Bear News ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಷಯ ತಿಳಿದು ದೊಡ್ಡ ಸಂಖ್ಯೆ ಜನರು ದೇಗುಲದ ಬಳಿ ಜಮಾಯಿಸಿದ್ದರು.
ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಮೂಡಿಸಿತ್ತು
ಕರಡಿ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಉಂಟಾಗಿತ್ತು. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಕಾಣಿಸುತ್ತಿತ್ತು. ಜಮೀನು ಕೆಲಸಕ್ಕೆ ತೆರಳಲು ರೈತರು, ಕಾರ್ಮಿಕರು ಹಿಂದೇಟು ಹಾಕುತ್ತಿದ್ದರು. ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡಲು ಹೆದರುತ್ತಿದ್ದರು.
ವ್ಯಕ್ತಿ ಮೇಲೆ ದಾಳಿ ನಡೆಸಿತ್ತು
Bear News ಎಮ್ಮೆಹಟ್ಟಿ ಗ್ರಾಮದ ಆನಂದಪ್ಪ ಎಂಬುವರ ಮೇಲೆ ಕೆಲ ದಿನಗಳ ಹಿಂದೆ ಕರಡಿ ದಾಳಿ ನಡೆಸಿತ್ತು. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿಗೆ ಆನಂದಪ್ಪ ಗಾಯಗೊಂಡಿದ್ದರು. ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.
ಗ್ರಾಮಸ್ಥರ ಆತಂಕದ ನಡುವೆ ಮಾವಿನಕಟ್ಟೆ ವಲಯ ಅರಣ್ಯ ಅಧಿಕಾರಿಗಳು ಕರಡಿಯ ಚಲನವಲನ ಗಮನಿಸಿ ಬೋನ್ ಇರಿಸಿದ್ದರು. ಆರ್‌ಎಫ್‌ಒ ಜಗದೀಶ ಮಾರ್ಗದರ್ಶನದಲ್ಲಿ ಬೋನ್ ಇರಿಸಿದ್ದು, ಇವತ್ತು ಕರಡಿ ಸೆರೆಯಾಗಿದೆ. ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.
Bear News ಆತಂಕ ಹುಟ್ಟಿಸಿದ್ದ ಜಾಂಬವಂತನ ಸೆರೆ
M. B. Patil ಕೆಐಎಡಿಬಿ ಭೂಮಿ ಕಾನೂನು ಬಾಹಿರ ಹಂಚಿಕೆ: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಲ್ಲಿ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಕೆ
M. B. Patil ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ರಾಜಭವನಕ್ಕೆ ತೆರಳಿ ದೂರು ಸಲ್ಲಿಸಿದ್ದು, ಎಂ.ಬಿ ಪಾಟೀಲ್ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ, ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ” ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.
ಬಿಡದಿ, ವಸಂತ ನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ M. B. Patil ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾಗಿ ವರದಿಗಳು ಹೇಳಿವೆ.
Ganja news : ಚೋರಡಿಯಲ್ಲಿ ಗಾಂಜಾ ಸೇವನೆ ಪ್ರಕರಣ. ಈರ್ವರ ಬಂಧನ
ಶಿವಮೊಗ್ಗ : ಚೋರಡಿಯ ಹಳೇ ಸೇತುವೆ ಮೇಲೆ ಗಾಂಜಾ ಸೇವನೆಗೆ ಮುಂದಾಗಿದ್ದ ಇಬ್ಬರನ್ನು ಬಂಧಿಸಿ 4000 ರೂ. ಮೌಲ್ಯದ 130 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಸುರೇಶ್ ಕುಮಾರ ಮಾರ್ಗದರ್ಶನದ ಮೇರೆಗೆ ಕುಂಸಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹರೀಶ್ ಕೆ ಪಟೇಲ್ ರವರ ತಂಡ ನಿನ್ನೆ ಸಂಜೆ ಚೋರಡಿ ಗ್ರಾಮದ ಹಳೆ ಸೇತುವೆ ಮೇಲೆ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರಿಂದ ಸುಮಾರು 4000 ರೂಪಾಯಿ ಮೌಲ್ಯದ 130 ಗ್ರಾಂ ಗಾಂಜಾ ಸೊಪ್ಪನ್ನು ಹಾಗೂ ಗಾಂಜಾ ಸೇವನೆ ಮಾಡಲು ಬಳಸುತ್ತಿದ್ದ ಕೊಳವೆಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ. . ದಾಳಿಯಲ್ಲಿ ಶಾಂತರಾಜ್ ಪಿಎಸ್ಐ. ತೊಳಚಾ ನಾಯ್ಕ್ಕ ಪಿಎಸ್ಐ ಸಿಬ್ಬಂದಿಗಳಾದ ಹಾಲಪ್ಪ. ಪ್ರಕಾಶ್. ಶಶಿಧರ್ ನಾಯಕ್. ಮಂಜುನಾಥ್ . ವಿನಾಯಕ್. ಶಶಿ. ಬಸವರಾಜ್ ರಾಘು. ಆದರ್ಶ, ಶಿವಪ್ಪ ಪಾಲ್ಗೊಂಡಿದ್ದರು.
