Gruhalakshmi Yojana ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹರಡುತ್ತಿರುವುದೆಲ್ಲಾ ಸುಳ್ಳು ಸುದ್ದಿ ಹಾಗೂ ಅಪಪ್ರಚಾರವಾಗಿದ್ದು, ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದು ಅವರು ಮನವಿ ಮಾಡಿದ್ದಾರೆ.
ಯೋಜನೆಯ ಹಣ ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಮತ್ತು ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸಲು ಸರ್ಕಾರ ಈಗ ಪರಿಶೀಲನಾ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆ. ಜಿಲ್ಲೆಯಲ್ಲಿ ನಡೆಸಿರುವ ಪ್ರಾಥಮಿಕ ಪರಿಶೀಲನೆಯಲ್ಲಿ ಕೆಲವು ಮುಖ್ಯ ಅಂಶಗಳು ಬೆಳಕಿಗೆ ಬಂದಿವೆ:
ಮೃತರ ಹೆಸರಿನಲ್ಲಿ ಹಣ ಬಿಡುಗಡೆ: ಶಿವಮೊಗ್ಗ ಜಿಲ್ಲೆಯಲ್ಲಿ 388029 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದ ಸುಮಾರು 8,114ಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಾಗುತ್ತಿರುವುದು ಕಂಡುಬಂದಿದೆ.
ತೆರಿಗೆ ಪಾವತಿದಾರರು: ಯೋಜನೆಯ ನಿಯಮಾವಳಿಗಳಿಗೆ ವಿರುದ್ಧವಾಗಿ ತೆರಿಗೆ ಪಾವತಿದಾರರೂ ಈ ಯೋಜನೆಯ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ.
Gruhalakshmi Yojana ಈ ರೀತಿಯ ದುರ್ಬಳಕೆಯನ್ನು ತಡೆದು, ಫಲಾನುಭವಿಗಳ ಪಟ್ಟಿಯನ್ನು ಕೇವಲ ‘ಪರಿಷ್ಕರಣೆ’ (ಅರ್ಹರನ್ನಷ್ಟೇ ಉಳಿಸಿಕೊಳ್ಳುವುದು) ಮಾಡಲಾಗುತ್ತಿದೆಯೇ ಹೊರತು, ಯೋಜನೆಯನ್ನು ಸ್ಥಗಿತಗೊಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಂಕಿ-ಅಂಶಗಳು:
ಒಟ್ಟು ಫಲಾನುಭವಿಗಳು: ಶಿವಮೊಗ್ಗ ಜಿಲ್ಲೆಯೊಂದರಲ್ಲೇ 3,88,029 ಮಹಿಳೆಯರು ಪ್ರತಿ ತಿಂಗಳು 2,000 ರೂ.ಗಳ ಆರ್ಥಿಕ ನೆರವು ಪಡೆಯುತ್ತಿದ್ದಾರೆ.
ಇಲ್ಲಿಯವರೆಗಿನ ನೆರವು: ಯೋಜನೆ ಆರಂಭವಾದ ದಿನದಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣ ಪಾವತಿಯಾಗಿದ್ದು, ಪ್ರತಿ ಫಲಾನುಭವಿ ಮಹಿಳೆಗೆ ತಲಾ 60,000 ರೂ. ತಲುಪಿದೆ.
ಯೋಜನೆಯಲ್ಲಿ ನೈಜತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ದುರ್ಬಳಕೆ ತಡೆಯಲು ಈ ಕೆಳಗಿನ ಕ್ರಮಗಳನ್ನು ಜಾರಿಗೆ ತರಲು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮುಂದಾಗಿದ್ದು ಈ ನಿಟ್ಟಿನಲ್ಲಿ
ಫಲಾನುಭವಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿಗೊಳಿಸುವುದು ಹಾಗೂ
ಪ್ರತಿ ವರ್ಷ ಗೃಹಲಕ್ಷ್ಮಿ ಫಲಾನುಭವಿಗಳಿಂದ ಜೀವಿತ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gruhalakshmi Yojana ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ- ಸಿ.ಎಸ್.ಚ..ದ್ರಭೂಪಾಲ್.
