Monday, April 6, 2026
Monday, April 6, 2026
Home Blog Page 604

Uddhav Thackeray ಮಹಾರಾಷ್ಟ್ರದ ಮುಂದಿನ ಸೀಎಂ ಸ್ಥಾನಕ್ಕೆ ಕಾಂಗ್ರೆಸ್, ಎನ್ ಸಿಪಿ ಘೋಷಿಸಿದ ಅಭ್ಯರ್ಥಿಗೆ ಬೆಂಬಲ-ಉದ್ಧವ್ ಠಾಕ್ರೆ

0

Uddhav Thackeray ಮುಂಬರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಸೂಚಿಸುವ ಯಾವುದೇ ನಾಯಕನನ್ನು ಬೆಂಬಲಿಸಲು ನಾವು ಸಿದ್ದ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ದವ್ ಠಾಕ್ರೆ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ (ಎಂವಿಎ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ರಾಜ್ಯದ ಸ್ವಾಭಿಮಾನವನ್ನು ರಕ್ಷಿಸುವ ಹೋರಾಟವಾಗಿದೆ ಎಂದಿದ್ದಾರೆ.

“ಮಹಾ ವಿಕಾಸ್ ಅಘಾಡಿಯ ಸಿಎಂ ಅಭ್ಯರ್ಥಿಯನ್ನು ನಿರ್ಧರಿಸೋಣ, ನಾನು ಅದನ್ನು ಬೆಂಬಲಿಸುತ್ತೇನೆ. ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಅವರ ಅಭ್ಯರ್ಥಿಯನ್ನು ಘೋಷಿಸಲಿ ನಾನು, ಅದನ್ನು ಬೆಂಬಲಿಸುತ್ತೇನೆ. ಏಕೆಂದರೆ ನಾವು ಮಹಾರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ. ಜನರಿಗೆ ನಾವು ಬೇಕು, ನೀವಲ್ಲ ಎಂದು ಈ 50 ಖೋಕಾಗಳು ಮತ್ತು ಗದ್ದಾರ್‌ಗಳಿಗೆ ನಾನು ಉತ್ತರ ನೀಡಬೇಕಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿಂದಿನ ಅನುಭವವನ್ನು ನೆನಪಿಸಿಕೊಂಡ ಉದ್ಧವ್ ಠಾಕ್ರೆ “ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯುವ ಪಕ್ಷದ ವ್ಯಕ್ತಿ ಸಿಎಂ ಎಂಬ ತತ್ವಕ್ಕೆ ಬದಲಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಂಚಿತವಾಗಿ ನಿರ್ಧರಿಸಬೇಕು” ಎಂದಿದ್ದಾರೆ.

“ಬಿಜೆಪಿ ಜೊತೆಗಿನ ಮೈತ್ರಿಯ ಅನುಭವದ ನಂತರ, ಮೈತ್ರಿಕೂಟದಲ್ಲಿ ಹೆಚ್ಚು ಶಾಸಕರನ್ನು ಹೊಂದಿರುವ ಪಕ್ಷಕ್ಕೆ ಸಿಎಂ ಹುದ್ದೆ ಎಂಬ ನೀತಿ ಅನುಸರಿಸಬಾರದು ಎಂಬ ಅಭಿಪ್ರಾಯ ಹೊಂದಿದ್ದೇವೆ. ಹಿಂದಿನ ಹಲವು ಚುನಾವಣೆಗಳಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ನಾವು ಅನುಭವಿಸಿದ್ದೇವೆ. ಗರಿಷ್ಠ ಸಂಖ್ಯೆಯ ಶಾಸಕರನ್ನು ಗಳಿಸಲು, ಪಕ್ಷಗಳು ತಮ್ಮ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಕೆಳಗಿಳಿಸಲು ಪ್ರಯತ್ನಿಸುತ್ತವೆ. ಆದ್ದರಿಂದ ಹೆಚ್ಚು ಶಾಸಕರನ್ನು ಹೊಂದಿರುವ ಪಕ್ಷವು ಸಿಎಂ ಸ್ಥಾನವನ್ನು ಪಡೆಯಬೇಕು ಎಂಬ ವಾದವನ್ನು ನಾನು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

Uddhav Thackeray ರಾಜ್ಯದಲ್ಲಿ ಪ್ರತಿಪಕ್ಷಗಳ ಒಕ್ಕೂಟದ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವಂತೆ ಉದ್ಧವ್ ಠಾಕ್ರೆ ಅವರು ಮಹಾ ವಿಕಾಸ್ ಅಘಾಡಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಶಿವಸೇನೆ (ಯುಬಿಟಿ), ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಪಕ್ಷಗಳು ಮಹಾ ವಿಕಾಸ ಅಘಾಡಿ ಎಂಬ ತಮ್ಮ ಹಳೆಯ ಒಕ್ಕೂಟದ ಹೆಸರಿನಲ್ಲಿ ಚುನಾವಣೆ ಎದುರಿಸಲಿವೆ.

Madhu Bangarappa ಗೋವಿಂದಾಪುರ ಆಶ್ರಯ ಮನೆ ಬಗ್ಗೆ ಸೌಕರ್ಯ ಒದಗಿಸುವ ಸಂಬಂಧಿತ ನ್ಯೂನತೆಗಳ ಪಟ್ಟಿಕೊಡಿ- ಮಧು ಬಂಗಾರಪ್ಪ

0

Madhu Bangarappa ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದರು.

ಮಹಾನಗರಪಾಲಿಕೆಯಲ್ಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮಾತನಾಡಿ, ಗೋವಿಂದಾಪುರ ಆಶ್ರಯ ಯೋಜನೆಯಡಿ 40 ಎಕರೆಯಲ್ಲಿ ಒಟ್ಟು 3000 ಮನೆಗಳು ಮಂಜೂರಾಗಿದ್ದು 624 ಮನೆಗಳನ್ನು ಈಗಾಗಲೇ ಸಂಪೂರ್ಣಗೊಳಿಸಿದ್ದು 225 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಲಾಗಿದೆ. ಉಳಿದ 399 ಮನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಾಲ ಪ್ರಕ್ರಿಯೆ ನಡೆಯುತ್ತಿದೆ.

ಫಲಾನುಭವಿಗಳಿಗೆ ಬ್ಯಾಂಕ್‌ನಿಂದ ಸಾಲ ಮಂಜೂರಾದ ತಕ್ಷಣ ಹಸ್ತಾಂತರಿಸಲಾಗುವುದು. 648 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, 1728 ಮನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಮನೆಗಳನ್ನು ಹಸ್ತಾಂತರಿಸಿದ್ದರೂ ಅಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಇತರೆ ಸೌಲಭ್ಯಗಳೇ ಇಲ್ಲ. ಇದನ್ನೆಲ್ಲ ಶೀಘ್ರವಾಗಿ ಒದಗಿಸುವಂತೆ ತಿಳಿಸಿದರು.

