇಮ್ಯಾಕುಲೆಟ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದಿದ್ದು, ಈ ಸ್ಪರ್ಧೆಯಲ್ಲಿ ಸಾಗರ, ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಸೊರಬ, ಈ ಆರು ತಾಲೂಕುಗಳಿಂದ ಆರು ತಂಡಗಳು ಮಾನವ ಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಮೂಲ ವಿಷಯವನ್ನು ಆಧಾರವಾಗಿಟ್ಟುಕೊಂಡು ಪ್ರದರ್ಶನವನ್ನು ನೀಡಿದವು.
ಈ ಸ್ಪರ್ಧೆಯಲ್ಲಿ ಪದ್ಮದೀಪ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಮೂರನೆಯ ಬಾರಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಪ್ರಥಮ ಸ್ಥಾನ ಪಡೆದ ಈ ವಿಜ್ಞಾನ ನಾಟಕವನ್ನು ಸಜಿ.ಆರ್.ತುಮರಿ ನಿರ್ದೇಶಿಸಿ ರಚನೆ ಮಾಡಿದ್ದು, ಸಂಗೀತವನ್ನು ದಿಗ್ವಿಜಯ ಹೆಗ್ಗೋಡು ನೀಡಿರುತ್ತಾರೆ. ರಂಗಸಜ್ಜಿಗೆಯನ್ನು ಪ್ರಕಾಶ್.ಯು.ಕುಂಬಾರ್ ನಿರ್ಮಾಣ ಮಾಡಿದ್ದು, ರಂಗದಲ್ಲಿ ಪದ್ಮದೀಪ ಪ್ರೌಢಶಾಲೆಯ ತಿಲಕ್.ಜಿ.ಎಲ್, ಇಂದ್ರಜಿತ್.ವಿ, ಗಣೇಶ್.ಕೆ.ಆರ್, ಯೋಗೇಶ್.ಜಿ.ಹೆಚ್, ಆದಿತ್ಯ.ಸಿ.ಪಿ, ಗೌತಮ್.ಹೆಚ್.ಎಸ್, ರಕ್ಷಾ.ಎಸ್.ವಿ, ಸಾಕ್ಷಿ.ಎಸ್.ಎ ವಿದ್ಯಾರ್ಥಿಗಳು ಮಲ್ಲಾಡಿಹಳ್ಳಿಯ ತಿರುಕನಾಮಾಂಕಿತ ನಿಸ್ವಾರ್ಥ ಸೇವಾ ಜೀವಿ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಜೀವನಾಧಾರಿತ ನಾಟಕದಲ್ಲಿ ಸ್ವಚ್ಛತೆಯ ಮೂಲಕ ದೈಹಿಕ ನೈರ್ಮಲ್ಯ ಹಾಗೂ ಯೋಗ, ವ್ಯಾಯಾಮ, ಆಯುರ್ವೇದ, ಪ್ರಕೃತಿ ಪ್ರೀತಿ ಇವೆಲ್ಲವುಗಳಿಂದ ಮಾನಸಿಕ ನೈರ್ಮಲ್ಯತೆಯನ್ನು ಹೇಗೆ ಶುಚಿಗೊಳಿಸಿಕೊಳ್ಳಬೇಕೆಂಬ ಕಥಾ ಹಂದರದೊಂದಿಗೆ ಪ್ರೇಕ್ಷಕರ ಮನಮುಟ್ಟುವಂತೆ ಅಭಿನಯಿಸಿ ಸತತ ಮೂರನೇ ಬಾರಿ ಪ್ರಥಮ ಸ್ಥಾನ ಪಡೆದಿದ್ದಾರೆ.
Padmadeepa Public School ಈ ನಾಟಕಕ್ಕೆ ಸಂಪೂರ್ಣ ಸಹಕಾರ ನೀಡಿರುವ ಪದ್ಮದೀಪ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಕಿರಣ್ ಕುಮಾರ್.ಎಸ್.ಯು, ಪ್ರಾಂಶುಪಾಲರಾದ ತಂಗರಾಜು.ಕೆ ಹಾಗೂ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ನಾಗೇಂದ್ರಪ್ಪರವರು ಕೂಡ ಅಭಿನಂದನೆಗಳನ್ನು ತಿಳಿಸಿ ಹಿಂದಿನ ಬಾರಿಯಂತೆ ಈ ಬಾರಿಯೂ ಕೂಡ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಲಿ ಎಂದು ಅಭಿನಂದಿಸಿದ್ದಾರೆ.