Rahul Hyundai Showroom in Shimoga ಜೂನ್ 16. ಶಿವಮೊಗ್ಗದಲ್ಲಿ ರಾಹುಲ್ ಕಾರ್ಸ್( ಹೊಂಡೈ) ಕಂಪನಿಯಿಂದ ನೇರ ಸಂದರ್ಶನ
Rahul Hyundai Showroom in Shimoga ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ರಾಹುಲ್ ಕಾರ‍್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ Rahul Hyundai Showroom in Shimoga ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.
SHARATH ANANTHAMURTHY ಬಿ.ಕೃಷ್ಣಪ್ಪನವರು ಬದುಕಿನುದ್ದಕ್ಕೂ ಅನುಭವಿಸಿದ ಜಾತಿ ತಾರತಮ್ಯಗಳ ವಿರುದ್ಧ ಸಿಡಿದೆದ್ದವರು- ಪ್ರೊ.ಶರತ್ ಅನಂತಮೂರ್ತಿ.
SHARATH ANANTHAMURTHY ಕರ್ನಾಟಕದ ಸಂಸ್ಕೃತ ಚಳುವಳಿಗಳ ಇತಿಹಾಸದಲ್ಲಿ ಎಂದೆAದಿಗೂ ನೆನಪಾಗುವ ಮೊದಲ ವ್ಯಕ್ತಿ ಅಂದ್ರೆ ಡಿ ಎಸ್ ಎಸ್ ಸಂಸ್ಥಾಪಕ ಪ್ರೊ.ಬಿ ಷ್ಣಪ್ಪನವರು ಮೇಲ್ವರ್ಗಗಳನ್ನು ನಡುಗಿಸಿದವರು ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶರತ್ ಅನಂತ ಮೂರ್ತಿಯವರು ಹೇಳಿದರು. ಇತ್ತೀಚೆಗೆ ಶಿವಮೊಗ್ಗದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ನಡೆದ ಡಿ ಎಸ್ ಎಸ್ ಸಂಸ್ಥಾಪಕ ಪ್ರೊ. ಬಿ ಕೃಷ್ಣಪ್ಪ ನವರ ೮೯ ನೇ ಜನ್ಮ ದಿನ ಕಾರ್ಯಕ್ರಮವನ್ನು ಪ್ರೊ. ಬಿ ಕೃಷ್ಣಪ್ಪನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಅವರು ಮುಂದುವರೆದು ಮಾತನಾಡುತ್ತಾ ಸಮಾನತೆ ಮತ್ತು ಅಸ್ಪöÈಶ್ಯತೆ ವಿರುದ್ಧ ಹೋರಾಟ ಕಟ್ಟಿ ಆಳುವ ಅಧಿಕಾರಸ್ತ ಮೇಲ್ವರ್ಗಗಳನ್ನು ನಡುಗಿಸಿದವರು. ತನ್ನ ಬದುಕಿನುದ್ದಕ್ಕೂ ಅನುಭವಿಸಿದ ಜಾತಿ ತಾರತಮ್ಯಗಳ ವಿರುದ್ಧ ಸಿಡಿದೆದ್ದ ಪ್ರೊ. ಬಿ ಕೃಷ್ಣಪ್ಪ ನವರು ದಲಿತ ಚಳುವಳಿಯನ್ನು, ದಲಿತ ಸಾಹಿತ್ಯ ಮತ್ತು ಚಿಂತನೆಯನ್ನು ಕರ್ನಾಟಕದ ಉದ್ದಗಲಕ್ಕೂ ಓಡಾಡಿ ತನಗೆ ದಕ್ಕಿದ ತಿಳುವಳಿಕೆಯನ್ನು ಕ್ರಾಂತಿಯ ಕಿಡಿಯಾಗಿ ಒತ್ತಿಸಿದವರು ಪ್ರೊ. ಬಿ. ಕೃಷ್ಣಪ್ಪನವರು ಎಂದು ಪ್ರೊ. ಅನಂತಮೂರ್ತಿ ಯವರು ಹೇಳಿದರು. ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಹೇಮಂತ್, ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಅಭಿಷೇಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ಕಾರ್ಯಪ್ಪ, ದಾವಣಗೆರೆ ವಿಶ್ವ ವಿದ್ಯಾಲಯದ ಡಾ. ಹೆಚ್ ವಿಶ್ವನಾಥ್,
SHARATH ANANTHAMURTHY ವಕೀಲರಾದ ಶ್ರೀಪಾಲ್, ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಶ್ರೀ ಶ್ರೀಕಾಂತ್, ಡಿ ಎಸ್ ಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಶಿವಬಸಪ್ಪ, ಡಿ ಎಸ್ ಎಸ್ ಜಿಲ್ಲಾ ಸಂಚಾಲಕರಾದ ಶ್ರೀ ಎಂ ಏಳುಕೋಟಿ, ಹಾಗೂ ವಿವಿಧ ತಾಲ್ಲೂಕ್ಗಳ ಸಂಚಾಲಕರುಗಳು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಡಿ ಎಸ್ ಎಸ್ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಶಿವಮೊಗ್ಗ ಇವರು ವಹಿಸಿದ್ದರು.