Lingayat and Veerashaiva Thinkers’ Forum ಬುದ್ಧಿಮಾಂದ್ಯ ಮಕ್ಕಳನ್ನ ಮಿಕ್ಕವರಂತೆ ಬೆಳೆಸುವ ಶ್ರಮ ಶ್ಲಾಘನೀಯ-ಸಿ.ಪಿ.ಈರೇಶ್ ಗೌಡ
Lingayat and Veerashaiva Thinkers’ Forum ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರ ತ್ಯಾಗ ಮತ್ತು ಬಲಿದಾನವಿದೆ. ಸ್ವಾತಂತ್ರ್ಯ ಯೋರ ಜೀವನ ಮತ್ತು ಸಂದೇಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯ ಕರ್ನಾಟಕ ಅಧ್ಯಕ್ಷ ಸಿ.ಪಿ. ಈರೇಶ್ ಗೌಡ ಹೇಳಿದರು.
ಸೊರಬ ಪಟ್ಟಣದ ಹಳೇ ಸೊರಬ ಹೊಸಪೇಟೆ ಬಡಾವಣೆಯಲ್ಲಿರುವ ನವಚೇತನ ಬುದ್ದಿಮಾಂದ್ಯ ವಸತಿ ಶಾಲೆಯಲ್ಲಿ ಸೈಂಟ್ ಮಿಲಾಗ್ರಿಸ್ ಸಂಸ್ಥೆ ವತಿಯಿಂದ ಭಾರತ ಸ್ವಾತಂತ್ರö್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಬಾಲ್ಯದಲ್ಲಿಯೇ ದೇಶ ಭಕ್ತಿಯನ್ನು ಕಲಿಸಬೇಕು. ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳಾಗಿದ್ದಾರೆ. ದೇಶ ನಮಗೇನು ನೀಡಿದೆ ಎನ್ನುವುದಕ್ಕಿಂತ ದೇಶಕ್ಕೆ ನಮ್ಮ ಕೊಡುಗೆ ನೀಡಬೇಕು ಎಂದ ಅವರು, ಸಾಮಾನ್ಯ ಮಕ್ಕಳಿಗೆ ಶಿಕ್ಷಣ ನೀಡುವುದೇ ಸವಾಲಿನ ಕೆಲಸ ಆದರೆ, ಬುದ್ದಿಮಾಂದ್ಯ ಮಕ್ಕಳನ್ನು ಸಾಮಾನ್ಯ ಮಕ್ಕಳನ್ನಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಅವಿರತವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ. ಇಂತಹ ಶಾಲೆಯಲ್ಲಿ ಸೈಂಟ್ ಮಿಲಾಗ್ರಿಸ್ ಸಂಸ್ಥೆಯವರು ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಯಾಗಿದೆ ಎಂದರು.
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ ಮಾತನಾಡಿ, ಸ್ವಾತಂತ್ರ್ಯ ಎಂಬುದು ಸುಲಭವಾಗಿ ಸಿಕ್ಕಿದ್ದಲ್ಲ. ಅನೇಕ ಹೋರಾಟಗಳು ನಡೆದಿದೆ. ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಸ್ವಾತಂತ್ರ್ಯ ಮಹತ್ವವನ್ನು ತಿಳಿಸಿಕೊಡಬೇಕು. ದೇಶದಲ್ಲಿ ಶಾಂತಿ ನೆಲೆಸಲು ಪ್ರಸ್ತುತ ಗಡಿಯಲ್ಲಿ ಸೈನಿಕರು ನಿತ್ಯವೂ ಹಗಲು ಮತ್ತು ಇರುಳು ಎನ್ನದೇ ಸೇವೆ ಸಲ್ಲಿಸುತ್ತಿದ್ದಾರೆ. ಬುದ್ದಿಮಾಂದ್ಯ ಮಕ್ಕಳು ಎನ್ನುವುದಕ್ಕಿಂತ ಅವರು ದೇವರ ಮಕ್ಕಳು. ಮುಂದಿನ ದಿನಗಳಲ್ಲಿ ಅವರು ಸಹ ಉತ್ತಮ ಶಿಕ್ಷಣ ಪಡೆದು ಸತ್ಪçಜೆಗಳಾಗಿ ಹೊರ ಹೊಮ್ಮಲಿದ್ದಾರೆ ಎಂದರು.
