Sri Abhinava Channabasava ಶಿವಮೊಗ್ಗ ದೇಶದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆ ಮಹತ್ವವನ್ನು ಯುವಜನರಿಗೆ ತಿಳಿಸಬೇಕಾದ ಅವಶ್ಯಕತೆ ಇದ್ದು, ಸಂಸ್ಕೃತಿ ಆಚರಣೆಗಳನ್ನು ಮಕ್ಕಳಿಗೆ ಕಲಿಸಬೇಕಿದೆ ಎಂದು ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು.
ಹೊಸನಗರದ ಮೂಲೆಗದ್ದೆ ಸದಾಶಿವ ಆಶ್ರಮದಲ್ಲಿ ಶಿವಮೊಗ್ಗ ಭಜನಾ ಪರಿಷತ್, ಭಜನಾ ಮಂಡಳಿ, ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಭಕ್ತರಿಂದ ಆಯೋಜಿಸಿದ್ದ ಲಲಿತಾ ಸಹಸ್ರನಾಮ ಮತ್ತು ಶ್ರಾವಣ ವಿಶೇಷ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಭಾರತೀಯ ಮೌಲ್ಯಯುತ ಆಚರಣೆಗಳಿಂದ ಇಂದಿನ ಯುವಪೀಳಿಗೆ ದೂರಾಗುತ್ತಿದ್ದಾರೆ. ಮಕ್ಕಳಲ್ಲಿ ಧಾರ್ಮಿಕ ಚಿಂತನೆ ಮೂಡಿಸದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗಲಿದೆ. ಸನಾತನ ಸಂಸ್ಕೃತಿ ಆಚರಣೆಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ತಿಳಿಸಿದರು.
ಭಾರತ ದೇಶ ವಿಶ್ವದಲ್ಲಿಯೇ ವಿಶೇಷ ಸ್ಥಾನಮಾನ ಹೊಂದಿದ್ದು, ಶ್ರೇಷ್ಠ ಮೌಲ್ಯಯುತ ಐತಿಹಾಸಿಕ ಪರಂಪರೆ ಹಿನ್ನೆಲೆ ಹೊಂದಿರುವ ಕಾರಣಕ್ಕೆ ಭಾರತ ದೇಶವನ್ನು ವಿಶೇಷ ಗೌರವದಿಂದ ನೋಡುತ್ತಾರೆ. ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಸಂಗತಿಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದರು.
Sri Abhinava Channabasava ಶ್ರಾವಣ ಮಾಸ ವಿಶೇಷ ತಿಂಗಳು ಆಗಿದ್ದು, ಧಾರ್ಮಿಕ ಆಚರಣೆಗಳಿಗೆ ವಿಶೇಷ ಪ್ರಾಶಸ್ತ್ಯ ನೀಡಲಾಗುತ್ತದೆ. ಶ್ರಾವಣ ಮಾಸದಲ್ಲಿನ ಧಾರ್ಮಿಕ ಕಾರ್ಯಗಳು ಸೇರಿದಂತೆ ಮನೆಗಳಲ್ಲಿ ದಿನನಿತ್ಯ ಪಾಲಿಸುವ ಪೂಜೆಯ ಕ್ರಮಗಳನ್ನು ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಲಲಿತ ಸಹಸ್ರನಾಮ ಪಾರಾಯಣದಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸುರೇಶ್, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ್, ಭಜನಾ ಪರಿಷತ್ ಮುಖ್ಯಸ್ಥ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮತ್ತಿತರರು ಪಾಲ್ಗೊಂಡಿದ್ದರು.