Shivamogga News ಅಲಗೇರಿ ಮಂಡ್ರಿಯ ಶಾಲೆಯ ಕಟ್ಟಡ ಶಿಥಿಲ: ಇಲಾಖೆ & ಜನಪ್ರತಿನಿಧಿಗಳ ಜಾಣಮೌನ.
Shivamogga News ಶಾಲೆ ಎಂದರೆ ಮಕ್ಕಳ ಭವಿಷ್ಯ ರೂಪುಗೊಳ್ಳುವ ದೇವಾಲಯ. ಆದರೆ ಶಿವಮೊಗ್ಗ ಜಿಲ್ಲೆಯ ಈ ಸರ್ಕಾರಿ ಶಾಲೆಯ ಸ್ಥಿತಿ ನೋಡಿದರೆ ಪೋಷಕರು ಮತ್ತು ಮಕ್ಕಳು ಪ್ರತಿದಿನ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಸುಮಾರು 59 ವರ್ಷಗಳ ಹಳೆಯ ಈ ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದರೂ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳು ಮಾತ್ರ ಮೌನ ವಹಿಸಿದ್ದಾರೆ.
ಇದು ಶಿವಮೊಗ್ಗ ಜಿಲ್ಲೆಯ ಅಲಗೇರಿಮಂಡ್ರಿ ಸರ್ಕಾರಿ ಪ್ರಾಥಮಿಕ ಶಾಲೆ…
ಒಮ್ಮೆ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಕಲರವದಿಂದ ಕಂಗೊಳಿಸುತ್ತಿದ್ದ ಈ ಶಾಲೆ ಇಂದು ಶಿಥಿಲಗೊಂಡ ಕಟ್ಟಡದಿಂದ ಸುದ್ದಿಯಾಗಿದೆ.
ಶಾಲೆಯ ಗೋಡೆಗಳು ಬಿರುಕು ಬಿಟ್ಟು ಬಾಯಿ ತೆರೆದಂತೆ ಕಾಣುತ್ತಿವೆ. ಮೇಲ್ಚಾವಣಿ ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿಯಲ್ಲಿದೆ. ಕಿಟಕಿಗಳು ಹಾಗೂ ಮರದ ಹೊದಿಕೆಗಳು ಸಂಪೂರ್ಣ ಹಾಳಾಗಿದ್ದು, ಕಟ್ಟಡದ ಸ್ಥಿತಿ ಈಗಲೋ ಆಗಲೋ ಬೀಳುವಂತಾಗಿದೆ.
Shivamogga News ಸುಮಾರು 59 ವರ್ಷಗಳ ಹಳೆಯ ಈ ಶಾಲೆಯಲ್ಲಿ ಇನ್ನೂ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಕಟ್ಟಡದ ದುಸ್ಥಿತಿ ಕಂಡು ಪೋಷಕರು ಆತಂಕಕ್ಕೀಡಾಗಿದ್ದಾರೆ. ಈ ಬಾರಿಯ ಮಳೆಯ ಸಮಯದಲ್ಲಿ ಶಾಲೆ ಕುಸಿದುಬಿಡಬಹುದೆಂಬ ಭಯ ಗ್ರಾಮಸ್ಥರನ್ನು ಕಾಡುತ್ತಿದೆ.