ಶಾಸಕರಾದ ಚನ್ನಬಸಪ್ಪ ಮಾತನಾಡಿ ಪಾಲಿಕೆ ವತಿಯಿಂದ ಈ ವಸತಿ ಯೋಜನೆಗೆ ರೂ.25 ಕೋಟಿ ನೀಡಬೇಕಿದ್ದು ಈವರೆಗೆ ರೂ.9 ಕೋಟಿ ನೀಡಲಾಗಿದೆ. ಹಿಂದಿನ ಸಭೆಯಲ್ಲಿ ಆಯುಕ್ತರು ಇತರೆ ಹೆಡ್‌ನಲ್ಲಿ ಉಳಿಕೆ ಹಣವನ್ನು ನೀಡುವುದಾಗಿ ತಿಳಿಸಿದ್ದರು. ಉಳಿದ ಹಣವನ್ನು ನೀಡುವಂತೆ ತಿಳಿಸಿದರು.

ಆಯುಕ್ತರು ಮಾತನಾಡಿ, ಪಾಲಿಕೆಯಿಂದ ಈಗಾಗಲೇ ರಸ್ತೆ ಹಾಗೂ ತುರ್ತಾಗಿ ನೀರಿನ ಅಗತ್ಯ ನೀಗಿಸಲು 3 ಬೋರ್‌ವೆಲ್ ಕೊರೆಸಲಾಗಿದೆ, 288 ಮನೆಗಳಿಗೆ ಯುಜಿಡಿ, ಕುಡಿಯುವ ನೀರು ನೀಡಲಾಗಿದೆ. 336 ಮನೆಗಳಿಗೆ ಬೋರ್ ವೆಲ್ ವ್ಯವಸ್ಥೆ ಮಾಡಲಾಗುತ್ತಿದೆ. ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ರೂ.10.5 ಕೋಟಿ ಅವಶ್ಯಕತೆ ಇದೆ ಎಂದರು.

Madhu_Bangarappa ಶಾಸಕರಾದ ಚನ್ನಬಸಪ್ಪ ಪ್ರತಿಕ್ರಿಯಿಸಿ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗೋವಿಂದಾಪುರ ಗೋಪಿಶೆಟ್ಟಿಕೊಪ್ಪ ಒಂದೆಡೆಯಾದರೆ, ಸ್ಲಂ ಬೋರ್ಡ್ ಗೆ ಸಂಬಂಧಿಸಿದಂತೆ 1500 ಮನೆಗಳ ಸಮಸ್ಯೆಯೂ ಇದೆ. ಗೋವಿಂದಾಪುರದಲ್ಲಿ ಈಗ ಕೇವಲ 60-70 ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಅಲ್ಲಿ ಮೂಲಭೂತ ಸೌಕರ್ಯಗಳಿಗೆ ಶಾಶ್ವತವಾದ ಪರಿಹಾರಗಳನ್ನು ಒದಗಿಸಬೇಕೆಂದರು.

ಸಚಿವರು, ನೀರು, ಯುಜಿಡಿ, ವಿದ್ಯುತ್ ಇತರೆ ಮೂಲಭೂತ ಸೌಕರ್ಯಗಳ ಕುರಿತು ಯೋಜನೆಯಲ್ಲಿ ಮೊದಲೇ ವ್ಯವಸ್ಥೆ ಮಟಡಬೇಕಿತ್ತು. ಫಲಾನುಭವಿಗಳ ವಂತಿಗೆಯೂ ಹೆಚ್ಚಾಗಿದ್ದು ಅವರಿಗೆ ಹೊರೆಯಾಗಿದೆ. ರೂ.260 ಕೋಟಿ ಮೊತ್ತದಷ್ಟು ದೊಡ್ಡ ಯೋಜನೆಯನ್ನು ಸಮರ್ಪಕವಾಗಿ ಯೋಜಿಸಬೇಕಿತ್ತು. ಅದು ಆಗಿಲ್ಲ. ಇದೀಗ ನ್ಯೂನ್ಯತೆಗಳ ಸಂಪೂರ್ಣ ವರದಿ ತಕ್ಷಣ ನೀಡಿ. ತುರ್ತಾಗಿ ಅವಶ್ಯಕವಾಗಿ ಆಗಬೇಕಿರುವ ಕೆಲಸಗಳ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳ ಮೂಲಕ ತಮಗೆ ಒಂದು ಸೋಮವಾರದ ಒಳಗೆ ವರದಿ ನೀಡಿ. ಸರ್ಕಾರದಿಂದ ರೂ.10 ರಿಂದ 15 ಕೋಟಿ ಅನುದಾನ ತರುವ ಪ್ರಯತ್ನ ಮಾಡುತ್ತೇನೆ ಎಂದರು
ಪಾಲಿಕೆ ಆಯುಕ್ತರು, 2024-5 ನೇ ಸಾಲಿನ ಜುಲೈವರೆಗೆ ಒಟ್ಟು 4626.31 ಲಕ್ಷ, ರೂ.2872.13 ವೆಚ್ಚವಾಗಿದ್ದು ರೂ.1754.18 ಲಕ್ಷ ಉಳಿಕೆಯಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಮಾತನಾಡಿ, ಪಾಲಿಕೆಯಲ್ಲಿ ಖಾತೆ ಎಕ್ಸಟ್ರಾಕ್ಟ್ ತೆಗೆದುಕೊಳ್ಳಲು ಹೋದಾಗ ಕಳೆದ 8 ರಿಂದ 10 ವರ್ಷ ನಿರಂತರವಾಗಿ ತೆರಿಗೆ ಕಟ್ಟಿದ್ದರೂ ಸಹ ಅದರ ಹಿಂದಿನ 8 ರಿಂದ 10 ವರ್ಷಗಳ ತೆರಿಗೆಯನ್ನು ಪಾವತಿಸಿಕೊಳ್ಳುತ್ತಾರೆ. ಇದರಿಂದ ಸಾರ್ವಜನಿಕರಿಗೆ ಕಿರುಕುಳ ಆದಂತೆ ಆಗುತ್ತಿದೆ ಎಂದು ದೂರಿದರು.
ಸಚಿವರು, ಪಾಲಿಕೆಯವರು ತಮ್ಮ ಸಾಫ್ಟ್ವೇರ್‌ನಲ್ಲಿ ಅಗತ್ಯವಾದ ಬದಲಾವಣೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಹಾಗೂ ನಗರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಹಲವಾರು ದೂರುಗಳಿದ್ದು ಆಯುಕ್ತರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೀರು, ವಿದ್ಯುತ್, ಯುಜಿಡಿ ಇತರೆ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳಬೇಕೆಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ 24*7 ಕುಡಿಯುವ ನೀರಿನ ಯೋಜನೆಯಡಿ 59 ಝೋನ್‌ಗಳ ಪೈಕಿ 18 ಝೋನ್‌ಗಳಲ್ಲಿ ಸಂಪರ್ಕ ನೀಡಲಾಗಿದ್ದು ಎಲ್ಲ ಝೋನ್‌ಗಳಲ್ಲಿ ಸಂಪರ್ಕ ನೀಡಿದ ನಂತರ ಬಿಲ್ ನೀಡಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.

