Tuesday, April 7, 2026
Tuesday, April 7, 2026
Home Blog Page 624

Department of College Education ಕೌಶಲ್ಯಯುತ ಯುವ ಸಮೂಹದಿಂದ ಬಲಿಷ್ಠ ದೇಶದ ನಿರ್ಮಾಣ ಸಾಧ್ಯ-ಎಚ್.ಎಂ.ಸುರೇಶ್

0

Department of College Education ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್ ಹೇಳಿದರು.

ಹೊಳೆಹೊನ್ನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಮನ್ವಯ ಟ್ರಸ್ಟ್, ವತಿಯಿಂದ ಐಕ್ಯೂಎಸಿ ಉದ್ಯೋಗ ಮತ್ತು ಮಾಹಿತಿ ಕೋಶ, ಕಾಲೇಜು ಶಿಕ್ಷಣ ಇಲಾಖೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ “ಬದುಕಿನ ಅವಕಾಶಗಳು-ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿದರು.

ಭಾರತವು ವಿಶ್ವಗುರು ಆಗುವ ದಿಸೆಯಲ್ಲಿ ಮುನ್ನಡೆಯುತ್ತಿದ್ದು, ಕೌಶಲ್ಯಯುತ ಯುವ ಸಮೂಹದಿಂದ ಸದೃಢ ಹಾಗೂ ಬಲಿಷ್ಠ ದೇಶದ ನಿರ್ಮಾಣ ಸಾಧ್ಯ. ಆದ್ದರಿಂದ ಯುವಜನತೆ ಶಿಕ್ಷಣದ ಜತೆಯಲ್ಲಿ ಕೌಶಲ್ಯ ಕಲಿಕೆಗೂ ಪ್ರಾಮುಖ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಕೇವಲ ಸರ್ಕಾರಿ ಉದ್ಯೋಗಗಳ ಬಗ್ಗೆ ಆಲೋಚನೆ ನಡೆಸದೇ ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಬೇಕು. ಸ್ವಯಂ ಉದ್ಯೋಗವು ಸಹ ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎನ್ನುವುದನ್ನು ಯುವಜನತೆ ಅರಿತುಕೊಳ್ಳಬೇಕು. ಕೃಷಿ ಕ್ಷೇತ್ರದಲ್ಲೂ ಯುವಜನರು ಹೆಚ್ಚು ಸಕ್ರಿಯರಾಗಬೇಕು ಎಂದು ತಿಳಿಸಿದರು.

ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಮಾತನಾಡಿ, ಯುವಜನರು ಸಮಯದ ಮಹತ್ವವನ್ನು ಅರಿತುಕೊಂಡು ಸದುಪಯೋಗಪಡಿಸಿಕೊಳ್ಳಬೇಕು. ಪದವಿ ಹಂತದಲ್ಲಿಯೇ ಗುರಿ ನಿಗಧಿಪಡಿಸಿಕೊಂಡು ಹಂತ ಹಂತವಾಗಿ ಪ್ರಯತ್ನ ಮಾಡಬೇಕು. ಗುರುವಿನ ಮಾರ್ಗದರ್ಶನದಲ್ಲಿ ಸರಿಯಾದ ದಾರಿಯಲ್ಲಿ ಮುನ್ನಡೆದರೆ ಬದುಕಿನಲ್ಲಿ ಯಶಸ್ಸು ನಿಶ್ಚಿತ ಎಂದು ಹೇಳಿದರು.

ಸಮನ್ವಯ ಟ್ರಸ್ಟ್ ನಡಿಗೆ ಗ್ರಾಮೀಣ ವಿದ್ಯಾರ್ಥಿಗಳ ಕಡೆಗೆ ಹಾಗೂ ಸ್ವಾವಲಂಬಿ ಬದುಕಿನ ಸೂತ್ರಗಳು ಆಶಯ ಇಟ್ಟುಕೊಂಡು ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ನೀಡುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Department of College Education ಹೊಳೆಹೊನ್ನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ಆರ್.ಪ್ರತಿಭಾ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕೌಶಲ್ಯ ಕಲಿಕೆಯ ಮಹತ್ವ ತಿಳಿಸುವುದು ಅತ್ಯಂತ ಅವಶ್ಯಕ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೌಶಲ್ಯಯುತರಾಗುವುದರಿಂದ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಲು ಸಾಧ್ಯವಿದೆ. ಸಮನ್ವಯ ಟ್ರಸ್ಟ್ ಕೌಶಲ್ಯ ತರಬೇತಿಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಾಗಾರಕ್ಕೆ ಶಿವಮೊಗ್ಗದ ಕೆ.ಎ.ದಯಾನಂದ್ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಉಚಿತ ವಾಚನಾಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿದ್ದವು. ಗ್ರಂಥಪಾಲಕ ನಾಗರಾಜ ನಾಯ್ಕ್, ಐಕ್ಯೂಎಸಿ ಸಂಚಾಲಕಿ ಡಾ. ಪಿ.ಭಾರತಿದೇವಿ, ಉದ್ಯೋಗ ಮಾಹಿತಿ ಕೋಶ ಸಂಚಾಲಕ ಡಾ. ಎಸ್.ರಾಜುನಾಯ್ಕ್, ಸಮನ್ವಯ ಟ್ರಸ್ಟ್ ಸ್ವಯಂ ಸೇವಕ ಸಂತೋಷ್ ಎನ್.ಶೇಟ್ ಉಪಸ್ಥಿತರಿದ್ದರು.

ಎಸ್‌ಬಿಐ ಹಿರಿಯ ಅಧಿಕಾರಿ ಪುನೀತ್ ಕುಮಾರ್, ರಾಷ್ಟ್ರಪ್ರಶಸ್ತಿ ವಿಜೇತೆ ಸೌಮ್ಯ ಗುರುರಾಜ್, ಕೃಷಿಕ ದುರ್ಗಪ್ಪ ಅಂಗಡಿ, ಗ್ಯಾಲಗರ್ ಎಚ್‌ಆರ್ ಅಧಿಕಾರಿ ಅವಿನಾಶ್ ಮತ್ತಿತರರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು

Rotary Shivamogga ಮಕ್ಕಳಿಗೆ ಬೇಕರಿ ತಿನಿಸು ಚಾಕಲೇಟ್& ಹೊರಗಡೆಯ ಆಹಾರ ಸೇವನೆ ತಪ್ಪಿಸಿ – ಡಾ.ಅಜಯ್ ಬಡ್ಡಿ

0

Rotary Shivamogga ಮಕ್ಕಳಲ್ಲಿ ವ್ಯಕ್ತಿತ್ವ ಬೆಳವಣಿಗೆಯ ಮೇಲೆ ಪೋಷಕರ ಪ್ರಭಾವ ಅತಿ ಮುಖ್ಯವಾಗಿರುತ್ತದೆ. ಹೆಚ್ಚು ತರಕಾರಿ ಸೇವಿಸುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ನೀಗುತ್ತದೆ ಎಂದು ಯುನಿಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಮುಖ್ಯ ವೈದ್ಯ ಡಾ. ಅಜಯ್ ಬಡ್ಡಿ ಸೂಚಿಸಿದರು.

ನಗರದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಬಗ್ಗೆ ಅರಿವು ಮೂಡಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಈಗಿನ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಅತಿ ಹೆಚ್ಚು ಕಾಡುತ್ತಿರುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಮುಖ್ಯವಾಗಿ ಪೋಷಕರು ಬೇಕರಿ ತಿನಿಸು ಚಾಕಲೇಟ್ ಹಾಗೂ ಅತಿ ಹೆಚ್ಚು ಹೊರಗೆ ಸಿಗುವ ಆಹಾರಗಳನ್ನು ನೀಡುವುದು ಕಡ್ಡಾಯವಾಗಿ ತಡೆಯಬೇಕು. ಮನೆಯಲ್ಲಿ ತಯಾರಿಸಿದ ಆಹಾರಗಳು ಅತಿ ಹೆಚ್ಚು ತರಕಾರಿಗಳನ್ನು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ನೀಗುವುದರಲ್ಲಿ ಸಹಾಯವಾಗುತ್ತದೆ. ಸಮಯಕ್ಕೆ ಸರಿಯಾಗಿ ವ್ಯಾಕ್ಸಿನೇಷನ್ ಹಾಕಿಸುವುದು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಅತಿ ಹೆಚ್ಚು ಗಮನ ನೀಡುವುದು ಈಗಿನ ಪರಿಸ್ಥಿತಿಯಲ್ಲಿ ಅತಿ ಮುಖ್ಯವಾಗಿರುತ್ತದೆ ಎಂದರು.