ಶಾಲಾ ಕಟ್ಟಡ ಅಪಾಯಕಾರಿಯಾಗಿರುವ ಹಿನ್ನೆಲೆ ಅನೇಕ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ ಒಮ್ಮೆ 300 ಮಕ್ಕಳಿದ್ದ ಶಾಲೆಯಲ್ಲಿ ಈಗ ಕೇವಲ 60 ರಿಂದ 70 ಮಕ್ಕಳು ಮಾತ್ರ ಉಳಿದಿದ್ದಾರೆ.
ಇಷ್ಟಾದರೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.
DK Shivakumar ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಸೀಎಂ ಡಿ.ಕೆ.ಶಿವಕುಮಾರ್ ಭಾಗಿ.
DK Shivakumar ಇಂದು ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾದ ನೀತಿ ಆಯೋಗದ ಆಡಳಿತ ಮಂಡಳಿಯ 11ನೇ ಸಭೆಯಲ್ಲಿ ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದ್ದರು
Hulikal Ghat ಹುಲಿಕಲ್ ಘಾಟಿ ಯಲ್ಲಿ ಇಂದಿನಿಂದ ಲಘುವಾಹನಗಳ ಸಂಚಾರಕ್ಕೆ ಅವಕಾಶ- ವಿ.ಅಭಿಷೇಕ್.
Hulikal Ghat ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು (ಷಟಲ್ ಸರ್ವೀಸ್) ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ:
Hulikal Ghat ಘಾಟಿ ರಸ್ತೆಯಲ್ಲಿ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.
ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.
ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್‌ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ.
“ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ 116 ರನ್ವಯ ಈ ಹಿಂದೆ ವಿಧಿಸಲಾಗಿದ್ದ ಸಂಪೂರ್ಣ ವಾಹನ ಸಂಚಾರ ನಿಷೇಧದ ಆದೇಶವನ್ನು ರದ್ದುಗೊಳಿಸಲಾಗಿದೆ. ಜೂನ್ 12, 2026 ರಿಂದ ಜಾರಿಗೆ ಬರುವಂತೆ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಮೂಲಕ ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ” ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.
Anganwadi ಶಿವಮೊಗ್ಗ ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.
Anganwadi ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ 16 ಹುದ್ದೆಗೆ ಹಾಗೂ 93 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜೂ. 20 ರೊಳಗಾಗಿ ಸಲ್ಲಿಸುವಂತೆ ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಜೂ. 23 Anganwadi ರಂದು ಬೆಳಗ್ಗೆ 10.00ಕ್ಕೆ ದಾಖಲಾತಿಗಳ ಪರಿಶೀಲನೆಗೆ ಅರ್ಜಿಯೊಂದಿಗೆ ಸಲ್ಲಿಸಿದ್ದ ಮೂಲ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಜರಾಗುವಂತೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Shivamogga News ಶಿವಮೊಗ್ಗ ಜಿಲ್ಲೆಯಲ್ಲಿ ಶೇ 64 ಅರಣ್ಯ ಭೂಮಿಯಿದೆ.ಆದರೆ ಪಶ್ಚಿಮಘಟ್ಟಗಳಲ್ಲಿ ಸಾಮರಸ್ಯಕಿಂತ ಸಂಘರ್ಷವೇ ಹೆಚ್ಚಾಗಿದೆ- ಎ.ಎಂ.ಅಣ್ಣಯ್ಯ.
Shivamogga News ಕೃಷಿ ಮತ್ತು ಅರಣ್ಯ ಎರಡೂ ದೇಶದ ಪ್ರಗತಿಗೆ ಹಾಗೂ ಜೀವಸಂಕುಲದ ಉಳಿವಿಗೆ ಅತ್ಯಗತ್ಯವಾಗಿದ್ದು ಎರಡರ ನಡುವಿನ ಸಾಮರಸ್ಯ ಮತ್ತು ಸಹಬಾಳ್ವೆ ಇಂದಿನ ತುರ್ತಾಗಿದೆ. ಹಾಗೂ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಕೃಷಿ ಆರ್ಥಿಕ ತಜ್ಞರು ಹಾಗೂ
ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಮತ್ತು ಅರಣ್ಯ ಸಂಪನ್ಮೂಲ ನಿರ್ವಹಣಾ ಸಂರಕ್ಷಣಾಧಿಕಾರಿಗಳಾದ ಎ.ಎಂ. ಅಣ್ಣಯ್ಯ ಹೇಳಿದರು.