ತುಂಗಾನದಿ ಮಾಲಿನ್ಯ ತಡೆಯಿರಿ : ಕಾಡಾ ಅಧ್ಯಕ್ಷರಾದ ಡಾ.ಅಂಶುಮನ್ ಮಾತನಾಡಿ, ತುಂಗಾ ಎಡ ಮತ್ತು ಬಡದಂಡೆ ಕಾಲುವೆಗಳಿಗೆ ನಗರ ಮತ್ತು ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನೇರವಾಗಿಊ ಕಲುಷಿತ ನೀರನ್ನು ಬಿಡಲಾಗುತ್ತಿದೆ. ಇದರಿಂದ ನೀರು ಕಲುಷಿತವಾಗಿ ಕೃಷಿಗೆ ಕೂಡ ಯೋಗ್ಯವಾಗಿಲ್ಲ, ಜನ-ಜಾನುವಾರುಗಳ ಆರೋಗ್ಯಕ್ಕೂ ಈ ನೀರು ಮಾರಕವಾಗಿದೆ. ಈ ಮಾಲಿನ್ಯ ತಡೆಗಟ್ಟಬೇಕೆಂದು ಮನವಿ ಮಾಡಿದರು.
ಕರ್ನಾಟಕ ನೀರು ಮಂಡಳಿ ಎಇಇ ಮಿಥುನ್ ಕುಮಾರ್ ಮಾತನಾಡಿ, ಒಳಚರಂಡಿ ನೀರನ್ನು ಸಂಸ್ಕರಣಾ ಘಟಕದಿಂದ ಶುದ್ದೀಕರಿಸಿ ನದಿಗೆ ಬಿಡಲಾಗುತ್ತಿದೆ, ಬಚ್ಚಲು, ಶೌಚಾಲಯದ ಗ್ರೇವಾಟರ್‌ನ್ನು ಒಳಚರಂಡಿ ನೀರಿಗೆ ಸಂಪರ್ಕ ಒದಗಿಸಿದರೆ ಅದನ್ನು ಸಂಸ್ಕರಿಸಿ ಬಿಡಲಾಗುವುದು. 80 ಸಾವಿರ ಮನೆಗಳ ಪೈಕಿ 42 ಸಾವಿರ ಮನೆಗಳ ತ್ಯಾಜ್ಯ ನೀರು ಶುದ್ದೀಕರಣಕ್ಕೆ ಒಳಗಾಗುತ್ತಿದೆ. ಗ್ರೇವಾಟರ್‌ನ್ನೂ ಕೂಡ ಸಂಸ್ಕರಿಸಿದಲ್ಲಿ ಮಾಲಿನ್ಯ ತಡೆಗಟ್ಟಬಹುದು ಎಂದರು.
ಸಚಿವರು, ಅನಧಿಕೃತ ಗ್ರೇ ಮತ್ತು ಬ್ಲಾಕ್ ವಾಟರ್ ನದಿ ಸೇರದಂತೆ ತಡೆಯಬೇಕು. ಪ್ರತಿ ಮನೆಗಳ ಒಳಚರಂಡಿ, ಗ್ರೇವಾಟರ್ ಶುದ್ದೀಕರಣಕ್ಕೆ ಒಳಗಾಗುವಂತೆ ಕ್ರಮ ವಹಿಸಬೇಕು ಎಂದರು ಹೇಳಿದರು.

ಹಾಗೂ ಶಾಸಕರು ಸಭೆಯಲ್ಲಿ ತಿಳಿಸಿದಂತೆ ಕಾವೇರಿ ನದಿ ಮಾಲಿನ್ಯ ತಡೆ ಸಮಿತಿ ರಚನೆಯಂತೆ ತುಂಗ-ಭದ್ರಾ ನದಿ ಮಾಲಿನ್ಯ ತಡೆಯಲು ಸಮಿತಿ ರಚನೆಗೆ ಪ್ರಸ್ತಾವನೆ ಸಿದ್ದಪಡಿಸುವಂತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನೆಹರೂ ಕ್ರೀಡಾಂಗಣದಲ್ಲಿ ನೆರವೇರಿಸುವಂತೆ ಶಾಸಕರು ಕೋರಿದರು. ಈ ಕುರಿತು ಚಿಂತಿಸುವುದಾಗಿ ಹೇಳಿದ ಸಚಿವರು, ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾ, ರಾಜ್ಯ ಮಟ್ಟದ ಕಾರ್ಯಕ್ರಮಗಳು ಜರುಗುವಂತೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ಕ್ರಿಯಾಯೋಜನೆ ಸಿದ್ದಪಡಿಸಲಾಗುವುದು ಎಂದರು.

ಮಹಾನಗರಪಾಲಿಕೆ ವ್ಯಾಪ್ತಿಯ ಕೆರೆ ಮತ್ತು ಉದ್ಯಾನಗಳ ನಿರ್ವಹಣೆ ಸಂಬಂಧಿಸಿದಂತೆ ಮಾಹಿತಿಯನ್ನು ತಮಗೆ ನೀಡುವಂತೆ ತಿಳಿಸಿದ ಅವರು ಪಾಲಿಕೆ ವ್ಯಾಪ್ತಿಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಸ್ಥಳೀಯ ಪ್ರದೇಶ ಅಭಿವೃದ್ದಿ ವ್ಯಾಪ್ತಿಯಲ್ಲಿ ಹೊಸದಾಗಿ 23 ಗ್ರಾಮಗಳನ್ನು ಸೇರ್ಪಡೆಗೊಳಿಸುವ ವಿಷಯ ಪರಿಶೀಲನಾ ಹಂತದಲ್ಲಿದೆ ಎಂದರು ತಿಳಿಸಿದರು.

ಪಾಲಿಕೆ ಆಯುಕ್ತರು ಬೈಪಾಸ್ ರಸ್ತೆಗೆ ಪೂರಕವಾಗಿ ಹೊರ ವರ್ತುಲ ರಸ್ತೆ ಅಭಿವೃದ್ದಿ, ಸುಸಜ್ಜಿತ ಮೀನು ಮಾರುಕಟ್ಟೆ ಅಭಿವೃದ್ದಿಗೆ ಅಗತ್ಯವಾದ ಅನುದಾನ ಒದಗಿಸುವಂತೆ ಸಚಿವರಿಗೆ ಕೋರಿದರು.

