Tuesday, April 7, 2026
Tuesday, April 7, 2026
Home Blog Page 623

Belur Gopalkrishna ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಚೆಕ್ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

0

Belur Gopalkrishna ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿದ್ದ ರೈತ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಿತರಿಸಿದರು.
ಮೇ 05 ರಂದು ಬಸವಾಪುರ ಗ್ರಾಮದ ತಿಮ್ಮಪ್ಪ (58) ಮನೆ ಸಮೀಪದ ಕಾಡಿಗೆ ದರಗು ತರಲು ಹೋದಾಗ ಕಾಡಾನೆ ತುಳಿದು ಮೃತಪಟ್ಟಿದ್ದರು.

ಕಾಡಾನೆ ತುಳಿದು ರೈತ ಮೃತಪಟ್ಟ ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಸ್ಥಳದಲ್ಲಿಯೇ ವೈಯಕ್ತಿಕವಾಗಿ 1 ಲಕ್ಷ ಪರಿಹಾರ ನೀಡಿ ಸರ್ಕಾರದಿಂದ ಪರಿಹಾರ ದೊರಕಿಸುವ ಭರವಸೆ ನೀಡಿದ್ದರು.ಈ ಹಿನ್ನಲೆಯಲ್ಲಿ ಇಂದು ಮೃತ ರೈತ ತಿಮ್ಮಪ್ಪ ರವರ ಮನೆಗೆ ತೆರಳಿ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು.

ನಂತರ ಮಾತನಾಡಿದ ಶಾಸಕ ಬೇಳೂರು ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದೆ ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಹಕಾರದಿಂದ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದ್ದೇನೆ ಎಂದರು.

Belur Gopalkrishna ಈ ಸಂಧರ್ಭದಲ್ಲಿ ಸಿಸಿಎಫ್ ಹನುಮಂತಪ್ಪ , ಡಿಎಫ್ ಓ ಪ್ರಸನ್ನ ಪಟಗಾರ್, ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

Wayanand Landslides ವಯನಾಡಿನ ಭೂಕುಸಿತ ಸಂತ್ರಸ್ತರನ್ನ ಭೇಟಿ ಮಾಡಿದ ರಾಹುಲ್ ಗಾಂಧಿ

0

Wayanand Landslides ದುರಂತ ಸಂಭವಿಸಿದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು.

ವಯನಾಡಿನ ಮಾಜಿ ಸಂಸದರೂ ಆಗಿರುವ ರಾಹುಲ್ ಗಾಂಧಿ ದುರಂತ ಸಂಭವಿಸಿದ ಮೆಪ್ಪಾಡಿ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ತೆರೆದಿರುವ ಪರಿಹಾರ ಶಿಬಿರಕ್ಕೆ ತೆರಳಿ ಸಂತ್ರಸ್ತರ ಸಮಸ್ಯೆ ಆಲಿಸಿದರು ಮತ್ತು ಅವರಿಗೆ ಸಾಂತ್ವನ ಹೇಳಿದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಇಂದು ಬೆಳಿಗ್ಗೆ ಇಬ್ಬರು ಹಿರಿಯ ಅಧಿಕಾರಿಗಳಾದ ಡಾ. ವಿ ವೇಣು ಮತ್ತು ಡಿಜಿಪಿ ಶೇಕ್ ದರ್ವೇಶ್ ಸಾಹಿಬ್ ಅವರೊಂದಿಗೆ ವಯನಾಡ್ ತಲುಪಿದ್ದಾರೆ.