ಬೆಂಗಳೂರಿನ ‘ಪೃಥ್ವಿ’ ಟ್ರಸ್ಟ್ ಹಾಗೂ ಶಿವಮೊಗ್ಗದ ಪರಿಸರ ಅಧ್ಯಯನ ಕೇಂದ್ರ ಮಲೆನಾಡಿನ ರೈತ, ಬುಡಕಟ್ಟು ಮತ್ತು ಪರಿಸರ ಸಂಘಟನೆಗಳ ಸಹಯೋಗದೊಂದಿಗೆ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಹಕಾರದಲ್ಲಿ ಶನಿವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಮಲೆನಾಡು ಕೃಷಿ-ಅರಣ್ಯ ಸಂಘರ್ಷ ಮತ್ತು ಸಾಮರಸ್ಯ’ ಎಂಬ ವಿಷಯದ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಶೇ. ೬೪ ಅರಣ್ಯ ಭೂಮಿ ಇದೆ. ಆದರೆ ಪಶ್ಚಿಮ ಘಟ್ಟಗಳಲ್ಲಿ ಸಾಮರಸ್ಯಕ್ಕಿಂತ ಸಂಘರ್ಷವೇ ಹೆಚ್ಚಾಗಿದೆ. ಈ ಸಂಘರ್ಷವನ್ನು ತಗ್ಗಿಸಿ ಸಾಮರಸ್ಯದಿಂದ ಬದುಕುವ ಕ್ರಮಗಳನ್ನು ಹೆಚ್ಚಿಸಬೇಕು.
ಪರಿಸರ ನಮ್ಮಹಕ್ಕಾಗಿರುವ ರೀತಿಯಲ್ಲಿ ಈ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳೂ ಇದ್ದು, ಅದನ್ನು ನಾವು ಪಾಲಿಸಬೇಕು.
ಮನುಷ್ಯ ಮಾತ್ರ ಈ ಪರಿಸರದಲ್ಲಿ ಬದುಕಲು ಸಾಧ್ಯವಿಲ್ಲ. ಎಲ್ಲ ಪ್ರಾಣಿ, ಜೀವ ಸಂಕುಲವೂ ಬದುಕಬೇಕು. ಸಹಬಾಳ್ವೆ ನಡೆಸಬೇಕು ಎಂದರು.
ಕಾಯ್ದೆ ಕಾನೂನು ಅರಣ್ಯ ಉಳಿಸುವಲ್ಲಿ ಮುಖ್ಯ ಪಾತ್ರ ವಹಿಸಿವೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯು ಪ್ರಕೃತಿ ಮತ್ತು ವನ್ಯಜೀವಿಗಳ ರಕ್ಷಣೆಗೆ ಕಟ್ಟುನಿಟ್ಟಾದ ಚೌಕಟ್ಟನ್ನು ಒದಗಿಸುತ್ತದೆ. ಕೃಷಿ-ಅರಣ್ಯ ಸಂಘರ್ಷದ ಸಂದರ್ಭದಲ್ಲಿ ಇದರ ಪಾತ್ರ ಪ್ರಮುಖವಾಗಿದೆ.
ಅರಣ್ಯ ಹಕ್ಕುಗಳ ಕಾಯ್ದೆಯು ಕೃಷಿ ಮತ್ತು ಅರಣ್ಯದ ನಡುವಿನ ಅನ್ಯಾಯವನ್ನು ಸರಿಪಡಿಸಲು ಜಾರಿಗೆ ಬಂದ ಅತ್ಯಂತ ಪ್ರಮುಖ ಕಾನೂನು.