ಶಾಸಕರಾದ ಶಾರದಾ ಪರ‍್ಯಾನಾಯ್ಕ ಮಾತನಾಡಿ, ಅನುಪಿನಕಟ್ಟೆ ಪೋದಾರ್ ಶಾಲೆ ಬಳಿ ಪಾಲಿಕೆಯವರು ರಾತ್ರಿ ಹೊತ್ತು ಕಸ ಹಾಕುತ್ತಿದ್ದಾರೆ, ಕಟ್ಟಡದ ತ್ಯಾಜ್ಯಗಳನ್ನು ಹಾಕುತ್ತಿದ್ದು ಇದನ್ನು ನಿಲ್ಲಿಸಬೇಕು. ಪಾಲಿಕೆ ಆಯುಕ್ತರು ಖುದ್ದು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Mallikarjuna Murugarajendra Swamiji ಪಂಚಾಕ್ಷರಿ ಗವಾಯಿಗಳ ಪ್ರೇರಣೆಯಿಂದ ಅನೇಕರು ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ- ಡಾ.ಮಲ್ಲಿಕಾರ್ಜುನ ಮರುಘರಾಜೇಂದ್ರ ಶ್ರೀ

0

Mallikarjuna Murugarajendra Swamiji ಸಂಗೀತಕ್ಕೆ ಹೆಚ್ಚು ಪಾವಿತ್ರ್ಯತೆ ತಂದುಕೊಟ್ಟವರು ಪಂಚಾಕ್ಷರಿ ಗವಾಯಿಗಳು, ಅವರ ಸಾಧನೆಯಿಂದ ಪ್ರೇರೆಪಿತರಾದ ಅನೇಕ ಜನರು ನಾಡಿನ ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಕೃಷಿನಗರದ ರೋಟರಿ ರಿವರ್‌ಸೈಡ್ ಸಭಾಂಗಣದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮುರುಘರಾಜೆಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್ ನ ಗುರುಬಸವ ಅಧ್ಯಯನ ಪೀಠದಿಂದ ಶಿವಗಂಗಾ ಯೋಗಕೇಂದ್ರ ಕೃಷಿನಗರ ಶಾಖೆ ಮತ್ತು ರೋಟರಿ ರಿವರ್‌ಸೈಡ್ ಸಹಯೋಗದಲ್ಲಿ ಆಯೋಜಿಸಿದ್ದ ಶ್ರಾವಣ ಚಿಂತನ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಶ್ರಾವಣ ಚಿಂತನದಿಂದ ಮನೆ ಮನಗಳು ಬೆಳಗುತ್ತವೆ. ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಒಳ್ಳೆಯ ವಿಚಾರಗಳ ಅರಿವು ಮೂಡುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಾ. ಎಂ.ಬಸವರಾಜಪ್ಪ ಮಾತನಾಡಿ, ಪಂಚಾಕ್ಷರಿ ಗವಾಯಿಗಳ ಸಾಧನೆ ಬದುಕು ಬರಹ ಕುರಿತು ಮಾತನಾಡಿದರು. ಸೇನೆಯಲ್ಲಿ ಯೋಧನಾಗಿ ಸೇವೆ ಸಲ್ಲಿಸಿದ ಭಾವೇಶ್ ಅವರು ಸೇನೆಯ ಅನುಭವಗಳ ಕುರಿತು ಹಾಗೂ ಜೀವನ್ಮರಣ ಹೋರಾಟದ ರೋಮಾಂಚನ ಅನುಭವಗಳನ್ನು ಹಂಚಿಕೊಂಡರು.

ರೋಟರಿ ಕ್ಲಬ್ ರಿವರ್‌ಸೈಡ್ ಅಧ್ಯಕ್ಷ ಎಂ.ಆರ್.ಬಸವರಾಜ ಮಾತನಾಡಿ, ಗುರುಗಳು ನಡೆಸುವ ಶ್ರಾವಣ ಚಿಂತನದಂತಹ ಕಾರ್ಯಕ್ರಮಗಳು ಧಾರ್ಮಿಕ ಅರಿವಿನ ಜತೆ ಹೊಸ ವಿಷಯಗಳ ತಿಳವಳಿಕೆ ಮೂಡಿಸುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಕುಟುಂಬ ಸದಸ್ಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

Mallikarjuna Murugarajendra Swamiji ಆಕಾಶವಾಣಿ ಹಿರಿಯ ಕಲಾವಿದೆ ನಾಗರತ್ನಮ್ಮ ಚಂದ್ರಶೇಖರ್ ಹಾಗೂ ಯೋಗ ಶಿಬಿರಾರ್ಥಿಗಳಿಂದ ಭಕ್ತಿ ಸಂಗೀತ ಸೇವೆ ಹಾಗೂ ವಚನ ಕಾರ್ಯಕ್ರಮ ಸುಂದರವಾಗಿ ನೆರವೇರಿತು. ಜಿ.ವಿಜಯಕುಮಾರ್, ಯೋಗ ಶಿಕ್ಷಕರಾದ ಚಂದ್ರಶೇಖರಯ್ಯ, ನೀಲಕಂಠರಾವ್, ಜಯಣ್ಣ, ಮಹೇಶ್ವರಪ್ಪ, ಚಿದಾನಂದ, ಕುಸುಮಾ, ಬಿಂದು ವಿಜಯಕುಮಾರ್, ವಿನೋದಮ್ಮ, ಕೃಷ್ಣಮೂರ್ತಿ, ಮಹಾಬಲೇಶ್ವರ ಹೆಗಡೆ, ಸುರೇಶ್, ವಕೀಲ ಮಲ್ಲೇಶ್, ರೇವಣಪ್ಪ, ಕುಸುಮಾ, ಅರುಣಾ, ಭಾಗ್ಯ ಹಾಗೂ ಯೋಗಬಂಧುಗಳು ಉಪಸ್ಥಿತರಿದ್ದರು.

Department of Kannada and Culture ಆಗಸ್ಟ್ 20, ಜಿಲ್ಲಾಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ”

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Department of Kannada and Culture ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಆರ್ಯ ಈಡಿಗರ ಸಂಘದ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಜ್ಯೋತಿಕುಮಾರಿ ಕೆ.ವಿ. ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

National Defense University ವಿದ್ಯಾರ್ಥಿಗಳ ಜೀವನದಲ್ಲಿ ಫಿಟ್ ನೆಸ್ & ಕ್ರೀಡೆಗಳು ನಿರ್ಣಾಯಕವಾಗಿವೆ – ಶಿರೀಶ್ ಕುಮಾರ್