Sri Abhinava Channabasava ಮಕ್ಕಳಲ್ಲಿ ಧಾರ್ಮಿಕ ಚಿಂತನೆ ಮೂಡಿಸಿ- ಶ್ರೀಅಭಿನವ ಚನ್ನಬಸವಶ್ರೀ
Dr. H.B Manjunath ಸಾಧನೆಗೆ ಜೀವನ ಶಿಸ್ತು ಮುಖ್ಯ-ಡಾ.ಎಚ್.ಬಿ.ಮಂಜುನಾಥ್
Dr. H.B Manjunath “ಸಾಧನೆಗೆ ಜೀವನ ಶಿಸ್ತು ಮುಖ್ಯ” -ಬಾಪೂಜಿ ಹೈಟೆಕ್ ಬಿಕಾಂ ಪೀಠಿಕಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ- ದಾವಣಗೆರೆ.ಆ.29. ಜೀವನದಲ್ಲಿ ಯಾವುದೇ ಸಾಧನೆ ಮಾಡಬೇಕೆಂದರೂ ಶಿಸ್ತು ಅತಿ ಮುಖ್ಯ, ಶಿಸ್ತುಬದ್ಧ ಕಾರ್ಯಗಳು ಒಂದಕ್ಕೊಂದು ಹೊಂದಿಕೊಂಡು ಸಫಲತೆ ತಂದುಕೊಡುತ್ತವೆ ಎಂದು ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಹೇಳಿದರು. ಅವರಿಂದು ಬಾಪೂಜಿ ಹೈಟೆಕ್ ಕಾಲೇಜಿನ ನೂತನ ಬಿಕಾಂ ವಿದ್ಯಾರ್ಥಿಗಳ ‘ಪೀಠಿಕಾ'(ಓರಿಯಂಟೇಷನ್) ಕಾರ್ಯಕ್ರಮದಲ್ಲಿ ‘ಜೀವನಶಿಸ್ತು’ ಎನ್ನುವ ವಿಷಯವಾಗಿ ವಿಶೇಷ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಶೈಕ್ಷಣಿಕ ಶಿಸ್ತು ಅಂದರೆ ಅಂದಂದಿನ ಪಾಠ ಪ್ರವಚನಗಳನ್ನು ಅಂದೇ ಅರ್ಥ ಮಾಡಿಕೊಂಡು ಮನದಟ್ಟು ಮಾಡಿಕೊಳ್ಳುವುದು, ಪ್ರಶ್ನೆಗಳು ಸಂದೇಹಗಳು ಎದುರಾದಲ್ಲಿ ತಕ್ಷಣವೇ ಶಿಕ್ಷಕರನ್ನು ಸಂಪರ್ಕಿಸಿ ಪರಿಹಾರ ಪಡೆಯುವುದು, ಆಗ ಪರೀಕ್ಷಾ ಭಯವೂ ಇರುವುದಿಲ್ಲ, Dr. H.B Manjunath ಸಾಧನೆಗೆ ಜೀವನ ಶಿಸ್ತು ಮುಖ್ಯ-ಡಾ.ಎಚ್.ಬಿ.ಮಂಜುನಾಥ್ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗುವ ಅವಕಾಶವೂ ಹೆಚ್ಚುತ್ತದೆ ಎಂದರಲ್ಲದೆ ಬದುಕಿನಲ್ಲಿ ಸಂವಿಧಾನದತ್ತ ಹಕ್ಕುಗಳಿಗಿಂತ ಕರ್ತವ್ಯಗಳ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಇದನ್ನು ರಾಷ್ಟ್ರೀಯ ಶಿಸ್ತು ಎನ್ನಬಹುದು, ಇದರಿಂದ ರಾಷ್ಟ್ರಾಭಿವೃದ್ಧಿ ಸಾಧ್ಯ ಎಂಬುದನ್ನು ನಿದರ್ಶನಗಳ ಸಹಿತ ವಿವರಿಸಿದರು. ದೇಶದಲ್ಲಿ ವಾರ್ಷಿಕ ಸುಮಾರು ಒಂದು ಕೋಟಿ ಪದವಿ ಹಾಗೂ ಡಿಪ್ಲೋಮೋ ದಾರರು ಹೊರಬರುತ್ತಿದ್ದು ಇದರಲ್ಲಿ ದೇಶದ ಸುಮಾರು 962 ವಿಶ್ವವಿದ್ಯಾಲಯಗಳ 38160 ಕಾಲೇಜುಗಳಿಂದ ಸುಮಾರು 25 ಲಕ್ಷದಷ್ಟು ಸಾಮಾನ್ಯ ಪದವೀಧರರು ಹೊರಬರುತ್ತಿದ್ದಾರೆ, ಇವರಲ್ಲಿ ಶೇಕಡ 70ರಷ್ಟು ಬಿಕಾಂ ಪದವೀಧರರೇ ಆಗಿರುತ್ತಾರೆ, ವಾಣಿಜ್ಯ ಪದವೀಧರರಿಗೆ ಕೈಗಾರಿಕೋದ್ಯಮ ರಂಗದಲ್ಲಿ ಉತ್ತಮ ಅವಕಾಶಗಳಿವೆ ಎಂದು ಹೇಳಿದರು. ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವಾನಂದ ಡಾ.ಎಚ್.ಬಿ. ಮಂಜುನಾಥರನ್ನು ಸನ್ಮಾನಿಸಿ ಗೌರವಿಸಿದರು. ಪ್ರೊಫೆಸರುಗಳಾದ ಮಂಜುನಾಥ ಬಿ ಬಿ, ಜ್ಞಾನೇಶ್ವರ ಆರ್ ಎಸ್, ಲತಾ ಓ ಹೆಚ್, ಶ್ವೇತಾ ಬಿ ವಿ, ಮಂಜುಳಾ ಎ ಎನ್, ಕಾಂಚನಾ ಟಿ ಎಸ್, ನಾಗರಾಜ್ ಎಂ ಎಸ್ ಉಪಸ್ಥಿತರಿದ್ದು ಅಕಿಲ್ ಅನ್ವರ್, ಉಜ್ಮಾ ನಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಉಪನ್ಯಾಸಕರ ಪರಿಚಯವನ್ನು ತನ್ಮಯಿ ಮಾಡಿದರು.