Lingayat and Veerashaiva Thinkers’ Forum ಇದೇ ಸಂದರ್ಭದಲ್ಲಿ ಸೈಂಟ್ ಮಿಲಾಗ್ರಿಸ್ ಸಂಸ್ಥೆ ವತಿಯಿಂದ ಶಾಲೆಗೆ ೫೦ ಚದಾರ್ ವಿತರಿಸಿ, ಮಕ್ಕಳಿಗೆ ಸಿಹಿ ನೀಡಲಾಯಿತು.
ಪ್ರಮುಖರಾದ ಎಚ್. ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಸುನೀಲ್ ಕುಮಾರ್, ಸಹಾಯಕ ವ್ಯವಸ್ಥಾಪಕ ಜಿ. ನವೀನ್, ಹಿರಿಯ ಅಧಿಕಾರಿ ಕಿರಣ್ ಕುಮಾರ್, ಲಯನ್ಸ್ ಕ್ಲಬ್ ಉಪಾಧ್ಯಕ್ಷ ಎಸ್. ಕೃಷ್ಣಾನಂದ್, ಶಾಲೆಯ ಕಾರ್ಯದರ್ಶಿ ಜಿ.ಬಿ. ರಾಮಪ್ಪ, ನಿವೃತ್ತ ಶಿಕ್ಷಕ ಮೋಹನ್ ದಾಸ್, ಅಶೋಕ ತವನಂದಿ, ಹಿರಿಯ ಶಿಕ್ಷಕ ಕೆ.ಬಿ. ಪುಟ್ಟರಾಜ, ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಇತರರಿದ್ದರು.
Bgs Residential English Medium School ನಮ್ಮ ಸಂವಿಧಾನ, ಚುನಾವಣೆಯೆಂಬ ಮಹತ್ವದ ಅಸ್ತ್ರ ನಮಗೆ ನೀಡಿದೆ- ಶ್ರೀಸಾಯಿನಾಥಶ್ರೀ
Bgs Residential English Medium School ಶಿವಮೊಗ್ಗ ಶಾಲಾ ದಿನಗಳಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವ ದೃಷ್ಟಿಯಿಂದ ಮತ್ತು ಉತ್ತಮ ಆಡಳಿತ ವ್ಯವಸ್ಥೆಯನ್ನ ಅಧಿಕಾರಕ್ಕೆ ತರಬೇಕು ಎಂಬ ಕಲ್ಪನೆಯನ್ನು ಮೂಡಿಸುವ ಸಲುವಾಗಿ ವಿದ್ಯಾರ್ಥಿ ಒಕ್ಕೂಟವನ್ನ ಶಾಲೆಯಲ್ಲಿ ನಿರ್ಮಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು.
ಶಿವಮೊಗ್ಗನಗರದ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಒಕ್ಕೂಟವನ್ನ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಸಂವಿಧಾನ ಚುನಾವಣೆ ಎಂಬ ಮಹತ್ವದ ಅಸ್ತ್ರವನ್ನ ಪ್ರಜೆಗಳಾದ ನಮಗೆ ಕಲ್ಪಿಸಿ ಕೊಟ್ಟಿದೆ ಅದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು ಎಂಬುದನ್ನು ಪರಿಚಯಿಸುವ ಸಲುವಾಗಿ ನಿಮ್ಮಗಳಿಗೆ ವಿದ್ಯಾರ್ಥಿ ಒಕ್ಕೂಟದ ಮುಖಾಂತರ ಚುನಾವಣೆ ಪ್ರಕ್ರಿಯೆಯನ್ನು ನಡೆಸಲಾಗಿದೆ ಎಂದರು.
ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸುವ ಸಲುವಾಗಿ ಮತ್ತು ಶಾಲೆಯ ವಾರ್ಷಿಕ ಚಟುವಟಿಕೆಗಳ ಜವಾಬ್ದಾರಿಯನ್ನ ನೀಡುವ ಮೂಲಕ ನಿಮ್ಮಲ್ಲಿ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ, ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ವ್ಯವಸ್ಥೆಯ ಮೂಲಕ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿ ಅವರುಗಳಿಗೆ ವಿವಿಧ ತರಹದ ಜವಾಬ್ದಾರಿಗಳನ್ನ ನೀಡಿದೆ ಎಂದು ಹೇಳಿದರು.