0

National Defense University ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯವು ರಾಗಿಗುಡ್ಡದಲ್ಲಿರುವ ತನ್ನ ಕ್ಯಾಂಪಸ್‌ನಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ತನ್ನ 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ, ಈ ದಿನವು ದೇಶದ ಸ್ವಾತಂತ್ರ್ಯಕ್ಕಾಗಿ ದಣಿವರಿಯಿಲ್ಲದೆ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಕಟುವಾದ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಸಾಂಸ್ಕೃತಿಕ ಪರಂಪರೆ, ಅದರ ಸಮಗ್ರ ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಎಳೆಗಳೊಂದಿಗೆ ವೈವಿಧ್ಯತೆಯು ಸ್ವಾತಂತ್ರ್ಯ, ಏಕತೆ, ಸಮಾನತೆ ಮತ್ತು ಅಂತರ್ಗತ ಬೆಳವಣಿಗೆಯ ಮೌಲ್ಯಗಳಿಂದ ನಿರೂಪಿಸಲ್ಪಟ್ಟ ಅಭಿವೃದ್ಧಿ ಹೊಂದಿದ ಭಾರತದ ಸ್ಪೂರ್ತಿದಾಯಕ ಸಾಹಸವನ್ನು ಹೇಳುತ್ತದೆ. ಈ ವರ್ಷದ ಸ್ವಾತಂತ್ರ್ಯ ದಿನದ ಥೀಮ್ “ವಿಕಾಸಿತ್ ಭಾರತ್” ಅನ್ನು ನಿಜವಾಗಿಯೂ ಪ್ರಶಂಸಿಸಿ.
ಶಿವಮೊಗ್ಗದ ಆರ್‌ಆರ್‌ಯುನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯನ್ನು ಗೌರವಾನ್ವಿತ ಅತಿಥಿಗಳಾದ ಶ್ರೀ. ಶಿರೀಶ್ ಕುಮಾರ್ ರೈ, ಡೆಪ್ಯುಟಿ ಕಮಾಂಡೆಂಟ್ 97 ಬೆಟಾಲಿಯನ್ ಆರ್‌ಎಎಫ್, ಡಾ.ಶೋಬಾ ಡಿ. ಪ್ರಾಂಶುಪಾಲರು, ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ರಾಗಿಗುಡ್ಡ, ಶಿವಮೊಗ್ಗ. ಈ ಸಂದರ್ಭದಲ್ಲಿ ಆರ್‌ಆರ್‌ಯು ಶಿವಮೊಗ್ಗದ ನಿರ್ದೇಶಕ ಡಾ.ರಮಾನಂದ್ ಗರ್ಗೆ ಅವರು ಗಣ್ಯ ಅತಿಥಿಗಳನ್ನು ಮತ್ತು ಶಿವಮೊಗ್ಗದ ಎಲ್ಲಾ ಪ್ರಮುಖ ವ್ಯಕ್ತಿಗಳನ್ನು ಕ್ಯಾಂಪಸ್‌ನಲ್ಲಿ ಸ್ವಾಗತಿಸಿದರು.

ತಮ್ಮ ಸ್ವಾಗತ ಭಾಷಣದಲ್ಲಿ, ಡಾ. ಗರ್ಗೆ ಅವರು ಭಾರತದ ಅಭಿವೃದ್ಧಿಯ ಅವಿಭಾಜ್ಯ ಅಂಗವಾಗಿ ಸಾಂಸ್ಕೃತಿಕ ವೈವಿಧ್ಯತೆಯ ಮಹತ್ವವನ್ನು ಎತ್ತಿ ತೋರಿಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಅಮೋಘ ಕೊಡುಗೆ ಮತ್ತು ಪರಾಕ್ರಮಿ ಸಶಸ್ತ್ರ ಪಡೆಗಳು ಮತ್ತು ಪೊಲೀಸ್ ಅಧಿಕಾರಿಗಳ ಅಪ್ರತಿಮ ಸೇವೆಯನ್ನು ಅವರು ಸ್ಮರಿಸಿದರು, ಇಂದಿನ ಅಭಿವೃದ್ಧಿ ಹೊಂದಿದ ದೇಶವನ್ನು ಗ್ರಹದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ಹೆಮ್ಮೆಯಿಂದ ಕರೆದುಕೊಳ್ಳುತ್ತಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ. ಶಿರೀಶ್ ಕುಮಾರ್ ರೈ, ಡೆಪ್ಯೂಟಿ ಕಮಾಂಡೆಂಟ್ 97 ಬೆಟಾಲಿಯನ್ ಆರ್‌ಎಎಫ್ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಶಿಸ್ತಿನ ದೃಷ್ಟಿಕೋನವನ್ನು ರೂಪಿಸಿ ಅವರನ್ನು ಸಮರ್ಥ ವಿದ್ಯಾರ್ಥಿಗಳನ್ನಾಗಿ ಪರಿವರ್ತಿಸಿದ ಅಧ್ಯಾಪಕರನ್ನು ಶ್ಲಾಘಿಸಿದರು.

National Defense University ಅವರು ವಿದ್ಯಾರ್ಥಿಗಳ ಜೀವನದಲ್ಲಿ ಫಿಟ್‌ನೆಸ್ ಮತ್ತು ಕ್ರೀಡೆಗಳ ನಿರ್ಣಾಯಕ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು ಮತ್ತು ಪಠ್ಯಕ್ರಮದ ಪ್ರಗತಿಯೊಂದಿಗೆ ಸೂಕ್ತವಾಗಿ ಸಮತೋಲನ ಮಾಡುವ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳ ಸೂಕ್ತವಾದ ಫಿಟ್‌ನೆಸ್ ಮಟ್ಟದ ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸಮರ್ಪಿತ ಪ್ರಯತ್ನಗಳನ್ನು ಮಾಡಲು RRU ಮತ್ತು ಅದರ ತರಬೇತಿ ಸಿಬ್ಬಂದಿಯನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯವು ಧೈರ್ಯ ಮತ್ತು ಏಕತೆಯ ಸಾಹಸಗಾಥೆಯನ್ನು ಮುಂದುವರಿಸಲು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿತು.

ಈ ಸಂದರ್ಭದಲ್ಲಿ ಆರ್‌ಆರ್‌ಯು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಅಂಶಗಳನ್ನು ಪ್ರಸ್ತುತಪಡಿಸಿದರು. ಜತೆಗೆ ವಿದ್ಯಾರ್ಥಿಗಳಾದ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಶಿವಮೊಗ್ಗ ಸಹ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ತಮ್ಮ ಯುವ ಉತ್ಸಾಹ ಮತ್ತು ಉತ್ಸಾಹದಿಂದ ದೇಶಭಕ್ತಿಯ ಬಣ್ಣಗಳಿಂದ ವಾತಾವರಣವನ್ನು ತುಂಬಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀಮತಿ ಸಿಂಧು ಮತ್ತು ಶ್ರೀ ನಂದಾ,ಅವರು ಸಮಾರಂಭದ ಮತ್ತು ಧನ್ಯವಾದವನ್ನು ಶ್ರೀ ಡೊನಾಲ್ಡೊ ಬೆನ್ನಿ ಅವರು ಪ್ರಸ್ತಾಪಿಸಿದರು.

CM Siddharamaih ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ₹36,000 ವ್ಯಯಿಸಲಾಗಿದೆ- ಸೀಎಂ ಸಿದ್ಧರಾಮಯ್ಯ

0

CM Siddharamaih ನಮ್ಮ ರಾಜ್ಯದ ಸರ್ವರನ್ನೂ ಒಳಗೊಂಡ ಸುಸ್ಥಿರ ಅಭಿವೃದ್ಧಿ ಮಾದರಿ ಇಂದು “ಕರ್ನಾಟಕ ಮಾದರಿ’ ಎಂದು ದೇಶಪ್ರಸಿದ್ಧವಾಗಿದೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತಿದೆ.

