Tuesday, April 7, 2026
Tuesday, April 7, 2026
Home Blog Page 618

CM Siddharamaih ಸಿದ್ಧರಾಮಯ್ಯನವರ ಆಡಳಿತಕ್ಕೆ ಹೆದರಿ ಬಿಜೆಪಿ ಕುತಂತ್ರ ಮಾಡುತ್ತಿದೆ- ಶಾಸಕಿ ಬಲ್ಕೀಷ್ ಬಾನು

0

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪ್ರಿಯತೆಗೆ ಹೆದರಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಅವರನ್ನು ಇಳಿಸಲು ಷಡ್ಯಂತ್ರ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಲ್ಕಿಶ್ ಬಾನು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕರ್ನಾಟಕ ಶೋಷಿತ ವರ್ಗಗಳ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿದೆ. ಈಗಾಗಲೇ ವಾಲ್ಮೀಕಿ ನಿಗಮದ ಹಗರಣ ತನಿಖೆಯ ಹಂತದಲ್ಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ . ಆದರೆ ಸಿದ್ದರಾಮಯ್ಯನವರ ಆಡಳಿತಕ್ಕೆ ಹೆದರಿ, ಬಿಜೆಪಿಯವರು ಕುತಂತ್ರ ಮಾಡುತ್ತಿದ್ದಾರೆ.

ಮೊದಲು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ಅಕ್ರಮ ಆಸ್ತಿಗಳ ಬಗ್ಗೆ ತನಿಖೆಯಾಗಲಿ ಎಂದರು. ರೈಸ್ ಮಿಲ್ ಗುಮಾಸ್ತನಾದ ಯಡಿಯೂರಪ್ಪನವರ ಆಸ್ತಿ ಈಗ ಕೋಟ್ಯಾಂತರ ಆಗಿದೆ. ಅದು ದಲಿತರ ಹಿಂದುಳಿದವರ ಮತ್ತು ರಾಜ್ಯದ ದುರ್ಬಲ ವರ್ಗದವರ ಹಣ ಎಂದರು.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು ಮುಖ್ಯಮಂತ್ರಿಯನ್ನು ಇಳಿಸಲು ಹೊರಟರೆ ಪರಿಣಾಮ ನೆಟ್ಟಗಿರಲ್ಲ ಎಂದು ಸವಾಲು ಹಾಕಿದರು.

ಕಲಗೋಡು ರತ್ನಾಕರ್ ಮಾತನಾಡಿ, ಸಿದ್ದರಾಮಯ್ಯನವರನ್ನು ಮುಟ್ಟಲು ಹೋದರೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

CM Siddharamaih ಸೂಡಾ ಅಧ್ಯಕ್ಷ ಎಚ್‌ಎಸ್ ಸುಂದರೇಶ್ ಮಾತನಾಡಿ, ಶಿವಮೊಗ್ಗದಲ್ಲೇ ಬಿಜೆಪಿಯ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆದ ಬಿಜೆಪಿಗೆ ಕಾಂಗ್ರೆಸ್ ನಾಯಕರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುವ ಯಾವ ನೈತಿಕತೆಯೂ ಇಲ್ಲ. ಐಟಿ ಮತ್ತು ಇಡಿ ದಾಳಿ ನಡೆಸಿ ಕಾಂಗ್ರೆಸ್ ನಾಯಕರನ್ನು ಬಗ್ಗು ಬಡೆಯಲು ಯತ್ನಿಸಲಾಗುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧವು ಕೂಡ ದೇಶಾದ್ಯಂತ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದರು.

Khushi Well Fair Team ಮರದ ಕೊಂಬೆಗಳಿಂದ ಶಾಲಾಕೊಠಡಿಗೆ ಆಗಿದ್ದ ಅನಾನುಕೂಲ ತಪ್ಪಿಸಿದ “ಖುಷಿ” ತಂಡ

0

Khushi Well Fair Team ದಾವಣಗೆರೆಯ ಎಸ್ಓಜಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆಯ ವಿನಂತಿಯನ್ನು ಪರಿಗಣಿಸಿ ಖುಷಿ ವೆಲ್ ಫೇರ್ ತಂಡದಿಂದ ತರಗತಿಯ ಕೊಠಡಿಯೊಳಗೆ ಸಾಕಷ್ಟು ಬೆಳಕು ಬಾರದ ಕಾರಣ ಶಾಲೆಯ ಆವರಣ ಹಾಗೂ ಸುತ್ತಮುತ್ತ ಇರುವ ಹೆಚ್ಚುವರಿ ಗಿಡಗಳ ರೆಂಬೆಗಳನ್ನು ಕತ್ತರಿಸಲಾಯಿತು.

