Monday, March 30, 2026
Monday, March 30, 2026
Home Blog Page 577

International Day of Democracy ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಕಲ ಸಿದ್ಧತೆ- ಗುರುದತ್ತ ಹೆಗಡೆ

0

International Day of Democracy ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ಮಾನವ ಸರಪಳಿ ರಚನೆ ಮಾಡುವ ಮೂಲಕ ಹಬ್ಬದ ರೀತಿಯಲ್ಲಿ, ಅರ್ಥಪೂರ್ಣವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಅಗತ್ಯವಾದ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೆ.15 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ.15 ರಂದು ರಾಜ್ಯದಾದ್ಯಂತ ಏಕ ಕಾಲದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುವುದು. ನಮ್ಮ ಜಿಲ್ಲೆಗೆ ಮಾರ್ಗನಕ್ಷೆ ನೀಡಿರುವನ್ವಯ ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಪ್ರಾರಂಭಿಸಿ ಶಿವಮೊಗ್ಗ ನಗರದ ಮೂಲಕ ಶಿವಮೊಗ್ಗ ತಾಲ್ಲೂಕಿನ ಮಡಿಕೆ ಚೀಲೂರುವರೆಗೆ ಸುಮಾರು 60 ಕಿ.ಮೀ ಮಾನವ ಸರಪಳಿ ರಚಿಸಬೇಕಾಗಿರುತ್ತದೆ.
ಅದಕ್ಕೆ 50 ರಿಂದ 55 ಸಾವಿರ ಜನರ ಅವಶ್ಯಕತೆಯಿದ್ದು ಈ ಮಾರ್ಗದ 8 ಪಂಚಾಯತ್‌ಗಳಿಗೆ ನೋಡಲ್ ಅಧಿಕಾರಿ ನೇಮಿಸಿ, ಈ ಮಾರ್ಗದಲ್ಲಿ ಅಗತ್ಯವಾದ ಜನರನ್ನು ವ್ಯವಸ್ಥೆ ಮಾಡಬೇಕು. ಮೊದಲೇ ಸ್ಥಳ ಪರಿಶೀಲನೆ ಮಾಡಬೇಕು. ಗ್ರಾಮ ಲೆಕ್ಕಿಗರು, ಪಿಡಿಓ, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತರು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.
ಭದ್ರಾವತಿ ಮತ್ತು ಶಿವಮೊಗ್ಗ ತಾಲ್ಲೂಕುಗಳ ಬಿಇಓ ಗಳು ಸಮನ್ವಯತೆ ಸಾಧಿಸಿ ವಿದ್ಯಾರ್ಥಿಗಳನ್ನು ಸೇರಿಸುವುದು ಸೇರಿದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಡಿಡಿಪಿಐ, ಡಿಡಿಪಿಯು, ಬಿಇಓ ಗಳು ಅನುದಾನಿತ, ಅನುದಾನರಹಿತ ಮತ್ತು ಸರ್ಕಾರಿ ಶಾಲಾ-ಕಾಲೇಜು ಮುಖ್ಯ ಶಿಕ್ಷಕರು, ಪ್ರಾಂಶುಪಾಲರ ಸಭೆ ನಡೆಸಿ, ವಿದ್ಯಾರ್ಥಿಗಳನ್ನು ನಿಗದಿತ ಸಮಯಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು.
International Day of Democracy ಸೆ.15 ರಂದು 9 ರಿಂದ 9.30 ಕ್ಕೆ ಮಾನವ ಸರಪಳಿಯನ್ನು ರಚಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಅಂದು ಗಿಡ ನೆಡಲಾಗುವುದು.
