Linganamakki Dam ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹೊರ ಹರಿಸಲಾಗುತ್ತಿದೆ.
ಶನಿವಾರ ಬೆಳಿಗ್ಗೆ ೧೦ ಗಂಟೆಯ ಮಾಹಿತಿಯಂತೆ ಜಲಾಶಯದಿಂದ ಸುಮಾರು ೫೮ ಸಾವಿರ ಕ್ಯೂಸೆಕ್ ನೀರನ್ನು, ೧೧ ಕ್ರಸ್ಟ್ ಗೇಟ್ ಗಳ ಮೂಲಕ ಹೊರ ಹರಿಸಲಾಗುತ್ತಿದೆ ಡ್ಯಾಂನ ಒಳಹರಿವು ೬೧,೮೩೫ ಕ್ಯೂಸೆಕ್ ಇದೆ. ಡ್ಯಾಂ ನೀರಿನ ಮಟ್ಟವನ್ನು ೧೮೧೫. ೩೫ (ಗರಿಷ್ಠ ಮಟ್ಟ : ೧೮೧೯) ಅಡಿಗೆ ಕಾಯ್ದುಕೊಳ್ಳಲಾಗಿದೆ.
ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಮುಂದುವರಿದಿರುವುದರಿಂದ ಲಿಂಗನಮಕ್ಕಿ ಡ್ಯಾಂ ಒಳಹರಿವಿನಲ್ಲಿ ನಿರಂತರ ಏರಿಕೆ ಕಂಡುಬರಲಾರಂಭಿಸಿದೆ.
Linganamakki Dam ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರ ಬಿಟ್ಟಿರುವ ಕಾರಣದಿಂದ, ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ಮತ್ತಷ್ಟು ಕಳೆಗಟ್ಟಿದೆ. ಅಕ್ಷರಶಃ ಜಲಪಾತ ಭೋರ್ಗರೆಯಲಾರಂಭಿಸಿದೆ.
ವೀಕೆಂಡ್ ನಲ್ಲಿಯೇ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರ ಹರಿಸುತ್ತಿರುವುದರಿಂದ, ಜೋಗ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಮೈದುಂಬಿದ ನದಿ :
ಲಿಂಗನಮಕ್ಕಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರಬಿಟ್ಟಿರುವ ಕಾರಣದಿಂದ, ಶರಾವತಿ ನದಿ ಹೊನ್ನಾವರ ತಾಲೂಕಿನಲ್ಲಿ ಮೈದುಂಬಿ ಹರಿಯುತ್ತಿದೆ. ನದಿಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಸೃಷ್ಟಿಸಿದೆ. ಡ್ಯಾಂನಿಂದ ಪ್ರಸ್ತುತ ಹೊರಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ.
Linganamakki Dam ಲಿಂಗನಮಕ್ಕಿ ಡ್ಯಾಂ ನಿಂದ 25,000 ಕ್ಯುಸೆಕ್ ನೀರು ಬಿಡುಗಡೆ ಜನರ ಮುಂಜಾಗ್ರತೆಗೆ ಇಲಾಖೆ ಮನವಿ
Amith Shah ಕೇರಳ ಭೂಕುಸಿತ ದ ಬಗ್ಗೆ ಕೇಂದ್ರ ಗೃಹಸಚಿವರ ಹೇಳಿಕೆ ದಿಕ್ಕು ತಪ್ಪಿಸುವಂತಿದೆ- ಕಾಂಗ್ರೆಸ್ ಜೈರಾಮ್ ರಮೇಶ್ ಪ್ರತಿಕ್ರಿಯೆ
Amit Shah ವಯನಾಡ್‌ನಲ್ಲಿ ಭೂಕುಸಿತದ ಸಾಧ್ಯತೆ ಕುರಿತು ನೀಡಿದ್ದ ಎಚ್ಚರಿಕೆಯನ್ನು ಕೇರಳ ಸರ್ಕಾರ ಕಡೆಗಣಿಸಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯ ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ.
ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಅಮಿತ್ ಶಾ ನೀಡಿರುವ ಹೇಳಿಕೆಯನ್ನು ವಿಸ್ಕೃತವಾಗಿ ಪರಿಶೀಲಿಸಲಾಗಿದೆ. ಅವರು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯಸಭೆಯ ಹಾದಿ ತಪ್ಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಮತ್ತು ಹಿರಿಯ ಸಂಸದ ದಿಗ್ವಿಜಯ ಸಿಂಗ್ ಸಹಿ ಮಾಡಿರುವ ಪತ್ರದಲ್ಲಿ, ಸಚಿವರು ಅಥವಾ ಸಂಸದರು ಸದನದ ದಿಕ್ಕು ತಪ್ಪಿಸುವುದು ಹಕ್ಕುಚ್ಯುತಿ ಮತ್ತು ಸದನಕ್ಕೆ ಮಾಡುವ ಅವಮಾನವಾಗಿದೆ ಎಂದು ಹೇಳಲಾಗಿದೆ.
ಕಳೆದ ಬುಧವಾರ ವಯನಾಡ್ ಭೂಕುಸಿತದ ಕುರಿತು ರಾಜ್ಯಸಭೆಯಲ್ಲಿ ಗಮನ ಸೆಳೆಯುವ ವೇಳೆ ಮಧ್ಯಪ್ರವೇಶಿಸಿದ ಅಮಿತ್ ಶಾ, ಜುಲೈ 23, 24, 25 ಮತ್ತು 26ರಂದು ಮಳೆ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ಪೂರ್ವ ಎಚ್ಚರಿಕೆಗಳನ್ನು ಕೇರಳ ಸರ್ಕಾರ ಕಡೆಗಣಿಸಿತ್ತು ಎಂದಿದ್ದರು.
Amit Shah ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಮಿತ್ ಶಾ ಅವರ ಆರೋಪಗಳನ್ನು ಅಲ್ಲಗಳೆದಿದ್ದು, 48 ಗಂಟೆಗಳಲ್ಲಿ 572 ಮಿಮೀ ದಾಖಲೆ ಮಳೆಯಾಗಿದೆ. ಆದರೆ, ನಮಗೆ ಎರಡು ದಿನಗಳಲ್ಲಿ 115 ಮಿಮೀ ನಿಂದ 204 ಮಿಮೀ ಮಳೆಯಾಗುವ ಎಚ್ಚರಿಕೆ ನೀಡಲಾಗಿತ್ತು. ಜುಲೈ 30 ಬೆಳಗಿನ ಜಾವದವರೆಗೆ ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಐಎಂಡಿ ಆರೆಂಜ್ ಅಲರ್ಟ್ ನೀಡಿತ್ತು ಎಂದಿದ್ದಾರೆ. ದುರಂತ ಸಂಭವಿಸಿದ ನಂತರವೇ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯೂ ತಿಳಿಸಿದೆ.
Wayanad Landslide ವಯನಾಡಿನ ದುರಂತದಲ್ಲಿ ಬದುಕಿದ ಅನಾಥ ಮಗುವನ್ನ ದತ್ತು ಸ್ವೀಕರಿಸಲು ಮುಂದಾದ ದಂಪತಿ
Wayanad Landslide ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದ ಪ್ರದೇಶದಿಂದ ನಿಮಿಷಕ್ಕೊಂದು ನೋವಿನ ಕಥೆಗಳು ಕೇಳಿಬರುತ್ತಿರುವ ನಡುವೆ ಮಾನವೀಯ ವಿಚಾರವೊಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಪ್ರವಾಹದಲ್ಲಿ ಅನಾಥವಾಗಿದ್ದ ಮಗುವನ್ನು ದತ್ತು ತೆಗೆದುಕೊಳ್ಳಲು ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗಳು ಮುಂದೆ ಬಂದಿದ್ದಾರೆ ಎಂದು ವರದಿ ಮಾಡಿದೆ.
ಜುಲೈ 30ರ ಬೆಳಿಗ್ಗೆ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತಗಳು 300ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, 200 ಕ್ಕೂ ಹೆಚ್ಚು ಜನರಿಗಾಗಿ ತೀವ್ರ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.