Shivamogga News ಅರಣ್ಯ ಸಂರಕ್ಷಣಾ ಕಾಯ್ದೆಯು ಕೃಷಿ ಭೂಮಿ ವಿಸ್ತರಣೆಯ ಹೆಸರಿನಲ್ಲಿ ಅರಣ್ಯ ನಾಶವಾಗುವುದನ್ನು ತಡೆಯುತ್ತದೆ ಎಂದು ಕಾಯ್ದೆಗಳ ಬಗ್ಗೆ ವಿವರಿಸಿದ ಅವರು ಅರಣ್ಯ ಮತ್ತು ಕೃಷಿ ಕುರಿತು
ಸಂವಿಧಾನ ಏನು ಹೇಳುತ್ತದೆ, ಕಾಯ್ದೆ ಕಾನೂನುಗಳು ಹಾಗೂ
ಕೇಸ್ ಲಾ ಗಳು ಏನು ಹೇಳುತ್ತದೆ ಎಂದು ಪಿಪಿಟಿ ಪ್ರದರ್ಶನದ ಮೂಲಕ ತಿಳಿಸಿಕೊಟ್ಟರು.
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯರಾದ ಡಾ. ಪ್ರಕಾಶ್ ಕಮ್ಮರಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪಶ್ಚಿಮ ಘಟ್ಟಗಳು ಪ್ರಸ್ತುತ ಜೀವ ವೈವಿಧ್ಯತೆಯ ಮಹಾತಾಣವಾಗಿಲ್ಲ. ಬದಲಾಗಿ ಸಂಘರ್ಷಗಳ ಹಾಟ್ ಸ್ಪಾಟ್ಟ್ ಆಗಿದೆ. ಒಕ್ಕಲೆಬ್ಬಿಸುವ ಕಾರ್ಯವು ಜನ ವಿರೋಧಿಯಾಗಿದೆ. ಪಂಪ್ಡ್ ಸ್ಟೋರೇಜ್ ವಿರುದ್ದ ಜನರು ಗಟ್ಟಿಯಾದ ಹೋರಾಟ ಮಾಡುತ್ತಿದ್ದಾರೆ.
ಒಂದು ಕಡೆ ಅರಣ್ಯ ಇಲಾಖೆಯು ಪರಿಸರ ಉಳಿಸಲು ಕಾನೂನಾತ್ಮಕವಾಗಿ ಕೆಲಸ ಮಾಡುತ್ತಿದ್ದರೆ, ಜನರು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಮೇಲೆ ಅವಲಂಬಿತರಾಗಿದ್ದು ವಿರೋಧಾಭಾಸಗಳನ್ನು ಕಾಣಬಹುದಾಗಿದೆ.
ವನ್ಯಜೀವಿ ಮತ್ತು ಮಾನವ ನಡುವೆ ಸಂಘರ್ಷ ಇದೆ. ಜನರ ನಡುವೆ ಸಹ ಸಂಘರ್ಷ ಇದೆ. ಕೃಷಿ ಮತ್ತು ಅರಣ್ಯ ನಡುವಿನ ಬಾಂಧವ್ಯ ನಾಶವಾಗಿ ಸಂಘರ್ಷ ಆರಂಭವಾಗಿದೆ.
ವೈವಿಧ್ಯಮಯ ತೋಟಗಳು, ಹಿತ್ತಲು, ಸೊಪ್ಪಿನ ಬೆಟ್ಟಗಳು ಸೇರಿದಂತೆ ಕಾಡು ಮತ್ತು ನಾಡಿನ ಜೀವ ವೈವಿಧ್ಯಗಳು, ಪರಿಸರ ಸಂಕ್ರಮಣ ನಾಶವಾಗ್ತಾ ಇದೆ. ಬ್ರಿಟಿಷರ ಅರಣ್ಯ ಧೋರಣೆಗಳು ಮುಂದುವರೆದಿವೆ. ಅಡಿಕೆ, ಕಾಫಿ ಮತ್ತು ಅಕೇಶಿಯ ದಂತಹ ವಾಣಿಜ್ಯ ಏಕಬೆಳೆ ತೋಟಗಳು ಪಾರಂಪರಿಕ ಬಫರ್ ವ್ಯವಸ್ಥೆಯನ್ನು ಧ್ವಂಸಗೊಳಿಸಿವೆ.