Natural farming News ನೈಸರ್ಗಿಕ ಕೃಷಿಯಿಂದ ರೈತರ ಆದಾಯ ದ್ವಿಗುಣ- ಡಾ.ಕೆ.ಟಿ.ಗುರುಮೂರ್ತಿ
Natural farming News ಶಿವಮೊಗ್ಗ, ಆ.29( ಕರ್ನಾಟಕ ವಾರ್ತೆ) ರಾಸಾಯನಿಕ ಮುಕ್ತ ಆರೋಗ್ಯಕ್ಕಾಗಿ ಹಾಗೂ ಬೇಸಾಯದ ಖರ್ಚನ್ನು ಕಡಿಮೆ ಮಾಡುವಲ್ಲಿ ನೈಸರ್ಗಿಕ ಕೃಷಿಯು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ. ಕೆ. ಟಿ. ಗುರುಮೂರ್ತಿ ತಿಳಿಸಿದರು.
ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ (ಮ್ಯಾನೇಜ್), ಹೈದರಾಬಾದ್ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಹಯೋಗದೊಂದಿಗೆ ದಿನಾಂಕ 28-08-2024 ರಂದು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ನೈಸರ್ಗಿಕ ಕೃಷಿ ಕುರಿತು ಏರ್ಪಡಿಸಲಾಗಿರುವ ಐದು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Natural farming News ಗ್ರಾಮೀಣ ಮಟ್ಟದಲ್ಲಿ ಕೃಷಿಕರಿಗೆ ನೂತನ ತಾಂತ್ರಿಕತೆಗಳು ಹಾಗೂ ಸೌಲಭ್ಯಗಳನ್ನು ತಲುಪಿಸುವಲ್ಲಿ ಕೃಷಿ ಸಖಿಯರ ಪಾತ್ರ ಬಹಳ ಮಹತ್ತರವಾಗಿದೆ. ನೈಸರ್ಗಿಕ ಕೃಷಿಯೊಂದಿಗೆ ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡಲ್ಲಿ ರೈತರ ಆದಾಯ ದ್ವಿಗುಣಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ನೈಸರ್ಗಿಕ ಕೃಷಿಯಲ್ಲಿ ಜಾನುವಾರುಗಳ ಪಾತ್ರ ಅತಿ ಮುಖ್ಯ. ಜೈವಿಕ ಕಷಾಯಗಳನ್ನು ತಯಾರಿಸಿ, ತಮ್ಮ ತಮ್ಮ ಬೆಳೆಗಳ ಕೀಟ ಹಾಗೂ ರೋಗಗಳ ನಿರ್ವಹಣೆಯನ್ನು ಮಾಡಲು ಗೋಮೂತ್ರ ಹಾಗೂ ಸಗಣಿ ಬಹಳ ಮುಖ್ಯವೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಬಿ.ಸಿ.ಹನುಮಂತಸ್ವಾಮಿ ಮಾತನಾಡಿ, ರೈತರು ತಮ್ಮ ಜಮೀನಿನಲ್ಲಿ ಸಿಗುವ ಸ್ಥಳೀಯ ಬೆಳೆಗಳ ತ್ಯಾಜ್ಯಗಳಿಂದ ಗೊಬ್ಬರಗಳನ್ನು ತಯಾರಿಸಿ ಮರುಬಳಕೆ ಮಾಡುವುದರಿಂದ ಬೇಸಾಯದ ಖರ್ಚನ್ನು ಸುಲಭವಾಗಿ ನಿರ್ವಹಿಸಬಹುದು ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ವಿಜ್ಞಾನಿ ಡಾ. ಎನ್. ಸುಧಾರಾಣ Âಮತ್ತು ವಿಜ್ಞಾನಿ ಡಾ. ರುದ್ರಗೌಡ, ಇವರು ನಡೆಸಿಕೊಟ್ಟರು. ಈ ತರಬೇತಿಯಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ 35 ಕೃಷಿ ಸಖಿಯರು ಭಾಗವಹಿಸಿದ್ದರು.