Wayanad Landslide ದುರಂತದ ಹಿನ್ನೆಲೆಯಲ್ಲಿ, ಇಡುಕ್ಕಿಯ ಮಹಿಳೆ ಭಾವನಾ ಸಜಿನ್ ಅವರು ಭೂಕುಸಿತ ಪೀಡಿತ ಪ್ರದೇಶದಲ್ಲಿ ಅನಾಥ ನವಜಾತ ಶಿಶುಗಳಿಗೆ ಹಾಲುಣಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸ್ವಯಂಪ್ರೇರಿತರಾಗಿದ್ದರು. ಭಾವನಾ ಅವರ ಘೋಷಣೆಯ ಬೆನ್ನಲ್ಲೇ, ವಯನಾಡ್‌ನ ದಂಪತಿಗಳು ವಿಪತ್ತು ವಲಯದಿಂದ ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಸಿದ್ಧರಿದ್ದಾರೆ ಎಂದು ಘೋಷಿಸಿದರು.
ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ದತ್ತು ಸ್ವೀಕಾರ ಮಾಡುವ ಮೊದಲು, ಅವರು ಮಗುವಿಗೆ ಚಿಕ್ಕು ಎಂದು ಹೊಸ ಹೆಸರನ್ನು ಆಯ್ಕೆ ಮಾಡಿದ್ದಾರೆ.
Nijasharana Ambigara Chowdaiah Development ವಿವಿಧ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನ
Nijasharana Ambigara Chowdaiah Development ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸಬರಿಗೆ ಮತ್ತು ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು (ಹೊಸಬರಿಗೆ ಮತ್ತು ನವೀಕರಣ), ಗಂಗಾಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ /ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
Nijasharana Ambigara Chowdaiah Development ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿರಬಾರದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://ambigaradevelopment.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.
CM Siddharamaih ಷೋಕಾಸ್ ನೋಟೀಸು ಕೊಟ್ಟಿರುವುದು ಕಾನೂನು ಬಾಹಿರ- ಮುಖ್ಯಮಂತ್ರಿ ಸಿದ್ಧರಾಮಯ್ಯ
CM Siddharamaih ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ಅವರು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು.
ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.
CM Siddharamaih ಟಿ. ಜೆ.ಅಬ್ರಹಾಂ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ.
ದಿನಾಂಕ : 26-7.2024 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ.
ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ.
ಅಂದೇ ನೋಟೀಸು ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ, ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ.
ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.
ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ.
ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ.
ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ ಎಂದು ಹೇಳಿದರು.
S.N. Channabasappa ಗೋಪಶೆಟ್ಟಿಕೊಪದಲ್ಲಿ 1836 ಮನೆಗಳ ನಿರ್ಮಾಣ ತುರ್ತಾಗಿ ಆರಂಭಿಸಿ- ಶಾಸಕ ಚೆನ್ನಿ
S.N. Channabasappa ಗೋಪಶೆಟ್ಟಿಕೊಪ್ಪದಲ್ಲಿ 1836 ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕಾಮಗಾರಿ ಆರಂಭಿಸಬೇಕು. ಗೋವಿಂದಾಪುರದಲ್ಲಿ ಈಗಾಗಲೇ ನಿರ್ಮಿಸಿ ಹಂಚಿಕೆ ಮಾಡಲಾಗಿರುವ 724 ಮನೆಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಪ್ರತ್ಯೇಕ ವಿದ್ಯುತ್ ಸರಬರಾಜು ಯೋಜನೆ, ಕಸವಿಲೇವಾರಿ ವಾಹನವನ್ನು ಒದಗಿಸಬೇಕು. ಉಳಿದ ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕ್ರಮವಹಿಸಲು ಕಾಲಮಿತಿಯನ್ನು ಶಾಸಕ ಎಸ್ ಎನ್ ಚನ್ನಬಸಪ್ಪ ನಿಗದಿ ಪಡಿಸಲು ಸೂಚಿಸಿದರು.
ಅವರು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ೪೮೩೬ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.
ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತೆ ಡಾ|| ಕವಿತಾ ಹಾಗೂ ಆಶ್ರಯ ಯೋಜನೆಯ ಅಧಿಕಾರಿಗಳೊಂದಿಗೆ ಈ ಸಭೆ ನಡೆಯಿತು.