ವಯನಾಡಿನ ಸಿವಿಲ್ ಸ್ಟೇಷನ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಸ್ಮಾರಕ ಸಭಾಂಗಣದಲ್ಲಿ ಮುಖ್ಯಮಂತ್ರಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಜಿಲ್ಲಾಡಳಿತ ನೀಡಿದ ಮಾಹಿತಿಯಂತೆ ವಯನಾಡ್‌ ಮೂಲದ ರಾಜ್ಯ ಸರ್ಕಾರದ ಸಚಿವರು, ಜಿಲ್ಲೆಯ ಶಾಸಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

Wayanand Landslides ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಶೋಧ ಕಾರ್ಯಗಳು ಮುಂದುವರಿದಿವೆ.
ಇತ್ತೀಚಿನ ಮಾಹಿತಿ ಪ್ರಕಾರ, ಭೂಕುಸಿತ ದುರಂತ ಸ್ಥಳದಲ್ಲಿ ಅವಶೇಷಗಳ ಅಡಿಯಿಂದ ಹೆಚ್ಚಿನ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ 280 ದಾಟಿದೆ.

ಇನ್ನೂ 500ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. 200ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

CM Siddharamaih ಸಿದ್ಧರಾಮಯ್ಯ ಅವರ ಮೇಲೆ ಸಲ್ಲದ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ- ಅಹಿಂದ ಒಕ್ಕೂಟ

0

CM Siddharamaih ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸುವ ಕುತಂತ್ರ ಖಂಡಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಬಿಜೆಪಿ ಪಾದಯಾತ್ರೆ ನಡೆಸುತ್ತಿರುವುದು ಸರ್ಕಾರ ಬೀಳಿಸುವ ಹುನ್ನಾರ
ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಒಕ್ಕೂಟ ಮತ್ತು ಅಹಿಂದ ಒಕ್ಕ್ಕೂಟ ಹೇಳಿವೆ.

ಈ ಸಂಬಂಧ ಜಿಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಮುಖಂಡರು, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ನಿಗಮದ ಎಂಡಿ ಹಾಗೂ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿದೆ. ಹೀಗಿದ್ದರೂ ಸಿದ್ದರಾಮಯ್ಯ ಅವರನ್ನು ವಿನಾಕಾರಣ ಇದರಲ್ಲಿ ಸಿಲುಕಿಸುವ ಯತ್ನ ನಡೆದಿದೆ. ತಮ್ಮ ಮೇಲೆ ಆರೋಪ ಬಂದಾಗ ಸ್ವಂತ ಮುಖ್ಯಮಂತ್ರಿಗಳು ತನಿಖಾ ಆಯೋಗ ರಚಿಸಿದ್ದರೂ, ಬಿಜೆಪಿಯವರು ಸಲ್ಲದ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.

ದೇಶದ ಅತ್ಯುತ್ತಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸುದ್ದಿ ಸಂಸ್ಥೆಗಳೇ ವರದಿ ಮಾಡಿವೆ. ಸಿದ್ದರಾಮಯ್ಯ ವಿರುದ್ಧದ ಷಡ್ಯಂತರ ಇಲ್ಲಿಗೆ ನಿಲ್ಲಬೇಕು.

CM Siddharamaih ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಶೀಘ್ರದಲ್ಲಿಯೇ ರಾಜ್ಯಮಟ್ಟದ ಶೋಷಿತರ ಅಹಿಂದ ಮತ್ತು ಹಿಂದುಳಿದ ವರ್ಗದವರ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂಧು ಹೇಳಿದರು.

ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಅಹಿಂದ ಕಾರ್ಯದರ್ಶಿ ಎಸ್ ಪಿ ಶೇಷಾದ್ರಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಇಕ್ಕೇರಿ ರಮೇಶ್ ವಹಿಸಿದ್ದರು.

D.K. Shivakumar ಪಾದಯಾತ್ರೆ ಸಂಬಂಧ ಜೆಡಿಎಸ್ ಮುನಿಸು ಡೀಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

0

D.K. Shivakumar ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೇ ಮೈತ್ರಿಯಲ್ಲಿ ತಿಕ್ಕಾಟ ನಡೆಯುತ್ತಿರಬಹುದು ಎಂದು ತಿಳಿಸಿದರು.

ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸುಮಾರು 10 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ? ಜೆಡಿಎಸ್ ಹಾಗೂ ಬಿಜೆಪಿ ವಿಲೀನವಾಗುವುದಾದರೆ ಈ ರೀತಿ ಮಾಡಬಹುದು ಎಂದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಬೇಕು: ಡಿ ಕೆ ಶಿವಕುಮಾರ್ ಮನವಿ
ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ:
D.K. Shivakumar ಪೆನ್ ಡ್ರೈವ್ ವಿಚಾರವಾಗಿ ನಿಮ್ಮ ಮೇಲೆ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರು ಈಗ ಪ್ರೀತಂಗೌಡ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, “ಈಗ ಆ ವಿಚಾರ ಬೇಡ, ಆಮೇಲೆ ಮಾತನಾಡೋಣ. ಈಗ ಪಾದಯಾತ್ರೆ ಬಗ್ಗೆ ಚರ್ಚೆ ಮಾಡೋಣ. ನಾವು ಅವರ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಸರಕಾರದ ಕಾಲದ 30 ಹಗರಣಗಳಿವೆ. ದಿನಾ ಒಂದೊಂದು ಹಗರಣ ಬಿಚ್ಚಿಡುತ್ತೇವೆ. ಅವರ ಪಾದಯಾತ್ರೆ ಅಂತಿಮ ರೂಪುರೇಷೆ ಬಂದರೆ ನಾವು ನಮ್ಮ ಕಾರ್ಯಸೂಚಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರಾಜಭವನದ ಮೂಲಕ ರಾಜ್ಯ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ಸಚಿವ ಸಂಪುಟ ಸಭೆ ಬಳಿಕ ನಾನು ಬಂದು ವಿವರಣೆ ನೀಡುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಿದೆ ಎಂದು ತಿಳಿಸಿದರು.

Linganamakki Dam ಲಿಂಗನಮಕ್ಕಿ ಡ್ಯಾಂ ನಿಂದ 10.000 ಕ್ಯುಸೆಕ್ ನೀರು ಬಿಡುಗಡೆ ಅಪೂರ್ವ ದೃಶ್ಯ ಕಂಡ ಪ್ರವಾಸಿಗರಿಗೆ ಖುಷಿಯೋ ಖುಷಿ

0

Linganamakki Dam ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಅತಿದೊಡ್ಡ ಜಲಾಶಯವಾದ ಶರಾವತಿ ನದಿಯ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗುತ್ತಿದ್ದು, ಗುರುವಾರ 3 ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು.

ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. 1,814 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಯಾಗಲು ಇನ್ನೂ 5 ಅಡಿ ಬಾಕಿ ಇರುವಾಗಲೇ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.

Linganamakki Dam ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಜಲ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಒಟ್ಟು ನಾಲ್ಕು ವಿದ್ಯುತ್ ಘಟಕಗಳಿಂದ ಸುಮಾರು 1469.29 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಜಲಾಶಯದಿಂದ ನದಿಗೆ ನೀರು ಬಿಡುವುದನ್ನು ನೋಡಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.

Mysore Urban Development Authority “ಮೂಡಾ” ಹಗರಣ ಸಂಬಂಧಿತ ರಾಜ್ಯಪಾಲರ ನೋಟೀಸ್ ಹಿಂಪಡೆಯಲು‌ ರಾಜ್ಯ ಸಚಿವ ಸಂಪುಟದಿಂದ ಒತ್ತಾಯ

0

Mysore Urban Development Authority ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

Mysore Urban Development Authority ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಹಿಂಪಡೆಯಲು ಒತ್ತಾಯಿಸುವುದು ಮತ್ತು ಈ ಸಂಬಂಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆ ಸಿಎಂ ನಿವಾಸದಲ್ಲಿ ನಡೆದ ಸಚಿವರ ಜೊತೆಗಿನ ಉಪಹಾರ ಕೂಟದಲ್ಲೂ ಚರ್ಚೆಯಾಗಿದೆ ಎಂದು ವರದಿಗಳು ಹೇಳಿವೆ.