Bgs Residential English Medium School ಚುನಾವಣೆ ಎಂದರೆ ರಾಜಕಾರಣಿಗಳು ಹಾಗೂ ಅಭ್ಯರ್ಥಿಗಳು ವಿವಿಧ ಆಮಿಷಗಳನ್ನ ಒಡ್ಡುತ್ತಾರೆ, ಈ ಆಮಿಷಕ್ಕೆ ಬಲಿಯಾದರೆ ಐದು ವರ್ಷಗಳ ಕಾಲ ನಾವುಗಳು ಯಾತನೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಆಮಿಷಗಳಿಗೆ ಬಲಿಯಾಗದೆ ನಮ್ಮ ಹಕ್ಕನ್ನ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಬಳಸಬೇಕು ಎಂಬುದನ್ನ ಪರಿಚಯಿಸುವುದು ಕೂಡ ಈ ಚುನಾವಣೆಯ ಮುಖ್ಯ ಉದ್ದೇಶ ಎಂದ ಅವರು,ವಿದ್ಯಾರ್ಥಿಗಳಾದ ನೀವುಗಳು ಯಾವುದೇ ಆಮಿಷಕ್ಕೆ ಬಲಿಯಾಗದೆ ನಿಮ್ಮ ನಾಯಕನನ್ನ ಉತ್ತಮ ರೀತಿಯಲ್ಲಿ ಆಯ್ಕೆ ಮಾಡಿಕೊಂಡಿದ್ದೀರಿ ಅದಕ್ಕಾಗಿ ನಿಮಗೆಲ್ಲರಿಗೂ ಅಭಿನಂದನೆಗಳು. ಅವರುಗಳು ಈ ವರ್ಷವಿಡಿ ಹೇಗೆ ಕೆಲಸ ಮಾಡುತ್ತಾರೆ ಎಂಬುದನ್ನು ನೀವೇ ನೋಡಿ ಎಂದು ಹೇಳಿದರು.
ಆಮಿಷಕ್ಕೆ ಬಲಿಯಾಗಿ ಮತವನ್ನ ಚಲಾಯಿಸಿದರೆ ಮತದಾರರನ್ನ ಅಸಡ್ಡೆ ಮಾಡುತ್ತಾನೆ,ನಂತರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಾನೆ. ಸ್ವತಹ ತಾನು ಸಹ ಭ್ರಷ್ಟಾಚಾರ ಮಾಡುತ್ತಾನೆ,ಇದರಿಂದಾಗಿ ಜನಸಾಮಾನ್ಯರ ಕೆಲಸಗಳು ಲಂಚವಿಲ್ಲದೆ ಆಗದಂತಾಗುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ಇದೆಲ್ಲವನ್ನ ಹೋಗಲಾಡಿಸಬೇಕಾದರೆ ನೀವುಗಳು ಆಮಿಷಕ್ಕೆ ಬಲಿಯಾಗದೆ ಮುಂದಿನ ದಿನಗಳಲ್ಲಿ ಉತ್ತಮ ನಾಯಕನ ಮಾಡಬೇಕು ಎಂದು ಮಾರ್ಮಿಕವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ನಿರ್ದೇಶಕ ಕೊಳಗೆ ವಾಸಪ್ಪಗೌಡ, ಶಾಲಾ ಕಾಲೇಜಿನ ಪ್ರಾಚಾರ್ಯ ಎಸ್.ಹೆಚ್. ಸುರೇಶ್, ಭದ್ರಾವತಿ ಎಸ್. ಎ.ವಿ.ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ಹಾಗೂ ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
Rotary Club Shivamogga ಶಾಲಾಮಕ್ಕಳಿಗೆ ಪೋಕ್ಸೋ ಕಾಯಿದೆ ಅರಿವು ಅತ್ಯವಶ್ಯ-ಬಸವರಾಜ್
Rotary Club Shivamogga ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಪೋಷಕರಿಗೆ ಲೈಂಗಿಕ ದೌರ್ಜನ್ಯದಿಂದ ಸಂರಕ್ಷಣೆ ಪಡೆಯುವ ಕಾಯಿದೆ ೨೦೧೨ (ಪೋಕ್ಸೋ) ಹಾಗೂ ಬಾಲ್ಯ ವಿವಾಹ ನಿಷೇದ ಕಾಯಿದೆ ೨೦೦೬ ಇವುಗಳ ಕುರಿತು ಅರಿವು ಮೂಡಿಸುವುದು ಶಾಲಾ ಆಡಳಿತ ಮಂಡಳಿಗಳ ಹಾಗೂ ಶಿಕ್ಷಕರ ಜವಾಬ್ದಾರಿಯೆಂದು ನಗರದ ಪ್ರಸಿದ್ಧ ವಕೀಲರು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು ಆದ ಶ್ರೀ ಬಸವರಾಜ್ ಅವರು ಅಭಿಪ್ರಾಯ ಪಟ್ಟರು.