Khushi Well Fair Team ಸುಮಾರು ಮೂರು ದಿನಗಳ ಕಾಲ ಯಾವುದೇ ಹಣವನ್ನು ಸ್ವೀಕರಿಸದೆ ಈ ಕಾರ್ಯವನ್ನು ಪೂರ್ಣಗೊಳಿಸಿಕೊಡಲಾಗಿದೆ. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಖುಷಿ ವೆಲ್ ಫೇರ್ ನ ಈ ಕಾರ್ಯಕ್ಕೆ ಖುಷಿ ವೆಲ್ ಫೇರ್ ನ ಸ್ವಯಂ ಸೇವಕರಾದ ರಘುವೀರ್ ಹಾಗೂ ಖುಷಿ ವೆಲ್ ಫೇರ್ ತಂಡದ ನಿರ್ವಾಹಕರಾದ ಪ್ರಜ್ವಲ್.ಕೆ.ಎನ್ ರವರಿಗೆ ಹೃದಯಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Bangladesh Prime Minister Sheikh Hasina ಬಾಂಗ್ಲಾದೇಶದಲ್ಲಿ ಕ್ಷಿಪ್ರ ಕ್ರಾಂತಿ. ಪ್ರಧಾನಿ ಹಸೀನಾ ರಾಜಿನಾಮೆ.ದೇಶ ತೊರೆದು ಭಾರತದಲ್ಲಿ ತಾತ್ಕಾಲಿಕ ಆಶ್ರಯ

0

Bangladesh Prime Minister Sheikh Hasina ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾ ಅರಮನೆಯಿಂದ “ಸುರಕ್ಷಿತ ಸ್ಥಳ” ಕ್ಕೆ ತೆರಳಿದ್ದಾರೆ ಎಂದು ಅವರ ನಿಕಟ ಮೂಲಗಳು ತಿಳಿಸಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಕ್ರಮವು ಉಲ್ಬಣಗೊಳ್ಳುತ್ತಿರುವ ಅಶಾಂತಿ ಮತ್ತು ಅವರ ಆಡಳಿತದ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಈ ಬೆಳವಣಿಗೆ ನಡೆದಿದೆ.

“ಮುಜುಗರಕ್ಕೊಳಗಾದ ನಾಯಕರು ರಾಜೀನಾಮೆ ಸಾಧ್ಯತೆ ಇದೆ” ಎಂದು ಶೇಖ್ ಹಸೀನಾ ಅವರ ಹಿರಿಯ ಸಲಹೆಗಾರರು ತಿಳಿಸಿದ್ದಾರೆ.

“ಪರಿಸ್ಥಿತಿ ಹೀಗಿದೆ, ಇದು ಒಂದು ಸಾಧ್ಯತೆಯಾಗಿದೆ. ಆದರೆ ಅದು ಹೇಗೆ ಸಂಭವಿಸುತ್ತದೆ ಎಂದು ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.
ಲಕ್ಷಾಂತರ ಪ್ರತಿಭಟನಾಕಾರರು ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸುತ್ತಿದ್ದಂತೆ, ಅವರ ಪುತ್ರ ಸಜೀಬ್ ವಾಝೆದ್ ಜಾಯ್ ಅವರು ತಮ್ಮ ಆಡಳಿತದಿಂದ ಯಾವುದೇ ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯಲು ದೇಶದ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