ಪಂಚಾಯತ್ ಕೇಂದ್ರ ಸ್ಥಾನದಲ್ಲಿ, ನಗರದಲ್ಲಿ, ಸ್ಥಳಾವಕಾಶ ಇರುವೆಡೆ ಸಸಿಗಳನ್ನು ನೆಡಲಾಗುವುದು. ಸಸಿಗಳನ್ನು ನೆಡುವ ಮುನ್ನವೇ ಅಲ್ಲಿ ಸಿದ್ದತೆ ಮಾಡಿಕೊಳ್ಳಬೇಕು. ಸಸಿ ನೆಟ್ಟ ನಂತರ ಒಂದೆರಡು ವರ್ಷಗಳ ಕಾಲ ಗಿಡಗಳ ರಕ್ಷಣೆ ಮಾಡಬೇಕು. ಮಾರ್ಗದ ಹತ್ತಿರ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು.
ಸ್ಥಳೀಯ ಸಂಸ್ಥೆಳ ಜನಪ್ರತಿನಿಧಿಗಳು, ಸ್ತ್ರೀಶಕ್ತಿ, ಸ್ವಸಹಾಯ ಮಹಿಳಾ ಗುಂಪುಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳು, ಸರ್ಕಾರಿ ಅಧಿಕಾರಿ, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್, ಎನ್‌ಎಸ್‌ಎಸ್, ಎನ್‌ಸಿಸಿ ಅಭ್ಯರ್ಥಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಮಾನವ ಸರಪಳಿ ನಿರ್ಮಿಸುವ ಕಾರ್ಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಮಾರ್ಗನಕ್ಷೆಯಂತೆ ಪಂಚಾಯತ್ ವಾರು, ನಗರದಲ್ಲ್ಲಿ ವಾರ್ಡ್ವಾರು ಜನರನ್ನು ಸೇರಿಸಲು ಸಮರ್ಪಕವಾದ ಯೋಜನೆ ರೂಪಿಸಿಕೊಳ್ಳಬೇಕು. ಮಹಾನಗರಪಾಲಿಕೆ, ಸ್ಥಳೀಯ ಸಂಸ್ಥೆಗಳು, ಅಧಿಕಾರಿಗಳನ್ನೊಳಗೊಂಡAತೆ ಎಲ್ಲರೂ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು. ಸ್ಥಳೀಯ ಉಡುಗೆ-ತೊಡುಗೆಗಳೊಂದಿಗೆ ಕಲಾತ್ಮಕವಾಗಿ ಜನರು ಈ ಹಬ್ಬದಲ್ಲಿ ಪಾಲ್ಗೊಳ್ಳಬಹುದು ಎಂದರು.
ಪ್ರಶಸ್ತಿ : ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ, ಶಿಸ್ತುಬದ್ದವಾಗಿ, ಸೃಜನಾತ್ಮಕವಾಗಿ ಪಾಲ್ಗೊಂಡ ಸ್ತ್ರೀಶಕ್ತಿ ಗುಂಪುಗಳು, ಶಾಲಾ-ಕಾಲೇಜುಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಓ ಎನ್.ಹೇಮಂತ್, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಜಿ.ಪಂ ಸಿಪಿಓ ಗಾಯತ್ರಿ,,ಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ. ಮಲ್ಲೇಶಪ್ಪ, ತಹಶೀಲ್ದಾರ್ ಗಿರೀಶ್, ಡಿಡಿಪಿಯು, ಡಿಡಿಪಿಐ, ಡಿಹೆಚ್‌ಒ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Natanam Bala Natya Kendra ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50 ಕ್ಕೂ ಹೆಚ್ಚು ಕಲಾವಿದರಿಂದ ಬ್ಯಾಂಕಾಕ್ ಪ್ರವಾಸ