Belur Gopalkrishna ಜೋಗದ ಆಕರ್ಷಣೆ ಬಗ್ಗೆ ರಾಮೋಜಿ ಸಿಟಿ & ಬಾಂಬೆ ರೀತಿ ಮಾದರಿ ಅಧ್ಯಯನ ನಡೆಸಲಾಗುವುದು- ಬೇಳೂರು ಗೋಪಾಲ‌ಕೃಷ್ಣ

0

Belur Gopalkrishna ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜೋಗ ಜಲಪಾತ ಸುಂದರ ಪ್ರವಾಸಿತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ‌.

183 ಕೋಟಿ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು ಸರ್ಕಾರದಿಂದ 30ಕೋಟಿ ಅನುದಾನ ಬಿಡುಗಡೆಯಾಗಿದ್ದು ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು‌.

ಜೋಗ ಜಲಾಶಯದ ವೀಕ್ಷಣೆ ಆಗಮಿಸುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆ ಮನರಂಜನೆಯನ್ನು ಒದಗಿಸಲು ಹೈದರಾಬಾದ್ ನ ರಾಮೋಜಿ ಸಿಟಿ ಹಾಗೂ ಬಾಂಬೆ ಅಧ್ಯಯನ ಪ್ರವಾಸ ನಡೆಸಲಾಗುವುದು ಎಂದರು.

ಕಳೆದ ವರ್ಷ ಬರಗಾಲದ ಛಾಯಯಲ್ಲಿ ಡ್ಯಾಂ ಭರ್ತಿಯಾಗಿರಲಿಲ್ಲ ಈ ಭಾರಿ ಉತ್ತಮ‌ಮಳೆಯಾಗಿ ಶರಾವತಿ ಜಲಾಶಯದ ಭರ್ತಿಯಾಗಿದೆ‌. 5 ವರ್ಷಗಳ ನಂತರ ಭರ್ತಿಯಾಗಿದ್ದು 3 ಗೇಟ್ ಗಳ ಮೂಲಕ 10 ಸಾವಿರ
50 ಸಾವಿರ ಕ್ಯೂಸೆಸ್ ನೀರು ಬಿಡುಗಡೆಯಾದರೆ 400ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಲಿದೆ ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದು ಹತ್ತು ಸಾವಿರ ಕ್ಯಾಸೆಟ್ ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದರು.

Belur Gopalkrishna ಸಾಗರ ತಾಲೂಕಿನಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು
100 ಕ್ಕೂ ಹೆಚ್ಚು ಮನೆಗಳು ಬಿದ್ದಿದೆ ಈಗಾಗಲೇ ಸರ್ಕಾರ ನಿಯಮದ ಪ್ರಕಾರ‌ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮಳೆಯಿಂದ ಹಾನಿಯಾದ ಮನೆಗಳಿಗೆ 1.5 ಲಕ್ಷ ಪರಿಹಾರ ನೀಡಲಾಗುತ್ತಿದ್ದು 5 ಲಕ್ಷ ಪರಿಹಾರ ನೀಡಲು ಸಂಪುಟದಲ್ಲಿ ನಿರ್ಧಾರ ಮಾಡಲಾಗುವುದು ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು‌.

Department of College Education ಕೌಶಲ್ಯಯುತ ಯುವ ಸಮೂಹದಿಂದ ಬಲಿಷ್ಠ ದೇಶದ ನಿರ್ಮಾಣ ಸಾಧ್ಯ-ಎಚ್.ಎಂ.ಸುರೇಶ್

0

Department of College Education ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್ ಹೇಳಿದರು.