ನಮ್ಮ ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಿದ್ದು, ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿಯಾಗಿದೆ. ವಿಜ್ಞಾನ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ.
ಮೂಲಸೌಕರ್ಯಗಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕಾ ಅಭಿವೃದ್ಧಿ, ಕೌಶಾಲ್ಯಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಉದ್ಯೋಗ ಸೃಷ್ಟಿ, ಜನಸ್ನೇಹಿ ಆಡಳಿತ ನಮ್ಮ ಕನಸು ಮಾತ್ರವಲ್ಲ; ಇದೇ ಗುರಿಯಾಗಿದೆ. ಈ ಗುರಿ ಸಾಧನೆಯತ್ತ ಮುನ್ನಡೆಯುವುದೇ ನಮ್ಮ ಧ್ಯೇಯವಾಗಿದೆ.

ಸಾರ್ವತ್ರಿಕ ಕನಿಷ್ಠ ಆದಾಯ (Universal Basic Income) ಪರಿಕಲ್ಪನೆಯಲ್ಲಿ, ಎಲ್ಲರಿಗೂ ಬದುಕಲು ಬೇಕಾದಷ್ಟು ಆದಾಯ ಸಿಗಬೇಕು ಎಂಬ ಕಾರಣದಿಂದಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ಬೆಲೆ ಏರಿಕೆ, ನಿರುದ್ಯೋಗದಿಂದ ತತ್ತರಿಸಿರುವ ಜನತೆಗೆ ಇವು ಆರ್ಥಿಕ ಶಕ್ತಿಯನ್ನು ನೀಡುತ್ತಿವೆ. ಅದರಲ್ಲೂ ನೇರವಾಗಿ ಹಣಕಾಸಿನ ನೆರವು ಒದಗಿಸುವ ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳು ಸಾರ್ವತ್ರಿಕ ಕನಿಷ್ಠ ಆದಾಯ ಮಾದರಿಯ ಕಲ್ಯಾಣ ಯೋಜನೆಗಳಾಗಿವೆ.

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಗಳು ಲಿಂಗ ಸಮಾನತೆಯತ್ತ ದೃಢ ಹೆಜ್ಜೆಯನ್ನು ಇರಿಸಿದೆ. ದುಡಿಮೆ ಮಾಡುತ್ತಿರುವ ಮಹಿಳೆಯರಿಗೂ ಅವರ ಖರ್ಚಿನ ದೊಡ್ಡ ಮೊತ್ತವನ್ನು ಉಳಿಸಿ, ಅವರ ಆರ್ಥಿಕ ಸ್ವಾತಂತ್ರ್ಯವನ್ನು ಹೆಚ್ಚಿಸಿದೆ.

CM Siddharamaih ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ನಾವು 36 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಈ ವರ್ಷ ಈ ಯೋಜನೆಗಳಿಗೆ 52 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಿದ್ದೇವೆ. ಕರ್ನಾಟಕದ ಈ ಯೋಜನೆ ದೇಶಕ್ಕೆ ಮಾದರಿ ಎಂದರೆ ಖಂಡಿತಾ ಅತಿಶಯೋಕ್ತಿಯಾಗಲಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದರು.

ಬೆಂಗಳೂರಿನ ಮಣೆಕ್ ಷಾ ಮೈದಾನದಲ್ಲಿ ನಡೆದ 78 ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

Madhu Bangarappa ತುಂಬಿದ ಕುಬಟೂರು ಕೆರೆಗೆ ಬಾಗಿನ ಅರ್ಪಿಸಿದ ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಬಟೂರು ಕೆರೆ ಭರ್ತಿಯಾಗಿದ್ದು, ಐತಿಹಾಸಿಕ ಕುಬಟೂರು ಕೆರೆಗೆ ಸಚಿವ ಮಧು ಬಂಗಾರಪ್ಪ ಇಂದು ಬಾಗಿನ ಅರ್ಪಿಸಿದ್ದಾರೆ.
ತುಂಬಿದ ಕೆರೆಗೆ ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಬಾಗಿನ ಅರ್ಪಣೆ ಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ವಗ್ರಾಮ ಕುಬಟೂರು ಆಗಿದೆ.

ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ :

ನಂತರ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಹೇಳಿದರು.
ಸರ್ಕಾರದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಶುಕ್ರವಾರ ಇಲ್ಲಿನ ಸೊರಬ ತಾಲ್ಲೂಕಿನ ಸ್ವಗ್ರಾಮ ಕುಬಟೂರು ಕೆರೆಗೆ ಬಾಗಿನ ಅರ್ಪಿಸಿ, ಬಳಿಕ ಕುಬಟೂರು ಸರ್ಕಾರಿ ಶಾಲಾಭಿವೃದ್ಧಿಗೆ ₹10 ಲಕ್ಷ ವೈಯಕ್ತಿಕವಾಗಿ ದೇಣಿಗೆ ನೀಡುವ ಕಾರ್ಯಕ್ರಮಕ್ಕೆ, ಪತ್ನಿ ಅನಿತಾ ಮಧುಬಂಗಾರಪ್ಪ ಅವರ ಜತೆಗೂಡಿ ಚಾಲನೆ ನೀಡಿ ಮಾತನಾಡಿದರು‌.
ಶಾಲೆಗೆ ನೀಡಿದ ದೇಣಿಗೆ ಮೊತ್ತ ₹10 ಲಕ್ಷ ಇರಬಹುದು. ಆದರೆ, ಇದು ಮುಂದಿನ ದಿನದಲ್ಲಿ ಕೋಟಿಗೆ ವಿಸ್ತರಣೆ ಆಗಲಿದೆ. ಇದರಿಂದ, ಸರ್ಕಾರಿ ಶಾಲೆಗಳ ಏಳಿಗೆ ಸಾಧ್ಯವಾಗಲಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಶಯ ಸಕಾರಗೊಂಡಿದೆ ಎಂದರು.
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ₹೧ ಸಾವಿರ ಕೋಟಿ ದೇಣಿಗೆ ಹರಿದು ಬರುವ ನಿರೀಕ್ಷೆ ಇದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಸಂಜೆ ತರಗತಿಗೆ ಒತ್ತುಕೊಡಿ
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಕ್ಕಳಿಗೆ ಕನ್ನಡ ಕಲಿಸಬೇಕು. ಅದೇ, ರೀತಿ ಶಿಕ್ಷಕರು ಸಹ ಕನ್ನಡ ಭಾಷೆಯಲ್ಲಿ ಪಕ್ವವಾಗಬೇಕು. ಗ್ರಾಮಾಂತರ ಭಾಗ ಸೇರಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಜೆ ತರಗತಿ ನಡೆಸಲು ಶಿಕ್ಷಕರು ಮುಂದಾಗಬೇಕು. ಇದರಿಂದ, ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.
ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಯಾವುದೇ ಹಕ್ಕು ಪೋಷಕರಿಗಿಲ್ಲ. ಆದ್ದರಿಂದ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು- ಮಧುಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು,