S.N. Channabasappa ಅತೀವೃಷ್ಠಿ ಹಾನಿಯಿಂದ ಮನೆಗಳು ಬಿದ್ದಿರುವ ಬಗ್ಗೆ ತುರ್ತಾಗಿ ಪರಿಹಾರ ನೀಡಲು ಮತ್ತು ಅನಧಿಕೃತ ಮನೆಗಳಿಗೆ ವಿಶೇಷ ಪರಿಹಾರ ಒದಗಿಸಬೇಕು. ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ನೀಡಲು ಬಾಕಿಯಿರುವ ಪ್ರಕರಣಗಳನ್ನು ತುರ್ತಾಗಿ ಕ್ರಮವಹಿಸಬೇಕು. ಎಂದು ಸೂಚಿಸಿದರು.
ಮಹಾನಗರ ಪಾಲಿಕೆ, ಮೆಸ್ಕಾಂ. ನೀರು ಸರಬರಾಜು, ಸ್ಲಂ ಬೋರ್ಡ್ನ ಅಧಿಕಾರಿಗಳ ಉಪಸ್ಥಿತರಿದ್ದರು.
Rotary Shivamogga ಶಿವಮೊಗ್ಗದ ರೋಟರಿ ಚಿತಾಗಾರದ ಆವರಣದಲ್ಲಿ ಪುಂಡರ ಹಾವಳಿ ತಡೆಯಲು ಮನವಿ
Rotary Shivamogga ಶಿವಮೊಗ್ಗನಗರದ ಮಂಜುನಾಥ್ ಗೌಡ ಪೂರ್ವ ಚಿತಾಗಾರದಲ್ಲಿ ಗಾಂಜಾ ಸೇವಿಸಿ ಪುಂಡರ ಹಾವಳಿ ಹೆಚ್ಚಾಗಿದೆ. ಇಲ್ಲಿ ಸಾರ್ವಜನಿಕರು ಒಡಾಡುವುದು ಕಷ್ಟವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್‌ರವರಿಗೆ ರೋಟರಿ ಚಿತಾಗಾರದ ಟ್ರಸ್ಟ್ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.
ರೋಟರಿ ಪೂರ್ವ ಚಿತಾಗಾರದ ಪಕ್ಕದ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪಡ್ಡೆ ಹುಡುಗರು ಚಿತಾಗಾರದಲ್ಲಿರುವ ಕಿಟಕಿಯ
Rotary Shivamogga ಗಾಜುಗಳನ್ನು ಒಡೆದು ಹಾಕುವುದು, ನಲ್ಲಿಗಳನ್ನು ಕೀಳುವುದು, ಕಿಟಕಿ ಫೇಮ್‌ಗಳನ್ನು ಕಳ್ಳತನ ಮಾಡುವುದರ ಜೊತೆಗೆ ಕಂಟ್ರಿ ಕ್ಲಬ್‌ಗೆ ಹೋಗಿ ಬರುವವರಿಗೆ ಹೆದರಿಸುವುದು ಹೆಚ್ಚಾಗಿದೆ. ಇದಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.
ಮನವಿ ಸಲ್ಲಿಸುವ ವೇಳೆ ರೋಟರಿ ಚಿತಾಗಾರದ ಟ್ರಸ್ಟ ನ ಪ್ರಭಾರ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪರಮೇಶ್ವರ್ ಡಿ. ಶಿಗ್ಗಾಂವ್, ಮಾಜಿ ಮ್ಯಾನೇಜಿಂಗ್ ಟ್ರಸ್ಟಿ . ಕಡಿದಾಳ್ ಗೋಪಾಲ್, ಉಪಾಧ್ಯಕ್ಷ ಸುರೇಶ್ ಕುಮಾರ್, ಖಜಾಂಚಿ ಜಿ.ವಿಜಯ್ ಕುಮಾರ್ ಹಾಜರಿದ್ದರು.