ಹೊಳೆಹೊನ್ನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಮನ್ವಯ ಟ್ರಸ್ಟ್, ವತಿಯಿಂದ ಐಕ್ಯೂಎಸಿ ಉದ್ಯೋಗ ಮತ್ತು ಮಾಹಿತಿ ಕೋಶ, ಕಾಲೇಜು ಶಿಕ್ಷಣ ಇಲಾಖೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ “ಬದುಕಿನ ಅವಕಾಶಗಳು-ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿದರು.

ಭಾರತವು ವಿಶ್ವಗುರು ಆಗುವ ದಿಸೆಯಲ್ಲಿ ಮುನ್ನಡೆಯುತ್ತಿದ್ದು, ಕೌಶಲ್ಯಯುತ ಯುವ ಸಮೂಹದಿಂದ ಸದೃಢ ಹಾಗೂ ಬಲಿಷ್ಠ ದೇಶದ ನಿರ್ಮಾಣ ಸಾಧ್ಯ. ಆದ್ದರಿಂದ ಯುವಜನತೆ ಶಿಕ್ಷಣದ ಜತೆಯಲ್ಲಿ ಕೌಶಲ್ಯ ಕಲಿಕೆಗೂ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಕೇವಲ ಸರ್ಕಾರಿ ಉದ್ಯೋಗಗಳ ಬಗ್ಗೆ ಆಲೋಚನೆ ನಡೆಸದೇ ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಬೇಕು. ಸ್ವಯಂ ಉದ್ಯೋಗವು ಸಹ ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎನ್ನುವುದನ್ನು ಯುವಜನತೆ ಅರಿತುಕೊಳ್ಳಬೇಕು. ಕೃಷಿ ಕ್ಷೇತ್ರದಲ್ಲೂ ಯುವಜನರು ಹೆಚ್ಚು ಸಕ್ರಿಯರಾಗಬೇಕು ಎಂದು ತಿಳಿಸಿದರು.

ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಮಾತನಾಡಿ, ಯುವಜನರು ಸಮಯದ ಮಹತ್ವವನ್ನು ಅರಿತುಕೊಂಡು ಸದುಪಯೋಗಪಡಿಸಿಕೊಳ್ಳಬೇಕು. ಪದವಿ ಹಂತದಲ್ಲಿಯೇ ಗುರಿ ನಿಗಧಿಪಡಿಸಿಕೊಂಡು ಹಂತ ಹಂತವಾಗಿ ಪ್ರಯತ್ನ ಮಾಡಬೇಕು. ಗುರುವಿನ ಮಾರ್ಗದರ್ಶನದಲ್ಲಿ ಸರಿಯಾದ ದಾರಿಯಲ್ಲಿ ಮುನ್ನಡೆದರೆ ಬದುಕಿನಲ್ಲಿ ಯಶಸ್ಸು ನಿಶ್ಚಿತ ಎಂದು ಹೇಳಿದರು.

ಸಮನ್ವಯ ಟ್ರಸ್ಟ್ ನಡಿಗೆ ಗ್ರಾಮೀಣ ವಿದ್ಯಾರ್ಥಿಗಳ ಕಡೆಗೆ ಹಾಗೂ ಸ್ವಾವಲಂಬಿ ಬದುಕಿನ ಸೂತ್ರಗಳು ಆಶಯ ಇಟ್ಟುಕೊಂಡು ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ನೀಡುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Department of College Education ಹೊಳೆಹೊನ್ನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ಆರ್.ಪ್ರತಿಭಾ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕೌಶಲ್ಯ ಕಲಿಕೆಯ ಮಹತ್ವ ತಿಳಿಸುವುದು ಅತ್ಯಂತ ಅವಶ್ಯಕ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೌಶಲ್ಯಯುತರಾಗುವುದರಿಂದ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಲು ಸಾಧ್ಯವಿದೆ. ಸಮನ್ವಯ ಟ್ರಸ್ಟ್ ಕೌಶಲ್ಯ ತರಬೇತಿಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಾಗಾರಕ್ಕೆ ಶಿವಮೊಗ್ಗದ ಕೆ.ಎ.ದಯಾನಂದ್ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಉಚಿತ ವಾಚನಾಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿದ್ದವು. ಗ್ರಂಥಪಾಲಕ ನಾಗರಾಜ ನಾಯ್ಕ್, ಐಕ್ಯೂಎಸಿ ಸಂಚಾಲಕಿ ಡಾ. ಪಿ.ಭಾರತಿದೇವಿ, ಉದ್ಯೋಗ ಮಾಹಿತಿ ಕೋಶ ಸಂಚಾಲಕ ಡಾ. ಎಸ್.ರಾಜುನಾಯ್ಕ್, ಸಮನ್ವಯ ಟ್ರಸ್ಟ್ ಸ್ವಯಂ ಸೇವಕ ಸಂತೋಷ್ ಎನ್.ಶೇಟ್ ಉಪಸ್ಥಿತರಿದ್ದರು.