ಮಕ್ಕಳು ಏನಂತಾರೆ?:

Madhu Bangarappa ಮಧು ಅಂಕಲ್ ಶಾಲೆಗೆ ಟಿವಿ ಕೊಟ್ಟಿದ್ದಾರೆ. ಕುಸಿ ಆಗುತ್ತಿದೆ ಎಂದು ಒಂದನೇ ತರಗತಿಯ ವಿದ್ಯಾರ್ಥಿನಿ ಅನುಶ್ರೀ ಹೇಳಿದರೆ, ಮೂರನೇ ತರಗತಿಯ ವಿದ್ಯಾರ್ಥಿ ಎಂ.ಎ ಮಾಲತೇಶ್ ಮಾತನಾಡಿ ತುಂಬಾ ಕುಸಿ ಆಗುತ್ತಿದೆ. ಟಿವಿಯ ಮೂಲಕ ಪಾಠಗಳನ್ನು ಕೇಳಿಸಿಕೊಳ್ಳುವ ಜತೆಗೆ ನೋಡಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಎಸ್ ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಬಎಂ.ಡಿ.ಶೇಖರ್, ದಯಾನಂದ ಕಲ್ಲೆ, ನಾಗರಾಜ ಗೌಡ, ಗಣಪತಿ, ನಾಗರಾಜ, ಅರುಣ್ ಕುಮಾರ್, ರಾಜಶೇಖರ, ಮಂಜುನಾಥ, ಹುಚ್ಚಪ್ಪ, ಪ್ರಕಾಶ್ ಇದ್ದರು.

Madhu Bangarappa ಉಳ್ಳವರು ಮನಸ್ಸು ಮಾಡಿದರೆ ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು- ಮಧು ಬಂಗಾರಪ್ಪ

0

Madhu Bangarappa ವರ್ಷದ ಅವಧಿ ಒಳಗಾಗಿ ಸಮುದಾಯದಿಂದ ಒಂದು ಸಾವಿರ ಕೋಟಿ ಆರ್ಥಿಕ ನೆರವು ಒದಗಿ ಬರುವ ನಿರೀಕ್ಷೆ ಇದೆ ಎಂದು ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಸೊರಬ ತಾಲ್ಲೂಕು ಕುಬಟೂರಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಹತ್ತು ಲಕ್ಷ ರೂಪಾಯಿಗಳ ಪಾಠೋಪಕರಣ ಮತ್ತು ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದಂತೆ ಎಲ್ಲಾ ರೀತಿಯ ಅಗತ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದೆಸೆಯಲ್ಲಿ ಸುಮಾರು 10 ಲಕ್ಷ ರೂಪಾಯಿಗಳ ಮೌಲ್ಯದ ವಸ್ತುಗಳನ್ನು ನೀಡಿ ತಾವು ಓದಿದ ಶಾಲೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ.

ಈ ನಿಟ್ಟಿನಲ್ಲಿ ಸ್ವತಹ ತಾವುಗಳು ಕೂಡ ಅವರ ಹಾದಿಯಲ್ಲಿಯೇ ಮುನ್ನಡೆದು ಮಾನ್ಯ ಮುಖ್ಯಮಂತ್ರಿಗಳಾಗಿದ್ದ ದಿವಂಗತ ಎಸ್ ಬಂಗಾರಪ್ಪನವರು ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ಶಾಲೆಯ ಸರ್ವಾಂಗಿಣ ವಿಕಾಸಕ್ಕೆ ತಾವು ಬದ್ಧರಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಸುಮಾರು 46000 ಸರ್ಕಾರಿ ಶಾಲೆಗಳಿದ್ದು, ಆ ಎಲ್ಲಾ ಶಾಲೆಗಳನ್ನು ಸರ್ಕಾರದ ಅನುದಾನದಿಂದಲೇ ಅಭಿವೃದ್ಧಿಪಡಿಸಲು ಸಾಧ್ಯವಾಗದು. ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನಮಾನ ಹೊಂದಿದ್ದು, ಉತ್ತಮ ಜೀವನ ನಿರ್ವಹಣೆ ಮಾಡುತ್ತಿರುವ ಅನೇಕ ಜನರು ತಾವು ಓದಿದ ಹಾಗೂ ಇಂದು ತಮ್ಮ ಮಕ್ಕಳು ಮತ್ತು ತಮ್ಮ ಊರಿನ ಮಕ್ಕಳು ಓದುತ್ತಿರುವ ಶಾಲೆಗೆ ಋಣ ತೀರಿಸುವ ಭಾಗವಾಗಿ ಯಾವುದೇ ವಿಧದಲ್ಲಾದರೂ ನೆರವಾಗುವಂತೆ ಹಾಗೂ ಅಲ್ಲಿನ ಮಕ್ಕಳು ಜಗವಿಖ್ಯಾತರಾಗುವಂತೆ ಶ್ರಮಿಸಲು ಮನವಿ ಮಾಡಿದರು.
ಹಲವು ದಶಕಗಳ ಹಿಂದಿನ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳು ಹಾಗೂ ಅವುಗಳ ಭೌತಿಕ ಸ್ವರೂಪ ಸಮಗ್ರವಾಗಿ ಬದಲಾವಣೆಗೊಂಡಿದೆ.

ಪ್ರತಿಭಾವಂತ ಶಿಕ್ಷಕರುಗಳ ನೇಮಕವಾಗಿದೆ. ಮಧ್ಯಾಹ್ನದ ಬಿಸಿ ಊಟ, ಪೌಷ್ಟಿಕ ಆಹಾರ, ಮೊಟ್ಟೆ, ಹಾಲು, ರಾಗಿ ಮಾಲ್ಟ್, ಸಮವಸ್ತ್ರ ಮತ್ತು ಪಠ್ಯಪುಸ್ತಕ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಅನ್ವಯವಾಗುವಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.

Madhu Bangarappa ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಪ್ರತಿಭಾವಂತ ಶಿಕ್ಷಕರೇ ಹೊಂದಿರುವ ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮುಂದಾಗುವಂತೆ ಮನವಿ ಮಾಡಿದ ಅವರು, ಸರ್ಕಾರಿ ಶಾಲೆಯ ಸೊಗಡು ಮತ್ತು ಮಹತ್ವವನ್ನು ಅರಿಯುವಂತೆ ಅವರು ಮನವಿ ಮಾಡಿದರು.
ಉತ್ತರ ಕರ್ನಾಟಕದ ಏಳು ಜಿಲ್ಲೆಗಳ 1700 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಸುಮಾರು 38,000 ವಿದ್ಯಾರ್ಥಿಗಳು ದಾಖಲಾಗಿರುವುದು ವಿಶೇಷ ಎನಿಸಿದೆ ಎಂದವರು ನುಡಿದರು.