R.M. Manjunath Gowda ಒಳಜಗಳದಿಂದ ಬಿಜೆಪಿ & ಜೆಡಿಎಸ್ ಪಕ್ಷಗಳು ನಾಶವಾಗುತ್ತವೆ- ಆರ್.ಎಂ.ಮಂಜುನಾಥ ಗೌಡ
R.M. Manjunath Gowda ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುವುದಾಗಿ ಹೇಳಿಕೊಳ್ಳುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲೀಗ ಒಳ ಜಗಳ ಆರಂಭವಾಗಿದ್ದು, ಅವರವರ ಕಿತ್ತಾಟದಿಂದ ಎರಡೂ ಪಕ್ಷಗಳು ಅತೀ ಶೀಘ್ರದಲ್ಲೇ ನಾಶವಾಗುವುದರಲ್ಲಿ ಸಂದೇಹವಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಭವಿಷ್ಯ ನುಡಿದರು.
ತಾಲ್ಲೂಕಿನ ಅಂಜನಾಪುರ ಹಾಗೂ ಅಂಬ್ಲಿಗೊಳ್ಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,
ಲೋಕಸಭಾ ಚುನಾವಣೆ ಪೂರ್ವದಲ್ಲಿ ರಾಜ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಜೆಡಿಎಸ್ ಮುಖ್ಮಮಂತ್ರಿ ಸಿದ್ಧರಾಮಯ್ಯರವರ ವಿರುದ್ದ ಪಾದಯಾತ್ರೆ ನಡೆಸುವುದಕ್ಕೆ ಎರಡೂ ಪಕ್ಷಗಳ ಮುಖಂಡರು ಕಿತ್ತಾಟದಲ್ಲಿ ನಿರತರಾಗಿದ್ದಾರೆ.
ಹೆಚ್ ಡಿ ಕುಮಾರ್ ಸ್ವಾಮಿಯವರು ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ಡಿಕೆಶಿಯವರು ಸಿಡಿ ಹರಿಕಾರರು ಎಂದು ಸುಳ್ಳು ಆರೋಪ ಮಾಡುತ್ತಿದ್ದರು ಆದರೀಗ ಬಿಜೆಪಿಯ ಪ್ರೀತಮ್ ಗೌಡ್ರು ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಇವರು ಕಾಂಗ್ರೆಸ್ ಪಕ್ಷವನ್ನು ನಾಶ ಮಾಡುವುದಾಗಿ ಹೇಳಿಕೊಳ್ಳುವ ಪಕ್ಷದಲ್ಲೀಗ ಒಳಜಗಳ ಆರಂಭವಾಗಿದ್ದು, ಅವರವರ ಕಿತ್ತಾಟದಿಂದ ಎರಡೂ ಪಕ್ಷಗಳು ಅತೀ ಶೀಘ್ರದಲ್ಲೇ ನಾಶವಾಗುವುದರಲ್ಲಿ ಸಂದೇಹವಿಲ್ಲ ಎಂದರು.
R.M. Manjunath Gowda ರಾಜ್ಯ ಸರ್ಕಾರವನ್ನು ಉರುಳಿಸುವ ಪ್ರಯತ್ನ ತಾಲ್ಲೂಕಿನ ಶಾಸಕರು ಕನಸು ಕಾಣುತ್ತಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷದವರೆಲ್ಲರೂ ಮುಖ್ಮಮಂತ್ರಿ ಸಿದ್ಧರಾಮಯ್ಯರವರ ಪರವಾಗಿರುವಾಗ ಸಾಧ್ಯವಿಲ್ಲದ ಮಾತು ಅವರ ಕನಸು ಕನಸಾಗಿಯೇ ಉಳಿಯುವುದು. ಈಹಿಂದೆ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರ್ಕಾರವು ಹೆಚ್ಚು ದಿನ ಉಳಿಯಲಿಲ್ಲ. ಈಗಲೂ ಸಹ ಇದು ಮುಂದುವರಿಯುತ್ತದೆ ಎಂಬ ನಂಬಿಕೆ ಸಾರ್ವಜನಿಕರಲ್ಲಿ ಉಳಿದಿಲ್ಲ. ಕೇಂದ್ರ ಸರ್ಕಾರದ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿಯವರು ಬಡವರ ದೀನದಲಿತರ ಪರವಾಗಿ ದ್ವನಿ ಎತ್ತುತ್ತಿದ್ದು ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಸುಭದ್ರವಾಗಲಿದೆ ಎಂದು ಹೇಳಿದರು.
