Monday, March 30, 2026
Monday, March 30, 2026
Home Blog Page 569

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿವಿಯ ವಿವಿಧ ಕೋರ್ಸ್ ಅಧ್ಯಯನಕ್ಕೆ ಪ್ರವೇಶಾತಿ ಅರ್ಜಿ ಆಹ್ವಾನ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, (ಕೆಎಸ್‌ಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಿವಮೊಗ್ಗ ಆಲ್ಕೊಳ ಸರ್ಕಲ್ ಹತ್ತಿರ ಇರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರತಿ ಭಾನುವಾರ ಮತ್ತು ಹಬ್ಬಗಳು ಸೇರಿದಂತೆ ಎಲ್ಲಾ ಸರ್ಕಾರಿ ರಜೆ ದಿನಗಳಂದು ಪ್ರವೇಶಾತಿಗೆ ಅವಕಾಶವಿದೆ ಎಂದು ಕುಲಪತಿಗಳು ಅದೇಶದನ್ವಯ ಕರಾಮುವಿಯ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

Karnataka State Open University ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9164467131/7338069870/7760620811/ 9964853900/9739803295/8431058940/8711965619 ಗಳನ್ನು ಸಂಪರ್ಕಿಸಬಹುದು.

Department of Information and Public Relations ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಆಹ್ವಾ‌ನ

0

Department of Information and Public Relations ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತು.

ಅದರಂತೆ 2001ರಿಂದ 2016ರ ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.
2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

 ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.

Department of Information and Public Relations  2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.
ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.

University of Agricultural & Horticultural Sciences ತೋಟಗಾರಿಕೆ ನರ್ಸರಿ ಬಗ್ಗೆ ಸರ್ಟಿಫಿಕೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ

0

University of Agricultural & Horticultural Sciences ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 30 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ ನಡೆಸಲು ಉದ್ದೇಶಿಸಿದ್ದು, ಅರ್ಹ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

University of Agricultural & Horticultural Sciences ಆಸಕ್ತರು ಸೆ. 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಸಹಾಯಕ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವಿಜ್ಞಾನಿಗಳಾದ ಡಾ. ಬಿ.ವಿ ಚಂಪ- 7338582371, ಡಾ. ಭರತ್ ಕುಮಾರ್ ಎಂ.ವಿ.-8277206549 ಮತ್ತು ಡಾ. ರವಿಶಂಕರ್ ಎಂ.ಪಾಟೀಲ್-9916426892 ಇವರುಗಳನ್ನು ಸಂಪರ್ಕಿಸಬಹುದು.

Children’s Day ಹೊಯ್ಸಳ & ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನ

0

Children’s Day ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು.
ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

Children’s Day ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ(ಇಂಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಮಕ್ಕಳ ದಿನಾಚರಣೆ -2024 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು ದಿ: 24-09-2024 ರೊಳಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.

Karnataka State Open University ಸೆ.12.ಶಾಲಾ ಶಿಕ್ಷಣ ಇಲಾಖೆಯಿಂದ ಜಿಲ್ಲಾಮಟ್ಟದ ಕುಸ್ತಿ ಕ್ರೀಡಾಕೂಟ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, (ಕೆಎಸ್‌ಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಿವಮೊಗ್ಗ ಆಲ್ಕೊಳ ಸರ್ಕಲ್ ಹತ್ತಿರ ಇರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರತಿ ಭಾನುವಾರ ಮತ್ತು ಹಬ್ಬಗಳು ಸೇರಿದಂತೆ ಎಲ್ಲಾ ಸರ್ಕಾರಿ ರಜೆ ದಿನಗಳಂದು ಪ್ರವೇಶಾತಿಗೆ ಅವಕಾಶವಿದೆ ಎಂದು ಕುಲಪತಿಗಳು ಅದೇಶದನ್ವಯ Karnataka State Open University ಕರಾಮುವಿಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆ ನೀಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9164467131/7338069870/7760620811/ 9964853900/9739803295/8431058940/8711965619 ಗಳನ್ನು ಸಂಪರ್ಕಿಸುವುದು.