Agniveer Army Recruitment 2024 ಅಗ್ನಿವೀರ್ ಸೇವಾ ನೇಮಕಾತಿ ರ್ಯಾಲಿ ಮುಕ್ತಾಯ
Agniveer Army Recruitment 2024 ಅಗ್ನಿವೀರ್ ಸೇವಾ ನೇಮಕಾತಿ ರ್ಯಾಲಿ ಮುಕ್ತಾಯ ಹಂತ-ಮೇ.ಜ. ಹರಿ ಪಿಳ್ಳೈ
ಶಿವಮೊಗ್ಗ, ಆಗಸ್ಟ್ 29, (ಕರ್ನಾಟಕ ವಾರ್ತೆ): ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ನಡೆಯುತ್ತಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ 8ನೇ ದಿನವಾದ ಇಂದು ಬೆಂಗಳೂರಿನ ಮೇಜರ್ ಜನರಲ್ ಹರಿ ಪಿಳ್ಳೈ, ಹೆಚ್ಚುವರಿ ನೇಮಕಾತಿ Agniveer Army Recruitment 2024 ಮಹಾನಿರ್ದೇಕರು (ಕರ್ನಾಟಕ ಮತ್ತು ಕೇರಳ) ಇವರು ಪಾಲ್ಗೊಂಡು ನೇಮಕಾತಿ ರ‍್ಯಾಲಿಯ ಪ್ರಕ್ರಿಯೆಯನ್ನು ಉದ್ಘಾಟಿಸಿದರು.
ಅವರು ಇಂದಿಗೆ ದೈಹಿಕ ಪರೀಕ್ಷೆ ಕೊನೆಗೊಳ್ಳುತ್ತಿದ್ದು, ಆ. 30 ರಂದು ವೈದ್ಯಕೀಯ ಪರೀಕ್ಷೆಯು ಸಹ ಅಂತ್ಯಗೊಳ್ಳುತ್ತಿದೆ. ಈ ದಿನಗಳಲ್ಲಿ ತಾಂತ್ರಿಕ, ಲಿಪಿಕ ಮತ್ತು ವೃತ್ತಿಪರ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದರು
Plant for Mother “ಪ್ಲಾಂಟ್ ಫಾರ್ ಮದರ್ ” ಅಭಿಯಾನ ಆರಂಭ
Plant for Mother ಶಿವಮೊಗ್ಗ ಆ.29 (ಕರ್ನಾಟಕ ವಾರ್ತೆ) ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ‘ಪ್ಲಾಂಟ್ ಫಾರ್ ಮದರ್’ ಅಭಿಯಾದ ಅಂಗವಾಗಿ ಆ.29 ರಂದು ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಭಾರತದ ಪ್ರಧಾನ ಮಂತ್ರಿಗಳು 2024 ರ ಜೂನ್ 5 ರಂದು ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಜಾಗತಿಕವಾಗಿ ಹವಾಮಾನ ಬದಲಾವಣೆಯನ್ನು ನಿಯಂತ್ರಿಸುವ ಸಲುವಾಗಿ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಪ್ಲಾಂಟ್ ಫಾರ್ ಮದರ್ ಅಭಿಯಾನಕ್ಕೆ ಚಾಲನೆ ನೀಡಿದ್ದರು.
Plant for Mother ಈ ಅಭಿಯಾನದಡಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಾಗಿ 2024 ರ ಸೆಪ್ಟೆಂಬರ್ ವೇಳೆಗೆ ದೇಶದಾದ್ಯಂತ 80 ಕೋಟಿ ಸಸಿಗಳನ್ನು ಮತ್ತು 2025 ರ ಮಾರ್ಚ್ ವೇಳೆಗೆ 140 ಕೋಟಿ ಸಸಿಗಳನ್ನು ನೆಡುವ ಗುರಿಯನ್ನು ಹೊಂದಿದೆ. ಈ ಅಭಿಯಾನದ ಒಂದು ಭಾಗವಾಗಿ ಆಗಸ್ಟ್ 29 ರಂದು ಭಾರತ ಸರ್ಕಾರದ ಕೃಷಿ ಸಚಿವರು, ಕೃಷಿ ಅನುಸಂಧಾನ ಪರಿಷತ್‌ನ ಕ್ಯಾಂಪಸ್‌ನಲ್ಲಿ ಒಂದು ಎಕರೆ ಪ್ರದೇಶದಲ್ಲಿಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಇದರ ಭಾಗವಾಗಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆ.29 ರಂದು ರೈತರೊಡಗೂಡಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಪ್ಲಾಂಟ್ ಫಾರ್ ಮದರ್ ಅಭಿಯಾನವನ್ನು ಕೈಗೊಂಡು 100 ಸಸಿಗಳನ್ನು ನೆಡಲಾಯಿತು. ಸೊರಬದ ಪ್ರಗತಿಪರ ರೈತರಾದ ವೀರಪ್ಪನಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ಬಿ.ಸಿ.ಹನುಮಂತಸ್ವಾಮಿ, ಡಾ.ಸಿ.ಸುನಿಲ್, ಡಾ.ಎನ್.ಸುಧಾರಾಣಿ, ವಿಜ್ಞಾನಿ ಭರತ್ ಕುಮಾರ್, ತಾಂತ್ರಿಕ ಸಿಬ್ಬಂದಿಗಳು, ವಿದ್ಯಾರ್ಥಿಗಳು, 30 ಜನರೈತ ಮಹಿಳೆಯರು ಪಾಲ್ಗೊಂಡಿದ್ದರು.
Shivamogga News ತಂಬಾಕು ದಾಳಿ, 23 ಪ್ರಕರಣ ದಾಖಲು
Shivamogga News ಶಿವಮೊಗ್ಗ ದಿನಾಂಕ 29. 8.2024 ರಂದು ಶಿವಮೊಗ್ಗ ನಗರದ ಬಸ್ ನಿಲ್ದಾಣದ ಸುತ್ತಲಿನ ಪ್ರದೇಶದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.
ಒಟ್ಟು 23 ಪ್ರಕರಣಗಳನ್ನು ದಾಖಲಿಸಿ ರೂ. 3500 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಮತ್ತು ಕೋಟ್ಪಾ(ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ) ಕಾಯ್ದೆ ಕುರಿತು ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
ತಂಡದಲ್ಲಿ ಶಿವಮೊಗ್ಗ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ Shivamogga News ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
SN Channabasappa ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕ ಚೆನ್ನಿ
SN Channabasappa ಇಂದು ಬೆಳಗ್ಗೆ ಶಿವಮೊಗ್ಗ ವಿಧಾನಸಭಾ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ಬಸವನಗುಡಿ ಹಾಗೂ ಅಮಿರ್ ಅಹಮದ್ ಬಡಾವಣೆಗಳಿಗೆ ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.
SN Channabasappa ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿರುವಂತಹ ಕುಡಿಯುವ ನೀರಿನ ಸಮಸ್ಯೆ, ಯುಜಿಡಿ, ರಸ್ತೆಗಳನ್ನು ನಿರ್ಮಾಣದ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
Madhu Bangarappa ಕಸ್ತೂರಿ ರಂಗನ್ ವರದಿ ಬಗ್ಗೆ ಸಚಿವ ಮಧು ಬಂಗಾರಪ್ಪ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ
Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ “ಕಸ್ತೂರಿ ರಂಗನ್ ವರದಿ”ಗೆ ಸಂಭಂದಿಸಿದಂತೆ ನಡೆದ ಸಚಿವ ಸಂಪುಟ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಸುದೀರ್ಘವಾಗಿ ಚರ್ಚಿಸಿದರು .