Independence Day ಸ್ವಾತಂತ್ರ್ಯೋತ್ಸವಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಸಕಲ ಸಜ್ಜು- ಗುರುದತ್ತ ಹೆಗಡೆ
Independence Day ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು, ಪಾಲಿಕೆ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿಗಳು ಹಾಗೂ ತಹಶೀಲ್ದಾರರಿಗೆ ತಿಳಿಸಿದರು.
ಪೆರೇಡ್ ಆವರಣ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಚಗೊಳಿಸಿ ಸಿದ್ದಗೊಳಿಸುವುದು, ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ದತೆ, ವೇದಿಕೆ ಅಲಂಕಾರ ಮಾಡುವಂತೆ ಪಾಲಿಕೆ, ಸಶಸ್ತ ಮೀಸಲು ಪಡೆ, ಲೋಕೋಪಯೋಗಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕ್ರೀಡಾ ಯುವಜನ ಸಬಲೀಕರಣ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಬೇಕು.ಹಾಗೂ ಧ್ವಜಸ್ತಂಭದ ಕೆಳಗೆ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರವನ್ನು ಇರಿಸಿ ನಮನ ಸಲ್ಲಿಸಬೇಕೆಂದರು.
ವಿದ್ಯುದೀಪ ಅಲಂಕಾರ ವ್ಯವಸ್ಥೆ, ಪೊಲೀಸ್ ಭದ್ರತೆ, ಕುಡಿಯುವ ನೀರಿನ ವ್ಯವಸ್ಥೆ, ಆಂಬುಲೆನ್ಸ್, ಅಗ್ನಿಶಾಮಕ ವಾಹನದ ವ್ಯವಸ್ಥೆ, ಮಕ್ಕಳಿಗೆ ಸಿಹಿ ಹಂಚಿಕೆ ಹಾಗೂ ಆಸ್ಪತ್ರೆ ಮತ್ತು ಇತರೆ ಸಂಸ್ಥೆಗಳಲ್ಲಿ ಹಣ್ಣು, ಸಿಹಿ ಹಂಚಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದರು.
ನಗರದ ಶಾಲಾ, ಕಾಲೇಜು, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‌ಸಿಸಿ, ಅಗ್ನಿ ಶಾಮಕ ದಳ, ಹೋಂಗಾರ್ಡ್ಸ್ ವತಿಯಿಂದ ಸಾಮೂಹಿಕ ಕವಾಯಿತು ಏರ್ಪಡಿಸಲಾಗುವುದು. ಮಳೆಯಿಂದ ರಕ್ಷಣೆ ಪಡೆಯಲು ಕವಾಯಿತು ಮೈದಾನದಲ್ಲಿ ಜರ್ಮನ್ ಟೆಂಟ್ ಹಾಕಿಸಲು ಪಿಡಬ್ಲುö್ಯಡಿ ಇಲಾಖೆಗೆ ಸೂಚಿಸಿದರು.
ಧ್ವಜಾರೋಹಣದ ನಂತರ 03 ತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಬೇಕು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮ ಕೈಗೊಳ್ಳಲು ಡಿಡಿಪಿಐ ಅವರಿಗೆ ಸೂಚನೆ ನೀಡಿದರು. ಅಂದು ಸಂಜೆ ನಗರದ ಕುವೆಂಪು ರಂಗಮAದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಳನ್ನು ಆಯೋಜಿಸುವಂತೆ ಡಿಡಿಪಿಐ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗೆ ಸೂಚಿಸಿದರು.