“ನಿಮ್ಮ ಕರ್ತವ್ಯ ನಮ್ಮ ಜನರನ್ನು ಸುರಕ್ಷಿತವಾಗಿರಿಸುವುದು ಮತ್ತು ನಮ್ಮ ದೇಶವನ್ನು ಸುರಕ್ಷಿತವಾಗಿರಿಸುವುದು, ಸಂವಿಧಾನವನ್ನು ಎತ್ತಿಹಿಡಿಯುವುದು” ಎಂದು ಯುಎಸ್ ಮೂಲದ ಜಾಯ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಯಾವುದೇ ಚುನಾಯಿತರಾಗದ ಸರ್ಕಾರವನ್ನು ಒಂದು ನಿಮಿಷವೂ ಅಧಿಕಾರಕ್ಕೆ ಬರಲು ಬಿಡಬೇಡಿ, ಅದು ನಿಮ್ಮ ಕರ್ತವ್ಯ ಎಂದು ಅವರು ಒತ್ತಿ ಹೇಳಿದರು.

Bangladesh Prime Minister Sheikh Hasina ತನ್ನ ತಾಯಿಯ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಲಹೆಗಾರರಾಗಿಯೂ ಸೇವೆ ಸಲ್ಲಿಸುತ್ತಿರುವ ಜಾಯ್ ಅವರು ಅಧಿಕಾರದಿಂದ ಬಲವಂತವಾಗಿ ಹೊರಹಾಕಿದರೆ ಬಾಂಗ್ಲಾದೇಶದ ಪ್ರಗತಿಗೆ ಧಕ್ಕೆಯಾಗಬಹುದು ಎಂದು ಎಚ್ಚರಿಸಿದ್ದಾರೆ. “ನಮ್ಮ ಅಭಿವೃದ್ಧಿ ಮತ್ತು ಪ್ರಗತಿ ಎಲ್ಲವೂ ಕಣ್ಮರೆಯಾಗುತ್ತದೆ. ಬಾಂಗ್ಲಾದೇಶವು ಅಲ್ಲಿಂದ ಹಿಂತಿರುಗಲು ಸಾಧ್ಯವಾಗುವುದಿಲ್ಲ” ಎಂದು ಅವರು ಎಚ್ಚರಿಸಿದ್ದಾರೆ.

ನವದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ. ಪುತ್ರಿ ಲಂಡನ್ ನಲ್ಲಿದ್ದು ಸಂಸದೆಯಾಗಿದ್ದಾರೆ.
ಲಂಡನ್ ನಿಂದ ಅನುಮತಿ ಸಿಗುವವರೆಗೆ ನವದೆಹಲಿಯಲ್ಲಿರುತ್ತಾರೆ ಎಂದ ಮಾಧ್ಯಮಗಳ ಮೂಲಕ ಮಾಹಿತಿ ಬಂದಿದೆ.

Association of Aided Primary School Teachers ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಮಿತಿಗೆ ಆಯ್ಕೆ

0

Association of Aided Primary School Teachers ಬೆಂಗಳೂರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ಸಾಗರದ ಸಂತ ಜೋಸೆಫರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜ್ಯೋತಿ ಕೆ.ಎಸ್ ಅವಿರೋಧವಾಗಿ ಆಯ್ಕೆಯಾದರು.
ಶಿವಮೊಗ್ಗ ಜಿಲ್ಲೆಯಿಂದ ಪ್ರತಿನಿಧಿಸಿದ್ದ ಜ್ಯೋತಿ ಅವರನ್ನು,ಜಿಲ್ಲಾ ಸಂಘ ಏಕ ಮಾತ್ರ ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಕಳುಹಿಸಿತ್ತು.
Association of Aided Primary School Teachers ಭಾನುವಾರ ಬೆಂಗಳೂರಿನಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಜ್ಯೋತಿ ಅವರನ್ನು ಬೆಂಗಳೂರು ವಿಭಾಗದ ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಅನುದಾನಿತ ಶಿಕ್ಷಕರ ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿ ಮುನ್ನಡೆಸಿದ್ದರು.
ಇವರ ಕ್ರಿಯಾಶೀಲ ಕಾರ್ಯಚಟುವಟಿಕೆಗಳಿಗೆ ಸಂದ ಗೌರವವಾಗಿದೆ.