ಎಸ್‌ಬಿಐ ಹಿರಿಯ ಅಧಿಕಾರಿ ಪುನೀತ್ ಕುಮಾರ್, ರಾಷ್ಟ್ರಪ್ರಶಸ್ತಿ ವಿಜೇತೆ ಸೌಮ್ಯ ಗುರುರಾಜ್, ಕೃಷಿಕ ದುರ್ಗಪ್ಪ ಅಂಗಡಿ, ಗ್ಯಾಲಗರ್ ಎಚ್‌ಆರ್ ಅಧಿಕಾರಿ ಅವಿನಾಶ್ ಮತ್ತಿತರರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು

Rotary Shivamogga ಮಕ್ಕಳಿಗೆ ಬೇಕರಿ ತಿನಿಸು ಚಾಕಲೇಟ್& ಹೊರಗಡೆಯ ಆಹಾರ ಸೇವನೆ ತಪ್ಪಿಸಿ – ಡಾ.ಅಜಯ್ ಬಡ್ಡಿ

0

Rotary Shivamogga ಮಕ್ಕಳಲ್ಲಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ಪೋಷಕರ ಪ್ರಭಾವ ಅತಿ ಮುಖ್ಯವಾಗಿರುತ್ತದೆ. ಹೆಚ್ಚು ತರಕಾರಿ ಸೇವಿಸುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ನೀಗುತ್ತದೆ ಎಂದು ಯುನಿಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮುಖ್ಯ ವೈದ್ಯ ಡಾ. ಅಜಯ್ ಬಡ್ಡಿ ಸೂಚಿಸಿದರು.

ನಗರದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಬಗ್ಗೆ ಅರಿವು ಮೂಡಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಈಗಿನ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಅತಿ ಹೆಚ್ಚು ಕಾಡುತ್ತಿರುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಮುಖ್ಯವಾಗಿ ಪೋಷಕರು ಬೇಕರಿ ತಿನಿಸು ಚಾಕಲೇಟ್ ಹಾಗೂ ಅತಿ ಹೆಚ್ಚು ಹೊರಗೆ ಸಿಗುವ ಆಹಾರಗಳನ್ನು ನೀಡುವುದು ಕಡ್ಡಾಯವಾಗಿ ತಡೆಯಬೇಕು. ಮನೆಯಲ್ಲಿ ತಯಾರಿಸಿದ ಆಹಾರಗಳು ಅತಿ ಹೆಚ್ಚು ತರಕಾರಿಗಳನ್ನು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ನೀಗುವುದರಲ್ಲಿ ಸಹಾಯವಾಗುತ್ತದೆ. ಸಮಯಕ್ಕೆ ಸರಿಯಾಗಿ ವ್ಯಾಕ್ಸಿನೇಷನ್ ಹಾಕಿಸುವುದು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಅತಿ ಹೆಚ್ಚು ಗಮನ ನೀಡುವುದು ಈಗಿನ ಪರಿಸ್ಥಿತಿಯಲ್ಲಿ ಅತಿ ಮುಖ್ಯವಾಗಿರುತ್ತದೆ ಎಂದರು.