Independence Day ಸನ್ಮಾನ : ಸ್ವಾತಂತ್ರೋತ್ಸವದ ಅಂಗವಾಗಿ ಸ್ವಾತಂತ್ರö್ಯ ಹೋರಾಟಗಾರರು, ಆರೋಗ್ಯ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸುವ ಜೊತೆಗೆ ಈ ಬಾರಿ ಉತ್ತಮವಾಗಿ ಸೇವೆ ಸಲ್ಲಿಸಿದ 5 ರಿಂದ 8 ಸರ್ಕಾರಿ ಅಧಿಕಾರಿ/ನೌಕರರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್, ಜಿ.ಪಂ ಉಪಕಾರ್ಯದರ್ಶಿ ಸುಜಾತಾ.ಕೆ.ಆರ್ ಎಸಿ ಸತ್ಯನಾರಾಯಣ ಜಿ ಹೆಚ್, ತಹಶೀಲ್ದಾರ್ ಗಿರೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
Sculptor Arun Yogiraj ಅಯೋಧ್ಯೆ ಬಾಲರಾಮನ ಮೂರ್ತಿಯ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಗೆ ಗೌ.ಡಾಕ್ಟರೇಟ್ ಪ್ರದಾನ
Sculptor Arun Yogiraj ಅಯೋಧ್ಯೆ ರಾಮಲಲ್ಲಾ ಮೂರ್ತಿ, ಸ್ವಾಮಿ ವಿವೇಕಾನಂದರ ಪುತ್ಥಳಿ ಕೆತ್ತಿದ್ದ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ನಾಡಿನ ಆರು ಮಂದಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಕನ್ಹಾ ನಗರ ಮಥುರಾ ತಲುಪಿದ್ದು, ಸಂಸ್ಕೃತಿ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅರುಣ್ ಯೋಗಿರಾಜ್ ಸೇರಿದಂತೆ ನಾಡಿನ ಆರು ಮಂದಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಮನಾಥ್ ಕೋವಿಂದ್ ಅವರು, ಕಷ್ಟ ಬಂದಾಗ ಛಲ ಬಿಡದೆ ಗುರಿ ಮುಟ್ಟಲು ಶ್ರಮಿಸಬೇಕು ಎಂದರು.
ನಾವು ಆಯ್ದುಕೊಂಡ ಹಾದಿಯಲ್ಲಿ ಮುಂದೆ ಸಾಗಿದರೆ, ನಾವು ನಮ್ಮ ಗಮ್ಯಸ್ಥಾನವನ್ನು ಖಂಡಿತವಾಗಿ ತಲುಪುತ್ತೇವೆ. ಪ್ರಸ್ತುತ ಯುಗದಲ್ಲಿ ವಿದ್ಯಾರ್ಥಿನಿಯರು ಹುಡುಗರನ್ನು ಮೀರಿಸುತ್ತಿದ್ದಾರೆ, ಇದು ಮಹಿಳಾ ಶಿಕ್ಷಣ ಮತ್ತು ಸಬಲೀಕರಣದ ಅಭಿಯಾನಕ್ಕೆ ಶಕ್ತಿ ನೀಡುತ್ತಿದೆ ಎಂದು ಅವರು ಹೇಳಿದರು.
ಇದೇ ವೇಳೆ ಸಂಸ್ಕೃತಿ ವಿಶ್ವವಿದ್ಯಾನಿಲಯದ ಕುಲಪತಿ ಸಚಿನ್ ಗುಪ್ತಾ ಮಾತನಾಡಿ, ಮಾಜಿ ರಾಷ್ಟ್ರಪತಿಗಳು ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿದ್ದು, ಇದು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ಆರು ಮಂದಿಗೆ ಗೌರವ ಪದವಿ ನೀಡಲಾಗಿದೆ ಎಂದು ತಿಳಿಸಿದರು.
Sculptor Arun Yogiraj ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಮೆರಿಕದ ವರದಿಯನ್ನು ಉಲ್ಲೇಖಿಸಿ, ಈ ವರದಿಯ ಪ್ರಕಾರ, ಭಾರತದ ಜನರ ಆರೋಗ್ಯದಲ್ಲಿ ದೊಡ್ಡ ಕುಸಿತವಾಗಿದೆ. ಅಧ್ಯಯನದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದರು. ಆರೋಗ್ಯಕರ ದೇಹ ಮತ್ತು ಉತ್ತಮ ಶಿಕ್ಷಣ ಆರೋಗ್ಯಕರ ಸಮಾಜಕ್ಕೆ ಅತ್ಯಗತ್ಯ. ಆರೋಗ್ಯವಾಗಿರಲು ಮತ್ತು ರೋಗಗಳಿಂದ ದೂರವಿರಲು ಯೋಗ ಮಾಡಿ ಎಂದರು.