ಅವರು ಇಂದು ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ಮಕ್ಕಳಿಗೆ ಪೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕಾಯಿದೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಶ್ರೀಯುತರು ತಮ್ಮ ಮಾತನ್ನು ಮುಂದುವರೆಸಿ ಮಕ್ಕಳಿಗೆ ಅದರಲ್ಲೂ ಹದಿಹರೆಯದ ಮಕ್ಕಳಿಗೆ ಮತ್ತು ಪೋಷಕರಿಗೆ ತಮ್ಮ ಬಂಧುಗಳು ಅಥವಾ ಶಿಕ್ಷಕರು ತಮ್ಮ ಮೈಯನ್ನು ಮುಟ್ಟುವಾಗ ಬ್ಯಾಡ್ ಟಚ್ ಮತ್ತು ಗುಡ್ ಟಚ್ ಮೂಲಕ ಮುಟ್ಟುತ್ತಾರೆಯೇ ಎಂಬುದರ ವ್ಯತ್ಯಾಸವನ್ನು ತಿಳಿದುಕೊಂಡಿರುವುದು ಬಹಳ ಮುಖ್ಯ. ತಮ್ಮ ತಂದೆ-ತಾಯಿ ಅಥವಾ ಸ್ವಂತ ಸಹೋದರ ಸಹೋದರಿಯರ ಹೊರತಾಗಿ ಇತರರ ಜೊತೆಗೆ ವ್ಯವಹರಿಸುವಾಗ ಈ ಪರಿಜ್ಞಾನವನ್ನು ಹೊಂದಿರಬೇಕೆAದು ತಿಳಿಸಿದರು. ಈ ಬಗ್ಗೆ ಸೂಕ್ತ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಪ್ರದರ್ಶಿಸುವುದರ ಮೂಲಕ ಮಕ್ಕಳಿಗೆ ಹಾಗೂ ಪೋಷಕರಿಗೆ ಈ ಅಂಶಗಳನ್ನು ಮನದಟ್ಟು ಮಾಡಿದರು. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಕಡಿಮೆಯಾಗುತ್ತಿದ್ದರೂ, ಕೆಲವು ಪ್ರದೇಶಗಳ ಹಾಗೂ ಕೆಲವು ತೀರಾ ಹಿಂದುಳಿದ ವರ್ಗಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಜೀವಂತ ಇರುವುದು ಅತ್ಯಂತ ದುರದೃಷ್ಟಕರ ಸಂಗತಿ ಎನ್ನುತ್ತ ಹೆಣ್ಣು ಮಕ್ಕಳು ೧೮ವರ್ಷಕ್ಕಿಂತ ಮುಂಚೆ & ಗಂಡು ಮಕ್ಕಳು ೨೧ ವರ್ಷಕ್ಕಿಂತ ಮುಂಚೆ ವಿವಾಹ ಮಾಡುವುದು ಅವರ ಆರೋಗ್ಯ ಹಾಗೂ ಕಾನೂನು ದೃಷ್ಟಿಯಿಂದ ಸೂಕ್ತವಲ್ಲ ಎಂದು ಕಿವಿ ಮಾತು ಹೇಳಿದರು.
Rotary Club Shivamogga ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ರೊ. ಅರುಣ್ ದೀಕ್ಷಿತ್‌ರವರು ದೀಪ ಬೆಳಗಿಸುವುದರ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಟ್ರಸ್ಟ್ನ ಉಪಾಧ್ಯಕ್ಷರಾದ ರೊ. ಡಾ|| ಪರಮೇಶ್ವರ್ ಡಿ. ಶಿಗ್ಗಾಂವ್ ಇವರು ಪೋಕ್ಸೋ ಕಾಯಿದೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಮಕ್ಕಳ ಲೈಂಗಿಕ ಶೋಷಣೆಯನ್ನು ತಡೆಗಟ್ಟಲು ಅವರಿಗೆ ಈ ಕಾಯಿದೆಯ ಅರಿವಿನ ಮಹತ್ವ ಎಷ್ಟರ ಮಟ್ಟಿಗೆ ಅವಶ್ಯಕ ಎಂಬುದನ್ನು ತಿಳಿಸುತ್ತಾ, ಶಾಲೆಯಲ್ಲಿ ಈ ಸಂಬಂಧದ ದೂರುಗಳನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಲಾಗುವುದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ (ರಿ.,)ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ನಿವೃತ್ತ ಡಿ.ಪಿ.ಐ. ಆದ ಶ್ರೀ ಚಂದ್ರಶೇಖರಯ್ಯ ಎಂ., ಇವರು ತಾವು ಶಿಕ್ಷಣ ಇಲಾಖೆಯ ವಿವಿಧ ಹಂತದಲ್ಲಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿವರಿಸುತ್ತಾ, ಮಕ್ಕಳು ಈ ಬಗ್ಗೆ ಎಚ್ಚರದಿಂದ ಇರುವುದು ಅವರ ಉಜ್ವಲ ಭವಿಷ್ಯದ ದೃಷ್ಟಿಯಿಂದ ಅತೀ ಅವಶ್ಯಕ ಎಂದರು. ಹಾಗೆಯೇ ಶಿಕ್ಷಕರು ಈ ಸಂಬAಧ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದರು.
ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್, ಟ್ರಸ್ಟ್ನ ಖಜಾಂಚಿ ರೊ. ಜಿ. ವಿಜಯ್ ಕುಮಾರ್ ಹಾಗೂ ಪ್ರಾಂಶುಪಾಲರಾದ ಸೂರ್ಯನಾರಾಯಣನ್ ಆರ್., ಇವರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Kolkata Doctor Case ಕೊಲ್ಕೊತಾ ವಿದ್ಯಾರ್ಥಿನಿ ಹತ್ಯೆ: ಸಾಗರದಲ್ಲಿ ಎಬಿವಿಪಿ ಪ್ರತಿಭಟನೆ
Kolkata Doctor Case ಕೋಲ್ಕತ್ತದ ಆರ್. ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಯುವ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಜೊತೆಯಲ್ಲಿಯೇ ಸಾಗರ ದಲ್ಲಿಯೂ ವೈದ್ಯಕೀಯ ಪ್ಯಾರಮೆಡಿಕಲ್ ವಿದ್ಯಾರ್ಥಿ ಸಮೂಹ ಎಬಿವಿಪಿ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಿದರು.
ಸಾಗರ ನಗರಸಭೆ ಪಕ್ಕದ ಗಾಂಧಿ ಮೈದಾನದಿಂದ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆ ಮತ್ತು ಜ್ಞಾನಸಾಗರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ಆರಂಬಿಸಿ ಸಾಗರದ ಹೃದಯ ಭಾಗ ಸಾಗರ್ ಹೊಟೇಲ್ ವೃತ್ತದಲ್ಲಿ ವಿದ್ಯಾರ್ಥಿ ಸಮೂಹ ಭಾರತ ನಕ್ಷೆಯ ಮಾದರಿಯಲ್ಲಿ ಸಾಲು ನಿಲ್ಲುವ ಮೂಲಕ ಪ್ರತಿಭಟನೆಯ ಮೂಲಕ ದೇಶದ ಗಮನ ಸೆಳೆಯುತ್ತಿದ್ದೇವೆ ಎಂಬ ಸಂದೇಶ ಮುಟ್ಟಿಸುವಂತಿತ್ತು.
ಯುವ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ಧ ಮಾತ್ರವಲ್ಲದೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಆಡಳಿತದತ್ತ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
Kolkata Doctor Case ಯುವ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಕೇವಲ ವೈದ್ಯಕೀಯ ಸಮೂಹ ಬೆಚ್ಚಿ ಬೀಳುವಂತೆ ಮಾಡಿಲ್ಲ, ಬದ ಲಾಗಿ ದೇಶವೇ ಹೋರಾಟಕ್ಕೆ ಒಂದಾಗುವಂತೆ ಮಾಡಿದೆ, ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪೊಲೀಸರು ಪ್ರಕರಣ ವನ್ನು ನಿರ್ವಹಿಸಿದ ರೀತಿಯೇ ಟೀಕೆಗೆ ಕಾರಣವಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Shivamogga Police ಶಿವಮೊಗ್ಗದ ಕಾರ್ ಶೋ ರೂಮಿನ ತಿಜೋರಿಯಿಂದ ಲಕ್ಷಗಟ್ಟಲೆ ನಗದು ಅಪಹರಣ
Shivamogga Police ಶಿವಮೊಗ್ಗ ನಗರದ ಬೈಪಾಸ್ ರಸ್ತೆಯಲ್ಲಿರುವ ಕಾರು ಶೋರೂಮ್ ನಲ್ಲಿ ೫,೪೯,೯೪೨ ರೂ. ಹಣ ಕಳ್ಳತನವಾದ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶೋರೂಮ್ ಮಾಲಕರು ದೂರು ದಾಖಲಿಸಿದ್ದಾರೆ.