National Forest Martyrs Day ಅರಣ್ಯ ರಕ್ಷಣೆಗೆ ಪ್ರಾಣಬಲಿ ನೀಡಿದ ಸಿಬ್ಬಂದಿ ಕುಟುಂಬಕ್ಕೆ ನ್ಯಾಯೋಚಿತ ಗೌರವ, ಸೌಲಭ್ಯಗಳು ದೊರೆಯದಿರುವುದು ನೋವಿನ ಸಂಗತಿ- ನ್ಯಾ.ಮಂಜುನಾಥ್ ನಾಯಕ್
National Forest Martyrs Day ವೈಯಕ್ತಿಕ ಹಿತಾಸಕ್ತಿ ಮತ್ತು ಅಭಿವೃದ್ದಿ ಕಾರ್ಯಗಳ ಹೆಸರಿನಲ್ಲಿ ಅರಣ್ಯ ನಾಶದಂಚಿಗೆ ಬಂದು ನಿಂತಿದೆ. ಅರಣ್ಯ ಸಂರಕ್ಷಣೆಯಲ್ಲಿ ಬಿಷ್ನೋಯಿ ಸಮುದಾಯದ ನಾಯಕರಂತಹವರ ಸಂಖ್ಯೆ ಇಂದು ಕಾಣದಾಗಿದೆ. ೩೬೩ ಜನರನ್ನು ಬಲಿಪಡೆದ ಕೇಜರ್ಲಿ ಹತ್ಯಾಕಾಂಡ ಸಾಮಾಜಿಕ ದುರಂತ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ ಅವರು ಹೇಳಿದರು.
ಅರಣ್ಯ ಇಲಾಖೆಯು ಶ್ರೀಗಂಧದ ಕೋಠಿಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಅರಣ್ಯ ರಕ್ಷಣೆಯ ಮಹತ್ವದ ಸೇವೆಯಲ್ಲಿ ತಮ್ಮ ಬದುಕನ್ನು ಮುಡುಪಾಗಿಸಿಕೊಂಡ ಅರಣ್ಯ ರಕ್ಷಕರಿಗೆ ಅವರ ಅವಲಂಬಿತರಿಗೆ ನ್ಯಾಯೋಚಿತವಾಗಿ ದೊರೆಯಬೇಕಾದ ಗೌರವ, ಸೌಲಭ್ಯಗಳು ದೊರೆಯದಿರುವುದು ಅತ್ಯಂತ ನೋವಿನ ಸಂಗತಿ. ಅರಣ್ಯ ರಕ್ಷಕರಿಗೆ, ಅವರ ಕುಟುಂಬದ ಅವಲಂಬಿತರ ನೆಮ್ಮದಿಯ ಬದುಕಿಗೆ ನೈತಿಕ ಸ್ಥೈರ್ಯ ನೀಡುವ ಬಗ್ಗೆ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕಾದ ಅಗತ್ಯವಿದೆ ಎಂದರು. ಅರಣ್ಯ, ಪರಿಸರ, ಪ್ರಾಣಿ ಸಂಕುಲ, ವನ್ಯಮೃಗಗಳ ಸಂರಕ್ಷಣೆಯಲ್ಲಿ ಸರ್ಕಾರ, ಇಲಾಖೆಯ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಹುತಾತ್ಮರನ್ನು ಸಂಸ್ಮರಿಸಿ ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳಿಂದಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಹಿಂದೆಂದಿಗಿಂತ ಇಂದು ಅದರ ರಕ್ಷಣೆ ಅಗತ್ಯವಿದೆ. ಇಂದಿನ ಅವಶ್ಯಕತೆಗಿಂತ ಭವಿಷ್ಯದ ದಿನಗಳಲ್ಲಿ ಎದುರಿಸಬಹುದಾದ ಸಮಸ್ಯೆ-ಸವಾಲುಗಳ ಬಗ್ಗೆಯೂ ಚರ್ಚಿಸುವ ಅವಶ್ಯಕತೆ ಇದೆ ಎಂದರು.