0

Natanam Bala Natya Kendra ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು ಥೈಲೆಂಡ್ ಹಾಗೂ ಬ್ಯಾಂಕಾಕ್ ಪ್ರವಾಸವನ್ನು ಕೈಗೊಂಡಿದೆ.
ನಿರಂತರವಾಗಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಿರಾರು ಸಾಧನೆ ಮಾಡಿರುವ ನಟನಂ ಬಾಲ ನಾಟ್ಯ ಕೇಂದ್ರದ ಐವತ್ತಕ್ಕೂ ಹೆಚ್ಚು ಕಲಾವಿದರ ತಂಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದರೊಂದಿಗೆ ಕೇಂದ್ರದ ಸಂಸ್ಥಾಪಕರು, ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಕೇಶವಕುಮಾರ್ ಅವರಿಗೆ ಪಂದ್ಯಾವಳಿ ಸಮಾರಂಭದಲ್ಲಿ ವಿಶೇಷ ಗೌರವ ನೀಡಿ ಸನ್ಮಾನಿಸಲಿದ್ದಾರೆ.
Natanam Bala Natya Kendra ಸೆ.6 ರಿಂದ ನಡೆಯಲಿರುವ ಪಂದ್ಯಾವಳಿಯಲ್ಲಿ ನಟನಂ ಕೇಂದ್ರದ ಕಲಾವಿದರಾದ ದೃತಿ, ಅನಿಂದಿತ, ಸಾನ್ವಿ ಎಸ್., ಸಂಜನಾ, ನೈದಿಲೆ, ವೈಷ್ಣವಿ, ಪೂಜಾ, ಸೌಮ್ಯ, ಸಾನಿಕ, ಸುಷ್ಮಿತ, ಅಮೂಲ್ಯ, ಪೂರ್ವಿಕ, ಸುದೀಕ್ಷ, ಭೂಮಿಕ, ಮನಸ್ವಿ, ಸಾನ್ವಿ ಜಿ., ಸಿಂಚನ, ಖುಷಿ, ತೇಜಸ್ವಿನಿ, ಮಾನಸ, ಕಶ್ವಿ, ಶ್ರೀ ಗೌರಿ, ಅನುಷಾ, ಸಾಧ್ವಿ, ಮೇಘನಾ, ಸೌರವಿ, ಷಣ್ಮುಕಿ, ದೀಕ್ಷಾ, ಅನನ್ಯ, ಸುಜನ, ಸ್ಪೂರ್ತಿ, ರಮ್ಯಶ್ರೀ, ರೋಹಿತ, ಪ್ರೇರಣ, ದೇವಿ ಚಿನ್ಮಯಿ, ಭೂಮಿಕಾ, ಲಿಪಿಕ, ಶಾಂತಿಪ್ರಿಯ, ಮೌಲ್ಯ, ಉಪಾಸನ, ಗೆಹೇನ, ಆಕಾಂಕ್ಷ, ಶಾಲಿನಿ, ಸೀಮಾ, ಪ್ರಜ್ಞಾ ಅವರೊಂದಿಗೆ ಶಿಕ್ಷಕರ ತಂಡವಾದ ಸುಪ್ರಿಯ, ಚೈತ್ರ, ನಾಟ್ಯಶ್ರೀ, ಸೌಮ್ಯ, ವಂದನ ಕೆ. ಚೇತನ್, ಚಂದ್ರಪ್ಪ, ಶೇಖರ್ ಅವರು ಈ ಪಂದ್ಯಾವಳಿಗೆ ಭಾಗವಹಿಸಲಿದ್ದಾರೆ.

DC Shivamogga ಶಿವಮೊಗ್ಗ ನಗರ & ಜಿಲ್ಲೆಯಾದ್ಯಂತ‌ ಸೆ.6 ರಿಂದ 20 ವರೆಗೆ ಬೈಕ್ ರ್ಯಾಲಿ ನಿಷೇಧಿಸಿ ಡಿಸಿ ಅವರಿಂದ ಆದೇಶ

0

DC Shivamogga ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 06 ರಿಂದ ಸೆ. 20 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ ನಡೆಸುವುದನ್ನು ನಿಷೇದಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.

Power Outage ಸೆ,5 ರಂದು ಎಂ,ಅರ್,ಎಸ್.ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

Power Outage ಎಂ.ಆರ್.ಎಸ್. 220 ಕೆವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೇಂದ್ರದ ಮಾರ್ಗಗಳಲ್ಲಿ ಸೆ. 05 ರಂದು ಬೆಳಗ್ಗೆ 09.30 ರಿಂದ ಸಂಜೆ 5.00ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ. ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, Power Outage ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Keladi Shivappa Nayaka Agriculture and Horticulture University ಅಡಿಕೆ ಬೆಳೆ ಎಲೆ ಚುಕ್ಕೆ ರೋಗ ನಿರ್ವಹಣೆ ಬಗ್ಗೆ ಕೃಷಿ ವಿವಿ ಯ ಪ್ರಕಟಣಾ ಮಾಹಿತಿ