B.S. Yediyurappa ಬಿಎಸ್ವೈ ಸಲ್ಲಿಸಿದ್ದ ಫೋಕ್ಸೋ ಪ್ರಕರಣ ಸಂಬಂಧಿತ ಕೇಸ್ ಅರ್ಜಿ ವಿಚಾರಣೆ ಮುಂದೂಡಿಕೆ

0

B.S. Yediyurappa ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಇಂದು (ಸೆ.9) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು.

B.S. Yediyurappa ಪ್ರೊ.ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್‌ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್‌ ನಾಯ್ಕ್‌ ನ್ಯಾಯಾಲಯಕ್ಕೆ ತಿಳಿಸಿದರು.

ಈ ಹಿನ್ನೆಲೆ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಲಾಗುವುದು ನ್ಯಾಯಾಲಯ ಹೇಳಿದೆ.

Rahul Gandhi ಭಾರತವು ಒಂದು ಎಂದು ಆರ್ ಎಸ್ ಎಸ್ ನಂಬಿಕೆ. ಆದರೆ ಭಾರತವು ಅನೇಕ ವಿಚಾರಗಳೆಂದು ನಮ್ಮ ನಂಬಿಕೆ- ರಾಹುಲ್ ಗಾಂಧಿ

0

Rahul Gandhi “ಭಾರತೀಯ ರಾಜಕೀಯದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ; ಭಾರತವು ಒಂದು ಕಲ್ಪನೆ ಎಂಬುದನ್ನು ಆರ್‌ಎಸ್‌ಎಸ್ ನಂಬುತ್ತಿದೆ” ಎಂದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಟೆಕ್ಸಾಸ್‌ನಲ್ಲಿ ಭಾರತೀಯ ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬೇಸಿಗೆಯಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ನಂತರ ಭಾರತೀಯ ವಲಸೆಗಾರರೊಂದಿಗಿನ ಅವರ ಮೊದಲ ಸಂವಾದದಲ್ಲಿ ಈ ಹೇಳಿಕೆಗಳನ್ನು ನೀಡಿದರು.

“ಭಾರತವು ಒಂದು ಕಲ್ಪನೆ ಎಂದು ಆರ್‌ಎಸ್‌ಎಸ್ ನಂಬುತ್ತದೆ. ಭಾರತವು ಅನೇಕ ವಿಚಾರಗಳೆಂದು ನಾವು ನಂಬುತ್ತೇವೆ. ಯುನೈಟೆಡ್ ಸ್ಟೇಟ್ಸ್‌ನಂತೆಯೇ, ಎಲ್ಲರಿಗೂ ಭಾಗವಹಿಸಲು ಅವಕಾಶ ನೀಡಬೇಕು” ಎಂದು ನಾವು ನಂಬುತ್ತೇವೆ ಎಂದರು.
“ಪ್ರತಿಯೊಬ್ಬರಿಗೂ ಕನಸು ಕಾಣಲು ಅವಕಾಶ ನೀಡಬೇಕು, ಪ್ರತಿಯೊಬ್ಬರಿಗೂ ಅವರ ಜಾತಿ, ಭಾಷೆ, ಧರ್ಮ, ಸಂಪ್ರದಾಯ, ಇತಿಹಾಸವನ್ನು ಲೆಕ್ಕಿಸದೆ ಜಾಗ ನೀಡಬೇಕು ಎಂದು ನಾವು ನಂಬುತ್ತೇವೆ” ಎಂದು ಅವರು ಹೇಳಿದರು.