ಪ್ರತಿಷ್ಠಿತ ಶೋ ರೂಮ್ ನಲ್ಲಿ ದೈನಂದಿನ ವ್ಯವಹಾರದ ಹಣವನ್ನ ಇಡಲು ಕ್ಯಾಬಿನ್ ಮಾಡಲಾಗಿದ್ದು ಕ್ಯಾಬಿನ್‌ನಲ್ಲಿ ತಿಚೋರಿಯನ್ನ ನಿರ್ಮಿಸಿ ಇಡಲಾಗಿತ್ತು.
Shivamogga Police ಕ್ಯಾಶ್ ಕೌಂಟರ್‌ನ ಗುಮಾಸ್ತರು ಪ್ರತಿನಿತ್ಯದಂತೆ ಹಣವನ್ನ ಈ ತಿಜೋರಿಯಲ್ಲಿ ಇಟ್ಟು ಹೋಗಿದ್ದರು. ಆ.೨೦ ರಂದು ೫,೪೯,೯೪೨ ರೂ. ಹಣವನ್ನು ಇಟ್ಟು ಕೀಯನ್ನು ಕ್ಯಾಬಿನ್‌ನಲ್ಲಿಟ್ಟು ಲಾಕ್ ಮಾಡಿ ಹೋಗಿದ್ದರು.
ಮರುದಿನ ಬಂದ ಗುಮಾಸ್ತರಿಗೆ ತಿಚೋರಿಯಲ್ಲಿ ಇಟ್ಟಾ ಹಣ ನಾಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ನಂತರ ಹುಡುಕಿದರೂ ಸಿಗದೆ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ.
ಮಾಲೀಕರು ಸಿಬ್ಬಂದಿಗಳನ್ನು ವಿಚಾರಿಸಿದಾಗ ಯಾರೂ ತೆಗೆದುಕೊಂಡಿಲ್ಲ ಎಂದು ಹೇಳಿದ್ದರಿಂದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ೫,೪೯,೯೪೨ ರೂ. ಹಣ ಕಳ್ಳತನವಾಗಿರುವ ಬಗ್ಗೆ ದೂರು ದಾಖಲಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ
Valmiki Development Corporation ವಾಲ್ಮೀಕಿ ಅಭಿವೃದ್ಧಿನಿಗಮದ ಮೃತ ಚಂದ್ರಶೇಖರ್ ಪ್ರಕರಣ: 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
Valmiki Development Corporation ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಕ್ಕೆ ಸಂಬಂಧಿಸಿದಂತೆ, ಸಿಐಡಿ ವಿಶೇಷ ತನಿಖಾ ತಂಡ ಶಿವಮೊಗ್ಗದ ನ್ಯಾಯಾಲಯಕ್ಕೆ ಪ್ರಾಥಮಿಕ ಹಂತದ ಆರೋಪಪಟ್ಟಿ ದಾಖಲಿಸಿದೆ.
ಡಿವೈಎಸ್ಪಿ ಮೊಹಮ್ಮದ್ ರಫೀಕ್ ನೇತೃತ್ವದ ಸಿಐಡಿ ತಂಡ, 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ 300 ಪುಟಗಳ ಚಾರ್ಜ್’ಶೀಟ್ ಸಲ್ಲಿಕೆ ಮಾಡಿದೆ. ಪ್ರಕರಣದ ತನಿಖೆ ಪೂರ್ಣಗೊಂಡ ನಂತರ, ಸಿಐಡಿ ತಂಡವು ಅಂತಿಮ ಹಂತದ ಚಾರ್ಜ್’ಶೀಟ್ ಸಲ್ಲಿಕೆ ಮಾಡಲಿದೆ.
ಚಂದ್ರಶೇಖರನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ, ವಾಲ್ಮೀಕಿ ನಿಗದಮ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರು ತಪ್ಪಿತಸ್ಥರೆಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಚಂದ್ರಶೇಖರನ್ ಅವರ ಆತ್ಮಹತ್ಯೆಗೆ ಆರೋಪಿತ ಅಧಿಕಾರಿಗಳಿಬ್ಬರ ಬ್ಲ್ಯಾಕ್’ಮೇಲ್, ಒತ್ತಡ ಕಾರಣವಾಗಿದೆ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೈಕೋರ್ಟ್ ಮೊರೆ :
Valmiki Development Corporation ತಮ್ಮ ಪತಿಯ ಮೇಲೆ ಆರೋಪ ಹೊರಿಸಲಾಗುತ್ತಿದೆ. ನಾವು ದುಡ್ಡು ತಿನ್ನುವ ಜನ ಅಲ್ಲ. ಎಸ್ಐಟಿ ತನಿಖೆ ಮೇಲೆ ನಮಗೆ ನಂಬಿಕೆಯಿಲ್ಲ. ಪ್ರಕರಣದ ಕುರಿತಂತೆ ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್ ಮೊರೆ ಹೋಗಲಾಗುವುದು’ ಎಂದು ಆತ್ಮಹತ್ಯೆಗೆ ಶರಣಾದ ಅಧಿಕಾರಿ ಚಂದ್ರಶೇಖರನ್ ಅವರ ಪತ್ನಿ ಕವಿತಾ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ನಮ್ಮ ಮನೆಯವರು ಗೋವಾಕ್ಕೆ ಹೋಗಿಲ್ಲ. ಯಾವುದೇ ಹಣ ಪಡೆದಿಲ್ಲ. ಚಾರ್ಜ್ ಶೀಟ್ ನಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೊರಿಸಲಾಗಿದೆ ಎಂದು ದೂರಿದ್ದಾರೆ.