0

Keladi Shivappa Nayaka Agriculture and Horticulture University ರೋಗ ಬಾಧಿತ ಒಣಗಿದ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗದ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು. ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು. ಮರಗಳ ಉತ್ತಮ ಬೆಳವಣಿಗೆಗೆ ಕೊಟ್ಟಿಗೆ ಗೊಬ್ಬರದ ಜೊತೆಗೆ ಶಿಫಾರಿತ ಪ್ರಮಾಣದ ಪೋಷಕಾಂಶಗಳನ್ನು ಸಾರಜನಕ:ರಂಜಕ:ಪ್ರೆಟ್ಯಾಷ್ (100:40:140 ಗ್ರಾಂ ಪ್ರತಿ ಮರಕ್ಕೆ) ನೀಡಬೇಕು. ಶೇ. 1ರ ಬೋರ್ಡೋ ದ್ರಾವಣ ಅಥವಾ ಶೇ. 0.3ರ ತಾಮ್ರದ ಆಕ್ಸಿಕ್ಲೋರೈಡ್ ಶಿಲೀಂಧ್ರನಾಶಕಗಳನ್ನು ಒಂದು ಮಿ.ಲೀ. ಅಂಟು ದ್ರಾವಣ ಜೊತೆ ಬೆರೆಸಿ ಎಲೆಗಳಿಗೆ ಸಿಂಪಡಿಸುವುದು. ರೋಗ ಲಕ್ಷಣದ ಪ್ರಾರಂಭದಲ್ಲಿ ಮುಂಜಾಗ್ರತಾ ಕ್ರಮವಾಗಿ Keladi Shivappa Nayaka Agriculture and Horticulture University ಶಿಲೀಂಧ್ರನಾಶಕಗಳಾದ ಮ್ಯಾಂಕೋಜೆಬ್ (2.5 ಗ್ರಾಂ) ಅಥವಾ ಮ್ಯಾಂಕೋಜೆ಼಼ಬ್ ಶೇ. 63+ಕಾರ್ಬೆನ್‌ಡೈಜೀಮ್ ಶೇ. 12, 2.5 ಗ್ರಾಂ ಜೊತೆಗೆ ಅಂಟು ದ್ರಾವಣ (1 ಮಿ.ಲೀ.) ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಹೆಕ್ಸಾಕೊನಜೋಲ್ ಶೇ. 5 ಎಸ್.ಸಿ/ಇ.ಸಿ ಅಥವಾ ಪ್ರೊಪಿಕೊನಜೋಲ್ ಶೇ. 25 ಇ.ಸಿ ಅಥವಾ ಟೆಬುಕೊನಜೋಲ್ ಶೇ. 39.38 ಎಸ್.ಸಿ ಅಂತರವ್ಯಾಪಿ ಶಿಲೀಂಧ್ರನಾಶಕಗಳನ್ನು 1 ಮಿ.ಲೀ. ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ರೋಗದ ಬಾಧೆಯು ಅಂತರ ಬೆಳೆಯಾದ ಕಾಳುಮೆಣಸು ಬೆಳೆಗೂ ಸಹ ಹರಡುವುದರಿಂದ ಇವುಗಳಿಗೂ ಸಹ ಸಿಂಪರಣೆ ಮಾಡಬೇಕು. ರೋಗ ಮತ್ತೆ ಕಾಣಿಸಿಕೊಂಡಲ್ಲಿ ಮೇಲೆ ತಿಳಿಸಿದ ಯಾವುದಾದರೊಂದು ಶಿಲೀಂಧ್ರ ನಾಶಕಗಳನ್ನು 20-25 ದಿನಗಳ ಅಂತರದಲ್ಲಿ ಸಿಂಪರಣೆಯನ್ನು ಪುನರಾವರ್ತಿಸಬೇಕು.ಸಾಮೂಹಿಕ ಹಂತದಲ್ಲಿ ಸಿಂಪರಣಾ ಕಾರ್ಯವನ್ನು ಕೈಗೊಳ್ಳುವುದರಿಂದ ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ತಿಳಿಸಿದೆ.