“ಇದು ಹೋರಾಟ, ಭಾರತದ ಪ್ರಧಾನಿ ದೇಶದ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಭಾರತದಲ್ಲಿ ಲಕ್ಷಾಂತರ ಜನರು ಸ್ಪಷ್ಟವಾಗಿ ಅರ್ಥಮಾಡಿಕೊಂಡಾಗ ಈ ಹೋರಾಟವು ಚುನಾವಣೆಯಲ್ಲಿ ಹರಳುಗಟ್ಟಿತ್ತು. ಏಕೆಂದರೆ, ನಾನು ನಿಮಗೆ ಹೇಳುತ್ತಿರುವುದು ರಾಜ್ಯಗಳ ಒಕ್ಕೂಟ, ಭಾಷೆಗಳಿಗೆ ಗೌರವ, ಧರ್ಮಗಳಿಗೆ ಗೌರವ, ಸಂಪ್ರದಾಯಗಳಿಗೆ ಗೌರವ, ಜಾತಿಗೆ ಗೌರವ ಇದೆಲ್ಲವೂ ಸಂವಿಧಾನದಲ್ಲಿದೆ” ಎಂದು ಅವರು ಪ್ರತಿಪಾದಿಸಿದರು.
ಭಾರತೀಯ ರಾಜಕೀಯದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆಯ ಮೌಲ್ಯಗಳನ್ನು ತುಂಬುವುದು ನಮ್ಮ ಪಾತ್ರವಾಗಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದರು.
Rahul Gandhi “ನಮ್ಮ ರಾಜಕೀಯ ವ್ಯವಸ್ಥೆಗಳಲ್ಲಿ ಮತ್ತು ಪಕ್ಷಗಳಲ್ಲಿ ಕಾಣೆಯಾಗಿರುವುದು ಪ್ರೀತಿ, ಗೌರವ ಮತ್ತು ನಮ್ರತೆ ಎಂದು ನಾನು ಭಾವಿಸುತ್ತೇನೆ. ಎಲ್ಲ ಮನುಷ್ಯರಿಗೆ ಪ್ರೀತಿ, ಒಂದು ಧರ್ಮ, ಒಂದು ಸಮುದಾಯ, ಒಂದು ಜಾತಿ, ಒಂದು ರಾಜ್ಯದ ಜನರು ಅಥವಾ ಒಂದು ಭಾಷೆ ಮಾತನಾಡುವವರಿಗೆ ಮಾತ್ರ ಅಗತ್ಯವಿಲ್ಲ” ಎಂದರು.
ಬಿಜೆಪಿ ಸ್ವಂತ ಬಲದಿಂದ ಬಹುಮತ ಪಡೆಯುವಲ್ಲಿ ವಿಫಲವಾದ ಲೋಕಸಭೆಯ ಫಲಿತಾಂಶಗಳ ಬಗ್ಗೆ ಪರೋಕ್ಷವಾಗಿ ಉಲ್ಲೇಖಿಸಿದ ಅವರು, “ಬಿಜೆಪಿ ನಮ್ಮ ಸಂಪ್ರದಾಯದ ಮೇಲೆ ದಾಳಿ ಮಾಡುತ್ತಿದೆ, ನಮ್ಮ ಭಾಷೆಯ ಮೇಲೆ ದಾಳಿ ಮಾಡುತ್ತಿದೆ ಎಂದು ಜನರು ಹೇಳುತ್ತಿದ್ದಾರೆ.

ಅವರು ಅರ್ಥಮಾಡಿಕೊಂಡದ್ದು ಯಾರೇ ಆಗಲಿ. ಭಾರತದ ಸಂವಿಧಾನದ ಮೇಲೆ ದಾಳಿ ಮಾಡುತ್ತಿರುವುದು ನಮ್ಮ ಧಾರ್ಮಿಕ ಸಂಪ್ರದಾಯದ ಮೇಲೂ ದಾಳಿ ಮಾಡುತ್ತಿದೆ. ಚುನಾವಣೆ ಫಲಿತಾಂಶದ ಕೆಲವೇ ನಿಮಿಷಗಳಲ್ಲಿ, ಭಾರತದಲ್ಲಿ ಯಾರೂ ಬಿಜೆಪಿಗೆ, ಪ್ರಧಾನಿಗೆ ಹೆದರುವುದಿಲ್ಲ ಎಂದು ನಾವು ನೋಡಿದ್ದೇವೆ” ಎಂದು ಹೇಳಿದರು.