Wayanad landslides 2015 ರ ನಂತರ ನಡೆದ ಒತ್ತುವರಿ ತೆರವು ಪ್ರಕರಣಗಳನ್ನಅಡ್ವೋಕೇಟ್ ಸಂಗಡ ಚರ್ಚಿಸಬೇಕು – ಈಶ್ವರ ಖಂಡ್ರೆ ಸೂಚನೆ

0

Wayanad landslides ವಯನಾಡ್ ಸೇರಿದಂತೆ ವಿವಿದೆಡೆ ಸಂಭವಿಸಿದ ಭೂಕುಸಿತ ದುರಂತಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅರಣ್ಯ ಒತ್ತುವರಿ ತೆರವು ಮತ್ತು ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ, ಅಕ್ರಮ ತೋಟಗಳು, ಅನಧಿಕೃತ ರೆಸಾರ್ಟ್‌ಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯ ಆರಂಭಿಸಲಿದೆ. ಇದಕ್ಕಾಗಿ ಕಾರ್ಯಪಡೆ ರಚಿಸಿದೆ.

ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ ಮತ್ತು ಅನಧಿಕೃತ ನಿರ್ಮಾಣಗಳ ತೆರವಿಗೆ 2023ರಲ್ಲೇ ಅರಣ್ಯ ಇಲಾಖೆ ಟಿಪ್ಪಣಿ ಹೊರಡಿಸಿತ್ತು. ಆದರೆ, ಕಾರ್ಯಪಡೆ ರಚನೆಯಾಗಿರಲಿಲ್ಲ.

Wayanad landslides ಈ ವರ್ಷದ ಜುಲೈ ತಿಂಗಳಲ್ಲಿ ಶಿರಾಡಿ, ಚಾರ್ಮಾಡಿ ಘಾಟ್‌ಗಳು, ಶಿರೂರು, ಸಕಲೇಶಪುರ ಸೇರಿದಂತೆ ವಿವಿದೆಡೆ ಭೂಕುಸಿತ ಸಂಭವಿಸಿದೆ. ವಯನಾಡ್‌ನಲ್ಲಿ ಭೀಕರ ದುರಂತವೇ ನಡೆದಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಒತ್ತುವರಿ ತೆರವಿಗೆ ಮುಂದಾಗಿದೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ.

2015ರ ನಂತರ ನಡೆದ ಒತ್ತುವರಿ ತೆರವುಗಳ ಪೈಕಿ, ಒತ್ತುವರಿ ಸಾಭೀತಾದ ಪ್ರಕರಣಗಳನ್ನು ತಕ್ಷಣ ತೆರವುಗೊಳಿಸಬೇಕು, ನ್ಯಾಯಾಲಯದಲ್ಲಿರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಬೇಕು ಮತ್ತು ಪ್ರಕರಣಗಳ ತ್ವರಿತ ವಿಲೇವಾರಿಗೆ ವಾರದಲ್ಲಿ ಎರಡು ದಿನ ಮೀಸಲಿಡಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಡೀ ವಯನಾಡ್ ಪರಿಸರ ಸೂಕ್ಷ್ಮ ಪ್ರದೇಶ
ವಯನಾಡ್ ದುಂತರದ ಬಳಿಕ ಸಂಪೂರ್ಣ ಪಶ್ಚಿಮಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿದ ಮಾಧವ ಗಾಡ್ಗೀಳ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಗಳು ಕೇಳಿ ಬರುತ್ತಿವೆ.

ಈ ನಡುವೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಅಧ್ಯಯನ ವರದಿಯು ಇಡೀ ವಯನಾಡ್ ಜಿಲ್ಲೆಯನ್ನೇ ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವುದಾಗಿ ವರದಿಯಾಗಿದೆ.

ವಯನಾಡ್‌ ದುರಂತದ ಬಳಿಕ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

0

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

Congress District Committee ಆಗಸ್ಟ್ 7 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸತ್ಯಶೋಧನಾ ಸಮಿತಿ ಸಭೆ

0

Congress District Committee ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಆ. 7 ರಂದು ಸತ್ಯಶೋಧನ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಯು.ಶಿವಾನಂದ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಹಾಗೂ ಸತ್ಯಶೋಧನ ಸಮಿತಿಯ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಮತ್ತು ತಂಡದವರಿಂದ ಸತ್ಯಶೋಧನ ಸಮಿತಿಯ ಸಭೆ ನಡೆಯಲಿದೆ.