D. Devaraja State Backward Classes Development Corporation ರಾಜ್ಯದ ವಿವಿಧ ನಿಗಮಗಳ ಎಲ್ಲಾ ಯೋಜನೆಗಳಿಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಸೆ.15 ಅಂತಿಮ ದಿನಾಂಕ

0

D. Devaraja State Backward Classes Development Corporation 2024-25ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರಡಿಲ್ಲಿ ಬರುವ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ D. Devaraja State Backward Classes Development Corporation ನಿಗಮ, ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಎಲ್ಲಾ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂದವನ್ನು ಸೆ. 15ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆ ತಿಳಿಸಿರುತ್ತಾರೆ.

Madhu Bangarappa ಸರ್ಕಾರ ವಿಕಲಚೇತನರಿಗೆ ಸಾಮಾಜಿಕ ಸಮಾನತೆ ತರಲು ಅನೇಕ ಯೋಜನೆ ಜಾರಿಗೆ ತಂದಿದೆ- ಮಧು ಬಂಗಾರಪ್ಪ

0

Madhu Bangarappa ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ ವಿಕಲಚೇತನರಿಗೆ ಮೂಡಬಾರದು ಎಂದು ಸರ್ಕಾರ ವಿಕಲಚೇತನರಿಗೆ ಸಮಾಜದಲ್ಲಿ ಸಮಾನತೆಯನ್ನು ತರಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದಾದರು ಯೋಜನೆಗಳಲ್ಲಿ ಅನುದಾನದ ಕೊರತೆ ಅಥವಾ ಇನ್ನಾವುದೇ ರೀತಿಯ ತೊಂದರೆ ಉಂಟಾದರೆ ನನ್ನ ಗಮನಕ್ಕೆ ತನ್ನಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಕೆಲಸ ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿರಬಾರದು ಅನುಷ್ಠಾನ ಮತ್ತು ಸೇವೆ ನೀಡುವಲ್ಲಿ ಮುಂದಾಗಬೇಕು ಎಂದರು.
Madhu Bangarappa ರಾಜ್ಯದ ಎಲ್ಲಾ ಅನುದಾನಿತ ವಿಕಲಚೇತನರ ಶಾಲೆಗಳಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾಧ್ಯಹ್ನದ ಬಿಸಿಊಟ ಯೋಜನೆ ವಿಸ್ತರಿಲಾಗುವುದು. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗುವುದು. ವಿಕಲಚೇತನ ಮಕ್ಕಳಿಗೆ ಈ ಯೋಜನೆಗಳು ತಲುಪಬೇಕಾಗಿದ್ದು ಶಿಕ್ಷಣ ಇಲಾಖೆ ಅಡಿಯಲ್ಲಿ ಸಿಗುವ ಉಚಿತ ಸಮವಸ್ತ್ರ, ಶೂ, ಹಾಗೂ ಇನ್ನಿತರ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ವಿಕಲಚೇತನರ ಮಕ್ಕಳ ಶಾಲೆಗಳಿಗೆ ವಿಸ್ತರಿಸಲು ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಡಿಐಆರ್‌ಟಿ ಕಾರ್ಯಕ್ರಮದ ಅಡಿ ಶಿಕ್ಷಕರು ವಿಕಲಚೇತನ ಮಕ್ಕಳ ಮನೆಗಳಿಗೆ ತೆರಳಿ ಅವರಿಗೆ ಅಗತ್ಯವಿರುವ ಸೌಲಭ್ಯ, ತರಬೇತಿ ನೀಡುವರು. ಇದನ್ನು ಅವರು ಉಪಯೋಗಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ 5 ಗ್ಯಾರಂಟಿಗಳ ಮೂಲಕ ಜೊತೆ ಸಮಾಜದಲ್ಲಿ ಸಮಾನತೆಯನ್ನು ನೀಡುವ ಅನೇಕ ಕೆಲಸವನ್ನು ಮಾಡುತ್ತಿದೆ. ಇಂದು ಜಿಲ್ಲೆಯ ಎಲ್ಲಾ ತಾಲೂಕುಗಳ 53 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು ಅತ್ಯಂತ ಜಾಗರೂಕತೆಯಿಂದ ವಾಹನ ಚಾಲಾಯಿಸಬೇಕು. ಮಕ್ಕಳ ಕೈಯಲ್ಲಿ ವಾಹನ ಎಂದು ಎಚ್ಚರಿಕೆ ಮಾತು ಹೇಳಿದರು.
ಈ ವೇಳೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಮತ್ತು ಎಂಆರ್‌ಡಬ್ಲುö್ಯ ಗಳು, ತಾವು ಅನೇಕ ವರ್ಷಗಳಿಂದ ಗೌರವಧನದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು ಸೇವೆ ಖಾಯಂಗೊಳಿಸುವAತೆ ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಚಂದ್ರಭೂಪಾಲ್, ಸೂಡಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶಶಿರೇಖಾ, ಶಾರದಾ ಅಂಧರ ವಿಕಾಸ ಶಾಲೆಯ ಮುಖ್ಯಸ್ಥರಾದ ಈಶ್ವರ್ ಭಟ್, ಮತ್ತಿತರರು ಉಪಸ್ಥಿತರಿದ್ದರು.

Shivamogga Police ಏಕಾಏಕಿ ಬ್ಯಾಂಕ್ ಖಾತೆಯಿಂದ ₹ 2.41 ಲಕ್ಷ ಕಡಿತ. ಖಾತೆದಾರ ಕಂಗಾಲು. ಪೊಲೀಸ್ ಠಾಣೆಯಲ್ಲಿ ದೂರು ದಾಖಲು

0

Shivamogga Police ಯಾವುದೇ ಆಪ್, ಲಿಂಕ್ ಮುಟ್ಟದಿದ್ದರೂ ಖಾತೆಯಿಂದ ತನ್ನಿಂತಾನಾಗಿಯೇ ಕಡಿತವಾದ ಬಗ್ಗೆ ವಿನೋಬನಗರ ಪೊಲೀಸರಿಗೆ ಬಿ ಎಸ್ ಎನ್ ಎಲ್ ನಿವೃತ್ತ ನೌಕರರೊಬ್ಬರು ದೂರು ನೀಡಿದ್ದಾರೆ.
ಹರಿ ಪಟ್ನಾಯಕ್ ಎನ್ನುವವರು ೨,೪೧,೦೦೦ ರೂ. ಹಣ ಕಳೆದುಕೊಂಡವರು. ಎರಡು ಬ್ಯಾಂಕಿನ ಖಾತೆಯನ್ನು ಹೊಂದಿರುವ ಪಟ್ನಾಯಕ್ ಆ.೧೬ ರಂದು ಮನೆಯಲ್ಲಿದ್ದಾಗ ವಿನೋಬನಗರದ ಬ್ಯಾಂಕ್ ಖಾತೆಯಿಂದ ಸಂಜೆ ೫ ರಿಂದ ೭ ಗಂಟೆಯವರೆಗೆ ಎರಡು ಲಕ್ಷದ ಎರಡು ಸಾವಿರ ರೂ. ಹಣ ಕಡಿತವಾಗಿದೆ. ನಂತರ ಇನ್ನೊಂದು ಬ್ಯಾಂಕ್‌ನಿಂದ ೩೯ ಸಾವಿರ ರೂ ಹಣ ಕಳೆದುಕೊಂಡಿದ್ದಾರೆ.
ಏನೂ ಮಾಡದೆ ಸುಮ್ಮನೆ ಹಣ ಕಳೆದುಕೊಂಡಿರುವುದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ.

Kuvempu University ಕುವೆಂಪು ವಿವಿಯ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ- ಸಚಿವ ಮಧು ಬಂಗಾರಪ್ಪ

0

Kuvempu University ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರವ ತೊಡಕುಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿ ಹಣಕಾಸು ವಿಷಯದಲ್ಲಿ ಸಂಕಷ್ಟದಲ್ಲಿದ್ದು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಆಡಳಿತವನ್ನು ವಿವಿ ನಿಯಮಾವಳಿ ಪ್ರಕಾರ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು. ತ್ವರಿತ ವಾಗಿ ಕೈಗೊಳ್ಳಬೇಕಾದ ಹಣಕಾಸು ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು.‌ ಏನೇ ಸಮಸ್ಯೆ ಇದ್ದರೂ ನನ್ನನ್ನು ಕರೆಯಿರಿ. ವಿವಿ ಅಭಿವೃದ್ದಿಯಲ್ಲಿ ನಾವೆಲ್ಲ ಭಾಗಿಯಾಗೋಣ ಎಂದು ಮನವಿ ಮಾಡಿದರು.

ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಮಾತನಾಡಿ, ವಿವಿ‌ಸಂಪೂರ್ಣವಾಗಿ ಸರ್ಕಾರಿ ಹಣದ ಮೇಲೇ ಅವಲಂಬಿಸದೆ ಸಕ್ರಿಯರಾಗಿ ಸಿಎಸ್ ಆರ್ ನಿಧಿ ಹಾಗೂ ಇತರೆ ಚಟುವಟಿಕೆ ಮೂಲಕ ಅಭಿವೃದ್ಧಿ ಗೆ ಶ್ರಮಿಸಲಾಗುವುದು.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ವಿವಿ ವ್ಯಾಪ್ತಿಗೆ ಬರುತ್ತದೆ. ಪ್ರಥಮ ದರ್ಜೆ ಕಾಲೇಜುಗಳ ಅಫಿಲಿಯೇಷನ್ ಗಾಗಿ ಸರ್ಕಾರಕ್ಕೆ ಅರ್ಜಿ ೩೫ ಪ್ರಸ್ತಾವನೆ ಕಳುಹಿಸಿದ್ದೆವು. ಅಫಿಲಿಯೇಷನ್ ದೊರಕದೆ ಕಾಲೇಜು ಆರಂಭಿಸಲು ಸಾಧ್ಯವಿಲ್ಲ.೧೭ ಸರ್ಕಾರಿ ಕಾಲೇಜು ಅನುಮೋದನೆ ಆಗಿದೆ. ೧೮ ಕಾಲೇಜು ಅನುಮೋದನೆಯಾಗದ ಕಾರಣ ದಾಖಲಾತಿ ಸಾಧ್ಯವಾಗುತ್ತಿಲ್ಲ ವೆಂದರು.

ಫಲಿತಾಂಶ ಬೇಗ ನೀಡಲು ಸ್ವಲ್ಪ ತೊಡಕು ಇದೆ.‌ ಯುಯುಸಿಎಂಎಸ್ ಸೆಂಟ್ರಲೈಸ್ಡ್ ಸಾಫ್ಟ್ವೇರ್ ನಿಂದ ಸಣ್ಣಪುಟ್ಟ ಬದಲಾವಣೆ ಕೂಡ ಅತ್ಯಂತ ಕಷ್ಟ ಆಗುತ್ತಿದೆ. ೩ ವರ್ಷದಿಂದ ಸ್ನಾತಕೋತ್ತರ ಪದವಿ ಅಂಕಪಟ್ಟಿ ಸಹ ಬಂದಿಲ್ಲ . ವಿಕೇಂದ್ರೀಕರಣ ಆದರೆ ಅನುಕೂಲವಾಗುತ್ತದೆ. ಯುಯುಸಿಎಂಎಸ್ ಪೋರ್ಟಲ್ ನಲ್ಲಿ ದಾಖಲಾತಿ ಹಾಗೂ ಅಂಕಪಟ್ಟಿ ಪಡೆಯುವಲ್ಲಿ ಅನೇಕ ತೊಂದರೆಗಳಿವೆ. ಪಿಯು ಫಲಿತಾಂಶ ಬಂದು 4 ತಿಂಗಳಾದರೂ ದಾಖಲಾತಿ ಸಾಧ್ಯವಾಗಿಲ್ಲ ಎಂದರು.
ಪ್ರಾಧ್ಯಾಪಕರು ಮಾತನಾಡಿ, ಅಫಿಲಿಯೇಷನ್ ದೊರಕದ ಪ್ರಥಮ ದರ್ಜೆ ಕಾಲೇಜುಗಳಿಗೆ ದಾಖಲಾತಿ ಆಗುತ್ತಿಲ್ಲ. ಹಾಗೂ ಸರ್ಕಾರದ ಕೆಲವು ನೀತಿಗಳಿಂದಾಗಿ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣ ನಿಲ್ಲಿಸಲಾಗಿದ್ದು ವಿದ್ಯಾರ್ಥಿಗಳು ಮತ್ತು ವಿವಿ ಗೆ ಹಿನ್ನಡೆಯಾಗಿದೆ ಎಂದರು.

Kuvempu University ಸಿಂಡಿಕೇಟ್ ಸದಸ್ಯರಾದ ಶ್ರೀಪಾಲ್ ಮತ್ತು ಇತರೆ ಪ್ರಾಧ್ಯಾಪಕರು, ಕರ್ನಾಟಕ ಮತ್ತು‌ ಮಹಾರಾಷ್ಟ್ರದಲ್ಲಿ‌ ಮಾತ್ರ ಈ ಸೆಂಟ್ರಲೈಸ್ಡ್ ಪೋರ್ಟಲ್ ಇದ್ದು, ರಾಜ್ಯಾದ್ಯಂತ ವಿವಿ ಗಳಲ್ಲಿ ಈ ಸಮಸ್ಯೆಗಳಿವೆ ಎಂದು ತಿಳಿಸಿದರು.

ಸಚಿವರು, ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿನ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳು ಗಂಭೀರವಾಗಿದ್ದು, ಸಮಸ್ಯೆಗಳ ಪಟ್ಟಿ ನೀಡಿ ಈ ವಿಷಯವಾಗಿ ಆದ್ಯತೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಮಾತನಾಡುತ್ತೇನೆ.

ಹಂತ ಹಂತವಾಗಿ ವಿವಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೂ ನಾನು‌ ಈ ಸಮಸ್ಯೆಗಳ ಬಗ್ಗೆ ತಿಳಿಸುತ್ತೇನೆ ಎಂದರು.ಈ ತಿಂಗಳ ಅಂತ್ಯದೊಳಗೆ ಮತ್ತೊಂದು ಸಭೆ ನಡೆಸೋಣ ಎಂದರು.

ಹೊರಗುತ್ತಿಗೆ ನೌಕರರಿಗೆ ವೇತನ‌ ನೀಡುವುದು ವಿಳಂಬವಾಗುತ್ತಿದ್ದು, ನಿಗದಿತ ಸಮಯದೊಳಗೆ ವೇತನ ನೀಡಬೇಕೆಂದು ತಿಳಿಸಿದರು.

CM Siddharamaih ಮೂಡಾ ಹಗರಣವಿಚಾರಣೆ ಸೆ.9 ಕ್ಕೆ ಮುಂದೂಡಿಕೆ. ಸಿದ್ಧರಾಮಯ್ಯಗೆ ರಿಲೀಫ್

0

CM Siddharamaih ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 9ಕ್ಕೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ನ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್ ವಾದ ಮಂಡಿಸಿದರು. ಬಳಿಕ ನ್ಯಾಯಪೀಠ ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 9ಕ್ಕೆ ಮುಂದೂಡಿದೆ.

CM Siddharamaih ಸೆಪ್ಟಂಬರ್ 9ರಂದು ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಲಿದ್ದಾರೆ. ಸೆಪ್ಟಂಬರ್ 12ಕ್ಕೆ ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಲಿದ್ದಾರೆ. ಈ ನಡುವೆ ಸೆಪ್ಟಂಬರ್ 12ಕ್ಕೆ ವಿಚಾರಣೆ ಮುಗಿಸೋಣ ಎಂದು ನ್ಯಾಯಪೀಠ ತಿಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.