ಪಶ್ಚಿಮ ಘಟ್ಟಗಳು ಉಳಿಯಲೇಬೇಕಿದ್ದು, ಸಾಮರಸ್ಯ ಬದುಕನ್ನು ಹುಡುಕಬೇಕಿದೆ. ಕೃಷಿ ಮತ್ತು ಅರಣ್ಯದ ನಡುವಿನ ಸಂಘರ್ಷ ದೂರ ಮಾಡಿ ಸಹಬಾಳ್ವೆ ಮಾಡಬೇಕಿದೆ ಎಂದ ಅವರು ಇಂದಿನ ಕಾರ್ಯಾಗಾರದಲ್ಲಿ ಈ ಎಲ್ಲದರ ಬಗ್ಗೆ ಚರ್ಚಿಸೋಣ. ರೈತರೊಂದಿಗೆ ಸಂವಾದ ನಡೆಸೋಣ, ಕಾಯ್ದೆ ಅನುಷ್ಟಾನ ಬಗ್ಗೆ ತಿಳಿದುಕೊಳ್ಳೋಣ ಎಂದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವರಾದ ಟಿ.ಎಸ್.ಹೂವಯ್ಯಗೌಡ ಮಾತನಾಡಿ, ಎಲ್ಲ ಜೀವಿಗಳು, ಪ್ರಾಣಿಗಳಿಗೂ ಬದುಕುವ ಹಕ್ಕು ಇದ್ದು, ಇವುಗಳ ಬಗ್ಗೆ ಯೋಚಿಸಬೇಕಿದೆ. ಕೃಷಿ ಮತ್ತು ಅರಣ್ಯ ವಿಷಯಗಳಲ್ಲಿ ಹಲವಾರು ಕಾನೂನು ತೊಡಕು ಇವೆ. ಯಾಂತ್ರಿಕ ಅಭಿವೃದ್ಧಿಯಿಂದ ಪರಿಸರ ನಾಶವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮರಸ್ಯದ ಕ್ರಮಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.
ಉದ್ಘಾಟನೆಯ ನಂತರ ನಡೆದ ತಾಂತ್ರಿಕ ಗೋಷ್ಠಿಯಲ್ಲಿ ಮಲೆನಾಡಿನ ಪ್ರಮುಖ ವಿಷಯಗಳ ಕುರಿತು ಸಂವಾದಗಳು ನಡೆದವು.
ಅರಣ್ಯ ನೀತಿಗಳು ಇತಿಹಾಸ, ವರ್ತಮಾನ ಹಾಗೂ ಭವಿಷ್ಯ ವಿಷಯ ಕುರಿತು ಜನಾರ್ದನ ಜಿ.ಎಲ್., ನಿರ್ದೇಶಕರು, ಪರಿಸರ ಅಧ್ಯಯನ ಕೇಂದ್ರ ಮತ್ತು ರೇಡಿಯೋ ಶಿವಮೊಗ್ಗ 90.8 ಎಫ್.ಎಂ.
ಅಭಿವೃದ್ಧಿ ಯೋಜನೆಗಳು ಮತ್ತು ಸಂಘರ್ಷ ವಿಷಯ ಕುರಿತು ಅಖಿಲೇಶ್ ಚಿಪ್ಲಿ , ಪರಿಸರ ಹೋರಾಟಗಾರರು, ಸಾಗರ.
ಅರಣ್ಯ ಕಾಯಿದೆಗಳು ಮತ್ತು ಅವಾಂತರಗಳು ವಿಷಯ ಕುರಿತು ರಮೇಶ್ ಹೆಗಡೆ , ಮಾಜಿ ಮಹಾಪೌರರು, ಶಿವಮೊಗ್ಗ ಮಹಾನಗರಪಾಲಿಕೆ ಹಾಗೂ ಅಡಿಕೆ ಬೆಳೆಗಾರರ ಸಂಘಟನೆ.
ರಕ್ಷಿತಾರಣ್ಯ ಮತ್ತು ವನ್ಯಜೀವಿ ರೈತ ಸಂಘರ್ಷ ವಿಷಯ ಕುರಿತು ಡಾ. ವಿಜಯಕುಮಾರ್ , ವನ್ಯಜೀವಿ ಸಂರಕ್ಷಣಾ ಅಧ್ಯಯನ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ವಿಷಯ ಮಂಡನೆ ಮಾಡಿದರು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಶಿವಮೊಗ್ಗದ ರೈತ ಸಂಘಟನೆಯ ಮುಖಂಡರಾದ ಕೆ.ಟಿ. ಗಂಗಾಧರ್ ವಹಿಸಿದ್ದರು.
ಕಾರ್ಯಾಗಾರದ ಸಮಾರೋಪ ಹಾಗೂ ‘ಮುಂದಿನ ಹೆಜ್ಜೆ’ಯ ಕುರಿತಾದ ಕೊನೆಯ ಗೋಷ್ಠಿಯ ಅಧ್ಯಕ್ಷತೆಯನ್ನು ಅಡಿಕೆ ಬೆಳೆಗಾರರ ಸಂಘಟನೆಯ ಬಿ.ಆರ್. ಜಯಂತ್ ವಹಿಸಿದ್ದು, ಡಾ. ಪ್ರಕಾಶ್ ಕಮ್ಮರಡಿ ಅವರು ಇದರ ನಿರ್ವಹಣೆ ಮಾಡಿದರು.
ಇದೇ ಸಂದರ್ಭದಲ್ಲಿ ರೈತ ಮುಖಂಡರಾದ ಹೆಚ್.ಆರ್. ಬಸವರಾಜಪ್ಪ, ಬುಡಕಟ್ಟು ಸಂಘಟನೆಯ ಮುಖಂಡರಾದ ರಾಮಣ್ಣ ಹಸಲರ್, ಪರಿಸರ ಸಂಘಟನೆಯ ಶೈಲೇಂದ್ರ ಬಂದಗದ್ದೆ ಹಾಗೂ ತಾಳಗುಪ್ಪದ ರೈತ ಮಹಿಳೆ ಪೂರ್ಣಿಮಾ ಅವರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯ ಮಂಡಿಸಿದರು. ಕವಿತಾ ಹಾಗೂ ಇನ್ನಿತರರು ಹಾಜರಿದ್ದರು.
BSNL ಸಾಗರದ ಕಣಪಗಾರುವಿನಲ್ಲಿ ಬಿಎಸ್ಎನ್ಎಲ್ ಟವರ್ ಸೇವೆಯ ಲೋಕಾರ್ಪಣೆ
BSNL ಸಾಗರ ತಾಲ್ಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ (BSNL) ಮೊಬೈಲ್ ಟವರ್ ನ್ನು ಇಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಯಿತು. ನಂತರ ಭಾನುಕುಳ್ಳಿಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನ ಸಂಪರ್ಕ ಸಭೆ ನಡೆಸಿ, ಕುಂದುಕೊರತೆಗಳನ್ನು ಆಲಿಸಲಾಯಿತು.
BSNL ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಹರತಾಳು ಹಾಲಪ್ಪ, ಶ್ರೀ ಟಿ. ಡಿ. ಮೇಘರಾಜ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
World Blood Donor Day “ವಿಶ್ವ ರಕ್ತದಾನ ದಿನ” ಜೂನ್ 14 ರಂದು ರಕ್ತದಾನ ಶಿಬಿರ ಆಯೋಜನೆ.
World Blood Donor Day ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಿತರಕರ ಸಂಘವು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಜೂನ್ 14ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ರಕ್ತದಾನ ಶಿಬಿರ ಆಯೋಜಿಸಿದೆ.
ಸ್ವಯಂಪ್ರೇರಿತ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ನಾಗರಿಕರು ಜೀವ ಉಳಿಸಲು ಕೊಡುಗೆ ನೀಡುವಂತೆ World Blood Donor Day ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಶಿಬಿರದ ಸಮಯದಲ್ಲಿ ಸಂಗ್ರಹಿಸಿದ ರಕ್ತವನ್ನು ತುರ್ತು ಅಗತ್ಯಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳನ್ನು ಬೆಂಬಲಿಸಲು ಸ್ಥಳೀಯ ಆಸ್ಪತ್ರೆಗಳು ಮತ್ತು ರಕ್ತನಿಧಿಗಳಿಗೆ ಸರಬರಾಜು ಮಾಡಲಾಗುತ್ತದೆ.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಉದ್ಘಾಟಿಸುವರು. ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್ ಭಾಗವಹಿಸುವರು ಎಂದು ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಎಂ.ಸಿ.ದೇವರಾಜ್ ಮತ್ತು ಕಾರ್ಯದರ್ಶಿ ಗಿರೀಶ್ ಒಡೆಯರ್ ತಿಳಿಸಿದ್ದಾರೆ.