Congress District Committee ಈ ಸಭೆಗೆ ಜಿಲ್ಲೆಯ ಸಚಿವರು, ಶಾಸಕರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಕೆಪಿಸಿಸಿ ವದಾಧಿಕಾರಿಗಳು, ನಿಗಮ ಮಂಡಳಿಯ ಅಧ್ಯಕ್ಷರುಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರುಗಳು ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ಕೋರಲಾಗಿದೆ.

Indian Army ಸೇನೆಯಲ್ಲಿ ಸೇವೆ ಸಲ್ಲಿಸಿ ಸ್ವಂತ ಗ್ರಾಮಕ್ಕೆ ಆಗಮಿಸಿದ ಯೋಧನಿಗೆ ಹಾರ್ದಿಕ ಸ್ವಾಗತ

0

Indian Army ಸೊರಬ ತಾಲೂಕಿನ ಹೆಸರಿ ಗ್ರಾಮದ ಶಿವಮೂರ್ತಿ ಅವರು ಭಾರತೀಯ ಸೇನೆಯಲ್ಲಿ ಸೈನಿಕನಾಗಿ ೨೨ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಭಾನುವಾರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಇಡಿ ಗ್ರಾಮದ ಜನರೆಲ್ಲಾ ಸೇರಿ ಹೂವುಗಳನ್ನು ಎರಚಿ, ಪಟಾಕಿ ಸಿಡಿಸಿ, ಡೊಳ್ಳಿನ ನೃತ್ಯದೊಂದಿಗೆ ಸ್ವಾಗತಿಸಿ, ಸಂಭ್ರಮಿಸಿದರು.
ಸೈನಿಕ ಶಿವಮೂರ್ತಿ ಅವರು ಜಮ್ಮು ಕಾಶ್ಮೀರ, ದೇಹಲಿ, ಪಶ್ಚಿಮ ಬಂಗಾಲ, ಪಂಜಾಬ್, ಗುಜರಾಜ್ ಹಾಗೂ ಇತರೆ ಸ್ಥಳಗಳಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದರು.

ಮಹಿಳೆಯರು ಅವರಿಗೆ ಆರತಿ ಬೆಳಗುವ ಮೂಲಕ ಸ್ವಾಗತಿಸಿದರು. ಗ್ರಾಮಸ್ಥರು ಮೆರವಣಿಗೆಯಲ್ಲಿ ಕರೆತಂದು ಸನ್ಮಾನಿದರು. ಅನೇಕ ಮುಖಂಡರು ವೈಯಕ್ತಿಕವಾಗಿ ಸನ್ಮಾನಿಸಿ, ಹೂಗುಚ್ಚ ನೀಡಿದರು.

ಯುವಕರು ಶಿವಮೂರ್ತಿ ಅವರಿಂದ ಕೇಕ್ ಕತ್ತರಿಸಿ, ಪರಸ್ಪರ ಹಂಚಿ ಸವಿದು ಸಂಭ್ರಮ ಪಟ್ಟರು.
ನಂತರ ಮಾತನಾಡಿದ ಶಿವಮೂರ್ತಿ, ಸೈನಿಕನಾಗಿ ಸೇವೆ ಸಲ್ಲಿಸಿದ ಅನುಭವಗಳು ಸಾಕಷ್ಟಿವೆ.

ಗ್ರಾಮ ಸೇರಿದಂತೆ ಹಲವು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ದೇಶಾಭಿಮಾನ ಬೆಳೆಸಿಕೊಳ್ಳಲು, ಶಿಸ್ತು ಮೈಗೂಡಿಸಿಕೊಳ್ಳಲು ಹಾಗೂ ಸೈನ್ಯಕ್ಕೆ ಸೇರಲು ಮಾರ್ಗದರ್ಶನ ನೀಡಲಾಗುವುದು ಎಂದರು.