National Forest Martyrs Day ವನ್ಯಪ್ರಾಣಿ ಮತ್ತು ವನ್ಯಸಂಪತ್ತು ರಕ್ಷಣೆ ಇಂದು ಸವಾಲಾಗಿ ಪರಿಣಮಿಸಿದೆ. ಅಲ್ಲದೇ ಅದರ ರಕ್ಷಣೆಗೆ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಾದ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ಅಪಾಯಕಾರಿ ಸನ್ನಿವೇಶಗಳೂ ಎದುರಾಗಲಿವೆ. ಕಾಡ್ಗಿಚ್ಚುಗಳಂತಹ ಸಂದರ್ಭದಲ್ಲಿ ವನ್ಯಪ್ರಾಣಿಗಳ ರಕ್ಷಣೆ ತ್ರಾಸದಾಯಕ ಎಂದ ಅವರು, ಪ್ರಕೃತಿ-ಪರಿಸರವನ್ನು ಹಿಂದಿನವರು ಭಕ್ತಿ, ಭಾವದಿಂದ ದೈವತ್ವಕ್ಕೆ ಏರಿಸಿ, ಪೂಜ್ಯಭಾವದಿಂದ ಕಾಣುತ್ತಿದ್ದರು. ಅದು ಇಂದು ಕಾಣೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಅವರು ಮಾತನಾಡಿ, ಜಗತ್ತಿನ ಮನುಕುಲವನ್ನು ಒಂದು ಮಾಡುವಲ್ಲಿ ಪ್ರಕೃತಿ ಮತ್ತು ಪರಿಸರದ ಮಹತ್ವ ಪ್ರಧಾನವಾದುದ್ದಾಗಿದೆ. ಅರಣ್ಯ ರಕ್ಷಣೆ ಇಲಾಖೆಯ ಒಂದು ಕಾರ್ಯಕ್ರಮ ಮಾತ್ರವಾಗಿರದೇ ಮಾನವೀಯ ನೆಲೆಯಲ್ಲಿಯೂ ಕಾರ್ಯನಿರ್ವಹಿಸಬಹುದಾದ ಸೇವಾ ವಲಯ ಎಂಬುದನ್ನು ಪಿ.ಶ್ರೀನಿವಾಸ್ ಅವರಂತಹ ಅನೇಕ ಹಿರಿಯ ಅರಣ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ.
ಅರಣ್ಯ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಅವಿನಾಭಾವ ಸಂಬಂಧ ಇರುವುದನ್ನು ಅವರು ಜನರಿಗೆ ಪರಿಚಯಿಸಿದರು ಎಂದರು.
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಈ.ಶಿವಶಂಕರ್ ಅವರು ತಮ್ಮ ಸೇವಾವಧಿಯಲ್ಲಿ ಈವರೆಗೆ ಹುತಾತ್ಮರಾದ ಅರಣ್ಯ ಸಿಬ್ಭಂಧಿಗಳನ್ನು ಯಾದಿಯನ್ನು ವಾಚಿಸಿ, ಸಂಸ್ಮರಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟçಗೀತೆಯೊಂದಿಗೆ ಸಮವಸ್ತçಧಾರಿ ಪೊಲೀಸ್ ಸಿಬ್ಬಂಧಿಗಳು ಕವಾಯತಿನಲ್ಲಿ ಭಾಗವಹಿಸಿ, ಮೂರು ಸುತ್ತಿನ ಕುಶಾಲ ತೋಪುಗಳನ್ನು ಹಾರಿಸಿ, ಹುತಾತ್ಮ ಅರಣ್ಯ ಸಿಬ್ಬಂಧಿಗಳಿಗೆ ಗೌರವ ಸಲ್ಲಿಸಲಾಯಿತು.
ಅಲ್ಲದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರೆಲ್ಲರೂ ಹುತಾತ್ಮರ ಪುತ್ಥಳಿಗೆ ಪುಷ್ಪಗುಚ್ಚವಿಟ್ಟು ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ಪ್ರಸನ್ನಕೃಷ್ಣ ಬೆಟಗಾರ್ ಅವರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.