ಯಾವಾಗಲೂ ಪೋಷಕರು ಮಕ್ಕಳ ಮುಂದೆ ತಂದೆ ತಾಯಿಯ ಸಂಬಂಧ ಒಳ್ಳೆಯ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳು ಪೋಷಕರನ್ನು ಅವಲಂಬಿಸಿ ಅನುಕರಣೆ ಮಾಡುವುದರಿಂದ ಪೋಷಕರು ಹೇಗೆ ನಯ ವಿನಯದಿಂದ ಮಕ್ಕಳ ಮುಂದೆ ವರ್ತಿಸುತ್ತಾರೋ ಅದೇ ರೀತಿ ಮಕ್ಕಳು ಮುಂದಿನ ದಿನಗಳಲ್ಲಿ ಅನುಸರಿಸುತ್ತಾರೆ. ಹಾಗೆಯೇ ಒಳ್ಳೆಯ ಆಹಾರ ತರಕಾರಿಗಳು ಹಾಗೂ ಅದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್.ಜಿ ಮಾತನಾಡಿ, ಕಾರ್ಯಕ್ರಮಕ್ಕೆ ಪ್ರಖ್ಯಾತ ವೈದ್ಯ ಡಾ. ಅಜಯ್ ಬಡ್ಡಿಯವರು ಆಗಮಿಸಿ ನಮಗೆಲ್ಲ ಮಕ್ಕಳ ಬೆಳವಣಿಗೆಗೆ ಅತಿ ಮುಖ್ಯವಾದ ಅಂಶಗಳು ಹಾಗೂ ಪೋಷಕರ ಪಾತ್ರದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದ ಅವರಿಗೆ ಧನ್ಯವಾದಗಳು ಎಂದರು.

Rotary Shivamogga ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಈಶ್ವರ್.ಬಿ.ವಿ,
ಜೋನಲ್ ಲೆಫ್ಟಿನೆಂಟ್ ಮಂಜುನಾಥ್ ಕದಂ,
ಪಿಡಿಜೆ ಜಿ.ಎನ್.ಪ್ರಕಾಶ್, ಮಾಜಿ ಅಸಿಸ್ಟೆಂಟ್ ಗವರ್ನರ್ ರವಿ ಕೊಠೋಜಿ, ಜಗದೀಶ್, ಚಂದ್ರು, ಬಲರಾಮ್, ಬಸವರಾಜ್ ಆನ್ಸ್ ಕ್ಲಬ್ ಅಧ್ಯಕ್ಷರಾದ
ಗೀತಾ ಜಗದೀಶ್, ಶುಭ ಚಿದಾನಂದ ಹಾಗೂ ರೋಟರಿ ಮತ್ತು ಆನ್ಸ್ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.

Central Military Commission ಡಿಫೆನ್ಸ್ ಕೋಟಾದಡಿ ಅರ್ಹ ವಿದ್ಯಾರ್ಥಿಗಳ ವೈದ್ಯಕೀಯ ವ್ಯಾಸಂಗಕ್ಕೆ ಅರ್ಜಿ ಸ್ವೀಕಾರ ದಿನಾಂಕ ಮುಂದೂಡಿಕೆ

0

Central Military Commission 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗ ಮಾಡಲು ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಜುಲೈ 20 ರವರೆಗೆ ನಿಗದಿಪಡಿಸಲಾಗಿದ್ದ ಅರ್ಜಿ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ) ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲತಾಣದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು 2024 ರ ಜುಲೈ 09 ರೊಳಗಾಗಿ ಸಲ್ಲಿಸಲು ಅವಧಿ ನಿಗದಿಪಡಿಸಲಾಗಿತ್ತು.

ಇದೀಗ ಈ ಸಮಯವನ್ನು
ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.
ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ.

Central Military Commission ಹಾಗೂ ಹೆಚ್ಚಿನ ಮಾಹಿತಿಗಾಗಿ
ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.