Indian Army ಇಂಡುವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಯೋಗೇಶ್ ಹೆಸರಿ, ಅಧ್ಯಕ್ಷ ವೇದಮೂರ್ತಿ ಚಿಕ್ಕಸವಿ ಮಾತನಾಡಿದರು.
ಪತ್ನಿ ಅನುಪಮಾ ಶಿವಮೂರ್ತಿ, ಮಕ್ಕಳಾದ ಮೌಲ್ಯ, ವೃತಿಕ್, ತಾಯಿ ನಿಂಗಮ್ಮ, ಗ್ರಾಮ ಸಮಿತಿ ಅಧ್ಯಕ್ಷ ರಮೇಶ್, ಉದ್ಯಮಿ ವಿಜಯ್ ಹೆಸರಿ, ರಾಜಪ್ಪ,ಇಂಡುವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ್, ನಿಜಲಿಂಗಪ್ಪ, ರವೀಂದ್ರ, ಸುಬ್ರಹ್ಮಣ್ಯ, ಬಸವರಾಜ್, ಶಿವಾನಂದ್, ಧಯಾನಂದಸ್ವಾಮಿ, ಹಿರಿಯಪ್ಪ ಸೇರಿದಂತೆ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Chamber Of Commerce Shivamogga ಕವಿ ಎಚ್. ಎಸ್. ವಿ. ಕವಿತೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ- ವಸಂತ ಹೋಬಳಿದಾರ್

0

Chamber Of Commerce Shivamogga ನಾಡು ಕಂಡ ಅತ್ಯಂತ ಶ್ರೇಷ್ಠ ಕವಿ ಡಾ. ಎಚ್.ಎಸ್.ವೆಂಕಟೇಶಮೂರ್ತಿ. ಸುಗಮ ಸಂಗೀತ ಕ್ಷೇತ್ರದಲ್ಲಿ ತಮ್ಮ ವಿಶೇಷ ಅರ್ಥಪೂರ್ಣ ಗೀತೆಗಳೊಂದಿಗೆ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ಮಥುರಾ ರಜತೋತ್ಸವ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಹೇಳಿದರು.
ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ, ಮಥುರಾ ರಜತೋತ್ಸವ ಸಮಿತಿ ಜಂಟಿಯಾಗಿ ಎಚ್‌ಎಸ್‌ವಿ ಅವರ 80ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಡಾ. ಎಚ್.ಎಸ್.ವೆಂಕಟೇಶಮೂರ್ತಿ ಅವರ ಗೀತಗಾಯನ ಸ್ಪರ್ಧೆಯ ಸಮಾರೋಪದಲ್ಲಿ ಮಾತನಾಡಿ, ಸಂಗೀತದಿಂದ ಸದಾ ಉಲ್ಲಾಸದಿಂದ ಇರುವುದರ ಜತೆಗೆ ಧ್ವನಿ ಸಂಸ್ಕರಣಗೊಳ್ಳುತ್ತದೆ. ಸದಾ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
Chamber Of Commerce Shivamogga ಇದೇ ಸಂದರ್ಭದಲ್ಲಿ ಸುಗಮ ಸಂಗೀತ ಪರಿಷತ್ ಗೌರವಾಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಮಥುರಾ ಪಾರಾಡೈಸ್ ರಜತ ಮಹೋತ್ಸವ ಅಂಗವಾಗಿ 50 ಸಂಸ್ಥೆಗಳ ಆಶ್ರಯದಲ್ಲಿ ಸಮಾಜಮುಖಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 6ನೇ ಕಾರ್ಯಕ್ರಮವಾಗಿದೆ. ಸುಗಮ ಸಂಗೀತ ಪರಿಷತ್‌ಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಶೆಟ್ಟಿ ಗೀತಗಾಯನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಸುಪ್ರಿಯಾ ಸಂತೋಷ್ ಪ್ರಥಮ ಬಹುಮಾನ, ಶ್ವೇತಾ ಪಾಟೀಲ್ ದ್ವಿತೀಯ ಬಹುಮಾನ, ಎಂ.ಸುಜಾತಾ, ವರ್ಷಿಣಿ ಭಟ್‌ಗೆ ನಗದು ಬಹುಮಾನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಪರಿಷತ್ ಸದಸ್ಯರಿಂದ ಡಾ. ಎಚ್.ಎಸ್.ವೆಂಕಟೇಶಮೂರ್ತಿ ಅವರ ಗೀತೆಗಳ ಗಾಯನ ನೆರವೇರಿತು. ಜಿಲ್ಲಾ ಖಜಾಂಚಿ ಜಿ.ವಿಜಯಕುಮಾರ್, ಕಾರ್ಯದರ್ಶಿ ಕೆ.ಎಸ್.ಮಂಜುನಾಥ, ಸಂಚಾಲಕರಾದ ಭದ್ರಾವತಿ ವಾಸು, ಸಹ ಕಾರ್ಯದರ್ಶಿ ತ್ರಿವೇಣಿ, ಸಹ ಸಂಚಾಲಕರಾದ ಶೋಭಾ ಸತೀಶ್, ವಿದುಷಿ ಲಲಿತಮ್ಮ, ಜಯಶ್ರೀ ಶ್ರೀಧರ್, ದಾಕ್ಷಾಯಿಣಿ, ರಾಜಕುಮಾರ, ಮಥುರಾ ನಾಗರಾಜ್, ಉಮಾ ದಿಲೀಪ್, ಲಕ್ಷ್ಮೀ ಮಹೇಶ್, ಹೇಮಾ ವರ್ಷಿಣಿ, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Radio Shivamogga ರೇಡಿಯೊ ಶಿವಮೊಗ್ಗದಿಂದ ವಿದ್ಯಾರ್ಥಿ ಪ್ರತಿಭೆಗಳಿಗೆ ಅವಕಾಶ-ಡಾ.ರಾಜೇಶ್ವರಿ