ಯಾವಾಗಲೂ ಪೋಷಕರು ಮಕ್ಕಳ ಮುಂದೆ ತಂದೆ ತಾಯಿಯ ಸಂಬಂಧ ಒಳ್ಳೆಯ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳು ಪೋಷಕರನ್ನು ಅವಲಂಬಿಸಿ ಅನುಕರಣೆ ಮಾಡುವುದರಿಂದ ಪೋಷಕರು ಹೇಗೆ ನಯ ವಿನಯದಿಂದ ಮಕ್ಕಳ ಮುಂದೆ ವರ್ತಿಸುತ್ತಾರೋ ಅದೇ ರೀತಿ ಮಕ್ಕಳು ಮುಂದಿನ ದಿನಗಳಲ್ಲಿ ಅನುಸರಿಸುತ್ತಾರೆ. ಹಾಗೆಯೇ ಒಳ್ಳೆಯ ಆಹಾರ ತರಕಾರಿಗಳು ಹಾಗೂ ಅದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್.ಜಿ ಮಾತನಾಡಿ, ಕಾರ್ಯಕ್ರಮಕ್ಕೆ ಪ್ರಖ್ಯಾತ ವೈದ್ಯ ಡಾ. ಅಜಯ್ ಬಡ್ಡಿಯವರು ಆಗಮಿಸಿ ನಮಗೆಲ್ಲ ಮಕ್ಕಳ ಬೆಳವಣಿಗೆಗೆ ಅತಿ ಮುಖ್ಯವಾದ ಅಂಶಗಳು ಹಾಗೂ ಪೋಷಕರ ಪಾತ್ರದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದ ಅವರಿಗೆ ಧನ್ಯವಾದಗಳು ಎಂದರು.

Rotary Shivamogga ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಈಶ್ವರ್.ಬಿ.ವಿ,
ಜೋನಲ್ ಲೆಫ್ಟಿನೆಂಟ್ ಮಂಜುನಾಥ್ ಕದಂ,
ಪಿಡಿಜೆ ಜಿ.ಎನ್.ಪ್ರಕಾಶ್, ಮಾಜಿ ಅಸಿಸ್ಟೆಂಟ್ ಗವರ್ನರ್ ರವಿ ಕೊಠೋಜಿ, ಜಗದೀಶ್, ಚಂದ್ರು, ಬಲರಾಮ್, ಬಸವರಾಜ್ ಆನ್ಸ್ ಕ್ಲಬ್ ಅಧ್ಯಕ್ಷರಾದ
ಗೀತಾ ಜಗದೀಶ್, ಶುಭ ಚಿದಾನಂದ ಹಾಗೂ ರೋಟರಿ ಮತ್ತು ಆನ್ಸ್ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.

Central Military Commission ಡಿಫೆನ್ಸ್ ಕೋಟಾದಡಿ ಅರ್ಹ ವಿದ್ಯಾರ್ಥಿಗಳ ವೈದ್ಯಕೀಯ ವ್ಯಾಸಂಗಕ್ಕೆ ಅರ್ಜಿ ಸ್ವೀಕಾರ ದಿನಾಂಕ ಮುಂದೂಡಿಕೆ

0

Central Military Commission 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗ ಮಾಡಲು ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಜುಲೈ 20 ರವರೆಗೆ ನಿಗದಿಪಡಿಸಲಾಗಿದ್ದ ಅರ್ಜಿ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿಯಲ್ಲಿ ಆದ್ಯತೆಯ ಮೇರೆಗೆ ಸೀಟು ಹಂಚಿಕೆ ಲಭ್ಯವಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ) ಯಲ್ಲಿ ಅರ್ಹತೆಯನ್ನು ಪಡೆದಿರುವ ವಿದ್ಯಾರ್ಥಿಗಳು ಕೇಂದ್ರೀಯ ಸೈನಿಕ ಮಂಡಳಿ ಜಾಲತಾಣದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು 2024 ರ ಜುಲೈ 09 ರೊಳಗಾಗಿ ಸಲ್ಲಿಸಲು ಅವಧಿ ನಿಗದಿಪಡಿಸಲಾಗಿತ್ತು.

ಇದೀಗ ಈ ಸಮಯವನ್ನು
ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.
ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ.

Central Military Commission ಹಾಗೂ ಹೆಚ್ಚಿನ ಮಾಹಿತಿಗಾಗಿ
ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.

B.Y. Raghavendra ಕೊಲ್ಲೂರು ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಬೈಂದೂರಿನಲ್ಲಿ ಏರ್ ಪೋರ್ಟ್ ಸೌಲಭ್ಯಕ್ಕೆ ಸಂಸದ ರಾಘವೇಂದ್ರ ಮನವಿ

0

B.Y. Raghavendra ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಇಂದು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

B.Y. Raghavendra ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಅದಕ್ಕೋಸ್ಕರ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದರು

ಮನವಿಯ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಸಂಸದಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

Tunga River ತುಂಬಿದ ತುಂಗಾ: ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಗಳಿಗೆ ರಾಜಾ ಕಾಲುವೆ ನೀರಿನಿಂದ ಪರದಾಟ

0

Tunga River ಶಿವಮೊಗ್ಗ ನಗರದೊಳಕ್ಕೆ ತುಂಗಾ ನದಿಯು ಅಪಾಯಮಟ್ಟದಲ್ಲಿ ಹರಿಯುತ್ತಿರುವುದರಿಂದ ರಾಜಕಾಲುವೆ ನೀರಿನಿಂದ ಡ್ರೈನೇಜ್ ನೀರು ವಾಪಾಸ್ ಹೊಡೆಯುತ್ತಿದೆ. ಪರಿಣಾಮ ಇಮಾಮ್ ಬಾಡಾ ನಿವಾಸಿಗಳು ಪರದಾಡುವಂತಾಗಿದೆ.

ಇಮಾಮ್ ಬಾಡಾ ರಸ್ತೆಯ ಮಗ್ಗಲಿಗೆ ಇರುವ ಕರಿರಾಯ ಕೆಂಚರಾಯ ದೇವಸ್ಥಾನದ ಗರ್ಭಗುಡಿಯು ಒಳಗೆ ಡ್ರೈನೇಜ್ ನೀರು ಹರಿಯುತ್ತಿದೆ. ದೇವರಿಗೆ ಡ್ರೈನೇಜ್ ನೀರು ಸುತ್ತು ಆವರಿಸಿಕೊಂಡಿದೆ.
ಇದರ ಹಿಂಭಾಗದಲ್ಲಿರುವ ತಿರುಮಲ ಪ್ಲೇವುಡ್ ಸ್ಟೋರ್ ಡ್ರೈನೇಜ್ ನೀರಿನಿಂದ ಜಲಾವೃತಗೊಂಡಿದೆ. ನೀರು ದರ್ವಾಸನೆ ಹೊಡೆಯುತ್ತಿದೆ. ಈ ಕುರಿತು ಮಾತನಾಡಿರುವ ಮಾಲೀಕ ವಿಠಲ ಪ್ರತಿ ಮಳೆಗಾಲದಲ್ಲಿ ನದಿ ಅಪಾಯ ಮಟ್ಟದಲ್ಲಿ ಹರಿದರೆ ಡ್ರೈನೇಜ್ ನೀರು ವಾಪಾಸ್ ಹೊಡೆಯುತ್ತದೆ.

Tunga River ನಾಲ್ಕೈದು ದಿನದ ಹಿಂದೆ ನೀರು ಬಂದಿತ್ತು. ಆಗಲೂ ಪ್ರೇವುಡ್ ಕರ್ ಮೋಟಾರ್ ಗಳು ಸುಟ್ಟು ವೈಂಡಿಂಗ್ ಮಾಡಿಸಲಾಗಿತ್ತು. ಈಗ ಮತ್ತೆ ಈ ಪರಿಸ್ಥಿತಿ ನಿರ್ಮಾಣವಾಗಿದೆ ಒಂದು ಲಕ್ಷ ರೂ. ಪ್ಲೇವುಡ್ ಮತ್ತು ಮೋಟಾರು ಹಾಳಾಗಿದೆ.‌
ಸಧ್ಯಕ್ಕೆ ನದಿಯ ಒಳಹರಿವು ಇಳಿಮುಖವಾಗಿದೆ. ಸ್ಮಾರ್ಟ್ ಸಿಟಿಯ ಕಾಮಗಾರಿಯಿಂದ ರಾಜಕಾಲುವೆಯ ಬಳಿ ಇರುವ ಕುಡಿಯುವ ನೀರಿನ ಪೈಪ್ ಲೈನು ಸಹ ಜಲಾವೃತಗೊಂಡಿದೆ. ಸಧ್ಯಕ್ಕೆ ಪಾಲಿಮೆ ಬ್ಲೀಚಿಂಗ್ ಪೌಡರ್ ಹಾಕಿ ಹೋಗಿದ್ದಾರೆ.
ಈ ಕುರಿತು ಪಾಲಿಕೆ ಮಾಜಿ ಕಾರ್ಪೊರೇಟ್ ರ್ ಜಿಲಾನ್ ಮಾತನಾಡಿ, ಇಮಾಮ್ ಬಾಡಾ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಮನೆ ಬಿದ್ದವರಿಗೆ ಈ ಹಿಂದೆ ಬಿಜೆಪಿ ಸರ್ಕಾರ ನೀಡುತ್ತಿದ್ದ ಐದು ಲಕ್ಷ ರೂ ಪರಿಹಾರ ಮತ್ತು ಭಾಗಶಃ ಮನೆಗಳಿಗೆ 1.20 ಸಾವಿರ ಕೊಡಬೇಕು. ಡ್ರೈನೇಜ್ ನೀರು ಸರಿಪಡಿಸಬೇಕೆಂದಿದ್ದಾರೆ.

Youth Inspiration Academy Chikkamagaluru ಮಕ್ಕಳಲ್ಲಿ ಕಾನೂನಿನ ಸೂಕ್ತ ಅರಿವು ಮೂಡಿಸಿದರೆ ಭವಿಷ್ಯದಲ್ಲಿ ಅಪರಾಧಗಳು ಕಡಿಮೆಯಾಗಲು ಸಾಧ್ಯ- ನ್ಯಾ.ಎಚ್.ಪಿ.ಸಂದೇಶ್

0

Youth Inspiration Academy Chikkamagaluru ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ ಹಾಗೂ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂವಾದದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಹೆಚ್.ಪಿ.ಸಂದೇಶ್ ರವರು ಮಾತನಾಡಿ “ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಠಿಣ ಪರಿಶ್ರಮ ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಕಾನೂನಿನ ಸೂಕ್ತ ಅರಿವು ಮೂಡಿಸಿದಲ್ಲಿ ಅವರು ಭವಿಷ್ಯದಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ತಡೆಯಬಹುದು. ಇದರಿಂದ ಆರೋಗ್ಯಕರ ಸಮಾಜದ ನಿರ್ಮಾಣ ಸಾಧ್ಯ” ಎಂದು ಹೇಳಿದರು.

“ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವಪೂರ್ಣವಾದುದು. ಪೂರ್ವ ಸಿದ್ಧತೆಯೊಂದಿಗೆ ಆತ್ಮವಿಶ್ವಾಸದಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕು. ಉತ್ತಮ ವಿದ್ಯಾಭ್ಯಾಸ ಪಡೆಯುವ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಸಲಹೆ, ಮಾರ್ಗದರ್ಶನ ಅಗತ್ಯ” ಎಂದು ತಿಳಿಸಿದರು.

ಇದರೊಂದಿಗೆ “ಕೃಷಿ ದೇಶದ ಬೆನ್ನೆಲುಬು ಹೀಗಾಗಿ ವಿದ್ಯಾರ್ಥಿಗಳು ಕೃಷಿ ಕ್ಷೇತ್ರದತ್ತ ಹೆಚ್ಚು ಒಲವು ಬೆಳೆಸಿಕೊಳ್ಳಬೇಕು. ಈ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಗಳ ಮೂಲಕ ಆರ್ಥಿಕ ಸದೃಢತೆಗೆ ಶ್ರಮಿಸಬೇಕು” ಎಂದು ಕೃಷಿ ಕ್ಷೇತ್ರದ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿಶೇಷವಾಗಿ ಕಾರ್ಯಕ್ರಮದ ಆಯೋಜಕರಾದ ಚಿಕ್ಕಮಗಳೂರಿನ ಯುವಸ್ಫೂರ್ತಿ ಅಕಾಡೆಮಿಯ ಸಂಸ್ಥಾಪಕರಾದ ಸಿ.ಬಿ.ಸುಂದರೇಶ್ ರವರು ಕರ್ನಾಟಕದ 22 ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ವ್ಯಕ್ತಿತ್ವ ವಿಕಸನದ ತರಬೇತಿ ಹಾಗೂ ಪರೀಕ್ಷಾ ತರಬೇತಿಯ ಜೊತೆಗೆ ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮಗಳನ್ನು ಗಮನಿಸಿ ಶ್ಲಾಘನೆ ವ್ಯಕ್ತಪಡಿಸಿದರು.

Youth Inspiration Academy Chikkamagaluru ಯುವಸ್ಪೂರ್ತಿ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಸುಂದರೇಶ್.ಸಿ.ಬಿಯವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ “ಯುವ ಜನತೆ ಸದೃಢ ದೇಶದ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು” ಎಂದರು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿಯವರು ಆಶೀರ್ವಚನ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಲೋಕಪ್ಪ.ವಿ.ದಳವಾಯಿಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ನಿರ್ದೇಶಕ ಹೆಚ್.ಎನ್.ಜನಾರ್ಧನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಲ್ಲೇಶಪ್ಪ, ಯುವ ಸ್ಫೂರ್ತಿ ಅಕಾಡೆಮಿಯ ಕಾನೂನು ಸಲಹೆಗಾರರಾದ ಗಿರೀಶ್ ಹುಣಸೂಡು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಗರದ ರಾಮಕೃಷ್ಣ ವಿದ್ಯಾಲಯದ ಯೋಗಪಟು ಕು.ಪ್ರಜ್ಞಾ.ಕೆ.ಎ ಯವರಿಂದ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಹೂವಪ್ಪ.ಸಿ.ಹೆಚ್ ರವರು ಸ್ವಾಗತಿಸಿ, ಮುರಳಿ.ಎಸ್.ಡಿಯವರು ನಿರೂಪಿಸಿ, ರಸಾಯನಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಸುಶ್ಮಿತಾರವರು ವಂದಿಸಿದರು.

Malnad Areca Marketing Co-operative Society Limited ಮ್ಯಾಮ್ಕೋಸ್ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0

Malnad Areca Marketing Co-operative Society Limited ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪಾರಿತೋಷಕವನ್ನು ನೀಡುತ್ತಿದ್ದು, ಕೆಳಕಂಡ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಗೆ ವಿದ್ಯಾರ್ಥಿಗಳಿಗೆ ಬೆಳ್ಳಿ ಹಬ್ಬದ ಪಾರಿತೋಷಕ ಹಾಗೂ ಪದವಿ ಬಿ.ಎ., ಬಿ.ಎಸ್ಸಿ., ಬಿ.ಕಾಂ., ಅಥವಾ ಬಿ.ಬಿ.ಎಂ., ಅಥವಾ ಬಿ.ಸಿ.ಎ., ಬಿ.ಎಸ್ಸಿ(ಕೃಷಿ ಅಥವಾ ತೋಟಗಾರಿಕೆ), ಬಿ.ವಿ.ಎಸ್ಸಿ.,/ಬಿ.ಎಫ್.ಎಸ್.ಸಿ.,/ಬಿ.ಟೆಕ್ ಡೈರಿ.,/ ಎಂ.ಬಿ.ಬಿ.ಎಸ್.,/ ಬಿ.ಯು.ಎಂ.ಎಸ್.,/ ಬಿ.ಹೆಚ್.ಎಂ.ಎಸ್.,/ ಬಿ.ಎ.ಎಂ.ಎಸ್.,/ ಬಿ.ಎಸ್.ಎಂ.ಎಸ್.,/ ಬಿ.ಎನ್.ವೈ.ಎಸ್./ ಬಿ.ಡಿ.ಎಸ್.,/ ಬಿ.ಪಿ.ಟಿ.,/ ಬಿ.ಫಾರ್ಮ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣ ಮಹೋತ್ಸವದ ಪಾರಿತೋಷಕವನ್ನು ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ., (ಸಂಸ್ಕೃತ Malnad Areca Marketing Co-operative Society Limited ಅಥವಾ ಯಾವುದೇ ವಿಷಯ), ಎಂ.ಕಾಂ., ಅಥವಾ ಎಂ.ಸಿ.ಎ.,/ ಎಂ.ಎಸ್ಸಿ.,/ ಎಂ.ಬಿ.ಎ.,/ ಎಂ.ಟೆಕ್., ಅಥವಾ ಎಂ.ಇ.,/ ಎಂ.ಫಾರ್ಮ/ ಸಿ.ಎ.,/ ಇಂಜಿನಿಯರಿಂಗ್ ಪದವಿಗಳಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಜ್ರ ಮಹೋತ್ಸವ ಪಾರಿತೋಷಕವನ್ನು ಹಾಗೆಯೇ ರಾಜ್ಯ ಮಟ್ಟ, ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪುರಸ್ಕಾರ ಪಡೆದ ಸದಸ್ಯರ ಮಕ್ಕಳಿಗೆ ಪಾರಿತೋಷಕವನ್ನು ಮಾಮ್‌ಕೋಸ್ ವತಿಯಿಂದ ನೀಡಲು ತೀರ್ಮಾನಿಸಿದ್ದು, ಅದರಂತೆ ಸದಸ್ಯರು ಸೆಪ್ಟಂಬರ್ 30 ರೊಳಗಾಗಿ ಅರ್ಜಿ ಮತ್ತು ಅಂಕಪಟ್ಟಿಯ ನಕಲನ್ನು ಸಂಘದ ಶಾಖೆಗಳಿಗೆ ಅಥವಾ ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಮಾಮ್‌ಕೋಸ್‌ನ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga Karnataka Lokayukta ಸಾಗರದ ಆರ್ ಟಿ ಓ ಕಚೇರಿಗೆ ‘ಲೋಕಾ’ ಪೊಲೀಸ್ ದಿಢೀರ್ ಭೇಟಿ. ನ್ಯೂನತೆಗಳ ಪರಿಶೀಲನೆ

0

Shivamogga Karnataka Lokayukta ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.
ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, Shivamogga Karnataka Lokayukta ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿAಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂಧ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

Vishvesvaraya Jala Nigam Ltd ಭದ್ರಾ ನೀರುಬಿಡುಗಡೆ ಮೇಲ್ದಂಡೆ ಕಾಲುವೆಯ ಪ್ರದೇಶಗಳ ಜನರಿಗೆ ಮುಂಜಾಗ್ರತೆಗೆ ಸೂಚನೆ

0

Vishvesvaraya Jala Nigam Ltd ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಯ ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ದಿ: 31-07-2024 ರಿಂದ ಶಾಂತಿಪುರ ಪಂಪ್‌ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್‌ಹೌಸ್-2 ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ ಹೆಬ್ಬೂರು, ಕಾಟಿನಗೆರೆ, ಬೆಣಕುಣಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್.ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಮರ ಗ್ರಾಮಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗಿದೆ.
Vishvesvaraya Jala Nigam Ltd ಆದ್ದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ನಿಷೇಧಿಸಲಾಗಿದೆ.
ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರಬಾಗಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಸುಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Bhadra Dam ಭದ್ರಾವತಿಯಲ್ಲಿ ಉಕ್ಕಿ ಹರಿದ ಭದ್ರೆ ಹಲವೆಡೆ ಅಭದ್ರ ಪರಿಸ್ಥಿತಿ ಕಾಳಜಿ ಕೇಂದ್ರಕ್ಕೆ ಚಾಲನೆ

0

Bhadra Dam ಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಸಂಪೂರ್ಣ ಮುಳುಗಡೆಯಾದ ಬೆನ್ನಲ್ಲೇ ನಗರದ ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಸೃಷ್ಠಿಯಾಗಿದೆ.
ಸುಮಾರು 30 ಸಾವಿರ ಕ್ಯೂಸೆಕ್ ನಷ್ಟು ನೀರು ನದಿಗೆ ಹರಿಸಿರುವ ಪರಿಣಾಮ ನಗರ ವ್ಯಾಪ್ತಿಯಲ್ಲಿ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಮೇಲ್ಬಾಗದಲ್ಲಿ ಸುಮಾರು ೨ ಅಡಿಗೂ ಎತ್ತರದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಬಿಎಚ್ ರಸ್ತೆಯಲ್ಲಿ ನೀರು ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನೀರು ಬಿಎಚ್ ರಸ್ತೆಗೂ ಸಹ ನುಗ್ಗಿದೆ. ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಜನವಸತಿ ಪ್ರದೇಶಗಳನ್ನು ದಾಟಿ ಬಿಎಚ್ ರಸ್ತೆಯಲ್ಲೂ ಸಹ ನೀರು ನಿಂತಿದೆ. ಹೀಗಾಗಿ, ವಾಹನ ಸವಾರರು ಹಾಗೂ ಪಾದಾಚಾರಿಗಳ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
Bhadra Dam ಹಲವು ಪ್ರದೇಶಗಳಲ್ಲಿ ಪ್ರವಾಹ ಭೀತಿ ಇನ್ನು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನಿನ್ನೆ ರಾತ್ರಿಯಿಂದಲೇ ನಗರದ ಅಂಬೇಡ್ಕರ್ ನಗರ, ಯಕೀನ್ಷಾ ಕಾಲೋನಿ, ಚಾಮೇಗೌಡ ಲೈನ್, ಗುಂಡೂರಾವ್ ಶೆಡ್, ಗೌಳಿಗರ ಬೀದಿ ಸೇರಿದಂತೆ ನದಿಯಂಚಿನ ತಗ್ಗು ಪ್ರದೇಶಗಳಿಗೆ ಹಾಗೂ ಕವಲಗುಂದಿ ಪ್ರದೇಶದ ಸುಮಾರು ೩೦ ಮನೆಗಳಿಗೆ ನೀರು ನುಗ್ಗಿದೆ.
ಪ್ರವಾಹ ಭೀತಿ ಹಾಗೂ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರದೇಶದ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದ್ದು, ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ ವಾಹನ ದಟ್ಟಣೆ ಹೊಸ ಸೇತುವೆ ಮುಳುಗಡೆಗೊಂಡಿರುವ
ಬೆನ್ನಲ್ಲೇ ಅಂಡರ್ ಬ್ರಿಡ್ಜ್ ಬಳಿಯ ಬಿಎಚ್ ರಸ್ತೆಯಲ್ಲೂ ಸಹ ನೀರು ತುಂಬಿಕೊಂಡಿದೆ. ಒಂದು ಸೇತುವೆ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಹಳೆ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಾಗಿದೆ. ಬಿಎಚ್ ರಸ್ತೆಯ ಪೆಟ್ರೋಲ್ ಬಂಕ್ ಎದುರಿನಲ್ಲೂ ಸಹ ನೀರು ತುಂಬಿಕೊಂಡಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.