Vijay Technnocrats ಸರಿಯಾದ ಆಹಾರ ಪದ್ಧತಿ ಅನುಸರಿಸುವ ಜತೆಯಲ್ಲಿ ಪ್ರಾಣಾಯಾಮ ಅಭ್ಯಾಸ ಮಾಡಬೇಕು- ಡಾ.ಧನಂಜಯ ಸರ್ಜಿ

0

Vijay Technnocrats ಆರೋಗ್ಯ ಸಂಪತ್ತಿನ ಮುಂದೆ ಬೇರೆ ಸಂಪತ್ತು ಇಲ್ಲ. ದಿನನಿತ್ಯದ ಜೀವನಶೈಲಿ ಚೆನ್ನಾಗಿ ಇಟ್ಟುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ಮಾಚೇನಹಳ್ಳಿಯಲ್ಲಿ ಆಯೋಜಿಸಿದ್ದ ವಿಜಯ್ ಟೆಕ್ನೋಕ್ರ್ಯಾಟ್ಸ್ ಸಂಸ್ಥೆಯ 25ನೇ ವರ್ಷದ ಸಂಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಕಾರ್ಮಿಕರಿಗೆ ಆರೋಗ್ಯ ಮಾಹಿತಿ ಶಿಬಿರದಲ್ಲಿ ಮಾತನಾಡಿ, ಸರಿಯಾದ ಆಹಾರ ಪದ್ಧತಿ ಅನುಸರಿಸುವ ಜತೆಯಲ್ಲಿ ಯೋಗ, ಪ್ರಾಣಾಯಾಮ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯು 25 ವರ್ಷಗಳ ಕೆಲಸ ಮಾಡುವ ಜತೆಯಲ್ಲಿ ಸಾವಿರಾರು ಕುಟುಂಬಗಳಿಗೆ ಆಶ್ರಯ ನೀಡಿದೆ. ಕಾರ್ಮಿಕರ ನಿರಂತರ ಶ್ರಮದಿಂದ ಸಂಸ್ಥೆಯು ಉನ್ನತ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ. ಹೆಚ್ಚಿನ ಅಭಿವೃದ್ಧಿ ಹೊಂದುತ್ತದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಕಾರ್ಮಿಕರ ಶ್ರದ್ಧೆ ಹಾಗೂ ಪ್ರಾಮಾಣಿಕ ಕೆಲಸದಿಂದ ಸಂಸ್ಥೆ ಉತ್ತಮವಾಗಿ ಬೆಳೆಯಲು ಸಾಧ್ಯವಾಗಿದೆ. ಇತ್ತೀಚೀನ ವರ್ಷಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಸಹ ಹೆಚ್ಚು ತೊಡಗಿಸಿಕೊಂಡು ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು.

Vijay Technnocrats ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ದರ್ಶಿನಿ, ಎ.ಸ್ಪಂದನಾ, ಚಿನ್ಮಯ, ಸ್ವಾತಿ ಹಾಗೂ ಲಾವಣ್ಯ ಅವರಿಗೆ ತಲಾ 25,000 ರೂ. ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಪಾರಿತೋಷಕ ನೀಡಲಾಯಿತು.

25ನೇ ವರ್ಷದ ಸಂಸ್ಥಾಪಕರ ದಿನಾಚರಣೆಯಲ್ಲಿ ನಿರ್ದೇಶಕ ಎಂ.ರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು 600 ಟನ್ ಉತ್ಪಾದಿಸುವ ಸಾಮಾರ್ಥ್ಯ ಹೊಂದಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ ಎಂದು ತಿಳಿಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ನಿರ್ದೇಶಕರು ಶುಭಕೋರಿದರು.

ವೇದಿಕೆಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಎಚ್.ಮಹೇಂದ್ರಪ್ಪ, ಎಕ್ಟಿಕ್ಯೂಟಿವ್ ಡೈರೆಕ್ಟರ್ ಡಿ.ಜಿ.ಬೆನಕಪ್ಪ, ನಿರ್ದೇಶಕರಾದ ಎನ್.ರಾಮಚಂದ್ರ, ಡಿ.ಎಸ್.ಚಂದ್ರಶೇಖರ್, ಡಿ.ಬಿ.ಅಶೋಕ್, ಎಸ್.ಜಿ.ಶಾಂತಮ್ಮ, ಎಸ್.ಆರ್.ಹರ್ಷ, ಎಲ್.ಸಿದ್ಧಾರ್ಥ್, ವೈ.ಪಿ.ಸುಧಾ, ಎನ್.ಜಿ.ಸುಮಾ ಮತ್ತಿತರರು ಇದ್ದರು.

Kalaburagi Police ಹನಿಟ್ರ್ಯಾಪ್ ಸಂಬಂಧ 8/ಯುವಕರ ವಿರುದ್ಧ ಪ್ರಕರಣ ದಾಖಲು

0

Kalaburagi Police ಅಸಹಾಯಕ ಮಹಿಳೆಯರನ್ನ ಬಳಸಿಕೊಂಡು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ.

ಬಳಿಕ, ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ.
ನ್ಯಾಯಕ್ಕಾಗಿ ಅಲೆದಾಡುವ ಒಂಟಿ ಮಹಿಳೆಯರೇ ಇವರಿಗೆ ಟಾರ್ಗೆಟ್ . ಈ ಜಾಲದ ಬಗ್ಗೆ ಸ್ವತಃ ಹನಿಟ್ರ್ಯಾಪ್ಗೆ ಒಳಗಾದ ಮಹಿಳೆಯರೇ ದೂರು ನೀಡಿದ್ದು, ಇತ್ತ ಹನಿಟ್ರ್ಯಾಪ್ ಮಾಡುವ ಮಹಿಳೆಯರಿಗೆ, ಅತ್ತ ಅವರ ಬಲೆಗೆ ಬೀಳುವ ಉದಗಯಮಿ, ಅಧಿಕಾರಿಗಳು, ಶ್ರೀಮಂತರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.

ಮಹಾರಾಷ್ಟ್ರ ಮೂಲದ ಯುವತಿಯೋರ್ವಳನ್ನು ಬಳಸಿಕೊಂಡು ಉದ್ಯಮಿ ವಿನೋಧ ಎನ್ನುವಾತನಿಗೆ ಹನಿಟ್ರ್ಯಾಪ್ ಮಾಡಿದ್ದು, ಯುವತಿಯ ಮೂಲಕ ವಿನೋಧಗೆ ಖೆಡ್ಡಾ ತೋಡಿ ಕಲಬುರಗಿಯ ಲಾಡ್ಜಗೆ ಕರೆಸಿ ಹಲವು ವಿಡಿಯೋ ಮಾಡಿಸಿಕೊಂಡು ನಂತರ ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡಿದೆ ಎಂದು ಆರೋಪಿಸಲಾಗಿದೆ.

ಹನಿಟ್ರ್ಯಾಪ್ಗೆ ಬಳಸುತ್ತಿದ್ದ ಯುವತಿಯನ್ನು ಕೆಲಸ ಕೊಡಿಸುವುದಾಗಿ ಕಲಬುರಗಿಗೆ ಕರೆಸಿ ಲಾಡ್ಜ್ನಲ್ಲಿಟ್ಟು ಇತರರಿಂದ ಅತ್ಯಾಚಾರಕ್ಕೆ ಗುರಿಯಾಗಿಸಿದ್ದು, ನಂತರ ಆ ವಿಡಿಯೋಗಳನ್ನು ಮಾಡಿಕೊಂಡು ನಾವು ಹೇಳಿದಂತೆ ಕೇಳು ಇಲ್ಲದಿದ್ರೆ ವಿಡಿಯೋ ಹೊರಗೆ ಹಾಕ್ತಿವಿ ಅಂತ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಇದೇ ರೀತಿ ಗಂಡನಿಂದ ನ್ಯಾಯ ಕೇಳಲು ಬಂದ ಕಮಲಾಪೂರ ತಾಲೂಕಿನ ಡೋಂಗರಗಾಂವ್ ಮಹಿಳೆಯನ್ನೂ ಈ ಖತರ್ನಾಕ್ ಗ್ಯಾಂಗ್ ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದು, ಪೊಲೀಸ್ ಕಾನ್ಸಟೇಬಲ್ಗೆ ಕರೆ ಮಾಡಿಸಿ ಪುಸಲಾಯಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿ ವಿಡಿಯೋ ಮಾಡಿಕೊಂಡಿದ್ದಾರೆ.