0

Radio Shivamogga ಮಲೆನಾಡು ಸೀಮೆಯ ಜನಪ್ರಿಯ ವಾಹಿನಿ ರೇಡಿಯೋ ಶಿವಮೊಗ್ಗ 90.8 ಎಫ್ ಎಮ್ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಆರ್ ಜೆ ಹಂಟ್ ನಡೆಸಿತು. ಇದರಲ್ಲಿ ವಿವಿಧ ಪದವಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಪರಿಸರ ಕೇಂದ್ರದ ಪದಾಧಿಕಾರಿ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಪ್ರೊ. ಎ.ಎಸ್. ಚಂದ್ರಶೇಖರ್ ರೇಡಿಯೋ ಮಹತ್ವ, ವಿದ್ಯಾರ್ಥಿಗಳು ಇದನ್ನು ಸದಾವಕಾಶವಾಗಿಸಿಕೊಳ್ಳುವ ಬಗೆಯನ್ನು ವಿಸ್ತೃತವಾಗಿ ತಿಳಿಸಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ರಾಜ್ಯ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್ ರೇಡಿಯೋದ ಜೊತೆಗಿನ ತಮ್ಮ ನಂಟಿನ ಬಗ್ಗೆ ತಿಳಿಸಿ, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯೆ ಡಾ. ರಾಜೇಶ್ವರಿ ಮಾತನಾಡಿ, ರೇಡಿಯೋ ಶಿವಮೊಗ್ಗದ ಉತ್ಸಾಹಿ ತಂಡ ಕಾಲೇಜಿಗೆ ಬಂದಿರುವುದು ಸಂತಸ ತಂದಿದೆ. ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ ಅಪೂರ್ವ ಅವಕಾಶ ದೊರೆಯಲಿದೆ. ದೊರೆತ ಅವಕಾಶವನ್ನು ಉಪಯೋಗಿಸಿಕೊಂಡು, ಬದುಕಿನಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕೆಂದು ಶುಭಾಶಿಸಿದರು.

ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್, ಬಾನುಲಿ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ, ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಪರಿಸರ ಅಧ್ಯಯನ ಕೇಂದ್ರದ ಸಂಯೋಜಕ ದಿನೇಶ್ ಹೊಸನಗರ, ಆರ್ ಜೆ ಗಳಾದ ಶ್ರೀಧರ್, ಮಹಾಲಕ್ಷ್ಮೀ, ಶ್ವೇತಾ, ಅರ್ಪಿತಾ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

Radio Shivamogga ಉಪನ್ಯಾಸಕ ಪರಿಸರ ನಾಗರಾಜ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು.

ಈ ಆಡಿಷನ್ ಆಯೋಜನೆಯಲ್ಲಿ ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ, ಪರಿಸರ ಅಧ್ಯಯನ ಕೇಂದ್ರವು ಸಹಭಾಗಿಗಳಾಗಿದ್ದವು.