ಡಾ.ಕೆ ಕಸ್ತೂರಿ ರಂಗನ್ ನೇತೃತ್ವದ ತಂಡವು “ಪಶ್ಚಿಮ ಘಟಕ್ಕೆ” ಸಂಬಂಧಿಸಿದಂತೆ ನೀಡಿರುವ ವರದಿ ಮತ್ತು ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯ ಅನುಕೂಲ ಮತ್ತು ಅನಾನುಕೂಲಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.
Madhu Bangarappa ಸಚಿವ ಸಂಪುಟ ಸದಸ್ಯರಾದ ಶ್ರೀ ಈಶ್ವರ್ ಖಂಡ್ರೆ, ಶ್ರೀ ಕೆ.ಜೆ ಜಾರ್ಜ್, ಶ್ರೀ ಹೆಚ್.ಸಿ ಮಹದೇವಪ್ಪ, ಶ್ರೀ ಡಾ. ದಿನೇಶ್ ಗುಂಡೂರಾವ್, ಶ್ರೀ ಮಂಕಾಳ ವೈದ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Karnataka State Government ಗಮನಿಸಿ, ಕರ್ನಾಟಕ ಡಿಜಿಟಲ್ ಜಾಹಿರಾತು ಮಾರ್ಗಸೂಚಿ- 2024 ಜಾರಿಗೆ ಬಂದಿದೆ
Karnataka State Government ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳಿಗೂ ಸರ್ಕಾರಿ ಜಾಹೀರಾತು ನೀಡಲು ಅವಕಾಶ ಮಾಡಿಕೊಡುವ ನೂತನ ಜಾಹೀರಾತು ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.
ʼಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024’ ಅನ್ನು ಜಾರಿ ಮಾಡಲಾಗಿದ್ದು, ಎಲ್ಲಾ ಸ್ವರೂಪದ ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರಿ ಜಾಹೀರಾತು ನೀಡಲು ಇದು ಅನುವು ಮಾಡಿಕೊಡಲಿದೆ.
ಬ್ರ್ಯಾಂಡ್ ರಾಯಭಾರಿಗಳು, ಪ್ರಾಯೋಜಿತ ಪೋಸ್ಟ್‌ಗಳು, ಅತಿಥಿ ಬ್ಲಾಗ್‌ಗಳು, ಕಂಟೆಂಟ್ ಸಹಯೋಗ, ವಿಷಯಾಧಾರಿತ ಅಭಿಯಾನ, ಕಾರ್ಯಕ್ರಮ ಪ್ರಚಾರ, ವಿಮರ್ಶೆ ಮತ್ತು ಹ್ಯಾಶ್‌ಟ್ಯಾಗ್ ಅಭಿಯಾನಗಳ ಸ್ವರೂಪದಲ್ಲಿ ಇನ್‌ಫ್ಲುಯೆನ್ಸರ್‌ಗಳಿಗೆ ಜಾಹೀರಾತು ನೀಡಲಾಗುತ್ತದೆ.
ಯಾವುದಾದರೂ ಒಂದು ಸಾಮಾಜಿಕ ಜಾಲತಾಣಗಳಲ್ಲಿ ನಿಗದಿತ ಸಂಖ್ಯೆಯ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲುಯೆನ್ಸರ್‌ಗಳಿಗೆ ಸರ್ಕಾರಿ ಜಾಹೀರಾತು ದೊರೆಯಲಿದೆ. ಇನ್‌ಫ್ಲುಯೆನ್ಸರ್‌ಗಳಲ್ಲಿ ಮೂರು ವರ್ಗೀಕರಣ ಮಾಡಲಾಗಿದೆ.
Karnataka State Government ಫಾಲೋವರ್‌ಗಳ ಸಂಖ್ಯೆ 1 ಲಕ್ಷದಿಂದ 5 ಲಕ್ಷದವರೆಗೆ ಇದ್ದರೆ ‘ನ್ಯಾನೊ’, 5 ಲಕ್ಷದಿಂದ 10 ಲಕ್ಷದವರೆಗೆ ‘ಮೈಕ್ರೊ’ ಮತ್ತು 10 ಲಕ್ಷಕ್ಕಿಂತ ಹೆಚ್ಚು ಇದ್ದರೆ ‘ಮ್ಯಾಕ್ರೊ’ ಇನ್‌ಫ್ಲುಯೆನ್ಸರ್‌ಗಳು ಎಂದು ವರ್ಗೀಕರಿಸಲಾಗಿದೆ.
ವಾರ್ತಾ ಇಲಾಖೆಯು ನೋಂದಾಯಿತ ಏಜೆನ್ಸಿಗಳ ಮೂಲಕ ಜಾಹೀರಾತು ನೀಡಲಿದೆ. ಕೇಂದ್ರ ಸರ್ಕಾರದ ಡಿಜಿಟಲ್ ಜಾಹೀರಾತು ನೀತಿಯ ಅಡಿಯಲ್ಲಿ ನಿಗದಿಪಡಿಸಲಾದ ಅಥವಾ ಇಲಾಖೆಯೇ ಸ್ವತಂತ್ರವಾಗಿ ನಿಗದಿಪಡಿಸಿದ ದರದಲ್ಲಿ ಜಾಹೀರಾತು ನೀಡಲಾಗುತ್ತದೆ.
Anna Bhagya Yojana ಅನ್ನ ಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಿಲ್ಲ.- ಸರ್ಕಾರದ ಪ್ರಚಾರ ಇಲಾಖೆ ಪ್ರಕಟಣೆ
Anna Bhagya Yojana ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ ಇದು ಆತಂಕ ಪಡುವ ಸಂಗತಿಯಲ್ಲ.
ನಿಮ್ಮ ಮನೆಗೆ ತಂದ ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇದ್ದಲ್ಲಿ ಆತಂಕ ಪಡದಿರಿ ಮತ್ತು ಅದನ್ನು ಎಸೆಯದಿರಿ. ಏಕೆಂದರೆ ಅದು ಪ್ಲಾಸ್ಟಿಕ್ ಅಕ್ಕಿಯಲ್ಲ, ನಿಮ್ಮ ಆರೋಗ್ಯವನ್ನು ಉತ್ತಮವಾಗಿಸುವ ಪೌಷ್ಠಿಕಾಂಶವುಳ್ಳ ಸಾರವರ್ಧಿತ ಅಕ್ಕಿ.
Anna Bhagya Yojana ಕೇಂದ್ರ ಸರ್ಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆ.ಜಿ. ಅಕ್ಕಿಗೆ 10 ಗ್ರಾಂ. ನಷ್ಟು ಸಾರವರ್ಧಿತ ಅಕ್ಕಿಯನ್ನು ಬೆರೆಸಲಾಗುತ್ತದೆ. ಇದು ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವಗಳು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿಣಾಂಶ, ಫೋಲಿಕ್ ಆಮ್ಲ ಮತ್ತು ವಿಟಮಿನ್ ಬಿ ಯನ್ನು ಒದಗಿಸುತ್ತದೆ.
ಈ ಸಾರವರ್ಧಿತ ಅಕ್ಕಿಯು ನಿಮ್ಮ ಆರೋಗ್ಯವನ್ನು ಉತ್ತಮಗೊಳಿಸುತ್ತದೆ ಮತ್ತು ರಕ್ತಹೀನತೆ, ಅಪೌಷ್ಟಿಕತೆಯನ್ನು ಹೋಗಲಾಡಿಸುತ್ತದೆ. ಪ್ರಯೋಗಾಲಯದಿಂದ ಪರೀಕ್ಷೆಗೆ ಒಳಪಟ್ಟ ಸಾರವರ್ಧಿತ ಅಕ್ಕಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯವಾದ ಪೌಷ್ಠಿಕಾಂಶಭರಿತವಾದ ಅಕ್ಕಿ ಎಂದು ಪರಿಗಣಿಸಲಾಗಿರುತ್ತದೆ ಎಂದು ರಾಜ್ಯ ಸರ್ಕಾರದ ಪ್ರಚಾರ ಇಲಾಖೆ ಪ್ರಕಟಣೆ ತಿಳಿಸಿದೆ.