Karnataka Public Service Commission ಗ್ರೂಪ್ ‘ ಬಿ’ ವೃಂದದ ಸ್ಪರ್ಧಾತ್ಮಕ ಪರೀಕ್ಷೆಗಳ ವ್ಯವಸ್ಥೆಗೆ ಸೂಚನೆ
Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗಾಗಿ ಶಿವಮೊಗ್ಗ ನಗರದಲ್ಲಿ ಸೆ.14 ಮತ್ತು 15 ರಂದು ನಡೆಯಲಿರುವ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಶಾಂತಿಯುತವಾಗಿ, ಪಾರದರ್ಶಕವಾಗಿ ಮತ್ತು ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪ್ರದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ಕಾರ್ಯದರ್ಶಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಬಳಿಕೆ ಅಧಿಕಾರಿಗಳೊಂದಿಗೆ ಪರೀಕ್ಷೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿವಮೊಗ್ಗ ನಗರದ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಸೆ.14 ರಂದು ಮಧ್ಯಾಹ್ನ 2 ಗಂಟೆಯಿAದ ಸಂಜೆ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ, ಸೆ.15 ರಂದು ಬೆಳಿಗ್ಗೆ 10 ಗಂಟೆಯಿAದ 11.30 ರವರೆಗೆ ಕನ್ನಡ ಭಾಷಾ ಪರೀಕ್ಷೆ ಪತ್ರಿಕೆ-1, ಸಾಮಾನ್ಯ ಪತ್ರಿಕೆ ಹಾಗೂ ಮಧ್ಯಾಹ್ನ 2 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಪತ್ರಿಕೆ ಪರೀಕ್ಷೆ ನಡಯಲಿದೆ. ಸೆ.14 ರಂದು 7066 ಅಭ್ಯರ್ಥಿಗಳು, ಸೆ.15 ರ ಬೆಳಗಿನ ಪರೀಕ್ಷೆಯಲ್ಲಿ 8993 ಮತ್ತು ಮಧ್ಯಾಹ್ನದ ಪರೀಕ್ಷೆಯಲ್ಲಿ 8354 ಅಭ್ಯರ್ಥಿಗಳು ಹಾಗೂ 12 ವಿಶೇಷಚೇತನರು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈಗಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಪರಿವೀಕ್ಷಕರು ಸೇರಿದಂತೆ ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಿ, ಅನುಸರಿಸಬೇಕಾದ ಪರೀಕ್ಷಾ ಸೂಚನೆಗಳ ಕುರಿತು ತರಬೇತಿ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ನಿಗದಿತ ವೇಳೆಯೊಳಗೆ ಅಭ್ಯರ್ಥಿಗಳ ತಪಾಸಣೆಗೆ ಕ್ರಮ ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ ಕುರಿತು ಅಭ್ಯರ್ಥಿಗಳಿಗೆ ತಿಳಿಸಬೇಕು. ಹಾಗೂ ಎಲ್ಲ ಕೇಂದ್ರಗಳಲ್ಲಿ ಜ್ಯಾಮರ್ ಮತ್ತು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.
ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಮೆಸ್ಕಾಂ ಶಿವಮೊಗ್ಗರವರಿಗೆ ಕೋರಲಾಗಿದೆ. ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಹಾಗೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಕ್ರತಾ ಕ್ರಮವಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ಇಲಾಖೆಗೆ ಕೊರಲಾಗಿದೆ.
Karnataka Public Service Commission ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳನ್ನು ತರುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸುವರು ಎಂದು ತಿಳಿಸಿದರು.
ಸಭೆಯಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳ ಕರ್ತವ್ಯಗಳು ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಲಾಯಿತು. ಹಾಗೂ ಪರೀಕ್ಷೆಗಳು ಯಾವುದೇ ರೀತಿಯ ಗೊಂದಲವಿಲ್ಲದೆ, ಪಾರದರ್ಶಕವಾಗಿ, ಯಶಸ್ವಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಖಜಾನಾಧಿಕಾರಿ ಸಾವಿತ್ರಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಪಾಲ್ಗೊಂಡಿದ್ದರು.