Kalaburagi Police ನಂತರ ಪೇದೆ ಬಸವರಾಜ್ಗೆ ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು ಡೋಂಗರಗಾಂವ್ ಮಹಿಳೆ ಆರೋಪಿಸಿದ್ದಾರೆ.
ದೂರು ನೀಡಿರುವ ಮಹಿಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ದಲಿತ ಸೇನೆ ಸಂಘಟನೆ ಕಟ್ಟಿಕೊಂಡು ಇದನ್ನೇ ಮಾಡುತ್ತಿದ್ದಾರೆ. ನಮ್ಮಂತ ಹತ್ತಾರು ಅಮಾಯಕ ಮಹಿಳೆರನ್ನು ಈ ರೀತಿ ಹನಿಟ್ರ್ಯಾಪ್ ಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸ್ವತಃ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.

ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chamber Of Commerce ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನಿಂದ ಸನ್ಮಾನ

0

Chamber Of Commerce ಶಿವಮೊಗ್ಗ ಜಿಲ್ಲಾ ಹಿಂದೂ ಎಕನಾಮಿಕ್ ಫೋರಂ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷರು ಬಜರಂಗದಳದ ಹಾಲಿ ಅಧ್ಯಕ್ಷರಾದ ಉದ್ಯಮಿಗಳು ಆದ ಜೆ ಆರ್ ವಾಸುದೇವ ಅವರಿಗೆ ಮತ್ತು ಡಾಕ್ಟರ್ ಪುನೀತ್ ರಾಜಕುಮಾರ್ ರಾಜರತ್ನ ಸೇವಾ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಿನ್ನಿಸ್ ಹಾಗೂ ಲಿಮ್ಕಾ ದಾಖಲೆ ಪ್ರಶಸ್ತಿ ಪುರಸ್ಕೃತರು ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ ಅಂಡ್ ಗೈಡ್ಸ್ನಲ್ಲಿ ಕೇಂದ್ರ ಸ್ಥಾನಿಕ ಆಯುಕ್ತರಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ದಲ್ಲಿ. ಸಹಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ರಕ್ತದಾನಿ ಜಿ ವಿಜಯ ಕುಮಾರ್ ರವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರು ಮಾತನಾಡುತ್ತಾ ಇವರ ಅಧಿಕಾದ ಅವಧಿಯಲ್ಲಿ ಸಮಾಜ ಮುಖಿಯಾಗಿ ಉತ್ತಮ ಸೇವೆ ಸಲ್ಲಿಸಲಿ, ಕರ‍್ಯಗಳು ನೆರವೇರಲಿ ಎಂದು ಶುಭಕೋರಿ ಹಾರೈಸಿದರು.

Chamber Of Commerce ಸಂಘದ ಉಪಾಧ್ಯಕ್ಷ ಬಿ ಗೋಪಿನಾಥ್ ಕರ‍್ಯರ‍್ಶಿ ವಸಂತ ಹೋಬಳಿಧರ್.ಖಜಾಂಚಿ ಎಮ್ ರಾಜು. ಮಾಜಿ ಅಧ್ಯಕ್ಷರಾದ ಟಿ.ಆರ್ ಅಶ್ವಥ್ ನಾರಾಯಣ ಶೆಟ್ಟಿ ನರ‍್ದೇಶಕರುಗಳಾದ ಮರಿಸ್ವಾಮಿ, ಪ್ರದೀಪ್ ವಿ ಎಲಿ. ಈ ಪರಮೇಶ್ವರ್ ಕೆ.ಎಸ್ ಸುಕುಮಾರ್. ಹೆಚ್.ಎಸ್ ನರೇಂದ್ರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು