Monday, April 6, 2026
Monday, April 6, 2026
Home Blog Page 611

Doctor Death in Kolkatta ಕೊಲ್ಕೊತ್ತಾದಲ್ಲಿ ವೈದ್ಯೆ ವಿದ್ಯಾರ್ಥಿನಿ ಶವ ಪತ್ತೆ. ಲೈಂಗಿಕ ದೌರ್ಜನ್ಯದ ನಂತರ ಹತ್ಯೆ ವರದಿ ಹೇಳಿಕೆ

0

Doctor Death in Kolkatta ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ಶವವಾಗಿ ಪತ್ತೆಯಾದ ಸ್ನಾತಕೋತ್ತರ ತರಬೇತಿ ವೈದ್ಯೆಯ ಪ್ರಾಥಮಿಕ ಮರಣೋತ್ತರ ಪರೀಕಾ ವರದಿ, ಲೈಂಗಿಕ ದೌರ್ಜನ್ಯದ ನಂತರ ಹತ್ಯೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವರದಿಯು ವೈದ್ಯೆಯ ಸಾವು ಆತ್ಮಹತ್ಯೆ ಎಂಬುವುದನ್ನು ತಳ್ಳಿಹಾಕಿದ್ದು, ಈ ಸಂಬಂಧ ತಾಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಹೇಳಿದ್ದಾರೆ.
“ನಾಲ್ಕು ಪುಟಗಳ ವರದಿಯ ಪ್ರಕಾರ, ಮಹಿಳೆಯ ಖಾಸಗಿ ಭಾಗ, ಮುಖ ಮತ್ತು ಕಣ್ಣುಗಳಲ್ಲಿ ರಕ್ತಸ್ರಾವವಾಗಿದೆ. ಮುಖ, ಉಗುರು, ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿಗಳಿಗೆ ಗಾಯಗಳಾಗಿವೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆಗೆ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಆಸ್ಪತ್ರೆಯ ಕಡೆಯಿಂದಲೂ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.
ಶುಕ್ರವಾರ ಮುಂಜಾನೆ, ಕೋಲ್ಕತ್ತಾ ಮಹಾನಗರದ ಆರ್‌ಜಿ ಕರ್ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಅರೆ ನಗ್ನ ಶವ ಪತ್ತೆಯಾಗಿತ್ತು. ಮೃತ ವೈದ್ಯೆ ಎದೆಯ ಔಷಧ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದು, ಗುರುವಾರ ರಾತ್ರಿ ಕರ್ತವ್ಯದಲ್ಲಿದ್ದರು.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಳಗೆ ನನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಮೃತಳ ತಂದೆ ಆರೋಪಿಸಿದ್ದು, ‘ಸತ್ಯವನ್ನು ಮರೆಮಾಚುವ ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃತಳ ಪೋಷಕರಿಗೆ ದೂರವಾಣಿ ಕರೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರ ಆರೋಗ್ಯ ಕಾರ್ಯದರ್ಶಿ ಎನ್ ಎಸ್ ನಿಗಮ್ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Doctor Death in Kolkatta ಹತ್ಯೆ ಘಟನೆ ಖಂಡಿಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪಿಜಿಟಿ ವೈದ್ಯರು ತುರ್ತು ಚಿಕಿತ್ಸಾ ವಿಭಾಗ ಹೊರತುಪಡಿಸಿ ಎಲ್ಲಾ ವಿಭಾಗಗಳಲ್ಲಿ ಕೆಲಸ ಸ್ಥಗಿತಗೊಳಿಸಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಶೀಘ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಶಾಸಕ ಅಗ್ನಿಮಿತ್ರ ಪೌಲ್ ಸೇರಿದಂತೆ ವಿರೋಧ ಪಕ್ಷ ಬಿಜೆಪಿಯ ಹಲವಾರು ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದು, ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಪ್ರಕರಣದ ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದಾರೆ.
ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಾಯಕ ಸಂತಾನು ಸೇನ್ ಸುದ್ದಿಗಾರರೊಂದಿಗೆ ಮಾತನಾಡಿ, “ನಾವು ಇಡೀ ಘಟನೆಯ ಬಗ್ಗೆ ನ್ಯಾಯಯುತ, ಪಾರದರ್ಶಕ ಮತ್ತು ಸಂಪೂರ್ಣ ತನಿಖೆಯನ್ನು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಓರ್ವ ಆರೋಪಿಯ ಬಂಧನ :

ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನಿಗೆ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಮುಕ್ತ ಪ್ರವೇಶವಿತ್ತು. ಆತನ ಮೇಲೆ ನಮಗೆ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿಯಾಗಿದೆ.

District Court Shivamogga 8 ಮಂದಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

0

District Court Shivamogga ಗಾಂಜಾ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದಾನೆ ಎಂಬ ಕಾರಣಕ್ಕೆ ಇಲ್ಲಿನ ಟಿಪ್ಪುನಗರ ನಿವಾಸಿ ಇರ್ಫಾನ್ ಅಲಿಯಾಸ್ ಟ್ವಿಸ್ಟ್ ಇರ್ಫಾನ್ ನನ್ನು ಕೊಲೆ ಮಾಡಿದ ಎಂಟು ಆರೋಪಿಗಳಿಗೆ ಶಿವಮೊಗ್ಗ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶುಕ್ರವರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನ್ಯಾಯಾಧೀಶೆ ಪಲ್ಲವಿ ಎಂಟು ಆರೋಪಿಗಳಿಗೆ ೧೪ ವರ್ಷ ಜೀವಾವಧಿ ಶಿಕ್ಷೆ ಪ್ರತಿ ಆಪರಾಧಿಗಳಿಗೂ ತಲಾ ಐದು ಸಾವಿರ ದಂಢ ವಿಧಿಸಿದ್ದಾರೆ. ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸರ್ಕಾರಿ ಅಭಿಯೋಜಕಿ ಪುಷ್ಪಾ ವಾದ ಮಂಡಿಸಿದ್ದರು.

ಪ್ರಕರಣದ ವಿವರ
೨ಂ೨೧ ರ ಸೆ. ೧೮ರಂದು ಇರ್ಫಾನ್ ತನ್ನ ಸ್ನೇಹಿತ ಅಸಾದ್ ಮತ್ತು ವಾಷರ್ ಜೊತೆ ಸಂಜೆ ಬೈಕ್‌ನಲ್ಲಿ ಬರುವಾಗ ಟಿಪ್ಪು ನಗರ ಏಳನೇ ಮುಖ್ಯ ರಸ್ತೆಯ ನಾಲ್ಕನೇ ಕ್ರಾಸ್ ನಲ್ಲಿ ಇರ್ಫಾನ್‌ಗೆ ಲತೀಫ್ ಮತ್ತವನ ಸಹಚರರ ತಂಡ ಎದುರಾಗಿ ಗಾಂಜಾ ವಿಚಾರದಲ್ಲಿ ಕ್ಯಾತೆ ತೆಗೆದಿತ್ತು. ಲತೀಫ್, ಪರ್ವೇಜ್, ಸೈಯ್ಯದ್ ಜಿಲಾನ್, ಜಾಫರ್ ಸಾದಿಕ್, ಸೈಯ್ಯದ್ ರಾಜೀಕ್, ಮೊಹಮ್ಮದ್ ಶಹಬಾಜ್, ಸಾಬಿರ್ ಮತ್ತು ಮೊಹಮ್ಮದ್ ಯೂಸೂಫ್ ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ಇರ್ಫಾನ್‌ನ ಎದೆಗೆ ಚುಚ್ಚಿ ಕೊಲೆ ಅಲ್ಲಿಯೇ ಮಾಡಿತ್ತು.
ರಕ್ತದ ಮಡುವಿನಲ್ಲಿದ್ದ ಇರ್ಫಾನ್‌ನನ್ನು ಸ್ನೇಹಿತ ಅಸಾದ್ ಮತ್ತು ವಾಷರ್ ಅಂಬುಲೆನ್ಸ್‌ನಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಆಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.

ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಅಂದಿನ ತನಿಖಾಧಿಕಾರಿ, ಇನ್‌ಸ್ಪೆಕ್ಟರ್ ದೀಪಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಗಳಿಗೆ ಯಾವ ಹಂತದಲ್ಲೂ ಜಾಮೀನು ಸಿಗದಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

District Court Shivamogga ಆರೋಪಿಗಳಿಗೆ ಜಾಮೀನು ನೀಡಿದರೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ. ಪ್ರತ್ಯಕ್ಷ ಮತ್ತು ಪರೋಕ್ಷ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಹಾಗು ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳು ಹೆಚ್ಚಿದೆ. ಜಾಮೀನು ನೀಡಿದರೆ ಮೃತನ ಕುಟುಂಬದ ಕಡೆಯವರು ಹಾಗು ಇವರ ನಡುವೆ ಗಲಾಟೆಗಳಾಗಿ ಆಸ್ತಿ ಜೀವ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ. ಲತೀಫ್,ಪರ್ವೆಜ್ ಹಾಗೂ ಸೈಯದ್ ರಾಜೀಕ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕಲಂ ೫೦೪, ೩೦೭, ೩೪ ಐಪಿಸಿ ಆರೋಪಿತರಾಗಿದ್ದು ಜಾಮೀನಿನ ಮೇಲಿದ್ದರೂ, ನ್ಯಾಯಾಲಯಕ್ಕೆ ಹಾಜರಾಗದೆ ಗೈರಾಗಿರುತ್ತಾರೆ. ರಾಜೀಕ್ ಮತ್ತು ಮೊಹಮ್ಮದ್ ಯೂಸುಫ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಕೊಲೆಯತ್ನದಂತ ಕೇಸುಗಳಿವೆ ಎಂದು ಇನ್‌ಸ್ಪೆಕ್ಟರ್ ದೀಪಕ್ ಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿದ್ದರು.

ಈ ಕಾರಣಕ್ಕೆ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು.
ಶುಕ್ರವಾರ ನ್ಯಾಯಾಲಯ ತೀರ್ಪು ನೀಡಿ ಎಲ್ಲಾ ಆರೋಪಿಗಳಿಗೆಜೀವಾವಧಿ ಶಿಕ್ಷೆ ವಿಧಿಸಿದೆ.

Nagar Panchami ಹುತ್ತದಿಂಬ ಗ್ರಾಮದಲ್ಲಿ ಹಾವು ಕಡಿತಕ್ಕೆ ಬಾಣಂತಿ ಬಲಿ

0

Nagar Panchami ನಾಗರ ಪಂಚಮಿ ದಿನ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಸಾಗರ ತಾಲ್ಲೂಕುನಲ್ಲಿ ವರದಿಯಾಗಿದೆ
ನಾಗರ ಪಂಚಮಿ
ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

Nagar Panchami ರಂಜಿತಾ ಎಂಬ 22 ವರ್ಷದ ಮಹಿಳೆ ಮೃತ ನಿವಾಸಿ
ಜಾನುವಾರುಗೆ ಮೇವು ತರಲು ಎಂದು ಹೊಲಕ್ಕೆ ಹೋಗಿದ್ದ ಇವರಿಗೆ ಅಲ್ಲಿಯೇ ಪೊದೆಯಲ್ಲಿದ್ದ ಹಾವೊಂದು ಕಚ್ಚಿದೆ. ಮೊದಲು ಮಹಿಳೆಗೆ ಹಾವು ಕಚ್ಚಿರುವ ಬಗ್ಗೆ ಗೊತ್ತಾಗಲಿಲ್ಲ. ಆ ಬಳಿಕ ನಂಜು ಏರಿ ಹೊಲದಲ್ಲಿಯೇ ರಂಜಿತಾ ಕುಸಿದು ಬಿದ್ದಿದ್ದಾಳೆ.
ಕೆಲಹೊತ್ತು ಬಿಟ್ಟು ಮನೆಯವರು ಗದ್ದೆಗೆ ಬಂದು ನೋಡಿದಾಗ ರಂಜಿತಾ ಕುಸಿದು ಬಿದ್ದಿರುವುದು ಗೊತ್ತಾಗಿದೆ. ತಕ್ಷಣವೇ ಅವರನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾಗರ ಉಪವಿಭಾಗೀಯ ಆಸ್ಪತ್ರೆ
ಅಲ್ಲಿನ ವೈದ್ಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ಆಕೆಯನ್ನು ಕರೆತರುವ ಸಂದರ್ಭದಲ್ಲಿ ಮಾರ್ಗಮಧ್ಯೆ ರಂಜಿತಾ ಸಾವನ್ನಪ್ಪಿದ್ದಾರೆ.
ಮೂರು ವರುಷದ ಮಗುವನ್ನ ಹೊಂದಿರುವ ರಂಜಿತಾರಿಗೆ ಎರಡನೇ ಹೆರಿಗೆಯಾಗಿ ನಾಲ್ಕು ತಿಂಗಳಷ್ಟೆ ಕಳೆದಿತ್ತು.

ಇದೀಗ ಇಬ್ಬರು ಮಕ್ಕಳು ತಾಯಿಯನ್ನ ಕಳೆದುಕೊಂಡಿದ್ದಾರೆ

Competitive Exam ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ಕ್ರಮ ತಿಳಿಸಿದ ಸೌಭಾಗ್ಯ ಬೀಳಗಿಮಠ

0

Competitive Exam ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಧ್ಯಯನ ಮಾಡುವ ಅಭ್ಯರ್ಥಿಗಳು ಸಮಯ ಪಾಲನೆ, ವಿಷಯಗಳ ಗ್ರಹಿಕೆ ಹಾಗೂ ಓದಿದ್ದರ ಪುನರ್ಮನ ನಿತ್ಯವೂ ಕ್ರಮ ತಪ್ಪದೇ ಮಾಡುವುದು ಅವಶ್ಯ ಎಂದು 2023-24ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ ಐಎಎಸ್ ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದು ಉತ್ತೀರ್ಣರಾಗಿರುವ ದಾವಣಗೆರೆ ನಗರದವರೇ ಆದ ಸೌಭಾಗ್ಯ ಬೀಳಗಿ ಮಠ ಹೇಳಿದರು.

ದಾವಣಗೆರೆ ನಗರ ಕೇಂದ್ರ ಗ್ರಂಥಾಲಯದ ಸಿಲ್ವರ್ ಜುಬಿಲಿ ರೇಡಿಂಗ್ ರೂಮ್ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಾಡು ಆಗಿದ್ದ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ದೇಶ ವಿದೇಶಗಳಲ್ಲಿನ ವಿದ್ಯಮಾನಗಳು ಅದರಿಂದ ನಮ್ಮ ದೇಶದ ಸಾಮಾಜಿಕ ಆರ್ಥಿಕ ಔದ್ಯಮಿಕ ಆಡಳಿತಾತ್ಮಕ ನೈಸರ್ಗಿಕ ಮುಂತಾದ ಪರಿಸ್ಥಿತಿಯ ಮೇಲಾಗುವ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡುತ್ತಿರಬೇಕು, ಇದಕ್ಕಾಗಿ ಹೆಚ್ಚೆಚ್ಚು ಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೈಗೊಳ್ಳುವವರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಹಾಗೆಯೇ ವಿಷಯ ಪ್ರಸ್ತುತಿಯಲ್ಲಾಗಲಿ ಉತ್ತರ ನೀಡುವಲ್ಲಿ ಸತ್ಯವನ್ನೇ ಹೇಳಬೇಕು ಎಂದರಲ್ಲದೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ್ ರವರು ಮಾತನಾಡಿ ನಮ್ಮ ನಾಡಿನ ನೆಲ ಜಲ ಹಾಗೂ ಆಡಳಿತಾತ್ಮಕ ವಿಚಾರವಾಗಿ ನಮಗೆ ನಮ್ಮ ನಾಡಿಗೆ ನ್ಯಾಯ ದೊರಕಬೇಕೆಂದರೆ ಉನ್ನತ ಅಧಿಕಾರಿಗಳು ಮೂಲತಃ ಅಪ್ಪಟ ಕನ್ನಡಿಗರೇ ಆಗಿರಬೇಕು, ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಐಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಕೈಕೊಂಡು ಉನ್ನತ ಹುದ್ದೆಗಳನ್ನು ಪಡೆಯಬೇಕಿದೆ ಎಂದರಲ್ಲದೆ ಓದುವ ಹವ್ಯಾಸ, ಓದಿದ್ದನ್ನು ನೆನಪಿಟ್ಟುಕೊಳ್ಳುವ ಅಭ್ಯಾಸ ರೂಢಿಸಿಕೊಂಡಲ್ಲಿ ಐಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳು ಕಷ್ಟಕರವಲ್ಲ ಎಂದರಲ್ಲದೆ ದಾವಣಗೆರೆ ಗ್ರಂಥಾಲಯ ವ್ಯವಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಮಾಡುವಲ್ಲಿ ತಾವು ಪಟ್ಟ ಪರಿಶ್ರಮವನ್ನು ವಿವರಿಸಿದರು.

Competitive Exam ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರಾದ ಪಿ ಆರ್ ತಿಪ್ಪೇಸ್ವಾಮಿಯವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷಾ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವ ಎಲ್ಲ ಬೇಡಿಕೆಗಳನ್ನು ಸ್ವೀಕರಿಸಿ ಅದಕ್ಕೆ ಸ್ಪಂದಿಸಲು ಪ್ರಯತ್ನಿಸುವುದಾಗಿ ಹೇಳಿದರಲ್ಲದೇ ಇದಕ್ಕೆ ಪೂರಕವಾದ ಪುಸ್ತಕ ಹಾಗೂ ಗ್ರಂಥಗಳ ಬಗೆಗೆ ವಿದ್ಯಾರ್ಥಿಗಳಿಂದ ಹಾಗೂ ಸೌಭಾಗ್ಯ ಬೀಳಗಿ ಮಠ ರವರಿಂದ ಸೂಚಿತವಾಗುವ ಪುಸ್ತಕ ಹಾಗೂ ಗ್ರಂಥಗಳ ಪೂರೈಕೆ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು.

ಸೌಭಾಗ್ಯ ಬೀಳಗಿ ಮಠ ರವರ ತಂದೆಯವರು ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರು ಆದ ಶರಣಯ್ಯ ಬೀಳಗಿ ಮಠರವರು, ಸಿಬ್ಬಂದಿಗಳಾದ ಮಹಾಸ್ವಾಮೀ ಬಿ ಇ, ಗೋಪಾಲ್ ಕೆ, ಸಂಗಣ್ಣ ಬೆಳಗಲ್ಲ, ಮಂಜುನಾಥ ಎಸ್ ಬಗರಿ, ಪರಶುರಾಮಪ್ಪ ಎಮ್ ಆರ್ ಮುಂತಾದವರು ಉಪಸ್ಥಿತರಿದ್ದರು. ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ವಿದ್ಯಾರ್ಥಿಗಳು ತತ್ಸಂಬಂಧಿ ಪ್ರಶ್ನೆಗಳನ್ನು ಕೇಳಿ ಸೌಭಾಗ್ಯ ಬೀಳಗಿ ಮಠ ರವರಿಂದ ಉತ್ತರಗಳನ್ನು ಪಡೆದರು.

M.B.Patil ಸಿದ್ಧರಾಮಯ್ಯವರ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ- ಸಚಿವ ಎಂ.ಬಿ.ಪಾಟೀಲ್

0

M.B.Patil ಮುಡಾ ಹಗರಣ ಖಂಡಿಸಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾಃ ಕಾರಣ ಹೋರಾಟ ಮಾಡ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ.ಪಾಟೀಲ್ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಬಿಜೆಪಿಯವರಿಗೆ ಇದು ಸಹಿಸಲು ಆಗ್ತಿಲ್ಲ ಎಂದು ದೂರಿದರು.
ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು. ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಆ ಪ್ರಕರಣ ಏನಾಯ್ತು ಎಂದು ಪ್ರಶ್ನಿಸಿದರು.

ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಅಂತಾ ಯತ್ನಾಳ್ ಆರೋಪ ಮಾಡ್ತಾರೆ. ವಿಜಯೇಂದ್ರ‌ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡ್ತಾರೆ. ಯತ್ನಾಳ್ ಆರೋಪಕ್ಕೆ ಮೊದಲು ಉತ್ತರ ಕೊಡಲಿ ಎಂದು ಆಗ್ರಹಿಸಿದರು.

M.B.Patil ನಾವು ಸಹ ಹೋರಾಟ ಮಾಡ್ತೇವೆ, ನ್ಯಾಯಾಂಗ ಹೋರಾಟ ಮಾಡ್ತೇವೆ. ಬಿಜೆಪಿಯವರ ವಿರುದ್ದ ಜನರ ಬಳಿ ಹೋಗ್ತೇವೆ. ಅವರ ಕಾಲದಲ್ಲಿ 25 – 30 ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದರು.
ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ವಿಚಾರ:
ಭದ್ರಾವತಿಯ ವಿಎಸ್ ಐಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲ್ಲವೂ ಸರಿ ಹೋಗುವ ನಿರೀಕ್ಷೆ ಇದೆ ಎಂದು ಆಗ್ರಹಿಸಿದರು.

Rotary Club Shivamogga ತಾಯಿಯ ಎದೆಹಾಲಿನಲ್ಲಿದೆ ಮಗುವಿಗೆ ಬೇಕಾದ ಎಲ್ಲ ಪೋಷಕಾಂಶ- ಗೀತಾ ಜಗದೀಶ್

0

Rotary Club Shivamogga ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ ಇದರಲ್ಲಿ ಎಲ್ಲಾ ತರದ ವಿಟಮಿನ್ ಗಳೊಂದಿಗೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಎಲ್ಲಾ ಶಕ್ತಿ ಸಿಗುತ್ತದೆ ಎಂದು ಆನ್ಸ್ ಕ್ಲಬ್ ನ ಅಧ್ಯಕ್ಷರಾದ ಗೀತಾ ಜಗದೀಶ್ ಹೇಳಿದರು.