ರಾಜ್ಯದ 46,000 ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 44,000 ಕೋಟಿ ರೂಪಾಯಿಗಳ ಹಣ ವೆಚ್ಚ ಮಾಡುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಸುಮಾರು 56 ಲಕ್ಷ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲೇಶಪ್ಪ ನೆರಕೇರ, ಶ್ರೀಮತಿ ಅನಿತಾ ಮಧು ಬಂಗಾರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ. ಡಿ. ಶೇಖರ್ ನಾಗರಾಜ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Apsara Ice Creams ಅಪ್ಸರಾ ಐಸ್ ಕ್ರೀಮ್ಸ್ ನಿಂದ ‘ಮುಸ್ಕಾನ್’ ಉಪಕ್ರಮದಿಂದ ವಿತರಣಾ ಚಟುವಟಿಕೆ

0

Apsara Ice Creams ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ ಉಪಕ್ರಮವನ್ನು ಪ್ರಾರಂಭಿಸುವುದಾಗಿ ತಿಳಿಸಿದೆ. ಐದು ದಶಕಗಳಿಗೂ ಹೆಚ್ಚು ಕಾಲ ಮಾರುಕಟ್ಟೆಯಲ್ಲಿ ಅಸ್ತಿತ್ವವನ್ನು ಹೊಂದಿರುವ ಸ್ಥಾಪಿತ ಮತ್ತು ವಿಶ್ವಾಸಾರ್ಹ ಬ್ರಾಂಡ್ ಅಪ್ಸರಾ ಐಸ್ ಕ್ರೀಮ್ಸ್, ಪ್ರಾರಂಭದಿಂದಲೂ ತಮ್ಮ ಗ್ರಾಹಕರಿಗೆ ಪ್ರೀಮಿಯಂ ಗುಣಮಟ್ಟದ ಐಸ್ಕ್ರೀಮ್ಗಳನ್ನು ಒದಗಿಸುತ್ತಾ ಬಂದಿದೆ. ಆಗಸ್ಟ್ 15ರಂದು ಮುಂಬೈ ಮತ್ತು ಪುಣೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ಇತರ ನಗರಗಳಲ್ಲಿ ಕೈಗೊಳ್ಳಲಾಗುವುದು.

ಮುಸ್ಕಾನ್ ಉಪಕ್ರಮದ ಅಡಿಯಲ್ಲಿ, ಕಂಪನಿಯು 53,000 (ಐಸ್ ಕ್ರೀಮ್) ಗಳನ್ನು ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಇದು ನಾಲ್ಕು ಟನ್ ಐಸ್ಕ್ರೀಮ್ಗಳಿಗೆ ಹತ್ತಿರದಲ್ಲಿದೆ. ಇನ್ನು ಎನ್ಜಿಒಗಳು ಮತ್ತು ಲಯನ್ಸ್ ಕ್ಲಬ್, ಲಿಯೋ, ಲಯನ್ ಇಂಟರ್ನ್ಯಾಷನಲ್ ಲ್ಯಾಂಡ್, ಸ್ವದೇಸ್ ಫೌಂಡೇಶನ್ನಂತಹ ಪ್ರಮುಖ ಸಾಮಾಜಿಕ ಸಂಸ್ಥೆಗಳು ಸಹ ಈ ಉಪಕ್ರಮದ ಭಾಗವಾಗಲಿವೆ. ಭಾರತದ 9 ರಾಜ್ಯಗಳು ಮತ್ತು 25 ನಗರಗಳನ್ನು ಒಳಗೊಳ್ಳುತ್ತದೆ. ಮಾತನಾಡಿದ ಅಪ್ಸರಾ ಐಸ್ ಕ್ರೀಮ್ಸ್ನ ಸ್ಥಾಪಕ ಪಾಲುದಾರ ನೆಮ್ ಚಂದ್ ಶಾ, “ಸಮಾಜದ ವಿವಿಧ ವರ್ಗಗಳ ಜನರ ಮುಖದಲ್ಲಿ ನಗು ತರುವುದು ಮತ್ತು ನಮ್ಮ 53ನೇ ವಾರ್ಷಿಕೋತ್ಸವ ಆಚರಿಸುವುದು ಮುಸ್ಕಾನ್ನ ಮುಖ್ಯ ಉದ್ದೇಶ .

ಆ. 15 ರಂದು 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಇದನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು.

Apsara Ice Creams ಅಪ್ಸರಾ ಐಸ್ಕ್ರೀಮ್ಸ್ನ ವ್ಯವಸ್ಥಾಪಕ ಪಾಲುದಾರ ಕೆಯೂರ್ ಶಾ ಮಾತನಾಡಿ, ಸಮಾಜದ ವಿವಿಧ ಸ್ತರಗಳನ್ನು ತಲುಪುವುದು ನಮ್ಮ ಆದ್ಯತೆಯಾಗಿದೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಾವು ನಮ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ ಎಂದರು. ನಮ್ಮ ಎಲ್ಲಾ ಫ್ರ್ಯಾಂಚೈಸ್ ಪಾಲುದಾರರು ಮತ್ತು ಸಂಸ್ಥೆಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಈ ಸಂದರ್ಭದಲ್ಲಿ ಹೇಳಿದರು.

Chamber Of Commerce ದಿನಸಿ ವರ್ತಕರ ಸಂಘದ ಅಧ್ಯಕ್ಷರಾಗಿ ಎಂ.ಹಾಲಸ್ವಾಮಿ ಅವಿರೋಧ ಆಯ್ಕೆ

0

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಿಶೇಷ ಆಹ್ವಾನಿತ ನಿರ್ದೇಶಕರಾದ ಶ್ರೀಯುತ ಎಂ. ಹಾಲಸ್ವಾಮಿಯವರು ನಗರದ ದಿನಸಿ ವರ್ತಕರ ಸಂಘಕ್ಕೆ ೨ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಹಾಗೂ ನಗರದ ಪ್ರತಿಷ್ಟಿತ ವೀರಶೈವ ಕಲ್ಯಾಣ ಮಂದಿರದ ನಿರ್ದೇಶಕರಾಗಿಯೂ ಆಯ್ಕೆಯಾಗಿರುತ್ತಾರೆ.
ಶಿವಮೊಗ್ಗ ಜಿಲ್ಲಾ ವಾಣ ಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಧ್ಯಕ್ಷರಾದ ಎನ್. ಗೋಪಿನಾಥ್‌ರವರು ಶ್ರೀಯುತ Chamber Of Commerce ಹಾಲಸ್ವಾಮಿಯವರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಂಸತ್ ಹೋಬಳಿದಾರ್, ಜಂಟಿ ಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ. ರಾಜು, ನಿರ್ದೇಶಕರುಗಳಾದ ಈ ಪರಮೇಶ್ವರ, ಗಣೇಶ ಎಂ. ಅಂಗಡಿ, ಮರಿಸ್ವಾಮಿ ಮಾಜಿ ಅಧ್ಯಕ್ಷರಾದ ಅಶ್ವಥ್ ನಾರಾಯಣ ಶೆಟ್ಟಿ, ಡಿ.ಎಂ. ಶಂಕರಪ್ಪ ಮುಂತಾದವರು ಉಪಸ್ಥಿತರಿದ್ದರು.