ಸರ್ಕಾರ ಸೂಕ್ತ ನೆರವಿನಹಸ್ತ ಕಲ್ಪಿಸುವುದಾಗಿ ಹೇಳಿತ್ತು. ಆದರೆ ಯಾವುದೇ ನೆರವು ಲಭ್ಯವಾಗಿಲ್ಲ ಎಂದು ಇದೇ ವೇಳೆ ಕವಿತಾ ಅವರು ಅಳಲು ತೋಡಿಕೊಂಡಿದ್ದಾರೆ.
McGann District Hospital ವೃದ್ಧೆಯೊಬ್ಬರ ಎಟಿಎಂ ಅಪಹರಿಸಿ ಐವತ್ತು ಸಾವಿರೂ ಎಗರಿಸಿದ ಖದೀಮರು
McGann District Hospital ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ತೆರಳಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಎಟಿಎಂ ಕಾರ್ಡ್ ಕಳ್ಳತನ ಮಾಡಿ, ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ.
ಸೊರಬ ತಾಲೂಕು ಬಿಳವಾಣಿಯ ಗೌರಮ್ಮ ಎಂಬುವವರ ಎಟಿಎಂ ಕಳ್ಳತನ ಮಾಡಿ 50 ಸಾವಿರ ರೂ. ಹಣ ಡ್ರಾ ಮಾಡಿಕೊಳ್ಳಲಾಗಿದೆ.
ಅನಾರೋಗ್ಯದ ಹಿನ್ನೆಲೆ ಗೌರಮ್ಮ ತಮ್ಮ ಪತಿಯೊಂದಿಗೆ ಜುಲೈ 25ರಂದು ಮೆಗ್ಗಾನ್ ಆಸ್ಪತ್ರೆ ಚಿಕಿತ್ಸೆಗೆ ಬಂದಿದ್ದರು. ಬೆಳಗ್ಗೆ 11 ಗಂಟೆಗೆ ಲ್ಯಾಬ್‌ನಲ್ಲಿ ರಕ್ತದ ಪರೀಕ್ಷೆ ಮಾಡಿಸಿಕೊಂಡಿದ್ದರು.
McGann District Hospital ಮಧ್ಯಾಹ್ನ 1.30ರ ಹೊತ್ತಿಗೆ ಗೌರಮ್ಮ ಅವರ ಮೊಬೈಲ್‌ಗೆ ಬ್ಯಾಂಕ್ ಖಾತೆಯಿಂದ 10 ಸಾವಿರ ರೂ. ಹಣ ಕಡಿತವಾದ ಮೆಸೇಜ್ ಬಂದಿತ್ತು. ಸ್ವಲ್ಪ ಹೊತ್ತಿಗೆ ಒಟ್ಟು 50 ಸಾವಿರ ರೂ. ಕಡಿತವಾಗಿರುವ ಮೆಸೇಜ್ ಬಂದಿತ್ತು ಎಂದು ಆರೋಪಿಸಲಾಗಿದೆ.
ಕಳ್ಳರಿಗೆ ಪಾಸ್‌ವರ್ಡ್ ಸಿಕ್ಕಿದ್ದು ಹೇಗೆ?:
ಲ್ಯಾಬ್ ಬಳಿ ಸರತಿಯಲ್ಲಿ ನಿಂತಿದ್ದಾಗ ಗೌರಮ್ಮ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಕಾರ್ಡ್ ಕಳವು ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಎಟಿಎಂ ಕಾರ್ಡ್ ಮೇಲೆಯೇ ಪಾಸ್‌ವರ್ಡ್ ಬರೆದಿದ್ದರಿಂದ ಕಳ್ಳರು ಸುಲಭವಾಗಿ ಹಣ ಡ್ರಾ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