ರಾಗಿಗುಡ್ಡದ ಸರ್ಕಾರಿ ಶಾಲೆಯಲ್ಲಿ ವಿಶ್ವ ಸ್ತನ್ಯಪಾನ ದಿನವನ್ನು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಆನ್ಸ್ ಕ್ಲಬ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಬಂದAತಹ ಮಹಿಳೆಯರಿಗೆ ಪರ್ಸ್ ಗಳನ್ನು ನೀಡಿ ಮಾತನಾಡಿಡ ಅವರು, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸರ್ಜಿ ಆಸ್ಪತ್ರೆಯಲ್ಲಿ ಸ್ಥಾಪಿತವಾಗಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್ ನಿಂದ ತಾಯಂದಿರ ಎದೆಯ ಹಾಲು ಸರ್ಜಿ ಆಸ್ಪತ್ರೆ ಹಾಗೂ ಮೆಗನ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಉಪಯೋಗವಾಗುತ್ತಿದೆ ಎಂದು ತಿಳಿಸಿದರು.

Rotary Club Shivamogga ಜೆ ಸಿ ಇಂಟರ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಪುಷ್ಪ ಶೆಟ್ಟಿ ಕಾರ್ಯಕ್ರಮದಲ್ಲಿ ಬಂದAತಹ ಮಹಿಳೆಯರನ್ನು ಉದ್ದೇಶಿಸಿ ಒಂದು ಹೆಣ್ಣು ಋತುಮತಿಯಾದಗಿನಿಂದ ಹಂತ ಹಂತವಾಗಿ ಅವಳ ದೇಹದಲ್ಲಿ ಆಗುವ ಬದಲಾವಣೆ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಸಿಸ್ಟರ್ ನಂದಿನಿ ಮಗುವಿಗೆ ಹಾಕುವ ಲಸಿಕೆಗಳ ವಿವರಗಳನ್ನು ನೀಡಿದರು.

ರೊಟರಿಯನ್ ದೀಪಾ ಶೆಟ್ಟಿ, ರೊಟರಿಯನ್ ರಾಜಶ್ರೀ, ರೋಟೇರಿಯನ್ ಜ್ಯೋತಿ ಶ್ರೀರಾಮ್ ಹಾಗೂ ಎಫ್‌ಪಿಎಐ ನ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

CM Shivakumar ಈ ಬಂಡೆ ಸಿದ್ಧರಾಮಯ್ಯನವರ ಜೊತೆಗೆ ಸದಾ ಇದೆ- ಡಿಸಿಎಂ ಶಿವಕುಮಾರ್

0

CM Shivakumar “ಮಾಧ್ಯಮದವರು ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಾರೆ. ಈ ಬಂಡೆ ಸಿದ್ದರಾಮಯ್ಯನವರ ಜೊತೆ ಸದಾ ಇದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ.

ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ಗುಡುಗಿದರು.

CM Shivakumar “ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.
“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ.

ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

Canara Bank Rural Self Employment Training Institute ಹೊಳಲೂರು ಕೆನರಾ ಬ್ಯಾಂಕ್ ಮೂಲಕ ವಿವಿಧ ಕ್ಷೇತ್ರಗಳ ಸ್ವಉದ್ಯೋಗ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

0

Canara Bank Rural Self Employment Training Institute, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಾ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ೧೮ ರಿಂದ ೪೫ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ 10 ದಿನಗಳ ತರಬೇತಿಯು
12/08/2024 ರಿಂದ

Canara Bank Rural Self Employment Training Institute, ಹತ್ತು ದಿನಗಳ ಪೇಪರ್ ಬ್ಯಾಗ್, ಫೈಲ್, ಏನ್ವ್ಲಪ್ ಲವರ್ ತಯಾರಿಕೆ ತರಬೇತಿಯು
02/09/2024ರಿಂದ ,
ಮೊಬೈಲ್ ಫೋನ್ ಸರ್ವಿಸಿಂಗ್ 30ದಿನಗಳ ತರಬೇತಿಯು 02/09/2024ರಿಂದ , ದಿನಗಳ ಅಣಬೆ ಬೇಸಾಯ ತರಬೇತಿಯು 18/ 09/2024ರಿಂದ ,
ಹತ್ತು ದಿನಗಳ ಜೇನು ಸಾಕಾಣಿಕೆ ತರಬೇತಿಯು
18/09/2024ರಿಂದ ,
ಹತ್ತು ದಿನಗಳ ಕುರಿ ಸಾಕಾಣಿಕೆ
ತರಬೇತಿಯು
23/09/2024ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. ೯೭೪೩೪೨೯೫೯೫, ೮೭೨೨೩೮೪೫೪೧, ೯೧೬೪೪೧೧೫೮೦, ೮೧೦೫೩೭೮೭೩೫ ೯೪೪೯೩೭೧೫೭೯, ೯೪೮೧೯೫೫೭೨೧,
ಸಂಪರ್ಕಿಸಿ.