Actor Darshan ನಟ ದರ್ಶನ್ ವಿರುದ್ದ ಮತ್ತೆ ಮೂವರು ಸಾಕ್ಷಿ ಹೇಳಲು ಸಿದ್ಧ
Actor Darshan ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ವಿವರ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರು ಜೈಲು ಸೇರಿ ಮೂರು ತಿಂಗಳು ಕಳೆಯುತ್ತಾ ಬಂದಿದ್ದು, ಅವರ ವಿರುದ್ಧ ಚಾರ್ಜ್ಶೀಟ್ ಕೂಡ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಬರೋಬ್ಬರಿ 3991 ಪುಟಗಳ ಚಾರ್ಜ್ಶೀಟ್ ನ್ಯಾಯಾಲಯದ ಕೈ ಸೇರಿದೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲಿದೆ ವಿವರ.
Actor Darshan ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಕೋರ್ಟ್ನಲ್ಲಿ ಮಹತ್ವ ಪಡೆದುಕೊಳ್ಳುತ್ತವೆ. ಈಗ ದರ್ಶನ್ ವಿರುದ್ಧ 3 ಜನರು ಸಾಕ್ಷಿ ಹೇಳಲು ರೆಡಿ ಆಗಿದ್ದಾರೆ. ಅದರಲ್ಲಿ ಸಾಕ್ಷಿ ನಂಬರ್ 1 ಶೆಡ್ಡಿನ ವಾಚ್ಮ್ಯಾನ್. ದರ್ಶನ್ ಶೆಡ್ಗೆ ಬಂದಿದ್ದು, ಹೋಗಿದ್ದು ಸೇರಿ ಎಲ್ಲಾ ಮಾಹಿತಿ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ. ಘಟನೆ ನಡೆದ ಸಮಯದಲ್ಲಿ ಯಾರು ಬಂದರು, ಯಾವಾಗ ಬಂದರು, ಯಾವ ವಾಹನಗಳು ಬಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ರೇಣುಕಾ ಸ್ವಾಮಿ ಬದುಕಿದ್ದಾಗ ವಾಚ್ ಮ್ಯಾನ್ ನೋಡಿದ್ದರು ಎನ್ನಲಾಗಿದೆ.
ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಎರಡು ಹಾಗೂ ಮೂರನೇ ಪ್ರತ್ಯಕ್ಷ ಸಾಕ್ಷಿ ಎಂದು ಪರಿಗಣಿಸಲಾಗಿದೆ. ರೇಣುಕಾ ಸ್ವಾಮಿಗೆ ಎಷ್ಟು ಸಮಯ ಹೊಡೆದರು, ಯಾರು ಏನು ಮಾಡಿದರು ಎಂಬ ಸಂಪೂರ್ಣ ಮಾಹಿತಿಯನ್ನು ಸಾಕ್ಷಿದಾರರು ನೀಡಿದ್ದಾರೆ. ಇವುಗಳು ದರ್ಶನ್ಗೆ ಮುಳುವಾಗುವ ಸಾಧ್ಯತೆ ಇದೆ.
ದರ್ಶನ್ ಸೇರಿ ಬಂಧನಕ್ಕೆ ಒಳಗಾದ 17 ಮಂದಿಯಲ್ಲಿ ಯಾರು ಕೊಲೆ ಮಾಡಿದ್ದು ಎಂಬುದು ಇನ್ನೂ ಸಾಬೀತಾಗಿಲ್ಲ. ಸದ್ಯ ಎಲ್ಲರ ಭಾಗಿದಾರತ್ವ ಇರುವ ಬಗ್ಗೆ ಚಾರ್ಜ್ಶೀಟ್ನಲ್ಲಿ ಉಲ್ಲೇಖ ಆಗಿದೆ. ಈ ಪೈಕಿ ಯಾರು ತಪ್ಪು ಮಾಡಿದ್ದಾರೆ, ಯಾರ ಪಾತ್ರ ಎಷ್ಟಿದೆ ಎನ್ನುವ ವಿಚಾರ ಕೋರ್ಟ್ ವಿಚಾರಣೆ ಬಳಿಕ ಗೊತ್ತಾಗಬೇಕಿದೆ.