Shiralkoppa Police ಶಿರಾಳಕೊಪ್ಪದಲ್ಲಿ ಗೋಮಾಂಸ ಮಾರಾಟ ಪತ್ತೆ. ಪ್ರಕರಣ ದಾಖಲೆ

0

Shiralkoppa Police ಶಿರಾಳಕೊಪ್ಪದ ಹಳ್ಳೂರ್ ಕೆರಿಯಲ್ಲಿ ಗೋ ಹತ್ಯೆ ಮಾಡಿ ಗೋಮಾಂಸ ಮಾರಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರಶಾಂತ್ ಕುಮಾರ್ ರವರು ಪೊಲೀಸ್ ಸಿಬ್ಬಂದಿಗಳೊಂದಿಗೆ ಗೋಮಾಂಸದ ಕಸಾಯಿ ಖಾನೆ ಮೇಲೆ ಪ್ರಕರಣ ಸಂಖ್ಯೆ 167/2024 ಪ್ರಕರಣ
ದಾಕಲಿಸಿಕೊಂಡು ದಾಳಿ ನಡೆಸಿ 150 ಕೆಜಿ ಗೋಮಾಂಸ ಪಶುವೈದ್ಯರ ಸಮಕ್ಷಮ ವಶಪಡಿಸಿಕೊಂಡು. ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ಜೈಲಿಗಟ್ಟಲಾಗಿದೆ.

ಆರೋಪಿಗಳ ಮೇಲೆ ಮುಂಚೆಯೂ ಸಹ ಗೋ ಹತ್ಯೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Shiralkoppa Police ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಗೋ ಹತ್ಯೆ ನಿಲ್ಲಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹಿಂಜಾವೇ ಸಂಘಟನೆ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತಪಡಿಸಲಾಯಿತು. ಗೋ ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ 2020 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮದಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಉಪ ವಿಭಾಗಾಧಿಕಾರಿಗಳು ಸಹ ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳದೆ ಇರುವುದೇ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋ ಹತ್ಯೆ ಆಗುತ್ತಿರುವುದಕ್ಕೆ ಮೂಲ ಕಾರಣವಾಗಿದೆ. ಜಿಲ್ಲೆಯಲ್ಲಿ ಗೋ ಹತ್ಯೆ ನಿಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವುದಾಗಿ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Actress Kangana Ranaut ಸಂಸದರ ವಾಗ್ಯುದ್ಧ.ಕಂಗನಾ ವಿರುದ್ಧ ರಾಹುಲ್ ಗಾಂಧಿಯವರು ಲಾಯರ್ ಮೂಲಕ ಮಾನನಷ್ಟ ಮೊಕದ್ದಮೆ ಹೂಡಿಕೆ

0

Actress Kangana Ranaut ನಟಿ ಕಂಗನಾ ರಣಾವತ್ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಸಂಸತ್ನಲ್ಲಿ ರಾಹುಲ್ ಗಾಂಧಿಗೂ ಮಾತಾಡಿದ ಮಾತನ್ನು ವಿರೋಧಿಸಲು ನಟಿ ಸೋಶಿಯಲ್ ಮೀಡಿಯಾದಲ್ಲಿ ಒಂದು ಫೋಟೋವನ್ನು ಶೇರ್ ಮಾಡಿದ್ದಾರೆ.

ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.
ಆ ಫೋಟೋದಲ್ಲಿ ರಾಹುಲ್ ಗಾಂಧಿ ತಲೆಗೆ ಮುಸ್ಲಿಂ ಟೋಪಿ ಹಾಕಿದ್ದು, ಕತ್ತಿಗೆ ಕ್ರಿಸ್ಚಿಯನ್ ಕ್ರಾಸ್ ಹಾಗೂ ಹಣೆಗೆ ಹಿಂದೂಗಳ ತಿಲಕ ಇಟ್ಟು ಎಡಿಟ್ ಮಾಡಿದ ಫೋಟೋ ಇದಾಗಿದೆ. ಈ ಫೋಟೋ ವೈರಲ್ ಆಗಿದ್ದು, ಇದ್ರಿಂದ ರಾಹುಲ್ ಗಾಂಧಿ ಅವರಿಗೆ ಅಪಮಾನವಾಗಿದೆ ಎಂದು ಅನೇಕರು ಕಂಗನಾ ವಿರುದ್ಧ ಕಿಡಿಕಾರಿದ್ದಾರೆ.

ಕಂಗನಾ ರಣಾವತ್ ವಿರುದ್ಧ ಸುಪ್ರೀಂ ಕೋರ್ಟ್ ಲಾಯರ್ ನರೇಂದ್ರ ಮಿಶ್ರಾ ಅವರು ಮಾನನಷ್ಟ ಕೇಸ್ ಹಾಕಿದ್ದಾರೆ. ಯಾವುದೇ ವ್ಯಕ್ತಿಯ ಪೋಟೋವನ್ನು ತಿರುಚಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವುದು ಮಾಹಿತಿ-ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅಪರಾಧ ಆಗುತ್ತದೆ. ರಾಹುಲ್ ಅವರಿಗೆ ಅವಮಾಸಿದಂತೆ ಆಗಿದೆ ಎಂದು ನರೇಂದ್ರ ಮಿಶ್ರಾ ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆಕ್ರೋಶದ ಭಾಷಣದ ಮೂಲಕ ಎಲ್ಲರ ಗಮನಸೆಳೆದಿದ್ರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ರು. ರಾಹುಲ್ ಗಾಂಧಿ ಭಾಷಣದ ಬಗ್ಗೆ ಮಾತಾಡಿದ ನಟಿ ಕಂಗನಾ ರಣಾವತ್, ‘ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ ವಿಚಾರಗಳನ್ನೇ ಮಾತಾನಾಡುತ್ತಿದ್ದು, ಯಾವಾಗಲೂ ಕುಡಿತ ಮತ್ತಿನಲ್ಲೇ ಇರ್ತಾರೆ ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯಾವಾಗಲೂ ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ಡ್ರಗ್ಸ್ ತಪಾಸಣೆಗೆ ಒಳಪಡಿಸಬೇಕು ಎಂದು ಕಂಗನಾ ರಣಾವತ್ ಹೇಳಿದ್ರು. ನಮ್ಮ ದೇಶದ ಪ್ರಧಾನಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಆದ್ರೆ, ರಾಹುಲ್ ಗಾಂಧಿ ಪ್ರಜಾಪ್ರಭುತ್ವವನ್ನು ಗೌರವಿಸೋದಿಲ್ವಾ ಎಂದು ಕಂಗನಾ ಪ್ರಶ್ನಿಸಿದ್
ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಾ? ಜಾತಿ ವಿಚಾರಗಳನ್ನು ಮಾತಾಡುವ ಮೂಲಕ ರಾಹುಲ್ ಗಾಂಧಿ ಸಂವಿಧಾನವನ್ನು ಅವಮಾನಿಸ್ತಿದ್ದಾರೆ.

Actress Kangana Ranaut ಮುಂದೊಂದು ದಿನ ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಪ್ರಧಾನಿ ಆಯ್ಕೆ ಮಾಡಿದ್ದಾರೆ ಅಂತನೂ ರಾಹುಲ್ ಗಾಂಧಿ ಅವರು ಹೇಳಬಹುದು ಎಂದು ಕಂಗನಾ ಕಿಡಿಕಾರಿದ್ರು.
ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ.

ಇವರ ಮಾತುಗಳಿಗೆ ಅರ್ಥವಿಲ್ಲ ಎಂದು ಕಂಗನಾ ಹೇಳಿದ್ರು.
ನಾನು ನೂತನ ಸಂಸದೆ ಆಗಿದ್ದೇನೆ. ಆದ್ರೆ ರಾಹುಲ್ ಗಾಂಧಿ ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ಅವರು ನೀಡುವ ಹೇಳಿಕೆಗಳನ್ನು ನೋಡಿ ನನಗೆ ಶಾಕ್ ಆಗಿದೆ ಎಂದು ಕಂಗನಾ ಹೇಳಿದ್ದಾರೆ.

ಕಂಗನಾ ರಣಾವತ್ ಯಾವಾಗಲೂ ತಮ್ಮ ತೀಕ್ಷ್ಣವಾದ ಹೇಳಿಕೆಗಳಿಂದ ಸುದ್ದಿ ಆಗ್ತಾರೆ. ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ನಂತರ, ಕಂಗನಾ ನಿರಂತರವಾಗಿ ರಾಜಕೀಯ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.